< תהילים 65 >
למנצח מזמור לדוד שיר ב לך דמיה תהלה אלהים בציון ולך ישלם-נדר | 1 |
ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ದಾವೀದನ ಕೀರ್ತನೆ. ಒಂದು ಗೀತೆ. ದೇವರೇ, ಚೀಯೋನಿನಲ್ಲಿ ನಿಮಗೋಸ್ಕರ ಸ್ತೋತ್ರವು ಕಾದಿದೆ. ನಿಮಗೆ ನಮ್ಮ ಹರಕೆಗಳನ್ನು ಪೂರೈಸುವೆವು.
שמע תפלה-- עדיך כל-בשר יבאו | 2 |
ಪ್ರಾರ್ಥನೆಯನ್ನು ಕೇಳುವವರೇ, ಎಲ್ಲಾ ಜನರು ನಿಮ್ಮ ಬಳಿಗೆ ಬರುವರು.
דברי עונת גברו מני פשעינו אתה תכפרם | 3 |
ನಾವು ನಮ್ಮ ಪಾಪಗಳಿಂದ ತುಂಬಿಹೋಗಿರುವಾಗ ನೀವೇ ನಮ್ಮ ದ್ರೋಹಗಳಿಗಾಗಿ ದೋಷಪರಿಹಾರಕರು.
אשרי תבחר ותקרב-- ישכן חצריך נשבעה בטוב ביתך קדש היכלך | 4 |
ನೀವು ಆಯ್ದುಕೊಂಡು ನಿಮ್ಮ ಬಳಿಗೆ ಬರಮಾಡಿಕೊಳ್ಳುವವನು ಧನ್ಯನು. ಏಕೆಂದರೆ ನಿಮ್ಮ ಅಂಗಳಗಳಲ್ಲಿ ಅವನು ವಾಸವಾಗಿರುವನು. ನಿಮ್ಮ ಪರಿಶುದ್ಧ ಮಂದಿರವಾದ ನಿಮ್ಮ ಆಲಯದ ಒಳ್ಳೆಯ ಸಂಗತಿಗಳಿಂದ ನಮಗೆ ತೃಪ್ತಿಯಾಗಲಿ.
נוראות בצדק תעננו-- אלהי ישענו מבטח כל-קצוי-ארץ וים רחקים | 5 |
ಅತಿಶಯ ಹಾಗು ನೀತಿಯ ಕೃತ್ಯಗಳನ್ನು ನಡೆಸಿ, ನೀವು ನಮಗೆ ಉತ್ತರ ಕೊಡುವಿರಿ. ನಮ್ಮ ರಕ್ಷಣೆಯ ದೇವರೇ, ಭೂಮಿಯಲ್ಲಿರುವವರಿಗೂ, ಸಮುದ್ರದ ಆಚೆ ದೂರವಾಗಿರುವವರಿಗೂ ನೀವು ಭರವಸೆಯಾಗಿದ್ದೀರಿ.
מכין הרים בכחו נאזר בגבורה | 6 |
ಬೆಟ್ಟಗಳನ್ನು ನಿಮ್ಮ ಶಕ್ತಿಯಿಂದ ರೂಪಿಸಿದವರು ನೀವೇ. ಜಲದಿಂದ ನಡು ಕಟ್ಟಿಕೊಂಡಿರುವವರೂ ನೀವೇ.
משביח שאון ימים--שאון גליהם והמון לאמים | 7 |
ಸಮುದ್ರಗಳ ಘೋಷವನ್ನೂ, ಅವುಗಳ ತೆರೆಗಳ ಘೋಷವನ್ನೂ, ಪ್ರಜೆಗಳ ಕೋಲಾಹಲವನ್ನೂ ಶಮನಗೊಳಿಸುವವರು ನೀವೇ.
וייראו ישבי קצות--מאותתיך מוצאי בקר וערב תרנין | 8 |
ಇಡೀ ಭೂಮಿಯಲ್ಲಿರುವವರು ನಿಮ್ಮ ಅದ್ಭುತಕಾರ್ಯಗಳಿಗೆ ಅತಿಶಯಗೊಂಡಿದ್ದಾರೆ. ಉದಯಾಸ್ತಮಾನಗಳಲ್ಲಿ ಇರುವವರನ್ನು ಉತ್ಸಾಹ ಧ್ವನಿಗೈಯುವಂತೆ ಮಾಡುತ್ತೀರಿ.
פקדת הארץ ותשקקה רבת תעשרנה-- פלג אלהים מלא מים תכין דגנם כי-כן תכינה | 9 |
ಭೂಮಿಯನ್ನು ಸಂಧಿಸಿ, ಅದಕ್ಕೆ ಮಳೆಬರುವಂತೆ, ಅದನ್ನು ಫಲವತ್ತಾಗಿ ಮಾಡುತ್ತೀರಿ. ದೇವರ ನದಿಯು ನೀರಿನಿಂದ ತುಂಬಿದೆ. ಹೀಗೆ ಭೂಮಿಯನ್ನು ಸಿದ್ಧಮಾಡಿ, ಜನರಿಗೆ ನೀವು ಧಾನ್ಯವನ್ನು ಒದಗಿಸುತ್ತೀರಿ.
תלמיה רוה נחת גדודה ברביבים תמגגנה צמחה תברך | 10 |
ನೇಗಿಲ ಸಾಲುಗಳನ್ನು ಸಮಮಾಡುತ್ತೀರಿ. ಸುರಿಯುವ ಮಳೆಯಿಂದ ಅದನ್ನು ಮೃದು ಮಾಡುತ್ತೀರಿ, ಅದರ ಮೊಳಕೆಯನ್ನು ಆಶೀರ್ವದಿಸುತ್ತೀರಿ.
עטרת שנת טובתך ומעגליך ירעפון דשן | 11 |
ವರ್ಷಕ್ಕೆ ನಿಮ್ಮ ಉದಾರತೆಯ ಕಿರೀಟವನ್ನು ಇಡುತ್ತೀರಿ. ನಿಮ್ಮ ಹಾದಿಗಳು ಸಮೃದ್ಧಿಯಿಂದ ತುಂಬಿ ಪ್ರವಾಹಿಸುತ್ತಿದೆ.
ירעפו נאות מדבר וגיל גבעות תחגרנה | 12 |
ಮರುಭೂಮಿಯ ಹುಲ್ಲುಗಾವಲಲ್ಲಿ ವೃಷ್ಟಿಯಾಗಿದೆ. ಗುಡ್ಡಗಳು ಉಲ್ಲಾಸವನ್ನು ಧರಿಸಿಕೊಂಡಿವೆ.
לבשו כרים הצאן-- ועמקים יעטפו-בר יתרועעו אף-ישירו | 13 |
ಹುಲ್ಲುಗಾವಲುಗಳು ಮಂದೆಗಳಿಂದ ಹೊದಿಕೆಯಾಗಿವೆ. ಕಣಿವೆಗಳು ಸಹ ಧಾನ್ಯದಿಂದ ಮುಚ್ಚಿರುತ್ತವೆ. ಅವು ಉತ್ಸಾಹಗೊಂಡು ಹಾಡುತ್ತವೆ.