< תהילים 74 >
משכיל לאסף למה אלהים זנחת לנצח יעשן אפך בצאן מרעיתך | 1 |
೧ಆಸಾಫನ ಪದ್ಯ. ದೇವರೇ, ನೀನು ನಮ್ಮನ್ನು ಸಂಪೂರ್ಣವಾಗಿ ತಳ್ಳಿಬಿಟ್ಟಿದ್ದೇಕೆ? ನೀನು ಪಾಲಿಸುವ ಹಿಂಡಿನ ಮೇಲೆ ನಿನ್ನ ಕೋಪಾಗ್ನಿಯ ಹೊಗೆ ಏರುವುದೇಕೆ?
זכר עדתך קנית קדם-- גאלת שבט נחלתך הר-ציון זה שכנת בו | 2 |
೨ನೀನು ಹಿಂದಿನ ಕಾಲದಲ್ಲಿ ಸ್ವಕುಲವಾಗಿರಬೇಕೆಂದು ಬಿಡುಗಡೆ ಮಾಡಿ ಸಂಪಾದಿಸಿಕೊಂಡ ನಿನ್ನ ಸಭಾಮಂಡಲಿಯನ್ನು ಜ್ಞಾಪಿಸಿಕೋ; ನಿನ್ನ ವಾಸಸ್ಥಾನವಾಗಿದ್ದ ಚೀಯೋನ್ ಪರ್ವತವನ್ನು ಮರೆಯಬೇಡ.
הרימה פעמיך למשאות נצח כל-הרע אויב בקדש | 3 |
೩ಬಹುಕಾಲದಿಂದ ಹಾಳುಬಿದ್ದಿರುವ ಈ ಸ್ಥಾನದ ಕಡೆಗೆ ನೀನು ಹೆಜ್ಜೆ ಹಾಕು. ನೋಡು, ವೈರಿಯು ಪವಿತ್ರಾಲಯದಲ್ಲಿ ಎಲ್ಲವನ್ನು ಕೆಡವಿಬಿಟ್ಟಿದ್ದಾನೆ.
שאגו צרריך בקרב מועדך שמו אותתם אתות | 4 |
೪ನಿನ್ನ ದರ್ಶನಾಲಯದ ಮಧ್ಯದಲ್ಲಿ ನಿನ್ನ ವಿರೋಧಿಗಳು ಆರ್ಭಟಿಸುತ್ತಾರೆ; ನಮ್ಮ ಆರಾಧನಾ ಚಿಹ್ನೆಗಳನ್ನು ತೆಗೆದು ತಮ್ಮ ಚಿಹ್ನೆಗಳನ್ನು ಇಟ್ಟಿದ್ದಾರೆ.
יודע כמביא למעלה בסבך-עץ קרדמות | 5 |
೫ಮರಗಳ ಗುಂಪಿನಲ್ಲಿ ಕೊಡಲಿಗಳನ್ನು ಮೇಲೆತ್ತುವ ಜನರೋ ಎಂಬಂತಿದ್ದಾರೆ.
ועת (ועתה) פתוחיה יחד-- בכשיל וכילפות יהלמון | 6 |
೬ನೋಡು, ಅವರು ಈಗ ಕೈಕೊಡಲಿ ಮತ್ತು ಸುತ್ತಿಗೆಗಳಿಂದ, ದೇವಾಲಯದ ಕೆತ್ತನೆಯ ಕೆಲಸವನ್ನೆಲ್ಲಾ ಹೊಡೆದುಹಾಕುತ್ತಿದ್ದಾರೆ.
שלחו באש מקדשך לארץ חללו משכן-שמך | 7 |
೭ಅವರು ನಿನ್ನ ಪವಿತ್ರಾಲಯಕ್ಕೆ ಬೆಂಕಿ ಹಚ್ಚಿ, ನಿನ್ನ ನಾಮಕ್ಕೆ ಪ್ರತಿಷ್ಠಿತವಾದ ಮಂದಿರವನ್ನು ಹೊಲೆಮಾಡಿ, ನೆಲಸಮಗೊಳಿಸಿದ್ದಾರೆ.
אמרו בלבם נינם יחד שרפו כל-מועדי-אל בארץ | 8 |
೮“ನಾವು ಈ ಜನವನ್ನೆಲ್ಲಾ ಸಂಹರಿಸಿಬಿಡೋಣ” ಅಂದುಕೊಂಡಿದ್ದಾರೆ; ದೇಶದಲ್ಲಿರುವ ನಿನ್ನ ಎಲ್ಲಾ ಸಭಾಮಂದಿರಗಳನ್ನು ಸುಟ್ಟುಬಿಟ್ಟಿದ್ದಾರೆ.
אותתינו לא ראינו אין-עוד נביא ולא-אתנו ידע עד-מה | 9 |
೯ನಮ್ಮ ಆರಾಧನಾ ಚಿಹ್ನೆಗಳು ಈಗ ಕಾಣುವುದಿಲ್ಲ. ಮುಂಚೆ ಇದ್ದಂತೆ ನಮಗೆ ಪ್ರವಾದಿಗಳು ಯಾರೂ ಇಲ್ಲ; ಇದು ಎಷ್ಟರವರೆಗೆ ಇರುವುದೆಂದು ಬಲ್ಲವರು ನಮ್ಮಲ್ಲಿ ಯಾರೂ ಇಲ್ಲ.
עד-מתי אלהים יחרף צר ינאץ אויב שמך לנצח | 10 |
೧೦ದೇವರೇ, ವಿರೋಧಿಗಳು ಇನ್ನೆಲ್ಲಿಯ ತನಕ ನಿಂದಿಸುತ್ತಿರಬೇಕು? ವೈರಿಗಳು ನಿನ್ನ ನಾಮವನ್ನು ಸದಾಕಾಲವೂ ತಿರಸ್ಕರಿಸಬಹುದೋ?
למה תשיב ידך וימינך מקרב חוקך (חיקך) כלה | 11 |
೧೧ಚಾಚಿದ ಬಲಗೈಯನ್ನು ಏಕೆ ಹಿಂದೆಗೆದಿದ್ದೀ? ಅದನ್ನು ಎದೆಯ ಮೇಲಿನಿಂದ ತೆಗೆದು ಅವರನ್ನು ಸಂಹರಿಸಿಬಿಡು.
ואלהים מלכי מקדם פעל ישועות בקרב הארץ | 12 |
೧೨ದೇವರೇ, ನೀನು ಮೊದಲಿನಿಂದಲೂ ನನ್ನ ಅರಸನೂ, ಲೋಕಮಧ್ಯದಲ್ಲಿ ರಕ್ಷಣೆಗಳನ್ನು ನಡೆಸಿದಾತನೂ ಆಗಿದ್ದೀಯಲ್ಲವೇ?
אתה פוררת בעזך ים שברת ראשי תנינים על-המים | 13 |
೧೩ಸ್ವಶಕ್ತಿಯಿಂದ ಸಮುದ್ರವನ್ನು ಭೇದಿಸಿದವನು ನೀನು; ಜಲರಾಶಿಯ ಮೇಲೆ ತಿಮಿಂಗಿಲಗಳ ತಲೆಗಳನ್ನು ಜಜ್ಜಿಬಿಟ್ಟವನು ನೀನು.
אתה רצצת ראשי לויתן תתננו מאכל לעם לציים | 14 |
೧೪ಲಿವ್ಯಾತಾನನ ಶಿರಚ್ಛೇದನೆಮಾಡಿ, ಅಡವಿಯ ಮೃಗಸಮುದಾಯಕ್ಕೆ ಆಹಾರ ಕೊಟ್ಟವನು ನೀನು.
אתה בקעת מעין ונחל אתה הובשת נהרות איתן | 15 |
೧೫ಬುಗ್ಗೆಹಳ್ಳಗಳನ್ನು ಉಕ್ಕಿಸಿದವನು ನೀನು; ಮಹಾನದಿಗಳನ್ನು ಒಣಗಿಸಿಬಿಟ್ಟವನು ನೀನು.
לך יום אף-לך לילה אתה הכינות מאור ושמש | 16 |
೧೬ಹಗಲಿರುಳುಗಳನ್ನು ನೇಮಿಸಿದವನು ನೀನು; ಸೂರ್ಯ ಮತ್ತು ಜ್ಯೋತಿರ್ಮಂಡಲಗಳ ನಿರ್ಮಾಪಕನು ನೀನು.
אתה הצבת כל-גבולות ארץ קיץ וחרף אתה יצרתם | 17 |
೧೭ಭೂಮಿಯ ಎಲ್ಲಾ ಮೇರೆಗಳನ್ನು ಸ್ಥಾಪಿಸಿದವನು ನೀನು; ಬೇಸಿಗೆ ಮತ್ತು ಚಳಿಗಾಲಗಳನ್ನು ನೇಮಿಸಿದವನು ನೀನು.
זכר-זאת--אויב חרף יהוה ועם נבל נאצו שמך | 18 |
೧೮ಯೆಹೋವನೇ, ವೈರಿಗಳು ನಿನ್ನನ್ನು ನಿಂದಿಸಿದ್ದನ್ನು, ದುರ್ಮತಿಗಳು ನಿನ್ನ ನಾಮವನ್ನು ತಿರಸ್ಕರಿಸಿದ್ದನ್ನು ಜ್ಞಾಪಿಸಿಕೋ.
אל-תתן לחית נפש תורך חית ענייך אל-תשכח לנצח | 19 |
೧೯ನಿನ್ನ ಬೆಳವಕ್ಕಿಯ ಜೀವವನ್ನು ಕಾಡುಮೃಗಕ್ಕೆ ಕೊಡಬೇಡ; ನಿನ್ನ ದೀನಮಂಡಲಿಯನ್ನು ಸದಾ ಮರೆಯಬೇಡ.
הבט לברית כי מלאו מחשכי-ארץ נאות חמס | 20 |
೨೦ನಿನ್ನ ಒಡಂಬಡಿಕೆಯನ್ನು ಲಕ್ಷ್ಯಕ್ಕೆ ತಂದುಕೋ. ದೇಶದ ಅಂಧಕಾರ ಸ್ಥಾನಗಳಲ್ಲಿ ಬಲತ್ಕಾರವು ತುಂಬಿ ವಾಸಿಸುತ್ತದಲ್ಲಾ.
אל-ישב דך נכלם עני ואביון יהללו שמך | 21 |
೨೧ಕುಗ್ಗಿದವರು ಆಶಾಭಂಗದಿಂದ ಹಿಂದಿರುಗದಿರಲಿ; ದುಃಖಿತರೂ, ಬಡವರೂ ನಿನ್ನ ನಾಮವನ್ನು ಕೀರ್ತಿಸಲಿ.
קומה אלהים ריבה ריבך זכר חרפתך מני-נבל כל-היום | 22 |
೨೨ದೇವರೇ, ಎದ್ದು ನಿನ್ನ ನ್ಯಾಯವನ್ನು ನಡೆಸುವವನಾಗು; ದುರ್ಮತಿಯು ಯಾವಾಗಲೂ ನಿನ್ನನ್ನು ನಿಂದಿಸುತ್ತಿರುವುದನ್ನು ಜ್ಞಾಪಿಸಿಕೋ.
אל-תשכח קול צרריך שאון קמיך עלה תמיד | 23 |
೨೩ಮೇಲಣ ಲೋಕವನ್ನು ಎಡೆಬಿಡದೆ ಮುಟ್ಟುತ್ತಿರುವ, ನಿನ್ನ ವೈರಿಗಳ ಗದ್ದಲವನ್ನೂ ನಿನ್ನ ವಿರೋಧಿಗಳ ದೊಂಬಿಯನ್ನೂ ಮರೆಯದಿರು.