< תהילים 81 >

למנצח על-הגתית לאסף ב הרנינו לאלהים עוזנו הריעו לאלהי יעקב 1
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಗಿತ್ತೀಯ ರಾಗದಿಂದ ಹಾಡತಕ್ಕದ್ದು; ಆಸಾಫನ ಕೀರ್ತನೆ. ನಮಗೆ ಬಲಪ್ರದನಾಗಿರುವ ದೇವರಿಗೆ ಉತ್ಸಾಹಧ್ವನಿ ಮಾಡಿರಿ; ಯಾಕೋಬ್ಯರ ದೇವರಿಗೆ ಜಯಘೋಷಮಾಡಿರಿ.
שאו-זמרה ותנו-תף כנור נעים עם-נבל 2
ರಾಗವನ್ನು ಎತ್ತಿರಿ; ದಮ್ಮಡಿಯನ್ನು ಬಡಿಯಿರಿ; ಇಂಪಾದ ಕಿನ್ನರಿಯನ್ನೂ, ಸ್ವರಮಂಡಲವನ್ನೂ ಬಾರಿಸಿರಿ.
תקעו בחדש שופר בכסה ליום חגנו 3
ಅಮಾವಾಸ್ಯೆಯಲ್ಲಿಯೂ, ನಮ್ಮ ಉತ್ಸವದಿನವಾಗಿರುವ ಹುಣ್ಣಿಮೆಯಲ್ಲಿಯೂ ಕೊಂಬನ್ನು ಊದಿರಿ.
כי חק לישראל הוא משפט לאלהי יעקב 4
ಇದು ಇಸ್ರಾಯೇಲರಲ್ಲಿ ಒಂದು ಕಟ್ಟಳೆ; ಇದು ಯಾಕೋಬ್ಯರ ದೇವರು ವಿಧಿಸಿದ್ದು.
עדות ביהוסף שמו-- בצאתו על-ארץ מצרים שפת לא-ידעתי אשמע 5
ಆತನು ಐಗುಪ್ತ ದೇಶವನ್ನು ಬಾಧಿಸಲಿಕ್ಕೆ ಹೊರಟಾಗ, ನೆನಪಿಗಾಗಿ ಯೋಸೇಫ್ಯರಲ್ಲಿ ಈ ಕಟ್ಟಳೆಯನ್ನು ನೇಮಿಸಿದನು. ಪರಿಚಯವಿಲ್ಲದವನ ಮಾತು ನನಗೆ ಕೇಳಿಸುತ್ತದೆ; ಏನೆಂದರೆ,
הסירותי מסבל שכמו כפיו מדוד תעברנה 6
“ಅವನ ಹೆಗಲನ್ನು ಹೊರೆಗೆ ತಪ್ಪಿಸಿದೆನು; ಅವನ ಕೈಗಳನ್ನು ಪುಟ್ಟಿಯಿಂದ ಬಿಡಿಸಿದೆನು.
בצרה קראת ואחלצך אענך בסתר רעם אבחנך על-מי מריבה סלה 7
ಕಷ್ಟದಲ್ಲಿ ಮೊರೆಯಿಟ್ಟ ನಿನ್ನನ್ನು ವಿಮೋಚಿಸಿದೆನು; ಗುಡುಗುವ ಮೋಡದಲ್ಲಿದ್ದು ನಿನಗೆ ಉತ್ತರವನ್ನು ಕೊಟ್ಟೆನು; ಮೆರೀಬಾ ಪ್ರವಾಹಗಳ ಬಳಿಯಲ್ಲಿ ನಿನ್ನನ್ನು ಪರೀಕ್ಷಿಸಿದೆನು. (ಸೆಲಾ)
שמע עמי ואעידה בך ישראל אם-תשמע-לי 8
ನನ್ನ ಜನರೇ, ಕೇಳಿರಿ; ಖಂಡಿತವಾಗಿ ಹೇಳುತ್ತೇನೆ, ಇಸ್ರಾಯೇಲರೇ, ಕಿವಿಗೊಟ್ಟರೆ ಎಷ್ಟೋ ಒಳ್ಳೇದು,
לא-יהיה בך אל זר ולא תשתחוה לאל נכר 9
ನಿಮ್ಮಲ್ಲಿ ಅನ್ಯದೇವತೆಗಳು ಇರಬಾರದು; ಪರರ ದೇವತೆಗಳನ್ನು ಪೂಜಿಸಬಾರದು;
אנכי יהוה אלהיך-- המעלך מארץ מצרים הרחב-פיך ואמלאהו 10
೧೦ನಿಮ್ಮನ್ನು ಐಗುಪ್ತದಿಂದ ಕರೆತಂದ ಯೆಹೋವನೆಂಬ ನಾನೇ ನಿಮ್ಮ ದೇವರು; ಅಗಲವಾಗಿ ಬಾಯಿತೆರೆಯಿರಿ; ಅದನ್ನು ತುಂಬಿಸುವೆನು ಅಂದೆನು.
ולא-שמע עמי לקולי וישראל לא-אבה לי 11
೧೧ಆದರೆ ನನ್ನ ಜನರು ನನ್ನ ಮಾತು ಕೇಳಲಿಲ್ಲ; ಇಸ್ರಾಯೇಲರು ನನಗೆ ಸಮ್ಮತಿಸಲಿಲ್ಲ.
ואשלחהו בשרירות לבם ילכו במועצותיהם 12
೧೨ಆದುದರಿಂದ ಇವರು ಹಟಮಾರಿಗಳು; ತಮ್ಮ ಮನಸ್ಸಿನಂತೆ ನಡೆಯಲಿ ಎಂದು ಬಿಟ್ಟುಬಿಟ್ಟೆನು.
לו--עמי שמע לי ישראל בדרכי יהלכו 13
೧೩ನನ್ನ ಪ್ರಜೆಗಳಾದ ಇಸ್ರಾಯೇಲರು ನನ್ನ ಮಾತನ್ನು ಕೇಳಿ, ನನ್ನ ಮಾರ್ಗದಲ್ಲಿ ನಡೆದರೆ ಎಷ್ಟೋ ಒಳ್ಳೆಯದು!
כמעט אויביהם אכניע ועל צריהם אשיב ידי 14
೧೪ನಾನು ಅವರ ಎದುರಾಳಿಗಳ ಮೇಲೆ ಕೈಯೆತ್ತಿ, ಅವರ ಶತ್ರುಗಳನ್ನು ಸುಲಭವಾಗಿ ಬಗ್ಗಿಸುವೆನು.
משנאי יהוה יכחשו-לו ויהי עתם לעולם 15
೧೫ಯೆಹೋವನ ದ್ವೇಷಿಗಳು ಅವರ ಮುಂದೆ ಮುದುರಿಕೊಳ್ಳುವರು; ಅವರಾದರೋ ಸದಾಕಾಲವೂ ಇರುವರು.
ויאכילהו מחלב חטה ומצור דבש אשביעך 16
೧೬ನಾನು ಅವರಿಗೆ ಶ್ರೇಷ್ಠವಾದ ಗೋದಿಯನ್ನು ಊಟಕ್ಕೆ ಕೊಟ್ಟು, ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವೆನು” ಎಂಬುದೇ.

< תהילים 81 >