< דברי הימים א 12 >

וְאֵלֶּה הַבָּאִים אֶל־דָּוִיד לְצִיקְלַג עוֹד עָצוּר מִפְּנֵי שָׁאוּל בֶּן־קִישׁ וְהֵמָּה בַּגִּבּוֹרִים עֹזְרֵי הַמִּלְחָמָֽה׃ 1
ದಾವೀದನು ಕೀಷನ ಮಗನಾದ ಸೌಲನಿಗೆ ಹೆದರಿ ಚಿಕ್ಲಗಿನಲ್ಲಿ ಅಡಗಿಕೊಂಡಿದ್ದಾಗ
נֹשְׁקֵי קֶשֶׁת מַיְמִינִים וּמַשְׂמִאלִים בָּאֲבָנִים וּבַחִצִּים בַּקָּשֶׁת מֵאֲחֵי שָׁאוּל מִבִּנְיָמִֽן׃ 2
ಬಿಲ್ಲುಗಾರರೂ, ಎಡಗೈ ಬಲಗೈಗಳಿಂದ ಕಲ್ಲುಗಳನ್ನೂ ಮತ್ತು ಬಾಣಗಳನ್ನೂ ಎಸೆಯಬಲ್ಲವರೂ ಆಗಿದ್ದು ಯುದ್ಧದಲ್ಲಿ ಸಹಾಯಮಾಡುವುದಕ್ಕಾಗಿ ಅವನ ಬಳಿಗೆ ಬಂದ ಯುದ್ಧವೀರರ ಪಟ್ಟಿ.
הָרֹאשׁ אֲחִיעֶזֶר וְיוֹאָשׁ בְּנֵי הַשְּׁמָעָה הַגִּבְעָתִי (ויזואל) [וִיזִיאֵל] וָפֶלֶט בְּנֵי עַזְמָוֶת וּבְרָכָה וְיֵהוּא הָעַנְּתֹתִֽי׃ 3
ಸೌಲನ ಕುಲಬಂಧುಗಳಾದ ಬೆನ್ಯಾಮೀನ್ಯರಲ್ಲಿ ಮುಖ್ಯಸ್ಥನಾದ ಅಹೀಯೆಜೆರ್ ಮತ್ತು ಯೋವಾಷ ಎಂಬ ಗಿಬೆಯ ಊರಿನ ಹಷ್ಷೆಮಾಹನ ಮಕ್ಕಳು. ಅಜ್ಮಾವೆತನ ಮಕ್ಕಳಾದ ಯೆಜೀಯೇಲ್ ಪೆಲೆಟರು. ಅನತೋತ್ ಊರಿನವರಾದ ಯೇಹು ಬೇರಾಕಾರು,
וְיִֽשְׁמַעְיָה הַגִּבְעוֹנִי גִּבּוֹר בַּשְּׁלֹשִׁים וְעַל־הַשְּׁלֹשִֽׁים׃ וְיִרְמְיָה וְיַחֲזִיאֵל וְיוֹחָנָן וְיוֹזָבָד הַגְּדֵֽרָתִֽי׃ 4
ಮೂವತ್ತು ಭಟರಲ್ಲಿ ಶೂರನು ಮುಖ್ಯಸ್ಥನು ಆದ ಗಿಬ್ಯೋನಿನ ಇಷ್ಮಾಯ, ಗೆದೇರಾ ಊರಿನವರಾದ ಯೆರೆಮೀಯ ಯಹಜೀಯೇಲ್, ಯೋಹಾನಾನ್, ಯೋಜಾಬಾದರು,
אֶלְעוּזַי וִֽירִימוֹת וּבְעַלְיָה וּשְׁמַרְיָהוּ וּשְׁפַטְיָהוּ (החריפי) [הַחֲרוּפִֽי]׃ 5
ಹರೀಫ್ಯರಾದ ಎಲ್ಲೂಜೈ, ಯೆರೀಮೋತ್, ಬೆಯಲ್ಯ, ಶೆಮರ್ಯ, ಶೆಫಟ್ಯರು,
אֶלְקָנָה וְיִשִּׁיָּהוּ וַעֲזַרְאֵל וְיוֹעֶזֶר וְיָשׇׁבְעָם הַקׇּרְחִֽים׃ 6
ಕೋರಹಿಯರಾದ ಎಲ್ಕಾನ್, ಇಷ್ಷೀಯ, ಅಜರೇಲ್, ಯೋವೆಜೆರ್, ಯಾಷೊಬ್ಬಾಮರು,
וְיוֹעֵאלָה וּזְבַדְיָה בְּנֵי יְרֹחָם מִן־הַגְּדֽוֹר׃ 7
ಗೆದೋರಿನ ಯೆರೋಹಾಮನ ಮಕ್ಕಳಾದ ಯೋವೇಲ ಮತ್ತು ಜೆಬದ್ಯರು ಇವರೇ.
וּמִן־הַגָּדִי נִבְדְּלוּ אֶל־דָּוִיד לַמְצַד מִדְבָּרָה גִּבֹּרֵי הַחַיִל אַנְשֵׁי צָבָא לַמִּלְחָמָה עֹרְכֵי צִנָּה וָרֹמַח וּפְנֵי אַרְיֵה פְּנֵיהֶם וְכִצְבָאיִם עַל־הֶהָרִים לְמַהֵֽר׃ 8
ಯುದ್ಧವೀರರೂ ಯುದ್ಧನಿಪುಣರೂ, ಗುರಾಣಿಬರ್ಜಿಗಳಲ್ಲಿ ಪ್ರವೀಣರೂ, ಸಿಂಹಮುಖರೂ, ಬೆಟ್ಟದ ಜಿಂಕೆಯಂತೆ ಓಡುವ ಚುರುಕು ಕಾಲಿನವರು ಆಗಿದ್ದು, ದಾವೀದನು ಅರಣ್ಯ ದುರ್ಗದಲ್ಲಿದ್ದಾಗ ಅವನನ್ನು ಸೇರಿಕೊಂಡ ಗಾದ್ಯರು:
עֵזֶר הָרֹאשׁ עֹֽבַדְיָה הַשֵּׁנִי אֱלִיאָב הַשְּׁלִשִֽׁי׃ 9
ಮುಖ್ಯಸ್ಥನು ಏಜೆರ್, ಎರಡನೆಯವನು ಓಬದ್ಯ, ಮೂರನೆಯವನು ಎಲೀಯಾಬ್,
מִשְׁמַנָּה הָרְבִיעִי יִרְמְיָה הַחֲמִשִֽׁי׃ 10
೧೦ನಾಲ್ಕನೆಯವನು ಮಷ್ಮನ್ನ, ಐದನೆಯವನು ಯೆರೆಮೀಯ,
עַתַּי הַשִּׁשִּׁי אֱלִיאֵל הַשְּׁבִעִֽי׃ 11
೧೧ಆರನೆಯವನು ಅತ್ತೈ, ಏಳನೆಯವನು ಎಲೀಯೇಲ್,
יֽוֹחָנָן הַשְּׁמִינִי אֶלְזָבָד הַתְּשִׁיעִֽי׃ 12
೧೨ಎಂಟನೆಯವನು ಯೋಹಾನಾನ್, ಒಂಬತ್ತನೆಯವನು ಎಲ್ಜಾಬಾದ್,
יִרְמְיָהוּ הָעֲשִׂירִי מַכְבַּנַּי עַשְׁתֵּי עָשָֽׂר׃ 13
೧೩ಹತ್ತನೆಯವನು ಯೆರೆಮೀಯನು, ಹನ್ನೊಂದನೆಯವನು ಮಕ್ಬನ್ನೈ ಇವರೇ.
אֵלֶּה מִבְּנֵי־גָד רָאשֵׁי הַצָּבָא אֶחָד לְמֵאָה הַקָּטָן וְהַגָּדוֹל לְאָֽלֶף׃ 14
೧೪ಗಾದ್ಯರಾದ ಇವರು ಸೇನಾಧಿಪತಿಗಳಾಗಿದ್ದರು. ಇವರಲ್ಲಿ ಕನಿಷ್ಠನಾದವನು ನೂರು ಜನರ ಮೇಲೆಯೂ, ಶ್ರೇಷ್ಠನಾದವನು ಸಾವಿರ ಜನರ ಮೇಲೆಯೂ ಇದ್ದರು.
אֵלֶּה הֵם אֲשֶׁר עָבְרוּ אֶת־הַיַּרְדֵּן בַּחֹדֶשׁ הָרִאשׁוֹן וְהוּא מְמַלֵּא עַל־כׇּל־[גְּדוֹתָיו] (גדיתיו) וַיַּבְרִיחוּ אֶת־כׇּל־הָעֲמָקִים לַמִּזְרָח וְלַֽמַּעֲרָֽב׃ 15
೧೫ಯೊರ್ದನ್ ನದಿಯು ಮೊದಲನೆಯ ತಿಂಗಳಿನಲ್ಲಿ ದಡ ತುಂಬಿ ಹರಿಯುತ್ತಿರುವಾಗ, ಇವರು ಅದನ್ನು ದಾಟಿ ನದಿಯ ತಗ್ಗಿನ ಪೂರ್ವ ಮತ್ತು ಪಶ್ಚಿಮ ಪ್ರದೇಶದಲ್ಲಿರವ ಎಲ್ಲರನ್ನೂ ಓಡಿಸಿಬಿಟ್ಟರು.
וַיָּבֹאוּ מִן־בְּנֵי בִנְיָמִן וִֽיהוּדָה עַד־לַמְצָד לְדָוִֽיד׃ 16
೧೬ಬೆನ್ಯಾಮೀನ್ ಮತ್ತು ಯೂದ ಕುಲದವರಲ್ಲಿ ಕೆಲವರು ದಾವೀದನಿದ್ದ ದುರ್ಗದ ಬಳಿಗೆ ಬರಲು ದಾವೀದನು ಹೊರಗೆ ಹೋಗಿ ಅವರೆದುರಿಗೆ ನಿಂತು ಅವರಿಗೆ,
וַיֵּצֵא דָוִיד לִפְנֵיהֶם וַיַּעַן וַיֹּאמֶר לָהֶם אִם־לְשָׁלוֹם בָּאתֶם אֵלַי לְעׇזְרֵנִי יִֽהְיֶה־לִּי עֲלֵיכֶם לֵבָב לְיָחַד וְאִֽם־לְרַמּוֹתַנִי לְצָרַי בְּלֹא חָמָס בְּכַפַּי יֵרֶא אֱלֹהֵי אֲבוֹתֵינוּ וְיוֹכַֽח׃ 17
೧೭“ನೀವು ಸ್ನೇಹಭಾವದಿಂದ ಸಹಾಯ ಮಾಡುವುದಕ್ಕಾಗಿ ನನ್ನ ಬಳಿಗೆ ಬಂದಿರುವುದಾದರೆ ನಿಮ್ಮೊಡನೆ ನನಗೆ ಐಕ್ಯಭಾವವಿರುವುದು. ನಿರಪರಾಧಿಯಾದ ನನ್ನನ್ನು ನನ್ನ ವಿರೋಧಿಗಳಿಗೆ ಒಪ್ಪಿಸುವ ಕುಯುಕ್ತಿಯಿಂದ ಬಂದಿರುವುದಾದರೆ ನಮ್ಮ ಪೂರ್ವಿಕರ ದೇವರು ನಿಮ್ಮನ್ನು ನೋಡಿ ದಂಡಿಸಲಿ” ಎಂದು ಹೇಳಿದನು.
וְרוּחַ לָֽבְשָׁה אֶת־עֲמָשַׂי רֹאשׁ (השלושים) [הַשָּׁלִישִׁים] לְךָ דָוִיד וְעִמְּךָ בֶן־יִשַׁי שָׁלוֹם ׀ שָׁלוֹם לְךָ וְשָׁלוֹם לְעֹזְרֶךָ כִּי עֲזָֽרְךָ אֱלֹהֶיךָ וַיְקַבְּלֵם דָּוִיד וַֽיִּתְּנֵם בְּרָאשֵׁי הַגְּדֽוּד׃ 18
೧೮ಆಗ ಮೂವತ್ತು ಜನರಲ್ಲಿ ಮುಖ್ಯಸ್ಥನಾದ ಅಮಾಸೈಯು ಆತ್ಮಾವೇಶವುಳ್ಳವನಾಗಿ, “ದಾವೀದನೇ, ನಾವು ನಿನ್ನವರು; ಶುಭವಾಗಲಿ! ಇಷಯನ ಮಗನೇ, ನಾವು ನಿನ್ನ ಪಕ್ಷದವರು; ಶುಭವಾಗಲಿ! ನಿನಗೂ ನಿನ್ನ ಸಹಾಯಕರಿಗೂ ಶುಭವಾಗಲಿ! ನಿನ್ನ ದೇವರು ನಿನಗೆ ಜಯವನ್ನು ಕೊಡುವವನಾಗಿದ್ದಾನೆ” ಎಂದು ಹೇಳಿದನು. ಆಗ ದಾವೀದನು ಅವರನ್ನು ತನ್ನ ಜೊತೆಯಲ್ಲಿ ಸೇರಿಸಿಕೊಂಡು ಸೈನ್ಯಾಧಿಪತಿಗಳನ್ನಾಗಿ ನೇಮಿಸಿದನು.
וּמִֽמְּנַשֶּׁה נָֽפְלוּ עַל־דָּוִיד בְּבֹאוֹ עִם־פְּלִשְׁתִּים עַל־שָׁאוּל לַמִּלְחָמָה וְלֹא עֲזָרֻם כִּי בְעֵצָה שִׁלְּחֻהוּ סַרְנֵי פְלִשְׁתִּים לֵאמֹר בְּרָאשֵׁינוּ יִפּוֹל אֶל־אֲדֹנָיו שָׁאֽוּל׃ 19
೧೯ಸೌಲನಿಗೆ ವಿರುದ್ಧವಾಗಿ ಯುದ್ಧಕ್ಕೆ ಹೋಗುವ ಫಿಲಿಷ್ಟಿಯರ ಜೊತೆಯಲ್ಲಿ ದಾವೀದನೂ ಹೋಗುತ್ತಿರುವಾಗ ಕೆಲವು ಜನ ಮನಸ್ಸೆಯವರು ಬಂದು ಅವನೊಡನೆ ಸೇರಿಕೊಂಡರು. ದಾವೀದನು ನಿಜವಾಗಿ ಫಿಲಿಷ್ಟಿಯರಿಗೆ ಸಹಾಯಕನು ಆಗಿರಲಾರನೆಂದು, ಅವರ ಪ್ರಭುಗಳು, “ಇವನು ನಮ್ಮ ತಲೆಗಳನ್ನು ಕಡಿದು ತಿರುಗಿ ತನ್ನ ಯಜಮಾನನಾದ ಸೌಲನೊಂದಿಗೆ ಸೇರಿಕೊಂಡಾನು” ಎಂಬುದಾಗಿ ಆಲೋಚಿಸಿ ಅವನನ್ನು ಹಿಂದಕ್ಕೆ ಕಳುಹಿಸಿದರು.
בְּלֶכְתּוֹ אֶל־צִֽיקְלַג נָפְלוּ עָלָיו ׀ מִֽמְּנַשֶּׁה עַדְנַח וְיוֹזָבָד וִידִֽיעֲאֵל וּמִיכָאֵל וְיוֹזָבָד וֶאֱלִיהוּא וְצִלְּתָי רָאשֵׁי הָאֲלָפִים אֲשֶׁר לִמְנַשֶּֽׁה׃ 20
೨೦ಅವನು ಹಿಂತಿರುಗಿ ಚಿಕ್ಲಗಿಗೆ ಹೋಗುವಾಗ ಮನಸ್ಸೆ ಕುಲದ ಸಹಸ್ರಾಧಿಪತಿಗಳಾದ ಅದ್ನ, ಯೋಜಾಬಾದ್, ಎದೀಗಯೇಲ್, ಮೀಕಾಯೇಲ್, ಯೋಜಾಬಾದ್, ಎಲೀಹು ಮತ್ತು ಚಿಲ್ಲೆತೈ ಎಂಬುವರು ಬಂದು ಅವನೊಂದಿಗೆ ಸೇರಿಕೊಂಡರು.
וְהֵמָּה עָזְרוּ עִם־דָּוִיד עַֽל־הַגְּדוּד כִּֽי־גִבּוֹרֵי חַיִל כֻּלָּם וַיִּהְיוּ שָׂרִים בַּצָּבָֽא׃ 21
೨೧ಯುದ್ಧವೀರರೂ, ಸೇನಾಧಿಪತಿಗಳೂ ಆದ ಇವರೆಲ್ಲರೂ ಸುಲಿಗೆ ಗುಂಪುಗಳಿಗೆ ವಿರೋಧವಾಗಿ ದಾವೀದನಿಗೆ ಸಹಾಯಮಾಡುವವರಾದರು.
כִּי לְעֶת־יוֹם בְּיוֹם יָבֹאוּ עַל־דָּוִיד לְעׇזְרוֹ עַד־לְמַחֲנֶה גָדוֹל כְּמַחֲנֵה אֱלֹהִֽים׃ 22
೨೨ದಾವೀದನ ಸಹಾಯಕ್ಕೆ ಪ್ರತಿದಿನವೂ ಹೊಸ ಗುಂಪುಗಳು ಬರುತ್ತಿದ್ದವು. ಅವನ ಸೈನ್ಯವು ದೇವರ ಸೈನ್ಯದಷ್ಟು ದೊಡ್ಡದಾಯಿತು.
וְאֵלֶּה מִסְפְּרֵי רָאשֵׁי הֶחָלוּץ לַצָּבָא בָּאוּ עַל־דָּוִיד חֶבְרוֹנָה לְהָסֵב מַלְכוּת שָׁאוּל אֵלָיו כְּפִי יְהֹוָֽה׃ 23
೨೩ಯೆಹೋವನ ಆಜ್ಞೆಯಂತೆ ಸೌಲನ ರಾಜ್ಯವನ್ನು ದಾವೀದನಿಗೆ ಒಪ್ಪಿಸುವುದಕ್ಕೋಸ್ಕರ ಹೆಬ್ರೋನಿನಲ್ಲಿದ್ದ ಅವನ ಬಳಿಗೆ ಗುಂಪುಗುಂಪುಗಳಾಗಿ ಬಂದ ಯುದ್ಧಸನ್ನದ್ಧರಾಗಿದ್ದವರ ಲೆಕ್ಕ;
בְּנֵי יְהוּדָה נֹשְׂאֵי צִנָּה וָרֹמַח שֵׁשֶׁת אֲלָפִים וּשְׁמוֹנֶה מֵאוֹת חֲלוּצֵי צָבָֽא׃ 24
೨೪ಯೆಹೂದ್ಯರಿಂದ ಬರ್ಜಿ, ಗುರಾಣಿಗಳನ್ನು ಹಿಡಿದ ಸೈನಿಕರು ಆರು ಸಾವಿರದ ಎಂಟನೂರು.
מִן־בְּנֵי שִׁמְעוֹן גִּבּוֹרֵֽי חַיִל לַצָּבָא שִׁבְעַת אֲלָפִים וּמֵאָֽה׃ 25
೨೫ಸಿಮೆಯೋನ್ಯರಿಂದ ಏಳು ಸಾವಿರದ ನೂರು ಯುದ್ಧವೀರರು.
מִן־בְּנֵי הַלֵּוִי אַרְבַּעַת אֲלָפִים וְשֵׁשׁ מֵאֽוֹת׃ 26
೨೬ಲೇವಿಯರಿಂದ ನಾಲ್ಕು ಸಾವಿರದ ಆರುನೂರು ಸೈನಿಕರಲ್ಲದೆ,
וִיהוֹיָדָע הַנָּגִיד לְאַהֲרֹן וְעִמּוֹ שְׁלֹשֶׁת אֲלָפִים וּשְׁבַע מֵאֽוֹת׃ 27
೨೭ಆರೋನ್ಯರ ಮುಖ್ಯಸ್ಥನಾದ ಯೆಹೋಯಾದಾವನೂ ಮತ್ತು ಅವನ ಮೂರು ಸಾವಿರದ ಏಳು ನೂರು ಸೈನಿಕರೂ;
וְצָדוֹק נַעַר גִּבּוֹר חָיִל וּבֵית־אָבִיו שָׂרִים עֶשְׂרִים וּשְׁנָֽיִם׃ 28
೨೮ಪರಾಕ್ರಮಶಾಲಿಯಾದ ಚಾದೋಕನೆಂಬ ಯೌವನಸ್ಥನೂ, ಅವನ ಕುಟುಂಬದವರಾದ ಇಪ್ಪತ್ತೆರಡು ಅಧಿಪತಿಗಳೂ,
וּמִן־בְּנֵי בִנְיָמִן אֲחֵי שָׁאוּל שְׁלֹשֶׁת אֲלָפִים וְעַד־הֵנָּה מַרְבִּיתָם שֹׁמְרִים מִשְׁמֶרֶת בֵּית שָׁאֽוּל׃ 29
೨೯ಸೌಲನ ಸಂಬಂಧಿಕರಾದ ಬೆನ್ಯಾಮೀನ್ಯರಲ್ಲಿ ಮೂರು ಸಾವಿರ ಸೈನಿಕರು ಬಂದರು. ಬೆನ್ಯಾಮೀನ್ಯರಲ್ಲಿ ಹೆಚ್ಚಿನ ಭಾಗದವರು ಸೌಲನ ಮನೆಯವರೊಂದಿಗೆ ಸೇರಿಕೊಂಡಿದ್ದರು.
וּמִן־בְּנֵי אֶפְרַיִם עֶשְׂרִים אֶלֶף וּשְׁמוֹנֶה מֵאוֹת גִּבּוֹרֵי חַיִל אַנְשֵׁי שֵׁמוֹת לְבֵית אֲבוֹתָֽם׃ 30
೩೦ಎಫ್ರಾಯೀಮಿನ ಆಯಾ ಗೋತ್ರಗಳಲ್ಲಿ ಪ್ರಸಿದ್ಧರಾದ ಇಪ್ಪತ್ತು ಸಾವಿರದ ಎಂಟುನೂರು ಮಹಾಯುದ್ಧವೀರರು,
וּמֵֽחֲצִי מַטֵּה מְנַשֶּׁה שְׁמוֹנָה עָשָׂר אָלֶף אֲשֶׁר נִקְּבוּ בְּשֵׁמוֹת לָבוֹא לְהַמְלִיךְ אֶת־דָּוִֽיד׃ 31
೩೧ಮನಸ್ಸೆಯ ಅರ್ಧ ಕುಲದಿಂದ ದಾವೀದನ ಪಟ್ಟಾಭಿಷೇಕಕ್ಕೆ ಹೋಗಬೇಕೆಂದು ಹೆಸರುಹೆಸರಾಗಿ ನೇಮಿಸಲ್ಪಟ್ಟವರು ಹದಿನೆಂಟು ಸಾವಿರ ಸೈನಿಕರು.
וּמִבְּנֵי יִשָּׂשכָר יוֹדְעֵי בִינָה לַֽעִתִּים לָדַעַת מַה־יַּעֲשֶׂה יִשְׂרָאֵל רָאשֵׁיהֶם מָאתַיִם וְכׇל־אֲחֵיהֶם עַל־פִּיהֶֽם׃ 32
೩೨ಇಸ್ಸಾಕಾರ್ಯರಿಂದ ಇನ್ನೂರು ಮುಖ್ಯಸ್ಥರು. ಇವರು ಸಮಯೋಚಿತಜ್ಞಾನವುಳ್ಳವರಾಗಿ ಇಸ್ರಾಯೇಲರು ಮಾಡತಕ್ಕದ್ದನ್ನು ಅರಿತವರಾಗಿದ್ದರು. ಇವರ ಸಹೋದರರೆಲ್ಲರೂ ಇವರ ಆಜ್ಞೆಗೆ ಬದ್ಧರಾಗಿದ್ದರು.
מִזְּבֻלוּן יוֹצְאֵי צָבָא עֹרְכֵי מִלְחָמָה בְּכׇל־כְּלֵי מִלְחָמָה חֲמִשִּׁים אָלֶף וְלַעֲדֹר בְּלֹא־לֵב וָלֵֽב׃ 33
೩೩ಜೆಬುಲೂನ್ಯರಿಂದ ಯುದ್ಧಪ್ರವೀಣರೂ, ಸರ್ವಾಯುಧಗಳನ್ನು ಧರಿಸಿ ವ್ಯೂಹಕಟ್ಟ ಬಲ್ಲವರೂ, ದೃಢಚಿತ್ತರೂ ಆದರು ಐವತ್ತು ಸಾವಿರ ಸೈನಿಕರು.
וּמִנַּפְתָּלִי שָׂרִים אָלֶף וְעִמָּהֶם בְּצִנָּה וַחֲנִית שְׁלֹשִׁים וְשִׁבְעָה אָֽלֶף׃ 34
೩೪ನಫ್ತಾಲಿಯರಿಂದ ಸಾವಿರ ನಾಯಕರೂ, ಗುರಾಣಿಬರ್ಜಿಗಳನ್ನು ಹಿಡಿದಿರುವ ಮೂವತ್ತೇಳು ಸಾವಿರ ಸೈನಿಕರೂ,
וּמִן־הַדָּנִי עֹרְכֵי מִלְחָמָה עֶשְׂרִֽים־וּשְׁמוֹנָה אֶלֶף וְשֵׁשׁ מֵאֽוֹת׃ 35
೩೫ದಾನ್ಯರಿಂದ ಇಪ್ಪತ್ತೆಂಟು ಸಾವಿರದ ಆರುನೂರು ಯುದ್ಧನಿಪುಣರು.
וּמֵֽאָשֵׁר יוֹצְאֵי צָבָא לַעֲרֹךְ מִלְחָמָה אַרְבָּעִים אָֽלֶף׃ 36
೩೬ಆಶೇರ್ಯರಿಂದ ಯುದ್ಧಕ್ಕೆ ಸಿದ್ಧರಾದ ನಲ್ವತ್ತು ಸಾವಿರ ಯುದ್ಧನಿಪುಣರು,
וּמֵעֵבֶר לַיַּרְדֵּן מִן־הָראוּבֵנִי וְהַגָּדִי וַחֲצִי ׀ שֵׁבֶט מְנַשֶּׁה בְּכֹל כְּלֵי צְבָא מִלְחָמָה מֵאָה וְעֶשְׂרִים אָֽלֶף׃ 37
೩೭ಯೊರ್ದನಿನ ಆಚೆಯಲ್ಲಿದ್ದ ರೂಬೇನ್, ಗಾದ್, ಅರ್ಧಮನಸ್ಸೆ ಕುಲಗಳಿಂದ ಸರ್ವಾಯುದ್ಧಧಾರಿಗಳಾದ ಒಂದು ಲಕ್ಷದ ಇಪ್ಪತ್ತು ಸಾವಿರ ಸೈನಿಕರು.
כׇּל־אֵלֶּה אַנְשֵׁי מִלְחָמָה עֹדְרֵי מַעֲרָכָה בְּלֵבָב שָׁלֵם בָּאוּ חֶבְרוֹנָה לְהַמְלִיךְ אֶת־דָּוִיד עַל־כׇּל־יִשְׂרָאֵל וְגַם כׇּל־שֵׁרִית יִשְׂרָאֵל לֵב אֶחָד לְהַמְלִיךְ אֶת־דָּוִֽיד׃ 38
೩೮ದಾವೀದನನ್ನು ಇಸ್ರಾಯೇಲರ ಅರಸನನ್ನಾಗಿ ಮಾಡುವುದಕ್ಕೋಸ್ಕರ ಯುದ್ಧನಿಪುಣರಾದ ಈ ಎಲ್ಲಾ ಸೈನಿಕರು ಪೂರ್ಣಮನಸ್ಸಿನಿಂದ ಹೆಬ್ರೋನಿಗೆ ಬಂದರು. ಉಳಿದ ಎಲ್ಲಾ ಇಸ್ರಾಯೇಲರು ದಾವೀದನಿಗೆ ರಾಜ್ಯಾಭಿಷೇಕಮಾಡುವುದರಲ್ಲಿ ಏಕಮನಸ್ಸುಳ್ಳವರಾಗಿದ್ದರು.
וַיִּֽהְיוּ־שָׁם עִם־דָּוִיד יָמִים שְׁלוֹשָׁה אֹכְלִים וְשׁוֹתִים כִּי־הֵכִינוּ לָהֶם אֲחֵיהֶֽם׃ 39
೩೯ಅವರು ಅಲ್ಲಿ ಮೂರು ದಿನ ದಾವೀದನ ಸಂಗಡ ಇದ್ದು ಅನ್ನ ಪಾನಗಳನ್ನು ತೆಗೆದುಕೊಂಡರು. ಅವರ ಸಹೋದರರು ಅವರಿಗೋಸ್ಕರ ಎಲ್ಲವನ್ನೂ ಸಿದ್ಧಪಡಿಸಿದರು.
וְגַם הַקְּרֽוֹבִים־אֲלֵיהֶם עַד־יִשָּׂשכָר וּזְבֻלוּן וְנַפְתָּלִי מְבִיאִים לֶחֶם בַּחֲמוֹרִים וּבַגְּמַלִּים וּבַפְּרָדִים ׀ וּֽבַבָּקָר מַאֲכָל קֶמַח דְּבֵלִים וְצִמּוּקִים וְיַיִן־וְשֶׁמֶן וּבָקָר וְצֹאן לָרֹב כִּי שִׂמְחָה בְּיִשְׂרָאֵֽל׃ 40
೪೦ಇದಲ್ಲದೆ ಇಸ್ಸಾಕಾರ್, ಜೆಬುಲೂನ್, ನಫ್ತಾಲಿ ಮೊದಲುಗೊಂಡು ಎಲ್ಲಾ ಸಮೀಪ ಪ್ರಾಂತ್ಯಗಳವರು ಎತ್ತು, ಕತ್ತೆ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ಆಹಾರ ಪದಾರ್ಥಗಳನ್ನು ಹೊತ್ತುಕೊಂಡು ಬಂದರು. ಅವರು ತರತರದ ರೊಟ್ಟಿ, ಅಂಜೂರಹಣ್ಣಿನ ಉಂಡೆ, ಒಣಗಿದ ದ್ರಾಕ್ಷಿಗೊಂಚಲು, ದ್ರಾಕ್ಷಾರಸ, ಎಣ್ಣೆ, ಅನೇಕ ದನಕುರಿಗಳು ಇವುಗಳನ್ನು ತಂದರು. ಇಸ್ರಾಯೇಲರೊಳಗೆ ಮಹಾ ಸಂಭ್ರಮ ಸಂತೋಷವಿತ್ತು.

< דברי הימים א 12 >