< דברי הימים ב 34 >
בֶּן־שְׁמוֹנֶה שָׁנִים יֹאשִׁיָּהוּ בְמׇלְכוֹ וּשְׁלֹשִׁים וְאַחַת שָׁנָה מָלַךְ בִּירוּשָׁלָֽ͏ִם׃ | 1 |
೧ಯೋಷೀಯನು ಅರಸನಾದಾಗ ಅವನು ಎಂಟು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಮೂವತ್ತೊಂದು ವರ್ಷಗಳ ಕಾಲ ಆಳಿದನು.
וַיַּעַשׂ הַיָּשָׁר בְּעֵינֵי יְהֹוָה וַיֵּלֶךְ בְּדַרְכֵי דָּוִיד אָבִיו וְלֹא־סָר יָמִין וּשְׂמֹֽאול׃ | 2 |
೨ಅವನು ಯೆಹೋವನನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳದೆ ತನ್ನ ಪೂರ್ವಿಕನಾದ ದಾವೀದನ ಮಾರ್ಗದಲ್ಲೇ ಯೆಹೋವನ ಚಿತ್ತಾನುಸಾರವಾಗಿ ನಡೆದನು.
וּבִשְׁמוֹנֶה שָׁנִים לְמׇלְכוֹ וְהוּא עוֹדֶנּוּ נַעַר הֵחֵל לִדְרוֹשׁ לֵאלֹהֵי דָּוִיד אָבִיו וּבִשְׁתֵּים עֶשְׂרֵה שָׁנָה הֵחֵל לְטַהֵר אֶת־יְהוּדָה וִירוּשָׁלַ͏ִם מִן־הַבָּמוֹת וְהָאֲשֵׁרִים וְהַפְּסִלִים וְהַמַּסֵּכֽוֹת׃ | 3 |
೩ಅವನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಇನ್ನೂ ಯೌವನಸ್ಥನಾಗಿರುವಾಗಲೇ ತನ್ನ ಪೂರ್ವಿಕನಾದ ದಾವೀದನ ದೇವರನ್ನು ಹುಡುಕುವವನಾದನು. ಹನ್ನೆರಡನೆಯ ವರ್ಷ ಯೆಹೂದದಲ್ಲಿಯೂ ಯೆರೂಸಲೇಮಿನಲ್ಲಿ ಇದ್ದ ಪೂಜಾಸ್ಥಳಗಳನ್ನೂ, ಅಶೇರ ಸ್ತಂಭಗಳನ್ನೂ, ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನೂ ತೆಗೆದುಹಾಕಿ ದೇಶವನ್ನು ಶುದ್ಧಿಗೊಳಿಸಿದನು.
וַיְנַתְּצוּ לְפָנָיו אֵת מִזְבְּחוֹת הַבְּעָלִים וְהַחַמָּנִים אֲשֶׁר־לְמַעְלָה מֵעֲלֵיהֶם גִּדֵּעַ וְהָאֲשֵׁרִים וְהַפְּסִלִים וְהַמַּסֵּכוֹת שִׁבַּר וְהֵדַק וַיִּזְרֹק עַל־פְּנֵי הַקְּבָרִים הַזֹּבְחִים לָהֶֽם׃ | 4 |
೪ಇದಲ್ಲದೆ ಅವನು ಬಾಳ್ ದೇವತೆಗಳ ಯಜ್ಞವೇದಿಗಳನ್ನು ತನ್ನೆದುರಿನಲ್ಲಿಯೇ ಕೆಡವಿಸಿ ಅವುಗಳ ಮೇಲಿದ್ದ ಸೂರ್ಯಸ್ತಂಭಗಳನ್ನು ಕಡಿಸಿ, ಕೆತ್ತಿಸಿದ ಅಶೇರ ಸ್ತಂಭ ಮತ್ತು ಎರಕದ ವಿಗ್ರಹಗಳನ್ನು ಒಡೆದುಹಾಕಿಸಿ ಪುಡಿಪುಡಿ ಮಾಡಿಸಿ ಅವುಗಳಿಗೆ ಯಜ್ಞವನ್ನರ್ಪಿಸಿದವರ ಸಮಾಧಿಗಳ ಮೇಲೆ ಆ ಧೂಳನ್ನು ಚೆಲ್ಲಿಸಿದನು.
וְעַצְמוֹת כֹּֽהֲנִים שָׂרַף עַל־[מִזְבְּחוֹתָם] (מזבחותים) וַיְטַהֵר אֶת־יְהוּדָה וְאֶת־יְרוּשָׁלָֽ͏ִם׃ | 5 |
೫ಪೂಜಾರಿಗಳ ಎಲುಬುಗಳನ್ನು ಆ ಯಜ್ಞವೇದಿಗಳ ಮೇಲೆ ಸುಡಿಸಿ ಯೆಹೂದ ಮತ್ತು ಯೆರೂಸಲೇಮನ್ನು ಶುದ್ಧಪಡಿಸಿದನು.
וּבְעָרֵי מְנַשֶּׁה וְאֶפְרַיִם וְשִׁמְעוֹן וְעַד־נַפְתָּלִי (בחר בתיהם) [בְּחַרְבֹתֵיהֶם] סָבִֽיב׃ | 6 |
೬ಮನಸ್ಸೆ, ಎಫ್ರಾಯೀಮ್, ಸಿಮೆಯೋನ್, ನಫ್ತಾಲಿ ಪ್ರಾಂತ್ಯಗಳ ಸುತ್ತಣ ಊರುಗಳಲಿಯೂ ಬಯಲುಗಳಲ್ಲಿದ್ದ,
וַיְנַתֵּץ אֶת־הַֽמִּזְבְּחוֹת וְאֶת־הָאֲשֵׁרִים וְהַפְּסִלִים כִּתַּת לְהֵדַק וְכׇל־הַֽחַמָּנִים גִּדַּע בְּכׇל־אֶרֶץ יִשְׂרָאֵל וַיָּשׇׁב לִירוּשָׁלָֽ͏ִם׃ | 7 |
೭ಯಜ್ಞವೇದಿಗಳನ್ನು ಕೆಡವಿಸಿ ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ ಒಡೆದು ಪುಡಿಪುಡಿ ಮಾಡಿಸಿ ಇಸ್ರಾಯೇಲ್ ದೇಶದಲ್ಲಿದ್ದ ಸೂರ್ಯಸ್ತಂಭಗಳನ್ನು ಕೆಡವಿಹಾಕಿಸಿ ಯೆರೂಸಲೇಮಿಗೆ ಹಿಂದಿರುಗಿದನು.
וּבִשְׁנַת שְׁמוֹנֶה עֶשְׂרֵה לְמׇלְכוֹ לְטַהֵר הָאָרֶץ וְהַבָּיִת שָׁלַח אֶת־שָׁפָן בֶּן־אֲצַלְיָהוּ וְאֶת־מַעֲשֵׂיָהוּ שַׂר־הָעִיר וְאֵת יוֹאָח בֶּן־יֽוֹאָחָז הַמַּזְכִּיר לְחַזֵּק אֶת־בֵּית יְהֹוָה אֱלֹהָֽיו׃ | 8 |
೮ಅವನು ತನ್ನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ದೇಶವನ್ನೂ, ದೇವಾಲಯವನ್ನೂ ಶುದ್ಧಿಪಡಿಸಿದ ಮೇಲೆ ತನ್ನ ದೇವರಾದ ಯೆಹೋವನ ಆಲಯವನ್ನು ಜೀರ್ಣೋದ್ಧಾರ ಮಾಡಿಸುವುದಕ್ಕಾಗಿ ಅಚಲ್ಯನ ಮಗನಾದ ಶಾಫಾನನನ್ನೂ ಪಟ್ಟಣದ ಅಧಿಕಾರಿಯಾದ ಮಾಸೇಯನನ್ನೂ ಪ್ರಧಾನಮಂತ್ರಿಯಾಗಿದ್ದ ಯೋವಾಹಾಜನ ಮಗನಾದ ಯೋವಾಹನನ್ನೂ ಕಳುಹಿಸಿದನು.
וַיָּבֹאוּ אֶל־חִלְקִיָּהוּ ׀ הַכֹּהֵן הַגָּדוֹל וַֽיִּתְּנוּ אֶת־הַכֶּסֶף הַמּוּבָא בֵית־אֱלֹהִים אֲשֶׁר אָסְפֽוּ־הַלְוִיִּם שֹֽׁמְרֵי הַסַּף מִיַּד מְנַשֶּׁה וְאֶפְרַיִם וּמִכֹּל שְׁאֵרִית יִשְׂרָאֵל וּמִכׇּל־יְהוּדָה וּבִנְיָמִן (וישבי) [וַיָּשׁוּבוּ] יְרוּשָׁלָֽ͏ִם׃ | 9 |
೯ಇವರು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗಿ ದೇವಾಲಯಕ್ಕಾಗಿ ಸಂಗ್ರಹವಾದ ಹಣವನ್ನು ಅಂದರೆ ದ್ವಾರಪಾಲಕರಾದ ಲೇವಿಯರು ಮನಸ್ಸೆ, ಎಫ್ರಾಯೀಮ್ ಮುಂತಾದ ಇಸ್ರಾಯೇಲ್ ಕುಲಗಳಲ್ಲಿ ಉಳಿದವರಿಂದಲೂ, ಎಲ್ಲಾ ಯೆಹೂದ ಬೆನ್ಯಾಮೀನ್ಯರಿಂದಲೂ, ಯೆರೂಸಲೇಮಿನವರಿಂದಲೂ ಕೂಡಿಸಿದ್ದ ಹಣವನ್ನು
וַֽיִּתְּנוּ עַל־יַד עֹשֵׂה הַמְּלָאכָה הַמֻּפְקָדִים בְּבֵית יְהֹוָה וַיִּתְּנוּ אֹתוֹ עוֹשֵׂי הַמְּלָאכָה אֲשֶׁר עֹשִׂים בְּבֵית יְהֹוָה לִבְדּוֹק וּלְחַזֵּק הַבָּֽיִת׃ | 10 |
೧೦ಯೆಹೋವನ ದೇವಾಲಯದ ಕೆಲಸಮಾಡಿಸುವವರಿಗೆ ಕೊಡುವುದಕ್ಕಾಗಿ ಅವನಿಗೆ ಒಪ್ಪಿಸಿದರು. ದೇವಾಲಯದ ಕೆಲಸಮಾಡಿಸುತ್ತಿದ್ದವರು ಆ ಹಣವನ್ನು
וַֽיִּתְּנוּ לֶחָֽרָשִׁים וְלַבֹּנִים לִקְנוֹת אַבְנֵי מַחְצֵב וְעֵצִים לַֽמְחַבְּרוֹת וּלְקָרוֹת אֶת־הַבָּתִּים אֲשֶׁר הִשְׁחִיתוּ מַלְכֵי יְהוּדָֽה׃ | 11 |
೧೧ಕೆತ್ತಿದ ಕಲ್ಲು, ಜೋಡಿಸತಕ್ಕ ತೊಲೆ ಇವುಗಳನ್ನು ಕೊಂಡುಕೊಳ್ಳುವುದಕ್ಕಾಗಿಯೂ, ಯೆಹೂದ ರಾಜರ ಅಲಕ್ಷ್ಯದಿಂದ ಹಾಳಾಗಿದ್ದ ಕಟ್ಟಡಗಳಿಗೆ ಮಾಳಿಗೆ ಹಾಕುವುದಕ್ಕಾಗಿಯೂ, ದೇವಾಲಯವನ್ನೂ ಜೀರ್ಣೋದ್ಧಾರಮಾಡಿ ಭದ್ರಪಡಿಸುವುದಕ್ಕೆ ಬಡಗಿಗಳಿಗೂ ಶಿಲ್ಪಿಗಳಿಗೂ ಕೊಟ್ಟರು.
וְהָאֲנָשִׁים עֹשִׂים בֶּאֱמוּנָה בַּמְּלָאכָה וַעֲלֵיהֶם ׀ מֻפְקָדִים יַחַת וְעֹבַדְיָהוּ הַלְוִיִּם מִן־בְּנֵי מְרָרִי וּזְכַרְיָה וּמְשֻׁלָּם מִן־בְּנֵי הַקְּהָתִים לְנַצֵּחַ וְהַלְוִיִּם כׇּל־מֵבִין בִּכְלֵי־שִֽׁיר׃ | 12 |
೧೨ಕೆಲಸಮಾಡುವವರು ನಂಬಿಗಸ್ತರಾಗಿದ್ದರು; ಮೆರಾರಿಯರಲ್ಲಿ ಯಹತ್, ಓಬದ್ಯ ಎಂಬ ಲೇವಿಯರೂ ಕೆಹಾತ್ಯರಲ್ಲಿ ಜೆಕರ್ಯ, ಮೆಷುಲ್ಲಾಮ್ ಎಂಬ ಲೇವಿಯರೂ ಅವರ ಮೇಲ್ವಿಚಾರಕರಾಗಿದ್ದರು.
וְעַל הַסַּבָּלִים וּֽמְנַצְּחִים לְכֹל עֹשֵׂה מְלָאכָה לַעֲבוֹדָה וַעֲבוֹדָה וּמֵֽהַלְוִיִּם סוֹפְרִים וְשֹׁטְרִים וְשׁוֹעֲרִֽים׃ | 13 |
೧೩ಗಾಯನ ನಿಪುಣರಾದ ಲೇವಿಯರೆಲ್ಲರೂ ಹೊರೆಹೊರುವವರ ಮೇಲ್ವಿಚಾರಕರಾಗಿದ್ದು ಎಲ್ಲಾ ವಿಧವಾದ ಕೆಲಸಮಾಡುವವರನ್ನು ನಡೆಸುತ್ತಿದ್ದರು; ಲೇವಿಯರಲ್ಲಿ ಕೆಲವರು ಲೇಖಕರೂ, ಕೆಲವರು ಅಧಿಕಾರಿಗಳೂ, ದ್ವಾರಪಾಲಕರೂ ಲೇವಿಯರೇ ಆಗಿದ್ದರು.
וּבְהוֹצִיאָם אֶת־הַכֶּסֶף הַמּוּבָא בֵּית יְהֹוָה מָצָא חִלְקִיָּהוּ הַכֹּהֵן אֶת־סֵפֶר תּוֹרַת־יְהֹוָה בְּיַד־מֹשֶֽׁה׃ | 14 |
೧೪ಯೆಹೋವನ ಆಲಯದಲ್ಲಿ ಸಂಗ್ರಹವಾಗಿದ್ದ ಹಣವನ್ನು ಹೊರಗೆ ತೆಗೆಯುವಾಗ ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ಯೆಹೋವನ ಧರ್ಮೋಪದೇಶ ಗ್ರಂಥವು ಯಾಜಕನಾದ ಹಿಲ್ಕೀಯನಿಗೆ ಸಿಕ್ಕಿತು.
וַיַּעַן חִלְקִיָּהוּ וַיֹּאמֶר אֶל־שָׁפָן הַסּוֹפֵר סֵפֶר הַתּוֹרָה מָצָאתִי בְּבֵית יְהֹוָה וַיִּתֵּן חִלְקִיָּהוּ אֶת־הַסֵּפֶר אֶל־שָׁפָֽן׃ | 15 |
೧೫ಹಿಲ್ಕೀಯನು ಲೇಖಕನಾದ ಶಾಫಾನನಿಗೆ, “ಯೆಹೋವನ ಆಲಯದಲ್ಲಿ ನನಗೆ ಧರ್ಮೋಪದೇಶ ಗ್ರಂಥವು ಸಿಕ್ಕಿರುತ್ತದೆ” ಎಂದು ಹೇಳಿ ಅದನ್ನು ಅವನ ಕೈಯಲ್ಲಿ ಕೊಟ್ಟನು.
וַיָּבֵא שָׁפָן אֶת־הַסֵּפֶר אֶל־הַמֶּלֶךְ וַיָּשֶׁב עוֹד אֶת־הַמֶּלֶךְ דָּבָר לֵאמֹר כֹּל אֲשֶׁר־נִתַּן בְּיַד־עֲבָדֶיךָ הֵם עֹשִֽׂים׃ | 16 |
೧೬ಶಾಫಾನನು ಆ ಗ್ರಂಥವನ್ನು ಅರಸನ ಬಳಿಗೆ ತೆಗೆದುಕೊಂಡು ಹೋಗಿ, “ನೀನು ಆಜ್ಞಾಪಿಸಿದ್ದೆಲ್ಲವನ್ನೂ ನಿನ್ನ ಸೇವಕರು ಮಾಡುತ್ತಿದ್ದಾರೆ.
וַיַּתִּיכוּ אֶת־הַכֶּסֶף הַנִּמְצָא בְּבֵית־יְהֹוָה וַֽיִּתְּנוּהוּ עַל־יַד הַמֻּפְקָדִים וְעַל־יַד עוֹשֵׂי הַמְּלָאכָֽה׃ | 17 |
೧೭ಯೆಹೋವನ ದೇವಾಲಯದಲ್ಲಿ ಸಂಗ್ರಹವಾದ ಹಣವನ್ನು ತೆಗೆದು ಕೆಲಸ ಮಾಡಿಸುವವರಿಗೂ, ಮಾಡುವವರಿಗೂ ಒಪ್ಪಿಸಿದರು” ಎಂದು ತಿಳಿಸಿದನು.
וַיַּגֵּד שָׁפָן הַסּוֹפֵר לַמֶּלֶךְ לֵאמֹר סֵפֶר נָתַן לִי חִלְקִיָּהוּ הַכֹּהֵן וַיִּקְרָא־בוֹ שָׁפָן לִפְנֵי הַמֶּֽלֶךְ׃ | 18 |
೧೮ಇದಲ್ಲದೆ, ಲೇಖಕನಾದ ಶಾಫಾನನು ಅರಸನಿಗೆ, “ಯಾಜಕನಾದ ಹಿಲ್ಕೀಯನು ನನಗೊಂದು ಗ್ರಂಥವನ್ನು ಕೊಟ್ಟಿದ್ದಾನೆ” ಎಂದು ಹೇಳಿ ಅವನ ಮುಂದೆ ಅದನ್ನು ಓದಿದನು.
וַֽיְהִי כִּשְׁמֹעַ הַמֶּלֶךְ אֵת דִּבְרֵי הַתּוֹרָה וַיִּקְרַע אֶת־בְּגָדָֽיו׃ | 19 |
೧೯ಅರಸನು ಧರ್ಮಶಾಸ್ತ್ರದ ವಾಕ್ಯಗಳನ್ನು ಕೇಳಿದಾಗ ಬಟ್ಟೆಗಳನ್ನು ಹರಿದುಕೊಂಡನು.
וַיְצַו הַמֶּלֶךְ אֶת־חִלְקִיָּהוּ וְאֶת־אֲחִיקָם בֶּן־שָׁפָן וְאֶת־עַבְדּוֹן בֶּן־מִיכָה וְאֵת ׀ שָׁפָן הַסּוֹפֵר וְאֵת עֲשָׂיָה עֶֽבֶד־הַמֶּלֶךְ לֵאמֹֽר׃ | 20 |
೨೦ಅರಸನು ಹಿಲ್ಕೀಯ, ಶಾಫಾನನ ಮಗನಾದ ಅಹೀಕಾಮ್, ಮೀಕನ ಮಗನಾದ ಅಬ್ದೋನ್, ಲೇಖಕನಾದ ಶಾಫಾನ್, ಅರಸನ ಸಹಕಾರಿಯಾದ ಅಸಾಯ ಎಂಬುವವರಿಗೆ ಅಜ್ಞಾಪಿಸಿದೇನೆಂದರೆ,
לְכוּ דִרְשׁוּ אֶת־יְהֹוָה בַּעֲדִי וּבְעַד הַנִּשְׁאָר בְּיִשְׂרָאֵל וּבִיהוּדָה עַל־דִּבְרֵי הַסֵּפֶר אֲשֶׁר נִמְצָא כִּֽי־גְדוֹלָה חֲמַת־יְהֹוָה אֲשֶׁר נִתְּכָה בָנוּ עַל אֲשֶׁר לֹֽא־שָׁמְרוּ אֲבוֹתֵינוּ אֶת־דְּבַר יְהֹוָה לַעֲשׂוֹת כְּכׇל־הַכָּתוּב עַל־הַסֵּפֶר הַזֶּֽה׃ | 21 |
೨೧“ನಮ್ಮ ಪೂರ್ವಿಕರು ಈ ಗ್ರಂಥದಲ್ಲಿ ಬರೆದಿರುವ ಯೆಹೋವನ ಆಜ್ಞೆಗಳನ್ನೆಲ್ಲಾ ಕೈಕೊಳ್ಳದೆ ಹೋದುದರಿಂದಲೇ ಯೆಹೋವನು ತನ್ನ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾನೆ; ಆದುದರಿಂದ ನೀವು ನನಗೋಸ್ಕರವೂ ಹಾಗೂ ಇಸ್ರಾಯೇಲ್ಯರಲ್ಲಿ, ಯೆಹೂದ್ಯರಲ್ಲಿ ಉಳಿದಿರುವವರಿಗೋಸ್ಕರವೂ ಯೆಹೋವನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ಅರ್ಥವನ್ನು ವಿವರವಾಗಿ ತಿಳಿದು ಬರಲು” ಆಜ್ಞಾಪಿಸಿದನು.
וַיֵּלֶךְ חִלְקִיָּהוּ וַאֲשֶׁר הַמֶּלֶךְ אֶל־חֻלְדָּה הַנְּבִיאָה אֵשֶׁת ׀ שַׁלֻּם בֶּן־[תׇּקְהַת] (תוקהת) בֶּן־חַסְרָה שׁוֹמֵר הַבְּגָדִים וְהִיא יוֹשֶׁבֶת בִּירוּשָׁלַ͏ִם בַּמִּשְׁנֶה וַיְדַבְּרוּ אֵלֶיהָ כָּזֹֽאת׃ | 22 |
೨೨ಆಗ ಹಿಲ್ಕೀಯನೂ ಅರಸನ ಜನರೂ ಹುಲ್ದ ಎಂಬ ಪ್ರವಾದಿನಿಯ ಬಳಿಗೆ ಹೋಗಿ, ಆಕೆಯ ಹತ್ತಿರ ವಿಚಾರಿಸಿದರು. ಹಸ್ರನ ಮೊಮ್ಮಗನೂ ತೊಕ್ಹತನ ಮಗನೂ ರಾಜವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಆಕೆಯ ಗಂಡನು. ಆಕೆಯು ಯೆರೂಸಲೇಮಿನ ಎರಡನೆಯ ಕೇರಿಯಲ್ಲಿ ವಾಸವಾಗಿದ್ದಳು.
וַתֹּאמֶר לָהֶם כֹּֽה־אָמַר יְהֹוָה אֱלֹהֵי יִשְׂרָאֵל אִמְרוּ לָאִישׁ אֲשֶׁר־שָׁלַח אֶתְכֶם אֵלָֽי׃ | 23 |
೨೩ಹುಲ್ದಳು ಅವರಿಗೆ, ನಿಮ್ಮನ್ನು ಕಳುಹಿಸಿದವನಿಗೆ ಇಸ್ರಾಯೇಲ್ ದೇವರಾದ ಯೆಹೋವನ ಮಾತುಗಳನ್ನು ತಿಳಿಸಿರಿ,
כֹּה אָמַר יְהֹוָה הִנְנִי מֵבִיא רָעָה עַל־הַמָּקוֹם הַזֶּה וְעַל־יֽוֹשְׁבָיו אֵת כׇּל־הָֽאָלוֹת הַכְּתוּבוֹת עַל־הַסֵּפֶר אֲשֶׁר קָֽרְאוּ לִפְנֵי מֶלֶךְ יְהוּדָֽה׃ | 24 |
೨೪ಯೆಹೋವನು ಹೇಳಿದ್ದೇನೆಂದರೆ, “ಈ ದೇಶದ ಮೇಲೆಯೂ, ಜನರ ಮೇಲೆಯೂ ಯೆಹೂದದ ಅರಸನ ಮುಂದೆ ಪಾರಾಯಣವಾದ ಆ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನು ಬರಮಾಡುವೆನು;
תַּחַת ׀ אֲשֶׁר עֲזָבוּנִי (ויקטירו) [וַֽיְקַטְּרוּ] לֵאלֹהִים אֲחֵרִים לְמַעַן הַכְעִיסֵנִי בְּכֹל מַעֲשֵׂי יְדֵיהֶם וְתִתַּךְ חֲמָתִי בַּמָּקוֹם הַזֶּה וְלֹא תִכְבֶּֽה׃ | 25 |
೨೫ಅವರು ನನ್ನನ್ನು ಬಿಟ್ಟು ಅನ್ಯ ದೇವತೆಗಳಿಗೆ ಧೂಪಹಾಕಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದರಿಂದ ಈ ದೇಶದ ಮೇಲೆ ಉರಿಯುತ್ತಿರುವ ನನ್ನ ಕೋಪಾಗ್ನಿಯು ಆರಿಹೋಗುವುದಿಲ್ಲ” ಎನ್ನುತ್ತಾನೆ.
וְאֶל־מֶלֶךְ יְהוּדָה הַשֹּׁלֵחַ אֶתְכֶם לִדְרוֹשׁ בַּיהֹוָה כֹּה תֹאמְרוּ אֵלָיו כֹּֽה־אָמַר יְהֹוָה אֱלֹהֵי יִשְׂרָאֵל הַדְּבָרִים אֲשֶׁר שָׁמָֽעְתָּ׃ | 26 |
೨೬ತಾನು ಕೇಳಿದ ವಾಕ್ಯಗಳ ವಿಷಯವಾಗಿ, ಇಸ್ರಾಯೇಲ್ ದೇವರಾದ ಯೆಹೋವನ ಬಳಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ತಿಳಿಸಬೇಕಾದ ಮಾತೇನೆಂದರೆ,
יַעַן רַךְ־לְבָבְךָ וַתִּכָּנַע ׀ מִלִּפְנֵי אֱלֹהִים בְּשׇׁמְעֲךָ אֶת־דְּבָרָיו עַל־הַמָּקוֹם הַזֶּה וְעַל־יֹשְׁבָיו וַתִּכָּנַע לְפָנַי וַתִּקְרַע אֶת־בְּגָדֶיךָ וַתֵּבְךְּ לְפָנָי וְגַם־אֲנִי שָׁמַעְתִּי נְאֻם־יְהֹוָֽה׃ | 27 |
೨೭“ಇಸ್ರಾಯೇಲಿನ ದೇವರಾದ ಯೆಹೋವನು ಇಂತೆನ್ನುತ್ತಾನೆ; ಈ ದೇಶದ ಮತ್ತು ಅದರ ನಿವಾಸಿಗಳ ವಿಷಯ ನಾನು ಹೇಳಿದ ಮಾತುಗಳನ್ನು ಕೇಳಿದಾಗ ನೀನು ದುಃಖಪಟ್ಟು ದೇವರಾದ ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದಲೂ, ದೀನಮನಸ್ಸಿನಿಂದ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು.
הִנְנִי אֹסִפְךָ אֶל־אֲבֹתֶיךָ וְנֶאֱסַפְתָּ אֶל־קִבְרוֹתֶיךָ בְּשָׁלוֹם וְלֹא־תִרְאֶינָה עֵינֶיךָ בְּכֹל הָֽרָעָה אֲשֶׁר אֲנִי מֵבִיא עַל־הַמָּקוֹם הַזֶּה וְעַל־יֹֽשְׁבָיו וַיָּשִׁיבוּ אֶת־הַמֶּלֶךְ דָּבָֽר׃ | 28 |
೨೮ನಾನು ಈ ದೇಶದ ಮೇಲೆಯೂ, ಅದರ ನಿವಾಸಿಗಳ ಮೇಲೆಯೂ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮರಣಹೊಂದಿ ಸಮಾಧಿ ಸೇರುವಂತೆ ಅನುಗ್ರಹಿಸುವೆನು ಎಂಬುದಾಗಿ ತಿಳಿಸಿದೆ ಎಂದು ಅರಸನಿಗೆ ತಿಳಿಸಿರಿ” ಎಂದು ಹೇಳಿದಳು.
וַיִּשְׁלַח הַמֶּלֶךְ וַיֶּֽאֱסֹף אֶת־כׇּל־זִקְנֵי יְהוּדָה וִירוּשָׁלָֽ͏ִם׃ | 29 |
೨೯ಅನಂತರ ಅರಸನು ದೂತರ ಮುಖಾಂತರ ಯೆರೂಸಲೇಮಿನ ಮತ್ತು ಯೆಹೂದದ ಎಲ್ಲಾ ಹಿರಿಯರನ್ನು ಒಟ್ಟಾಗಿ ಸೇರಿಸಿದನು.
וַיַּעַל הַמֶּלֶךְ בֵּית־יְהֹוָה וְכׇל־אִישׁ יְהוּדָה וְיֹשְׁבֵי יְרוּשָׁלַ͏ִם וְהַכֹּֽהֲנִים וְהַלְוִיִּם וְכׇל־הָעָם מִגָּדוֹל וְעַד־קָטָן וַיִּקְרָא בְאׇזְנֵיהֶם אֶת־כׇּל־דִּבְרֵי סֵפֶר הַבְּרִית הַנִּמְצָא בֵּית יְהֹוָֽה׃ | 30 |
೩೦ಅರಸನು ಯೆರೂಸಲೇಮಿನವರನ್ನೂ, ಬೇರೆ ಎಲ್ಲಾ ಯೆಹೂದ್ಯರನ್ನೂ, ಯಾಜಕರನ್ನೂ, ಲೇವಿಯರನ್ನೂ ಕರೆದುಕೊಂಡು ಯೆಹೋವನ ಆಲಯಕ್ಕೆ ಹೋದನು. ದೊಡ್ಡವರು ಮೊದಲುಗೊಂಡು ಚಿಕ್ಕವರವರೆಗೂ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಯೆಹೋವನ ಆಲಯದಲ್ಲಿ ಸಿಕ್ಕಿದ ಒಡಂಬಡಿಕೆಯ ಗ್ರಂಥವನ್ನು ಸಂಪೂರ್ಣವಾಗಿ ಓದಿಸಿದನು.
וַיַּעֲמֹד הַמֶּלֶךְ עַל־עׇמְדוֹ וַיִּכְרֹת אֶֽת־הַבְּרִית לִפְנֵי יְהֹוָה לָלֶכֶת אַחֲרֵי יְהֹוָה וְלִשְׁמוֹר אֶת־מִצְוֺתָיו וְעֵדְוֺתָיו וְחֻקָּיו בְּכׇל־לְבָבוֹ וּבְכׇל־נַפְשׁוֹ לַעֲשׂוֹת אֶת־דִּבְרֵי הַבְּרִית הַכְּתוּבִים עַל־הַסֵּפֶר הַזֶּֽה׃ | 31 |
೩೧ಅರಸನು ತನ್ನ ಸ್ಥಳದಲ್ಲಿ ನಿಂತು, ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ ಆತನ ಆಜ್ಞಾನಿಯಮ ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಕೈಕೊಳ್ಳುವುದಾಗಿಯೂ ಮತ್ತು ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಪ್ರಮಾಣಮಾಡಿದನು.
וַיַּעֲמֵד אֵת כׇּל־הַנִּמְצָא בִירוּשָׁלַ͏ִם וּבִנְיָמִן וַֽיַּעֲשׂוּ יוֹשְׁבֵי יְרוּשָׁלַ͏ִם כִּבְרִית אֱלֹהִים אֱלֹהֵי אֲבוֹתֵיהֶֽם׃ | 32 |
೩೨ಆಮೇಲೆ ಎಲ್ಲಾ ಯೆರೂಸಲೇಮಿನವರಿಂದಲೂ, ಬೆನ್ಯಾಮೀನ್ಯರಿಂದಲೂ ಪ್ರಮಾಣಮಾಡಿಸಿದನು. ಯೆರೂಸಲೇಮಿನವರು ಏಕದೇವರಾದ ತಮ್ಮ ಪೂರ್ವಿಕರ ದೇವರ ನಿಬಂಧನೆಯನ್ನು ಕೈಕೊಳ್ಳುವವರಾದರು.
וַיָּסַר יֹאשִׁיָּהוּ אֶת־כׇּל־הַתֹּעֵבוֹת מִֽכׇּל־הָאֲרָצוֹת אֲשֶׁר לִבְנֵי יִשְׂרָאֵל וַֽיַּעֲבֵד אֵת כׇּל־הַנִּמְצָא בְּיִשְׂרָאֵל לַעֲבוֹד אֶת־יְהֹוָה אֱלֹהֵיהֶם כׇּל־יָמָיו לֹא סָרוּ מֵאַחֲרֵי יְהֹוָה אֱלֹהֵי אֲבוֹתֵיהֶֽם׃ | 33 |
೩೩ಯೋಷೀಯನು ಇಸ್ರಾಯೇಲರಿಗೆ ಸೇರಿದ ಎಲ್ಲಾ ಪ್ರಾಂತ್ಯಗಳೊಳಗಿನ ಅಸಹ್ಯ ಮೂರ್ತಿಗಳನ್ನೆಲ್ಲಾ ತೆಗೆದುಹಾಕಿಸಿ, ಇಸ್ರಾಯೇಲರಲ್ಲಿ ಉಳಿದಿರುವವರು ತಮ್ಮ ದೇವರಾದ ಯೆಹೋವನನ್ನೇ ಆರಾಧಿಸುವಂತೆ ಮಾಡಿದನು. ಅವನ ಜೀವಮಾನದಲ್ಲೆಲ್ಲಾ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಬಿಡದೆ ಹಿಂಬಾಲಿಸಿದರು.