< תהילים 59 >
למנצח אל-תשחת לדוד מכתם בשלח שאול וישמרו את-הבית להמיתו ב הצילני מאיבי אלהי ממתקוממי תשגבני | 1 |
೧ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಅಲ್ತಷ್ಖೇತೆಂಬ ರಾಗ; ಸೌಲನ ಕಡೆಯವರು ದಾವೀದನ ಜೀವತೆಗೆಯಬೇಕೆಂದು ಅವನ ಮನೆಯ ಸುತ್ತಲೂ ಹೊಂಚುಹಾಕುತ್ತಿದ್ದಾಗ ಅವನು ರಚಿಸಿದ ಕಾವ್ಯ. ನನ್ನ ದೇವರೇ, ಶತ್ರುಗಳ ಕೈಯಿಂದ ನನ್ನನ್ನು ಬಿಡಿಸು; ನನಗೆ ವಿರುದ್ಧವಾಗಿ ಎದ್ದಿರುವವರಿಗೆ ನನ್ನನ್ನು ತಪ್ಪಿಸಿ ಭದ್ರಸ್ಥಳದಲ್ಲಿರಿಸು.
הצילני מפעלי און ומאנשי דמים הושיעני | 2 |
೨ಕೆಡುಕರಿಂದ ಬಿಡಿಸು; ಕೊಲೆಪಾತಕರಿಂದ ನನ್ನನ್ನು ರಕ್ಷಿಸು.
כי הנה ארבו לנפשי-- יגורו עלי עזים לא-פשעי ולא-חטאתי יהוה | 3 |
೩ಇಗೋ, ಅವರು ನನ್ನ ಜೀವಕ್ಕೆ ಹೊಂಚುಹಾಕುತ್ತಾರೆ; ಬಲಿಷ್ಠರು ನನಗೆ ವಿರುದ್ಧವಾಗಿ ಗುಂಪುಕೂಡಿದ್ದಾರೆ. ಯೆಹೋವನೇ, ನಾನು ನಿರ್ದೋಷಿಯೂ ನಿರಪರಾಧಿಯೂ ಅಲ್ಲವೇ!
בלי-עון ירצון ויכוננו עורה לקראתי וראה | 4 |
೪ನಿಷ್ಕಾರಣವಾಗಿ ನನ್ನ ಮೇಲೆ ಬೀಳಲು ಮುತ್ತಿಗೆ ಹಾಕಿ ನಿಂತಿದ್ದಾರೆ; ಎದ್ದು ಬಂದು ಪರಾಂಬರಿಸಿ ನನಗೆ ಸಹಾಯಮಾಡು.
ואתה יהוה-אלהים צבאות אלהי ישראל-- הקיצה לפקד כל-הגוים אל-תחן כל-בגדי און סלה | 5 |
೫ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರ ದೇವರೇ, ನೀನು ಎಚ್ಚರವಾಗಿ ಎಲ್ಲಾ ಅನ್ಯಜನಾಂಗಗಳನ್ನು ದಂಡಿಸು. ದುಷ್ಟದ್ರೋಹಿಗಳಲ್ಲಿ ಒಬ್ಬನಿಗೂ ದಯತೋರಿಸಬೇಡ. (ಸೆಲಾ)
ישובו לערב יהמו ככלב ויסובבו עיר | 6 |
೬ಅವರು ಪ್ರತಿಸಾಯಂಕಾಲವೂ ಬಂದು ಬಂದು ನಾಯಿಗಳಂತೆ ಗುರುಗುಟ್ಟುತ್ತಾ ಪಟ್ಟಣವನ್ನೆಲ್ಲಾ ಸುತ್ತುತ್ತಿದ್ದಾರೆ.
הנה יביעון בפיהם--חרבות בשפתותיהם כי-מי שמע | 7 |
೭ಇಗೋ, ಅವರ ಬಾಯಿಗಳು ಎಷ್ಟೋ ಮಾತುಗಳನ್ನು ಕಕ್ಕುತ್ತವೆ; ಅವೆಲ್ಲಾ ಹರಿತವಾದ ಕತ್ತಿಗಳಂತಿವೆ, ಅವರು, “ನಮ್ಮನ್ನು ಕೇಳುವವರು ಯಾರು?” ಅಂದುಕೊಳ್ಳುತ್ತಾರೆ.
ואתה יהוה תשחק-למו תלעג לכל-גוים | 8 |
೮ಯೆಹೋವನೇ, ನೀನಾದರೋ ಅವರನ್ನು ನೋಡಿ ನಗುವಿ; ಎಲ್ಲಾ ಅನ್ಯಜನಾಂಗಗಳನ್ನು ಪರಿಹಾಸ್ಯಮಾಡುವಿ.
עזו אליך אשמרה כי-אלהים משגבי | 9 |
೯ನನ್ನ ಬಲವೇ, ನಿನ್ನನ್ನು ನಿರೀಕ್ಷಿಸುತ್ತಿದ್ದೇನೆ. ನನ್ನ ಆಶ್ರಯದುರ್ಗವು ದೇವರೇ.
אלהי חסדו (חסדי) יקדמני אלהים יראני בשררי | 10 |
೧೦ನನ್ನ ದೇವರು ತನ್ನ ಮಹಾ ಪ್ರೀತಿಯಿಂದ ನನಗೆ ಸಹಾಯಮಾಡುವನು; ನನ್ನ ವಿರೋಧಿಗಳಿಗುಂಟಾದ ಶಿಕ್ಷೆಯನ್ನು ನಾನು ನೋಡುವಂತೆ ಮಾಡುವನು.
אל-תהרגם פן ישכחו עמי--הניעמו בחילך והורידמו מגננו אדני | 11 |
೧೧ಕರ್ತನೇ, ನಮ್ಮ ಗುರಾಣಿಯೇ, ಅವರನ್ನು ಫಕ್ಕನೆ ಸಂಹರಿಸಬೇಡ. ನನ್ನ ಜನರು ಮರೆತುಬಿಡದ ಹಾಗೆ ಅವರು ಉಳಿಯಲಿ. ನಿನ್ನ ಸೇನಾಬಲದಿಂದ ಚದುರಿಸಿ, ಭ್ರಾಂತಿಯಿಂದ ಅಲೆದಾಡಿಸಿ ಅವರನ್ನು ಕೆಡವಿಬಿಡು.
חטאת-פימו דבר-שפתימו וילכדו בגאונם ומאלה ומכחש יספרו | 12 |
೧೨ಅವರ ಬಾಯಿಂದ ಬರುವುದೆಲ್ಲಾ ಪಾಪದ ಮಾತೇ. ಅವರ ಅಹಂಕಾರದಿಂದಲೇ ಅವರು ಸಿಕ್ಕಿಬೀಳಲಿ.
כלה בחמה כלה ואינמו וידעו--כי-אלהים משל ביעקב לאפסי הארץ סלה | 13 |
೧೩ಅವರು ನುಡಿಯುವ ಶಾಪಕ್ಕಾಗಿಯೂ ಸುಳ್ಳಿಗಾಗಿಯೂ, ಅವರನ್ನು ರೌದ್ರದಿಂದ ಸಂಹರಿಸಿ ನಿರ್ನಾಮಗೊಳಿಸು. ಯಾಕೋಬನ ವಂಶದವರನ್ನು ಆಳುವವನು ದೇವರೇ ಎಂಬುದು, ಭೂಲೋಕದಲ್ಲೆಲ್ಲಾ ಗೊತ್ತಾಗಲಿ. (ಸೆಲಾ)
וישבו לערב יהמו ככלב ויסובבו עיר | 14 |
೧೪ಅವರು ಪ್ರತಿಸಾಯಂಕಾಲವೂ ಬಂದು ಬಂದು, ನಾಯಿಗಳಂತೆ ಗುರುಗುಟ್ಟುತ್ತಾ ಪಟ್ಟಣವನ್ನೆಲ್ಲಾ ಸುತ್ತುತ್ತಾ ಇದ್ದಾರೆ.
המה ינועון (יניעון) לאכל-- אם-לא ישבעו וילינו | 15 |
೧೫ಆಹಾರಕ್ಕಾಗಿ ಅತ್ತಿತ್ತ ತಿರುಗುತ್ತಾರೆ; ಹೊಟ್ಟೆಗಿಲ್ಲದಿದ್ದರೆ ಗುಣುಗುಟ್ಟುತ್ತಾರೆ.
ואני אשיר עזך-- וארנן לבקר חסדך כי-היית משגב לי ומנוס ביום צר-לי | 16 |
೧೬ನಾನಾದರೋ, ಇಕ್ಕಟ್ಟಿನ ಕಾಲದಲ್ಲಿ ಆಶ್ರಯವೂ ದುರ್ಗವೂ ಆಗಿರುವ ನಿನ್ನ ಬಲವನ್ನು ಹಾಡಿ ಹೊಗಳುವೆನು; ಪ್ರಾತಃಕಾಲದಲ್ಲಿ ನಿನ್ನ ಪ್ರೇಮವನ್ನು ಉಲ್ಲಾಸದಿಂದ ಕೊಂಡಾಡುವೆನು.
עזי אליך אזמרה כי-אלהים משגבי אלהי חסדי | 17 |
೧೭ನನ್ನ ಬಲವೇ, ನಿನ್ನನ್ನು ಹಾಡಿಹರಸುವೆನು, ನನ್ನ ಆಶ್ರಯದುರ್ಗವೂ ಕೃಪಾನಿಧಿಯೂ ದೇವರೇ.