< תהילים 61 >
למנצח על-נגינת לדוד ב שמעה אלהים רנתי הקשיבה תפלתי | 1 |
೧ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ದಾವೀದನ ಕೀರ್ತನೆ. ದೇವರೇ, ನನ್ನ ಕೂಗನ್ನು ಕೇಳಿ ನನ್ನ ಪ್ರಾರ್ಥನೆಗೆ ಕಿವಿಗೊಡು.
מקצה הארץ אליך אקרא-- בעטף לבי בצור-ירום ממני תנחני | 2 |
೨ನಾನು ಎದೆಗುಂದಿದವನಾಗಿ ಭೂಮಿಯ ಕಡೆಯ ಭಾಗದಿಂದ ನಿನಗೆ ಮೊರೆಯಿಡುತ್ತೇನೆ; ನಾನು ಹತ್ತಲಾರದ ಆಶ್ರಯಗಿರಿಯ ಮೇಲೆ ನನ್ನನ್ನು ಹತ್ತಿಸು.
כי-היית מחסה לי מגדל-עז מפני אויב | 3 |
೩ನೀನು ನನಗೆ ಶರಣನೂ, ಶತ್ರುಗಳಿಂದ ತಪ್ಪಿಸುವ ಭದ್ರವಾದ ಬುರುಜು ಆಗಿದ್ದೀ.
אגורה באהלך עולמים אחסה בסתר כנפיך סלה | 4 |
೪ನನಗೆ ನಿರಂತರವೂ ನಿನ್ನ ಗುಡಾರದಲ್ಲಿ ಬಿಡಾರವಾಗಲಿ; ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವಂತೆ ಅನುಗ್ರಹಿಸು. (ಸೆಲಾ)
כי-אתה אלהים שמעת לנדרי נתת ירשת יראי שמך | 5 |
೫ದೇವರೇ, ನೀನು ನನ್ನ ಹರಕೆಗಳಿಗೆ ಲಕ್ಷ್ಯಕೊಟ್ಟಿದ್ದೀ; ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ಸಿಕ್ಕತಕ್ಕ ಬಾಧ್ಯತೆಯನ್ನು ನನಗೂ ದಯಪಾಲಿಸಿದ್ದೀ.
ימים על-ימי-מלך תוסיף שנותיו כמו-דר ודר | 6 |
೬ಅರಸನು ದೀರ್ಘಕಾಲ ಬಾಳುವಂತೆ ಅನುಗ್ರಹಿಸು; ಅವನ ಆಯಸ್ಸು ತಲತಲಾಂತರಗಳವರೆಗೆ ವೃದ್ಧಿಯಾಗಲಿ.
ישב עולם לפני אלהים חסד ואמת מן ינצרהו | 7 |
೭ಅವನು ನಿನ್ನ ಸಾನ್ನಿಧ್ಯವನ್ನು ಪಡೆದು, ಸದಾಕಾಲವೂ ಸಿಂಹಾಸನಾರೂಢನಾಗಿರಲಿ; ನಿನ್ನ ಪ್ರೇಮ ಮತ್ತು ಸತ್ಯತೆಗಳು ಅವನನ್ನು ಕಾಯಲಿ.
כן אזמרה שמך לעד-- לשלמי נדרי יום יום | 8 |
೮ಹೀಗಾದರೆ ನಾನು ಪ್ರತಿದಿನವೂ ನನ್ನ ಹರಕೆಗಳನ್ನು ಸಲ್ಲಿಸುವವನಾಗಿ, ನಿನ್ನ ನಾಮವನ್ನು ಸದಾ ಸ್ಮರಿಸಿ ಕೀರ್ತಿಸುತ್ತಿರುವೆನು.