< תהילים 62 >
למנצח על-ידותון-- מזמור לדוד ב אך אל-אלהים דומיה נפשי ממנו ישועתי | 1 |
೧ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೆದುತೂನನ ರೀತಿಯಲ್ಲಿ ಹಾಡತಕ್ಕದ್ದು; ದಾವೀದನ ಕೀರ್ತನೆ. ನನ್ನ ಮನಸ್ಸು ದೇವರನ್ನೇ ನಂಬಿ ಶಾಂತವಾಗಿರುವುದು. ನನ್ನ ರಕ್ಷಣೆಯು ಆತನಿಂದಲೇ.
אך-הוא צורי וישועתי משגבי לא-אמוט רבה | 2 |
೨ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ; ನಾನು ಕದಲಿದರೂ ಬೀಳೆನು.
עד-אנה תהותתו על-איש-- תרצחו כלכם כקיר נטוי גדר הדחויה | 3 |
೩ನೀವೆಲ್ಲರೂ ಒಬ್ಬ ಪುರುಷನ ಮೇಲೆ ಬಿದ್ದು, ಅವನು ಬಾಗಿದ ಗೋಡೆಯ ಹಾಗೆ ಮತ್ತು ಕುಸಿದ ಪ್ರಾಕಾರವೋ ಎಂಬಂತೆ ಅವನನ್ನು ಹೊಡೆದು ಕೆಡವಬೇಕೆಂದಿರುವುದು ಇನ್ನೆಷ್ಟರವರೆಗೆ?
אך משאתו יעצו להדיח-- ירצו כזב בפיו יברכו ובקרבם יקללו-סלה | 4 |
೪ಅವನನ್ನು ಉನ್ನತಸ್ಥಾನದಿಂದ ದೊಬ್ಬುವುದೇ ಅವರ ಆಲೋಚನೆ. ಸುಳ್ಳಾಡುವುದು ಅವರಿಗೆ ಅತಿಸಂತೋಷ; ಬಾಯಿಂದ ಹರಸಿ ಮನಸ್ಸಿನಿಂದ ಶಪಿಸುತ್ತಾರೆ. (ಸೆಲಾ)
אך לאלהים דומי נפשי כי-ממנו תקותי | 5 |
೫ನನ್ನ ಮನವೇ, ದೇವರನ್ನೇ ನಂಬಿ ಶಾಂತವಾಗಿರು. ನನ್ನ ನಿರೀಕ್ಷೆಯು ನೆರವೇರುವುದು ಆತನಿಂದಲೇ.
אך-הוא צורי וישועתי משגבי לא אמוט | 6 |
೬ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ; ನಾನು ಕದಲುವುದಿಲ್ಲ.
על-אלהים ישעי וכבודי צור-עזי מחסי באלהים | 7 |
೭ನನ್ನ ರಕ್ಷಣೆಗೂ, ಮಾನಕ್ಕೂ ದೇವರೇ ಆಧಾರ; ನನಗೆ ಬಲವಾದ ದುರ್ಗವೂ, ಆಶ್ರಯವೂ ದೇವರಲ್ಲಿಯೇ.
בטחו בו בכל-עת עם-- שפכו-לפניו לבבכם אלהים מחסה-לנו סלה | 8 |
೮ಜನರೇ, ಯಾವಾಗಲೂ ಆತನನ್ನೇ ನಂಬಿ, ನಿಮ್ಮ ಹೃದಯವನ್ನು ಆತನ ಮುಂದೆ ತೆರೆಯಿರಿ; ದೇವರು ನಮ್ಮ ಆಶ್ರಯವು. (ಸೆಲಾ)
אך הבל בני-אדם-- כזב בני-איש במאזנים לעלות המה מהבל יחד | 9 |
೯ನರರು ಬರೀ ಉಸಿರೇ; ನರಾಧಿಪತಿಗಳು ಬರೀ ಮಾಯವೇ. ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಹಗುರ.
אל-תבטחו בעשק ובגזל אל-תהבלו חיל כי-ינוב-- אל-תשיתו לב | 10 |
೧೦ಅನ್ಯಾಯದಿಂದ ಸಂಪಾದಿಸಿದ್ದನ್ನು ನೆಚ್ಚಬೇಡಿರಿ; ಸುಲಿಗೆಯಿಂದ ಗಳಿಸಿ ಅಹಂಕಾರಪಡಬೇಡಿರಿ; ಹೆಚ್ಚಿದ ಆಸ್ತಿಯಲ್ಲಿ ಮನಸ್ಸಿಡಬೇಡಿರಿ.
אחת דבר אלהים--שתים-זו שמעתי כי עז לאלהים | 11 |
೧೧ಸರ್ವಾಧಿಕಾರವು ದೇವರದೇ ಎಂದು ದೇವರು ಒಮ್ಮೆ ಅಲ್ಲ, ಎರಡಾವರ್ತಿ ಹೇಳಿದ್ದನ್ನು ಕೇಳಿದ್ದೇನೆ.
ולך-אדני חסד כי-אתה תשלם לאיש כמעשהו | 12 |
೧೨ಕರ್ತನೇ, ನೀನು ಪ್ರೀತಿಸ್ವರೂಪನಾಗಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವಂಥವನಲ್ಲವೇ.