< תהילים 97 >

יהוה מלך תגל הארץ ישמחו איים רבים 1
ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಲೋಕವು ಸಂತೋಷಿಸಲಿ; ಸಮುದ್ರದ ತೀರಪ್ರದೇಶಗಳೆಲ್ಲಾ ಹರ್ಷಿಸಲಿ.
ענן וערפל סביביו צדק ומשפט מכון כסאו 2
ಮೋಡಗಳೂ, ಕಾರ್ಗತ್ತಲೆಯೂ ಆತನ ಸುತ್ತಲೂ ಇರುತ್ತವೆ; ಯೆಹೋವನು ನೀತಿ ಮತ್ತು ನ್ಯಾಯಗಳಿಂದ ಆಳುತ್ತಾನೆ.
אש לפניו תלך ותלהט סביב צריו 3
ಬೆಂಕಿಯು ಆತನ ಮುಂದೆ ಹೋಗಿ, ಸುತ್ತಲೂ ಆವರಿಸಿ ಆತನ ವೈರಿಗಳನ್ನು ದಹಿಸಿಬಿಡುತ್ತದೆ.
האירו ברקיו תבל ראתה ותחל הארץ 4
ಆತನ ಮಿಂಚುಗಳು ಲೋಕವನ್ನು ಬೆಳಗಿಸಿದವು; ಭೂಮಿಯು ಅದನ್ನು ಕಂಡು ನಡುಗಿತು.
הרים--כדונג נמסו מלפני יהוה מלפני אדון כל-הארץ 5
ಸಾರ್ವಭೌಮನಾದ ಯೆಹೋವನ ಎದುರಿನಲ್ಲಿ ಪರ್ವತಗಳು ಮೇಣದಂತೆ ಕರಗಿಹೋದವು.
הגידו השמים צדקו וראו כל-העמים כבודו 6
ಗಗನಮಂಡಲವು ಆತನ ನೀತಿಯನ್ನು ಪ್ರಸಿದ್ಧಪಡಿಸಿತು; ಎಲ್ಲಾ ಜನರು ಆತನ ಮಹಿಮೆಯನ್ನು ಕಂಡರು.
יבשו כל-עבדי פסל-- המתהללים באלילים השתחוו-לו כל-אלהים 7
ವಿಗ್ರಹಗಳಲ್ಲಿ ಹಿಗ್ಗುವವರೂ, ಮೂರ್ತಿಪೂಜಕರೆಲ್ಲರೂ ನಾಚಿಕೆಗೆ ಒಳಪಡುವರು; ದೇವರುಗಳೆಂದು ಕರೆಯಲ್ಪಡುವವರೇ, ನೀವೆಲ್ಲರೂ ಆತನಿಗೆ ಅಡ್ಡಬೀಳಿರಿ.
שמעה ותשמח ציון ותגלנה בנות יהודה-- למען משפטיך יהוה 8
ಯೆಹೋವನೇ, ನೀನು ನ್ಯಾಯಸ್ಥಾಪಿಸಿದ ವಾರ್ತೆಯನ್ನು ಕೇಳಿ ಚೀಯೋನ್ ಪಟ್ಟಣವು ಹರ್ಷಿಸಿತು; ಯೆಹೂದ ಪ್ರಾಂತ್ಯದ ಊರುಗಳು ಸಂತೋಷಿಸಿದವು.
כי-אתה יהוה עליון על-כל-הארץ מאד נעלית על-כל-אלהים 9
ಯೆಹೋವನೇ, ನೀನು ಭೂಲೋಕದ ಸರ್ವಾಧಿಕಾರಿ; ಎಲ್ಲಾ ದೇವರುಗಳಲ್ಲಿ ಮಹೋನ್ನತನು ನೀನೇ.
אהבי יהוה שנאו-רע שמר נפשות חסידיו מיד רשעים יצילם 10
೧೦ಕೆಟ್ಟತನವನ್ನು ಹಗೆಮಾಡುವವರನ್ನು, ಯೆಹೋವನನ್ನು ಪ್ರೀತಿಸುತ್ತಾನೆ. ಆತನು ತನ್ನ ಭಕ್ತರ ಪ್ರಾಣಗಳನ್ನು ಕಾಯುವವನಾಗಿ, ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು.
אור זרע לצדיק ולישרי-לב שמחה 11
೧೧ನೀತಿವಂತರಿಗೋಸ್ಕರ ಬೆಳಕು ಪ್ರಕಾಶಿಸುವುದು, ಯಥಾರ್ಥಹೃದಯವುಳ್ಳವರಿಗೆ ಸಂತೋಷವೂ ಕೊಡಲ್ಪಟ್ಟಿವೆ.
שמחו צדיקים ביהוה והודו לזכר קדשו 12
೧೨ನೀತಿವಂತರೇ, ಯೆಹೋವನಲ್ಲಿ ಆನಂದಿಸಿರಿ; ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ.

< תהילים 97 >