< תהילים 1 >
אשרי האיש-- אשר לא הלך בעצת רשעים ובדרך חטאים לא עמד ובמושב לצים לא ישב | 1 |
ದುಷ್ಟರ ಆಲೋಚನೆಯಂತೆ ನಡೆಯದೆ, ಪಾಪಿಗಳ ಮಾರ್ಗದಲ್ಲಿ ನಿಲ್ಲದೆ, ಅಪಹಾಸ್ಯಗಾರರ ಕೂಟದಲ್ಲಿ ಕೂತುಕೊಳ್ಳದೆ,
כי אם בתורת יהוה חפצו ובתורתו יהגה יומם ולילה | 2 |
ಯೆಹೋವ ದೇವರ ನಿಯಮದಲ್ಲಿ ಆನಂದಿಸುತ್ತಾ, ದೇವರ ನಿಯಮವನ್ನು ರಾತ್ರಿ ಹಗಲು ಧ್ಯಾನಿಸುತ್ತಾ ಬದುಕುವವರು ಧನ್ಯರು.
והיה-- כעץ שתול על-פלגי-מים אשר פריו יתן בעתו--ועלהו לא-יבול וכל אשר-יעשה יצליח | 3 |
ಅಂಥವರು ನೀರಿನ ಕಾಲುವೆಗಳ ಬಳಿಯಲ್ಲಿ ನೆಟ್ಟಿರುವ, ಮರದ ಹಾಗಿರುವರು. ಅಂಥ ಮರವು ತಕ್ಕ ಕಾಲದಲ್ಲಿ ಫಲಕೊಡುತ್ತದೆ, ಅದರ ಎಲೆ ಉದುರುವುದೇ ಇಲ್ಲ. ಅದರಂತೆ ಅವರು ಮಾಡುವ ಕಾರ್ಯವೆಲ್ಲವೂ ಸಫಲವಾಗುವುದು.
לא-כן הרשעים כי אם-כמץ אשר-תדפנו רוח | 4 |
ಆದರೆ ದುಷ್ಟರು ಹಾಗಲ್ಲ! ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನ ಹಾಗೆಯೇ ಇದ್ದಾರೆ.
על-כן לא-יקמו רשעים--במשפט וחטאים בעדת צדיקים | 5 |
ಆದ್ದರಿಂದ ದುಷ್ಟರು ನ್ಯಾಯತೀರ್ಪಿಗೆ ಒಳಗಾಗುವರು, ಪಾಪಿಗಳಿಗೆ ನೀತಿವಂತರ ಸಭೆಯಲ್ಲಿ ಸ್ಥಳವಿರುವುದಿಲ್ಲ.
כי-יודע יהוה דרך צדיקים ודרך רשעים תאבד | 6 |
ಯೆಹೋವ ದೇವರು ನೀತಿವಂತರ ಮಾರ್ಗವನ್ನು ಅರಿತಿದ್ದಾರೆ; ಆದರೆ ದುಷ್ಟರ ಮಾರ್ಗವು ನಾಶಕ್ಕೆ ನಡೆಸುವುದು.