< תהילים 99 >
יהוה מלך ירגזו עמים ישב כרובים תנוט הארץ | 1 |
೧ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಜನಾಂಗಗಳು ನಡುಗಲಿ. ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನು ಆಳುತ್ತಾನೆ; ಭೂಮಿಯು ಕಂಪಿಸಲಿ.
יהוה בציון גדול ורם הוא על-כל-העמים | 2 |
೨ಚೀಯೋನಿನಲ್ಲಿರುವ ಯೆಹೋವನು ದೊಡ್ಡವನು; ಆತನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು.
יודו שמך גדול ונורא קדוש הוא | 3 |
೩ಅವರು ಯೆಹೋವನ ಭಯಂಕರವಾದ ಮಹಾನಾಮವನ್ನು ಕೊಂಡಾಡಲಿ; ಆತನು ಪರಿಶುದ್ಧನು.
ועז מלך משפט אהב אתה כוננת מישרים משפט וצדקה ביעקב אתה עשית | 4 |
೪ಪರಾಕ್ರಮಿಯಾದ ಅರಸನು ನೀತಿಯನ್ನು ಪ್ರೀತಿಸುತ್ತಾನೆ; ಯಥಾರ್ಥವಾದದ್ದನ್ನು ಸ್ಥಾಪಿಸಿದವನೂ, ಯಾಕೋಬ್ಯರಲ್ಲಿ ನ್ಯಾಯ, ನೀತಿಗಳನ್ನು ಸಿದ್ಧಿಗೆ ತಂದವನೂ ನೀನೇ.
רוממו יהוה אלהינו והשתחוו להדם רגליו קדוש הוא | 5 |
೫ನಮ್ಮ ಯೆಹೋವ ದೇವರನ್ನು ಘನಪಡಿಸಿರಿ; ಆತನ ಪಾದಪೀಠದ ಮುಂದೆ ಅಡ್ಡಬೀಳಿರಿ. ಆತನು ಪರಿಶುದ್ಧನು.
משה ואהרן בכהניו ושמואל בקראי שמו קראים אל-יהוה והוא יענם | 6 |
೬ಆತನ ಯಾಜಕರಲ್ಲಿ ಮೋಶೆ ಮತ್ತು ಆರೋನರೂ, ಆತನ ಹೆಸರಿನಲ್ಲಿ ಪ್ರಾರ್ಥಿಸುವವರೊಳಗೆ ಸಮುವೇಲನೂ ಪ್ರಾರ್ಥಿಸಿದಾಗೆಲ್ಲ, ಯೆಹೋವನು ಅವರಿಗೆ ಸದುತ್ತರವನ್ನು ದಯಪಾಲಿಸುತ್ತಿದ್ದನು.
בעמוד ענן ידבר אליהם שמרו עדתיו וחק נתן-למו | 7 |
೭ಆತನು ಮೇಘಸ್ತಂಭದಲ್ಲಿದ್ದು ಅವರೊಡನೆ ಮಾತನಾಡುತ್ತಿದ್ದನು; ಅವರು ಆತನ ವಿಧಿನಿಯಮಗಳನ್ನು ಕೈಕೊಂಡವರು.
יהוה אלהינו אתה עניתם אל נשא היית להם ונקם על-עלילותם | 8 |
೮ನಮ್ಮ ಯೆಹೋವ ದೇವರೇ, ಅವರಿಗೆ ಸದುತ್ತರ ಕೊಟ್ಟವನು ನೀನೇ. ನೀನು ದುಷ್ಕೃತ್ಯಗಳಿಗಾಗಿ ಅವರನ್ನು ದಂಡಿಸುತ್ತಿದ್ದರೂ, ಕ್ಷಮಿಸುವ ದೇವರಾಗಿದ್ದಿ.
רוממו יהוה אלהינו והשתחוו להר קדשו כי-קדוש יהוה אלהינו | 9 |
೯ನಮ್ಮ ಯೆಹೋವ ದೇವರನ್ನು ಘನಪಡಿಸಿರಿ; ಆತನ ಪರಿಶುದ್ಧಪರ್ವತದ ಕಡೆಗೆ ಅಡ್ಡಬೀಳಿರಿ. ನಮ್ಮ ಯೆಹೋವ ದೇವರು ಪರಿಶುದ್ಧನು.