< תהילים 72 >
לשלמה אלהים--משפטיך למלך תן וצדקתך לבן-מלך | 1 |
ಸೊಲೊಮೋನನ ಕೀರ್ತನೆ. ದೇವರೇ, ನಿಮ್ಮ ನ್ಯಾಯವನ್ನು ಅರಸನಿಗೆ ಕಲಿಸಿಕೊಡಿರಿ. ನಿಮ್ಮ ನೀತಿಯನ್ನು ರಾಜಕುಮಾರನಿಗೆ ಕಲಿಸಿಕೊಡಿರಿ.
ידין עמך בצדק וענייך במשפט | 2 |
ಅರಸನು ನಿಮ್ಮ ಜನರಿಗೆ ನೀತಿಯಿಂದಲೂ ನಿಮ್ಮ ಬಾಧೆಪಟ್ಟ ಪ್ರಜೆಗೆ ನ್ಯಾಯದಿಂದಲೂ ತೀರ್ಪುಮಾಡಲಿ.
ישאו הרים שלום לעם וגבעות בצדקה | 3 |
ಬೆಟ್ಟಗುಡ್ಡಗಳಿಂದ ಸಮೃದ್ಧಿಯೂ ನೀತಿಯ ಫಲವೂ ಜನರಿಗೆ ಬರಲಿ.
ישפט עניי-עם--יושיע לבני אביון וידכא עושק | 4 |
ಅರಸನು ಬಡವರ ನ್ಯಾಯ ಸ್ಥಾಪಿಸಲಿ. ಅವನು ಅಗತ್ಯತೆಯಲ್ಲಿರುವವರ ಮಕ್ಕಳನ್ನು ರಕ್ಷಿಸಲಿ. ದಬ್ಬಾಳಿಕೆ ಮಾಡುವವರನ್ನು ದಂಡಿಸಲಿ.
ייראוך עם-שמש ולפני ירח דור דורים | 5 |
ಸೂರ್ಯನೂ ಚಂದ್ರನೂ ಇರುವವರೆಗೆ ತಲತಲಾಂತರಗಳು ಜನರು ಅರಸನಿಗೆ ಭಯಪಡಲಿ.
ירד כמטר על-גז כרביבים זרזיף ארץ | 6 |
ಕೊಯ್ದ ಹುಲ್ಲಿನ ಮೇಲೆ ಬೀಳುವ ಮಳೆಯ ಹಾಗೆಯೂ, ಭೂಮಿಯನ್ನು ನೆನಸುತ್ತಾ ಸುರಿಯುವ ಮಳೆಗಳ ಹಾಗೆಯೂ ಅರಸನು ಇರಲಿ.
יפרח-בימיו צדיק ורב שלום עד-בלי ירח | 7 |
ಅರಸನ ದಿವಸಗಳಲ್ಲಿ ನೀತಿವಂತರು ವೃದ್ಧಿ ಆಗಲಿ. ಸಮೃದ್ಧಿಯಾದ ಸಮಾಧಾನವು ಚಂದ್ರನು ಇರುವವರೆಗೂ ಇರಲಿ.
וירד מים עד-ים ומנהר עד-אפסי-ארץ | 8 |
ಸಮುದ್ರದಿಂದ ಸಮುದ್ರದವರೆಗೂ ನದಿಯಿಂದ ಭೂಮಿಯ ಕೊನೆಗಳವರೆಗೂ ಅರಸನು ಆಳಲಿ.
לפניו יכרעו ציים ואיביו עפר ילחכו | 9 |
ಅರಸನ ಮುಂದೆ ಮರುಭೂಮಿಯ ನಿವಾಸಿಗಳು ಎರಗಲಿ. ಅರಸನ ಶತ್ರುಗಳು ಧೂಳನ್ನು ನೆಕ್ಕಲಿ.
מלכי תרשיש ואיים מנחה ישיבו מלכי שבא וסבא אשכר יקריבו | 10 |
ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ಅರಸನಿಗೆ ಸಲ್ಲಿಸಲಿ. ಶೆಬ ಮತ್ತು ಸೆಬದ ಅರಸರು ದಾನಗಳನ್ನು ತಂದೊಪ್ಪಿಸಲಿ.
וישתחוו-לו כל-מלכים כל-גוים יעבדוהו | 11 |
ಹೌದು, ಎಲ್ಲಾ ಅರಸರು ನಮ್ಮ ಅರಸನ ಮುಂದೆ ಅಡ್ಡಬೀಳಲಿ. ಎಲ್ಲಾ ಜನಾಂಗಗಳು ಅರಸನಿಗೆ ಸೇವೆಸಲ್ಲಿಸಲಿ.
כי-יציל אביון משוע ועני ואין-עזר לו | 12 |
ಏಕೆಂದರೆ ಅರಸನಿಗೆ ಮೊರೆಯಿಡುವ ಬಡವರನ್ನೂ ಸಹಾಯಕನಿಲ್ಲದ ಬಾಧೆಪಡುವವರನ್ನೂ ಬಿಡಿಸುವನು.
יחס על-דל ואביון ונפשות אביונים יושיע | 13 |
ದರಿದ್ರನನ್ನೂ, ಬಡವನನ್ನೂ ಕರುಣಿಸುವನು. ಬಡವರ ಪ್ರಾಣಗಳನ್ನು ರಕ್ಷಿಸುವನು.
מתוך ומחמס יגאל נפשם וייקר דמם בעיניו | 14 |
ಮೋಸ ದಬ್ಬಾಳಿಕೆಯಿಂದ ಜನರನ್ನು ಬಿಡುಗಡೆ ಮಾಡುವನು. ಜನರ ಜೀವವು ಆತನ ದೃಷ್ಟಿಯಲ್ಲಿ ಅಮೂಲ್ಯವಾಗಿರುವುದು.
ויחי-- ויתן-לו מזהב שבא ויתפלל בעדו תמיד כל-היום יברכנהו | 15 |
ಅರಸನು ಬಾಳಲಿ. ಆತನಿಗೆ ಶೆಬದ ಚಿನ್ನವನ್ನು ಕೊಡಲಿ. ಆತನಿಗೋಸ್ಕರ ಯಾವಾಗಲೂ ಪ್ರಾರ್ಥನೆ ಮಾಡಲಿ. ಇಡೀ ದಿನ ಆತನಿಗೆ ಆಶೀರ್ವಾದಗಳು ಉಂಟಾಗಲಿ.
יהי פסת-בר בארץ-- בראש הרים ירעש כלבנון פריו ויציצו מעיר כעשב הארץ | 16 |
ಧಾನ್ಯದ ಸಮೃದ್ಧಿಯು ದೇಶದಲ್ಲಿ ಬೆಟ್ಟಗಳ ತುದಿಯವರೆಗೂ ಇರಲಿ; ಅದರ ಫಲವು ಲೆಬನೋನಿನ ಹಾಗೆ ಸಮೃದ್ಧಿಯಾಗಲಿ; ಪಟ್ಟಣದವರು ಭೂಮಿಯ ಸೊಪ್ಪಿನ ಹಾಗೆ ವೃದ್ಧಿ ಆಗಲಿ.
יהי שמו לעולם-- לפני-שמש ינין (ינון) שמו ויתברכו בו כל-גוים יאשרוהו | 17 |
ಅರಸನ ನಾಮವು ಎಂದೆಂದಿಗೂ ಇರಲಿ. ಸೂರ್ಯನಿರುವವರೆಗೂ ಆತನ ಹೆಸರು ಇರಲಿ. ಮನುಷ್ಯರು ಅರಸನಲ್ಲಿ ಆಶೀರ್ವಾದ ಹೊಂದಲಿ. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತನೆಂದು ಕರೆಯಲಿ.
ברוך יהוה אלהים--אלהי ישראל עשה נפלאות לבדו | 18 |
ಅದ್ಭುತಗಳನ್ನು ಮಾಡುವುದರಲ್ಲಿ ಸರಿಸಾಟಿಯಿಲ್ಲದ ಇಸ್ರಾಯೇಲರ ದೇವರಾಗಿರುವ ಯೆಹೋವ ದೇವರಿಗೆ ಸ್ತೋತ್ರವಾಗಲಿ.
וברוך שם כבודו-- לעולם וימלא כבודו את-כל הארץ-- אמן ואמן | 19 |
ದೇವರ ಘನವುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ. ದೇವರ ತೇಜಸ್ಸು ಭೂಮಿಯಲ್ಲೆಲ್ಲಾ ತುಂಬಲಿ.
כלו תפלות-- דוד בן-ישי | 20 |
ಇಷಯನ ಮಗ ದಾವೀದನ ಪ್ರಾರ್ಥನೆಗಳು ಇಲ್ಲಿಗೆ ಮುಕ್ತಾಯವಾಗುತ್ತವೆ.