< שמואל א 17 >

וַיַּאַסְפוּ פְלִשְׁתִּים אֶת־מַֽחֲנֵיהֶם לַמִּלְחָמָה וַיֵּאָסְפוּ שֹׂכֹה אֲשֶׁר לִֽיהוּדָה וַֽיַּחֲנוּ בֵּין־שׂוֹכֹה וּבֵין־עֲזֵקָה בְּאֶפֶס דַּמִּֽים׃ 1
ಫಿಲಿಷ್ಟಿಯರು ಯುದ್ಧಮಾಡುವುದಕ್ಕೆ ತಮ್ಮ ಸೈನ್ಯವನ್ನು ಯೆಹೂದ ದೇಶದ ಸೋಕೋವಿನಲ್ಲಿ ಕೂಡಿಸಿದರು. ಅಜೇಕಕ್ಕೂ ಸೋಕೋವಿಗೂ ಮಧ್ಯದಲ್ಲಿರುವ ಎಫೆಸ ದಮ್ಮೀಮಿನಲ್ಲಿ ದಂಡಿಳಿದರು.
וְשָׁאוּל וְאִֽישׁ־יִשְׂרָאֵל נֶֽאֶסְפוּ וַֽיַּחֲנוּ בְּעֵמֶק הָאֵלָה וַיַּעַרְכוּ מִלְחָמָה לִקְרַאת פְּלִשְׁתִּֽים׃ 2
ಸೌಲನೂ, ಇಸ್ರಾಯೇಲರೂ ಕೂಡಿಕೊಂಡರು. ಏಲಾ ತಗ್ಗಿನ ಬಳಿಯಲ್ಲಿ ದಂಡಿಳಿದು, ಫಿಲಿಷ್ಟಿಯರಿಗೆ ಎದುರಾಗಿ ಯುದ್ಧಮಾಡಲು ವ್ಯೂಹ ಕಟ್ಟಿದರು.
וּפְלִשְׁתִּים עֹמְדִים אֶל־הָהָר מִזֶּה וְיִשְׂרָאֵל עֹמְדִים אֶל־הָהָר מִזֶּה וְהַגַּיְא בֵּינֵיהֶֽם׃ 3
ಫಿಲಿಷ್ಟಿಯರು ಒಂದು ಕಡೆಯಾಗಿ ಪರ್ವತದ ಬಳಿಯಲ್ಲಿಯೂ, ಇಸ್ರಾಯೇಲರು ಒಂದು ಕಡೆಯಾಗಿ ಪರ್ವತದ ಬಳಿಯಲ್ಲಿಯೂ ನಿಂತರು. ಅವರ ಮಧ್ಯದಲ್ಲಿ ತಗ್ಗು ಇತ್ತು.
וַיֵּצֵא אִֽישׁ־הַבֵּנַיִם מִמַּחֲנוֹת פְּלִשְׁתִּים גׇּלְיָת שְׁמוֹ מִגַּת גׇּבְהוֹ שֵׁשׁ אַמּוֹת וָזָֽרֶת׃ 4
ಗತ್ ಊರಿನ ರಣವೀರನಾದ ಗೊಲ್ಯಾತನೆಂಬ ಹೆಸರುಳ್ಳ ಒಬ್ಬನು ಫಿಲಿಷ್ಟಿಯರ ದಂಡಿನಿಂದ ಹೊರಬಂದನು. ಅವನ ಎತ್ತರ ಸುಮಾರು ಮೂರು ಮೀಟರ್.
וְכוֹבַע נְחֹשֶׁת עַל־רֹאשׁוֹ וְשִׁרְיוֹן קַשְׂקַשִּׂים הוּא לָבוּשׁ וּמִשְׁקַל הַשִּׁרְיוֹן חֲמֵשֶׁת־אֲלָפִים שְׁקָלִים נְחֹֽשֶׁת׃ 5
ಅವನ ತಲೆಯ ಮೇಲೆ ಕಂಚಿನ ಶಿರಸ್ತ್ರಾಣ ಇತ್ತು. ಪರೆಪರೆಯಾಗಿ ಜೋಡಿಸಲಾಗಿದ್ದ ಕವಚವನ್ನು ಅವನು ತೊಟ್ಟುಕೊಂಡಿದ್ದನು. ಆ ಕವಚವು ಸುಮಾರು ಐವತ್ತೇಳು ಕಿಲೋಗ್ರಾಂ ತೂಕವಾಗಿತ್ತು.
וּמִצְחַת נְחֹשֶׁת עַל־רַגְלָיו וְכִידוֹן נְחֹשֶׁת בֵּין כְּתֵפָֽיו׃ 6
ಅವನ ಕಾಲುಗಳಲ್ಲಿ ಕಂಚಿನ ಚಮ್ಮಳಿಗೆ. ಅವನ ತೋಳುಗಳ ಮಧ್ಯದಲ್ಲಿ ಭರ್ಜಿ ಇದ್ದವು.
(וחץ) [וְעֵץ] חֲנִיתוֹ כִּמְנוֹר אֹֽרְגִים וְלַהֶבֶת חֲנִיתוֹ שֵׁשׁ־מֵאוֹת שְׁקָלִים בַּרְזֶל וְנֹשֵׂא הַצִּנָּה הֹלֵךְ לְפָנָֽיו׃ 7
ಅವನ ಈಟಿಯ ಕೋಲು ನೇಕಾರರ ಕುಂಟೆಯಷ್ಟು ಗಾತ್ರದಾಗಿತ್ತು. ಅವನ ಈಟಿಯ ಅಲಗು ಏಳು ಕಿಲೋಗ್ರಾಂ ತೂಕವಾಗಿತ್ತು.
וַֽיַּעֲמֹד וַיִּקְרָא אֶל־מַעַרְכֹת יִשְׂרָאֵל וַיֹּאמֶר לָהֶם לָמָּה תֵצְאוּ לַעֲרֹךְ מִלְחָמָה הֲלוֹא אָנֹכִי הַפְּלִשְׁתִּי וְאַתֶּם עֲבָדִים לְשָׁאוּל בְּרוּ־לָכֶם אִישׁ וְיֵרֵד אֵלָֽי׃ 8
ಇದಲ್ಲದೆ ಖೇಡ್ಯ ಹಿಡಿಯುವವನು ಅವನ ಮುಂದೆ ನಡೆದನು. ಅವನು ನಿಂತು ಇಸ್ರಾಯೇಲ್ ಸೈನ್ಯಗಳಿಗೆ ಕೂಗಿ ಹೇಳಿದ್ದೇನೆಂದರೆ, “ಏಕೆ ನೀವು ವ್ಯೂಹ ಕಟ್ಟಿಕೊಳ್ಳ ಹೊರಟಿರಿ? ನಾನು ಫಿಲಿಷ್ಟಿಯನಲ್ಲವೋ? ನೀವು ಸೌಲನ ಸೇವಕರಲ್ಲವೋ? ನೀವು ನಿಮಗೋಸ್ಕರ ಒಬ್ಬನನ್ನು ಆಯ್ದುಕೊಳ್ಳಿರಿ. ಅವನು ನನ್ನ ಮುಂದೆ ಬರಲಿ.
אִם־יוּכַל לְהִלָּחֵם אִתִּי וְהִכָּנִי וְהָיִינוּ לָכֶם לַעֲבָדִים וְאִם־אֲנִי אֽוּכַל־לוֹ וְהִכִּיתִיו וִהְיִיתֶם לָנוּ לַעֲבָדִים וַעֲבַדְתֶּם אֹתָֽנוּ׃ 9
ಅವನು ನನ್ನ ಸಂಗಡ ಯುದ್ಧಮಾಡಿ ನನ್ನನ್ನು ಕೊಂದರೆ, ನಾವು ನಿಮಗೆ ಸೇವಕರಾಗುವೆವು. ಆದರೆ ನಾನು ಅವನನ್ನು ಸೋಲಿಸಿ ಕೊಂದರೆ ನೀವು ನಮಗೆ ಸೇವಕರಾಗಿದ್ದು ನಮ್ಮನ್ನು ಸೇವಿಸಬೇಕು,” ಎಂದನು.
וַיֹּאמֶר הַפְּלִשְׁתִּי אֲנִי חֵרַפְתִּי אֶת־מַעַרְכוֹת יִשְׂרָאֵל הַיּוֹם הַזֶּה תְּנוּ־לִי אִישׁ וְנִֽלָּחֲמָה יָֽחַד׃ 10
ಆ ಫಿಲಿಷ್ಟಿಯನು, “ನಾನು ಈ ದಿನ ಇಸ್ರಾಯೇಲಿನ ಸೈನ್ಯಗಳನ್ನು ನಿಂದಿಸುತ್ತೇನೆ. ನಾವು ಒಬ್ಬರಿಗೊಬ್ಬರು ಯುದ್ಧಮಾಡುವ ಹಾಗೆ ನನಗೆ ಒಬ್ಬನನ್ನು ಬಿಟ್ಟುಬಿಡಿರಿ,” ಎಂದನು.
וַיִּשְׁמַע שָׁאוּל וְכׇל־יִשְׂרָאֵל אֶת־דִּבְרֵי הַפְּלִשְׁתִּי הָאֵלֶּה וַיֵּחַתּוּ וַיִּֽרְאוּ מְאֹֽד׃ 11
ಸೌಲನೂ, ಸಮಸ್ತ ಇಸ್ರಾಯೇಲರೂ ಆ ಫಿಲಿಷ್ಟಿಯನ ಮಾತುಗಳನ್ನು ಕೇಳಿದಾಗ ಹೆದರಿಕೊಂಡು ಬಹು ಭಯಪಟ್ಟರು.
וְדָוִד בֶּן־אִישׁ אֶפְרָתִי הַזֶּה מִבֵּית לֶחֶם יְהוּדָה וּשְׁמוֹ יִשַׁי וְלוֹ שְׁמֹנָה בָנִים וְהָאִישׁ בִּימֵי שָׁאוּל זָקֵן בָּא בַאֲנָשִֽׁים׃ 12
ದಾವೀದನು ಯೆಹೂದದ ಬೇತ್ಲೆಹೇಮ್ ಊರಿನ ಎಫ್ರಾತ್ಯನಾದ ಇಷಯನೆಂಬವನ ಮಗನಾಗಿದ್ದನು. ಈ ಇಷಯನಿಗೆ ಎಂಟು ಮಂದಿ ಪುತ್ರರಿದ್ದರು. ಸೌಲನ ಕಾಲದಲ್ಲಿ ಇಷಯನು ವೃದ್ಧನಾಗಿದ್ದನು.
וַיֵּלְכוּ שְׁלֹשֶׁת בְּנֵֽי־יִשַׁי הַגְּדֹלִים הָלְכוּ אַחֲרֵֽי־שָׁאוּל לַמִּלְחָמָה וְשֵׁם ׀ שְׁלֹשֶׁת בָּנָיו אֲשֶׁר הָֽלְכוּ בַּמִּלְחָמָה אֱלִיאָב הַבְּכוֹר וּמִשְׁנֵהוּ אֲבִינָדָב וְהַשְּׁלִשִׁי שַׁמָּֽה׃ 13
ಇಷಯನ ಮೂವರು ಹಿರಿಯ ಪುತ್ರರು ಸೌಲನ ಹಿಂದೆ ಯುದ್ಧಕ್ಕೆ ಹೋಗಿದ್ದರು. ಯುದ್ಧಕ್ಕೆ ಹೋದ ಆ ಮೂವರು ಪುತ್ರರಲ್ಲಿ ಚೊಚ್ಚಲ ಮಗನ ಹೆಸರು ಎಲೀಯಾಬನು, ಎರಡನೆಯವನ ಹೆಸರು ಅಬೀನಾದಾಬನು; ಮೂರನೆಯವನ ಹೆಸರು ಶಮ್ಮನು;
וְדָוִד הוּא הַקָּטָן וּשְׁלֹשָׁה הַגְּדֹלִים הָלְכוּ אַחֲרֵי שָׁאֽוּל׃ 14
ಆದರೆ ದಾವೀದನು ಚಿಕ್ಕವನಾಗಿದ್ದನು. ಹಿರಿಯರಾದ ಆ ಮೂವರು ಸೌಲನ ಹಿಂದೆ ಯುದ್ಧಕ್ಕೆ ಹೋಗಿದ್ದರು.
וְדָוִד הֹלֵךְ וָשָׁב מֵעַל שָׁאוּל לִרְעוֹת אֶת־צֹאן אָבִיו בֵּית לָֽחֶם׃ 15
ದಾವೀದನು ಸೌಲನನ್ನು ಬಿಟ್ಟು, ತನ್ನ ತಂದೆಯ ಕುರಿಗಳನ್ನು ಮೇಯಿಸಲು ಬೇತ್ಲೆಹೇಮಿಗೆ ಆಗಾಗ ಹೋಗುತ್ತಿದ್ದನು.
וַיִּגַּשׁ הַפְּלִשְׁתִּי הַשְׁכֵּם וְהַעֲרֵב וַיִּתְיַצֵּב אַרְבָּעִים יֽוֹם׃ 16
ಆದರೆ ಆ ಫಿಲಿಷ್ಟಿಯನು ಪ್ರತಿ ಉದಯದಲ್ಲಿಯೂ, ಸಾಯಂಕಾಲದಲ್ಲಿಯೂ ಬಂದು ನಾಲ್ವತ್ತು ದಿವಸ ನಿಂತುಕೊಳ್ಳುತ್ತಿದ್ದನು.
וַיֹּאמֶר יִשַׁי לְדָוִד בְּנוֹ קַח־נָא לְאַחֶיךָ אֵיפַת הַקָּלִיא הַזֶּה וַעֲשָׂרָה לֶחֶם הַזֶּה וְהָרֵץ הַֽמַּחֲנֶה לְאַחֶֽיךָ׃ 17
ಇಷಯನು ತನ್ನ ಮಗನಾದ ದಾವೀದನಿಗೆ, “ನಿನ್ನ ಸಹೋದರರಿಗೋಸ್ಕರ ಒಂದು ಏಫದ ಹುರಿದ ಧಾನ್ಯವನ್ನೂ, ಈ ಹತ್ತು ರೊಟ್ಟಿಗಳನ್ನೂ ತೆಗೆದುಕೊಂಡು ದಂಡಿನಲ್ಲಿರುವ ನಿನ್ನ ಸಹೋದರರ ಬಳಿಗೆ ಹೋಗು.
וְאֵת עֲשֶׂרֶת חֲרִצֵי הֶחָלָב הָאֵלֶּה תָּבִיא לְשַׂר־הָאָלֶף וְאֶת־אַחֶיךָ תִּפְקֹד לְשָׁלוֹם וְאֶת־עֲרֻבָּתָם תִּקָּֽח׃ 18
ಇದಲ್ಲದೆ ಈ ಹತ್ತು ಗಿಣ್ಣಿನ ಗಡ್ಡೆಗಳನ್ನು ಅವರ ಪ್ರಧಾನನಿಗೆ ಕೊಟ್ಟು, ನಿನ್ನ ಸಹೋದರರ ಕ್ಷೇಮಸಮಾಚಾರವನ್ನು ವಿಚಾರಿಸಿ, ಅವರ ಗುರುತನ್ನು ತೆಗೆದುಕೊಂಡು ಬಾ,” ಎಂದನು.
וְשָׁאוּל וְהֵמָּה וְכׇל־אִישׁ יִשְׂרָאֵל בְּעֵמֶק הָאֵלָה נִלְחָמִים עִם־פְּלִשְׁתִּֽים׃ 19
ಆಗ ಸೌಲನೂ, ಇಸ್ರಾಯೇಲರೆಲ್ಲರೂ ಫಿಲಿಷ್ಟಿಯರ ಸಂಗಡ ಏಲಾ ತಗ್ಗಿನಲ್ಲಿ ಯುದ್ಧ ಮಾಡುತ್ತಿದ್ದರು.
וַיַּשְׁכֵּם דָּוִד בַּבֹּקֶר וַיִּטֹּשׁ אֶת־הַצֹּאן עַל־שֹׁמֵר וַיִּשָּׂא וַיֵּלֶךְ כַּאֲשֶׁר צִוָּהוּ יִשָׁי וַיָּבֹא הַמַּעְגָּלָה וְהַחַיִל הַיֹּצֵא אֶל־הַמַּעֲרָכָה וְהֵרֵעוּ בַּמִּלְחָמָֽה׃ 20
ದಾವೀದನು ಉದಯಕಾಲದಲ್ಲಿ ಎದ್ದು, ಕುರಿ ಕಾಯುವವನ ವಶಕ್ಕೆ ಕುರಿಗಳನ್ನು ಬಿಟ್ಟು, ತನ್ನ ತಂದೆ ಇಷಯನು ತನಗೆ ಆಜ್ಞಾಪಿಸಿದ ಹಾಗೆಯೇ ತೆಗೆದುಕೊಂಡುಹೋಗಿ ಸೈನ್ಯವು ಯುದ್ಧಕ್ಕೆ ಆರ್ಭಟಿಸಿ ಹೊರಡುವಾಗ, ಸಲಕರಣೆಗಳು ಇರುವ ಸ್ಥಳಕ್ಕೆ ಬಂದನು.
וַתַּעֲרֹךְ יִשְׂרָאֵל וּפְלִשְׁתִּים מַעֲרָכָה לִקְרַאת מַעֲרָכָֽה׃ 21
ಇಸ್ರಾಯೇಲರೂ, ಫಿಲಿಷ್ಟಿಯರೂ ಸೈನ್ಯಕ್ಕೆದುರಾಗಿ ಸೈನ್ಯ ವ್ಯೂಹ ಕಟ್ಟಿಕೊಂಡಿದ್ದರು.
וַיִּטֹּשׁ דָּוִד אֶת־הַכֵּלִים מֵעָלָיו עַל־יַד שׁוֹמֵר הַכֵּלִים וַיָּרׇץ הַמַּעֲרָכָה וַיָּבֹא וַיִּשְׁאַל לְאֶחָיו לְשָׁלֽוֹם׃ 22
ಆಗ ದಾವೀದನು ತಾನು ತೆಗೆದುಕೊಂಡು ಬಂದದ್ದನ್ನು, ವಸ್ತುಗಳನ್ನು ಕಾಯುವವನ ಕೈಯಲ್ಲಿ ಇಟ್ಟುಬಿಟ್ಟು, ರಣರಂಗಕ್ಕೆ ಓಡಿಹೋಗಿ, ತನ್ನ ಸಹೋದರರ ಬಳಿಗೆ ಬಂದು, ಯೋಗಕ್ಷೇಮ ವಿಚಾರಿಸಿದನು.
וְהוּא ׀ מְדַבֵּר עִמָּם וְהִנֵּה אִישׁ הַבֵּנַיִם עוֹלֶה גׇּלְיָת הַפְּלִשְׁתִּי שְׁמוֹ מִגַּת (ממערות) [מִמַּעַרְכוֹת] פְּלִשְׁתִּים וַיְדַבֵּר כַּדְּבָרִים הָאֵלֶּה וַיִּשְׁמַע דָּוִֽד׃ 23
ಅವನು ಇವರ ಸಂಗಡ ಮಾತನಾಡಿಕೊಳ್ಳುತ್ತಾ ಇರುವಾಗ, ಗತ್ ಊರಿನ ರಣವೀರನಾದ ಗೊಲ್ಯಾತನೆಂಬ ಆ ಫಿಲಿಷ್ಟಿಯನು ಫಿಲಿಷ್ಟಿಯರ ಸೈನ್ಯದಿಂದ ಹೊರಟು, ಮೊದಲಿನ ಹಾಗೆಯೇ ಮಾತನಾಡಿದನು. ಆ ಮಾತುಗಳನ್ನು ದಾವೀದನು ಕೇಳಿದನು.
וְכֹל אִישׁ יִשְׂרָאֵל בִּרְאוֹתָם אֶת־הָאִישׁ וַיָּנֻסוּ מִפָּנָיו וַיִּֽירְאוּ מְאֹֽד׃ 24
ಇಸ್ರಾಯೇಲರೆಲ್ಲರೂ ಅವನನ್ನು ಕಂಡಾಗ, ಅವನ ಬಳಿಯಿಂದ ಓಡಿಹೋದರು; ಬಹು ಭಯಪಟ್ಟರು.
וַיֹּאמֶר ׀ אִישׁ יִשְׂרָאֵל הַרְּאִיתֶם הָאִישׁ הָֽעֹלֶה הַזֶּה כִּי לְחָרֵף אֶת־יִשְׂרָאֵל עֹלֶה וְֽהָיָה הָאִישׁ אֲשֶׁר־יַכֶּנּוּ יַעְשְׁרֶנּוּ הַמֶּלֶךְ ׀ עֹשֶׁר גָּדוֹל וְאֶת־בִּתּוֹ יִתֶּן־לוֹ וְאֵת בֵּית אָבִיו יַעֲשֶׂה חׇפְשִׁי בְּיִשְׂרָאֵֽל׃ 25
ಇಸ್ರಾಯೇಲರು, “ಏರಿ ಬಂದ ಈ ಮನುಷ್ಯನನ್ನು ಕಂಡಿರೋ? ಇಸ್ರಾಯೇಲನ್ನು ಪ್ರತಿಭಟಿಸಿ ಏರಿ ಬಂದಿದ್ದಾನಲ್ಲ. ಯಾವನು ಇವನನ್ನು ಕೊಂದು ಬಿಡುವನೋ, ಅವನನ್ನು ಅರಸನು ಬಹಳ ಐಶ್ವರ್ಯವಂತನನ್ನಾಗಿ ಮಾಡಿ, ಅವನಿಗೆ ತನ್ನ ಮಗಳನ್ನು ಕೊಟ್ಟು ಮದುವೆ ಮಾಡಿಸುವನು ಮತ್ತು ಅವನ ತಂದೆಯ ಮನೆಯನ್ನು ಇಸ್ರಾಯೇಲರಲ್ಲಿ ತೆರಿಗೆಯಿಂದ ವಿಮೋಚಿಸುವನು,” ಎಂದರು.
וַיֹּאמֶר דָּוִד אֶֽל־הָאֲנָשִׁים הָעֹמְדִים עִמּוֹ לֵאמֹר מַה־יֵּעָשֶׂה לָאִישׁ אֲשֶׁר יַכֶּה אֶת־הַפְּלִשְׁתִּי הַלָּז וְהֵסִיר חֶרְפָּה מֵעַל יִשְׂרָאֵל כִּי מִי הַפְּלִשְׁתִּי הֶעָרֵל הַזֶּה כִּי חֵרֵף מַעַרְכוֹת אֱלֹהִים חַיִּֽים׃ 26
ಆಗ ದಾವೀದನು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರಿಗೆ, “ಈ ಫಿಲಿಷ್ಟಿಯನನ್ನು ಕೊಂದು, ಇಸ್ರಾಯೇಲಿನ ಮೇಲಿಂದ ನಿಂದೆಯನ್ನು ತೆಗೆದುಬಿಡುವ ಆ ಮನುಷ್ಯನಿಗೆ ಏನು ಸಿಕ್ಕುವುದು? ಏಕೆಂದರೆ ಸುನ್ನತಿ ಇಲ್ಲದ ಆ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ದೂಷಿಸುವುದಕ್ಕೆ ಎಷ್ಟರವನು,” ಎಂದನು.
וַיֹּאמֶר לוֹ הָעָם כַּדָּבָר הַזֶּה לֵאמֹר כֹּה יֵעָשֶׂה לָאִישׁ אֲשֶׁר יַכֶּֽנּוּ׃ 27
ಜನರು ಆ ಮಾತಿಗೆ ಸರಿಯಾಗಿ, “ಅವನನ್ನು ಕೊಂದವನಿಗೆ ಈ ಪ್ರಕಾರ ಮಾಡಲಾಗುವುದು,” ಎಂದು ಹೇಳಿದರು.
וַיִּשְׁמַע אֱלִיאָב אָחִיו הַגָּדוֹל בְּדַבְּרוֹ אֶל־הָאֲנָשִׁים וַיִּֽחַר־אַף אֱלִיאָב בְּדָוִד וַיֹּאמֶר ׀ לָמָּה־זֶּה יָרַדְתָּ וְעַל־מִי נָטַשְׁתָּ מְעַט הַצֹּאן הָהֵנָּה בַּמִּדְבָּר אֲנִי יָדַעְתִּי אֶת־זְדֹנְךָ וְאֵת רֹעַ לְבָבֶךָ כִּי לְמַעַן רְאוֹת הַמִּלְחָמָה יָרָֽדְתָּ׃ 28
ದಾವೀದನು ಆ ಮನುಷ್ಯರ ಸಂಗಡ ಮಾತನಾಡುತ್ತಿರುವುದನ್ನು ಅವನ ಹಿರಿಯ ಸಹೋದರನಾದ ಎಲೀಯಾಬನು ಕೇಳಿ, ಅವನ ಮೇಲೆ ಕೋಪಗೊಂಡು, “ನೀನು ಇಲ್ಲಿಗೆ ಬಂದದ್ದೇನು? ಅಡವಿಯಲ್ಲಿರುವ ಆ ಸ್ವಲ್ಪ ಕುರಿಗಳನ್ನು ಯಾರ ವಶಕ್ಕೆ ಒಪ್ಪಿಸಿ ಬಂದೆ? ನಿನ್ನ ಗರ್ವವನ್ನೂ, ನಿನ್ನ ಹೃದಯದ ಅಹಂಕಾರವನ್ನೂ ನಾನು ಬಲ್ಲೆನು. ಏಕೆಂದರೆ ಯುದ್ಧವನ್ನು ನೋಡಲು ಇಳಿದು ಬಂದಿದ್ದೀ,” ಎಂದನು.
וַיֹּאמֶר דָּוִד מֶה עָשִׂיתִי עָתָּה הֲלוֹא דָּבָר הֽוּא׃ 29
ಅದಕ್ಕೆ ದಾವೀದನು, “ನಾನು ಈಗ ಮಾಡಿದ್ದೇನು? ಮಾತನಾಡಿದೆನಷ್ಟೇ?” ಎಂದನು.
וַיִּסֹּב מֵֽאֶצְלוֹ אֶל־מוּל אַחֵר וַיֹּאמֶר כַּדָּבָר הַזֶּה וַיְשִׁבֻהוּ הָעָם דָּבָר כַּדָּבָר הָרִאשֽׁוֹן׃ 30
ಅವನನ್ನು ಬಿಟ್ಟು ಬೇರೊಬ್ಬನ ಕಡೆಗೆ ತಿರುಗಿಕೊಂಡು ಹಾಗೆಯೇ ಕೇಳಿದನು. ಆಗ ಜನರು ಮೊದಲು ಹೇಳಿದ ಹಾಗೆಯೇ ಅವನಿಗೆ ಉತ್ತರವನ್ನು ಹೇಳಿದರು.
וַיִּשָּֽׁמְעוּ הַדְּבָרִים אֲשֶׁר דִּבֶּר דָּוִד וַיַּגִּדוּ לִפְנֵֽי־שָׁאוּל וַיִּקָּחֵֽהוּ׃ 31
ದಾವೀದನು ಹೇಳಿದ ಮಾತುಗಳನ್ನು ಕೇಳಿದವರು ಸೌಲನ ಮುಂದೆ ತಿಳಿಸಿದರು. ಸೌಲನು ದಾವೀದನನ್ನು ಕರೆಯಿಸಿದನು.
וַיֹּאמֶר דָּוִד אֶל־שָׁאוּל אַל־יִפֹּל לֵב־אָדָם עָלָיו עַבְדְּךָ יֵלֵךְ וְנִלְחַם עִם־הַפְּלִשְׁתִּי הַזֶּֽה׃ 32
ಆಗ ದಾವೀದನು ಸೌಲನಿಗೆ, “ಅವನ ನಿಮಿತ್ತವಾಗಿ ಯಾವ ಹೃದಯವೂ ಕುಗ್ಗಬಾರದು. ನಿನ್ನ ಸೇವಕನು ಹೋಗಿ ಈ ಫಿಲಿಷ್ಟಿಯನ ಸಂಗಡ ಯುದ್ಧಮಾಡುವನು,” ಎಂದನು.
וַיֹּאמֶר שָׁאוּל אֶל־דָּוִד לֹא תוּכַל לָלֶכֶת אֶל־הַפְּלִשְׁתִּי הַזֶּה לְהִלָּחֵם עִמּוֹ כִּֽי־נַעַר אַתָּה וְהוּא אִישׁ מִלְחָמָה מִנְּעֻרָֽיו׃ 33
ಆಗ ಸೌಲನು ದಾವೀದನಿಗೆ, “ಈ ಫಿಲಿಷ್ಟಿಯನ ಮೇಲೆ ಯುದ್ಧಮಾಡಲು ನಿನ್ನಿಂದಾಗದು, ಏಕೆಂದರೆ ನೀನು ಹುಡುಗನಾಗಿದ್ದೀಯೆ. ಆದರೆ ಅವನು ಚಿಕ್ಕಂದಿನಿಂದ ಯುದ್ಧದ ಮನುಷ್ಯನಾಗಿದ್ದಾನೆ,” ಎಂದನು.
וַיֹּאמֶר דָּוִד אֶל־שָׁאוּל רֹעֶה הָיָה עַבְדְּךָ לְאָבִיו בַּצֹּאן וּבָא הָאֲרִי וְאֶת־הַדּוֹב וְנָשָׂא שֶׂה מֵהָעֵֽדֶר׃ 34
ದಾವೀದನು ಸೌಲನಿಗೆ, “ನಿನ್ನ ಸೇವಕನು ತನ್ನ ತಂದೆಯ ಕುರಿಗಳನ್ನು ಮೇಯಿಸಿಕೊಂಡಿರುವಾಗ ಸಿಂಹವೂ ಕರಡಿಯೂ ಬಂದು ಮಂದೆಯಲ್ಲಿರುವ ಕುರಿಮರಿಯನ್ನು ಹಿಡಿದವು.
וְיָצָאתִי אַחֲרָיו וְהִכִּתִיו וְהִצַּלְתִּי מִפִּיו וַיָּקׇם עָלַי וְהֶחֱזַקְתִּי בִּזְקָנוֹ וְהִכִּתִיו וַהֲמִיתִּֽיו׃ 35
ಆಗ ನಾನು ಅದರ ಹಿಂದೆ ಹೋಗಿ, ಅದನ್ನು ಹೊಡೆದುಬಿಟ್ಟು, ಆ ಕುರಿಮರಿಯನ್ನು ಅದರ ಬಾಯಿಂದ ತಪ್ಪಿಸಿದೆನು. ಅದು ನನ್ನ ಮೇಲೆ ಹಿಂದಿರುಗಿ ಬಿದ್ದಾಗ, ನಾನು ಅದರ ಗಡ್ಡವನ್ನು ಹಿಡಿದು, ಹೊಡೆದು ಕೊಂದುಹಾಕಿದೆನು.
גַּם אֶֽת־הָאֲרִי גַּם־הַדֹּב הִכָּה עַבְדֶּךָ וְֽהָיָה הַפְּלִשְׁתִּי הֶעָרֵל הַזֶּה כְּאַחַד מֵהֶם כִּי חֵרֵף מַעַרְכֹת אֱלֹהִים חַיִּֽים׃ 36
ಹೀಗೆಯೇ ನಿನ್ನ ಸೇವಕನು ಆ ಸಿಂಹವನ್ನೂ, ಆ ಕರಡಿಯನ್ನೂ ಕೊಂದುಬಿಟ್ಟೆನು. ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ದೂಷಿಸಿದ್ದರಿಂದ, ಅವುಗಳಲ್ಲಿ ಒಂದರ ಹಾಗೆ ಇರುವನು,” ಎಂದನು.
וַיֹּאמֶר דָּוִד יְהֹוָה אֲשֶׁר הִצִּלַנִי מִיַּד הָֽאֲרִי וּמִיַּד הַדֹּב הוּא יַצִּילֵנִי מִיַּד הַפְּלִשְׁתִּי הַזֶּה וַיֹּאמֶר שָׁאוּל אֶל־דָּוִד לֵךְ וַיהֹוָה יִהְיֶה עִמָּֽךְ׃ 37
ಇದಲ್ಲದೆ ದಾವೀದನು, “ನನ್ನನ್ನು ಸಿಂಹದ ಕೈಗೂ, ಕರಡಿಯ ಕೈಗೂ ತಪ್ಪಿಸಿಬಿಟ್ಟ ಯೆಹೋವ ದೇವರು, ಈ ಫಿಲಿಷ್ಟಿಯನ ಕೈಗೂ ನನ್ನನ್ನು ತಪ್ಪಿಸಿಬಿಡುವರು,” ಎಂದನು. ಆಗ ಸೌಲನು ದಾವೀದನಿಗೆ, “ನೀನು ಹೋಗು, ಯೆಹೋವ ದೇವರು ನಿನ್ನ ಸಂಗಡ ಇರಲಿ,” ಎಂದನು.
וַיַּלְבֵּשׁ שָׁאוּל אֶת־דָּוִד מַדָּיו וְנָתַן קוֹבַע נְחֹשֶׁת עַל־רֹאשׁוֹ וַיַּלְבֵּשׁ אֹתוֹ שִׁרְיֽוֹן׃ 38
ಸೌಲನು ದಾವೀದನಿಗೆ ತನ್ನ ಆಯುಧಗಳನ್ನು ಧರಿಸಲು ಹೇಳಿ, ಅವನ ತಲೆಯ ಮೇಲೆ ಒಂದು ಕಂಚಿನ ಶಿರಸ್ತ್ರಾಣವನ್ನು ಇಟ್ಟು, ಅವನಿಗೆ ಕವಚವನ್ನು ತೊಡಿಸಿದನು.
וַיַּחְגֹּר דָּוִד אֶת־חַרְבּוֹ מֵעַל לְמַדָּיו וַיֹּאֶל לָלֶכֶת כִּי לֹֽא־נִסָּה וַיֹּאמֶר דָּוִד אֶל־שָׁאוּל לֹא אוּכַל לָלֶכֶת בָּאֵלֶּה כִּי לֹא נִסִּיתִי וַיְסִרֵם דָּוִד מֵעָלָֽיו׃ 39
ದಾವೀದನು ಅವನ ಖಡ್ಗವನ್ನು ತನ್ನ ಕವಚಗಳ ಮೇಲೆ ಕಟ್ಟಿಕೊಂಡು ನಡೆದು ಪರೀಕ್ಷಿಸಿದನು. ಆದರೆ ಅವನಿಗೆ ಅದರ ಅಭ್ಯಾಸವಿರಲಿಲ್ಲ. ಆಗ ದಾವೀದನು ಸೌಲನಿಗೆ, “ನನಗೆ ಅವುಗಳ ಅಭ್ಯಾಸವಿಲ್ಲದ್ದರಿಂದ ಇವುಗಳ ಸಂಗಡ ಹೋಗಲಾರೆನು,” ಎಂದು ಹೇಳಿ, ಅವುಗಳನ್ನು ಬಿಚ್ಚಿಹಾಕಿ
וַיִּקַּח מַקְלוֹ בְּיָדוֹ וַיִּבְחַר־לוֹ חֲמִשָּׁה חַלֻּקֵֽי־אֲבָנִים ׀ מִן־הַנַּחַל וַיָּשֶׂם אֹתָם בִּכְלִי הָרֹעִים אֲשֶׁר־לוֹ וּבַיַּלְקוּט וְקַלְעוֹ בְיָדוֹ וַיִּגַּשׁ אֶל־הַפְּלִשְׁתִּֽי׃ 40
ತನ್ನ ಕೋಲನ್ನು ಕೈಯಲ್ಲಿ ಹಿಡಿದು, ಹಳ್ಳದಲ್ಲಿರುವ ಐದು ನುಣುಪಾದ ಕಲ್ಲುಗಳನ್ನು ಆಯ್ದುಕೊಂಡು, ಅವುಗಳನ್ನು ಕುರಿಕಾಯಲು ಬಳಸುವ ತನ್ನ ಚೀಲದಲ್ಲಿ ಹಾಕಿಕೊಂಡು ಕವಣೆಯನ್ನು ತನ್ನ ಕೈಯಲ್ಲಿ ಹಿಡಿದುಕೊಂಡು, ಆ ಫಿಲಿಷ್ಟಿಯನ ಬಳಿಗೆ ಹೋದನು.
וַיֵּלֶךְ הַפְּלִשְׁתִּי הֹלֵךְ וְקָרֵב אֶל־דָּוִד וְהָאִישׁ נֹשֵׂא הַצִּנָּה לְפָנָֽיו׃ 41
ಫಿಲಿಷ್ಟಿಯನು ನಡೆದು ದಾವೀದನ ಬಳಿಗೆ ಸಮೀಪಿಸಿ ಬಂದನು.
וַיַּבֵּט הַפְּלִשְׁתִּי וַיִּרְאֶה אֶת־דָּוִד וַיִּבְזֵהוּ כִּֽי־הָיָה נַעַר וְאַדְמֹנִי עִם־יְפֵה מַרְאֶֽה׃ 42
ಅವನ ಖೇಡ್ಯವನ್ನು ಹಿಡಿಯುವವನು ಅವನ ಮುಂದೆ ನಡೆದನು. ಫಿಲಿಷ್ಟಿಯನು ದಾವೀದನನ್ನು ದೃಷ್ಟಿಸಿ ನೋಡಿದಾಗ, ಅವನು ಕೆಂಪಾದವನಾಗಿಯೂ, ಸುಂದರ ರೂಪವುಳ್ಳವನಾಗಿಯೂ ಇರುವ ಹುಡುಗನಾಗಿದ್ದುದರಿಂದ, ಅವನನ್ನು ತಿರಸ್ಕರಿಸಿ ದಾವೀದನಿಗೆ,
וַיֹּאמֶר הַפְּלִשְׁתִּי אֶל־דָּוִד הֲכֶלֶב אָנֹכִי כִּֽי־אַתָּה בָֽא־אֵלַי בַּמַּקְלוֹת וַיְקַלֵּל הַפְּלִשְׁתִּי אֶת־דָּוִד בֵּאלֹהָֽיו׃ 43
“ನೀನು ಕೋಲು ಹಿಡಿದುಕೊಂಡು ನನ್ನ ಬಳಿಗೆ ಬರುವ ಹಾಗೆ ನಾನು ನಾಯಿಯೋ?” ಎಂದು ಹೇಳಿ ಆ ಫಿಲಿಷ್ಟಿಯನು ತನ್ನ ದೇವರುಗಳಿಂದ ದಾವೀದನನ್ನು ಶಪಿಸಿದನು.
וַיֹּאמֶר הַפְּלִשְׁתִּי אֶל־דָּוִד לְכָה אֵלַי וְאֶתְּנָה אֶת־בְּשָׂרְךָ לְעוֹף הַשָּׁמַיִם וּלְבֶהֱמַת הַשָּׂדֶֽה׃ 44
ದಾವೀದನಿಗೆ, “ನೀನು ನನ್ನ ಬಳಿಗೆ ಬಾ; ನಿನ್ನ ಮಾಂಸವನ್ನು ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಆಹಾರವಾಗಿ ಕೊಡುವೆನು,” ಎಂದನು.
וַיֹּאמֶר דָּוִד אֶל־הַפְּלִשְׁתִּי אַתָּה בָּא אֵלַי בְּחֶרֶב וּבַחֲנִית וּבְכִידוֹן וְאָנֹכִי בָֽא־אֵלֶיךָ בְּשֵׁם יְהֹוָה צְבָאוֹת אֱלֹהֵי מַעַרְכוֹת יִשְׂרָאֵל אֲשֶׁר חֵרַֽפְתָּ׃ 45
ದಾವೀದನು ಫಿಲಿಷ್ಟಿಯನಿಗೆ, “ನೀನು ಖಡ್ಗ, ಈಟಿ ಮತ್ತು ಗುರಾಣಿಗಳೊಡನೆ ನನ್ನ ಬಳಿಗೆ ಬರುತ್ತಿರುವೆ. ಆದರೆ ನಾನು, ನೀನು ನಿಂದಿಸಿದ ಇಸ್ರಾಯೇಲಿನ ಸೈನ್ಯಗಳ ದೇವರಾದ ಸೇನಾಧೀಶ್ವರ ಯೆಹೋವ ದೇವರ ಹೆಸರಿನಲ್ಲಿ ನಿನ್ನ ಬಳಿಗೆ ಬರುತ್ತೇನೆ.
הַיּוֹם הַזֶּה יְסַגֶּרְךָ יְהֹוָה בְּיָדִי וְהִכִּיתִךָ וַהֲסִרֹתִי אֶת־רֹֽאשְׁךָ מֵעָלֶיךָ וְנָתַתִּי פֶּגֶר מַחֲנֵה פְלִשְׁתִּים הַיּוֹם הַזֶּה לְעוֹף הַשָּׁמַיִם וּלְחַיַּת הָאָרֶץ וְיֵֽדְעוּ כׇּל־הָאָרֶץ כִּי יֵשׁ אֱלֹהִים לְיִשְׂרָאֵֽל׃ 46
ಯೆಹೋವ ದೇವರು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವರು; ನಾನು ನಿನ್ನನ್ನು ಹೊಡೆದುಬಿಟ್ಟು, ನಿನ್ನ ತಲೆಯನ್ನು ನಿನ್ನಿಂದ ತೆಗೆದುಹಾಕಿ, ಫಿಲಿಷ್ಟಿಯರ ದಂಡಿನ ಹೆಣಗಳನ್ನು ಈ ದಿನ ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗಿ ಕೊಡುವೆನು. ಈ ದಿನ ಇಸ್ರಾಯೇಲರಲ್ಲಿ ದೇವರು ಇದ್ದಾರೆಂದು ಭೂಲೋಕದವರೆಲ್ಲರೂ ತಿಳಿಯುವರು.
וְיֵֽדְעוּ כׇּל־הַקָּהָל הַזֶּה כִּי־לֹא בְּחֶרֶב וּבַחֲנִית יְהוֹשִׁיעַ יְהֹוָה כִּי לַֽיהֹוָה הַמִּלְחָמָה וְנָתַן אֶתְכֶם בְּיָדֵֽנוּ׃ 47
ಯೆಹೋವ ದೇವರು ಖಡ್ಗದಿಂದಲೂ, ಈಟಿಯಿಂದಲೂ ರಕ್ಷಿಸುವುದಿಲ್ಲ ಎಂಬುದು ಈ ಸಮೂಹವೆಲ್ಲಾ ತಿಳಿದುಕೊಳ್ಳುವುದು. ಏಕೆಂದರೆ ಯುದ್ಧವು ಯೆಹೋವ ದೇವರದ್ದು, ಅವರು ನಿಮ್ಮನ್ನು ನಮ್ಮ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದನು.
וְהָיָה כִּי־קָם הַפְּלִשְׁתִּי וַיֵּלֶךְ וַיִּקְרַב לִקְרַאת דָּוִד וַיְמַהֵר דָּוִד וַיָּרׇץ הַמַּעֲרָכָה לִקְרַאת הַפְּלִשְׁתִּֽי׃ 48
ಆಗ ಆ ಫಿಲಿಷ್ಟಿಯನು ಎದ್ದು ದಾವೀದನಿಗೆ ಎದುರಾಗಿ ಸಮೀಪಿಸಿ ಬರುವಾಗ,
וַיִּשְׁלַח דָּוִד אֶת־יָדוֹ אֶל־הַכֶּלִי וַיִּקַּח מִשָּׁם אֶבֶן וַיְקַלַּע וַיַּךְ אֶת־הַפְּלִשְׁתִּי אֶל־מִצְחוֹ וַתִּטְבַּע הָאֶבֶן בְּמִצְחוֹ וַיִּפֹּל עַל־פָּנָיו אָֽרְצָה׃ 49
ದಾವೀದನು ತ್ವರೆಯಾಗಿ ಆ ಫಿಲಿಷ್ಟಿಯನಿಗೆದುರಾಗಿ ಓಡಿಹೋಗಿ, ತನ್ನ ಕೈಯನ್ನು ಚೀಲದಲ್ಲಿ ಹಾಕಿ, ಅದರಲ್ಲಿರುವ ಒಂದು ಕಲ್ಲನ್ನು ತೆಗೆದುಕೊಂಡು, ಕವಣೆಯಲ್ಲಿಟ್ಟು ಬೀಸಿ, ಫಿಲಿಷ್ಟಿಯನ ಹಣೆಯನ್ನು ತಾಕುವಂತೆ ಎಸೆದನು. ಆ ಕಲ್ಲು ಅವನ ಹಣೆಯೊಳಗೆ ಹೊಕ್ಕದ್ದರಿಂದ, ಅವನು ನೆಲದ ಮೇಲೆ ಬೋರಲು ಬಿದ್ದನು.
וַיֶּחֱזַק דָּוִד מִן־הַפְּלִשְׁתִּי בַּקֶּלַע וּבָאֶבֶן וַיַּךְ אֶת־הַפְּלִשְׁתִּי וַיְמִתֵהוּ וְחֶרֶב אֵין בְּיַד־דָּוִֽד׃ 50
ಹೀಗೆಯೇ ದಾವೀದನು ಒಂದು ಕವಣೆಯ ಕಲ್ಲಿನಿಂದ ಫಿಲಿಷ್ಟಿಯನನ್ನು ಹೊಡೆದು, ಅವನನ್ನು ಕೊಂದುಹಾಕಿದನು.
וַיָּרׇץ דָּוִד וַיַּעֲמֹד אֶל־הַפְּלִשְׁתִּי וַיִּקַּח אֶת־חַרְבּוֹ וַֽיִּשְׁלְפָהּ מִתַּעְרָהּ וַיְמֹתְתֵהוּ וַיִּכְרׇת־בָּהּ אֶת־רֹאשׁוֹ וַיִּרְאוּ הַפְּלִשְׁתִּים כִּי־מֵת גִּבּוֹרָם וַיָּנֻֽסוּ׃ 51
ದಾವೀದನ ಕೈಯಲ್ಲಿ ಖಡ್ಗ ಇರಲಿಲ್ಲ. ದಾವೀದನು ಓಡಿಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು, ಅವನ ಖಡ್ಗವನ್ನು ತೆಗೆದುಕೊಂಡು, ಅದನ್ನು ಒರೆಯಿಂದ ಕಿತ್ತು, ಅವನನ್ನು ಕೊಂದು, ಅವನ ತಲೆಯನ್ನು ಕಡಿದುಹಾಕಿದನು. ಫಿಲಿಷ್ಟಿಯರು ತಮ್ಮ ಪರಾಕ್ರಮಶಾಲಿ ಸತ್ತು ಹೋದದ್ದನ್ನು ಕಂಡಾಗ ಓಡಿಹೋದರು.
וַיָּקֻמוּ אַנְשֵׁי יִשְׂרָאֵל וִיהוּדָה וַיָּרִעוּ וַֽיִּרְדְּפוּ אֶת־הַפְּלִשְׁתִּים עַד־בּוֹאֲךָ גַיְא וְעַד שַׁעֲרֵי עֶקְרוֹן וַֽיִּפְּלוּ חַֽלְלֵי פְלִשְׁתִּים בְּדֶרֶךְ שַׁעֲרַיִם וְעַד־גַּת וְעַד־עֶקְרֽוֹן׃ 52
ಇಸ್ರಾಯೇಲರೂ, ಯೆಹೂದದ ಜನರೂ ಎದ್ದು ಆರ್ಭಟಿಸಿ, ತಗ್ಗಿನ ಮೇರೆಯವರೆಗೂ, ಎಕ್ರೋನಿನ ಬಾಗಿಲಿನವರೆಗೂ ಫಿಲಿಷ್ಟಿಯರನ್ನು ಹಿಂದಟ್ಟಿದರು. ಆದ್ದರಿಂದ ಹತರಾದ ಫಿಲಿಷ್ಟಿಯರು ಶಾರಯಿಮಿನ ಮಾರ್ಗದಲ್ಲಿ ಗತ್ ಎಕ್ರೋನಿನವರೆಗೂ ಬಿದ್ದಿದ್ದರು.
וַיָּשֻׁבוּ בְּנֵי יִשְׂרָאֵל מִדְּלֹק אַחֲרֵי פְלִשְׁתִּים וַיָּשֹׁסּוּ אֶת־מַחֲנֵיהֶֽם׃ 53
ಇಸ್ರಾಯೇಲರು ಫಿಲಿಷ್ಟಿಯರನ್ನು ಓಡಿಸಿಬಿಟ್ಟ ತರುವಾಯ ತಿರುಗಿಬಂದು ಅವರ ಡೇರೆಗಳನ್ನು ಸೂರೆಮಾಡಿದರು.
וַיִּקַּח דָּוִד אֶת־רֹאשׁ הַפְּלִשְׁתִּי וַיְבִאֵהוּ יְרֽוּשָׁלָ͏ִם וְאֶת־כֵּלָיו שָׂם בְּאׇהֳלֽוֹ׃ 54
ದಾವೀದನು ಫಿಲಿಷ್ಟಿಯನ ತಲೆಯನ್ನು ತೆಗೆದುಕೊಂಡು, ಅದನ್ನು ಯೆರೂಸಲೇಮಿಗೆ ತಂದನು. ಆದರೆ ಅವನ ಆಯುಧಗಳನ್ನು ತನ್ನ ಡೇರೆಯಲ್ಲಿ ಇಟ್ಟನು.
וְכִרְאוֹת שָׁאוּל אֶת־דָּוִד יֹצֵא לִקְרַאת הַפְּלִשְׁתִּי אָמַר אֶל־אַבְנֵר שַׂר הַצָּבָא בֶּן־מִי־זֶה הַנַּעַר אַבְנֵר וַיֹּאמֶר אַבְנֵר חֵֽי־נַפְשְׁךָ הַמֶּלֶךְ אִם־יָדָֽעְתִּי׃ 55
ದಾವೀದನು ಫಿಲಿಷ್ಟಿಯನಿಗೆ ಎದುರಾಗಿ ಹೊರಟು ಹೋಗುವುದನ್ನು ಸೌಲನು ಕಂಡಾಗ, ತನ್ನ ಸೈನ್ಯಾಧಿಪತಿಯಾದ ಅಬ್ನೇರನಿಗೆ, “ಅಬ್ನೇರನೇ, ಈ ಯುವಕನು ಯಾರ ಮಗನು?” ಎಂದನು. ಅದಕ್ಕೆ ಅಬ್ನೇರನು, “ಅರಸನೇ, ನಿನ್ನ ಪ್ರಾಣದಾಣೆ ನಾನರಿಯೆ,” ಎಂದನು.
וַיֹּאמֶר הַמֶּלֶךְ שְׁאַל אַתָּה בֶּן־מִי־זֶה הָעָֽלֶם׃ 56
ಅದಕ್ಕೆ ಅರಸನು, “ಆ ಯೌವನಸ್ಥನು ಯಾರ ಮಗನೆಂದು ವಿಚಾರಿಸು,” ಎಂದನು.
וּכְשׁוּב דָּוִד מֵֽהַכּוֹת אֶת־הַפְּלִשְׁתִּי וַיִּקַּח אֹתוֹ אַבְנֵר וַיְבִאֵהוּ לִפְנֵי שָׁאוּל וְרֹאשׁ הַפְּלִשְׁתִּי בְּיָדֽוֹ׃ 57
ಆಗ ದಾವೀದನು ಫಿಲಿಷ್ಟಿಯನನ್ನು ಕೊಂದು, ಅವನ ತಲೆಯನ್ನು ತೆಗೆದುಕೊಂಡು ಹಿಂದಿರುಗಿ ಬರುವಾಗ, ಅಬ್ನೇರನು ಅವನನ್ನು ಕರೆದು, ಸೌಲನ ಮುಂದೆ ತಂದು ಬಿಟ್ಟನು.
וַיֹּאמֶר אֵלָיו שָׁאוּל בֶּן־מִי אַתָּה הַנָּעַר וַיֹּאמֶר דָּוִד בֶּֽן־עַבְדְּךָ יִשַׁי בֵּית הַלַּחְמִֽי׃ 58
ಆಗ ಸೌಲನು, “ಯೌವನಸ್ಥನೇ, ನೀನು ಯಾರ ಮಗನು?” ಎಂದು ಅವನನ್ನು ಕೇಳಿದನು. ಅದಕ್ಕೆ ದಾವೀದನು, “ನಾನು ನಿನ್ನ ಸೇವಕನಾಗಿರುವ ಬೇತ್ಲೆಹೇಮಿನವನಾದ ಇಷಯನ ಮಗನು,” ಎಂದನು.

< שמואל א 17 >