< שמואל א 25 >

וַיָּמׇת שְׁמוּאֵל וַיִּקָּבְצוּ כׇל־יִשְׂרָאֵל וַיִּסְפְּדוּ־לוֹ וַיִּקְבְּרֻהוּ בְּבֵיתוֹ בָּרָמָה וַיָּקׇם דָּוִד וַיֵּרֶד אֶל־מִדְבַּר פָּארָֽן׃ 1
ಸಮುಯೇಲನು ಮರಣಹೊಂದಿದನು. ಇಸ್ರಾಯೇಲರೆಲ್ಲರು ಕೂಡಿಬಂದು ಅವನಿಗೋಸ್ಕರ ಗೋಳಾಡಿ, ರಾಮದಲ್ಲಿರುವ ಅವನ ಮನೆಯ ಅಂಗಳದಲ್ಲಿ ಅವನನ್ನು ಸಮಾಧಿಮಾಡಿದರು. ಅನಂತರ ದಾವೀದನು ಹೊರಟು ಪಾರಾನ್ ಮರುಭೂಮಿಗೆ ಹೋದನು.
וְאִישׁ בְּמָעוֹן וּמַֽעֲשֵׂהוּ בַכַּרְמֶל וְהָאִישׁ גָּדוֹל מְאֹד וְלוֹ צֹאן שְׁלֹשֶׁת־אֲלָפִים וְאֶלֶף עִזִּים וַיְהִי בִּגְזֹז אֶת־צֹאנוֹ בַּכַּרְמֶֽל׃ 2
ಆದರೆ ಕರ್ಮೆಲಿನಲ್ಲಿ ಸೊತ್ತುಗಳಿರುವ ಮಾವೋನಿನ ಒಬ್ಬ ಮನುಷ್ಯನಿದ್ದನು. ಅವನು ಬಹು ಸಿರಿವಂತನಾಗಿದ್ದನು. ಅವನಿಗೆ ಮೂರು ಸಾವಿರ ಕುರಿಗಳೂ ಸಾವಿರ ಮೇಕೆಗಳೂ ಇದ್ದವು.
וְשֵׁם הָאִישׁ נָבָל וְשֵׁם אִשְׁתּוֹ אֲבִגָיִל וְהָאִשָּׁה טֽוֹבַת־שֶׂכֶל וִיפַת תֹּאַר וְהָאִישׁ קָשֶׁה וְרַע מַעֲלָלִים וְהוּא (כלבו) [כָֽלִבִּֽי]׃ 3
ಅವನು ಕರ್ಮೆಲಿನಲ್ಲಿ ತನ್ನ ಕುರಿಗಳ ಉಣ್ಣೆ ಕತ್ತರಿಸುತ್ತಿದ್ದನು. ಈ ಮನುಷ್ಯನ ಹೆಸರು ನಾಬಾಲನು. ಅವನ ಹೆಂಡತಿಯ ಹೆಸರು ಅಬೀಗೈಲಳು. ಆ ಸ್ತ್ರೀಯು ಬಹು ಬುದ್ಧಿವಂತೆ ಹಾಗು ಸುಂದರಿ. ಆದರೆ ಆ ಮನುಷ್ಯನು ಒರಟಾದವನೂ ದುಷ್ಕರ್ಮಿಯೂ ಆಗಿದ್ದನು. ಅವನು ಕಾಲೇಬನ ವಂಶಸ್ಥನು.
וַיִּשְׁמַע דָּוִד בַּמִּדְבָּר כִּי־גֹזֵז נָבָל אֶת־צֹאנֽוֹ׃ 4
ನಾಬಾಲನು ತನ್ನ ಕುರಿಗಳ ಉಣ್ಣೆ ಕತ್ತರಿಸುವ ವರ್ತಮಾನವನ್ನು ದಾವೀದನು ಮರುಭೂಮಿಯಲ್ಲಿ ಕೇಳಿದನು.
וַיִּשְׁלַח דָּוִד עֲשָׂרָה נְעָרִים וַיֹּאמֶר דָּוִד לַנְּעָרִים עֲלוּ כַרְמֶלָה וּבָאתֶם אֶל־נָבָל וּשְׁאֶלְתֶּם־לוֹ בִשְׁמִי לְשָׁלֽוֹם׃ 5
ಆಗ ದಾವೀದನು ಹತ್ತು ಮಂದಿ ಯುವಕರನ್ನು ಕಳುಹಿಸಿದನು. ದಾವೀದನು ಅವರಿಗೆ, “ನೀವು ಕರ್ಮೆಲಿಗೆ ಹೋಗಿ ನಾಬಾಲನ ಬಳಿಗೆ ಸೇರಿದಾಗ, ನನ್ನ ಹೆಸರಿನಿಂದ ಅವನ ಕ್ಷೇಮಸಮಾಚಾರವನ್ನು ಕೇಳಿ, ಬಾಳುವವನಾದ ಅವನಿಗೆ ಹೇಳಬೇಕಾದದ್ದೇನೆಂದರೆ:
וַאֲמַרְתֶּם כֹּה לֶחָי וְאַתָּה שָׁלוֹם וּבֵיתְךָ שָׁלוֹם וְכֹל אֲשֶׁר־לְךָ שָׁלֽוֹם׃ 6
‘ನಿನಗೆ ಸಮಾಧಾನವೂ, ನಿನ್ನ ಮನೆಗೆ ಸಮಾಧಾನವೂ ನಿನ್ನ ಸರ್ವಸಂಪತ್ತಿಗೂ ಸಮಾಧಾನವೂ ಆಗಲಿ.
וְעַתָּה שָׁמַעְתִּי כִּי גֹזְזִים לָךְ עַתָּה הָרֹעִים אֲשֶׁר־לְךָ הָיוּ עִמָּנוּ לֹא הֶכְלַמְנוּם וְלֹֽא־נִפְקַד לָהֶם מְאוּמָה כׇּל־יְמֵי הֱיוֹתָם בַּכַּרְמֶֽל׃ 7
“‘ಈಗ ನಿನಗೆ ಕುರಿಗಳ ಉಣ್ಣೆ ಕತ್ತರಿಸುವವರು ಉಂಟೆಂದು ಕೇಳಿದ್ದೇನೆ. ಆದರೆ ನಮ್ಮ ಸಂಗಡವಿದ್ದ ನಿನ್ನ ಕುರಿಕಾಯುವವರು ಕರ್ಮೆಲಿನಲ್ಲಿದ್ದ ದಿವಸಗಳೆಲ್ಲಾ ನಾವು ಅವರಿಗೆ ತೊಂದರೆಪಡಿಸಲಿಲ್ಲ. ಅವರು ಒಂದಾದರೂ ಕಳೆದುಕೊಳ್ಳಲಿಲ್ಲ.
שְׁאַל אֶת־נְעָרֶיךָ וְיַגִּידוּ לָךְ וְיִמְצְאוּ הַנְּעָרִים חֵן בְּעֵינֶיךָ כִּֽי־עַל־יוֹם טוֹב בָּנוּ תְּנָה־נָּא אֵת אֲשֶׁר תִּמְצָא יָֽדְךָ לַעֲבָדֶיךָ וּלְבִנְךָ לְדָוִֽד׃ 8
ನಿನ್ನ ಸೇವಕರನ್ನು ಕೇಳು. ಅವರು ನಿನಗೆ ಹೇಳುವರು. ಆದ್ದರಿಂದ ಈಗ ಈ ಯುವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆ ದೊರಕಲಿ. ಏಕೆಂದರೆ ಒಳ್ಳೆಯ ದಿವಸದಲ್ಲಿ ಬಂದೆವು. ನಿನ್ನ ಕೈಯಲ್ಲಿ ದೊರಕುವುದನ್ನು ನಿನ್ನ ಸೇವಕರಿಗೂ, ನಿನ್ನ ಪುತ್ರನಾದ ದಾವೀದನಿಗೂ ದಯಪಾಲಿಸು ಎಂದು ಅವನಿಗೆ ಹೇಳಿರಿ,’” ಎಂದು ಅವರನ್ನು ಕಳುಹಿಸಿದನು.
וַיָּבֹאוּ נַעֲרֵי דָוִד וַיְדַבְּרוּ אֶל־נָבָל כְּכׇל־הַדְּבָרִים הָאֵלֶּה בְּשֵׁם דָּוִד וַיָּנֽוּחוּ׃ 9
ದಾವೀದನ ಯುವಕರು ಬಂದು ಈ ಮಾತುಗಳನ್ನೆಲ್ಲಾ ದಾವೀದನ ಹೆಸರಿನಲ್ಲಿ ನಾಬಾಲನಿಗೆ ಹೇಳಿ ಮೌನವಾದರು.
וַיַּעַן נָבָל אֶת־עַבְדֵי דָוִד וַיֹּאמֶר מִי דָוִד וּמִי בֶן־יִשָׁי הַיּוֹם רַבּוּ עֲבָדִים הַמִּתְפָּרְצִים אִישׁ מִפְּנֵי אֲדֹנָֽיו׃ 10
ನಾಬಾಲನು ದಾವೀದನ ಸೇವಕರಿಗೆ ಉತ್ತರವಾಗಿ, “ದಾವೀದನು ಯಾರು? ಇಷಯನ ಮಗನು ಯಾರು? ತಮ್ಮ ಯಜಮಾನನನ್ನು ಬಿಟ್ಟು ಅಗಲಿ ಹೋಗುವ ಸೇವಕರು ಈ ದಿವಸಗಳಲ್ಲಿ ಅನೇಕರು ಉಂಟು.
וְלָקַחְתִּי אֶת־לַחְמִי וְאֶת־מֵימַי וְאֵת טִבְחָתִי אֲשֶׁר טָבַחְתִּי לְגֹזְזָי וְנָֽתַתִּי לַאֲנָשִׁים אֲשֶׁר לֹא יָדַעְתִּי אֵי מִזֶּה הֵֽמָּה׃ 11
ನಾನು ನನ್ನ ರೊಟ್ಟಿಯನ್ನೂ ನೀರನ್ನೂ ಉಣ್ಣೆ ಕತ್ತರಿಸುವವರಿಗೋಸ್ಕರ ನಾನು ಸಿದ್ಧಮಾಡಿಸಿದ ಮಾಂಸವನ್ನು ತೆಗೆದು, ಎಲ್ಲಿಯವರೆಂದು ನಾನರಿಯದ ಮನುಷ್ಯರಿಗೆ ಕೊಡುವೆನೋ?” ಎಂದನು.
וַיַּהַפְכוּ נַעֲרֵֽי־דָוִד לְדַרְכָּם וַיָּשֻׁבוּ וַיָּבֹאוּ וַיַּגִּדוּ לוֹ כְּכֹל הַדְּבָרִים הָאֵֽלֶּה׃ 12
ಹೀಗೆ ದಾವೀದನ ಯುವಕರು ತಮ್ಮ ಮಾರ್ಗವಾಗಿ ಹಿಂದಕ್ಕೆ ತಿರುಗಿ ದಾವೀದನ ಬಳಿಗೆ ಬಂದು, ಈ ಮಾತುಗಳನ್ನೆಲ್ಲಾ ತಿಳಿಸಿದರು.
וַיֹּאמֶר דָּוִד לַאֲנָשָׁיו חִגְרוּ ׀ אִישׁ אֶת־חַרְבּוֹ וַֽיַּחְגְּרוּ אִישׁ אֶת־חַרְבּוֹ וַיַּחְגֹּר גַּם־דָּוִד אֶת־חַרְבּוֹ וַֽיַּעֲלוּ ׀ אַחֲרֵי דָוִד כְּאַרְבַּע מֵאוֹת אִישׁ וּמָאתַיִם יָשְׁבוּ עַל־הַכֵּלִֽים׃ 13
ಆಗ ದಾವೀದನು ತನ್ನ ಜನರಿಗೆ, “ನಿಮ್ಮಲ್ಲಿ ಒಬ್ಬೊಬ್ಬನೂ ನಿಮ್ಮ ಖಡ್ಗವನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ,” ಎಂದನು. ಪ್ರತಿಯೊಬ್ಬನೂ ತನ್ನ ಖಡ್ಗವನ್ನು ಸೊಂಟಕ್ಕೆ ಕಟ್ಟಿಕೊಂಡನು. ಹಾಗೆಯೇ ದಾವೀದನೂ ತನ್ನ ಖಡ್ಗವನ್ನು ಸೊಂಟಕ್ಕೆ ಕಟ್ಟಿಕೊಂಡನು. ದಾವೀದನ ಹಿಂದೆ ಹೆಚ್ಚು ಕಡಿಮೆ ನಾನೂರು ಮಂದಿ ಹೋದರು. ಇನ್ನೂರು ಮಂದಿ ಸಲಕರಣೆಗಳ ಬಳಿಯಲ್ಲಿ ನಿಂತರು.
וְלַאֲבִיגַיִל אֵשֶׁת נָבָל הִגִּיד נַֽעַר־אֶחָד מֵהַנְּעָרִים לֵאמֹר הִנֵּה שָׁלַח דָּוִד מַלְאָכִים ׀ מֵהַמִּדְבָּר לְבָרֵךְ אֶת־אֲדֹנֵינוּ וַיָּעַט בָּהֶֽם׃ 14
ಆಗ ಕೆಲಸದವರಲ್ಲಿ ಯುವಕನಾದವನೊಬ್ಬನು ನಾಬಾಲನ ಹೆಂಡತಿಯಾದ ಅಬೀಗೈಲಳಿಗೆ, “ನಮ್ಮ ಯಜಮಾನನನ್ನು ವಂದಿಸಲು ದಾವೀದನು ಮರುಭೂಮಿಯಿಂದ ದೂತರನ್ನು ಕಳುಹಿಸಿದನು.
וְהָאֲנָשִׁים טֹבִים לָנוּ מְאֹד וְלֹא הׇכְלַמְנוּ וְלֹֽא־פָקַדְנֽוּ מְאוּמָה כׇּל־יְמֵי הִתְהַלַּכְנוּ אִתָּם בִּֽהְיוֹתֵנוּ בַּשָּׂדֶֽה׃ 15
ಆದರೆ ಇವನು ಅವರನ್ನು ನಿಂದಿಸಿದನು. ಆ ಜನರು ನಮಗೆ ಮಹಾ ಉಪಕಾರಿಗಳಾಗಿದ್ದರು. ನಾವು ಹೊರಗೆ ಇರುವಾಗ ಅವರು ನಮ್ಮಲ್ಲಿ ಸಂಚರಿಸುತ್ತಿದ್ದ ದಿನಗಳೆಲ್ಲಾ ನಾವು ತೊಂದರೆ ಪಡಲಿಲ್ಲ. ಒಂದನ್ನಾದರೂ ಕಳೆದುಕೊಳ್ಳಲಿಲ್ಲ.
חוֹמָה הָיוּ עָלֵינוּ גַּם־לַיְלָה גַּם־יוֹמָם כׇּל־יְמֵי הֱיוֹתֵנוּ עִמָּם רֹעִים הַצֹּֽאן׃ 16
ಇದಲ್ಲದೆ ಅವರ ಸಂಗಡ ನಾವು ಕುರಿಗಳನ್ನು ಮೇಯಿಸಿಕೊಂಡು ಇದ್ದ ದಿನಗಳೆಲ್ಲಾ ನಮಗೆ ಅವರು ರಾತ್ರಿ ಹಗಲು ಒಂದು ಕೋಟೆಯಂತೆ ಗೋಡೆಯಾಗಿದ್ದರು.
וְעַתָּה דְּעִי וּרְאִי מַֽה־תַּעֲשִׂי כִּֽי־כָלְתָה הָרָעָה אֶל־אֲדֹנֵינוּ וְעַל כׇּל־בֵּיתוֹ וְהוּא בֶּן־בְּלִיַּעַל מִדַּבֵּר אֵלָֽיו׃ 17
ಈಗ ನೀನು ಮಾಡಬೇಕಾದದ್ದೇನೆಂದು ಆಲೋಚಿಸಿ ನೋಡು. ಏಕೆಂದರೆ ಕೇಡು ನಮ್ಮ ಯಜಮಾನನ ಮೇಲೂ ಅವನ ಮನೆಯ ಮೇಲೆಯೂ ನಿಶ್ಚಯವಾಗಿದೆ. ದುಷ್ಟನಾಗಿರುವ ಅವನ ಸಂಗಡ ಮಾತನಾಡುವುದು ಅಸಾಧ್ಯ,” ಎಂದನು.
וַתְּמַהֵר (אבוגיל) [אֲבִיגַיִל] וַתִּקַּח מָאתַיִם לֶחֶם וּשְׁנַיִם נִבְלֵי־יַיִן וְחָמֵשׁ צֹאן (עשוות) [עֲשׂוּיוֹת] וְחָמֵשׁ סְאִים קָלִי וּמֵאָה צִמֻּקִים וּמָאתַיִם דְּבֵלִים וַתָּשֶׂם עַל־הַחֲמֹרִֽים׃ 18
ಆಗ ಅಬೀಗೈಲಳು ತೀವ್ರವಾಗಿ ಇನ್ನೂರು ರೊಟ್ಟಿಗಳನ್ನೂ ಎರಡು ಬುದ್ದಲಿ ದ್ರಾಕ್ಷಾರಸವನ್ನೂ ಬೇಯಿಸಿದ ಐದು ಕುರಿಗಳ ಮಾಂಸವನ್ನೂ ಐವತ್ತು ಸೇರು ಹುರಿದ ಧಾನ್ಯವನ್ನೂ ಒಣಗಿದ ನೂರು ದ್ರಾಕ್ಷಿ ಗೊನೆಗಳನ್ನೂ ಒಣಗಿದ ಇನ್ನೂರು ಅಂಜೂರದ ಉಂಡೆಗಳನ್ನೂ ಕತ್ತೆಗಳ ಮೇಲೆ ಹೇರಿಸಿಕೊಂಡು,
וַתֹּאמֶר לִנְעָרֶיהָ עִבְרוּ לְפָנַי הִנְנִי אַחֲרֵיכֶם בָּאָה וּלְאִישָׁהּ נָבָל לֹא הִגִּֽידָה׃ 19
ತನ್ನ ಸೇವಕರಿಗೆ, “ನನಗೆ ಮುಂದಾಗಿ ಹೋಗಿರಿ. ನಾನು ನಿಮ್ಮ ಹಿಂದೆ ಬರುವೆನು,” ಎಂದು ಹೇಳಿದಳು. ಆದರೆ ತನ್ನ ಗಂಡನಾದ ನಾಬಾಲನಿಗೆ ಇದನ್ನು ತಿಳಿಸಲಿಲ್ಲ.
וְהָיָה הִיא ׀ רֹכֶבֶת עַֽל־הַחֲמוֹר וְיֹרֶדֶת בְּסֵתֶר הָהָר וְהִנֵּה דָוִד וַאֲנָשָׁיו יֹרְדִים לִקְרָאתָהּ וַתִּפְגֹשׁ אֹתָֽם׃ 20
ಆಗ, ಅವಳು ಒಂದು ಕತ್ತೆಯ ಮೇಲೆ ಹತ್ತಿಕೊಂಡು ಮಾರ್ಗದಲ್ಲಿ ಬೆಟ್ಟದ ಮರೆಗೆ ಬಂದಾಗ, ದಾವೀದನೂ ಅವನ ಜನರೂ ಅವಳಿಗೆ ಎದುರಾಗಿ ಇಳಿದು ಬಂದರು. ಅವಳು ಅವರನ್ನು ಎದುರುಗೊಂಡಳು.
וְדָוִד אָמַר אַךְ לַשֶּׁקֶר שָׁמַרְתִּי אֶֽת־כׇּל־אֲשֶׁר לָזֶה בַּמִּדְבָּר וְלֹא־נִפְקַד מִכׇּל־אֲשֶׁר־לוֹ מְאוּמָה וַיָּשֶׁב־לִי רָעָה תַּחַת טוֹבָֽה׃ 21
ಅಷ್ಟರಲ್ಲಿ ದಾವೀದನು ತನ್ನ ಜನರಿಗೆ, “ಅಡವಿಯಲ್ಲಿದ್ದ ಇವನ ಆಸ್ತಿಯಲ್ಲಿ ಏನೂ ನಷ್ಟವಾಗದಂತೆ ನಾನು ಕಾಪಾಡಿದ್ದು ವ್ಯರ್ಥವಾಯಿತು. ಅವನು ನಾನು ಮಾಡಿದ ಉಪಕಾರಕ್ಕೆ ಅಪಕಾರ ಮಾಡಿದ್ದಾನೆ.
כֹּה־יַעֲשֶׂה אֱלֹהִים לְאֹיְבֵי דָוִד וְכֹה יֹסִיף אִם־אַשְׁאִיר מִכׇּל־אֲשֶׁר־לוֹ עַד־הַבֹּקֶר מַשְׁתִּין בְּקִֽיר׃ 22
ಬೆಳಗಾಗುವಷ್ಟರಲ್ಲಿ ಅವನ ಜನರಲ್ಲಿ ನಾನು ಒಬ್ಬ ಗಂಡಸನನ್ನಾದರೂ ಉಳಿಸಿದರೆ, ದೇವರು ದಾವೀದನಾದ ನನಗೆ ಹೀಗೆಯೂ ಇದಕ್ಕಿಂತ ಅಧಿಕವಾಗಿಯೂ ಮಾಡಲಿ,” ಎಂದು ಹೇಳಿದ್ದನು.
וַתֵּרֶא אֲבִיגַיִל אֶת־דָּוִד וַתְּמַהֵר וַתֵּרֶד מֵעַל הַחֲמוֹר וַתִּפֹּל לְאַפֵּי דָוִד עַל־פָּנֶיהָ וַתִּשְׁתַּחוּ אָֽרֶץ׃ 23
ಅಬೀಗೈಲಳು ದಾವೀದನನ್ನು ಕಂಡಾಗ, ಕತ್ತೆಯಿಂದಿಳಿದು ದಾವೀದನಿಗೆ ಎದುರಾಗಿ ಹೋಗಿ, ಅವನ ಮುಂದೆ ಬೋರಲು ಬಿದ್ದು ನಮಸ್ಕರಿಸಿದಳು.
וַתִּפֹּל עַל־רַגְלָיו וַתֹּאמֶר בִּֽי־אֲנִי אֲדֹנִי הֶעָוֺן וּֽתְדַבֶּר־נָא אֲמָֽתְךָ בְּאׇזְנֶיךָ וּשְׁמַע אֵת דִּבְרֵי אֲמָתֶֽךָ׃ 24
ಆಮೇಲೆ ಅವನ ಪಾದಗಳ ಮೇಲೆ ಬಿದ್ದು, “ನನ್ನ ಒಡೆಯನೇ, ಈ ಅಕ್ರಮವು ನನ್ನ ಮೇಲಿರಲಿ; ದಯಮಾಡಿ ನಿನ್ನ ದಾಸಿಯಾದ ನಾನು ಮಾತಾಡುವುದಕ್ಕೆ ಅಪ್ಪಣೆಯಾಗಲಿ. ನಿನ್ನ ದಾಸಿಯ ಮಾತುಗಳನ್ನು ಕೇಳು.
אַל־נָא יָשִׂים אֲדֹנִי ׀ אֶת־לִבּוֹ אֶל־אִישׁ הַבְּלִיַּעַל הַזֶּה עַל־נָבָל כִּי כִשְׁמוֹ כֶּן־הוּא נָבָל שְׁמוֹ וּנְבָלָה עִמּוֹ וַֽאֲנִי אֲמָתְךָ לֹא רָאִיתִי אֶת־נַעֲרֵי אֲדֹנִי אֲשֶׁר שָׁלָֽחְתָּ׃ 25
ನನ್ನ ಒಡೆಯನೇ, ದಯಮಾಡಿ ದುಷ್ಟನಾದ ನಾಬಾಲನ ಮೇಲೆ ಲಕ್ಷ್ಯವಿಡಬೇಡ. ಏಕೆಂದರೆ ಅವನ ಹೆಸರು ಹೇಗೋ, ಹಾಗೆಯೇ ಅವನು. ಅವನು ನಾಬಾಲನೆಂಬ ಹೆಸರುಳ್ಳವನು. ಬುದ್ಧಿಹೀನತೆ ಅವನಲ್ಲಿ ಇದೆ. ಆದರೆ ನನ್ನ ಒಡೆಯನಾದ ನೀನು ಕಳುಹಿಸಿದ ನಿನ್ನ ಸೇವಕರನ್ನು ನಿನ್ನ ದಾಸಿಯಾದ ನಾನು ನೋಡಲಿಲ್ಲ.
וְעַתָּה אֲדֹנִי חַי־יְהֹוָה וְחֵֽי־נַפְשְׁךָ אֲשֶׁר מְנָעֲךָ יְהֹוָה מִבּוֹא בְדָמִים וְהוֹשֵׁעַ יָדְךָ לָךְ וְעַתָּה יִֽהְיוּ כְנָבָל אֹֽיְבֶיךָ וְהַֽמְבַקְשִׁים אֶל־אֲדֹנִי רָעָֽה׃ 26
ಆದಕಾರಣ ನನ್ನ ಒಡೆಯನೇ, ನೀನು ರಕ್ತ ಚೆಲ್ಲುವುದಕ್ಕೂ, ನಿನ್ನ ಕೈಯಿಂದ ನಿನಗೆ ಮುಯ್ಯಿ ತೀರಿಸಿಕೊಳ್ಳುವುದಕ್ಕೂ ಹೋಗುವುದನ್ನು ದೇವರು ತಡೆದದ್ದರಿಂದ, ಯೆಹೋವ ದೇವರ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ ನಿನ್ನ ಶತ್ರುಗಳೂ, ನನ್ನ ಒಡೆಯನಿಗೆ ಕೇಡನ್ನು ಹುಡುಕುವವರೂ ನಾಬಾಲನ ಹಾಗೆಯೇ ಆಗಲಿ.
וְעַתָּה הַבְּרָכָה הַזֹּאת אֲשֶׁר־הֵבִיא שִׁפְחָתְךָ לַֽאדֹנִי וְנִתְּנָה לַנְּעָרִים הַמִּֽתְהַלְּכִים בְּרַגְלֵי אֲדֹנִֽי׃ 27
ಈಗ ನಿನ್ನ ದಾಸಿಯು ನನ್ನ ಒಡೆಯನಿಗೆ ತೆಗೆದುಕೊಂಡು ಬಂದ ಈ ಕಾಣಿಕೆಯು ನನ್ನ ಒಡೆಯನ ಹೆಜ್ಜೆಯಲ್ಲಿ ನಡೆಯುವವರಿಗೆ ಸಲ್ಲಲಿ.
שָׂא נָא לְפֶשַׁע אֲמָתֶךָ כִּי עָשֹֽׂה־יַעֲשֶׂה יְהֹוָה לַאדֹנִי בַּיִת נֶאֱמָן כִּֽי־מִלְחֲמוֹת יְהֹוָה אֲדֹנִי נִלְחָם וְרָעָה לֹא־תִמָּצֵא בְךָ מִיָּמֶֽיךָ׃ 28
“ನೀನು ದಯಮಾಡಿ ನಿನ್ನ ದಾಸಿಯ ತಪ್ಪನ್ನು ಮನ್ನಿಸಬೇಕು. ಏಕೆಂದರೆ ನನ್ನ ಒಡೆಯನು ಯೆಹೋವ ದೇವರ ಯುದ್ಧಗಳನ್ನು ನಡೆಸುತ್ತಾನೆ. ಆದ್ದರಿಂದ ನಿನ್ನ ಜೀವಮಾನದಲ್ಲೆಲ್ಲಾ ನಿನ್ನಲ್ಲಿ ಕೆಟ್ಟತನ ಕಾಣದಿರಲಿ. ಯೆಹೋವ ದೇವರು ನಿಶ್ಚಯವಾಗಿ ನನ್ನ ಒಡೆಯನಾದ ನಿನಗೆ ಶಾಶ್ವತ ರಾಜ್ಯವನ್ನು ಸ್ಥಿರಪಡಿಸುವರು.
וַיָּקׇם אָדָם לִרְדׇפְךָ וּלְבַקֵּשׁ אֶת־נַפְשֶׁךָ וְֽהָיְתָה נֶפֶשׁ אֲדֹנִי צְרוּרָה ׀ בִּצְרוֹר הַחַיִּים אֵת יְהֹוָה אֱלֹהֶיךָ וְאֵת נֶפֶשׁ אֹיְבֶיךָ יְקַלְּעֶנָּה בְּתוֹךְ כַּף הַקָּֽלַע׃ 29
ಈಗ ನಿನ್ನನ್ನು ಹಿಂದಟ್ಟಿ ನಿನ್ನ ಪ್ರಾಣವನ್ನು ಹುಡುಕುವುದಕ್ಕೆ ಒಬ್ಬನು ಎದ್ದಿದ್ದಾನೆ. ಆದರೂ ನನ್ನ ಒಡೆಯನ ಪ್ರಾಣವು ದೇವರಾದ ಯೆಹೋವ ದೇವರ ಬಳಿಯ ಜೀವದ ಕಟ್ಟಿನಲ್ಲಿ ಕಟ್ಟಿರುವುದು. ನಿನ್ನ ಶತ್ರುಗಳ ಪ್ರಾಣವನ್ನು ಕವಣೆಯ ಮಧ್ಯದಲ್ಲಿಟ್ಟು ಎಸೆದ ಹಾಗೆಯೇ ದೇವರು ಎಸೆದುಬಿಡುವರು.
וְהָיָה כִּֽי־יַעֲשֶׂה יְהֹוָה לַֽאדֹנִי כְּכֹל אֲשֶׁר־דִּבֶּר אֶת־הַטּוֹבָה עָלֶיךָ וְצִוְּךָ לְנָגִיד עַל־יִשְׂרָאֵֽל׃ 30
ಇದಲ್ಲದೆ ನನ್ನ ಒಡೆಯನಾದ ನಿನ್ನನ್ನು ಕುರಿತು ಯೆಹೋವ ದೇವರು ಹೇಳಿದ ಒಳ್ಳೆಯದೆಲ್ಲವನ್ನು ನಿನಗೆ ಮಾಡಿ, ನಿನ್ನನ್ನು ಇಸ್ರಾಯೇಲರ ಮೇಲೆ ನಾಯಕನಾಗಿ ನೇಮಿಸಿದಾಗ,
וְלֹא תִהְיֶה זֹאת ׀ לְךָ לְפוּקָה וּלְמִכְשׁוֹל לֵב לַאדֹנִי וְלִשְׁפׇּךְ־דָּם חִנָּם וּלְהוֹשִׁיעַ אֲדֹנִי לוֹ וְהֵיטִב יְהֹוָה לַֽאדֹנִי וְזָכַרְתָּ אֶת־אֲמָתֶֽךָ׃ 31
ನೀನು ಸುಮ್ಮನೆ ನಿರಪರಾಧಿಯ ರಕ್ತವನ್ನು ಸುರಿಸಿ ಮುಯ್ಯಿಗೆ ಮುಯ್ಯಿ ತೀರಿಸಿಕೊಂಡದ್ದರಿಂದ ಉಂಟಾಗುವ ಪಶ್ಚಾತ್ತಾಪ ಮನೋವ್ಯಥೆಗಳಿಗೆ ಕಾರಣವಿರುವದಿಲ್ಲ. ಆದರೆ ನನ್ನ ಒಡೆಯನನ್ನು ಯೆಹೋವ ದೇವರು ಚೆನ್ನಾಗಿ ನಡೆಸಿದಾಗ, ನಿನ್ನ ದಾಸಿಯನ್ನು ಜ್ಞಾಪಕಮಾಡಿಕೊಳ್ಳಬೇಕು,” ಎಂದಳು.
וַיֹּאמֶר דָּוִד לַאֲבִיגַל בָּרוּךְ יְהֹוָה אֱלֹהֵי יִשְׂרָאֵל אֲשֶׁר שְׁלָחֵךְ הַיּוֹם הַזֶּה לִקְרָאתִֽי׃ 32
ಆಗ ದಾವೀದನು ಅಬೀಗೈಲಳಿಗೆ, “ನನ್ನನ್ನು ಎದುರುಗೊಳ್ಳುವುದಕ್ಕೆ ಈ ಹೊತ್ತು ನಿನ್ನನ್ನು ಕಳುಹಿಸಿದ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ.
וּבָרוּךְ טַעְמֵךְ וּבְרוּכָה אָתְּ אֲשֶׁר כְּלִתִנִי הַיּוֹם הַזֶּה מִבּוֹא בְדָמִים וְהֹשֵׁעַ יָדִי לִֽי׃ 33
ನಿನ್ನ ಬುದ್ಧಿಮಾತಿಗಾಗಿಯೂ, ನಾನು ರಕ್ತ ಚೆಲ್ಲುವುದಕ್ಕೂ, ನನ್ನ ಕೈಯಿಂದ ನನಗೆ ಮುಯ್ಯಿ ತೀರಿಸಿಕೊಳ್ಳುವುದಕ್ಕೂ ಈ ಹೊತ್ತು ನನ್ನನ್ನು ತಡೆದ ನಿನಗೆ ಆಶೀರ್ವಾದ ಆಗಲಿ.
וְאוּלָם חַי־יְהֹוָה אֱלֹהֵי יִשְׂרָאֵל אֲשֶׁר מְנָעַנִי מֵהָרַע אֹתָךְ כִּי ׀ לוּלֵי מִהַרְתְּ (ותבאתי) [וַתָּבֹאת] לִקְרָאתִי כִּי אִם־נוֹתַר לְנָבָל עַד־אוֹר הַבֹּקֶר מַשְׁתִּין בְּקִֽיר׃ 34
ಏಕೆಂದರೆ ನಿನಗೆ ಕೇಡು ಆಗದ ಹಾಗೆ ನನ್ನನ್ನು ತಡೆದ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಜೀವದಾಣೆ, ನೀನು ತ್ವರೆಯಾಗಿ ನನ್ನನ್ನು ಎದುರುಗೊಳ್ಳದಿದ್ದರೆ, ಉದಯವಾಗುವಷ್ಟರಲ್ಲಿ ನಾಬಾಲನಿಗೆ ಒಬ್ಬನಾದರೂ ಉಳಿಯುತ್ತಿರಲಿಲ್ಲ,” ಎಂದು ಹೇಳಿದನು.
וַיִּקַּח דָּוִד מִיָּדָהּ אֵת אֲשֶׁר־הֵבִיאָה לוֹ וְלָהּ אָמַר עֲלִי לְשָׁלוֹם לְבֵיתֵךְ רְאִי שָׁמַעְתִּי בְקוֹלֵךְ וָאֶשָּׂא פָּנָֽיִךְ׃ 35
ಅವಳು ತನಗೆ ತಂದದ್ದನ್ನು ದಾವೀದನು ತೆಗೆದುಕೊಂಡು ಅವಳಿಗೆ, “ನೀನು ಸಮಾಧಾನವಾಗಿ ನಿನ್ನ ಮನೆಗೆ ಹೋಗು; ನಾನು ನಿನ್ನ ಮಾತನ್ನು ಕೇಳಿ ನಿನ್ನ ಮುಖ ದಾಕ್ಷಿಣ್ಯವನ್ನು ನೋಡಿದೆನು,” ಎಂದನು.
וַתָּבֹא אֲבִיגַיִל ׀ אֶל־נָבָל וְהִנֵּה־לוֹ מִשְׁתֶּה בְּבֵיתוֹ כְּמִשְׁתֵּה הַמֶּלֶךְ וְלֵב נָבָל טוֹב עָלָיו וְהוּא שִׁכֹּר עַד־מְאֹד וְלֹא־הִגִּידָה לּוֹ דָּבָר קָטֹן וְגָדוֹל עַד־אוֹר הַבֹּֽקֶר׃ 36
ಅಬೀಗೈಲಳು ನಾಬಾಲನ ಬಳಿಗೆ ಬಂದಾಗ, ಅರಸನ ಔತಣಕ್ಕೆ ಸಮಾನವಾದ ಔತಣ ಅವನ ಮನೆಯಲ್ಲಿತ್ತು. ಅವನು ಬಹಳವಾಗಿ ಕುಡಿದದ್ದರಿಂದ ಅವನ ಹೃದಯವು ಅವನಲ್ಲಿ ಉಲ್ಲಾಸಗೊಂಡಿತ್ತು. ಆದಕಾರಣ ಅವಳು ಉದಯವಾಗುವವರೆಗೆ ಅವನಿಗೆ ಕಡಿಮೆಯಾದದ್ದನ್ನಾಗಲಿ, ಹೆಚ್ಚಾದದ್ದನ್ನಾಗಲಿ ತಿಳಿಸಲಿಲ್ಲ.
וַיְהִי בַבֹּקֶר בְּצֵאת הַיַּיִן מִנָּבָל וַתַּגֶּד־לוֹ אִשְׁתּוֹ אֶת־הַדְּבָרִים הָאֵלֶּה וַיָּמׇת לִבּוֹ בְּקִרְבּוֹ וְהוּא הָיָה לְאָֽבֶן׃ 37
ಉದಯದಲ್ಲಿ ನಾಬಾಲನ ದ್ರಾಕ್ಷಾರಸದ ಅಮಲು ಇಳಿದಾಗ, ಅವನ ಹೆಂಡತಿಯು ಈ ಮಾತುಗಳನ್ನು ಅವನಿಗೆ ತಿಳಿಸಲು, ಹೃದಯಾಘಾತವಾಗಿ ಅವನು ಕಲ್ಲಿನ ಹಾಗಾದನು.
וַיְהִי כַּעֲשֶׂרֶת הַיָּמִים וַיִּגֹּף יְהֹוָה אֶת־נָבָל וַיָּמֹֽת׃ 38
ಹೆಚ್ಚು ಕಡಿಮೆ ಹತ್ತು ದಿವಸಗಳಾದ ತರುವಾಯ, ಯೆಹೋವ ದೇವರ ದಂಡನೆಯ ನಿಮಿತ್ತ ನಾಬಾಲನು ಸತ್ತುಹೋದನು.
וַיִּשְׁמַע דָּוִד כִּי מֵת נָבָל וַיֹּאמֶר בָּרוּךְ יְהֹוָה אֲשֶׁר רָב אֶת־רִיב חֶרְפָּתִי מִיַּד נָבָל וְאֶת־עַבְדּוֹ חָשַׂךְ מֵרָעָה וְאֵת רָעַת נָבָל הֵשִׁיב יְהֹוָה בְּרֹאשׁוֹ וַיִּשְׁלַח דָּוִד וַיְדַבֵּר בַּאֲבִיגַיִל לְקַחְתָּהּ לוֹ לְאִשָּֽׁה׃ 39
ನಾಬಾಲನು ಸತ್ತನೆಂದು ದಾವೀದನು ಕೇಳಿದಾಗ, “ನನ್ನ ನಿಂದೆಯ ವ್ಯಾಜ್ಯವನ್ನು ನಾಬಾಲನಿಂದ ವಿಚಾರಿಸಿ, ತನ್ನ ಸೇವಕನನ್ನು ಕೇಡು ಮಾಡಗೊಡದ ಹಾಗೆ ತಡೆದ ಯೆಹೋವ ದೇವರು ಸ್ತುತಿಹೊಂದಲಿ. ಏಕೆಂದರೆ ಯೆಹೋವ ದೇವರು ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆ ಬರಮಾಡಿದರು,” ಎಂದನು. ದಾವೀದನು ಅಬೀಗೈಲಳನ್ನು ತನಗೆ ಹೆಂಡತಿಯಾಗಿ ತೆಗೆದುಕೊಳ್ಳುವುದಕ್ಕಾಗಿ ಅವಳ ಸಂಗಡ ಮಾತನಾಡಲು ಸೇವಕರನ್ನು ಕಳುಹಿಸಿದನು.
וַיָּבֹאוּ עַבְדֵי דָוִד אֶל־אֲבִיגַיִל הַכַּרְמֶלָה וַיְדַבְּרוּ אֵלֶיהָ לֵאמֹר דָּוִד שְׁלָחָנוּ אֵלַיִךְ לְקַחְתֵּךְ לוֹ לְאִשָּֽׁה׃ 40
ದಾವೀದನ ಸೇವಕರು ಕರ್ಮೆಲಿನಲ್ಲಿರುವ ಅಬೀಗೈಲಳ ಬಳಿಗೆ ಬಂದಾಗ ಅವಳಿಗೆ, “ದಾವೀದನು ನಿನ್ನನ್ನು ತನಗೆ ಹೆಂಡತಿಯಾಗಿ ತೆಗೆದುಕೊಳ್ಳುವುದಕ್ಕಾಗಿ ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದನು,” ಎಂದು ಹೇಳಿದರು.
וַתָּקׇם וַתִּשְׁתַּחוּ אַפַּיִם אָרְצָה וַתֹּאמֶר הִנֵּה אֲמָֽתְךָ לְשִׁפְחָה לִרְחֹץ רַגְלֵי עַבְדֵי אֲדֹנִֽי׃ 41
ಆಗ ಅವಳು ಎದ್ದು ಬೋರಲು ಬಿದ್ದು, “ನಿನ್ನ ದಾಸಿಯಾದ ನಾನು ನನ್ನ ಒಡೆಯನ ಸೇವಕರ ಪಾದಗಳನ್ನು ತೊಳೆಯುವುದಕ್ಕೂ ಸಿದ್ಧಳಾಗಿದ್ದೇನೆ,” ಎಂದಳು.
וַתְּמַהֵר וַתָּקׇם אֲבִיגַיִל וַתִּרְכַּב עַֽל־הַחֲמוֹר וְחָמֵשׁ נַעֲרֹתֶיהָ הַהֹלְכוֹת לְרַגְלָהּ וַתֵּלֶךְ אַֽחֲרֵי מַלְאֲכֵי דָוִד וַתְּהִי־לוֹ לְאִשָּֽׁה׃ 42
ಅಬೀಗೈಲಳು ತ್ವರೆಯಾಗಿ ಎದ್ದು ಕತ್ತೆಯ ಮೇಲೆ ಹತ್ತಿಕೊಂಡು, ತನ್ನ ಸಂಗಡ ಇರುವ ಐದು ಮಂದಿ ದಾಸಿಯರನ್ನು ಕರೆದುಕೊಂಡು ದಾವೀದನ ಸೇವಕರ ಹಿಂದೆ ಹೋಗಿ, ಅವನಿಗೆ ಹೆಂಡತಿಯಾದಳು.
וְאֶת־אֲחִינֹעַם לָקַח דָּוִד מִֽיִּזְרְעֶאל וַתִּהְיֶיןָ גַּֽם־שְׁתֵּיהֶן לוֹ לְנָשִֽׁים׃ 43
ಇದಲ್ಲದೆ ದಾವೀದನು ಇಜ್ರೆಯೇಲ್ ಊರಿನವಳಾದ ಅಹೀನೋವಮಳನ್ನು ಮದುವೆ ಮಾಡಿಕೊಂಡಿದ್ದನು. ಅವರಿಬ್ಬರೂ ಅವನ ಹೆಂಡತಿಯರಾದರು.
וְשָׁאוּל נָתַן אֶת־מִיכַל בִּתּוֹ אֵשֶׁת דָּוִד לְפַלְטִי בֶן־לַיִשׁ אֲשֶׁר מִגַּלִּֽים׃ 44
ಆದರೆ ಸೌಲನು ದಾವೀದನ ಹೆಂಡತಿಯಾಗಿದ್ದ ಮೀಕಲಳೆಂಬ ತನ್ನ ಮಗಳನ್ನು ಗಲ್ಲೀಮ್ ಪಟ್ಟಣದ ಲಯಿಷನ ಮಗನಾದ ಪಲ್ಟೀ ಎಂಬವನಿಗೆ ಮದುವೆ ಮಾಡಿಕೊಟ್ಟಿದ್ದನು.

< שמואל א 25 >