< תהילים 91 >
ישב בסתר עליון בצל שדי יתלונן | 1 |
ಮಹೋನ್ನತ ದೇವರ ಆಶ್ರಯದಲ್ಲಿ ವಾಸಿಸುವವರು ಸರ್ವಶಕ್ತರ ನೆರಳಿನಲ್ಲಿ ವಿಶ್ರಮಿಸುವರು.
אמר--ליהוה מחסי ומצודתי אלהי אבטח-בו | 2 |
“ನನ್ನ ಆಶ್ರಯವೂ, ನನ್ನ ಕೋಟೆಯೂ, ನಾನು ಭರವಸೆ ಇಡುವ ನನ್ನ ದೇವರೂ ಎಂದು ನಾನು ಯೆಹೋವ ದೇವರಿಗೆ ಹೇಳುವೆನು.”
כי הוא יצילך מפח יקוש מדבר הוות | 3 |
ನಿಶ್ಚಯವಾಗಿ ದೇವರು ನಿಮ್ಮನ್ನು ಬೇಡನ ಉರುಲಿನಿಂದ ರಕ್ಷಿಸುವರು. ಮರಣಾಂತಿಕವಾದ ಸಾಂಕ್ರಾಮಿಕ ರೋಗದಿಂದಲೂ ಬಿಡಿಸುವರು.
באברתו יסך לך--ותחת-כנפיו תחסה צנה וסחרה אמתו | 4 |
ತಮ್ಮ ರೆಕ್ಕೆಗಳಿಂದ ನಿಮ್ಮನ್ನು ಹೊದಿಸುವರು. ದೇವರ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳುವಿರಿ. ದೇವರ ಸತ್ಯತೆಯು ನಿಮ್ಮ ಖೇಡ್ಯವೂ ಕೋಟೆಯೂ ಆಗಿರುವುದು.
לא-תירא מפחד לילה מחץ יעוף יומם | 5 |
ರಾತ್ರಿಯ ಭಯಂಕರತೆಗೆ ನೀನು ಅಂಜಬೇಕಾಗಿಲ್ಲ, ಹಗಲಿನಲ್ಲಿ ಹಾರುವ ಬಾಣಕ್ಕೂ ಹೆದರಬೇಕಾಗಿರುವುದಿಲ್ಲ.
מדבר באפל יהלך מקטב ישוד צהרים | 6 |
ಅಂಧಕಾರದಲ್ಲಿ ಬೆನ್ನಟ್ಟಿ ಬರುವ ವಿಪತ್ತಿಗೆ ಕಳವಳಪಡದಿರುವೆ. ಮಧ್ಯಾಹ್ನದಲ್ಲಿ ಹಾಳುಮಾಡುವ ವ್ಯಾಧಿಗೂ ನೀನು ಭಯಪಡದಿರುವೆ.
יפל מצדך אלף--ורבבה מימינך אליך לא יגש | 7 |
ನಿಮ್ಮ ಪಕ್ಕದಲ್ಲಿ ಸಾವಿರ ಜನರು ಬಿದ್ದರೂ ನಿಮ್ಮ ಬಲಗಡೆಯಲ್ಲಿ ಹತ್ತು ಸಾವಿರ ಜನರು ಬಿದ್ದಾಗ್ಯೂ, ನಿಮ್ಮ ಸಮೀಪಕ್ಕೆ ಅದು ಬರುವುದಿಲ್ಲ.
רק בעיניך תביט ושלמת רשעים תראה | 8 |
ನಿನ್ನ ಕಣ್ಣುಗಳಿಂದ ಮಾತ್ರ ನೀನು ಗಮನಿಸುವೆ. ದುಷ್ಟರಿಗೆ ಪ್ರತಿದಂಡನೆ ಆಗುವುದನ್ನು ಸಹ ನೀನು ಕಾಣುವೆ.
כי-אתה יהוה מחסי עליון שמת מעונך | 9 |
“ಮಹೋನ್ನತ ದೇವರು ನಮ್ಮ ಆಶ್ರಯ,” ಎಂದು ಹೇಳುವದಾದರೆ, ಯೆಹೋವ ದೇವರು ನಿಮ್ಮ ನಿವಾಸವಾಗಿ ಮಾಡಿಕೊಂಡರೆ,
לא-תאנה אליך רעה ונגע לא-יקרב באהלך | 10 |
ಯಾವ ಕೇಡೂ ನಿಮ್ಮನ್ನು ಮುಟ್ಟದು, ಯಾವ ವಿಪತ್ತು ನಿಮ್ಮನ್ನು ಸಮೀಪಿಸುವುದಿಲ್ಲ.
כי מלאכיו יצוה-לך לשמרך בכל-דרכיך | 11 |
ಏಕೆಂದರೆ ನಿನ್ನ ಎಲ್ಲಾ ಮಾರ್ಗಗಳಲ್ಲಿ ನಿನ್ನನ್ನು ಕಾಪಾಡುವುದಕ್ಕೆ ದೇವರು ತಮ್ಮ ದೂತರಿಗೆ ನಿನ್ನ ವಿಷಯವಾಗಿ ಆಜ್ಞಾಪಿಸುವರು.
על-כפים ישאונך פן-תגף באבן רגלך | 12 |
ನಿಮ್ಮ ಪಾದಗಳು ಕಲ್ಲಿಗೆ ತಗಲದಂತೆ ದೇವದೂತರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು.
על-שחל ופתן תדרך תרמס כפיר ותנין | 13 |
ಸಿಂಹದ ಮೇಲೆಯೂ ಸರ್ಪದ ಮೇಲೆಯೂ ನಡೆಯುವೆ. ಪ್ರಾಯದ ಸಿಂಹವನ್ನೂ ಘಟಸರ್ಪವನ್ನೂ ತುಳಿದುಬಿಡುವೆ.
כי בי חשק ואפלטהו אשגבהו כי-ידע שמי | 14 |
“ಆತನು ನನ್ನನ್ನು ಪ್ರೀತಿಸುವುದರಿಂದ ಆತನನ್ನು ಸಂರಕ್ಷಿಸುವೆನು. ಆತನು ನನ್ನ ನಾಮವನ್ನು ಸ್ವೀಕರಿಸಿದ್ದರಿಂದ ಆತನನ್ನು ಕಾಪಾಡುವೆನು.
יקראני ואענהו--עמו-אנכי בצרה אחלצהו ואכבדהו | 15 |
ಆತನು ನನ್ನನ್ನು ಕರೆಯುವನು ನಾನು ಆತನಿಗೆ ಉತ್ತರಕೊಡುವೆನು. ಇಕ್ಕಟ್ಟಿನಲ್ಲಿ ನಾನು ಆತನ ಸಂಗಡ ಇದ್ದು, ಆತನನ್ನು ಘನಪಡಿಸುವೆನು.
ארך ימים אשביעהו ואראהו בישועתי | 16 |
ದೀರ್ಘಾಯುಷ್ಯದಿಂದ ಆತನನ್ನು ತೃಪ್ತಿಪಡಿಸಿ, ನನ್ನ ರಕ್ಷಣೆಯನ್ನು ಆತನಿಗೆ ತೋರಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.