< תהילים 91 >
ישב בסתר עליון בצל שדי יתלונן | 1 |
೧ಅತ್ಯುನ್ನತನಾದ ದೇವರ ಮೊರೆಹೊಕ್ಕವನು, ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.
אמר--ליהוה מחסי ומצודתי אלהי אבטח-בו | 2 |
೨ನಾನು ಯೆಹೋವನಿಗೆ, “ನೀನೇ ನನ್ನ ಶರಣನು, ನನ್ನ ದುರ್ಗವು, ನಾನು ಭರವಸವಿಟ್ಟಿರುವ ನನ್ನ ದೇವರು” ಎಂದು ಹೇಳುವೆನು.
כי הוא יצילך מפח יקוש מדבר הוות | 3 |
೩ನನ್ನನ್ನು ಬೇಟೆಗಾರನ ಬಲೆಯಿಂದಲೂ, ಮರಣಕರ ವ್ಯಾಧಿಯಿಂದಲೂ ತಪ್ಪಿಸುವವನು ಆತನೇ.
באברתו יסך לך--ותחת-כנפיו תחסה צנה וסחרה אמתו | 4 |
೪ಆತನು ನನ್ನನ್ನು ತನ್ನ ರೆಕ್ಕೆಗಳಿಂದ ಹೊದಗಿಸುವನು; ಆತನ ಪಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆ. ಆತನ ಸತ್ಯತೆಯೇ ನನಗೆ ಖೇಡ್ಯವೂ, ಗುರಾಣಿಯೂ ಆಗಿದೆ.
לא-תירא מפחד לילה מחץ יעוף יומם | 5 |
೫ರಾತ್ರಿಯಲ್ಲಿ ಭಯಹುಟ್ಟಿಸುವ ಯಾವುದಕ್ಕೂ, ಹಗಲಲ್ಲಿ ಹಾರಿಬರುವ ಬಾಣಕ್ಕೂ,
מדבר באפל יהלך מקטב ישוד צהרים | 6 |
೬ಕತ್ತಲೆಯಲ್ಲಿ ಸಂಚರಿಸುವ ವಿಪತ್ತಿಗೂ, ಹಾನಿಕರವಾದ ಮಧ್ಯಾಹ್ನದ ಕೇಡಿಗೂ ಭಯಪಡಬೇಕಾಗಿಲ್ಲ.
יפל מצדך אלף--ורבבה מימינך אליך לא יגש | 7 |
೭ನಿನ್ನ ಮಗ್ಗುಲಲ್ಲಿ ಸಾವಿರ ಜನರು, ನಿನ್ನ ಬಲಗಡೆಯಲ್ಲಿ ಹತ್ತು ಸಾವಿರ ಜನರು ಸತ್ತು ಬಿದ್ದರೂ ನಿನಗೇನೂ ತಟ್ಟದು.
רק בעיניך תביט ושלמת רשעים תראה | 8 |
೮ನೀನು ಅದನ್ನು ಕಣ್ಣಾರೆ ಕಂಡು, ದುಷ್ಟರಿಗೆ ಪ್ರತಿದಂಡನೆಯುಂಟು ಎಂಬುದಕ್ಕೆ ಸಾಕ್ಷಿಯಾಗಿರುವಿಯಷ್ಟೆ.
כי-אתה יהוה מחסי עליון שמת מעונך | 9 |
೯ಯೆಹೋವನೇ ನನ್ನ ಶರಣನು! ಅತ್ಯುನ್ನತನಾದ ದೇವರನ್ನು ನಿವಾಸಸ್ಥಾನ ಮಾಡಿಕೊಂಡಿದ್ದಿಯಲ್ಲಾ.
לא-תאנה אליך רעה ונגע לא-יקרב באהלך | 10 |
೧೦ಯಾವ ಕೇಡೂ ನಿನಗೆ ಸಂಭವಿಸದು; ಉಪದ್ರವವು ನಿನ್ನ ಗುಡಾರದ ಸಮೀಪಕ್ಕೂ ಬಾರದು.
כי מלאכיו יצוה-לך לשמרך בכל-דרכיך | 11 |
೧೧ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಯುವುದಕ್ಕೆ ಆತನು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು.
על-כפים ישאונך פן-תגף באבן רגלך | 12 |
೧೨ನಿನ್ನ ಕಾಲು ಕಲ್ಲಿಗೆ ತಗಲದಂತೆ, ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು.
על-שחל ופתן תדרך תרמס כפיר ותנין | 13 |
೧೩ಸಿಂಹ ಮತ್ತು ಸರ್ಪಗಳ ಮೇಲೆ ನಡೆಯುವಿ; ಪ್ರಾಯದ ಸಿಂಹವನ್ನೂ, ಘಟಸರ್ಪವನ್ನೂ ತುಳಿದುಬಿಡುವಿ.
כי בי חשק ואפלטהו אשגבהו כי-ידע שמי | 14 |
೧೪ಅವನು ನನ್ನಲ್ಲಿ ಆಸಕ್ತನಾಗಿರುವುದರಿಂದ ಅವನನ್ನು ರಕ್ಷಿಸುವೆನು; ನನ್ನ ನಾಮವನ್ನು ಅರಿತವನಾಗಿರುವುದರಿಂದ ಅವನನ್ನು ಉದ್ಧರಿಸುವೆನು.
יקראני ואענהו--עמו-אנכי בצרה אחלצהו ואכבדהו | 15 |
೧೫ಅವನು ನನಗೆ ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸುವೆನು; ಇಕ್ಕಟ್ಟಿನಲ್ಲಿ ಹತ್ತಿರವಿದ್ದು ಅವನನ್ನು ತಪ್ಪಿಸಿ ಘನಪಡಿಸುವೆನು;
ארך ימים אשביעהו ואראהו בישועתי | 16 |
೧೬ದೀರ್ಘಾಯುಷ್ಯವನ್ನು ಅನುಗ್ರಹಿಸಿ, ಅವನನ್ನು ತೃಪ್ತಿಪಡಿಸುವೆನು; ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.