< תהילים 71 >
בך-יהוה חסיתי אל-אבושה לעולם | 1 |
೧ಯೆಹೋವನೇ, ನಿನ್ನನ್ನು ಮೊರೆಹೊಕ್ಕಿದ್ದೇನೆ; ಎಂದಿಗೂ ಅವಮಾನಕ್ಕೆ ಗುರಿಮಾಡಬೇಡ.
בצדקתך תצילני ותפלטני הטה-אלי אזנך והושיעני | 2 |
೨ನಿನ್ನ ನೀತಿಗನುಸಾರವಾಗಿ ನನ್ನನ್ನು ಬಿಡಿಸಿ ಪಾರುಮಾಡು; ನನ್ನ ಪ್ರಾರ್ಥನೆಗೆ ಕಿವಿಗೊಟ್ಟು ಉದ್ಧರಿಸು.
היה לי לצור מעון לבוא-- תמיד צוית להושיעני כי-סלעי ומצודתי אתה | 3 |
೩ನಾನು ಯಾವಾಗಲೂ ಮರೆಹೋಗುವ ಆಶ್ರಯಗಿರಿಯಾಗಿರು; ನನ್ನ ರಕ್ಷಣೆಗೋಸ್ಕರ ಆಜ್ಞಾಪಿಸಿದ್ದೀಯಲ್ಲವೇ. ನೀನೇ ನನ್ನ ಬಂಡೆಯೂ, ಕೋಟೆಯೂ ಆಗಿದ್ದೀಯಲ್ಲಾ.
אלהי--פלטני מיד רשע מכף מעול וחומץ | 4 |
೪ದೇವರೇ, ನನ್ನನ್ನು ದುಷ್ಟನ ಕೈಯಿಂದಲೂ, ಅನ್ಯಾಯ ಮತ್ತು ಹಿಂಸಕನ ವಶದಿಂದಲೂ ತಪ್ಪಿಸು.
כי-אתה תקותי אדני יהוה מבטחי מנעורי | 5 |
೫ಕರ್ತನಾದ ಯೆಹೋವನೇ, ಬಾಲ್ಯದಿಂದ ನನ್ನ ನಿರೀಕ್ಷೆಯೂ, ಭರವಸವೂ ನೀನಲ್ಲವೋ?
עליך נסמכתי מבטן--ממעי אמי אתה גוזי בך תהלתי תמיד | 6 |
೬ನಾನು ಹುಟ್ಟಿದಂದಿನಿಂದ ನಿನ್ನನ್ನೇ ಅವಲಂಬಿಸಿಕೊಂಡಿದ್ದೇನೆ. ತಾಯಿ ಹೆತ್ತಂದಿನಿಂದ ನನ್ನ ಉದ್ಧಾರಕನು ನೀನೇ. ನಾನು ಯಾವಾಗಲೂ ಹಿಗ್ಗುತ್ತಿರುವುದು ನಿನ್ನಲ್ಲಿಯೇ.
כמופת הייתי לרבים ואתה מחסי-עז | 7 |
೭ನನ್ನ ದುಸ್ಥಿತಿಯು ಅನೇಕರಿಗೆ ಒಂದು ಗುರುತಾಗಿದೆ; ಆದರೂ ನೀನು ನನಗೆ ಬಲವಾದ ಆಶ್ರಯಸ್ಥಾನವಾಗಿರುತ್ತೀ.
ימלא פי תהלתך כל-היום תפארתך | 8 |
೮ನನ್ನ ಬಾಯಲ್ಲಿ ನಿನ್ನ ಸ್ತೋತ್ರವಲ್ಲದೆ ಮತ್ತೊಂದಿಲ್ಲ; ದಿನವೆಲ್ಲಾ ನಿನ್ನ ಘನತೆಯನ್ನು ವರ್ಣಿಸುತ್ತಿರುವೆನು.
אל-תשליכני לעת זקנה ככלות כחי אל-תעזבני | 9 |
೯ವೃದ್ಧಾಪ್ಯದಲ್ಲಿ ನನ್ನನ್ನು ಧಿಕ್ಕರಿಸಬೇಡ; ನನ್ನ ಬಲವು ಕುಂದಿದಾಗ ಕೈಬಿಡಬೇಡ.
כי-אמרו אויבי לי ושמרי נפשי נועצו יחדו | 10 |
೧೦ನನ್ನ ಜೀವಕ್ಕೆ ಹೊಂಚುಹಾಕುವ ವೈರಿಗಳು ಒಟ್ಟಾಗಿ ಆಲೋಚಿಸುತ್ತಾ,
לאמר אלהים עזבו רדפו ותפשוהו כי-אין מציל | 11 |
೧೧“ದೇವರು ಅವನನ್ನು ಕೈಬಿಟ್ಟಿದ್ದಾನೆ; ಬೆನ್ನಟ್ಟಿ ಹಿಡಿಯಿರಿ; ಬಿಡಿಸುವವರು ಯಾರೂ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ.
אלהים אל-תרחק ממני אלהי לעזרתי חישה (חושה) | 12 |
೧೨ದೇವರೇ, ದೂರವಾಗಿರಬೇಡ. ನನ್ನ ದೇವರೇ, ಬೇಗ ಸಹಾಯಮಾಡು.
יבשו יכלו שטני נפשי יעטו חרפה וכלמה--מבקשי רעתי | 13 |
೧೩ನನ್ನ ಪ್ರಾಣಕ್ಕೆ ಹೊಂಚು ಹಾಕುವವರು ಅಪಮಾನ ಹೊಂದಿ ನಾಶವಾಗಲಿ; ನನಗೆ ಕೇಡುಬಗೆಯುವವರನ್ನು ನಿಂದೆ, ಅಪಮಾನಗಳು ಕವಿಯಲಿ.
ואני תמיד איחל והוספתי על-כל-תהלתך | 14 |
೧೪ನಾನಂತೂ ನಿರೀಕ್ಷಿಸಿಕೊಂಡೇ ಇರುವೆನು; ನಿನ್ನನ್ನು ಅಧಿಕಾಧಿಕವಾಗಿ ಹೊಗಳುತ್ತಿರುವೆನು.
פי יספר צדקתך--כל-היום תשועתך כי לא ידעתי ספרות | 15 |
೧೫ನನ್ನ ಬಾಯಿ ನಿನ್ನ ನೀತಿಯನ್ನು, ರಕ್ಷಣೆಯನ್ನು ಹಗಲೆಲ್ಲಾ ವರ್ಣಿಸುತ್ತಿರುವುದು; ಆದರೂ ಅವುಗಳ ವಿವರಣೆ ನನಗೆ ಅಸಾಧ್ಯ.
אבוא--בגברות אדני יהוה אזכיר צדקתך לבדך | 16 |
೧೬ಕರ್ತನಾದ ಯೆಹೋವನೇ, ನಾನು ನಿನ್ನ ಮಹತ್ತರವಾದ ಕೃತ್ಯಗಳನ್ನು ಸ್ಮರಿಸುವವನಾಗಿ ನಿನ್ನೊಬ್ಬನ ನೀತಿಯನ್ನೇ ಪ್ರಕಟಪಡಿಸುವೆನು.
אלהים למדתני מנעורי ועד-הנה אגיד נפלאותיך | 17 |
೧೭ದೇವರೇ, ನೀನು ಬಾಲ್ಯದಿಂದಲೂ ನನ್ನನ್ನು ಉಪದೇಶಿಸುತ್ತಾ ಬಂದಿದ್ದಿ. ನಾನು ನಿನ್ನ ಅದ್ಭುತಕೃತ್ಯಗಳನ್ನು ಇಂದಿನ ವರೆಗೂ ಪ್ರಚುರಪಡಿಸುತ್ತಿದ್ದೇನೆ.
וגם עד-זקנה ושיבה-- אלהים אל-תעזבני עד-אגיד זרועך לדור לכל-יבוא גבורתך | 18 |
೧೮ದೇವರೇ, ನಾನು ನರೆಯ ಮುದುಕನಾದಾಗಲೂ ಕೈಬಿಡಬೇಡ; ಆಗ ಮುಂದಿನ ತಲೆಯವರಿಗೆ ನಿನ್ನ ಭುಜಬಲವನ್ನು ಸಾರುವೆನು, ತಲತಲಾಂತರದವರಿಗೆಲ್ಲಾ ನಿನ್ನ ಪ್ರತಾಪವನ್ನು ಪ್ರಕಟಿಸುವೆನು.
וצדקתך אלהים עד-מרום אשר-עשית גדלות אלהים מי כמוך | 19 |
೧೯ದೇವರೇ, ನಿನ್ನ ನೀತಿಯು ಆಕಾಶವನ್ನು ನಿಲುಕುವಷ್ಟು ಮಹೋನ್ನತವಾಗಿದೆ. ಮಹತ್ತರವಾದ ಕೃತ್ಯಗಳನ್ನು ನಡೆಸಿದ ದೇವರೇ, ನಿನಗೆ ಸಮಾನರು ಯಾರು?
אשר הראיתנו (הראיתני) צרות רבות-- ורעות תשוב תחינו (תחיני) ומתהמות הארץ תשוב תעלני | 20 |
೨೦ನಮ್ಮನ್ನು ಅನೇಕ ಕಷ್ಟನಷ್ಟಗಳಿಗೆ ಗುರಿಮಾಡಿದ ನೀನೇ ಪುನಃ ಉಜ್ಜೀವಿಸಮಾಡು; ನಮ್ಮನ್ನು ಭೂಮಿಯ ಅಧೋಭಾಗದಿಂದ ಮೇಲೆತ್ತು.
೨೧ನನ್ನ ಗೌರವವನ್ನು ಹೆಚ್ಚಿಸು; ನನಗೆ ಅಭಿಮುಖನಾಗಿ ಸಂತೈಸು.
גם-אני אודך בכלי-נבל-- אמתך אלהי אזמרה לך בכנור-- קדוש ישראל | 22 |
೨೨ನನ್ನ ದೇವರೇ, ನಿನ್ನ ಸತ್ಯತೆಯನ್ನು ಸ್ಮರಿಸುವೆನು; ಸ್ವರಮಂಡಲದಿಂದ ನಿನ್ನನ್ನು ಸಂಕೀರ್ತಿಸುವೆನು. ಇಸ್ರಾಯೇಲರ ಪರಿಶುದ್ಧ ದೇವರು, ಕಿನ್ನರಿಯನ್ನು ನುಡಿಸುತ್ತಾ ನಿನ್ನನ್ನು ಭಜಿಸುವೆನು.
תרננה שפתי כי אזמרה-לך ונפשי אשר פדית | 23 |
೨೩ನನ್ನ ತುಟಿಗಳೂ ಮತ್ತು ನೀನು ರಕ್ಷಿಸಿದ ನನ್ನ ಪ್ರಾಣವೂ ನಿನ್ನನ್ನು ಹಾಡಿಹರಸುವವು.
גם-לשוני-- כל-היום תהגה צדקתך כי-בשו כי-חפרו מבקשי רעתי | 24 |
೨೪ನನ್ನ ಕೇಡಿಗೆ ಪ್ರಯತ್ನಿಸಿದವರು ಆಶಾಭಂಗಪಟ್ಟು ಅಪಮಾನ ಹೊಂದಿದ್ದಾರೆ. ಆದುದರಿಂದ ನನ್ನ ನಾಲಿಗೆಯು ದಿನವೆಲ್ಲಾ ನಿನ್ನ ನೀತಿಸಾಧನೆಯನ್ನು ವರ್ಣಿಸುತ್ತಿರುವುದು.