< מלכים א 19 >
וַיַּגֵּד אַחְאָב לְאִיזֶבֶל אֵת כׇּל־אֲשֶׁר עָשָׂה אֵלִיָּהוּ וְאֵת כׇּל־אֲשֶׁר הָרַג אֶת־כׇּל־הַנְּבִיאִים בֶּחָֽרֶב׃ | 1 |
೧ಎಲೀಯನು ಬಾಳನ ಎಲ್ಲಾ ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದನ್ನೂ ಮತ್ತು ಅವನು ಮಾಡಿದ ಬೇರೆ ಎಲ್ಲಾ ಕಾರ್ಯಗಳನ್ನೂ ಅಹಾಬನು ಈಜೆಬೆಲಳಿಗೆ ತಿಳಿಸಿದನು.
וַתִּשְׁלַח אִיזֶבֶל מַלְאָךְ אֶל־אֵלִיָּהוּ לֵאמֹר כֹּֽה־יַעֲשׂוּן אֱלֹהִים וְכֹה יֽוֹסִפוּן כִּֽי־כָעֵת מָחָר אָשִׂים אֶֽת־נַפְשְׁךָ כְּנֶפֶשׁ אַחַד מֵהֶֽם׃ | 2 |
೨ಈಜೆಬೆಲಳು ಎಲೀಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನೀನು ಪ್ರವಾದಿಗಳ ಪ್ರಾಣವನ್ನು ತೆಗೆದಂತೆ ನಾಳೆ ಇಷ್ಟು ಹೊತ್ತಿಗೆ ನಾನು ನಿನ್ನ ಪ್ರಾಣವನ್ನು ತೆಗೆಯದೇ ಹೋದರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಹೇಳಿಕಳುಹಿಸಿದಳು.
וַיַּרְא וַיָּקׇם וַיֵּלֶךְ אֶל־נַפְשׁוֹ וַיָּבֹא בְּאֵר שֶׁבַע אֲשֶׁר לִיהוּדָה וַיַּנַּח אֶֽת־נַעֲרוֹ שָֽׁם׃ | 3 |
೩ಅವನು ಇದನ್ನು ಕೇಳಿದೊಡನೆ ತನ್ನ ಪ್ರಾಣ ರಕ್ಷಣೆಗಾಗಿ ಅಲ್ಲಿಂದ ಹೊರಟು ಯೆಹೂದದ ಬೇರ್ಷೆಬಕ್ಕೆ ಬಂದು ಅಲ್ಲಿ ತನ್ನ ಸೇವಕನನ್ನು ಬಿಟ್ಟನು.
וְהֽוּא־הָלַךְ בַּמִּדְבָּר דֶּרֶךְ יוֹם וַיָּבֹא וַיֵּשֶׁב תַּחַת רֹתֶם (אחת) [אֶחָד] וַיִּשְׁאַל אֶת־נַפְשׁוֹ לָמוּת וַיֹּאמֶר ׀ רַב עַתָּה יְהֹוָה קַח נַפְשִׁי כִּֽי־לֹא־טוֹב אָנֹכִי מֵאֲבֹתָֽי׃ | 4 |
೪ತರುವಾಯ ತಾನೊಬ್ಬನೇ ಅರಣ್ಯದೊಳಗೆ ಒಂದು ದಿನದ ಪ್ರಯಾಣದಷ್ಟು ದೂರ ಹೋಗಿ ಒಂದು ಜಾಲೀ ಗಿಡದ ಕೆಳಗೆ ಕುಳಿತುಕೊಂಡು ಮರಣವನ್ನು ಅಪೇಕ್ಷಿಸಿದನು. ಅವನು, “ಯೆಹೋವನೇ ನನಗೆ ಸಾಕಾಯಿತು, ನನ್ನ ಪ್ರಾಣವನ್ನು ತೆಗೆದುಬಿಡು. ನಾನು ನನ್ನ ಪೂರ್ವಿಕರಿಗಿಂತ ಉತ್ತಮನಲ್ಲ” ಎಂದು ದೇವರನ್ನು ಪ್ರಾರ್ಥಿಸಿ ಅದೇ ಗಿಡದ ಕೆಳಗೆ ಮಲಗಿಕೊಂಡು ನಿದ್ರೆ ಮಾಡಿದನು.
וַיִּשְׁכַּב וַיִּישַׁן תַּחַת רֹתֶם אֶחָד וְהִנֵּה־זֶה מַלְאָךְ נֹגֵעַ בּוֹ וַיֹּאמֶר לוֹ קוּם אֱכֽוֹל׃ | 5 |
೫ಪಕ್ಕನೆ ಒಬ್ಬ ದೇವದೂತನು ಅವನನ್ನು ತಟ್ಟಿ, “ಎದ್ದು ಊಟ ಮಾಡು” ಎಂದು ಹೇಳಿದನು.
וַיַּבֵּט וְהִנֵּה מְרַאֲשֹׁתָיו עֻגַת רְצָפִים וְצַפַּחַת מָיִם וַיֹּאכַל וַיֵּשְׁתְּ וַיָּשׇׁב וַיִּשְׁכָּֽב׃ | 6 |
೬ಎಲೀಯನು ಎದ್ದು ನೋಡಲಾಗಿ ಕೆಂಡದ ಮೇಲೆ ಸುಟ್ಟ ರೊಟ್ಟಿಯೂ ಒಂದು ತಂಬಿಗೆ ನೀರು ತನ್ನ ತಲೆಯ ಹತ್ತಿರ ಇರುವುದನ್ನು ಕಂಡು ಅವುಗಳನ್ನು ತೆಗೆದುಕೊಂಡು ತಿಂದು, ಕುಡಿದು ತಿರುಗಿ ಮಲಗಿದನು.
וַיָּשׇׁב מַלְאַךְ יְהֹוָה ׀ שֵׁנִית וַיִּגַּע־בּוֹ וַיֹּאמֶר קוּם אֱכֹל כִּי רַב מִמְּךָ הַדָּֽרֶךְ׃ | 7 |
೭ಯೆಹೋವನ ದೂತನು ಎರಡನೆಯ ಸಾರಿ ಬಂದು ಅವನನ್ನು ತಟ್ಟಿ ಅವನಿಗೆ, “ಎದ್ದು ಊಟ ಮಾಡು, ನೀನು ನಿನ್ನ ಶಕ್ತಿ ಮೀರುವಷ್ಟು ಪ್ರಯಾಣಮಾಡಬೇಕಾಗಿದೆ” ಎಂದನು.
וַיָּקׇם וַיֹּאכַל וַיִּשְׁתֶּה וַיֵּלֶךְ בְּכֹחַ ׀ הָאֲכִילָה הַהִיא אַרְבָּעִים יוֹם וְאַרְבָּעִים לַיְלָה עַד הַר הָאֱלֹהִים חֹרֵֽב׃ | 8 |
೮ಅವನು ಎದ್ದು ತಿಂದು, ಕುಡಿದು ಅದರ ಬಲದಿಂದ ನಲ್ವತ್ತು ದಿನ ಹಗಲಿರುಳು ಪ್ರಯಾಣ ಮಾಡಿ ದೇವಗಿರಿಯಾದ
וַיָּבֹא־שָׁם אֶל־הַמְּעָרָה וַיָּלֶן שָׁם וְהִנֵּה דְבַר־יְהֹוָה אֵלָיו וַיֹּאמֶר לוֹ מַה־לְּךָ פֹה אֵלִיָּֽהוּ׃ | 9 |
೯ಹೋರೇಬಿಗೆ ತಲುಪಿ, ಅಲ್ಲಿನ ಒಂದು ಗವಿಯಲ್ಲಿ ಇಳಿದುಕೊಂಡನು. ಆಗ ಅವನಿಗೆ ಯೆಹೋವನಿಂದ, “ಎಲೀಯನೇ ನೀನು ಇಲ್ಲೇನು ಮಾಡುತ್ತೀ?” ಎಂಬ ವಾಣಿಯು ಕೇಳಿಸಿತು.
וַיֹּאמֶר קַנֹּא קִנֵּאתִי לַיהֹוָה ׀ אֱלֹהֵי צְבָאוֹת כִּֽי־עָזְבוּ בְרִֽיתְךָ בְּנֵי יִשְׂרָאֵל אֶת־מִזְבְּחֹתֶיךָ הָרָסוּ וְאֶת־נְבִיאֶיךָ הָרְגוּ בֶחָרֶב וָאִוָּתֵר אֲנִי לְבַדִּי וַיְבַקְשׁוּ אֶת־נַפְשִׁי לְקַחְתָּֽהּ׃ | 10 |
೧೦ಅವನು ಅದಕ್ಕೆ, “ಸೇನಾಧೀಶ್ವರನಾದ ದೇವರೇ, ಯೆಹೋವನೇ ಇಸ್ರಾಯೇಲರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ. ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ” ಎಂದು ಉತ್ತರಕೊಟ್ಟನು.
וַיֹּאמֶר צֵא וְעָמַדְתָּ בָהָר לִפְנֵי יְהֹוָה וְהִנֵּה יְהֹוָה עֹבֵר וְרוּחַ גְּדוֹלָה וְחָזָק מְפָרֵק הָרִים וּמְשַׁבֵּר סְלָעִים לִפְנֵי יְהֹוָה לֹא בָרוּחַ יְהֹוָה וְאַחַר הָרוּחַ רַעַשׁ לֹא בָרַעַשׁ יְהֹוָֽה׃ | 11 |
೧೧ಆಗ ಪುನಃ, “ನೀನು ಹೊರಗೆ ಬಂದು ಬೆಟ್ಟದ ಮೇಲೆ ಯೆಹೋವನ ಮುಂದೆ ನಿಲ್ಲು” ಎಂಬ ವಾಣಿಯಾಯಿತು. ಆಹಾ ಯೆಹೋವನು ಅಲ್ಲಿ ಹಾದು ಹೋದನು. ಆತನ ಮುಂದೆ ಪರ್ವತಗಳು ಭೇದಿಸಿ ಬಂಡೆಗಳನ್ನು ಪುಡಿ ಪುಡಿಮಾಡುವಂಥ ದೊಡ್ಡ ಬಿರುಗಾಳಿಯು ಬೀಸಿತು. ಯೆಹೋವನು ಅದರಲ್ಲಿ ಇರಲಿಲ್ಲ. ತರುವಾಯ ಭೂಕಂಪವಾಯಿತು, ಅದರಲ್ಲಿಯೂ ಆತನಿರಲಿಲ್ಲ.
וְאַחַר הָרַעַשׁ אֵשׁ לֹא בָאֵשׁ יְהֹוָה וְאַחַר הָאֵשׁ קוֹל דְּמָמָה דַקָּֽה׃ | 12 |
೧೨ಭೂಕಂಪವಾದ ನಂತರ ಸಿಡಿಲುಂಟಾಯಿತು, ಅದರಲ್ಲಿಯೂ ಯೆಹೋವನಿರಲಿಲ್ಲ. ಕಡೆಗೆ ನಯವಾದ ಮೃದು ಸ್ವರವೊಂದು ಕೇಳಿಸಿತು,
וַיְהִי ׀ כִּשְׁמֹעַ אֵלִיָּהוּ וַיָּלֶט פָּנָיו בְּאַדַּרְתּוֹ וַיֵּצֵא וַֽיַּעֲמֹד פֶּתַח הַמְּעָרָה וְהִנֵּה אֵלָיו קוֹל וַיֹּאמֶר מַה־לְּךָ פֹה אֵֽלִיָּֽהוּ׃ | 13 |
೧೩ಅದನ್ನು ಕೇಳಿದ ಕೂಡಲೆ ಎಲೀಯನು ತನ್ನ ಕಂಬಳಿಯಿಂದ ಮೋರೆಯನ್ನು ಮುಚ್ಚಿಕೊಂಡು ಹೋಗಿ ಗವಿಯ ದ್ವಾರದಲ್ಲಿ ನಿಂತನು. ಆಗ, “ಎಲೀಯನೇ ನೀನು ಇಲ್ಲೇನು ಮಾಡುತ್ತೀ?” ಎಂಬ ವಾಣಿಯು ಕೇಳಿಸಿತು.
וַיֹּאמֶר קַנֹּא קִנֵּאתִי לַיהֹוָה ׀ אֱלֹהֵי צְבָאוֹת כִּֽי־עָזְבוּ בְרִֽיתְךָ בְּנֵי יִשְׂרָאֵל אֶת־מִזְבְּחֹתֶיךָ הָרָסוּ וְאֶת־נְבִיאֶיךָ הָרְגוּ בֶחָרֶב וָאִוָּתֵר אֲנִי לְבַדִּי וַיְבַקְשׁוּ אֶת־נַפְשִׁי לְקַחְתָּֽהּ׃ | 14 |
೧೪ಅದಕ್ಕೆ ಅವನು, “ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ, ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ” ಎಂದು ಉತ್ತರಕೊಟ್ಟನು.
וַיֹּאמֶר יְהֹוָה אֵלָיו לֵךְ שׁוּב לְדַרְכְּךָ מִדְבַּרָה דַמָּשֶׂק וּבָאתָ וּמָשַׁחְתָּ אֶת־חֲזָאֵל לְמֶלֶךְ עַל־אֲרָֽם׃ | 15 |
೧೫ಆಗ ಯೆಹೋವನು ಅವನಿಗೆ, “ನೀನು ಬಂದ ದಾರಿಯಿಂದ ಹಿಂದಿರುಗಿ ದಮಸ್ಕದ ಅರಣ್ಯಕ್ಕೆ ಹೋಗು, ಅಲ್ಲಿಂದ ಪಟ್ಟಣದೊಳಗೆ ಪ್ರವೇಶಿಸಿ ಹಜಾಯೇಲನನ್ನು ಅರಾಮ್ಯರ ಅರಸನನ್ನಾಗಿ ಅಭಿಷೇಕಿಸು.
וְאֵת יֵהוּא בֶן־נִמְשִׁי תִּמְשַׁח לְמֶלֶךְ עַל־יִשְׂרָאֵל וְאֶת־אֱלִישָׁע בֶּן־שָׁפָט מֵאָבֵל מְחוֹלָה תִּמְשַׁח לְנָבִיא תַּחְתֶּֽיךָ׃ | 16 |
೧೬ನಿಂಷಿಯ ಮಗನಾದ ಯೇಹುವನ್ನು ಇಸ್ರಾಯೇಲರ ಅರಸನನ್ನಾಗಿಯೂ, ಆಬೇಲ್ ಮೆಹೋಲದವನೂ ಶಾಫಾಟನ ಮಗನೂ ಆದ ಎಲೀಷನನ್ನು ನಿನಗೆ ಬದಲಾಗಿ ಪ್ರವಾದಿಯನ್ನಾಗಿಯೂ ಅಭಿಷೇಕಿಸು.
וְהָיָה הַנִּמְלָט מֵחֶרֶב חֲזָאֵל יָמִית יֵהוּא וְהַנִּמְלָט מֵחֶרֶב יֵהוּא יָמִית אֱלִישָֽׁע׃ | 17 |
೧೭ಹಜಾಯೇಲನ ಕತ್ತಿಗೆ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುವನು. ಅವನ ಕತ್ತಿಗೆ ತಪ್ಪಿಸಿಕೊಂಡವರನ್ನು ಎಲೀಷನು ಕೊಲ್ಲುವನು.
וְהִשְׁאַרְתִּי בְיִשְׂרָאֵל שִׁבְעַת אֲלָפִים כׇּל־הַבִּרְכַּיִם אֲשֶׁר לֹא־כָֽרְעוּ לַבַּעַל וְכׇל־הַפֶּה אֲשֶׁר לֹֽא־נָשַׁק לֽוֹ׃ | 18 |
೧೮ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ, ಅದನ್ನು ಮುದ್ದಿಡದೆಯೂ ಇರುವ ಏಳು ಸಾವಿರ ಇಸ್ರಾಯೇಲರನ್ನು ಉಳಿಸುವೆನು” ಎಂದು ಹೇಳಿದನು.
וַיֵּלֶךְ מִשָּׁם וַיִּמְצָא אֶת־אֱלִישָׁע בֶּן־שָׁפָט וְהוּא חֹרֵשׁ שְׁנֵים־עָשָׂר צְמָדִים לְפָנָיו וְהוּא בִּשְׁנֵים הֶעָשָׂר וַיַּעֲבֹר אֵלִיָּהוּ אֵלָיו וַיַּשְׁלֵךְ אַדַּרְתּוֹ אֵלָֽיו׃ | 19 |
೧೯ಎಲೀಯನು ಅಲ್ಲಿಂದ ಹೊರಟುಹೋಗಿ ಶಾಫಾಟನ ಮಗನಾದ ಎಲೀಷನನ್ನು ಕಂಡನು. ಅವನು ಹೊಲವನ್ನು ಉಳುವುದಕ್ಕೆ ಹನ್ನೆರಡು ಜೋಡಿ ಎತ್ತುಗಳನ್ನು ತಂದು ಹನ್ನೆರಡನೆ ಜೋಡಿಯಿಂದ ತಾನಾಗಿಯೇ ಹೊಲವನ್ನು ಉಳುತ್ತಿದ್ದನು. ಎಲೀಯನು ಅಲ್ಲಿಂದ ಹಾದುಹೋಗುವಾಗ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.
וַיַּעֲזֹב אֶת־הַבָּקָר וַיָּרׇץ אַחֲרֵי אֵלִיָּהוּ וַיֹּאמֶר אֶשְּׁקָה־נָּא לְאָבִי וּלְאִמִּי וְאֵלְכָה אַחֲרֶיךָ וַיֹּאמֶר לוֹ לֵךְ שׁוּב כִּי מֶה־עָשִׂיתִי לָֽךְ׃ | 20 |
೨೦ಕೂಡಲೇ ಅವನು ಎತ್ತುಗಳನ್ನು ಬಿಟ್ಟು ಓಡುತ್ತಾ ಬಂದು ಎಲೀಯನಿಗೆ, “ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ಬರುವುದಕ್ಕೆ ಅಪ್ಪಣೆಯಾಗಲಿ, ಅನಂತರ ನಿನ್ನನ್ನು ಹಿಂಬಾಲಿಸುವೆನು” ಅಂದನು. ಅದಕ್ಕೆ ಎಲೀಯನು “ಹೋಗು ನಾನು ನಿನಗೆ ಮಾಡಿರುವುದನ್ನು ಮರೆಯಬೇಡ?” ಎಂದು ಉತ್ತರಕೊಟ್ಟನು.
וַיָּשׇׁב מֵאַחֲרָיו וַיִּקַּח אֶת־צֶמֶד הַבָּקָר וַיִּזְבָּחֵהוּ וּבִכְלִי הַבָּקָר בִּשְּׁלָם הַבָּשָׂר וַיִּתֵּן לָעָם וַיֹּאכֵלוּ וַיָּקׇם וַיֵּלֶךְ אַחֲרֵי אֵלִיָּהוּ וַֽיְשָׁרְתֵֽהוּ׃ | 21 |
೨೧ಎಲೀಷನು ಹಿಂದಿರುಗಿ ಹೋಗಿ ತಾನು ಉಳುತ್ತಿದ್ದ ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ವಧಿಸಿ ಮಾಂಸವನ್ನು ರಂಟೆಯ ಕಟ್ಟಿಗೆಯಿಂದ ಬೇಯಿಸಿ, ಜನರಿಗೆ ಔತಣಮಾಡಿಸಿದನು. ಅನಂತರ ಅವನು ಎದ್ದು ಎಲೀಯನನ್ನು ಹಿಂಬಾಲಿಸಿ ಅವನ ಸೇವಕನಾದನು.