< תהילים 96 >
שירו ליהוה שיר חדש שירו ליהוה כל-הארץ | 1 |
ಯೆಹೋವ ದೇವರಿಗೆ ಹೊಸಹಾಡನ್ನು ಹಾಡಿರಿ; ಸಮಸ್ತ ಭೂನಿವಾಸಿಗಳೇ, ಯೆಹೋವ ದೇವರಿಗೆ ಹಾಡಿರಿ.
שירו ליהוה ברכו שמו בשרו מיום-ליום ישועתו | 2 |
ಯೆಹೋವ ದೇವರಿಗೆ ಹಾಡಿರಿ, ಅವರ ನಾಮವನ್ನು ಸ್ತುತಿಸಿರಿ; ಅವರ ರಕ್ಷಣೆಯನ್ನು ದಿನಂಪ್ರತಿ ಸಾರಿ ಹೇಳಿರಿ.
ספרו בגוים כבודו בכל-העמים נפלאותיו | 3 |
ಜನಾಂಗಗಳಲ್ಲಿ ಅವರ ಘನತೆಯನ್ನೂ, ಎಲ್ಲಾ ಜನಾಂಗಗಳಲ್ಲಿ ಅವರ ಅದ್ಭುತಗಳನ್ನೂ ವಿವರಿಸಿರಿ.
כי גדול יהוה ומהלל מאד נורא הוא על-כל-אלהים | 4 |
ಯೆಹೋವ ದೇವರು ಮಹೋನ್ನತರಾಗಿದ್ದಾರೆ, ಬಹು ಸ್ತುತಿಗೆ ಪಾತ್ರರೂ ಆಗಿದ್ದಾರೆ; ಅವರು ಎಲ್ಲಾ ದೇವರುಗಳಿಗಿಂತ ಬಹುಭಯಭಕ್ತಿಗೆ ಪಾತ್ರರಾಗಿದ್ದಾರೆ.
כי כל-אלהי העמים אלילים ויהוה שמים עשה | 5 |
ಏಕೆಂದರೆ ಜನಾಂಗಗಳ ದೇವರುಗಳೆಲ್ಲಾ ವಿಗ್ರಹಗಳಾಗಿವೆ; ಆದರೆ ಯೆಹೋವ ದೇವರು ಆಕಾಶಮಂಡಲವನ್ನು ನಿರ್ಮಿಸಿದವರು.
הוד-והדר לפניו עז ותפארת במקדשו | 6 |
ಘನತೆಯೂ, ಪ್ರಭೆಯೂ ಅವರ ಮುಂದೆ ಇವೆ; ಬಲವೂ, ಸೌಂದರ್ಯವೂ ಅವರ ಪರಿಶುದ್ಧ ಸ್ಥಳದಲ್ಲಿ ಇವೆ.
הבו ליהוה משפחות עמים הבו ליהוה כבוד ועז | 7 |
ಜನಾಂಗದ ಕುಟುಂಬಗಳೇ, ಯೆಹೋವ ದೇವರ ಮುಂದೆ ನೀವು ಮಹಿಮೆಯನ್ನೂ ಬಲವನ್ನೂ ಅರ್ಪಿಸಿರಿ.
הבו ליהוה כבוד שמו שאו-מנחה ובאו לחצרותיו | 8 |
ಯೆಹೋವ ದೇವರ ಹೆಸರಿಗೆ ಸಲ್ಲತಕ್ಕ ಗೌರವವನ್ನು ಸಲ್ಲಿಸಿರಿ; ಕಾಣಿಕೆಯನ್ನು ತೆಗೆದುಕೊಂಡು ಅವರ ಅಂಗಳಗಳಿಗೆ ಬನ್ನಿರಿ.
השתחוו ליהוה בהדרת-קדש חילו מפניו כל-הארץ | 9 |
ಪರಿಶುದ್ಧತೆ ಎಂಬ ಭೂಷಣದೊಡನೆ ಯೆಹೋವ ದೇವರನ್ನು ಆರಾಧಿಸಿರಿ; ಸಮಸ್ತ ಭೂನಿವಾಸಿಗಳೇ, ಅವರ ಮುಂದೆ ಭಯಪಡಿರಿ.
אמרו בגוים יהוה מלך-- אף-תכון תבל בל-תמוט ידין עמים במישרים | 10 |
“ಯೆಹೋವ ದೇವರು ಆಳಿಕೆ ಮಾಡುತ್ತಾರೆ; ಆದ್ದರಿಂದ ಲೋಕವು ಸ್ಥಿರವಾಗಿರುವುದು, ಕದಲುವುದಿಲ್ಲ; ಅವರು ಜನರಿಗೆ ನೀತಿಯಲ್ಲಿ ನ್ಯಾಯತೀರಿಸುತ್ತಾರೆ,” ಎಂದು ಎಲ್ಲಾ ಜನಾಂಗಗಳಲ್ಲಿ ಹೇಳಿರಿ.
ישמחו השמים ותגל הארץ ירעם הים ומלאו | 11 |
ಆಕಾಶವು ಸಂತೋಷಿಸಲಿ; ಭೂಮಿಯು ಉಲ್ಲಾಸಪಡಲಿ; ಸಮುದ್ರವೂ, ಅದರಲ್ಲಿರುವುದೆಲ್ಲವೂ ಘೋಷಿಸಲಿ.
יעלז שדי וכל-אשר-בו אז ירננו כל-עצי-יער | 12 |
ಹೊಲಗಳೂ, ಅವುಗಳಲ್ಲಿರುವ ಸಮಸ್ತವೂ ಉತ್ಸಾಹಪಡಲಿ; ಆಗ ಅಡವಿಯ ಮರಗಳೆಲ್ಲಾ ಯೆಹೋವ ದೇವರ ಮುಂದೆಯೇ ಉತ್ಸಾಹಧ್ವನಿ ಮಾಡಲಿ.
לפני יהוה כי בא-- כי בא לשפט הארץ ישפט-תבל בצדק ועמים באמונתו | 13 |
ಸಮಸ್ತ ಸೃಷ್ಟಿಯು ಯೆಹೋವ ದೇವರ ಸನ್ನಿಧಿಯಲ್ಲಿ ಹಾಡಲಿ, ಏಕೆಂದರೆ ಅವರು ಲೋಕಕ್ಕೆ ನೀತಿಯಿಂದಲೂ; ಜನರಿಗೆ ತಮ್ಮ ಸತ್ಯದಿಂದಲೂ ನ್ಯಾಯತೀರಿಸಲು ಬರುತ್ತಾರೆ.