< מלכים א 15 >
וּבִשְׁנַת שְׁמֹנֶה עֶשְׂרֵה לַמֶּלֶךְ יָרׇבְעָם בֶּן־נְבָט מָלַךְ אֲבִיָּם עַל־יְהוּדָֽה׃ | 1 |
ನೆಬಾಟನ ಮಗ ಯಾರೊಬ್ಬಾಮನ ಹದಿನೆಂಟನೆಯ ವರ್ಷದಲ್ಲಿ ಅಬಿಯಾಮನು ಯೆಹೂದದ ಅರಸನಾಗಿ,
שָׁלֹשׁ שָׁנִים מָלַךְ בִּירוּשָׁלָ͏ִם וְשֵׁם אִמּוֹ מַעֲכָה בַּת־אֲבִישָׁלֽוֹם׃ | 2 |
ಯೆರೂಸಲೇಮಿನಲ್ಲಿ ಮೂರು ವರ್ಷ ಆಳಿದನು. ಅವನ ತಾಯಿಯ ಹೆಸರು ಮಾಕಾ, ಇವಳು ಅಬ್ಷಾಲೋಮನ ಮಗಳಾಗಿದ್ದಳು.
וַיֵּלֶךְ בְּכׇל־חַטֹּאות אָבִיו אֲשֶׁר־עָשָׂה לְפָנָיו וְלֹא־הָיָה לְבָבוֹ שָׁלֵם עִם־יְהֹוָה אֱלֹהָיו כִּלְבַב דָּוִד אָבִֽיו׃ | 3 |
ಅಬಿಯಾಮನು, ತನ್ನ ಪಿತೃವಾದ ದಾವೀದನ ಹೃದಯದ ಪ್ರಕಾರ, ಅವನ ಹೃದಯವು ತನ್ನ ದೇವರಾದ ಯೆಹೋವ ದೇವರ ಮುಂದೆ ಪೂರ್ಣವಾಗಿರದೆ, ತನಗೆ ಮುಂಚೆ ಇದ್ದ ತನ್ನ ತಂದೆ ಮಾಡಿದ ಸಮಸ್ತ ಪಾಪಗಳಲ್ಲಿ ನಡೆದನು.
כִּי לְמַעַן דָּוִד נָתַן יְהֹוָה אֱלֹהָיו לוֹ נִיר בִּירוּשָׁלָ͏ִם לְהָקִים אֶת־בְּנוֹ אַחֲרָיו וּֽלְהַעֲמִיד אֶת־יְרוּשָׁלָֽ͏ִם׃ | 4 |
ಅವನ ತರುವಾಯ ಅವನ ಮಗನನ್ನು ನೇಮಿಸುವುದಕ್ಕೂ, ಯೆರೂಸಲೇಮನ್ನು ಸ್ಥಿರಪಡಿಸುವುದಕ್ಕೂ, ತನ್ನ ದೇವರಾದ ಯೆಹೋವ ದೇವರು ದಾವೀದನ ನಿಮಿತ್ತ ಯೆರೂಸಲೇಮಿನಲ್ಲಿ ಅವನಿಗೆ ದೀಪವನ್ನು ಉಳಿಸಿದರು.
אֲשֶׁר עָשָׂה דָוִד אֶת־הַיָּשָׁר בְּעֵינֵי יְהֹוָה וְלֹא־סָר מִכֹּל אֲשֶׁר־צִוָּהוּ כֹּל יְמֵי חַיָּיו רַק בִּדְבַר אוּרִיָּה הַֽחִתִּֽי׃ | 5 |
ಏಕೆಂದರೆ ದಾವೀದನು ಹಿತ್ತಿಯನಾದ ಊರೀಯನ ವಿಷಯವೊಂದನ್ನು ಬಿಟ್ಟು, ತನ್ನ ಜೀವಿತದ ಸಮಸ್ತ ದಿವಸಗಳಲ್ಲಿ ಯೆಹೋವ ದೇವರು ತನಗೆ ಆಜ್ಞಾಪಿಸಿದ ಎಲ್ಲಾದಕ್ಕೆ ತೊಲಗದೆ, ಅವರ ದೃಷ್ಟಿಗೆ ಮೆಚ್ಚಿಕೆಯಾದದ್ದನ್ನು ಮಾಡಿದನು.
וּמִלְחָמָה הָיְתָה בֵין־רְחַבְעָם וּבֵין יָרׇבְעָם כׇּל־יְמֵי חַיָּֽיו׃ | 6 |
ಆದರೆ ರೆಹಬ್ಬಾಮನಿಗೂ, ಯಾರೊಬ್ಬಾಮನಿಗೂ ಅವರ ಜೀವಾಂತ್ಯದವರೆಗೆ ಯುದ್ಧ ಉಂಟಾಗಿತ್ತು.
וְיֶתֶר דִּבְרֵי אֲבִיָּם וְכׇל־אֲשֶׁר עָשָׂה הֲלוֹא־הֵם כְּתוּבִים עַל־סֵפֶר דִּבְרֵי הַיָּמִים לְמַלְכֵי יְהוּדָה וּמִלְחָמָה הָיְתָה בֵּין אֲבִיָּם וּבֵין יָרׇבְעָֽם׃ | 7 |
ಅಬಿಯಾಮನ ಮಿಕ್ಕಾದ ಕ್ರಿಯೆಗಳೂ, ಅವನು ಮಾಡಿದ್ದೆಲ್ಲವೂ, ಯೆಹೂದದ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ. ಇವನಿಗೂ ಯಾರೊಬ್ಬಾಮನಿಗೂ ಯುದ್ಧ ನಡೆಯುತ್ತಿತ್ತು.
וַיִּשְׁכַּב אֲבִיָּם עִם־אֲבֹתָיו וַיִּקְבְּרוּ אֹתוֹ בְּעִיר דָּוִד וַיִּמְלֹךְ אָסָא בְנוֹ תַּחְתָּֽיו׃ | 8 |
ಅಬಿಯಾಮನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು, ಅವನ ಶವವನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಮಗ ಆಸನು ಅವನಿಗೆ ಬದಲಾಗಿ ಅರಸನಾದನು.
וּבִשְׁנַת עֶשְׂרִים לְיָרׇבְעָם מֶלֶךְ יִשְׂרָאֵל מָלַךְ אָסָא מֶלֶךְ יְהוּדָֽה׃ | 9 |
ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನ ಇಪ್ಪತ್ತನೆಯ ವರುಷದಲ್ಲಿ ಆಸನು ಯೆಹೂದದ ಮೇಲೆ ಅರಸನಾದನು.
וְאַרְבָּעִים וְאַחַת שָׁנָה מָלַךְ בִּירֽוּשָׁלָ͏ִם וְשֵׁם אִמּוֹ מַעֲכָה בַּת־אֲבִישָׁלֽוֹם׃ | 10 |
ನಾಲ್ವತ್ತೊಂದು ವರುಷ ಅವನು ಯೆರೂಸಲೇಮಿನಲ್ಲಿ ಆಳಿದನು. ಅವನ ಅಜ್ಜಿ ಅಬ್ಷಾಲೋಮನ ಮಗಳಾಗಿದ್ದು ಮಾಕಾ ಎಂಬಾಕೆಯು ಇವನ ತಾಯಿ.
וַיַּעַשׂ אָסָא הַיָּשָׁר בְּעֵינֵי יְהֹוָה כְּדָוִד אָבִֽיו׃ | 11 |
ಆಸನು ತನ್ನ ತಂದೆಯಾದ ದಾವೀದನ ಹಾಗೆ ಯೆಹೋವ ದೇವರ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದನ್ನು ಮಾಡಿದನು.
וַיַּעֲבֵר הַקְּדֵשִׁים מִן־הָאָרֶץ וַיָּסַר אֶת־כׇּל־הַגִּלֻּלִים אֲשֶׁר עָשׂוּ אֲבֹתָֽיו׃ | 12 |
ಅವನು ಪೂಜಾ ಸ್ಥಳದ ಪುರುಷಗಾಮಿಗಳನ್ನು ದೇಶದಲ್ಲಿಂದ ಹೊರಡಿಸಿ, ತನ್ನ ಪಿತೃಗಳು ಮಾಡಿದ ಸಮಸ್ತ ವಿಗ್ರಹಗಳನ್ನು ತೆಗೆದುಹಾಕಿದನು.
וְגַם ׀ אֶת־מַעֲכָה אִמּוֹ וַיְסִרֶהָ מִגְּבִירָה אֲשֶׁר־עָשְׂתָה מִפְלֶצֶת לָאֲשֵׁרָה וַיִּכְרֹת אָסָא אֶת־מִפְלַצְתָּהּ וַיִּשְׂרֹף בְּנַחַל קִדְרֽוֹן׃ | 13 |
ಇದಲ್ಲದೆ, ಆಸನು ತನ್ನ ಅಜ್ಜಿ ಮಾಕ ಎಂಬವಳು ಅಶೇರ ದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದ್ದರಿಂದ, ಅವಳನ್ನು ರಾಜಮಾತೆಯ ಸ್ಥಾನದಿಂದ ತೆಗೆದುಹಾಕಿದನು. ಆ ಮೂರ್ತಿಯನ್ನು ಕಡಿದುಹಾಕಿ ಕಿದ್ರೋನ್ ಹಳ್ಳದ ಹತ್ತಿರ ಸುಟ್ಟುಬಿಟ್ಟನು.
וְהַבָּמוֹת לֹא־סָרוּ רַק לְבַב־אָסָא הָיָה שָׁלֵם עִם־יְהֹוָה כׇּל־יָמָֽיו׃ | 14 |
ಅವನು ಪೂಜಾಸ್ಥಳಗಳನ್ನು ತೆಗೆದು ಹಾಕದಿದ್ದರೂ ಆಸನ ಹೃದಯವು ತನ್ನ ಜೀವಮಾನದಲ್ಲೆಲ್ಲಾ ಯೆಹೋವ ದೇವರ ದೃಷ್ಟಿಯಲ್ಲಿ ದೋಷವಿಲ್ಲದ್ದಾಗಿತ್ತು.
וַיָּבֵא אֶת־קׇדְשֵׁי אָבִיו (וקדשו) [וְקׇדְשֵׁי] בֵּית יְהֹוָה כֶּסֶף וְזָהָב וְכֵלִֽים׃ | 15 |
ತಾನು ಮತ್ತು ತನ್ನ ತಂದೆಯೂ ಪ್ರತಿಷ್ಠಿಸಿದ ಬೆಳ್ಳಿಬಂಗಾರವನ್ನೂ ಸಲಕರಣೆಗಳನ್ನೂ ಯೆಹೋವ ದೇವರ ಆಲಯಕ್ಕೆ ತಂದನು.
וּמִלְחָמָה הָיְתָה בֵּין אָסָא וּבֵין בַּעְשָׁא מֶלֶךְ־יִשְׂרָאֵל כׇּל־יְמֵיהֶֽם׃ | 16 |
ಇದಲ್ಲದೆ ಆಸನಿಗೂ ಇಸ್ರಾಯೇಲಿನ ಅರಸನಾದ ಬಾಷನಿಗೂ, ಅವರ ಜೀವಾಂತ್ಯದವರೆಗೂ ಯುದ್ಧ ನಡೆಯುತ್ತಿತ್ತು.
וַיַּעַל בַּעְשָׁא מֶֽלֶךְ־יִשְׂרָאֵל עַל־יְהוּדָה וַיִּבֶן אֶת־הָרָמָה לְבִלְתִּי תֵּת יֹצֵא וָבָא לְאָסָא מֶלֶךְ יְהוּדָֽה׃ | 17 |
ಆಗ ಇಸ್ರಾಯೇಲಿನ ಅರಸನಾದ ಬಾಷನು ಯೆಹೂದಕ್ಕೆ ವಿರೋಧವಾಗಿ ಬಂದು ಯೆಹೂದದ ಅರಸನಾದ ಆಸನ ಬಳಿಗೆ ಒಳಗಾಗಲೀ, ಹೊರಗಾಗಲೀ ಯಾರೂ ಹೋಗದ ಹಾಗೆ ಸುತ್ತಲೂ ರಾಮ ಎಂಬ ಕೋಟೆಯನ್ನು ಕಟ್ಟಿಸಿದನು.
וַיִּקַּח אָסָא אֶת־כׇּל־הַכֶּסֶף וְהַזָּהָב הַנּֽוֹתָרִים ׀ בְּאוֹצְרוֹת בֵּית־יְהֹוָה וְאֶת־אֽוֹצְרוֹת בֵּית (מלך) [הַמֶּלֶךְ] וַֽיִּתְּנֵם בְּיַד־עֲבָדָיו וַיִּשְׁלָחֵם הַמֶּלֶךְ אָסָא אֶל־בֶּן־הֲדַד בֶּן־טַבְרִמֹּן בֶּן־חֶזְיוֹן מֶלֶךְ אֲרָם הַיֹּשֵׁב בְּדַמֶּשֶׂק לֵאמֹֽר׃ | 18 |
ಆಸನು ಯೆಹೋವ ದೇವರ ಆಲಯದ ಮತ್ತು ತನ್ನ ಅರಮನೆಯ ಬೊಕ್ಕಸಗಳಿಂದ ಮಿಕ್ಕ ಸಮಸ್ತ ಬೆಳ್ಳಿಬಂಗಾರವನ್ನು ತೆಗೆದು, ತನ್ನ ಸೇವಕರ ಕೈಯಲ್ಲಿ ಒಪ್ಪಿಸಿ, ದಮಸ್ಕದಲ್ಲಿ ವಾಸವಾಗಿರುವ ಹೆಜ್ಯೋನನ ಮಗನೂ, ಟಬ್ರಿಮ್ಮೋನನ ಮಗನೂ ಆದ ಅರಾಮಿನ ಅರಸನಾದ ಬೆನ್ಹದದನಿಗೆ ಅವುಗಳನ್ನು ಕಳುಹಿಸಿದನು.
בְּרִית בֵּינִי וּבֵינֶךָ בֵּין אָבִי וּבֵין אָבִיךָ הִנֵּה שָׁלַחְתִּי לְךָ שֹׁחַד כֶּסֶף וְזָהָב לֵךְ הָפֵרָה אֶת־בְּרִֽיתְךָ אֶת־בַּעְשָׁא מֶלֶךְ־יִשְׂרָאֵל וְיַעֲלֶה מֵֽעָלָֽי׃ | 19 |
ಅಲ್ಲದೆ ಅವನಿಗೆ, “ನನ್ನ ತಂದೆ ಮತ್ತು ನಿನ್ನ ತಂದೆಯ ನಡುವೆ ಇದ್ದಂತೆ ನನ್ನ ಮತ್ತು ನಿನ್ನ ನಡುವೆ ಒಡಂಬಡಿಕೆ ಉಂಟು. ಇಗೋ ನಾನು ಬೆಳ್ಳಿಬಂಗಾರವನ್ನು ದಾನವಾಗಿ ನಿನಗೆ ಕಳುಹಿಸಿದ್ದೇನೆ. ಇಸ್ರಾಯೇಲಿನ ಅರಸನಾದ ಬಾಷನು ನನ್ನನ್ನು ಬಿಟ್ಟುಹೋಗುವಂತೆ, ನೀನು ಅವನ ಸಂಗಡ ಮಾಡಿದ ಒಡಂಬಡಿಕೆಯನ್ನು ಮುರಿಯಬೇಕು,” ಎಂದನು.
וַיִּשְׁמַע בֶּן־הֲדַד אֶל־הַמֶּלֶךְ אָסָא וַיִּשְׁלַח אֶת־שָׂרֵי הַחֲיָלִים אֲשֶׁר־לוֹ עַל־עָרֵי יִשְׂרָאֵל וַיַּךְ אֶת־עִיּוֹן וְאֶת־דָּן וְאֵת אָבֵל בֵּֽית־מַעֲכָה וְאֵת כׇּל־כִּנְרוֹת עַל כׇּל־אֶרֶץ נַפְתָּלִֽי׃ | 20 |
ಹಾಗೆಯೇ ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ, ಇಸ್ರಾಯೇಲಿನ ಪಟ್ಟಣಗಳಿಗೆ ವಿರೋಧವಾಗಿ ತನ್ನ ಸೈನ್ಯಾಧಿಪತಿಗಳನ್ನು ಕಳುಹಿಸಿದನು. ಇಯ್ಯೋನ್, ದಾನ್, ಆಬೇಲ್ ಬೇತ್ ಮಾಕಾ ಹಾಗೂ ಸಮಸ್ತ ಕಿನ್ನೆರೆತ್, ಸಮಸ್ತ ನಫ್ತಾಲಿ ಪ್ರಾಂತ ಇವುಗಳನ್ನು ಹಾಳುಮಾಡಿದರು.
וַֽיְהִי כִּשְׁמֹעַ בַּעְשָׁא וַיֶּחְדַּל מִבְּנוֹת אֶת־הָרָמָה וַיֵּשֶׁב בְּתִרְצָֽה׃ | 21 |
ಬಾಷನು ಇದನ್ನು ಕೇಳಿದಾಗ ರಾಮಕೋಟೆ ಕಟ್ಟಿಸುವುದನ್ನು ಬಿಟ್ಟು, ತಿರ್ಚಕ್ಕೆ ಹೋಗಿ ವಾಸಿಸಿದನು.
וְהַמֶּלֶךְ אָסָא הִשְׁמִיעַ אֶת־כׇּל־יְהוּדָה אֵין נָקִי וַיִּשְׂאוּ אֶת־אַבְנֵי הָֽרָמָה וְאֶת־עֵצֶיהָ אֲשֶׁר בָּנָה בַּעְשָׁא וַיִּבֶן בָּם הַמֶּלֶךְ אָסָא אֶת־גֶּבַע בִּנְיָמִן וְאֶת־הַמִּצְפָּֽה׃ | 22 |
ಆಗ ಅರಸನಾದ ಆಸನು ಯೆಹೂದರಲ್ಲಿ ಒಬ್ಬನನ್ನೂ ಬಿಡದೆ ಎಲ್ಲರನ್ನೂ ಕರೆಯಿಸಿ, ಬಾಷನು ಕಟ್ಟಿಸುತ್ತಾ ಇದ್ದ ರಾಮ ಪಟ್ಟಣದ ಕಲ್ಲುಗಳನ್ನೂ, ಅದರ ತೊಲೆಗಳನ್ನೂ ತೆಗೆದುಕೊಂಡುಹೋಗಿ ಅವುಗಳಿಂದ ಬೆನ್ಯಾಮೀನನ ಗಿಬೆಯ ಮತ್ತು ಮಿಚ್ಪೆ ಎಂಬ ನಗರಗಳನ್ನು ಕಟ್ಟಿಸಿದನು.
וְיֶתֶר כׇּל־דִּבְרֵֽי־אָסָא וְכׇל־גְּבוּרָתוֹ וְכׇל־אֲשֶׁר עָשָׂה וְהֶֽעָרִים אֲשֶׁר בָּנָה הֲלֹא־הֵמָּה כְתוּבִים עַל־סֵפֶר דִּבְרֵי הַיָּמִים לְמַלְכֵי יְהוּדָה רַק לְעֵת זִקְנָתוֹ חָלָה אֶת־רַגְלָֽיו׃ | 23 |
ಆಸನ ಉಳಿದ ಎಲ್ಲಾ ಕಾರ್ಯಗಳೂ, ಅವನ ಸಮಸ್ತ ಪರಾಕ್ರಮವೂ, ಅವನು ಮಾಡಿದ್ದೆಲ್ಲವೂ, ಅವನು ಕಟ್ಟಿಸಿದ ಪಟ್ಟಣಗಳೂ, ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ. ಆದರೆ ತನ್ನ ವೃದ್ಧಾಪ್ಯದಲ್ಲಿ ಅವನ ಕಾಲುಗಳಿಗೆ ರೋಗ ತಗುಲಿತು.
וַיִּשְׁכַּב אָסָא עִם־אֲבֹתָיו וַיִּקָּבֵר עִם־אֲבֹתָיו בְּעִיר דָּוִד אָבִיו וַיִּמְלֹךְ יְהוֹשָׁפָט בְּנוֹ תַּחְתָּֽיו׃ | 24 |
ಆಸನು ಮೃತನಾಗಿ ತನ್ನ ಪಿತೃಗಳ ಬಳಿ ಸೇರಿದನು. ತನ್ನ ತಂದೆ ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸಮಾಧಿ ಬಳಿ ಅವನನ್ನು ಹೂಳಿಟ್ಟರು. ಅವನಿಗೆ ಬದಲಾಗಿ ಅವನ ಮಗ ಯೆಹೋಷಾಫಾಟನು ಅರಸನಾದನು.
וְנָדָב בֶּן־יָרׇבְעָם מָלַךְ עַל־יִשְׂרָאֵל בִּשְׁנַת שְׁתַּיִם לְאָסָא מֶלֶךְ יְהוּדָה וַיִּמְלֹךְ עַל־יִשְׂרָאֵל שְׁנָתָֽיִם׃ | 25 |
ಯೆಹೂದದ ಅರಸನಾದ ಆಸನ ಎರಡನೆಯ ವರ್ಷದಲ್ಲಿ ಯಾರೊಬ್ಬಾಮನ ಮಗ ನಾದಾಬನು ಅರಸನಾಗಿ ಎರಡು ವರುಷ ಇಸ್ರಾಯೇಲಿನ ಮೇಲೆ ಆಳಿದನು.
וַיַּעַשׂ הָרַע בְּעֵינֵי יְהֹוָה וַיֵּלֶךְ בְּדֶרֶךְ אָבִיו וּבְחַטָּאתוֹ אֲשֶׁר הֶחֱטִיא אֶת־יִשְׂרָאֵֽל׃ | 26 |
ಆದರೆ ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ಪಾಪಮಾಡಲು ಇಸ್ರಾಯೇಲನ್ನು ಪ್ರೇರೇಪಿಸಿದ ಅವನ ತಂದೆಯ ಪಾಪದಲ್ಲಿಯೂ, ಅವನ ಮಾರ್ಗದಲ್ಲಿಯೂ ನಡೆದನು.
וַיִּקְשֹׁר עָלָיו בַּעְשָׁא בֶן־אֲחִיָּה לְבֵית יִשָּׂשכָר וַיַּכֵּהוּ בַעְשָׁא בְּגִבְּתוֹן אֲשֶׁר לַפְּלִשְׁתִּים וְנָדָב וְכׇל־יִשְׂרָאֵל צָרִים עַֽל־גִּבְּתֽוֹן׃ | 27 |
ನಾದಾಬನೂ, ಸಮಸ್ತ ಇಸ್ರಾಯೇಲರೂ ಫಿಲಿಷ್ಟಿಯರ ಪಟ್ಟಣವಾದ ಗಿಬ್ಬೆತೋನಿಗೆ ಮುತ್ತಿಗೆ ಹಾಕುತ್ತಾ ಇದ್ದರು. ಆದುದರಿಂದ ಇಸ್ಸಾಕಾರನ ಗೋತ್ರದ ಅಹೀಯನ ಮಗ ಬಾಷನು ನಾದಾಬನಿಗೆ ವಿರೋಧವಾಗಿ ಒಳಸಂಚುಮಾಡಿ, ನಾದಾಬನನ್ನು ಕೊಂದುಬಿಟ್ಟನು.
וַיְמִתֵהוּ בַעְשָׁא בִּשְׁנַת שָׁלֹשׁ לְאָסָא מֶלֶךְ יְהוּדָה וַיִּמְלֹךְ תַּחְתָּֽיו׃ | 28 |
ಯೆಹೂದದ ಅರಸನಾದ ಆಸನ ಮೂರನೆಯ ವರುಷದಲ್ಲಿ ಬಾಷನು ನಾದಾಬನನ್ನು ಕೊಂದುಹಾಕಿ, ಅವನಿಗೆ ಬದಲಾಗಿ ಅರಸನಾದನು.
וַיְהִי כְמׇלְכוֹ הִכָּה אֶת־כׇּל־בֵּית יָרׇבְעָם לֹא־הִשְׁאִיר כׇּל־נְשָׁמָה לְיָרׇבְעָם עַד־הִשְׁמִדוֹ כִּדְבַר יְהֹוָה אֲשֶׁר דִּבֶּר בְּיַד־עַבְדּוֹ אֲחִיָּה הַשִּׁילֹנִֽי׃ | 29 |
ಅವನು ಆಳುತ್ತಿರುವಾಗ, ಯಾರೊಬ್ಬಾಮನ ಮನೆಯವರನ್ನೆಲ್ಲಾ ಸಂಹರಿಸಿಬಿಟ್ಟನು. ಯಾರೊಬ್ಬಾಮನು ಪಾಪಮಾಡಿ, ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನಿಮಿತ್ತವಾಗಿಯೂ, ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಕೋಪವನ್ನು ಎಬ್ಬಿಸಿದ ನಿಮಿತ್ತವಾಗಿಯೂ, ಯೆಹೋವ ದೇವರು ಶೀಲೋವಿನವನಾಗಿರುವ ತನ್ನ ಸೇವಕನಾದ ಅಹೀಯನ ಮುಖಾಂತರ ಹೇಳಿದ ಮಾತಿನ ಪ್ರಕಾರವೇ ನೆರವೇರಿತು.
עַל־חַטֹּאות יָֽרׇבְעָם אֲשֶׁר חָטָא וַאֲשֶׁר הֶחֱטִיא אֶת־יִשְׂרָאֵל בְּכַעְסוֹ אֲשֶׁר הִכְעִיס אֶת־יְהֹוָה אֱלֹהֵי יִשְׂרָאֵֽל׃ | 30 |
ಯಾರೊಬ್ಬಾಮನು ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನೂ ಪಾಪಕ್ಕೆ ಪ್ರೇರೇಪಿಸಿ, ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಕೋಪವನ್ನು ಪ್ರಚೋದಿಸಿದ ಕಾರಣ ಇದು ಸಂಭವಿಸಿತು.
וְיֶתֶר דִּבְרֵי נָדָב וְכׇל־אֲשֶׁר עָשָׂה הֲלֹא־הֵם כְּתוּבִים עַל־סֵפֶר דִּבְרֵי הַיָּמִים לְמַלְכֵי יִשְׂרָאֵֽל׃ | 31 |
ನಾದಾಬನ ಮಿಕ್ಕಾದ ಕ್ರಿಯೆಗಳೂ, ಅವನು ಮಾಡಿದ ಸಮಸ್ತವೂ, ಇಸ್ರಾಯೇಲಿನ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
וּמִלְחָמָה הָיְתָה בֵּין אָסָא וּבֵין בַּעְשָׁא מֶֽלֶךְ־יִשְׂרָאֵל כׇּל־יְמֵיהֶֽם׃ | 32 |
ಇದಲ್ಲದೆ ಆಸನಿಗೂ, ಇಸ್ರಾಯೇಲಿನ ಅರಸನಾದ ಬಾಷನಿಗೂ ಅವರ ಜೀವಾಂತ್ಯದವರೆಗೂ ಯುದ್ಧ ನಡೆಯುತ್ತಿತ್ತು.
בִּשְׁנַת שָׁלֹשׁ לְאָסָא מֶלֶךְ יְהוּדָה מָלַךְ בַּעְשָׁא בֶן־אֲחִיָּה עַל־כׇּל־יִשְׂרָאֵל בְּתִרְצָה עֶשְׂרִים וְאַרְבַּע שָׁנָֽה׃ | 33 |
ಯೆಹೂದದ ಅರಸನಾದ ಆಸನ ಮೂರನೆಯ ವರ್ಷದಲ್ಲಿ ಅಹೀಯನ ಮಗ ಬಾಷನು ಸಮಸ್ತ ಇಸ್ರಾಯೇಲಿನ ಮೇಲೆ ತಿರ್ಚದಲ್ಲಿ ಇಪ್ಪತ್ತನಾಲ್ಕು ವರ್ಷ ಆಳಿದನು.
וַיַּעַשׂ הָרַע בְּעֵינֵי יְהֹוָה וַיֵּלֶךְ בְּדֶרֶךְ יָרׇבְעָם וּבְחַטָּאתוֹ אֲשֶׁר הֶחֱטִיא אֶת־יִשְׂרָאֵֽל׃ | 34 |
ಆದರೆ ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ಯಾರೊಬ್ಬಾಮನ ಮಾರ್ಗದಲ್ಲಿಯೂ, ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದಲ್ಲಿಯೂ ಭಾಗಿಯಾದನು.