< תהילים 94 >
אל-נקמות יהוה אל נקמות הופיע | 1 |
ಯೆಹೋವ ದೇವರೇ, ನೀವು ಪ್ರತೀಕಾರ ಸಲ್ಲಿಸುವ ದೇವರಾಗಿದ್ದೀರಿ. ಮುಯ್ಯಿ ತೀರಿಸುವವರು ನೀವೇ; ದೇವರೇ, ನ್ಯಾಯ ತೀರಿಸುವಂತೆ ನಿಮ್ಮನ್ನು ಪ್ರಕಟಿಸಿಕೊಳ್ಳಿರಿ.
הנשא שפט הארץ השב גמול על-גאים | 2 |
ಭೂಲೋಕದ ನ್ಯಾಯಾಧಿಪತಿಯೇ, ಗರ್ವಿಷ್ಠರಿಗೆ ತಕ್ಕ ಪ್ರತೀಕಾರವನ್ನು ಸಲ್ಲಿಸ ಬನ್ನಿರಿ.
עד-מתי רשעים יהוה עד-מתי רשעים יעלזו | 3 |
ಯೆಹೋವ ದೇವರೇ, ಎಲ್ಲಿಯವರೆಗೆ? ದುಷ್ಟರು ಎಷ್ಟರವರೆಗೆ ಹಿಗ್ಗುತ್ತಿರಬೇಕು?
יביעו ידברו עתק יתאמרו כל-פעלי און | 4 |
ಕೆಡುಕರು ಉಬ್ಬಿಕೊಂಡು ಮಾತನಾಡುತ್ತಾರೆ. ಕೇಡು ಮಾಡುವವರೆಲ್ಲರೂ ಕೊಚ್ಚಿಕೊಳ್ಳುತ್ತಾರೆ.
עמך יהוה ידכאו ונחלתך יענו | 5 |
ಯೆಹೋವ ದೇವರೇ, ನಿಮ್ಮ ಜನರನ್ನು ಅವರು ಕುಗ್ಗಿಸುತ್ತಾರೆ. ನಿಮ್ಮ ಬಾಧ್ಯತೆಯನ್ನು ಬಾಧಿಸುತ್ತಾರೆ.
אלמנה וגר יהרגו ויתומים ירצחו | 6 |
ವಿಧವೆಯನ್ನೂ ಪರದೇಶಸ್ಥನನ್ನೂ ಅವರು ಹತ್ಯಮಾಡುತ್ತಾರೆ. ದಿಕ್ಕಿಲ್ಲದವರನ್ನು ಹತಮಾಡುತ್ತಾರೆ.
ויאמרו לא יראה-יה ולא-יבין אלהי יעקב | 7 |
“ಯೆಹೋವ ದೇವರು ನೋಡುವುದಿಲ್ಲ, ಯಾಕೋಬನ ದೇವರು ಗ್ರಹಿಸುವುದಿಲ್ಲ,” ಎಂದು ಅವರು ಹೇಳುತ್ತಾರೆ.
בינו בערים בעם וכסילים מתי תשכילו | 8 |
ಜನರಲ್ಲಿ ಬುದ್ಧಿಹೀನರೇ, ನೀವು ಗ್ರಹಿಸಿರಿ. ಮೂರ್ಖರೇ, ಯಾವಾಗ ಬುದ್ಧಿವಂತರಾಗುವಿರಿ?
הנטע אזן הלא ישמע אם-יצר עין הלא יביט | 9 |
ಕಿವಿಯನ್ನು ನಿರ್ಮಿಸಿದ ದೇವರು ಕೇಳದಿರುವರೇ? ಕಣ್ಣನ್ನು ರೂಪಿಸಿದವರು ನೋಡುವುದಿಲ್ಲವೇ?
היסר גוים הלא יוכיח המלמד אדם דעת | 10 |
ರಾಷ್ಟ್ರಗಳಿಗೆ ಶಿಕ್ಷಣ ಕೊಡುವ ದೇವರು ಶಿಕ್ಷಿಸುವುದಿಲ್ಲವೋ? ಮಾನವನಿಗೆ ಕಲಿಸುವ ದೇವರಲ್ಲಿ ಜ್ಞಾನದ ಕೊರತೆಯಿದೆಯೋ?
יהוה--ידע מחשבות אדם כי-המה הבל | 11 |
ಮನುಷ್ಯನ ಯೋಚನೆಗಳು ವ್ಯರ್ಥವಾದವುಗಳೆಂದು ಯೆಹೋವ ದೇವರು ತಿಳಿದುಕೊಳ್ಳುತ್ತಾರೆ.
אשרי הגבר אשר-תיסרנו יה ומתורתך תלמדנו | 12 |
ಯೆಹೋವ ದೇವರೇ, ನೀವು ಯಾರನ್ನು ಶಿಕ್ಷಿಸುವಿರೋ ಅಂಥವರು ಧನ್ಯರು. ನಿಮ್ಮ ನಿಯಮದಿಂದ ಯಾರಿಗೆ ಕಲಿಸಿಕೊಡುವಿರೋ ಅವರು ಧನ್ಯರು.
להשקיט לו מימי רע-- עד יכרה לרשע שחת | 13 |
ದುಷ್ಟನಿಗಾಗಿ ಕುಣಿಯು ಅಗಿಯುವವರೆಗೆ ಅಂಥವನಿಗೆ ವಿಶ್ರಾಂತಿಯನ್ನು ಕೊಡುವಿರಿ.
כי לא-יטש יהוה עמו ונחלתו לא יעזב | 14 |
ಯೆಹೋವ ದೇವರು ತಮ್ಮ ಜನರನ್ನು ತಿರಸ್ಕರಿಸುವುದಿಲ್ಲ. ದೇವರು ತಮ್ಮ ಬಾಧ್ಯತೆಯಾಗಿರುವವರನ್ನು ಎಂದೂ ಮರೆಯುವುದಿಲ್ಲ.
כי-עד-צדק ישוב משפט ואחריו כל-ישרי-לב | 15 |
ನ್ಯಾಯ ನಿಯಮವು ನೀತಿಯ ಮೇಲೆ ಅವಲಂಬಿಸಿರುವುದು; ಯಥಾರ್ಥ ಹೃದಯದವರೆಲ್ಲರೂ ಅದನ್ನು ಹಿಂಬಾಲಿಸುವರು.
מי-יקום לי עם-מרעים מי-יתיצב לי עם-פעלי און | 16 |
ನನಗೋಸ್ಕರ ದುರ್ಮಾರ್ಗಿಗಳಿಗೆ ವಿರೋಧವಾಗಿ ಏಳುವವನ್ಯಾರು? ಅಪರಾಧ ಮಾಡುವವರಿಗೆ ವಿರೋಧವಾಗಿ ನನಗೋಸ್ಕರ ನಿಂತು ಕೊಳ್ಳುವವನ್ಯಾರು?
לולי יהוה עזרתה לי-- כמעט שכנה דומה נפשי | 17 |
ಯೆಹೋವ ದೇವರು ನನಗೆ ಸಹಾಯ ಕೊಡದಿದ್ದರೆ, ನಾನು ಬೇಗನೇ ಮರಣದ ಮೌನದಲ್ಲಿ ವಾಸಿಸುತ್ತಿದ್ದೆನು.
אם-אמרתי מטה רגלי חסדך יהוה יסעדני | 18 |
“ನನ್ನ ಕಾಲು ಜಾರುತ್ತಿದೆ,” ಎಂದು ನಾನು ಹೇಳುತ್ತಿರುವಾಗಲೇ, ಯೆಹೋವ ದೇವರೇ, ನಿಮ್ಮ ಪ್ರೀತಿಯು ನನ್ನನ್ನು ಎತ್ತಿ ಹಿಡಿಯಿತು.
ברב שרעפי בקרבי-- תנחומיך ישעשעו נפשי | 19 |
ನನ್ನ ಚಿಂತೆಗಳು ನನ್ನೊಳಗೆ ಹೆಚ್ಚುತ್ತಿರುವಾಗ, ನಿಮ್ಮ ಸಂತೈಸುವಿಕೆಯು ನನ್ನ ಮನಸ್ಸನ್ನು ಆನಂದಪಡಿಸುತ್ತದೆ.
היחברך כסא הוות יצר עמל עלי-חק | 20 |
ತೀರ್ಪುಗಳಿಂದ ಕೇಡನ್ನು ಕಲ್ಪಿಸುವ ಅಪರಾಧದ ನ್ಯಾಯಾಸನವು ನಿಮ್ಮ ಸಂಗಡ ಅನ್ಯೋನ್ಯವಾಗಿರುವುದೋ?
יגודו על-נפש צדיק ודם נקי ירשיעו | 21 |
ನೀತಿವಂತನ ವಿರೋಧವಾಗಿ ಅವರು ಕೂಡಿಕೊಳ್ಳುತ್ತಾರೆ; ಅವರ ನಿರಪರಾಧಿಗಳನ್ನು ಮರಣಕ್ಕೆ ಒಪ್ಪಿಸುತ್ತಾರೆ.
ויהי יהוה לי למשגב ואלהי לצור מחסי | 22 |
ಆದರೆ ಯೆಹೋವ ದೇವರು ನನಗೆ ದುರ್ಗವೂ, ನನ್ನ ದೇವರೂ, ನನ್ನ ಆಶ್ರಯದ ಬಂಡೆಯೂ ಆಗಿದ್ದಾರೆ.
וישב עליהם את אונם-- וברעתם יצמיתם יצמיתם יהוה אלהינו | 23 |
ವೈರಿಯ ಅಪರಾಧವು ಅವರ ಮೇಲೆಯೇ ತಿರುಗಿ ಬೀಳಲಿ; ಅವರ ಕೇಡಿನಲ್ಲಿ ಅವರನ್ನು ಸಂಹರಿಸುವನು; ನಮ್ಮ ದೇವರಾದ ಯೆಹೋವ ದೇವರು ಅವರನ್ನು ಸಂಹರಿಸಿ ಬಿಡುವನು.