< תהילים 95 >

לכו נרננה ליהוה נריעה לצור ישענו 1
ಬನ್ನಿರಿ, ಯೆಹೋವನಿಗೆ ಉತ್ಸಾಹದಿಂದ ಹಾಡೋಣ; ನಮ್ಮ ರಕ್ಷಕನಾದ ಶರಣನಿಗೆ ಜಯಘೋಷ ಮಾಡೋಣ.
נקדמה פניו בתודה בזמרות נריע לו 2
ಕೃತಜ್ಞತಾಸ್ತುತಿಯೊಡನೆ ಆತನ ಸನ್ನಿಧಿಗೆ ಸೇರೋಣ; ಕೀರ್ತನೆಗಳಿಂದ ಆತನಿಗೆ ಜಯಘೋಷ ಮಾಡೋಣ.
כי אל גדול יהוה ומלך גדול על-כל-אלהים 3
ಯೆಹೋವನು ಮಹಾದೇವರೂ, ಎಲ್ಲಾ ದೇವರುಗಳಲ್ಲಿ ಮಹಾರಾಜನೂ ಆಗಿದ್ದಾನೆ.
אשר בידו מחקרי-ארץ ותועפת הרים לו 4
ಭೂಮಿಯ ಅಗಾಧವು ಆತನ ಕೈಯಲ್ಲಿರುತ್ತದೆ; ಪರ್ವತಶಿಖರಗಳು ಆತನವೇ.
אשר-לו הים והוא עשהו ויבשת ידיו יצרו 5
ಆತನೇ ಸಮುದ್ರವನ್ನು ನಿರ್ಮಿಸಿದವನು; ಅದು ಆತನದೇ, ಒಣನೆಲವು ಆತನ ಕೈಕೆಲಸವೇ.
באו נשתחוה ונכרעה נברכה לפני-יהוה עשנו 6
ಬನ್ನಿರಿ; ನಮ್ಮ ನಿರ್ಮಾಣಿಕನಾದ ಯೆಹೋವನಿಗೆ ಸಾಷ್ಟಾಂಗವೆರಗಿ ಆರಾಧಿಸೋಣ.
כי הוא אלהינו-- ואנחנו עם מרעיתו וצאן ידו היום אם-בקלו תשמעו 7
ಆತನು ನಮ್ಮ ದೇವರು; ನಾವೋ ಆತನು ಪಾಲಿಸುವ ಪ್ರಜೆಯೂ, ಆತನ ಕೈಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಶಬ್ದಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೇಯದು.
אל-תקשו לבבכם כמריבה כיום מסה במדבר 8
ನಿಮ್ಮ ಹಿರಿಯರು ಅರಣ್ಯದಲ್ಲಿರುವ ಮೆರೀಬದಲ್ಲಿ, ಮಸ್ಸಾದಲ್ಲಿ ಮಾಡಿದ ದಿನದಂತೆ, ನೀವು ನಿಮ್ಮ ಹೃದಯವನ್ನು ಕಠಿಣಮಾಡಿಕೊಳ್ಳಬೇಡಿರಿ.
אשר נסוני אבותיכם בחנוני גם-ראו פעלי 9
ಅಲ್ಲಿ ಅವರು ನನ್ನನ್ನು ಪರೀಕ್ಷಿಸಿದರು; ನನ್ನ ಮಹತ್ಕಾರ್ಯಗಳನ್ನು ನೋಡಿದರೂ ನನ್ನನ್ನು ಪರಿಶೋಧಿಸಿದರು.
ארבעים שנה אקוט בדור-- ואמר עם תעי לבב הם והם לא-ידעו דרכי 10
೧೦ನಾನು ನಲ್ವತ್ತು ವರ್ಷ ಆ ಸಂತತಿಯವರ ವಿಷಯದಲ್ಲಿ ಬೇಸರಗೊಂಡೆನು; “ಈ ಜನರು ಹೃದಯದಲ್ಲಿ ತಪ್ಪಿಹೋಗುವವರು, ನನ್ನ ಆಜ್ಞೆಗಳಿಗೆ ವಿಧೇಯರಾಗದವರು” ಎಂದು ಹೇಳಿದೆನು.
אשר-נשבעתי באפי אם-יבאון אל-מנוחתי 11
೧೧ಆದುದರಿಂದ ಇವರು, “ನನ್ನ ವಿಶ್ರಾಂತಿಯಲ್ಲಿ ಸೇರಬಾರದು” ಎಂದು ಕೋಪಗೊಂಡು ಪ್ರಮಾಣಮಾಡಿದೆನು.

< תהילים 95 >