< תהילים 88 >
שיר מזמור לבני-קרח למנצח על-מחלת לענות משכיל להימן האזרחי ב יהוה אלהי ישועתי-- יום-צעקתי בלילה נגדך | 1 |
೧ಹಾಡು; ಕೋರಹೀಯರ ಕೀರ್ತನೆ; ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಮಹಲಾತ್ ಎಂಬ ರಾಗದ ಪ್ರಕಾರ ಹಾಡತಕ್ಕದ್ದು; ಜೇರಹ ಕುಲದವನಾದ ಹೇಮಾನನ ಪದ್ಯ. ಯೆಹೋವನೇ, ನನ್ನನ್ನು ರಕ್ಷಿಸುವ ದೇವರೇ, ಹಗಲಿರುಳು ನಿನಗೆ ಮೊರೆಯಿಡುತ್ತೇನೆ.
תבוא לפניך תפלתי הטה אזנך לרנתי | 2 |
೨ನನ್ನ ಪ್ರಾರ್ಥನೆಯು ನಿನ್ನ ಸನ್ನಿಧಿಯನ್ನು ಮುಟ್ಟಲಿ; ಕಿವಿಗೊಟ್ಟು ನನ್ನ ಕೂಗನ್ನು ಕೇಳು.
כי-שבעה ברעות נפשי וחיי לשאול הגיעו (Sheol ) | 3 |
೩ನನ್ನ ಜೀವವು ಕಷ್ಟಗಳಿಂದ ತುಂಬಿಹೋಯಿತು; ನನ್ನ ಪ್ರಾಣವು ಪಾತಾಳಕ್ಕೆ ಹತ್ತಿರವಾಯಿತು. (Sheol )
נחשבתי עם-יורדי בור הייתי כגבר אין-איל | 4 |
೪ಸಮಾಧಿಯಲ್ಲಿ ಸೇರುವವರೊಳಗೆ ಎಣಿಸಲ್ಪಟ್ಟಿದ್ದೇನೆ; ನಿತ್ರಾಣ ಮನುಷ್ಯನಂತಿದ್ದೇನೆ.
במתים חפשי כמו חללים שכבי קבר-- אשר לא זכרתם עוד והמה מידך נגזרו | 5 |
೫ಸತ್ತವನ ಹಾಗೆ ನನ್ನನ್ನು ಹೊರಗೆ ಹಾಕಿದ್ದಾರೆ; ಹತನಾದವನಂತೆ ಸಮಾಧಿಯಲ್ಲಿ ಬಿದ್ದಿದ್ದೇನೆ. ಹತರಾದವರು ನಿನ್ನ ಪರಿಪಾಲನೆ ಇಲ್ಲದವರು; ಅಂಥವರನ್ನು ನೀನು ನೆನಪು ಮಾಡಿಕೊಳ್ಳುವುದಿಲ್ಲ.
שתני בבור תחתיות במחשכים במצלות | 6 |
೬ಅಧೋಲೋಕದಲ್ಲಿಯೂ, ಗಾಢಾಂಧಕಾರದಲ್ಲಿಯೂ, ಅಗಾಧ ಸ್ಥಳದಲ್ಲಿಯೂ ನನ್ನನ್ನು ತಳ್ಳಿಬಿಟ್ಟಿದ್ದಿ.
עלי סמכה חמתך וכל-משבריך ענית סלה | 7 |
೭ನಿನ್ನ ಕೋಪಭಾರವು ನನ್ನನ್ನು ಕುಗ್ಗಿಸಿಬಿಟ್ಟಿದೆ; ನಿನ್ನ ಎಲ್ಲಾ ತೆರೆಗಳಿಂದ ನನ್ನನ್ನು ಬಾಧಿಸಿದ್ದಿ. (ಸೆಲಾ)
הרחקת מידעי ממני שתני תועבות למו כלא ולא אצא | 8 |
೮ನನ್ನ ಆಪ್ತರು ನನ್ನನ್ನು ನೋಡಿ ಅಸಹ್ಯಪಟ್ಟರು, ನನ್ನನ್ನು ಅವರು ಹೇಸಿ ಬಿಟ್ಟುಹೋಗುವಂತೆ ಮಾಡಿದ್ದೀ; ಸಿಕ್ಕಿಬಿಟ್ಟಿದ್ದೇನೆ, ಬಿಡಿಸಿಕೊಳ್ಳಲಾರೆನು.
עיני דאבה מני-עני קראתיך יהוה בכל-יום שטחתי אליך כפי | 9 |
೯ಬಾಧೆಯಿಂದ ನನ್ನ ಕಣ್ಣುಗಳು ಮೊಬ್ಬಾಗಿ ಹೋಗಿವೆ. ಯೆಹೋವನೇ, ಹಗಲೆಲ್ಲಾ ಕೈಚಾಚಿ ನಿನಗೆ ಮೊರೆಯಿಡುತ್ತೇನೆ.
הלמתים תעשה-פלא אם-רפאים יקומו יודוך סלה | 10 |
೧೦ನೀನು ಸತ್ತವರಿಗೆ ಅದ್ಭುತಕಾರ್ಯಗಳನ್ನು ತೋರಿಸುವಿಯೋ? ಪ್ರೇತಗಳು ಎದ್ದು ನಿನ್ನನ್ನು ಕೊಂಡಾಡುವವೋ? (ಸೆಲಾ)
היספר בקבר חסדך אמונתך באבדון | 11 |
೧೧ಸಮಾಧಿಯಲ್ಲಿ ನಿನ್ನ ಕೃಪೆಯನ್ನೂ, ನಾಶನಲೋಕದಲ್ಲಿ ನಿನ್ನ ಸತ್ಯತೆಯನ್ನು ಸಾರುವುದುಂಟೋ?
היודע בחשך פלאך וצדקתך בארץ נשיה | 12 |
೧೨ಕತ್ತಲೆಯ ಲೋಕದಲ್ಲಿ ನಿನ್ನ ಮಹತ್ಕಾರ್ಯಗಳೂ, ಮರೆಯುವ ದೇಶದಲ್ಲಿ ನಿನ್ನ ನೀತಿಯು ತಿಳಿಯಲ್ಪಡುವವೋ?
ואני אליך יהוה שועתי ובבקר תפלתי תקדמך | 13 |
೧೩ನಾನಾದರೋ ಯೆಹೋವನೇ, ನಿನಗೆ ಮೊರೆಯಿಡುತ್ತೇನೆ; ಮುಂಜಾನೆಯಲ್ಲಿ ನನ್ನ ವಿಜ್ಞಾಪನೆಯು ನಿನ್ನ ಮುಂದೆ ಬರುವುದು.
למה יהוה תזנח נפשי תסתיר פניך ממני | 14 |
೧೪ಯೆಹೋವನೇ, ನನ್ನ ಪ್ರಾಣವನ್ನೇಕೆ ತಳ್ಳಿಬಿಟ್ಟಿ? ನಿನ್ನ ಮುಖವನ್ನು ಮರೆಮಾಡಿದ್ದೇಕೆ?
עני אני וגוע מנער נשאתי אמיך אפונה | 15 |
೧೫ಯೌವನಾರಭ್ಯ ಕುಗ್ಗಿದವನೂ, ಮೃತಪ್ರಾಯನೂ, ನಿನ್ನ ಗದರಿಕೆಯಿಂದ ದೆಸೆಗೆಟ್ಟವನೂ ಆಗಿದ್ದೇನಲ್ಲಾ.
עלי עברו חרוניך בעותיך צמתותני | 16 |
೧೬ನಿನ್ನ ಕೋಪಜ್ವಾಲೆಯು ನನ್ನನ್ನು ಕವಿದಿದೆ; ನಿನ್ನಿಂದುಂಟಾದ ದಿಗಿಲಿನಿಂದ ಹಾಳಾದೆನು.
סבוני כמים כל-היום הקיפו עלי יחד | 17 |
೧೭ಅವು ದಿನವೆಲ್ಲಾ ನೀರಿನಂತೆ ನನ್ನನ್ನು ಆವರಿಸಿಕೊಂಡಿವೆ; ಒಟ್ಟುಗೂಡಿ ನನ್ನನ್ನು ಸುತ್ತಿಬಿಟ್ಟಿವೆ.
הרחקת ממני אהב ורע מידעי מחשך | 18 |
೧೮ನನ್ನ ಆಪ್ತಮಿತ್ರರನ್ನು ದೂರಮಾಡಿದಿ; ಅಂಧಕಾರವೇ ನನ್ನ ಒಡನಾಡಿ.