< מלכים א 12 >
וַיֵּלֶךְ רְחַבְעָם שְׁכֶם כִּי שְׁכֶם בָּא כׇל־יִשְׂרָאֵל לְהַמְלִיךְ אֹתֽוֹ׃ | 1 |
೧ರೆಹಬ್ಬಾಮನು ಶೆಕೆಮಿಗೆ ಹೋದನು. ಅಲ್ಲಿ ಎಲ್ಲಾ ಇಸ್ರಾಯೇಲರೂ ಅವನನ್ನು ಅರಸನನ್ನಾಗಿ ಮಾಡುವುದಕ್ಕೆ ಸೇರಿಬಂದಿದ್ದರು.
וַיְהִי כִּשְׁמֹעַ ׀ יָרׇבְעָם בֶּן־נְבָט וְהוּא עוֹדֶנּוּ בְמִצְרַיִם אֲשֶׁר בָּרַח מִפְּנֵי הַמֶּלֶךְ שְׁלֹמֹה וַיֵּשֶׁב יָרׇבְעָם בְּמִצְרָֽיִם׃ | 2 |
೨ಇದಲ್ಲದೆ ಅರಸನಾದ ಸೊಲೊಮೋನನಿಗೆ ತಪ್ಪಿಸಿಕೊಂಡು ಐಗುಪ್ತಕ್ಕೆ ಓಡಿಹೋಗಿದ್ದ ನೆಬಾಟನ ಮಗನಾದ ಯಾರೊಬ್ಬಾಮನನ್ನು ಇದನ್ನು ಕೇಳಿ ಕರೆಯಿಸಿಕೊಂಡಿದ್ದರು.
וַֽיִּשְׁלְחוּ וַיִּקְרְאוּ־לוֹ (ויבאו) [וַיָּבֹא] יָרׇבְעָם וְכׇל־קְהַל יִשְׂרָאֵל וַֽיְדַבְּרוּ אֶל־רְחַבְעָם לֵאמֹֽר׃ | 3 |
೩ಯಾರೊಬ್ಬಾಮನು ನಡೆದ ಸಂಗತಿಗಳ ವರ್ತಮಾನವನ್ನು ಕೇಳಿ ಎಲ್ಲಾ ಇಸ್ರಾಯೇಲರೊಡನೆ ರೆಹಬ್ಬಾಮನ ಬಳಿಗೆ ಹೋಗಿ,
אָבִיךָ הִקְשָׁה אֶת־עֻלֵּנוּ וְאַתָּה עַתָּה הָקֵל מֵעֲבֹדַת אָבִיךָ הַקָּשָׁה וּמֵעֻלּוֹ הַכָּבֵד אֲשֶׁר־נָתַן עָלֵינוּ וְנַעַבְדֶֽךָּ׃ | 4 |
೪ಅವನಿಗೆ, “ನಿನ್ನ ತಂದೆಯು ನಮ್ಮ ಮೇಲೆ ಭಾರವಾದ ನೊಗವನ್ನು ಹೇರಿದನು. ನಿನ್ನ ತಂದೆಯು ನೇಮಿಸಿದ ಬಿಟ್ಟೀಕೆಲಸವನ್ನು ನೀನು ಕಡಿಮೆ ಮಾಡಿ ನಮ್ಮ ಮೇಲಿರುವ ಭಾರವಾದ ನೊಗವನ್ನು ಹಗುರ ಮಾಡುವುದಾದರೆ ನಾವು ನಿನಗೆ ಸೇವೆಮಾಡುತ್ತೇವೆ” ಎಂದು ಹೇಳಿದರು.
וַיֹּאמֶר אֲלֵיהֶם לְכוּ־עֹד שְׁלֹשָׁה יָמִים וְשׁוּבוּ אֵלָי וַיֵּלְכוּ הָעָֽם׃ | 5 |
೫ಅದಕ್ಕೆ ಅವನು, “ನೀವು ಈಗ ಹೋಗಿ ಮೂರು ದಿನಗಳಾದ ನಂತರ ಪುನಃ ಬನ್ನಿರಿ” ಎಂದು ಉತ್ತರಕೊಟ್ಟನು. ಜನರು ಹಿಂದಿರುಗಿ ಹೋದರು.
וַיִּוָּעַץ הַמֶּלֶךְ רְחַבְעָם אֶת־הַזְּקֵנִים אֲשֶׁר־הָיוּ עֹמְדִים אֶת־פְּנֵי שְׁלֹמֹה אָבִיו בִּֽהְיֹתוֹ חַי לֵאמֹר אֵיךְ אַתֶּם נוֹעָצִים לְהָשִׁיב אֶת־הָעָם־הַזֶּה דָּבָֽר׃ | 6 |
೬ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನ ಕಾಲದಲ್ಲಿ ಮಂತ್ರಿಗಳಾಗಿದ್ದ ಹಿರಿಯರನ್ನು ಕರೆಯಿಸಿ ತಾನು ಜನರಿಗೆ ಕೊಡತಕ್ಕ ಉತ್ತರದ ವಿಷಯದಲ್ಲಿ ಅವರ ಆಲೋಚನೆಯನ್ನು ಕೇಳಿದನು.
(וידבר) [וַיְדַבְּרוּ] אֵלָיו לֵאמֹר אִם־הַיּוֹם תִּֽהְיֶה־עֶבֶד לָעָם הַזֶּה וַעֲבַדְתָּם וַעֲנִיתָם וְדִבַּרְתָּ אֲלֵיהֶם דְּבָרִים טוֹבִים וְהָיוּ לְךָ עֲבָדִים כׇּל־הַיָּמִֽים׃ | 7 |
೭ಅವರು ಅವನಿಗೆ, “ನೀನು ಈ ಹೊತ್ತು ಈ ಜನರ ಮಾತನ್ನು ಕೇಳಿ, ಅವರಿಗೆ ವಿನಯವಾಗಿ ಒಳ್ಳೆಯ ಉತ್ತರ ಕೊಡುವುದಾದರೆ ಅವರು ಯಾವಾಗಲೂ ನಿನ್ನ ಸೇವಕರಾಗಿರುವರು” ಎಂದರು.
וַֽיַּעֲזֹב אֶת־עֲצַת הַזְּקֵנִים אֲשֶׁר יְעָצֻהוּ וַיִּוָּעַץ אֶת־הַיְלָדִים אֲשֶׁר גָּדְלוּ אִתּוֹ אֲשֶׁר הָעֹמְדִים לְפָנָֽיו׃ | 8 |
೮ಆದರೆ ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ ತನ್ನ ಸಂಗಡ ಬೆಳೆದ ತನ್ನ ಮಂತ್ರಿಗಳಾದ ಯೌವನಸ್ಥರನ್ನು ಕರೆಯಿಸಿ,
וַיֹּאמֶר אֲלֵיהֶם מָה אַתֶּם נֽוֹעָצִים וְנָשִׁיב דָּבָר אֶת־הָעָם הַזֶּה אֲשֶׁר דִּבְּרוּ אֵלַי לֵאמֹר הָקֵל מִן־הָעֹל אֲשֶׁר־נָתַן אָבִיךָ עָלֵֽינוּ׃ | 9 |
೯“ನನ್ನ ತಂದೆಯು ಹೇರಿದ ನೊಗವನ್ನು ಹಗುರಮಾಡಬೇಕೆಂದು ಬೇಡಿಕೊಳ್ಳುವ ಈ ಜನರಿಗೆ ಯಾವ ಉತ್ತರವನ್ನು ಕೊಡಬೇಕು, ಈ ವಿಷಯದಲ್ಲಿ ನಿಮ್ಮ ಆಲೋಚನೆ ಏನು?” ಎಂದು ಕೇಳಿದನು.
וַיְדַבְּרוּ אֵלָיו הַיְלָדִים אֲשֶׁר גָּדְלוּ אִתּוֹ לֵאמֹר כֹּה־תֹאמַר לָעָם הַזֶּה אֲשֶׁר דִּבְּרוּ אֵלֶיךָ לֵאמֹר אָבִיךָ הִכְבִּיד אֶת־עֻלֵּנוּ וְאַתָּה הָקֵל מֵעָלֵינוּ כֹּה תְּדַבֵּר אֲלֵיהֶם קׇטׇנִּי עָבָה מִמׇּתְנֵי אָבִֽי׃ | 10 |
೧೦ಅವರು ಅವನಿಗೆ, “ನಿನ್ನ ತಂದೆಯು ನಮ್ಮ ಮೇಲೆ ಹೇರಿರುವ ನೊಗವನ್ನು ಹಗುರಮಾಡು ಎಂಬುದಾಗಿ ನಿನ್ನನ್ನು ಬೇಡಿಕೊಂಡ ಜನರಿಗೆ ನೀನು, ‘ನನ್ನ ತಂದೆಯ ನಡುವಿಗಿಂತ ನನ್ನ ಕಿರಿಬೆರಳು ದಪ್ಪವಾಗಿದೆ.
וְעַתָּה אָבִי הֶעְמִיס עֲלֵיכֶם עֹל כָּבֵד וַאֲנִי אוֹסִיף עַֽל־עֻלְּכֶם אָבִי יִסַּר אֶתְכֶם בַּשּׁוֹטִים וַאֲנִי אֲיַסֵּר אֶתְכֶם בָּעַקְרַבִּֽים׃ | 11 |
೧೧ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹಾಕಿರುವುದು ನಿಜ. ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ. ನಾನಾದರೋ ನಿಮ್ಮನ್ನು ಮುಳ್ಳುಕೊರಡೆಗಳಿಂದ ದಂಡಿಸುವೆನು’ ಎಂಬುದಾಗಿ ಹೇಳಬೇಕು” ಎಂದು ಉತ್ತರಕೊಟ್ಟನು.
וַיָּבוֹ יָרׇבְעָם וְכׇל־הָעָם אֶל־רְחַבְעָם בַּיּוֹם הַשְּׁלִישִׁי כַּאֲשֶׁר דִּבֶּר הַמֶּלֶךְ לֵאמֹר שׁוּבוּ אֵלַי בַּיּוֹם הַשְּׁלִישִֽׁי׃ | 12 |
೧೨ಯಾರೊಬ್ಬಾಮನೂ ಮತ್ತು ಎಲ್ಲಾ ಜನರೂ ಅರಸನಾದ ರೆಹಬ್ಬಾಮನ ಅಪ್ಪಣೆಯಂತೆ ಮೂರನೆಯ ದಿನದಲ್ಲಿ ತಿರುಗಿ ಅವನ ಬಳಿಗೆ ಬಂದರು.
וַיַּעַן הַמֶּלֶךְ אֶת־הָעָם קָשָׁה וַֽיַּעֲזֹב אֶת־עֲצַת הַזְּקֵנִים אֲשֶׁר יְעָצֻֽהוּ׃ | 13 |
೧೩ಅರಸನು ಅವರಿಗೆ ಕಠಿಣವಾದ ಉತ್ತರವನ್ನು ಕೊಟ್ಟನು. ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ ಯೌವನಸ್ಥರ ಆಲೋಚನೆಗನುಸಾರವಾಗಿ ಜನರಿಗೆ,
וַיְדַבֵּר אֲלֵיהֶם כַּעֲצַת הַיְלָדִים לֵאמֹר אָבִי הִכְבִּיד אֶֽת־עֻלְּכֶם וַאֲנִי אֹסִיף עַֽל־עֻלְּכֶם אָבִי יִסַּר אֶתְכֶם בַּשּׁוֹטִים וַאֲנִי אֲיַסֵּר אֶתְכֶם בָּעַקְרַבִּֽים׃ | 14 |
೧೪“ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹಾಕಿರುವುದು ನಿಜ. ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ, ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ. ನಾನಾದರೋ ನಿಮ್ಮನ್ನು ಮುಳ್ಳು ಕೊರಡೆಗಳಿಂದ ದಂಡಿಸುವೆನು” ಎಂದು ನುಡಿದನು.
וְלֹא־שָׁמַע הַמֶּלֶךְ אֶל־הָעָם כִּֽי־הָיְתָה סִבָּה מֵעִם יְהֹוָה לְמַעַן הָקִים אֶת־דְּבָרוֹ אֲשֶׁר דִּבֶּר יְהֹוָה בְּיַד אֲחִיָּה הַשִּֽׁילֹנִי אֶל־יָרׇבְעָם בֶּן־נְבָֽט׃ | 15 |
೧೫ಅವನು ಜನರ ಮಾತನ್ನು ಕೇಳದೇ ಹೋದದ್ದು ಯೆಹೋವನಿಂದಲೇ. ಈ ಪ್ರಕಾರ ಯೆಹೋವನು ಶಿಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.
וַיַּרְא כׇּל־יִשְׂרָאֵל כִּי לֹא־שָׁמַע הַמֶּלֶךְ אֲלֵהֶם וַיָּשִׁבוּ הָעָם אֶת־הַמֶּלֶךְ ׀ דָּבָר ׀ לֵאמֹר מַה־לָּנוּ חֵלֶק בְּדָוִד וְלֹא־נַחֲלָה בְּבֶן־יִשַׁי לְאֹהָלֶיךָ יִשְׂרָאֵל עַתָּה רְאֵה בֵיתְךָ דָּוִד וַיֵּלֶךְ יִשְׂרָאֵל לְאֹהָלָֽיו׃ | 16 |
೧೬ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲವೆಂದೂ ತಿಳಿದು ಇಸ್ರಾಯೇಲರೆಲ್ಲರೂ ಅವನಿಗೆ, “ದಾವೀದನಲ್ಲಿ ನಮಗೇನು ಪಾಲು? ಇಷಯನ ಮಗನಲ್ಲಿ ನಮಗೇನು ಬಾಧ್ಯತೆ? ಇಸ್ರಾಯೇಲರೇ, ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಿರಿ, ದಾವೀದನವರೇ ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ” ಎಂದು ಹೇಳಿ ತಮ್ಮ ತಮ್ಮ ನಿವಾಸಗಳಿಗೆ ಹೋದರು.
וּבְנֵי יִשְׂרָאֵל הַיֹּשְׁבִים בְּעָרֵי יְהוּדָה וַיִּמְלֹךְ עֲלֵיהֶם רְחַבְעָֽם׃ | 17 |
೧೭ಯೆಹೂದ್ಯ ಪ್ರಾಂತ್ಯದಲ್ಲಿದ್ದ ಇಸ್ರಾಯೇಲರಾದರೋ ರೆಹಬ್ಬಾಮನ ಅಧೀನದಲ್ಲಿದ್ದರು.
וַיִּשְׁלַח הַמֶּלֶךְ רְחַבְעָם אֶת־אֲדֹרָם אֲשֶׁר עַל־הַמַּס וַיִּרְגְּמוּ כׇל־יִשְׂרָאֵל בּוֹ אֶבֶן וַיָּמֹת וְהַמֶּלֶךְ רְחַבְעָם הִתְאַמֵּץ לַעֲלוֹת בַּמֶּרְכָּבָה לָנוּס יְרֽוּשָׁלָֽ͏ִם׃ | 18 |
೧೮ರೆಹಬ್ಬಾಮನು ಬಿಟ್ಟೀ ಕೆಲಸದವರ ಮೇಲ್ವಿಚಾರಕನಾದ ಅದೋರಾಮನನ್ನು ಇಸ್ರಾಯೇಲರ ಬಳಿಗೆ ಕಳುಹಿಸಲು ಅವರು ಅವನನ್ನು ಕಲ್ಲೆಸೆದು ಕೊಂದರು. ಅರಸನಾದ ರೆಹಬ್ಬಾಮನು ಬೇಗನೆ ರಥವನ್ನೇರಿ ಯೆರೂಸಲೇಮಿಗೆ ಓಡಿಹೋದನು.
וַיִּפְשְׁעוּ יִשְׂרָאֵל בְּבֵית דָּוִד עַד הַיּוֹם הַזֶּֽה׃ | 19 |
೧೯ಇಸ್ರಾಯೇಲರು ಅಂದಿನಿಂದ ಇಂದಿನವರೆಗೂ ದಾವೀದನ ಕುಟುಂಬದವರೊಡನೆ ಸಮಾಧಾನವಾಗಲೇ ಇಲ್ಲ.
וַיְהִי כִּשְׁמֹעַ כׇּל־יִשְׂרָאֵל כִּֽי־שָׁב יָרׇבְעָם וַֽיִּשְׁלְחוּ וַיִּקְרְאוּ אֹתוֹ אֶל־הָעֵדָה וַיַּמְלִיכוּ אֹתוֹ עַל־כׇּל־יִשְׂרָאֵל לֹא הָיָה אַחֲרֵי בֵית־דָּוִד זוּלָתִי שֵׁבֶט־יְהוּדָה לְבַדּֽוֹ׃ | 20 |
೨೦ಯಾರೊಬ್ಬಾಮನು ಹಿಂತಿರುಗಿ ಬಂದಿದ್ದಾನೆಂಬ ವರ್ತಮಾನವು ಇಸ್ರಾಯೇಲರಿಗೆ ತಿಳಿದಾಗ ಅವರೆಲ್ಲರೂ ಅವನನ್ನು ನೆರೆದ ಸಭೆಯ ಮುಂದೆ ಕರೆಯಿಸಿ ತಮ್ಮ ಅರಸನನ್ನಾಗಿ ನೇಮಿಸಿಕೊಂಡರು. ದಾವೀದನ ಕುಟುಂಬದವರನ್ನು ಯೆಹೂದ ಕುಲವೇ ಹೊರತು ಬೇರೆ ಯಾವ ಕುಲವೂ ಹಿಂಬಾಲಿಸಲಿಲ್ಲ.
(ויבאו) [וַיָּבֹא] רְחַבְעָם יְרוּשָׁלַ͏ִם וַיַּקְהֵל אֶת־כׇּל־בֵּית יְהוּדָה וְאֶת־שֵׁבֶט בִּנְיָמִן מֵאָה וּשְׁמֹנִים אֶלֶף בָּחוּר עֹשֵׂה מִלְחָמָה לְהִלָּחֵם עִם־בֵּית יִשְׂרָאֵל לְהָשִׁיב אֶת־הַמְּלוּכָה לִרְחַבְעָם בֶּן־שְׁלֹמֹֽה׃ | 21 |
೨೧ಸೊಲೊಮೋನನ ಮಗನಾದ ರೆಹಬ್ಬಾಮನು ಯೆರೂಸಲೇಮನ್ನು ತಲುಪಿದ ನಂತರ ಇಸ್ರಾಯೇಲರಿಗೆ ವಿರೋಧವಾಗಿ ಯುದ್ಧಮಾಡುವುದಕ್ಕೂ ರಾಜ್ಯವನ್ನು ತಿರುಗಿ ತನಗೆ ವಶಪಡಿಸಿಕೊಳ್ಳುವುದಕ್ಕೂ ಯೆಹೂದ ಬೆನ್ಯಾಮೀನ್ ಕುಲಗಳಿಂದ ಲಕ್ಷದ ಎಂಬತ್ತು ಸಾವಿರ ಶ್ರೇಷ್ಠ ಸೈನಿಕರನ್ನು ಕೂಡಿಸಿದನು.
וַֽיְהִי דְּבַר הָאֱלֹהִים אֶל־שְׁמַעְיָה אִישׁ־הָאֱלֹהִים לֵאמֹֽר׃ | 22 |
೨೨ಆಗ ದೇವರ ಮನುಷ್ಯನಾದ ಶೆಮಾಯನಿಗೆ ದೈವೋತ್ತರವುಂಟಾಯಿತು.
אֱמֹר אֶל־רְחַבְעָם בֶּן־שְׁלֹמֹה מֶלֶךְ יְהוּדָה וְאֶל־כׇּל־בֵּית יְהוּדָה וּבִנְיָמִין וְיֶתֶר הָעָם לֵאמֹֽר׃ | 23 |
೨೩“ನೀನು ಹೋಗಿ, ಸೊಲೊಮೋನನ ಮಗನೂ ಯೆಹೂದದ ಅರಸನೂ ಆದ ರೆಹಬ್ಬಾಮನಿಗೂ, ಯೆಹೂದ ಬೆನ್ಯಾಮೀನ್ ಕುಲಗಳವರಿಗೂ ಮತ್ತು ಉಳಿದ ಜನರಿಗೂ
כֹּה אָמַר יְהֹוָה לֹא־תַעֲלוּ וְלֹא־תִלָּחֲמוּן עִם־אֲחֵיכֶם בְּנֵֽי־יִשְׂרָאֵל שׁוּבוּ אִישׁ לְבֵיתוֹ כִּי מֵאִתִּי נִֽהְיָה הַדָּבָר הַזֶּה וַֽיִּשְׁמְעוּ אֶת־דְּבַר יְהֹוָה וַיָּשֻׁבוּ לָלֶכֶת כִּדְבַר יְהֹוָֽה׃ | 24 |
೨೪‘ಯೆಹೋವನ ಮಾತನ್ನು ಕೇಳಿರಿ, ನೀವು ನಿಮ್ಮ ಸಹೋದರರಾದ ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕೆ ಹೋಗಬಾರದು. ಎಲ್ಲರೂ ಹಿಂತಿರುಗಿ ಹೋಗಿರಿ. ಈ ಕಾರ್ಯವು ಯೆಹೋವನಿಂದಾಗಿದೆ’ ಎಂದು ಹೇಳಬೇಕು” ಎಂಬ ಯೆಹೋವನ ಮಾತನ್ನು ಜನರಿಗೆ ಹೇಳಿದನು. ಆಗ ಅವರು ಯೆಹೋವನ ಮಾತನ್ನು ಕೇಳಿ ವಿಧೇಯರಾಗಿ ಹಿಂದಿರುಗಿ ಹೋದರು.
וַיִּבֶן יָרׇבְעָם אֶת־שְׁכֶם בְּהַר אֶפְרַיִם וַיֵּשֶׁב בָּהּ וַיֵּצֵא מִשָּׁם וַיִּבֶן אֶת־פְּנוּאֵֽל׃ | 25 |
೨೫ಯಾರೊಬ್ಬಾಮನು ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿನ ಶೆಕೆಮ್ ಪಟ್ಟಣವನ್ನು ಭದ್ರಪಡಿಸಿ ಅಲ್ಲಿ ವಾಸಿಸಿದನು. ಅಲ್ಲಿಂದ ಪೆನೂವೇಲಿಗೆ ಹೋಗಿ ಅದನ್ನೂ ಭದ್ರಪಡಿಸಿದನು.
וַיֹּאמֶר יָרׇבְעָם בְּלִבּוֹ עַתָּה תָּשׁוּב הַמַּמְלָכָה לְבֵית דָּוִֽד׃ | 26 |
೨೬ಅವನು ತನ್ನ ಮನಸ್ಸಿನಲ್ಲಿ, “ರಾಜ್ಯವು ಪುನಃ ದಾವೀದನ ಕುಟುಂಬದವರಿಗೆ ಆಗುವುದೋ ಏನೋ,
אִֽם־יַעֲלֶה ׀ הָעָם הַזֶּה לַעֲשׂוֹת זְבָחִים בְּבֵית־יְהֹוָה בִּירוּשָׁלַ͏ִם וְשָׁב לֵב הָעָם הַזֶּה אֶל־אֲדֹנֵיהֶם אֶל־רְחַבְעָם מֶלֶךְ יְהוּדָה וַהֲרָגֻנִי וְשָׁבוּ אֶל־רְחַבְעָם מֶלֶךְ־יְהוּדָֽה׃ | 27 |
೨೭ಜನರು ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಯಜ್ಞಸಮರ್ಪಣೆಗಾಗಿ ಹೋಗುವುದಾದರೆ, ಅವರ ಮನಸ್ಸು ಅವರ ಒಡೆಯನೂ ಯೆಹೂದದ ಅರಸನೂ ಆದ ರೆಹಬ್ಬಾಮನ ಕಡೆಗೆ ತಿರುಗಿತು. ಅವರು ನನ್ನನ್ನು ಕೊಂದು ಅವನ ಬಳಿಗೆ ಹೋದಾರು” ಅಂದುಕೊಂಡನು.
וַיִּוָּעַץ הַמֶּלֶךְ וַיַּעַשׂ שְׁנֵי עֶגְלֵי זָהָב וַיֹּאמֶר אֲלֵהֶם רַב־לָכֶם מֵעֲלוֹת יְרוּשָׁלַ͏ִם הִנֵּה אֱלֹהֶיךָ יִשְׂרָאֵל אֲשֶׁר הֶעֱלוּךָ מֵאֶרֶץ מִצְרָֽיִם׃ | 28 |
೨೮ಅವನು ಬಹಳವಾಗಿ ಆಲೋಚಿಸಿ, ಕಡೆಯಲ್ಲಿ ಬಂಗಾರದ ಎರಡು ಬಸವನ ಮೂರ್ತಿಗಳನ್ನು ಮಾಡಿಸಿ ಇಸ್ರಾಯೇಲರಿಗೆ, “ನೀವು ಜಾತ್ರೆಗಾಗಿ ಯೆರೂಸಲೇಮಿಗೆ ಹೋದದ್ದು ಸಾಕಾಯಿತು, ಇಗೋ, ನಿಮ್ಮನ್ನು ಐಗುಪ್ತದಿಂದ ಕರೆತಂದ ದೇವರುಗಳು ಇಲ್ಲಿರುತ್ತವೆ” ಎಂದು ಹೇಳಿದನು.
וַיָּשֶׂם אֶת־הָאֶחָד בְּבֵֽית־אֵל וְאֶת־הָאֶחָד נָתַן בְּדָֽן׃ | 29 |
೨೯ನಂತರ ಅವನು ಅವುಗಳಲ್ಲಿ ಒಂದನ್ನು ಬೇತೇಲಿನಲ್ಲಿರಿಸಿ, ಇನ್ನೊಂದನ್ನು ದಾನಿಗೆ ಕಳುಹಿಸಿದನು.
וַיְהִי הַדָּבָר הַזֶּה לְחַטָּאת וַיֵּלְכוּ הָעָם לִפְנֵי הָאֶחָד עַד־דָּֽן׃ | 30 |
೩೦ಇದು ಪಾಪಕ್ಕೆ ಕಾರಣವಾಯಿತು. ಜನರು ಈ ಎರಡನೆಯ ವಿಗ್ರಹವನ್ನು ಮೆರವಣಿಗೆಯಾಗಿ ದಾನಿಗೆ ಒಯ್ದರು.
וַיַּעַשׂ אֶת־בֵּית בָּמוֹת וַיַּעַשׂ כֹּֽהֲנִים מִקְצוֹת הָעָם אֲשֶׁר לֹא־הָיוּ מִבְּנֵי לֵוִֽי׃ | 31 |
೩೧ಇದಲ್ಲದೆ ಅವನು ಪೂಜಾಗಿರಿಗಳ ಮೇಲೆ ಗುಡಿಗಳನ್ನು ಕಟ್ಟಿಸಿ, ಲೇವಿಯರಲ್ಲದ ಸಾಮಾನ್ಯ ಜನರನ್ನು ಯಾಜಕರನ್ನಾಗಿ ನೇಮಿಸಿದನು.
וַיַּעַשׂ יָרׇבְעָם ׀ חָג בַּחֹדֶשׁ הַשְּׁמִינִי בַחֲמִשָּֽׁה־עָשָׂר יוֹם ׀ לַחֹדֶשׁ כֶּחָג ׀ אֲשֶׁר בִּיהוּדָה וַיַּעַל עַל־הַמִּזְבֵּחַ כֵּן עָשָׂה בְּבֵֽית־אֵל לְזַבֵּחַ לָעֲגָלִים אֲשֶׁר־עָשָׂה וְהֶעֱמִיד בְּבֵית אֵל אֶת־כֹּהֲנֵי הַבָּמוֹת אֲשֶׁר עָשָֽׂה׃ | 32 |
೩೨ಅವನು ಎಂಟನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ, “ಬೇತೇಲಿನಲ್ಲಿ ಯೆಹೂದ ದೇಶದ ಜಾತ್ರೆಗೆ ಸರಿಯಾದ ಜಾತ್ರೆಯು ನಡೆಯಬೇಕು” ಎಂದು ಅಪ್ಪಣೆ ಮಾಡಿ, ತಾನು ಅಲ್ಲಿಗೆ ಹೋಗಿ ಅಲ್ಲಿ ನಿಲ್ಲಿಸಿದ ಬಸವನ ಮೂರ್ತಿಗಳಿಗೋಸ್ಕರ ಯಜ್ಞವೇದಿಯ ಮೇಲೆ ಯಜ್ಞ ಮಾಡಿದನು. ತಾನು ಏರ್ಪಡಿಸಿದ ಪೂಜಾಸ್ಥಳಗಳ ಯಾಜಕರನ್ನು ಬೇತೇಲಿನ ದೇವಸ್ಥಾನದ ಸೇವೆಗೆ ನೇಮಿಸಿದನು.
וַיַּעַל עַֽל־הַמִּזְבֵּחַ ׀ אֲשֶׁר־עָשָׂה בְּבֵֽית־אֵל בַּחֲמִשָּׁה עָשָׂר יוֹם בַּחֹדֶשׁ הַשְּׁמִינִי בַּחֹדֶשׁ אֲשֶׁר־בָּדָא (מלבד) [מִלִּבּוֹ] וַיַּעַשׂ חָג לִבְנֵי יִשְׂרָאֵל וַיַּעַל עַל־הַמִּזְבֵּחַ לְהַקְטִֽיר׃ | 33 |
೩೩ಇಸ್ರಾಯೇಲರು ಎಂಟನೆಯ ತಿಂಗಳ ಹದಿನೈದನೆಯ ದಿನದಲ್ಲಿ ಹಬ್ಬವನ್ನಾಚರಿಸಬೇಕೆಂದು ಯಾರೊಬ್ಬಾಮನು ಸ್ವ ಇಚ್ಛೆಯಿಂದ ಗೊತ್ತುಮಾಡಿ ಆ ಸಮಯಕ್ಕೆ ತಾನೂ ಬೇತೇಲಿನ ಯಜ್ಞವೇದಿಯ ಬಳಿಗೆ ಹೋಗಿ ಧೂಪಹಾಕುವುದಕ್ಕಾಗಿ ಅದರ ಮೆಟ್ಟಲುಗಳನ್ನು ಹತ್ತುತ್ತಿದ್ದನು.