< תהילים 86 >

תפלה לדוד הטה-יהוה אזנך ענני-- כי-עני ואביון אני 1
ದಾವೀದನ ಪ್ರಾರ್ಥನೆ. ಯೆಹೋವ ದೇವರೇ, ನನಗೆ ಉತ್ತರಕೊಡಿರಿ. ನಾನು ದೀನನೂ ಅಗತ್ಯತೆಯಲ್ಲಿ ಇರುವವನೂ ಆಗಿದ್ದೇನೆ.
שמרה נפשי כי-חסיד אני הושע עבדך אתה אלהי-- הבוטח אליך 2
ನನ್ನ ಪ್ರಾಣವನ್ನು ಕಾಪಾಡಿರಿ, ನಾನು ನಿಮ್ಮ ಭಕ್ತ, ನೀವು ನನ್ನ ದೇವರು. ನಿಮ್ಮಲ್ಲಿ ಭರವಸವಿಟ್ಟಿರುವ ನಿಮ್ಮ ಸೇವಕನನ್ನು ರಕ್ಷಿಸಿರಿ.
חנני אדני כי אליך אקרא כל-היום 3
ಯೆಹೋವ ದೇವರೇ, ನನ್ನನ್ನು ಕರುಣಿಸಿರಿ. ನಿಮಗೆ ದಿನವೆಲ್ಲಾ ಮೊರೆಯಿಡುತ್ತೇನೆ.
שמח נפש עבדך כי אליך אדני נפשי אשא 4
ನಿಮ್ಮ ಸೇವಕನ ಪ್ರಾಣವನ್ನು ಸಂತೋಷಪಡಿಸಿರಿ. ಯೆಹೋವ ದೇವರೇ, ನಿಮ್ಮಲ್ಲೇ ನನ್ನ ಪ್ರಾಣವನ್ನು ಇಟ್ಟಿದ್ದೇನೆ.
כי-אתה אדני טוב וסלח ורב-חסד לכל-קראיך 5
ಯೆಹೋವ ದೇವರೇ, ನೀವು ಒಳ್ಳೆಯವರೂ ಕ್ಷಮಿಸುವುದಕ್ಕೆ ಸಿದ್ಧರೂ ಆಗಿದ್ದೀರಿ. ನಿಮ್ಮನ್ನು ಬೇಡುವವರೆಲ್ಲರಿಗೆ ಪ್ರೀತಿಯಲ್ಲಿ ಸಮೃದ್ಧಿವಂತರೂ ಆಗಿರುವಿರಿ.
האזינה יהוה תפלתי והקשיבה בקול תחנונותי 6
ಯೆಹೋವ ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡಿರಿ. ನನ್ನ ವಿಜ್ಞಾಪನೆಗಳ ಸ್ವರವನ್ನು ಆಲೈಸಿರಿ.
ביום צרתי אקראך כי תענני 7
ನನ್ನ ಇಕ್ಕಟ್ಟಿನ ದಿವಸದಲ್ಲಿ ನಿಮ್ಮನ್ನು ಕರೆಯುವೆನು. ನೀವು ನನಗೆ ಉತ್ತರ ಕೊಡುವಿರಿ.
אין-כמוך באלהים אדני ואין כמעשיך 8
ಯೆಹೋವ ದೇವರೇ, ದೇವರುಗಳಲ್ಲಿ ನಿಮ್ಮ ಹಾಗೆ ಯಾರೂ ಇಲ್ಲ. ನಿಮ್ಮ ಕೆಲಸಗಳ ಹಾಗೆ ಒಂದೂ ಇಲ್ಲ.
כל-גוים אשר עשית--יבואו וישתחוו לפניך אדני ויכבדו לשמך 9
ಯೆಹೋವ ದೇವರೇ, ನೀವು ಉಂಟುಮಾಡಿದ ಜನಾಂಗದವರೆಲ್ಲರೂ ಬಂದು ನಿಮ್ಮ ಮುಂದೆ ಅಡ್ಡಬಿದ್ದು, ನಿಮ್ಮ ಹೆಸರಿಗೆ ಮಹಿಮೆ ಸಲ್ಲಿಸುವರು.
כי-גדול אתה ועשה נפלאות אתה אלהים לבדך 10
ನೀವು ದೊಡ್ಡವರೂ ಅದ್ಭುತಗಳನ್ನು ಮಾಡುವವರೂ ಆಗಿದ್ದೀರಿ. ನೀವೊಬ್ಬರೇ ದೇವರು.
הורני יהוה דרכך-- אהלך באמתך יחד לבבי ליראה שמך 11
ಯೆಹೋವ ದೇವರೇ, ನಿಮ್ಮ ಮಾರ್ಗವನ್ನು ನನಗೆ ಬೋಧಿಸಿರಿ. ಆಗ, ನಿಮ್ಮ ಸತ್ಯದಲ್ಲಿ ನಡೆದುಕೊಳ್ಳುವೆನು; ನಿಮ್ಮ ಹೆಸರಿಗೆ ಭಯಪಡುವಂತೆ ನನಗೆ ವಿಭಾಗವಿಲ್ಲದೆ ಹೃದಯವನ್ನು ದಯಪಾಲಿಸಿರಿ.
אודך אדני אלהי--בכל-לבבי ואכבדה שמך לעולם 12
ನನ್ನ ದೇವರಾದ ಯೆಹೋವ ದೇವರೇ, ನನ್ನ ಪೂರ್ಣಹೃದಯದಿಂದ ನಿಮ್ಮನ್ನು ಕೊಂಡಾಡುವೆನು. ನಿಮ್ಮ ಹೆಸರನ್ನು ಯುಗಯುಗಕ್ಕೂ ಘನಪಡಿಸುವೆನು.
כי-חסדך גדול עלי והצלת נפשי משאול תחתיה (Sheol h7585) 13
ನಿಮ್ಮ ಪ್ರೀತಿಯು ನನ್ನ ಮೇಲೆ ಅಗಾಧವಾಗಿದೆ. ಕೆಳಗಿನ ಪಾತಾಳದೊಳಗಿಂದ ನನ್ನ ಪ್ರಾಣವನ್ನು ಬಿಡಿಸಿದ್ದೀರಿ. (Sheol h7585)
אלהים זדים קמו-עלי ועדת עריצים בקשו נפשי ולא שמוך לנגדם 14
ದೇವರೇ, ಅಹಂಕಾರಿಗಳು ನನಗೆ ವಿರೋಧವಾಗಿ ಎದ್ದಿದ್ದಾರೆ. ಬಲಾತ್ಕಾರಿಗಳ ಗುಂಪು ನನ್ನ ಪ್ರಾಣವನ್ನು ಹುಡುಕುತ್ತದೆ. ಅವರು ನಿಮ್ಮನ್ನು ಗೌರವಿಸುವವರಲ್ಲ.
ואתה אדני אל-רחום וחנון ארך אפים ורב-חסד ואמת 15
ಆದರೆ ನೀವು ಯೆಹೋವ ದೇವರೇ, ಅನುಕಂಪವೂ ದಯೆಯೂ ಉಳ್ಳ ದೇವರು ಮತ್ತು ದೀರ್ಘಶಾಂತರೂ ಪ್ರೀತಿಯಲ್ಲಿ ಸಮೃದ್ಧಿವಂತನೂ ಸತ್ಯತೆಯುಳ್ಳವರೂ ಆಗಿದ್ದೀರಿ.
פנה אלי וחנני תנה-עזך לעבדך והושיעה לבן-אמתך 16
ನನ್ನ ಕಡೆಗೆ ತಿರುಗಿಕೊಂಡು ನನ್ನನ್ನು ಕರುಣಿಸಿರಿ. ನಿಮ್ಮ ಸೇವಕನಿಗೆ ನಿಮ್ಮ ಬಲವನ್ನು ತೋರಿಸಿರಿ. ನನ್ನ ತಾಯಿ ನಿನ್ನ ಸೇವೆಮಾಡಿದಂತೆ ನಾನು ಸಹ ಸೇವೆಮಾಡುವುದರಿಂದ ನನ್ನನ್ನು ರಕ್ಷಿಸಿರಿ.
עשה-עמי אות לטובה ויראו שנאי ויבשו-- כי-אתה יהוה עזרתני ונחמתני 17
ನನಗಾಗಿ ನಿಮ್ಮ ಉಪಕಾರದ ಗುರುತೊಂದನ್ನು ತೋರಿಸಿರಿ. ಆಗ ನನ್ನ ವೈರಿಗಳು ಅದನ್ನು ಕಂಡು ನಾಚಿಕೆಪಡುವರು. ಏಕೆಂದರೆ ಯೆಹೋವ ದೇವರೇ, ನೀವು ನನಗೆ ಸಹಾಯಮಾಡಿ ನನ್ನನ್ನು ಆದರಿಸಿದ್ದೀರಿ.

< תהילים 86 >