< שמואל א 29 >

וַיִּקְבְּצוּ פְלִשְׁתִּים אֶת־כׇּל־מַחֲנֵיהֶם אֲפֵקָה וְיִשְׂרָאֵל חֹנִים בַּעַיִן אֲשֶׁר בְּיִזְרְעֶֽאל׃ 1
ಫಿಲಿಷ್ಟಿಯರು ತಮ್ಮ ಸೈನ್ಯವನ್ನು ಕೂಡಿಸಿಕೊಂಡು ಬಂದು ಅಫೇಕಿನಲ್ಲಿ ಪಾಳೆಯಮಾಡಿಕೊಂಡರು. ಇಸ್ರಾಯೇಲರು ಇಜ್ರೇಲಿನ ಬೈಲಿನಲ್ಲಿರುವ ಬುಗ್ಗೆಯ ಬಳಿಯಲ್ಲಿ ಇಳಿದುಕೊಂಡರು.
וְסַרְנֵי פְלִשְׁתִּים עֹֽבְרִים לְמֵאוֹת וְלַאֲלָפִים וְדָוִד וַאֲנָשָׁיו עֹבְרִים בָּאַחֲרֹנָה עִם־אָכִֽישׁ׃ 2
ಫಿಲಿಷ್ಟಿಯ ಪ್ರಭುಗಳ ಸೈನಿಕರು ನೂರು ನೂರು ಮಂದಿಯಾಗಿಯೂ, ಸಾವಿರ ಸಾವಿರ ಮಂದಿಯಾಗಿ, ಬರುತ್ತಿರುವಾಗ ದಾವೀದನು ಅವನ ಜನರ ಸಹಿತವಾಗಿ ಆಕೀಷನ ಸಂಗಡ ಹಿಂಬಾಲಿಸುತ್ತಿದ್ದನು.
וַיֹּֽאמְרוּ שָׂרֵי פְלִשְׁתִּים מָה הָעִבְרִים הָאֵלֶּה וַיֹּאמֶר אָכִישׁ אֶל־שָׂרֵי פְלִשְׁתִּים הֲלוֹא־זֶה דָוִד עֶבֶד ׀ שָׁאוּל מֶלֶךְ־יִשְׂרָאֵל אֲשֶׁר הָיָה אִתִּי זֶה יָמִים אוֹ־זֶה שָׁנִים וְלֹֽא־מָצָאתִי בוֹ מְאוּמָה מִיּוֹם נׇפְלוֹ עַד־הַיּוֹם הַזֶּֽה׃ 3
ಆಗ ಫಿಲಿಷ್ಟಿಯ ಪ್ರಭುಗಳು, “ಈ ಇಬ್ರಿಯರು ಯಾಕೆ?” ಎಂದು ಆಕೀಷನನ್ನು ಕೇಳಿದರು. ಅವನು ಅವರಿಗೆ, “ಇವನು ಇಸ್ರಾಯೇಲರ ಅರಸನಾದ ಸೌಲನ ಸೇವಕ ದಾವೀದನಲ್ಲವೋ, ಇವನು ಇಷ್ಟು ವರ್ಷ, ಇಷ್ಟು ದಿನಗಳಿಂದ ನನ್ನ ಬಳಿಯಲ್ಲಿದ್ದಾನೆ. ಸೌಲನನ್ನು ಬಿಟ್ಟು ನನ್ನ ಹತ್ತಿರ ಬಂದ ದಿನ ಮೊದಲುಗೊಂಡು ಇಂದಿನವರೆಗೂ ನಾನು ಇವನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ” ಎಂದು ಉತ್ತರಕೊಟ್ಟನು.
וַיִּקְצְפוּ עָלָיו שָׂרֵי פְלִשְׁתִּים וַיֹּאמְרוּ לוֹ שָׂרֵי פְלִשְׁתִּים הָשֵׁב אֶת־הָאִישׁ וְיָשֹׁב אֶל־מְקוֹמוֹ אֲשֶׁר הִפְקַדְתּוֹ שָׁם וְלֹא־יֵרֵד עִמָּנוּ בַּמִּלְחָמָה וְלֹא־יִֽהְיֶה־לָּנוּ לְשָׂטָן בַּמִּלְחָמָה וּבַמֶּה יִתְרַצֶּה זֶה אֶל־אֲדֹנָיו הֲלוֹא בְּרָאשֵׁי הָאֲנָשִׁים הָהֵֽם׃ 4
ಆದರೆ ಫಿಲಿಷ್ಟಿಯ ಪ್ರಭುಗಳು ಅವನ ಮೇಲೆ ಕೋಪಗೊಂಡು ಅವನಿಗೆ, “ಈ ಮನುಷ್ಯನನ್ನು ಕಳುಹಿಸಿಬಿಡು, ಇವನು ಹಿಂದಿರುಗಿ ಹೋಗಿ ನೀನು ನೇಮಿಸಿದ ಸ್ಥಳದಲ್ಲೇ ವಾಸಿಸಲಿ. ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು. ಬಂದರೆ ನಮಗೆ ಶತ್ರುವಾಗಿ ನಿಂತಾನು, ಫಿಲಿಷ್ಟಿಯರ ತಲೆಗಳನ್ನು ಕಡಿದಿದ್ದರಿಂದಲೇ ಇವನು ತನ್ನ ಯಜಮಾನನ ಮೆಚ್ಚಿಕೆಯನ್ನು ಪಡೆಯಬಹುದಲ್ಲವೇ?
הֲלוֹא־זֶה דָוִד אֲשֶׁר יַעֲנוּ־לוֹ בַּמְּחֹלוֹת לֵאמֹר הִכָּה שָׁאוּל בַּאֲלָפָיו וְדָוִד בְּרִבְבֹתָֽו׃ 5
‘ಸೌಲನು ಸಾವಿರಾರು ಶತ್ರುಗಳನ್ನು ಕೊಂದನು. ದಾವೀದನು ಹತ್ತು ಸಾವಿರಾರು ಶತ್ರುಗಳನ್ನು ಕೊಂದನು’ ಎಂದು ಸ್ತ್ರೀಯರು ಕುಣಿಯುತ್ತಾ ಹಾಡಿದ್ದು ಈ ದಾವೀದನನ್ನು ಕುರಿತೇ ಅಲ್ಲವೇ?” ಅಂದರು.
וַיִּקְרָא אָכִישׁ אֶל־דָּוִד וַיֹּאמֶר אֵלָיו חַי־יְהֹוָה כִּֽי־יָשָׁר אַתָּה וְטוֹב בְּעֵינַי צֵאתְךָ וּבֹאֲךָ אִתִּי בַּֽמַּחֲנֶה כִּי לֹֽא־מָצָאתִֽי בְךָ רָעָה מִיּוֹם בֹּאֲךָ אֵלַי עַד־הַיּוֹם הַזֶּה וּבְעֵינֵי הַסְּרָנִים לֹא־טוֹב אָֽתָּה׃ 6
ಆಗ ಆಕೀಷನು ದಾವೀದನನ್ನು ಕರೆದು ಅವನಿಗೆ, “ಯೆಹೋವನಾಣೆ ನೀನು ಯಥಾರ್ಥನು. ನೀನು ನನ್ನ ಸಂಗಡ ಪಾಳೆಯದಲ್ಲಿದ್ದುಕೊಂಡು ಯುದ್ಧಕ್ಕೆ ಹೋಗುತ್ತಾ ಬರುತ್ತಾ ಇರುವುದು ಯುಕ್ತವೆಂದು ನನಗೆ ತೋರಿತು. ನೀನು ಬಂದಂದಿನಿಂದ ಇಂದಿನವರೆಗೂ ನಾನು ನಿನ್ನಲ್ಲಿ ಯಾವ ದೋಷವನ್ನೂ ಕಾಣಲಿಲ್ಲ.
וְעַתָּה שׁוּב וְלֵךְ בְּשָׁלוֹם וְלֹא־תַעֲשֶׂה רָע בְּעֵינֵי סַרְנֵי פְלִשְׁתִּֽים׃ 7
ಆದರೆ ಪ್ರಭುಗಳು ನಿನ್ನನ್ನು ಮೆಚ್ಚುವುದಿಲ್ಲ. ಆದ್ದರಿಂದ ನೀನು ಸಮಾಧಾನದಿಂದ ಹಿಂದಿರುಗಿ ಹೋಗು ಅವರನ್ನು ಸಿಟ್ಟುಗೊಳಿಸಬಾರದು” ಎಂದು ಹೇಳಿದನು.
וַיֹּאמֶר דָּוִד אֶל־אָכִישׁ כִּי מֶה עָשִׂיתִי וּמַה־מָּצָאתָ בְעַבְדְּךָ מִיּוֹם אֲשֶׁר הָיִיתִי לְפָנֶיךָ עַד הַיּוֹם הַזֶּה כִּי לֹא אָבוֹא וְנִלְחַמְתִּי בְּאֹיְבֵי אֲדֹנִי הַמֶּֽלֶךְ׃ 8
ದಾವೀದನು ಆಕೀಷನಿಗೆ, “ನಾನೇನು ಮಾಡಿದೆನು? ನಿನ್ನ ದಾಸನಾದ ನಾನು ನಿನ್ನ ಬಳಿಗೆ ಬಂದ ದಿನದಿಂದ ಇಂದಿನವರೆಗೂ ನನ್ನಲ್ಲಿ ಯಾವ ಅಪರಾಧವನ್ನು ಕಂಡಿ? ಅರಸನಾದ ನನ್ನ ಒಡೆಯನ ಜೊತೆಯಲ್ಲಿ ಹೋಗಿ, ಅವನ ಶತ್ರುಗಳೊಡನೆ ನಾನೇಕೆ ಯುದ್ಧ ಮಾಡಬಾರದು?” ಅಂದನು.
וַיַּעַן אָכִישׁ וַיֹּאמֶר אֶל־דָּוִד יָדַעְתִּי כִּי טוֹב אַתָּה בְּעֵינַי כְּמַלְאַךְ אֱלֹהִים אַךְ שָׂרֵי פְלִשְׁתִּים אָֽמְרוּ לֹא־יַעֲלֶה עִמָּנוּ בַּמִּלְחָמָֽה׃ 9
ಆಗ ಆಕೀಷನು ದಾವೀದನಿಗೆ, “ನೀನು ಒಳ್ಳೆಯವನೆಂದು ನನಗೆ ಗೊತ್ತದೆ, ನನ್ನ ದೃಷ್ಟಿಯಲ್ಲಿ ನೀನು ದೇವದೂತನಂತಿರುತ್ತೀ. ಆದರೆ ಫಿಲಿಷ್ಟಿಯ ಪ್ರಭುಗಳು, ‘ಇವನು ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಹೊರಡಬಾರದು’ ಎಂದು ಹೇಳುತ್ತಾರಲ್ಲಾ.
וְעַתָּה הַשְׁכֵּם בַּבֹּקֶר וְעַבְדֵי אֲדֹנֶיךָ אֲשֶׁר־בָּאוּ אִתָּךְ וְהִשְׁכַּמְתֶּם בַּבֹּקֶר וְאוֹר לָכֶם וָלֵֽכוּ׃ 10
೧೦ಆದುದ್ದರಿಂದ ನೀನೂ, ನಿನ್ನ ಸಂಗಡ ಬಂದ ನಿನ್ನ ಒಡೆಯನ ಸೇವಕರೂ, ನಾಳೆ ಬೆಳಿಗ್ಗೆ ಎದ್ದು ಹೊತ್ತು ಮೂಡಿದ ಕೂಡಲೆ ಹಿಂದಿರುಗಿ ಹೋಗಿರಿ” ಎಂದು ಹೇಳಿದನು.
וַיַּשְׁכֵּם דָּוִד הוּא וַאֲנָשָׁיו לָלֶכֶת בַּבֹּקֶר לָשׁוּב אֶל־אֶרֶץ פְּלִשְׁתִּים וּפְלִשְׁתִּים עָלוּ יִזְרְעֶֽאל׃ 11
೧೧ದಾವೀದನು ತನ್ನ ಜನರೊಡನೆ ಬೆಳಿಗ್ಗೆ ಎದ್ದು ಹಿಂದಿರುಗಿ ಫಿಲಿಷ್ಟಿಯರ ದೇಶಕ್ಕೆ ಹೊರಟನು. ಫಿಲಿಷ್ಟಿಯರು ಇಜ್ರೇಲಿಗೆ ಹೋದರು.

< שמואל א 29 >