< מלכים א 15 >
וּבִשְׁנַת שְׁמֹנֶה עֶשְׂרֵה לַמֶּלֶךְ יָרׇבְעָם בֶּן־נְבָט מָלַךְ אֲבִיָּם עַל־יְהוּדָֽה׃ | 1 |
೧ನೆಬಾಟನ ಮಗನಾದ ಯಾರೊಬ್ಬಾಮನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಬೀಯಾಮನು ಯೆಹೂದದ ಅರಸನಾದನು.
שָׁלֹשׁ שָׁנִים מָלַךְ בִּירוּשָׁלָ͏ִם וְשֵׁם אִמּוֹ מַעֲכָה בַּת־אֲבִישָׁלֽוֹם׃ | 2 |
೨ಅವನು ಯೆರೂಸಲೇಮಿನಲ್ಲಿ ಮೂರು ವರ್ಷ ಆಳ್ವಿಕೆ ಮಾಡಿದನು. ಅಬೀಷಾಲೋಮನ ಮಗಳಾದ ಮಾಕಾ ಎಂಬಾಕೆಯು ಅವನ ತಾಯಿ.
וַיֵּלֶךְ בְּכׇל־חַטֹּאות אָבִיו אֲשֶׁר־עָשָׂה לְפָנָיו וְלֹא־הָיָה לְבָבוֹ שָׁלֵם עִם־יְהֹוָה אֱלֹהָיו כִּלְבַב דָּוִד אָבִֽיו׃ | 3 |
೩ತನ್ನ ತಂದೆಯು ಮಾಡಿದ ಎಲ್ಲಾ ಪಾಪಕೃತ್ಯಗಳನ್ನು ಅವನೂ ಮಾಡಿದನು. ಅವನ ಪೂರ್ವಿಕನಾದ ದಾವೀದನು ದೇವರಾದ ಯೆಹೋವನನ್ನು ಯಥಾರ್ಥಮನಸ್ಸಿನಿಂದ ಸೇವಿಸಿದಂತೆ ಅವನು ಸೇವಿಸಲಿಲ್ಲ.
כִּי לְמַעַן דָּוִד נָתַן יְהֹוָה אֱלֹהָיו לוֹ נִיר בִּירוּשָׁלָ͏ִם לְהָקִים אֶת־בְּנוֹ אַחֲרָיו וּֽלְהַעֲמִיד אֶת־יְרוּשָׁלָֽ͏ִם׃ | 4 |
೪ಆದರೂ ಹಿತ್ತಿಯನಾದ ಊರೀಯನ ವಿಷಯದ ಹೊರತಾಗಿ ಬೇರೆ ಯಾವ ವಿಷಯದಲ್ಲಿಯೂ ತನ್ನ ಆಜ್ಞೆಗಳನ್ನು ಮೀರದೆ ಜೀವದಿಂದಿರುವವರೆಗೂ ತನ್ನ ಚಿತ್ತಕ್ಕನುಸಾರವಾಗಿ ನಡೆದ ದಾವೀದನ ನಿಮಿತ್ತವಾಗಿ ಯೆಹೋವನು ಯೆರೂಸಲೇಮಿನಲ್ಲಿರುವ ಅವನ ದೀಪವನ್ನು ಆರಿಸಲಿಲ್ಲ.
אֲשֶׁר עָשָׂה דָוִד אֶת־הַיָּשָׁר בְּעֵינֵי יְהֹוָה וְלֹא־סָר מִכֹּל אֲשֶׁר־צִוָּהוּ כֹּל יְמֵי חַיָּיו רַק בִּדְבַר אוּרִיָּה הַֽחִתִּֽי׃ | 5 |
೫ಯೆರೂಸಲೇಮನ್ನೂ ಅವನ ಸಂತಾನವನ್ನೂ ಉಳಿಸಿದನು.
וּמִלְחָמָה הָיְתָה בֵין־רְחַבְעָם וּבֵין יָרׇבְעָם כׇּל־יְמֵי חַיָּֽיו׃ | 6 |
೬ರೆಹಬ್ಬಾಮನಿಗೂ ಮತ್ತು ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧನಡೆಯುತ್ತಿತ್ತು.
וְיֶתֶר דִּבְרֵי אֲבִיָּם וְכׇל־אֲשֶׁר עָשָׂה הֲלוֹא־הֵם כְּתוּבִים עַל־סֵפֶר דִּבְרֵי הַיָּמִים לְמַלְכֵי יְהוּדָה וּמִלְחָמָה הָיְתָה בֵּין אֲבִיָּם וּבֵין יָרׇבְעָֽם׃ | 7 |
೭ಅಬೀಯಾಮನ ಉಳಿದ ಚರಿತ್ರೆಯೂ ಮತ್ತು ಅವನ ಎಲ್ಲಾ ಕೃತ್ಯಗಳೂ ಯೆಹೂದ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ. ಅಬೀಯಾಮನಿಗೂ ಮತ್ತು ಯಾರೊಬ್ಬಾಮನಿಗೂ ಯುದ್ಧ ನಡೆಯುತ್ತಿತ್ತು.
וַיִּשְׁכַּב אֲבִיָּם עִם־אֲבֹתָיו וַיִּקְבְּרוּ אֹתוֹ בְּעִיר דָּוִד וַיִּמְלֹךְ אָסָא בְנוֹ תַּחְתָּֽיו׃ | 8 |
೮ಅಬೀಯಾಮನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದಲ್ಲಿ ಸಮಾಧಿ ಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಸನು ಅರಸನಾದನು.
וּבִשְׁנַת עֶשְׂרִים לְיָרׇבְעָם מֶלֶךְ יִשְׂרָאֵל מָלַךְ אָסָא מֶלֶךְ יְהוּדָֽה׃ | 9 |
೯ಇಸ್ರಾಯೇಲರ ಅರಸನಾದ ಯಾರೊಬ್ಬಾಮನ ಆಳ್ವಿಕೆಯ ಇಪ್ಪತ್ತನೆಯ ವರ್ಷದಲ್ಲಿ ಆಸನು ಯೆಹೂದದ ಅರಸನಾದನು.
וְאַרְבָּעִים וְאַחַת שָׁנָה מָלַךְ בִּירֽוּשָׁלָ͏ִם וְשֵׁם אִמּוֹ מַעֲכָה בַּת־אֲבִישָׁלֽוֹם׃ | 10 |
೧೦ಅವನು ಯೆರೂಸಲೇಮನ್ನು ನಲ್ವತ್ತೊಂದು ವರ್ಷ ಆಳ್ವಿಕೆ ಮಾಡಿದನು. ಅಬೀಷಾಲೋಮನ ಮಗಳಾದ ಮಾಕಾ ಎಂಬಾಕೆಯು ಅವನ ತಾಯಿ.
וַיַּעַשׂ אָסָא הַיָּשָׁר בְּעֵינֵי יְהֹוָה כְּדָוִד אָבִֽיו׃ | 11 |
೧೧ಅವನು ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು.
וַיַּעֲבֵר הַקְּדֵשִׁים מִן־הָאָרֶץ וַיָּסַר אֶת־כׇּל־הַגִּלֻּלִים אֲשֶׁר עָשׂוּ אֲבֹתָֽיו׃ | 12 |
೧೨ಅವನು ವಿಟರನ್ನು ದೇಶದಿಂದ ಹೊರಡಿಸಿ, ತನ್ನ ಹಿರಿಯರು ಮಾಡಿಸಿಟ್ಟ ವಿಗ್ರಹಗಳನ್ನೆಲ್ಲಾ ತೆಗೆದುಹಾಕಿದನು.
וְגַם ׀ אֶת־מַעֲכָה אִמּוֹ וַיְסִרֶהָ מִגְּבִירָה אֲשֶׁר־עָשְׂתָה מִפְלֶצֶת לָאֲשֵׁרָה וַיִּכְרֹת אָסָא אֶת־מִפְלַצְתָּהּ וַיִּשְׂרֹף בְּנַחַל קִדְרֽוֹן׃ | 13 |
೧೩ಅವನ ತಾಯಿಯಾದ ಮಾಕಳೂ ಅಶೇರ ದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದ್ದರಿಂದ ಆಸನು ಆಕೆಯನ್ನು ಗದ್ದುಗೆಯಿಂದ ತಳ್ಳಿ, ಆ ಮೂರ್ತಿಯನ್ನು ಕಡಿದು, ಕಿದ್ರೋನ್ ಹಳ್ಳದ ಹತ್ತಿರ ಸುಟ್ಟು ಹಾಕಿದನು.
וְהַבָּמוֹת לֹא־סָרוּ רַק לְבַב־אָסָא הָיָה שָׁלֵם עִם־יְהֹוָה כׇּל־יָמָֽיו׃ | 14 |
೧೪ಅವನು ದೇಶದಲ್ಲಿದ್ದ ಪೂಜಾಸ್ಥಳಗಳನ್ನು ಹಾಳುಮಾಡದಿದ್ದರೂ ತನ್ನ ಜೀವಮಾನದಲ್ಲೆಲ್ಲಾ ಪ್ರಾಮಾಣಿಕವಾದ ಮನಸ್ಸಿನಿಂದ ಸತ್ಯಮಾರ್ಗದಲ್ಲಿ ಯೆಹೋವನಿಗೆ ನಡೆದುಕೊಂಡನು.
וַיָּבֵא אֶת־קׇדְשֵׁי אָבִיו (וקדשו) [וְקׇדְשֵׁי] בֵּית יְהֹוָה כֶּסֶף וְזָהָב וְכֵלִֽים׃ | 15 |
೧೫ಇದಲ್ಲದೆ ತನ್ನ ತಂದೆಯೂ ತಾನೂ ಪ್ರತಿಷ್ಠಿಸಿದ ಬೆಳ್ಳಿ ಬಂಗಾರವನ್ನು ಪಾತ್ರೆಗಳನ್ನೂ ಯೆಹೋವನ ಆಲಯದಲ್ಲಿ ತಂದಿಟ್ಟನು.
וּמִלְחָמָה הָיְתָה בֵּין אָסָא וּבֵין בַּעְשָׁא מֶלֶךְ־יִשְׂרָאֵל כׇּל־יְמֵיהֶֽם׃ | 16 |
೧೬ಅವನಿಗೂ ಇಸ್ರಾಯೇಲರ ಅರಸನಾದ ಬಾಷನಿಗೂ ಯಾವಾಗಲೂ ಯುದ್ಧ ನಡೆಯುತ್ತಿತ್ತು
וַיַּעַל בַּעְשָׁא מֶֽלֶךְ־יִשְׂרָאֵל עַל־יְהוּדָה וַיִּבֶן אֶת־הָרָמָה לְבִלְתִּי תֵּת יֹצֵא וָבָא לְאָסָא מֶלֶךְ יְהוּדָֽה׃ | 17 |
೧೭ಇಸ್ರಾಯೇಲರ ಅರಸನಾದ ಬಾಷನು ಯೆಹೂದ್ಯರಿಗೆ ವಿರುದ್ಧವಾಗಿ ಯುದ್ಧಮಾಡಿ ಯಾರೂ ಯೆಹೂದ್ಯರ ಅರಸನಾದ ಆಸನ ಬಳಿಗೆ ಹೋಗಿ ಬರುವುದಕ್ಕಾಗದಂತೆ ರಾಮ ಎಂಬ ಕೋಟೆಯನ್ನು ಕಟ್ಟಿಸಿದನು.
וַיִּקַּח אָסָא אֶת־כׇּל־הַכֶּסֶף וְהַזָּהָב הַנּֽוֹתָרִים ׀ בְּאוֹצְרוֹת בֵּית־יְהֹוָה וְאֶת־אֽוֹצְרוֹת בֵּית (מלך) [הַמֶּלֶךְ] וַֽיִּתְּנֵם בְּיַד־עֲבָדָיו וַיִּשְׁלָחֵם הַמֶּלֶךְ אָסָא אֶל־בֶּן־הֲדַד בֶּן־טַבְרִמֹּן בֶּן־חֶזְיוֹן מֶלֶךְ אֲרָם הַיֹּשֵׁב בְּדַמֶּשֶׂק לֵאמֹֽר׃ | 18 |
೧೮ಆಗ ಆಸನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿ ಉಳಿದಿದ್ದ ಬೆಳ್ಳಿ ಮತ್ತು ಬಂಗಾರವನ್ನು ತೆಗೆದುಕೊಂಡು, ಅದನ್ನು ದೂತರ ಮುಖಾಂತರವಾಗಿ ದಮಸ್ಕದಲ್ಲಿದ್ದ ಅರಾಮ್ಯರ ಅರಸನೂ, ಹೆಜ್ಯೋನನ ಮೊಮ್ಮಗನೂ, ಟಬ್ರಿಮ್ಮೋನನ ಮಗನೂ ಆದ ಬೆನ್ಹದದನಿಗೆ ಕೊಟ್ಟು ಕಳುಹಿಸಿದನು.
בְּרִית בֵּינִי וּבֵינֶךָ בֵּין אָבִי וּבֵין אָבִיךָ הִנֵּה שָׁלַחְתִּי לְךָ שֹׁחַד כֶּסֶף וְזָהָב לֵךְ הָפֵרָה אֶת־בְּרִֽיתְךָ אֶת־בַּעְשָׁא מֶלֶךְ־יִשְׂרָאֵל וְיַעֲלֶה מֵֽעָלָֽי׃ | 19 |
೧೯ಆತನು ಅವನಿಗೆ “ನನಗೂ ನಿನಗೂ, ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆಯಾದಂತೆ, ಇಗೋ ನಿನಗೆ ಬೆಳ್ಳಿ ಮತ್ತು ಬಂಗಾರವನ್ನು ಕಾಣಿಕೆಯಾಗಿ ಕಳುಹಿಸಿದ್ದೇನೆ. ಇಸ್ರಾಯೇಲರ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವಂತೆ ಅವನ ಸಂಗಡ ನೀನು ಮಾಡಿಕೊಂಡಿರುವ ಒಡಂಬಡಿಕೆಯನ್ನು ಮುರಿದುಬಿಡು” ಎಂದು ಹೇಳಿದನು.
וַיִּשְׁמַע בֶּן־הֲדַד אֶל־הַמֶּלֶךְ אָסָא וַיִּשְׁלַח אֶת־שָׂרֵי הַחֲיָלִים אֲשֶׁר־לוֹ עַל־עָרֵי יִשְׂרָאֵל וַיַּךְ אֶת־עִיּוֹן וְאֶת־דָּן וְאֵת אָבֵל בֵּֽית־מַעֲכָה וְאֵת כׇּל־כִּנְרוֹת עַל כׇּל־אֶרֶץ נַפְתָּלִֽי׃ | 20 |
೨೦ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ತನ್ನ ಸೈನ್ಯಾಧಿಪತಿಗಳನ್ನು ಯುದ್ಧಕ್ಕಾಗಿ ಇಸ್ರಾಯೇಲರ ಪಟ್ಟಣಗಳಿಗೆ ಕಳುಹಿಸಿದನು. ಇವರು ಇಯ್ಯೋನ್, ದಾನ್, ಆಬೇಲ್ಬೇತ್ಮಾಕಾ, ಕಿನ್ನೆರೋತ್ ಪ್ರದೇಶ, ನಫ್ತಾಲ್ಯರ ಎಲ್ಲಾ ಪ್ರಾಂತ್ಯ ಇವುಗಳನ್ನು ಹಾಳುಮಾಡಿದರು.
וַֽיְהִי כִּשְׁמֹעַ בַּעְשָׁא וַיֶּחְדַּל מִבְּנוֹת אֶת־הָרָמָה וַיֵּשֶׁב בְּתִרְצָֽה׃ | 21 |
೨೧ಬಾಷನು ಈ ಸುದ್ದಿಯನ್ನು ಕೇಳಿದಾಗ ರಾಮಕೋಟೆಯನ್ನು ಕಟ್ಟಿಸುವುದನ್ನು ಬಿಟ್ಟು ತಿರ್ಚಕ್ಕೆ ಹೋಗಿ ಅಲ್ಲಿಯೇ ವಾಸಮಾಡಲು ತೊಡಗಿದನು.
וְהַמֶּלֶךְ אָסָא הִשְׁמִיעַ אֶת־כׇּל־יְהוּדָה אֵין נָקִי וַיִּשְׂאוּ אֶת־אַבְנֵי הָֽרָמָה וְאֶת־עֵצֶיהָ אֲשֶׁר בָּנָה בַּעְשָׁא וַיִּבֶן בָּם הַמֶּלֶךְ אָסָא אֶת־גֶּבַע בִּנְיָמִן וְאֶת־הַמִּצְפָּֽה׃ | 22 |
೨೨ಅನಂತರ ಅರಸನಾದ ಆಸನು ಯೆಹೂದ್ಯರಲ್ಲಿ ಒಬ್ಬನನ್ನೂ ಬಿಡದೆ ಎಲ್ಲರನ್ನೂ ಕರೆಯಿಸಿ, ಬಾಷನು ರಾಮಕೋಟೆಗಾಗಿ ತರಿಸಿದ್ದ ಕಲ್ಲು, ಮರಗಳನ್ನು ಅವರ ಮುಖಾಂತರವಾಗಿ ತೆಗೆದುಕೊಂಡು ಹೋಗಿ ಬೆನ್ಯಾಮೀನ್ಯರ ಗೆಬ, ಮಿಚ್ಪೆ ಎಂಬ ಪಟ್ಟಣಗಳನ್ನು ಭದ್ರಪಡಿಸಿದನು.
וְיֶתֶר כׇּל־דִּבְרֵֽי־אָסָא וְכׇל־גְּבוּרָתוֹ וְכׇל־אֲשֶׁר עָשָׂה וְהֶֽעָרִים אֲשֶׁר בָּנָה הֲלֹא־הֵמָּה כְתוּבִים עַל־סֵפֶר דִּבְרֵי הַיָּמִים לְמַלְכֵי יְהוּדָה רַק לְעֵת זִקְנָתוֹ חָלָה אֶת־רַגְלָֽיו׃ | 23 |
೨೩ಆಸನ ಉಳಿದ ಚರಿತ್ರೆ, ಅವನ ಎಲ್ಲಾ ಪರಾಕ್ರಮಕೃತ್ಯಗಳು, ಅವನು ಪಟ್ಟಣಗಳನ್ನು ಕಟ್ಟಿಸಿದ ಸಂಗತಿಗಳೂ, ಅವನ ಇತರ ಕಾರ್ಯಗಳು ಯೆಹೂದ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ. ಮುಪ್ಪಿನಲ್ಲಿ ಅವನ ಕಾಲುಗಳಿಗೆ ರೋಗವುಂಟಾಯಿತು.
וַיִּשְׁכַּב אָסָא עִם־אֲבֹתָיו וַיִּקָּבֵר עִם־אֲבֹתָיו בְּעִיר דָּוִד אָבִיו וַיִּמְלֹךְ יְהוֹשָׁפָט בְּנוֹ תַּחְתָּֽיו׃ | 24 |
೨೪ಅವನು ತನ್ನ ಪೂರ್ವಿಕರ ಬಳಿಗೆ ಸೇರಿದನು. ಅವನ ಶವವನ್ನು ಅವನ ಪೂರ್ವಿಕನಾದ ದಾವೀದನ ಪಟ್ಟಣದೊಳಗೆ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯೆಹೋಷಾಫಾಟನು ಅರಸನಾದನು.
וְנָדָב בֶּן־יָרׇבְעָם מָלַךְ עַל־יִשְׂרָאֵל בִּשְׁנַת שְׁתַּיִם לְאָסָא מֶלֶךְ יְהוּדָה וַיִּמְלֹךְ עַל־יִשְׂרָאֵל שְׁנָתָֽיִם׃ | 25 |
೨೫ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಯಾರೊಬ್ಬಾಮನ ಮಗನಾದ ನಾದಾಬನು ಇಸ್ರಾಯೇಲರ ಅರಸನಾಗಿ ಎರಡು ವರ್ಷ ಆಳ್ವಿಕೆ ಮಾಡಿದನು.
וַיַּעַשׂ הָרַע בְּעֵינֵי יְהֹוָה וַיֵּלֶךְ בְּדֶרֶךְ אָבִיו וּבְחַטָּאתוֹ אֲשֶׁר הֶחֱטִיא אֶת־יִשְׂרָאֵֽל׃ | 26 |
೨೬ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ ತನ್ನ ತಂದೆಯ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
וַיִּקְשֹׁר עָלָיו בַּעְשָׁא בֶן־אֲחִיָּה לְבֵית יִשָּׂשכָר וַיַּכֵּהוּ בַעְשָׁא בְּגִבְּתוֹן אֲשֶׁר לַפְּלִשְׁתִּים וְנָדָב וְכׇל־יִשְׂרָאֵל צָרִים עַֽל־גִּבְּתֽוֹן׃ | 27 |
೨೭ಅವನು ಇಸ್ರಾಯೇಲರೊಡನೆ ಫಿಲಿಷ್ಟಿಯರ ವಶದಲ್ಲಿದ್ದ ಗಿಬ್ಬೆತೋನ್ ಎಂಬ ಪಟ್ಟಣಕ್ಕೆ ಮುತ್ತಿಗೆ ಹಾಕಿದಾಗ ಇಸ್ಸಾಕಾರನ ಕುಲದವನೂ, ಅಹೀಯನ ಮಗನೂ ಆದ ಬಾಷನೆಂಬುವವನು ಅವನಿಗೆ ವಿರುದ್ಧವಾಗಿ ಒಳಸಂಚು ಮಾಡಿ ಅವನನ್ನು ಕೊಂದನು.
וַיְמִתֵהוּ בַעְשָׁא בִּשְׁנַת שָׁלֹשׁ לְאָסָא מֶלֶךְ יְהוּדָה וַיִּמְלֹךְ תַּחְתָּֽיו׃ | 28 |
೨೮ಬಾಷನು ಯೆಹೂದ ಅರಸನಾದ ಆಸನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಅವನನ್ನು ಕೊಂದು ಅವನಿಗೆ ಬದಲಾಗಿ ತಾನು ಅರಸನಾದನು.
וַיְהִי כְמׇלְכוֹ הִכָּה אֶת־כׇּל־בֵּית יָרׇבְעָם לֹא־הִשְׁאִיר כׇּל־נְשָׁמָה לְיָרׇבְעָם עַד־הִשְׁמִדוֹ כִּדְבַר יְהֹוָה אֲשֶׁר דִּבֶּר בְּיַד־עַבְדּוֹ אֲחִיָּה הַשִּׁילֹנִֽי׃ | 29 |
೨೯ಅರಸನಾದ ಕೂಡಲೆ ಯಾರೊಬ್ಬಾಮನ ಮನೆಯಲ್ಲಿ ಒಬ್ಬನನ್ನೂ ಜೀವದಿಂದುಳಿಸದೆ ಎಲ್ಲರನ್ನೂ ಸಂಹರಿಸಿದನು. ಹೀಗೆ ಯೆಹೋವನು ಶೀಲೋವಿನ ಪ್ರವಾದಿಯಾದ ಅಹೀಯನ ಮುಖಾಂತರವಾಗಿ ಹೇಳಿಸಿದ ಮಾತು ನೆರವೇರಿತು.
עַל־חַטֹּאות יָֽרׇבְעָם אֲשֶׁר חָטָא וַאֲשֶׁר הֶחֱטִיא אֶת־יִשְׂרָאֵל בְּכַעְסוֹ אֲשֶׁר הִכְעִיס אֶת־יְהֹוָה אֱלֹהֵי יִשְׂרָאֵֽל׃ | 30 |
೩೦ಯಾರೊಬ್ಬಾಮನು ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನೂ ಪಾಪಕ್ಕೆ ಪ್ರೇರೇಪಿಸಿ, ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪಬರುವಂತೆ ಮಾಡಿದ್ದರಿಂದ ಹೀಗಾಯಿತು.
וְיֶתֶר דִּבְרֵי נָדָב וְכׇל־אֲשֶׁר עָשָׂה הֲלֹא־הֵם כְּתוּבִים עַל־סֵפֶר דִּבְרֵי הַיָּמִים לְמַלְכֵי יִשְׂרָאֵֽל׃ | 31 |
೩೧ನಾದಾಬನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
וּמִלְחָמָה הָיְתָה בֵּין אָסָא וּבֵין בַּעְשָׁא מֶֽלֶךְ־יִשְׂרָאֵל כׇּל־יְמֵיהֶֽם׃ | 32 |
೩೨ಆಸನಿಗೂ ಇಸ್ರಾಯೇಲರ ಅರಸನಾದ ಬಾಷನಿಗೂ ಯಾವಾಗಲೂ ಯುದ್ಧನಡೆಯುತ್ತಿತ್ತು.
בִּשְׁנַת שָׁלֹשׁ לְאָסָא מֶלֶךְ יְהוּדָה מָלַךְ בַּעְשָׁא בֶן־אֲחִיָּה עַל־כׇּל־יִשְׂרָאֵל בְּתִרְצָה עֶשְׂרִים וְאַרְבַּע שָׁנָֽה׃ | 33 |
೩೩ಯೆಹೂದದ ಅರಸನಾದ ಆಸನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಅಹೀಯನ ಮಗನಾದ ಬಾಷನು ಇಸ್ರಾಯೇಲರ ಅರಸನಾಗಿ ತಿರ್ಚದಲ್ಲಿದ್ದು, ಇಪ್ಪತ್ತನಾಲ್ಕು ವರ್ಷ ಆಳ್ವಿಕೆ ಮಾಡಿದನು.
וַיַּעַשׂ הָרַע בְּעֵינֵי יְהֹוָה וַיֵּלֶךְ בְּדֶרֶךְ יָרׇבְעָם וּבְחַטָּאתוֹ אֲשֶׁר הֶחֱטִיא אֶת־יִשְׂרָאֵֽל׃ | 34 |
೩೪ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.