< זכריה 9 >
משא דבר יהוה בארץ חדרך ודמשק מנחתו כי ליהוה עין אדם וכל שבטי ישראל | 1 |
೧ಯೆಹೋವನು ನುಡಿದ ದೈವೋಕ್ತಿಯು ಹದ್ರಾಕ್ ದೇಶದ ಮೇಲೆ ಬಿದ್ದಿದೆ. ದಮಸ್ಕವೇ ಅದಕ್ಕೆ ಈಡು; ಯೆಹೋವನು ನರವಂಶದ ಮೇಲೆ ಕಣ್ಣಿಟ್ಟಿದ್ದಾನೆ; ಹೌದು, ಇಸ್ರಾಯೇಲಿನ ಸಕಲ ಕುಲಗಳಲ್ಲಿಯೂ,
וגם חמת תגבל בה צר וצידון כי חכמה מאד | 2 |
೨ದಮಸ್ಕದ ಪಕ್ಕದಲ್ಲಿನ ಹಮಾತಿನಲ್ಲಿಯೂ ಬಹಳ ಜಾಣರು ಎಂದು ಕೊಚ್ಚಿಕೊಂಡಿರುವ ತೂರ್, ಚೀದೋನ್ ಪಟ್ಟಣಗಳಲ್ಲಿಯೂ ಕಣ್ಣಿಟ್ಟಿದ್ದಾನೆ.
ותבן צר מצור לה ותצבר כסף כעפר וחרוץ כטיט חוצות | 3 |
೩ತೂರ್ ಪಟ್ಟಣವು ಕೋಟೆಯನ್ನು ಕಟ್ಟಿಕೊಂಡು ಬೆಳ್ಳಿಯನ್ನು ಧೂಳಿನಂತೆಯೂ, ಬಂಗಾರವನ್ನು ಬೀದಿಯ ಬದಿಯ ಕಸದ ರಾಶಿಯಂತೆ ಮಾಡಿಕೊಂಡಿದೆ.
הנה אדני יורשנה והכה בים חילה והיא באש תאכל | 4 |
೪ಆಹಾ, ಕರ್ತನು ಅದರ ಆಸ್ತಿಯನ್ನು ಆಕ್ರಮಿಸಿ ಪೌಳಿಗೋಡೆಯನ್ನು ಸಮುದ್ರದೊಳಗೆ ಹೊಡೆದುಹಾಕುವನು; ಪಟ್ಟಣವು ಬೆಂಕಿಗೆ ತುತ್ತಾಗುವುದು.
תרא אשקלון ותירא ועזה ותחיל מאד ועקרון כי הביש מבטה ואבד מלך מעזה ואשקלון לא תשב | 5 |
೫ಅಷ್ಕೆಲೋನು ಇದನ್ನು ನೋಡಿ ಹೆದರುವುದು; ಗಾಜವು ಸಹ ಅತಿ ಸಂಕಟಪಡುವುದು; ಎಕ್ರೋನು ನಿರೀಕ್ಷೆಗೆಟ್ಟು ಬಹು ವ್ಯಥೆಗೆ ಒಳಗಾಗುವುದು; ಗಾಜಕ್ಕೆ ರಾಜನೇ ಇಲ್ಲವಾಗುವನು; ಅಷ್ಕೆಲೋನು ನಿರ್ಜನವಾಗುವುದು;
וישב ממזר באשדוד והכרתי גאון פלשתים | 6 |
೬ಅಷ್ಡೋದಿನಲ್ಲಿ ಮಿಶ್ರಜಾತಿಯವರು ವಾಸಮಾಡುವರು; ಹೀಗೆ ಫಿಲಿಷ್ಟಿಯದ ಗರ್ವವನ್ನು ಭಂಗಪಡಿಸುವೆನು.
והסרתי דמיו מפיו ושקציו מבין שניו ונשאר גם הוא לאלהינו והיה כאלף ביהודה ועקרון כיבוסי | 7 |
೭ಅವರು ಸವಿಯುವ ರಕ್ತವನ್ನು ಬಾಯೊಳಗಿಂದ ತೆಗೆದುಬಿಡುವೆನು; ಅವರು ಕಚ್ಚುವ ಅಸಹ್ಯಪದಾರ್ಥಗಳನ್ನು ಹಲ್ಲುಗಳ ಮಧ್ಯದಿಂದ ಕಿತ್ತುಹಾಕುವೆನು; ಅವರೂ ಇಸ್ರಾಯೇಲಿನ ದೇವರಿಗೆ ಮೀಸಲಾದ ಜನರಾಗಿ ಉಳಿಯುವರು; ಯೆಹೂದದಲ್ಲಿ ಕುಲಪಾಲಕನಂತಿರುವರು; ಎಕ್ರೋನಿನವರು ಯೆಬೂಸಿಯರ ಹಾಗಿರುವರು.
וחניתי לביתי מצבה מעבר ומשב ולא יעבר עליהם עוד נגש כי עתה ראיתי בעיני | 8 |
೮ಯಾರೂ ಹಾದುಹೋಗದಂತೆ ನನ್ನ ಆಲಯದ ಸುತ್ತಲು ಪಾಳೆಯನ್ನು ಹಾಕಿ ಕಾವಲಾಗಿರುವೆನು; ಇನ್ನು ಮುಂದೆ ಯಾವ ಬಾಧಕನೂ ನನ್ನ ಜನರ ಮೇಲೆ ದಾಳಿಮಾಡುವುದಿಲ್ಲ; ಏಕೆಂದರೆ ಈಗ ನಾನು ಕಣ್ಣಿಟ್ಟು ನೋಡುತ್ತಿದ್ದೇನೆ.
גילי מאד בת ציון הריעי בת ירושלם הנה מלכך יבוא לך צדיק ונושע הוא עני ורכב על חמור ועל עיר בן אתנות | 9 |
೯ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.
והכרתי רכב מאפרים וסוס מירושלם ונכרתה קשת מלחמה ודבר שלום לגוים ומשלו מים עד ים ומנהר עד אפסי ארץ | 10 |
೧೦ನಾನು ಎಫ್ರಾಯೀಮಿನ ರಥಬಲವನ್ನೂ, ಯೆರೂಸಲೇಮಿನ ಅಶ್ವಬಲವನ್ನೂ ನಿಶ್ಶೇಷಮಾಡುವೆನು; ಯುದ್ಧದ ಬಿಲ್ಲು ಇಲ್ಲವಾಗುವುದು; ಆತನು ಕೊಡುವ ಅಪ್ಪಣೆಯು ಜನಾಂಗಗಳಿಗೆ ಸಮಾಧಾನಕರವಾಗಿರುವುದು; ಆತನ ಆಳ್ವಿಕೆಯು ಸಮುದ್ರದಿಂದ ಸಮುದ್ರದವರೆಗೂ ಯೂಫ್ರೆಟಿಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೂ ಹರಡಿಕೊಂಡಿರುವುದು.
גם את בדם בריתך שלחתי אסיריך מבור אין מים בו | 11 |
೧೧ನನ್ನ ಜನರೇ, ನೀವು ಒಡಂಬಡಿಕೆ ಮಾಡಿಕೊಂಡಾಗ ಸುರಿಸಿದ ರಕ್ತವನ್ನು ನಾನು ಸ್ಮರಿಸಿ ಸೆರೆಯಾಗಿರುವ ನಿನ್ನವರನ್ನು ನೀರಿಲ್ಲದ ಆ ಬಾವಿಯೊಳಗಿಂದ ಬರಮಾಡುವೆನು.
שובו לבצרון אסירי התקוה גם היום מגיד משנה אשיב לך | 12 |
೧೨ನಿರೀಕ್ಷೆ ಹೊಂದಿದ ಸೆರೆಯವರೇ, ನಿಮ್ಮ ದುರ್ಗಕ್ಕೆ ಹಿಂದಿರುಗಿರಿ; ನಿಮಗೆ ಎರಡರಷ್ಟು ಸುಖವನ್ನು ದಯಪಾಲಿಸುವೆನೆಂದು ಈಗಲೂ ಪ್ರಕಟಿಸುತ್ತೇನೆ.
כי דרכתי לי יהודה קשת מלאתי אפרים ועוררתי בניך ציון על בניך יון ושמתיך כחרב גבור | 13 |
೧೩ಯೆಹೂದವೆಂಬ ಬಿಲ್ಲನ್ನು ಬೊಗ್ಗಿಸಿಕೊಂಡಿದ್ದೇನೆ. ಅದರಲ್ಲಿ ಎಫ್ರಾಯೀಮ್ ಎಂಬ ಬಾಣವನ್ನು ಹೂಡಿದ್ದೇನೆ; ಚೀಯೋನೇ, ನಾನು ನಿನ್ನ ಸಂತಾನವನ್ನು ಗ್ರೀಕ್ ಸಂತಾನಕ್ಕೆ ವಿರುದ್ಧವಾಗಿ ಎಬ್ಬಿಸಿ ನಿನ್ನನ್ನು ಶೂರನ ಕತ್ತಿಯನ್ನಾಗಿ ಮಾಡುವೆನು.
ויהוה עליהם יראה ויצא כברק חצו ואדני יהוה בשופר יתקע והלך בסערות תימן | 14 |
೧೪ಯೆಹೋವನು ಸ್ವಜನರಿಗಾಗಿ ಅವರ ಮೇಲೆ ಕಾಣಿಸಿಕೊಳ್ಳುವನು; ಆತನ ಬಾಣವು ಸಿಡಿಲಿನಂತೆ ಹಾರುವುದು; ಕರ್ತನಾದ ಯೆಹೋವನು ತುತ್ತೂರಿಯನ್ನು ಊದಿ ದಕ್ಷಿಣ ಪ್ರಾಂತ್ಯದ ಬಿರುಗಾಳಿಗಳೊಡನೆ ನುಗ್ಗುವನು.
יהוה צבאות יגן עליהם ואכלו וכבשו אבני קלע ושתו המו כמו יין ומלאו כמזרק--כזויות מזבח | 15 |
೧೫ಸೇನಾಧೀಶ್ವರನಾದ ಯೆಹೋವನು ತನ್ನ ಜನರನ್ನು ಕಾಪಾಡುವನು; ಅವರು ಶತ್ರುಗಳನ್ನು ನುಂಗಿಬಿಡುವರು, ಕವಣೆಯ ಕಲ್ಲುಗಳನ್ನು ತುಳಿದುಹಾಕುವರು; ರಕ್ತವನ್ನು ಕುಡಿದು ಅಮಲೇರಿದವರಾಗಿ ಭೋರ್ಗರೆಯುವರು; ಬೋಗುಣಿಗಳಂತೆಯೂ, ಯಜ್ಞವೇದಿಯ ಮೂಲೆಗಳಂತೆ ರಕ್ತಪೂರ್ಣರಾಗಿರುವರು.
והושיעם יהוה אלהיהם ביום ההוא--כצאן עמו כי אבני נזר מתנוססות על אדמתו | 16 |
೧೬ಆ ದಿನದಲ್ಲಿ ಅವರ ದೇವರಾದ ಯೆಹೋವನು ಅವರನ್ನು ತನ್ನ ಹಿಂಡಾಗಿರುವ ಜನರೆಂದು ರಕ್ಷಿಸುವನು; ಅವರು ಕಿರೀಟದಲ್ಲಿನ ರತ್ನಗಳಂತೆ ತಮ್ಮ ದೇಶದಲ್ಲಿ ಥಳಥಳಿಸುವರು.
כי מה טובו ומה יפיו--דגן בחורים ותירוש ינובב בתלות | 17 |
೧೭ಆಹಾ, ಅವರ ಸೌಖ್ಯವೆಷ್ಟು, ಅವರ ಸೌಂದರ್ಯವೆಷ್ಟು! ಧಾನ್ಯವು ಯುವಕರನ್ನು, ದ್ರಾಕ್ಷಾರಸವು ಯುವತಿಯರನ್ನು ಪುಷ್ಟಿಗೊಳಿಸುವುದು.