< מלכים א 22 >

וַיֵּשְׁבוּ שָׁלֹשׁ שָׁנִים אֵין מִלְחָמָה בֵּין אֲרָם וּבֵין יִשְׂרָאֵֽל׃ 1
ಅರಾಮ್ಯರಿಗೂ, ಇಸ್ರಾಯೇಲರಿಗೂ ಮೂರು ವರ್ಷ ಯುದ್ಧ ನಡೆಯಲಿಲ್ಲ.
וַיְהִי בַּשָּׁנָה הַשְּׁלִישִׁית וַיֵּרֶד יְהוֹשָׁפָט מֶלֶךְ־יְהוּדָה אֶל־מֶלֶךְ יִשְׂרָאֵֽל׃ 2
ಮೂರನೆಯ ವರ್ಷದಲ್ಲಿ, ಯೆಹೂದದ ಅರಸನಾದ ಯೆಹೋಷಾಫಾಟನು ಇಸ್ರಾಯೇಲಿನ ಅರಸನ ಬಳಿಗೆ ಬಂದನು.
וַיֹּאמֶר מֶֽלֶךְ־יִשְׂרָאֵל אֶל־עֲבָדָיו הַיְדַעְתֶּם כִּי־לָנוּ רָמֹת גִּלְעָד וַאֲנַחְנוּ מַחְשִׁים מִקַּחַת אֹתָהּ מִיַּד מֶלֶךְ אֲרָֽם׃ 3
ಇಸ್ರಾಯೇಲಿನ ಅರಸನು ತನ್ನ ಸೇವಕರಿಗೆ, “ಗಿಲ್ಯಾದಿನ ರಾಮೋತ್ ನಮ್ಮದೆಂದು ನಿಮಗೆ ಗೊತ್ತುಂಟಲ್ಲಾ? ನಾವು ಅದನ್ನು ಅರಾಮಿನ ಅರಸನ ಕೈಯಿಂದ ತೆಗೆದುಕೊಳ್ಳದೆ ಸುಮ್ಮನೆ ಇದ್ದೇವೆ,” ಎಂದನು.
וַיֹּאמֶר אֶל־יְהוֹשָׁפָט הֲתֵלֵךְ אִתִּי לַמִּלְחָמָה רָמֹת גִּלְעָד וַיֹּאמֶר יְהֽוֹשָׁפָט אֶל־מֶלֶךְ יִשְׂרָאֵל כָּמוֹנִי כָמוֹךָ כְּעַמִּי כְעַמֶּךָ כְּסוּסַי כְּסוּסֶֽיךָ׃ 4
ಆಗ ಅವನು ಯೆಹೋಷಾಫಾಟನಿಗೆ, “ನೀನು ಗಿಲ್ಯಾದಿನ ರಾಮೋತಿನ ಮೇಲೆ ಯುದ್ಧಮಾಡಲು ನನ್ನ ಸಂಗಡ ಬರುತ್ತೀಯಾ?” ಎಂದನು. ಯೆಹೋಷಾಫಾಟನು ಇಸ್ರಾಯೇಲಿನ ಅರಸನಿಗೆ, “ನಾನೂ ನೀನೂ, ನನ್ನ ಜನರೂ ನಿನ್ನ ಜನರೂ, ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ ಅಲ್ಲವೇ?” ಎಂದನು.
וַיֹּאמֶר יְהוֹשָׁפָט אֶל־מֶלֶךְ יִשְׂרָאֵל דְּרׇשׁ־נָא כַיּוֹם אֶת־דְּבַר יְהֹוָֽה׃ 5
ಆದರೆ ಯೆಹೋಷಾಫಾಟನು ಇಸ್ರಾಯೇಲಿನ ಅರಸನಿಗೆ, “ಈ ಹೊತ್ತು ಮೊದಲು ಯೆಹೋವ ದೇವರ ಆಲೋಚನೆಯನ್ನು ವಿಚಾರಿಸಿರಿ,” ಎಂದನು.
וַיִּקְבֹּץ מֶלֶךְ־יִשְׂרָאֵל אֶֽת־הַנְּבִיאִים כְּאַרְבַּע מֵאוֹת אִישׁ וַיֹּאמֶר אֲלֵהֶם הַאֵלֵךְ עַל־רָמֹת גִּלְעָד לַמִּלְחָמָה אִם־אֶחְדָּל וַיֹּאמְרוּ עֲלֵה וְיִתֵּן אֲדֹנָי בְּיַד הַמֶּֽלֶךְ׃ 6
ಆಗ ಇಸ್ರಾಯೇಲಿನ ಅರಸನು ಹೆಚ್ಚು ಕಡಿಮೆ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ, ಅವರಿಗೆ, “ನಾನು ಗಿಲ್ಯಾದಿನ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ, ಬೇಡವೋ?” ಎಂದು ಕೇಳಿದನು. ಅದಕ್ಕವರು, “ಹೋಗು, ಯೆಹೋವ ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದರು.
וַיֹּאמֶר יְהוֹשָׁפָט הַאֵין פֹּה נָבִיא לַֽיהֹוָה עוֹד וְנִדְרְשָׁה מֵאֹתֽוֹ׃ 7
ಆದರೆ ಯೆಹೋಷಾಫಾಟನು, “ಯೆಹೋವ ದೇವರ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸುವ ಹಾಗೆ ಬೇರೆ ಪ್ರವಾದಿ ಇಲ್ಲಿ ಇಲ್ಲವೋ?” ಎಂದು ಕೇಳಿದನು.
וַיֹּאמֶר מֶלֶךְ־יִשְׂרָאֵל ׀ אֶֽל־יְהוֹשָׁפָט עוֹד אִישׁ־אֶחָד לִדְרֹשׁ אֶת־יְהֹוָה מֵאֹתוֹ וַאֲנִי שְׂנֵאתִיו כִּי לֹא־יִתְנַבֵּא עָלַי טוֹב כִּי אִם־רָע מִיכָיְהוּ בֶּן־יִמְלָה וַיֹּאמֶר יְהוֹשָׁפָט אַל־יֹאמַר הַמֶּלֶךְ כֵּֽן׃ 8
ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ನಾವು ಯೆಹೋವ ದೇವರನ್ನು ವಿಚಾರಿಸುವ ಹಾಗೆ ಇಮ್ಲನ ಮಗ ಮೀಕಾಯನೆಂಬ ಇನ್ನೊಬ್ಬನಿದ್ದಾನೆ. ಆದರೆ ನಾನು ಅವನನ್ನು ದ್ವೇಷ ಮಾಡುತ್ತೇನೆ. ಏಕೆಂದರೆ ಅವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ ಯಾವಾಗಲೂ ಕೆಟ್ಟದ್ದನ್ನು ಪ್ರವಾದಿಸುತ್ತಾನೆ,” ಎಂದನು. ಅದಕ್ಕೆ ಯೆಹೋಷಾಫಾಟನು, “ಅರಸನು ಹಾಗೆ ಅನ್ನದಿರಲಿ,” ಎಂದನು.
וַיִּקְרָא מֶלֶךְ יִשְׂרָאֵל אֶל־סָרִיס אֶחָד וַיֹּאמֶר מַהֲרָה מִיכָיְהוּ בֶן־יִמְלָֽה׃ 9
ಆಗ ಇಸ್ರಾಯೇಲಿನ ಅರಸನು ಒಬ್ಬ ಅಧಿಕಾರಿಯನ್ನು ಕರೆದು, “ಇಮ್ಲನ ಮಗನಾದ ಮೀಕಾಯನನ್ನು ಶೀಘ್ರವಾಗಿ ಕರೆದುಕೊಂಡು ಬಾ,” ಎಂದನು.
וּמֶלֶךְ יִשְׂרָאֵל וִיהוֹשָׁפָט מֶלֶךְ־יְהוּדָה יֹשְׁבִים אִישׁ עַל־כִּסְאוֹ מְלֻבָּשִׁים בְּגָדִים בְּגֹרֶן פֶּתַח שַׁעַר שֹׁמְרוֹן וְכׇל־הַנְּבִיאִים מִֽתְנַבְּאִים לִפְנֵיהֶֽם׃ 10
ಇಸ್ರಾಯೇಲಿನ ಅರಸನೂ, ಯೆಹೂದದ ಅರಸನಾದ ಯೆಹೋಷಾಫಾಟನೂ, ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯದ ಬಾಗಿಲಿನ ಮುಂದೆ ಬಯಲಿನಲ್ಲಿ ತಮ್ಮ ತಮ್ಮ ಸಿಂಹಾಸನಗಳ ಮೇಲೆ ಕುಳಿತುಕೊಂಡಿದ್ದರು. ಸಕಲ ಪ್ರವಾದಿಗಳೂ ಅವರ ಮುಂದೆ ಪ್ರವಾದಿಸುತ್ತಿದ್ದರು.
וַיַּעַשׂ לוֹ צִדְקִיָּה בֶֽן־כְּנַעֲנָה קַרְנֵי בַרְזֶל וַיֹּאמֶר כֹּה־אָמַר יְהֹוָה בְּאֵלֶּה תְּנַגַּח אֶת־אֲרָם עַד־כַּלֹּתָֽם׃ 11
ಆಗ ಕೆನಾನನ ಮಗನಾದ ಚಿದ್ಕೀಯನು, “ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು, ‘ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವವರೆಗೂ ಇರಿದು ಹಾಕುವೆ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.
וְכׇל־הַנְּבִאִים נִבְּאִים כֵּן לֵאמֹר עֲלֵה רָמֹת גִּלְעָד וְהַצְלַח וְנָתַן יְהֹוָה בְּיַד הַמֶּֽלֶךְ׃ 12
ಸಮಸ್ತ ಪ್ರವಾದಿಗಳೂ ಹಾಗೆಯೇ ಪ್ರವಾದಿಸಿ, “ಗಿಲ್ಯಾದಿನ ರಾಮೋತಿಗೆ ಹೋಗಿ ಜಯ ಹೊಂದು, ಯೆಹೋವ ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದರು.
וְהַמַּלְאָךְ אֲשֶׁר־הָלַךְ ׀ לִקְרֹא מִיכָיְהוּ דִּבֶּר אֵלָיו לֵאמֹר הִנֵּה־נָא דִּבְרֵי הַנְּבִיאִים פֶּה־אֶחָד טוֹב אֶל־הַמֶּלֶךְ יְהִי־נָא (דבריך) [דְבָרְךָ] כִּדְבַר אַחַד מֵהֶם וְדִבַּרְתָּ טּֽוֹב׃ 13
ಆದರೆ ಮೀಕಾಯನನ್ನು ಕರೆಯಲು ಹೋದ ದೂತನು ಅವನಿಗೆ, “ನೋಡು, ಎಲ್ಲ ಪ್ರವಾದಿಗಳು ಏಕಮನಸ್ಸಿನಿಂದ ಅರಸನಿಗೆ ಒಳ್ಳೆಯದನ್ನೇ ಪ್ರವಾದಿಸಿದ್ದಾರೆ. ನಿನ್ನ ಮಾತು ಅವರಲ್ಲಿ ಒಬ್ಬನ ಮಾತಿನ ಹಾಗೆಯೇ ಇರಲಿ; ಒಳ್ಳೆಯ ಮಾತು ಆಡು,” ಎಂದನು.
וַיֹּאמֶר מִיכָיְהוּ חַי־יְהֹוָה כִּי אֶת־אֲשֶׁר יֹאמַר יְהֹוָה אֵלַי אֹתוֹ אֲדַבֵּֽר׃ 14
ಅದಕ್ಕೆ ಮೀಕಾಯನು, “ಯೆಹೋವ ದೇವರ ಜೀವದಾಣೆ, ಯೆಹೋವ ದೇವರು ನನಗೆ ಏನು ಹೇಳುವರೋ, ಅದನ್ನೇ ಮಾತನಾಡುವೆನು,” ಎಂದನು.
וַיָּבוֹא אֶל־הַמֶּלֶךְ וַיֹּאמֶר הַמֶּלֶךְ אֵלָיו מִיכָיְהוּ הֲנֵלֵךְ אֶל־רָמֹת גִּלְעָד לַמִּלְחָמָה אִם־נֶחְדָּל וַיֹּאמֶר אֵלָיו עֲלֵה וְהַצְלַח וְנָתַן יְהֹוָה בְּיַד הַמֶּֽלֶךְ׃ 15
ಅವನು ಅರಸನ ಬಳಿಗೆ ಬಂದಾಗ ಅರಸನು ಅವನಿಗೆ, “ಮೀಕಾಯೆಹುವೇ, ನಾವು ಗಿಲ್ಯಾದಿನ ರಾಮೋತ್ ವಿರುದ್ಧವಾಗಿ ಯುದ್ಧಕ್ಕೆ ಹೋಗಬಹುದೋ ಅಥವಾ ಬೇಡವೋ?” ಎಂದನು. ಆಗ ಅವನು, “ಹೋಗಿ ಜಯ ಹೊಂದಿರಿ. ಯೆಹೋವ ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದನು.
וַיֹּאמֶר אֵלָיו הַמֶּלֶךְ עַד־כַּמֶּה פְעָמִים אֲנִי מַשְׁבִּיעֶךָ אֲשֶׁר לֹֽא־תְדַבֵּר אֵלַי רַק־אֱמֶת בְּשֵׁם יְהֹוָֽה׃ 16
ಆಗ ಅರಸನು ಅವನಿಗೆ, “ನೀನು ಯೆಹೋವ ದೇವರ ಹೆಸರಿನಲ್ಲಿ ಸತ್ಯವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟು ಸಾರಿ ನಿನಗೆ ಆಣೆ ಇಡಬೇಕು?” ಎಂದನು.
וַיֹּאמֶר רָאִיתִי אֶת־כׇּל־יִשְׂרָאֵל נְפֹצִים אֶל־הֶהָרִים כַּצֹּאן אֲשֶׁר אֵין־לָהֶם רֹעֶה וַיֹּאמֶר יְהֹוָה לֹֽא־אֲדֹנִים לָאֵלֶּה יָשׁוּבוּ אִישׁ־לְבֵיתוֹ בְּשָׁלֽוֹם׃ 17
ಅದಕ್ಕೆ ಮೀಕಾಯನು, “ಇಸ್ರಾಯೇಲರೆಲ್ಲರು ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳ ಮೇಲೆ ಚದರಿಹೋದದ್ದನ್ನು ಕಂಡೆನು. ಆಗ ಯೆಹೋವ ದೇವರು, ‘ಇವರಿಗೆ ಯಜಮಾನನು ಇಲ್ಲ, ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಸಮಾಧಾನವಾಗಿ ಹಿಂದಿರುಗಿ ಹೋಗಲಿ,’ ಎಂಬುದಾಗಿ ಹೇಳಿದರು,” ಎಂದನು.
וַיֹּאמֶר מֶלֶךְ־יִשְׂרָאֵל אֶל־יְהוֹשָׁפָט הֲלוֹא אָמַרְתִּי אֵלֶיךָ לוֹא־יִתְנַבֵּא עָלַי טוֹב כִּי אִם־רָֽע׃ 18
ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ಇವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ, ಕೆಟ್ಟದ್ದನ್ನೇ ಪ್ರವಾದಿಸುವನೆಂದು ನಾನು ನಿನಗೆ ಹೇಳಲಿಲ್ಲವೇ?” ಎಂದನು.
וַיֹּאמֶר לָכֵן שְׁמַע דְּבַר־יְהֹוָה רָאִיתִי אֶת־יְהֹוָה יֹשֵׁב עַל־כִּסְאוֹ וְכׇל־צְבָא הַשָּׁמַיִם עֹמֵד עָלָיו מִֽימִינוֹ וּמִשְּׂמֹאלֽוֹ׃ 19
ಆಗ ಮೀಕಾಯನು, “ಆದ್ದರಿಂದ ಯೆಹೋವ ದೇವರ ವಾಕ್ಯವನ್ನು ಕೇಳು: ಯೆಹೋವ ದೇವರು ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡಿರುವುದನ್ನೂ ಆಕಾಶದ ಸಮಸ್ತ ಸೈನ್ಯವು ಅವರ ಬಲಗಡೆ, ಎಡಗಡೆ ಮತ್ತು ಸುತ್ತಲೂ ನಿಂತಿರುವುದನ್ನೂ ನಾನು ಕಂಡೆನು.
וַיֹּאמֶר יְהֹוָה מִי יְפַתֶּה אֶת־אַחְאָב וְיַעַל וְיִפֹּל בְּרָמֹת גִּלְעָד וַיֹּאמֶר זֶה בְּכֹה וְזֶה אֹמֵר בְּכֹֽה׃ 20
ಆಗ ಯೆಹೋವ ದೇವರು, ‘ಅಹಾಬನು ಹೋಗಿ ಗಿಲ್ಯಾದಿನ ರಾಮೋತಿನಲ್ಲಿ ಬೀಳುವ ಹಾಗೆ, ಅವನನ್ನು ಮರುಳುಗೊಳಿಸುವವನು ಯಾರು?’ ಎಂದರು. “ಒಬ್ಬನು ಒಂದು ವಿಧವಾಗಿಯೂ ಮತ್ತೊಬ್ಬನು ಇನ್ನೊಂದು ವಿಧವಾಗಿಯೂ ಹೇಳುತ್ತಿದ್ದರು.
וַיֵּצֵא הָרוּחַ וַֽיַּעֲמֹד לִפְנֵי יְהֹוָה וַיֹּאמֶר אֲנִי אֲפַתֶּנּוּ וַיֹּאמֶר יְהֹוָה אֵלָיו בַּמָּֽה׃ 21
ಕೊನೆಯಲ್ಲಿ, ಒಂದು ಆತ್ಮವು ಹೊರಟುಬಂದು ಯೆಹೋವ ದೇವರ ಮುಂದೆ ನಿಂತು, ‘ನಾನು ಅವನನ್ನು ಮರುಳುಗೊಳಿಸುತ್ತೇನೆ,’ ಎಂದಿತು.
וַיֹּאמֶר אֵצֵא וְהָיִיתִי רוּחַ שֶׁקֶר בְּפִי כׇּל־נְבִיאָיו וַיֹּאמֶר תְּפַתֶּה וְגַם־תּוּכָל צֵא וַעֲשֵׂה־כֵֽן׃ 22
“ಆಗ ಯೆಹೋವ ದೇವರು, ‘ಅದು ಹೇಗೆ?’ ಎಂದರು. “ಅದಕ್ಕದು, ‘ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಲ್ಲಿ ಸುಳ್ಳನ್ನಾಡುವ ಆತ್ಮವಾಗಿರುವೆನು,’ ಎಂದಿತು. “ಅದಕ್ಕೆ ಅವರು, ‘ನೀನು ಅವನನ್ನು ಮರುಳುಗೊಳಿಸುವೆ ಮತ್ತು ಜಯಿಸುವೆ. ಹೊರಟುಹೋಗಿ ಹಾಗೆ ಮಾಡು,’ ಎಂದರು.
וְעַתָּה הִנֵּה נָתַן יְהֹוָה רוּחַ שֶׁקֶר בְּפִי כׇּל־נְבִיאֶיךָ אֵלֶּה וַֽיהֹוָה דִּבֶּר עָלֶיךָ רָעָֽה׃ 23
“ಆದ್ದರಿಂದ ಇಗೋ, ಯೆಹೋವ ದೇವರು ಈ ಎಲ್ಲಾ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳನ್ನಾಡುವ ಆತ್ಮವನ್ನು ಇಟ್ಟಿದ್ದಾರೆ. ಇದಲ್ಲದೆ ಯೆಹೋವ ದೇವರು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾರೆ,” ಎಂದನು.
וַיִּגַּשׁ צִדְקִיָּהוּ בֶֽן־כְּנַעֲנָה וַיַּכֶּה אֶת־מִיכָיְהוּ עַל־הַלֶּחִי וַיֹּאמֶר אֵי־זֶה עָבַר רֽוּחַ־יְהֹוָה מֵאִתִּי לְדַבֵּר אוֹתָֽךְ׃ 24
ಆಗ ಕೆನಾನನ ಮಗನಾದ ಚಿದ್ಕೀಯನು ಸಮೀಪಕ್ಕೆ ಬಂದು, ಮೀಕಾಯನ ಕೆನ್ನೆಯ ಮೇಲೆ ಹೊಡೆದು, “ಯೆಹೋವ ದೇವರ ಆತ್ಮವು ನನ್ನನ್ನು ಬಿಟ್ಟು, ನಿನ್ನ ಸಂಗಡ ಮಾತನಾಡಲು ಯಾವ ಮಾರ್ಗವಾಗಿ ಬಂದಿತು?” ಎಂದನು.
וַיֹּאמֶר מִיכָיְהוּ הִנְּךָ רֹאֶה בַּיּוֹם הַהוּא אֲשֶׁר תָּבֹא חֶדֶר בְּחֶדֶר לְהֵחָבֵֽה׃ 25
ಅದಕ್ಕೆ ಮೀಕಾಯನು, “ಇಗೋ, ನಿನ್ನನ್ನು ಬಚ್ಚಿಟ್ಟುಕೊಳ್ಳಲು ಒಳಕೊಠಡಿಗೆ ನೀನು ಹೋಗುವ ದಿವಸದಲ್ಲಿ ನೋಡುವೆ,” ಎಂದನು.
וַיֹּאמֶר מֶלֶךְ יִשְׂרָאֵל קַח אֶת־מִיכָיְהוּ וַהֲשִׁיבֵהוּ אֶל־אָמֹן שַׂר־הָעִיר וְאֶל־יוֹאָשׁ בֶּן־הַמֶּֽלֶךְ׃ 26
ಆಗ ಇಸ್ರಾಯೇಲಿನ ಅರಸನು ಹೇಳಿದ್ದೇನೆಂದರೆ, “ನೀವು ಮೀಕಾಯನನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ, ಅರಸನ ಮಗನಾದ ಯೋವಾಷನ ಬಳಿಗೂ ತೆಗೆದುಕೊಂಡುಹೋಗಿ,
וְאָמַרְתָּ כֹּה אָמַר הַמֶּלֶךְ שִׂימוּ אֶת־זֶה בֵּית הַכֶּלֶא וְהַאֲכִלֻהוּ לֶחֶם לַחַץ וּמַיִם לַחַץ עַד בֹּאִי בְשָׁלֽוֹם׃ 27
‘ನಾನು ಸಮಾಧಾನವಾಗಿ ತಿರುಗಿ ಬರುವವರೆಗೂ ನೀವು ಇವನನ್ನು ಸೆರೆಮನೆಯಲ್ಲಿಟ್ಟು, ಅವನಿಗೆ ರೊಟ್ಟಿ ಮತ್ತು ನೀರನ್ನು ಬಿಟ್ಟು ಮತ್ತೇನೂ ಕೊಡಬೇಡಿರೆಂದು ಅರಸನು ಹೇಳಿದ್ದಾನೆ,’ ಎಂದು ತಿಳಿಸು,” ಎಂದನು.
וַיֹּאמֶר מִיכָיְהוּ אִם־שׁוֹב תָּשׁוּב בְּשָׁלוֹם לֹא־דִבֶּר יְהֹוָה בִּי וַיֹּאמֶר שִׁמְעוּ עַמִּים כֻּלָּֽם׃ 28
ಅದಕ್ಕೆ ಮೀಕಾಯನು, “ನೀನು ಸಮಾಧಾನದಿಂದ ನಿಜವಾಗಿ ಬಂದರೆ, ಯೆಹೋವ ದೇವರು ನನ್ನ ಮುಖಾಂತರ ಮಾತನಾಡಿಲ್ಲ, ಎಂದು ಹೇಳಿ; ಜನರೇ ನೀವೆಲ್ಲರೂ ನನ್ನ ಮಾತನ್ನು ಗಮನದಲ್ಲಿಡಿರಿ!” ಎಂದು ಕೂಗಿ ಹೇಳಿದನು.
וַיַּעַל מֶלֶךְ־יִשְׂרָאֵל וִיהוֹשָׁפָט מֶלֶךְ־יְהוּדָה רָמֹת גִּלְעָֽד׃ 29
ಹೀಗೆಯೇ ಇಸ್ರಾಯೇಲಿನ ಅರಸನೂ, ಯೆಹೂದದ ಅರಸನಾದ ಯೆಹೋಷಾಫಾಟನೂ ಗಿಲ್ಯಾದಿನ ರಾಮೋತಿಗೆ ಹೋದರು.
וַיֹּאמֶר מֶלֶךְ יִשְׂרָאֵל אֶל־יְהוֹשָׁפָט הִתְחַפֵּשׂ וָבֹא בַמִּלְחָמָה וְאַתָּה לְבַשׁ בְּגָדֶיךָ וַיִּתְחַפֵּשׂ מֶלֶךְ יִשְׂרָאֵל וַיָּבוֹא בַּמִּלְחָמָֽה׃ 30
ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ನಾನು ವೇಷಹಾಕಿಕೊಂಡು ಯುದ್ಧದಲ್ಲಿ ಪ್ರವೇಶಿಸುವೆನು. ಆದರೆ ನೀನು ನಿನ್ನ ರಾಜವಸ್ತ್ರಗಳನ್ನು ಧರಿಸಿಕೊಂಡಿರು,” ಎಂದನು. ಹಾಗೆಯೇ ಇಸ್ರಾಯೇಲಿನ ಅರಸನು ವೇಷಹಾಕಿಕೊಂಡು ಯುದ್ಧಕ್ಕೆ ಹೋದನು.
וּמֶלֶךְ אֲרָם צִוָּה אֶת־שָׂרֵי הָרֶכֶב אֲשֶׁר־לוֹ שְׁלֹשִׁים וּשְׁנַיִם לֵאמֹר לֹא תִּלָּחֲמוּ אֶת־קָטֹן וְאֶת־גָּדוֹל כִּי אִֽם־אֶת־מֶלֶךְ יִשְׂרָאֵל לְבַדּֽוֹ׃ 31
ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳ ಮೂವತ್ತೆರಡು ಮಂದಿ ಪ್ರಧಾನರಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲಿನ ಅರಸನನ್ನು ಮಾತ್ರ ಗುರಿಯಾಗಿಸಿಕೊಂಡು ಯುದ್ಧಮಾಡಿರಿ,” ಎಂದು ಆಜ್ಞಾಪಿಸಿದನು.
וַיְהִי כִּרְאוֹת שָׂרֵי הָרֶכֶב אֶת־יְהוֹשָׁפָט וְהֵמָּה אָֽמְרוּ אַךְ מֶלֶךְ־יִשְׂרָאֵל הוּא וַיָּסֻרוּ עָלָיו לְהִלָּחֵם וַיִּזְעַק יְהוֹשָׁפָֽט׃ 32
ಆದ್ದರಿಂದ ರಥಗಳ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ, “ನಿಶ್ಚಯವಾಗಿ ಇವನೇ ಇಸ್ರಾಯೇಲಿನ ಅರಸನು,” ಎಂದು ಹೇಳಿ, ಅವನ ಸಂಗಡ ಯುದ್ಧಮಾಡುವುದಕ್ಕೆ ತಿರುಗಿಕೊಂಡರು. ಆಗ ಯೆಹೋಷಾಫಾಟನು ಕೂಗಿಕೊಂಡನು.
וַיְהִי כִּרְאוֹת שָׂרֵי הָרֶכֶב כִּי־לֹא־מֶלֶךְ יִשְׂרָאֵל הוּא וַיָּשׁוּבוּ מֵאַחֲרָֽיו׃ 33
ಅವನು ಇಸ್ರಾಯೇಲಿನ ಅರಸನಲ್ಲವೆಂದು ರಥಗಳ ಅಧಿಪತಿಗಳಿಗೆ ಗೊತ್ತಾದಾಗ, ಅವರು ಅವನನ್ನು ಬಿಟ್ಟುಹೋದರು.
וְאִישׁ מָשַׁךְ בַּקֶּשֶׁת לְתֻמּוֹ וַיַּכֶּה אֶת־מֶלֶךְ יִשְׂרָאֵל בֵּין הַדְּבָקִים וּבֵין הַשִּׁרְיָן וַיֹּאמֶר לְרַכָּבוֹ הֲפֹךְ יָדְךָ וְהוֹצִיאֵנִי מִן־הַֽמַּחֲנֶה כִּי הׇחֳלֵֽיתִי׃ 34
ಆದರೆ ಅರಾಮ್ಯರ ಸೈನಿಕನೊಬ್ಬನು ಗುರಿ ಇಡದೆ ಬಿಲ್ಲಿಗೆ ಬಾಣವನ್ನೇರಿಸಿ ಹೊಡೆಯಲು, ಅದು ಇಸ್ರಾಯೇಲಿನ ಅರಸನಿಗೆ, ಅವನ ಕವಚದ ಸಂದಿನಲ್ಲಿ ಬಂದು ತಾಕಿತು. ಆದ್ದರಿಂದ ಅವನು ತನ್ನ ರಥ ನಡೆಸುವವನಿಗೆ, “ನೀನು ರಥವನ್ನು ತಿರುಗಿಸಿ ನನ್ನನ್ನು ಸೈನ್ಯದೊಳಗಿಂದ ಆಚೇಕಡೆಗೆ ತೆಗೆದುಕೊಂಡು ಹೋಗು, ನನಗೆ ದೊಡ್ಡ ಗಾಯವಾಗಿದೆ,” ಎಂದನು.
וַתַּעֲלֶה הַמִּלְחָמָה בַּיּוֹם הַהוּא וְהַמֶּלֶךְ הָיָה מׇעֳמָד בַּמֶּרְכָּבָה נֹכַח אֲרָם וַיָּמׇת בָּעֶרֶב וַיִּצֶק דַּֽם־הַמַּכָּה אֶל־חֵיק הָרָֽכֶב׃ 35
ಆ ದಿವಸವೆಲ್ಲಾ ಯುದ್ಧವು ಬಹು ಘೋರವಾದದ್ದರಿಂದ ಇಸ್ರಾಯೇಲಿನ ಅರಸನು ಅರಾಮ್ಯರಿಗೆ ಎದುರಾಗಿ ರಥದಲ್ಲಿಯೇ ಆತುಕೊಂಡು ನಿಂತಿದ್ದನು. ಅವನ ಗಾಯದ ರಕ್ತವು ರಥದ ಅಡಿಭಾಗದಲ್ಲಿ ಸುರಿದು ನಿಂತಿತ್ತು, ಸಾಯಂಕಾಲದಲ್ಲಿ ಅವನು ಮರಣಹೊಂದಿದನು.
וַיַּעֲבֹר הָֽרִנָּה בַּֽמַּחֲנֶה כְּבֹא הַשֶּׁמֶשׁ לֵאמֹר אִישׁ אֶל־עִירוֹ וְאִישׁ אֶל־אַרְצֽוֹ׃ 36
ಸಾಯಂಕಾಲವಾದಾಗ, “ಪ್ರತಿ ಮನುಷ್ಯನು ತನ್ನ ತನ್ನ ಪಟ್ಟಣಕ್ಕೂ, ಪ್ರತಿ ಮನುಷ್ಯನು ತನ್ನ ತನ್ನ ದೇಶಕ್ಕೂ ಹೋಗಲಿ,” ಎಂದು ಸೈನ್ಯದಲ್ಲಿ ಪ್ರಕಟಮಾಡಲಾಯಿತು.
וַיָּמׇת הַמֶּלֶךְ וַיָּבוֹא שֹׁמְרוֹן וַיִּקְבְּרוּ אֶת־הַמֶּלֶךְ בְּשֹׁמְרֽוֹן׃ 37
ಇಸ್ರಾಯೇಲಿನ ಅರಸನ ಶವವನ್ನು ಸಮಾರ್ಯಕ್ಕೆ ತಂದು ಅಲ್ಲಿ ಸಮಾಧಿಮಾಡಿದರು.
וַיִּשְׁטֹף אֶת־הָרֶכֶב עַל ׀ בְּרֵכַת שֹׁמְרוֹן וַיָּלֹקּוּ הַכְּלָבִים אֶת־דָּמוֹ וְהַזֹּנוֹת רָחָצוּ כִּדְבַר יְהֹוָה אֲשֶׁר דִּבֵּֽר׃ 38
ಆ ರಥವನ್ನು ವೇಶ್ಯೆಯರು ಸ್ನಾನ ಮಾಡುವ ಸಮಾರ್ಯದ ಕೆರೆಯಲ್ಲಿ ತೊಳೆಯುತ್ತಿದ್ದಾಗ, ಯೆಹೋವ ದೇವರು ಹೇಳಿದ ವಾಕ್ಯದ ಪ್ರಕಾರವೇ ನಾಯಿಗಳು ಅವನ ರಕ್ತವನ್ನು ನೆಕ್ಕಿದವು.
וְיֶתֶר דִּבְרֵי אַחְאָב וְכׇל־אֲשֶׁר עָשָׂה וּבֵית הַשֵּׁן אֲשֶׁר בָּנָה וְכׇל־הֶעָרִים אֲשֶׁר בָּנָה הֲלוֹא־הֵם כְּתוּבִים עַל־סֵפֶר דִּבְרֵי הַיָּמִים לְמַלְכֵי יִשְׂרָאֵֽל׃ 39
ಅಹಾಬನ ಇತರ ಕ್ರಿಯೆಗಳೂ, ಅವನು ಮಾಡಿದ್ದೆಲ್ಲವೂ, ಅವನು ಕಟ್ಟಿಸಿದ ದಂತದ ಮನೆಯೂ, ಅವನು ಕಟ್ಟಿಸಿದ ಎಲ್ಲಾ ಪಟ್ಟಣಗಳೂ ಇಸ್ರಾಯೇಲಿನ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
וַיִּשְׁכַּב אַחְאָב עִם־אֲבֹתָיו וַיִּמְלֹךְ אֲחַזְיָהוּ בְנוֹ תַּחְתָּֽיו׃ 40
ಅಹಾಬನು ಮೃತನಾಗಿ ತನ್ನ ಪಿತೃಗಳ ಜೊತೆ ಸೇರಿದನು. ಅವನ ಮಗ ಅಹಜ್ಯನು ಅವನಿಗೆ ಬದಲಾಗಿ ಅರಸನಾದನು.
וִיהֽוֹשָׁפָט בֶּן־אָסָא מָלַךְ עַל־יְהוּדָה בִּשְׁנַת אַרְבַּע לְאַחְאָב מֶלֶךְ יִשְׂרָאֵֽל׃ 41
ಇಸ್ರಾಯೇಲರ ಅರಸ ಅಹಾಬನ ನಾಲ್ಕನೆಯ ವರ್ಷದಲ್ಲಿ ಆಸನ ಮಗ ಯೆಹೋಷಾಫಾಟನು ಯೆಹೂದ್ಯರ ಅರಸನಾದನು.
יְהוֹשָׁפָט בֶּן־שְׁלֹשִׁים וְחָמֵשׁ שָׁנָה בְּמׇלְכוֹ וְעֶשְׂרִים וְחָמֵשׁ שָׁנָה מָלַךְ בִּירֽוּשָׁלָ͏ִם וְשֵׁם אִמּוֹ עֲזוּבָה בַּת־שִׁלְחִֽי׃ 42
ಅವನು ಅರಸನಾದಾಗ ಮೂವತ್ತೈದು ವರ್ಷದವನಾಗಿದ್ದನು. ಯೆರೂಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಳಿದನು. ಶಿಲ್ಹಿಯ ಮಗಳಾದ ಅಜೂಬಳೆಂಬಾಕೆಯು ಅವನ ತಾಯಿ.
וַיֵּלֶךְ בְּכׇל־דֶּרֶךְ אָסָא אָבִיו לֹא־סָר מִמֶּנּוּ לַעֲשׂוֹת הַיָּשָׁר בְּעֵינֵי יְהֹוָֽה׃ אַךְ הַבָּמוֹת לֹא־סָרוּ עוֹד הָעָם מְזַבְּחִים וּֽמְקַטְּרִים בַּבָּמֽוֹת׃ 43
ಅವನು ತನ್ನ ತಂದೆ ಆಸನ ಮಾರ್ಗಗಳಲ್ಲಿ ನಡೆದು, ಅದನ್ನು ಬಿಟ್ಟು ತೊಲಗದೇ, ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದನು. ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ ಆದ್ದರಿಂದ ಜನರು ಪೂಜಾಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುವುದನ್ನು ಮುಂದುವರೆಸಿದ್ದರು.
וַיַּשְׁלֵם יְהוֹשָׁפָט עִם־מֶלֶךְ יִשְׂרָאֵֽל׃ 44
ಯೆಹೋಷಾಫಾಟನು ಇಸ್ರಾಯೇಲಿನ ಅರಸನ ಸಂಗಡ ಸಮಾಧಾನ ಮಾಡಿಕೊಂಡನು.
וְיֶתֶר דִּבְרֵי יְהוֹשָׁפָט וּגְבוּרָתוֹ אֲשֶׁר־עָשָׂה וַאֲשֶׁר נִלְחָם הֲלֹא־הֵם כְּתוּבִים עַל־סֵפֶר דִּבְרֵי הַיָּמִים לְמַלְכֵי יְהוּדָֽה׃ 45
ಯೆಹೋಷಾಫಾಟನ ಇತರ ಕ್ರಿಯೆಗಳೂ, ಅವನು ತೋರಿಸಿದ ಪರಾಕ್ರಮವೂ, ಅವನು ಯುದ್ಧ ಮಾಡಿದ ವಿಧವೂ, ಯೆಹೂದದ ಅರಸುಗಳ ಇತಿಹಾಸಗಳ ಗ್ರಂಥದಲ್ಲಿ ಬರೆದಿರುತ್ತವೆ.
וְיֶתֶר הַקָּדֵשׁ אֲשֶׁר נִשְׁאַר בִּימֵי אָסָא אָבִיו בִּעֵר מִן־הָאָֽרֶץ׃ 46
ಅವನ ತಂದೆ ಆಸನ ಕಾಲದಲ್ಲಿ ಉಳಿದಿದ್ದ ಪುರುಷಗಾಮಿಗಳನ್ನು ಅವನು ದೇಶದಿಂದ ತೆಗೆದುಹಾಕಿದನು.
וּמֶלֶךְ אֵין בֶּאֱדוֹם נִצָּב מֶֽלֶךְ׃ 47
ಆ ಕಾಲದಲ್ಲಿ ಎದೋಮಿನೊಳಗೆ ಅರಸನಿರಲಿಲ್ಲ, ಅಧಿಪತಿಯು ಆಳುತ್ತಿದ್ದನು.
יְהוֹשָׁפָט (עשר) [עָשָׂה] אֳנִיּוֹת תַּרְשִׁישׁ לָלֶכֶת אֹפִירָה לַזָּהָב וְלֹא הָלָךְ כִּֽי־[נִשְׁבְּרוּ] (נשברה) אֳנִיּוֹת בְּעֶצְיוֹן גָּֽבֶר׃ 48
ಯೆಹೋಷಾಫಾಟನು ಬಂಗಾರಕ್ಕೋಸ್ಕರ ಓಫೀರಿಗೆ ಹೋಗುವುದಕ್ಕೆ ತಾರ್ಷೀಷ್ ಹಡಗುಗಳನ್ನು ಮಾಡಿಸಿದನು. ಆದರೆ ಅವು ಹೋಗಲಿಲ್ಲ. ಆ ಹಡಗುಗಳು ಎಚ್ಯೋನ್ ಗೆಬೆರಿನ ಬಳಿಯಲ್ಲಿ ಒಡೆದುಹೋದವು.
אָז אָמַר אֲחַזְיָהוּ בֶן־אַחְאָב אֶל־יְהוֹשָׁפָט יֵלְכוּ עֲבָדַי עִם־עֲבָדֶיךָ בׇּאֳנִיּוֹת וְלֹא אָבָה יְהוֹשָׁפָֽט׃ 49
ಆಗ ಅಹಾಬನ ಮಗ ಅಹಜ್ಯನು ಯೆಹೋಷಾಫಾಟನಿಗೆ, “ನನ್ನ ಸೇವಕರು, ನಿನ್ನ ಸೇವಕರ ಸಂಗಡ ಹಡಗುಗಳಲ್ಲಿ ಹೋಗಲಿ,” ಎಂದನು. ಆದರೆ ಯೆಹೋಷಾಫಾಟನು ಸಮ್ಮತಿಸಲಿಲ್ಲ.
וַיִּשְׁכַּב יְהוֹשָׁפָט עִם־אֲבֹתָיו וַיִּקָּבֵר עִם־אֲבֹתָיו בְּעִיר דָּוִד אָבִיו וַיִּמְלֹךְ יְהוֹרָם בְּנוֹ תַּחְתָּֽיו׃ 50
ಯೆಹೋಷಾಫಾಟನು ಮೃತನಾಗಿ ತನ್ನ ಪಿತೃಗಳ ಜೊತೆ ಸೇರಿದನು. ಅವನ ಶವವನ್ನು ದಾವೀದನ ಪಟ್ಟಣದೊಳಗೆ ಅವನ ಪೂರ್ವಜರ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಆಗ ಅವನಿಗೆ ಬದಲಾಗಿ ಅವನ ಮಗನಾದ ಯೆಹೋರಾಮನು ಅರಸನಾದನು.
אֲחַזְיָהוּ בֶן־אַחְאָב מָלַךְ עַל־יִשְׂרָאֵל בְּשֹׁמְרוֹן בִּשְׁנַת שְׁבַע עֶשְׂרֵה לִיהוֹשָׁפָט מֶלֶךְ יְהוּדָה וַיִּמְלֹךְ עַל־יִשְׂרָאֵל שְׁנָתָֽיִם׃ 51
ಅಹಾಬನ ಮಗ ಅಹಜ್ಯನು ಯೆಹೂದದ ಅರಸನಾದ ಯೆಹೋಷಾಫಾಟನ ಹದಿನೇಳನೆಯ ವರ್ಷದಲ್ಲಿ ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಆಳಲಾರಂಭಿಸಿ, ಎರಡು ವರ್ಷ ಇಸ್ರಾಯೇಲನ್ನು ಆಳಿದನು.
וַיַּעַשׂ הָרַע בְּעֵינֵי יְהֹוָה וַיֵּלֶךְ בְּדֶרֶךְ אָבִיו וּבְדֶרֶךְ אִמּוֹ וּבְדֶרֶךְ יָרׇבְעָם בֶּן־נְבָט אֲשֶׁר הֶחֱטִיא אֶת־יִשְׂרָאֵֽל׃ 52
ಆದರೆ ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ತನ್ನ ತಂದೆಯ ಮಾರ್ಗದಲ್ಲಿಯೂ, ತನ್ನ ತಾಯಿಯ ಮಾರ್ಗದಲ್ಲಿಯೂ ಇಸ್ರಾಯೇಲರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನ ಮಾರ್ಗದಲ್ಲಿಯೂ ನಡೆದನು.
וַֽיַּעֲבֹד אֶת־הַבַּעַל וַיִּֽשְׁתַּחֲוֶה לוֹ וַיַּכְעֵס אֶת־יְהֹוָה אֱלֹהֵי יִשְׂרָאֵל כְּכֹל אֲשֶׁר־עָשָׂה אָבִֽיו׃ 53
ಅವನು ಬಾಳನನ್ನು ಸೇವಿಸಿ, ಅದಕ್ಕೆ ಅಡ್ಡಬಿದ್ದು, ತನ್ನ ತಂದೆಯು ಮಾಡಿದ ಎಲ್ಲಾದರ ಪ್ರಕಾರವೇ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಕೋಪ ಬರುವಂತೆ ಮಾಡಿದನು.

< מלכים א 22 >