< תהילים 56 >

למנצח על-יונת אלם רחקים-- לדוד מכתם באחז אותו פלשתים בגת ב חנני אלהים כי-שאפני אנוש כל-היום לחם ילחצני 1
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೋನತ್ ಎಲೆಮ್ ರೆಹೋಕೀಮ್ ಎಂಬ ರಾಗ; ದಾವೀದನು ಗತ್ ಎಂಬ ಊರಲ್ಲಿ ಫಿಲಿಷ್ಟಿಯರ ಕೈವಶವಾದಾಗ ರಚಿಸಿದ ಕಾವ್ಯ. ದೇವರೇ, ಕರುಣಿಸು; ನರರು ನನ್ನನ್ನು ತುಳಿದುಬಿಡಬೇಕೆಂದು ಎದ್ದಿದ್ದಾರೆ. ನನ್ನ ಎದುರಾಳಿಗಳು ಹಗಲೆಲ್ಲಾ ಯುದ್ಧಕ್ಕೆ ನಿಂತು ಬಾಧಿಸುತ್ತಾರೆ.
שאפו שוררי כל-היום כי-רבים לחמים לי מרום 2
ಹೊಂಚುಹಾಕಿ ನನ್ನನ್ನು ನುಂಗಿಬಿಡಬೇಕೆಂದು ಯಾವಾಗಲೂ ಬಾಯ್ದೆರೆದಿದ್ದಾರೆ; ಸೊಕ್ಕಿನಿಂದ ನನ್ನ ಮೇಲೆ ಯುದ್ಧಕ್ಕೆ ನಿಂತವರು ಎಷ್ಟೋ ಜನರು.
יום אירא-- אני אליך אבטח 3
ನನಗೆ ಹೆದರಿಕೆಯುಂಟಾದಾಗ ನಿನ್ನನ್ನೇ ಆಶ್ರಯಿಸಿಕೊಳ್ಳುವೆನು.
באלהים אהלל דברו באלהים בטחתי לא אירא מה-יעשה בשר לי 4
ದೇವರ ವಾಗ್ದಾನಕ್ಕೋಸ್ಕರ ಆತನಲ್ಲಿಯೇ ಹೆಚ್ಚಳಪಡುವೆನು; ದೇವರನ್ನು ನಂಬಿ ನಿರ್ಭಯದಿಂದಿರುವೆನು. ನರಪ್ರಾಣಿಗಳು ನನಗೆ ಏನು ಮಾಡಾರು?
כל-היום דברי יעצבו עלי כל-מחשבתם לרע 5
ಹಗಲೆಲ್ಲಾ ನನ್ನ ಮಾತುಗಳನ್ನು ಅಪಾರ್ಥಮಾಡುತ್ತಾರೆ; ಅವರು ಬಗೆಯುವುದೆಲ್ಲ ನನಗೆ ಕೇಡೇ.
יגורו יצפינו (יצפונו)--המה עקבי ישמרו כאשר קוו נפשי 6
ಅವರು ಒಟ್ಟುಗೂಡಿ ನನ್ನ ಜೀವ ತೆಗೆಯಬೇಕೆಂದು ಹೊಂಚುಹಾಕಿ, ನನ್ನ ಹೆಜ್ಜೆಜಾಡು ಹಿಡಿದು ಬರುತ್ತಾರೆ.
על-און פלט-למו באף עמים הורד אלהים 7
ಇಂಥ ಅನ್ಯಾಯಗಾರರು ತಪ್ಪಿಸಿಕೊಳ್ಳಬಹುದೋ? ದೇವರೇ, ರೌದ್ರದಿಂದ ಆ ಜನಾಂಗಗಳನ್ನು ಉರುಳಿಸಿಬಿಡು.
נדי ספרתה-אתה שימה דמעתי בנאדך הלא בספרתך 8
ನಾನು ದೇಶಭ್ರಷ್ಟನಾಗಿ ಅಲೆದಾಡಿದ್ದನ್ನು ನೀನೇ ಬಲ್ಲೆ. ನನ್ನ ಕಣ್ಣೀರು ನಿನ್ನ ಬುದ್ದಲಿಯಲ್ಲಿ ತುಂಬಿದೆಯಲ್ಲಾ; ಅದರ ವಿಷಯವಾಗಿ ನಿನ್ನ ಪುಸ್ತಕದಲ್ಲಿ ಬರೆದದೆಯಲ್ಲಾ.
אז ישובו אויבי אחור ביום אקרא זה-ידעתי כי-אלהים לי 9
ನಾನು ಆತನಿಗೆ ಮೊರೆಯಿಡುವಾಗಲೇ ನನ್ನ ಶತ್ರುಗಳು ಫಕ್ಕನೆ ಹಿಂದಿರುಗಿ ಓಡುವರು; ದೇವರು ನನ್ನ ಸಂಗಡ ಇರುವುದು ನಿಶ್ಚಯ.
באלהים אהלל דבר ביהוה אהלל דבר 10
೧೦ದೇವರ ವಾಗ್ದಾನಗಳಲ್ಲಿ ಹಾಡಿ ಹರಸುತ್ತೇನೆ. ಯೆಹೋವನ ವಾಗ್ದಾನಗಳಲ್ಲಿ ಹಾಡಿ ಹರಸುತ್ತೇನೆ.
באלהים בטחתי לא אירא מה-יעשה אדם לי 11
೧೧ದೇವರನ್ನು ನಂಬಿ ನಿರ್ಭಯದಿಂದಿರುವೆನು; ನರಪ್ರಾಣಿಗಳು ನನಗೆ ಏನು ಮಾಡಾರು?
עלי אלהים נדריך אשלם תודת לך 12
೧೨ದೇವರೇ, ನಿನಗೆ ಹೊತ್ತ ಹರಕೆಗಳನ್ನು ನಾನು ಸಲ್ಲಿಸುವೆನು; ಕೃತಜ್ಞತಾ ಯಜ್ಞಗಳನ್ನು ನಿನಗೆ ಸಮರ್ಪಿಸುವೆನು.
כי הצלת נפשי ממות-- הלא רגלי מדחי להתהלך לפני אלהים-- באור החיים 13
೧೩ಏಕೆಂದರೆ, ನಾನು ಜೀವದಿಂದ ಬೆಳಕಿನಲ್ಲಿದ್ದು ನಿನಗೆ ನಡೆದುಕೊಳ್ಳಬೇಕೆಂದು ನೀನು ನನ್ನ ಪ್ರಾಣವನ್ನು ಮರಣಕ್ಕೆ ತಪ್ಪಿಸಿ, ನನ್ನ ಪಾದಗಳನ್ನು ಎಡವಿಬೀಳದಂತೆ ಕಾಪಾಡಿದ್ದಿ.

< תהילים 56 >