< תהילים 86 >
תפלה לדוד הטה-יהוה אזנך ענני-- כי-עני ואביון אני | 1 |
೧ದಾವೀದನ ಕೀರ್ತನೆ. ಯೆಹೋವನೇ, ಕಿವಿಗೊಡು; ನನಗೆ ಸದುತ್ತರವನ್ನು ದಯಪಾಲಿಸು; ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ.
שמרה נפשי כי-חסיד אני הושע עבדך אתה אלהי-- הבוטח אליך | 2 |
೨ನಾನು ನಿನ್ನ ಭಕ್ತನು; ನನ್ನ ಪ್ರಾಣವನ್ನು ಉಳಿಸು; ನೀನೇ ನನ್ನ ದೇವರು; ನಿನ್ನಲ್ಲಿ ಭರವಸವಿಟ್ಟಿರುವ ನಿನ್ನ ಸೇವಕನನ್ನು ರಕ್ಷಿಸು.
חנני אדני כי אליך אקרא כל-היום | 3 |
೩ಕರ್ತನೇ, ಕರುಣಿಸು; ದಿನವೆಲ್ಲಾ ನಿನಗೆ ಮೊರೆಯಿಡುತ್ತೇನೆ.
שמח נפש עבדך כי אליך אדני נפשי אשא | 4 |
೪ಕರ್ತನೇ, ನಿನ್ನ ಸೇವಕನ ಹೃದಯವನ್ನು ಆನಂದಗೊಳಿಸು; ನಿನ್ನನ್ನೇ ನಿರೀಕ್ಷಿಸುತ್ತಿರುವೆನಲ್ಲಾ.
כי-אתה אדני טוב וסלח ורב-חסד לכל-קראיך | 5 |
೫ಕರ್ತನೇ, ನೀನು ಒಳ್ಳೆಯವನೂ, ಕ್ಷಮಿಸುವವನೂ, ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದಿಯಲ್ಲಾ.
האזינה יהוה תפלתי והקשיבה בקול תחנונותי | 6 |
೬ಯೆಹೋವನೇ, ನನ್ನ ಪ್ರಾರ್ಥನೆಗೆ ಕಿವಿಗೊಡು; ನನ್ನ ವಿಜ್ಞಾಪನೆಗಳ ಕೂಗನ್ನು ಲಾಲಿಸು.
ביום צרתי אקראך כי תענני | 7 |
೭ನೀನು ಸದುತ್ತರವನ್ನು ದಯಪಾಲಿಸುವಿಯೆಂದು ನಂಬಿ, ನನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನನ್ನೇ ಕರೆಯುವೆನು.
אין-כמוך באלהים אדני ואין כמעשיך | 8 |
೮ಕರ್ತನೇ, ದೇವರುಗಳಲ್ಲಿ ನಿನಗೆ ಸಮಾನನೇ ಇಲ್ಲ; ನಿನ್ನ ಕೃತ್ಯಗಳಿಗೆ ಸರಿಯಾದದ್ದು ಇನ್ನೊಂದಿಲ್ಲ.
כל-גוים אשר עשית--יבואו וישתחוו לפניך אדני ויכבדו לשמך | 9 |
೯ಕರ್ತನೇ, ನಿನ್ನಿಂದುಂಟಾದ ಎಲ್ಲಾ ಜನಾಂಗಗಳು ಬಂದು, ನಿನಗೆ ಅಡ್ಡಬಿದ್ದು ನಿನ್ನ ನಾಮವನ್ನು ಘನಪಡಿಸುವವು.
כי-גדול אתה ועשה נפלאות אתה אלהים לבדך | 10 |
೧೦ಮಹೋನ್ನತನು, ಮಹತ್ಕಾರ್ಯಗಳನ್ನು ನಡೆಸುವವನು ನೀನು; ನೀನೊಬ್ಬನೇ ದೇವರು.
הורני יהוה דרכך-- אהלך באמתך יחד לבבי ליראה שמך | 11 |
೧೧ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನಿನ್ನ ಸತ್ಯತೆಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡು ನಡೆಯುವೆನು. ನಾನು ನಿನ್ನ ನಾಮದಲ್ಲಿ ಭಯಭಕ್ತಿಯಿಂದಿರುವಂತೆ ಏಕಮನಸ್ಸನ್ನು ಅನುಗ್ರಹಿಸು.
אודך אדני אלהי--בכל-לבבי ואכבדה שמך לעולם | 12 |
೧೨ಕರ್ತನೇ, ನನ್ನ ದೇವರೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು; ಎಂದೆಂದಿಗೂ ನಿನ್ನ ನಾಮವನ್ನು ಘನಪಡಿಸುವೆನು.
כי-חסדך גדול עלי והצלת נפשי משאול תחתיה (Sheol ) | 13 |
೧೩ನೀನು ಬಹಳವಾಗಿ ಕನಿಕರಿಸಿ, ನನ್ನ ಪ್ರಾಣವನ್ನು ಪಾತಾಳದ ತಳದಿಂದ ತಪ್ಪಿಸಿದ್ದಿಯಲ್ಲಾ. (Sheol )
אלהים זדים קמו-עלי ועדת עריצים בקשו נפשי ולא שמוך לנגדם | 14 |
೧೪ದೇವರೇ, ಅಹಂಕಾರಿಗಳು ನನಗೆ ವಿರುದ್ಧವಾಗಿ ಎದ್ದಿದ್ದಾರೆ; ಬಲಾತ್ಕಾರಿಗಳ ಗುಂಪು ನನ್ನ ಪ್ರಾಣಕ್ಕಾಗಿ ಕಾದಿದೆ. ಅವರು ನಿನ್ನನ್ನು ಲಕ್ಷಿಸುವುದಿಲ್ಲ.
ואתה אדני אל-רחום וחנון ארך אפים ורב-חסד ואמת | 15 |
೧೫ಕರ್ತನೇ, ನೀನು ಕನಿಕರವೂ, ದಯೆಯೂ ಉಳ್ಳ ದೇವರು; ದೀರ್ಘಶಾಂತನು, ಬಹಳ ಪ್ರೀತಿಯೂ, ನಂಬಿಕೆಯೂ ಉಳ್ಳವನು.
פנה אלי וחנני תנה-עזך לעבדך והושיעה לבן-אמתך | 16 |
೧೬ಕಟಾಕ್ಷವಿಟ್ಟು ನನ್ನನ್ನು ಕರುಣಿಸು; ನಿನ್ನ ಸೇವಕನಿಗೆ ಬಲವನ್ನು ಅನುಗ್ರಹಿಸು; ನಿನ್ನ ಸೇವಕಳ ಮಗನನ್ನು ರಕ್ಷಿಸು.
עשה-עמי אות לטובה ויראו שנאי ויבשו-- כי-אתה יהוה עזרתני ונחמתני | 17 |
೧೭ನನಗಾಗಿ ಒಂದು ಶುಭಸೂಚನೆಯನ್ನು ತೋರಿಸು; ನನ್ನ ಶತ್ರುಗಳು ನೋಡಿ, “ಯೆಹೋವನು ಸಹಾಯಕನಾಗಿ ಇವನನ್ನು ಸಂತೈಸಿದ್ದಾನೆ” ಎಂದು ನಾಚಿಕೆಪಡಲಿ.