< תהילים 69 >
למנצח על-שושנים לדוד ב הושיעני אלהים-- כי באו מים עד-נפש | 1 |
೧ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು. ಶೋಶನ್ನೀಮೆಂಬ ರಾಗದ ಮೇಲೆ ಹಾಡತಕ್ಕದ್ದು; ದಾವೀದನ ಕೀರ್ತನೆ. ದೇವರೇ, ರಕ್ಷಿಸು; ಜಲವು ನನ್ನ ಕುತ್ತಿಗೆಯವರೆಗೂ ಏರಿಬಂದಿದೆ.
טבעתי ביון מצולה-- ואין מעמד באתי במעמקי-מים ושבלת שטפתני | 2 |
೨ಆಳವಾದ ಕೆಸರಿನಲ್ಲಿ ಕುಸಿಯುತ್ತಿದ್ದೇನೆ; ನೆಲೆ ಸಿಕ್ಕುತ್ತಿಲ್ಲ. ಜಲರಾಶಿಯೊಳಗೆ ಮುಳುಗುತ್ತಿದ್ದೇನೆ; ಪ್ರವಾಹವು ನನ್ನನ್ನು ಹೊಡೆದುಕೊಂಡು ಹೋಗುತ್ತಿದೆ.
יגעתי בקראי נחר גרוני כלו עיני--מיחל לאלהי | 3 |
೩ಮೊರೆಯಿಟ್ಟು ಬೇಸತ್ತು ಹೋಗಿದ್ದೇನೆ; ಗಂಟಲು ಒಣಗಿಹೋಯಿತು. ನನ್ನ ದೇವರನ್ನು ನಿರೀಕ್ಷಿಸುತ್ತಾ ಕಣ್ಣುಗಳು ಕ್ಷೀಣಿಸುತ್ತವೆ.
רבו משערות ראשי-- שנאי חנם עצמו מצמיתי איבי שקר-- אשר לא-גזלתי אז אשיב | 4 |
೪ನಿಷ್ಕಾರಣ ದ್ವೇಷಿಗಳು ನನ್ನ ತಲೆಗೂದಲುಗಳಿಗಿಂತ ಹೆಚ್ಚಾಗಿದ್ದಾರೆ; ನಿರಾಕಾರಣವಾಗಿ ನನ್ನನ್ನು ಮುಗಿಸಿಬಿಡಬೇಕೆಂದಿರುವ ವೈರಿಗಳು ಬಲಿಷ್ಠರಾಗಿದ್ದಾರೆ. ನಾನು ಅಪಹರಿಸದಿದ್ದರೂ ನನ್ನಿಂದ ದಂಡ ತೆಗೆದುಕೊಂಡರಲ್ಲಾ.
אלהים--אתה ידעת לאולתי ואשמותי ממך לא-נכחדו | 5 |
೫ದೇವರೇ, ನನ್ನ ಮೂರ್ಖತನವು ನಿನಗೆ ಗೊತ್ತು; ನನ್ನ ಅಪರಾಧಗಳು ನಿನಗೆ ಮರೆಯಾಗಿಲ್ಲ.
אל-יבשו בי קויך-- אדני יהוה צבאות אל-יכלמו בי מבקשיך-- אלהי ישראל | 6 |
೬ಸೇನಾಧೀಶ್ವರನೇ, ಯೆಹೋವನೇ, ನಿನ್ನನ್ನು ನಂಬಿದವರಿಗೆ ನನ್ನಿಂದ ನಿರಾಶೆಯಾಗದಿರಲಿ; ಇಸ್ರಾಯೇಲರ ದೇವರೇ, ನಿನ್ನ ದರ್ಶನವನ್ನು ಬಯಸುವವರು ನನ್ನಿಂದ ಅಪಮಾನಕ್ಕೆ ಗುರಿಯಾಗದಿರಲಿ.
כי-עליך נשאתי חרפה כסתה כלמה פני | 7 |
೭ನಿನಗೋಸ್ಕರವಾಗಿ ನಿಂದೆಗೆ ಒಳಗಾದೆನಲ್ಲಾ; ನಾಚಿಕೆಯು ನನ್ನ ಮುಖವನ್ನು ಕವಿದಿದೆ.
מוזר הייתי לאחי ונכרי לבני אמי | 8 |
೮ನನ್ನ ಅಣ್ಣತಮ್ಮಂದಿರಿಗೆ ಅಪರಿಚಿತನಂತಾದೆನು; ಒಡಹುಟ್ಟಿದವರಿಗೆ ಪರದೇಶಿಯಂತೆ ಇದ್ದೇನೆ.
כי-קנאת ביתך אכלתני וחרפות חורפיך נפלו עלי | 9 |
೯ನಿನ್ನ ಆಲಯದ ಅಭಿಮಾನವು ನನ್ನನ್ನು ಬೆಂಕಿಯಂತೆ ದಹಿಸಿದೆ. ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಂದಿವೆ.
ואבכה בצום נפשי ותהי לחרפות לי | 10 |
೧೦ನಾನು ದುಃಖದಿಂದ ಅತ್ತು ಉಪವಾಸ ಮಾಡಿ ನನ್ನ ಆತ್ಮವನ್ನು ಕುಗ್ಗಿಸಿಕೊಂಡಿದ್ದೇನೆ, ಪರಿಹಾಸ್ಯಕ್ಕೆ ಕಾರಣವಾಯಿತು.
ואתנה לבושי שק ואהי להם למשל | 11 |
೧೧ನಾನು ಗೋಣಿತಟ್ಟು ಕಟ್ಟಿಕೊಂಡದ್ದು, ಅವರ ಗಾದೆಗೆ ಆಸ್ಪದವಾಯಿತು.
ישיחו בי ישבי שער ונגינות שותי שכר | 12 |
೧೨ಊರ ಬಾಗಿಲಲ್ಲಿ ಕುಳಿತುಕೊಳ್ಳುವವರ ಆಡು ಮಾತಿಗೆ ಗುರಿಯಾಗಿದ್ದೇನೆ. ಕುಡುಕರು ನನ್ನ ವಿಷಯವನ್ನು ಹಾಡಿ ಪರಿಹಾಸ್ಯ ಮಾಡುತ್ತಾರೆ.
ואני תפלתי-לך יהוה עת רצון-- אלהים ברב-חסדך ענני באמת ישעך | 13 |
೧೩ಯೆಹೋವನೇ, ನಾನಾದರೋ ನಿನಗೆ ಮೊರೆಯಿಟ್ಟಿದ್ದೇನೆ; ಇದು ನಿನ್ನ ಪ್ರಸನ್ನತೆಗೆ ಸಕಾಲ. ಪ್ರೇಮಪೂರ್ಣನಾದ ದೇವನೇ, ಸತ್ಯವಂತನಾದ ರಕ್ಷಕನೇ, ಸದುತ್ತರವನ್ನು ದಯಪಾಲಿಸು.
הצילני מטיט ואל-אטבעה אנצלה משנאי וממעמקי מים | 14 |
೧೪ನಾನು ಕೆಸರಿನಲ್ಲಿ ಮುಳುಗಿಹೋಗದಂತೆ ಮೇಲೆತ್ತು; ವೈರಿಗಳ ಕೈಯೊಳಗಿಂದ ಬಿಡಿಸು; ಮಹಾಜಲರಾಶಿಯಿಂದ ಎಳೆದುಕೋ.
אל-תשטפני שבלת מים-- ואל-תבלעני מצולה ואל-תאטר-עלי באר פיה | 15 |
೧೫ಪ್ರವಾಹವು ನನ್ನನ್ನು ಬಡಕೊಂಡು ಹೋಗದಿರಲಿ; ಅಗಾಧವು ನನ್ನನ್ನು ಒಳಗೆ ಎಳೆದುಕೊಳ್ಳದಿರಲಿ; ಪಾತಾಳವು ನನ್ನನ್ನು ನುಂಗದಿರಲಿ.
ענני יהוה כי-טוב חסדך כרב רחמיך פנה אלי | 16 |
೧೬ಯೆಹೋವನೇ, ನನ್ನ ಮೊರೆಯನ್ನು ಲಾಲಿಸು; ನಿನ್ನ ಕೃಪೆಯು ಶುಭಕರವಾಗಿದೆಯಲ್ಲಾ. ಕರುಣಾನಿಧಿಯೇ, ನನ್ನನ್ನು ಕಟಾಕ್ಷಿಸು.
ואל-תסתר פניך מעבדך כי-צר-לי מהר ענני | 17 |
೧೭ನಿನ್ನ ದಾಸನಿಗೆ ವಿಮುಖನಾಗಬೇಡ, ಇಕ್ಕಟ್ಟಿನಲ್ಲಿದ್ದೇನೆ, ತಡಮಾಡದೆ ಸಹಾಯಮಾಡು.
קרבה אל-נפשי גאלה למען איבי פדני | 18 |
೧೮ಸಮೀಪಿಸಿ ನನ್ನ ಪ್ರಾಣವನ್ನು ವಿಮೋಚಿಸು. ಶತ್ರು ನಿಮಿತ್ತವಾಗಿ ನನ್ನನ್ನು ರಕ್ಷಿಸು.
אתה ידעת--חרפתי ובשתי וכלמתי נגדך כל-צוררי | 19 |
೧೯ನನಗುಂಟಾದ ನಿಂದೆ, ಲಜ್ಜೆ, ಅಪಮಾನ ಇವು ನಿನಗೇ ಗೊತ್ತು; ನನ್ನ ವಿರೋಧಿಗಳು ನಿನಗೆ ಮರೆಯಾಗಿಲ್ಲವಲ್ಲಾ.
חרפה שברה לבי-- ואנושה ואקוה לנוד ואין ולמנחמים ולא מצאתי | 20 |
೨೦ನಿಂದೆಯಿಂದ ನಿರಾಶೆಗೊಂಡು ಕುಂದಿಹೋಗಿದ್ದೇನೆ. ಕರುಣಾಳುಗಳನ್ನು ನಿರೀಕ್ಷಿಸಿದೆ; ದೊರೆಯಲಿಲ್ಲ. ಸಂತೈಸುವವರನ್ನು ಹಾರೈಸಿದೆ; ಸಿಕ್ಕಲಿಲ್ಲ.
ויתנו בברותי ראש ולצמאי ישקוני חמץ | 21 |
೨೧ನನಗೆ ಉಣ್ಣುವುದಕ್ಕೆ ಕಹಿಯಾದ ವಸ್ತುವನ್ನೂ, ಬಾಯಾರಿದಾಗ, ಹುಳಿ ದ್ರಾಕ್ಷಾರಸವನ್ನೂ ಕೊಟ್ಟರು.
יהי-שלחנם לפניהם לפח ולשלומים למוקש | 22 |
೨೨ಅವರ ಸಂಪತ್ತು ಅವರಿಗೆ ಉರುಲಾಗಲಿ; ನಿಶ್ಚಿಂತರಾಗಿರುವಾಗಲೇ ಅದು ಅವರಿಗೆ ಬೋನಾಗಲಿ.
תחשכנה עיניהם מראות ומתניהם תמיד המעד | 23 |
೨೩ಅವರ ಕಣ್ಣು ಮೊಬ್ಬಾಗಿ ಕಾಣದೆ ಹೋಗಲಿ; ಅವರ ನಡುವು ಯಾವಾಗಲೂ ನಡಗುತ್ತಿರಲಿ.
שפך-עליהם זעמך וחרון אפך ישיגם | 24 |
೨೪ನಿನ್ನ ರೌದ್ರವನ್ನು ಅವರ ಮೇಲೆ ಸುರಿದುಬಿಡು; ನಿನ್ನ ಕೋಪಾಗ್ನಿಯು ಅವರನ್ನು ದಹಿಸಲಿ.
תהי-טירתם נשמה באהליהם אל-יהי ישב | 25 |
೨೫ಅವರ ಪಾಳೆಯವು ಹಾಳುಬೀಳಲಿ; ಅವರ ನಿವಾಸಗಳು ಜನಶೂನ್ಯವಾಗಲಿ.
כי-אתה אשר-הכית רדפו ואל-מכאוב חלליך יספרו | 26 |
೨೬ನೀನು ಹೊಡೆದವನನ್ನು ಅವರು ಹಿಂಸಿಸುತ್ತಾರೆ; ನೀನು ಗಾಯಮಾಡಿದವರ ನೋವು ಅವರ ಪರಿಹಾಸ್ಯಕ್ಕೆ ಕಾರಣವಾಗಿದೆ.
תנה-עון על-עונם ואל-יבאו בצדקתך | 27 |
೨೭ಅವರ ಅಪರಾಧಗಳು ಒಂದೊಂದಾಗಿ ಹೆಚ್ಚುತ್ತಾ ಬರಲಿ. ನಿನ್ನ ನೀತಿಯಲ್ಲಿ ಅವರಿಗೆ ಪಾಲುಕೊಡಬೇಡ.
ימחו מספר חיים ועם צדיקים אל-יכתבו | 28 |
೨೮ಜೀವಿತರ ಪಟ್ಟಿಯಿಂದ ಅವರ ಹೆಸರು ತೆಗೆದು ಹಾಕು, ಸದ್ಭಕ್ತರ ಹೆಸರಿನ ಸಂಗಡ ಅವರ ಹೆಸರು ಬರೆಯಲ್ಪಡದಿರಲಿ.
ואני עני וכואב ישועתך אלהים תשגבני | 29 |
೨೯ದೇವರೇ, ನೊಂದು ಕುಗ್ಗಿದವನಾದ ನನ್ನನ್ನಾದರೋ, ನಿನ್ನ ರಕ್ಷಣೆಯು ಭದ್ರಸ್ಥಳದಲ್ಲಿರಿಸುವುದು.
אהללה שם-אלהים בשיר ואגדלנו בתודה | 30 |
೩೦ನಾನು ಸಂಕೀರ್ತಿಸುತ್ತಾ ದೇವರ ನಾಮವನ್ನು ಕೊಂಡಾಡುವೆನು; ಕೃತಜ್ಞತಾಸ್ತುತಿಯಿಂದ ಘನಪಡಿಸುವೆನು.
ותיטב ליהוה משור פר מקרן מפריס | 31 |
೩೧ಇದು ಯೆಹೋವನಿಗೆ ಕೊಂಬುಗೊರಸುಗಳುಳ್ಳ, ಎಳೇ ಹೋರಿಗಳ ಯಜ್ಞಕ್ಕಿಂತ ಬಹು ಪ್ರಿಯವಾದದ್ದು.
ראו ענוים ישמחו דרשי אלהים ויחי לבבכם | 32 |
೩೨ದೀನರು ಇದನ್ನು ನೋಡಿ ಹರ್ಷಿಸುವರು. ದೇವದರ್ಶನವನ್ನು ಅಪೇಕ್ಷಿಸುವವರೇ, ನಿಮ್ಮ ಆತ್ಮವು ಉಜ್ಜೀವಿಸಲಿ.
כי-שמע אל-אביונים יהוה ואת-אסיריו לא בזה | 33 |
೩೩ಯೆಹೋವನು ಬಡವರ ಮೊರೆಗೆ ಲಕ್ಷ್ಯಕೊಡುವನು; ಸೆರೆಯಲ್ಲಿರುವ ತನ್ನವರನ್ನು ತಿರಸ್ಕರಿಸುವುದಿಲ್ಲ.
יהללוהו שמים וארץ ימים וכל-רמש בם | 34 |
೩೪ಭೂಮ್ಯಾಕಾಶಗಳೂ, ಸಮುದ್ರಗಳೂ, ಜಲಚರಗಳೂ ಆತನನ್ನು ಕೊಂಡಾಡಲಿ.
כי אלהים יושיע ציון ויבנה ערי יהודה וישבו שם וירשוה | 35 |
೩೫ದೇವರು ಚೀಯೋನ್ ಪಟ್ಟಣವನ್ನು ರಕ್ಷಿಸಿ, ಯೆಹೂದ ದೇಶದ ನಗರಗಳನ್ನು ಕಟ್ಟಿಸುವನು; ಆತನ ಪ್ರಜೆಗಳು ಅಲ್ಲಿ ವಾಸಮಾಡುತ್ತಾ ಅದನ್ನು ಸ್ವದೇಶವನ್ನಾಗಿ ಮಾಡಿಕೊಳ್ಳುವರು.
וזרע עבדיו ינחלוה ואהבי שמו ישכנו-בה | 36 |
೩೬ಅವರ ಸಂತತಿಗೇ ಅದರ ಹಕ್ಕಿರುವುದು; ಆತನ ನಾಮವನ್ನು ಪ್ರೀತಿಸುವವರು ಅದರಲ್ಲಿ ವಾಸಿಸುವರು.