< דברי הימים ב 6 >

אָז אָמַר שְׁלֹמֹה יְהֹוָה אָמַר לִשְׁכּוֹן בָּעֲרָפֶֽל׃ 1
ತರುವಾಯ ಸೊಲೊಮೋನನು, ಯೆಹೋವನೇ “ಕಾರ್ಗತ್ತಲಲ್ಲಿ ವಾಸಿಸುತ್ತೇನೆಂದು ಹೇಳಿದ್ದೀ;
וַאֲנִי בָּנִיתִי בֵית־זְבֻל לָךְ וּמָכוֹן לְשִׁבְתְּךָ עוֹלָמִֽים׃ 2
ಆದರೆ ನಾನು ನಿನಗೋಸ್ಕರ ಒಂದು ಆಲಯವನ್ನು, ನೀನು ಶಾಶ್ವತವಾಗಿ ವಾಸಮಾಡತಕ್ಕ ಸ್ಥಳವಾಗಿರಲೆಂದು ನಾನು ಕಟ್ಟಿಸಿದ್ದೇನೆ” ಎಂದನು.
וַיַּסֵּב הַמֶּלֶךְ אֶת־פָּנָיו וַיְבָרֶךְ אֵת כׇּל־קְהַל יִשְׂרָאֵל וְכׇל־קְהַל יִשְׂרָאֵל עוֹמֵֽד׃ 3
ಇದಾದ ಮೇಲೆ, ಅರಸನು ಎದ್ದು ನಿಂತು ಇಸ್ರಾಯೇಲಿನ ಸಮೂಹದವರ ಕಡೆಗೆ ತಿರುಗಿಕೊಂಡು ಅವರನ್ನು ಆಶೀರ್ವದಿಸಿದನು.
וַיֹּאמֶר בָּרוּךְ יְהֹוָה אֱלֹהֵי יִשְׂרָאֵל אֲשֶׁר דִּבֶּר בְּפִיו אֵת דָּוִיד אָבִי וּבְיָדָיו מִלֵּא לֵאמֹֽר׃ 4
ಅವನು ಹೇಳಿದ್ದೇನೆಂದರೆ, “ಇಸ್ರಾಯೇಲರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ನನ್ನ ತಂದೆಯಾದ ದಾವೀದನಿಗೆ ವಾಗ್ದಾನ ಮಾಡಿದಂತೆ ಈಗ ತನ್ನಿಂದ ನೆರವೇರಿಸುವಂತೆ ಮಾಡಿದ್ದಾನೆ.
מִן־הַיּוֹם אֲשֶׁר הוֹצֵאתִי אֶת־עַמִּי מֵאֶרֶץ מִצְרַיִם לֹא־בָחַרְתִּֽי בְעִיר מִכֹּל שִׁבְטֵי יִשְׂרָאֵל לִבְנוֹת בַּיִת לִהְיוֹת שְׁמִי שָׁם וְלֹא־בָחַרְתִּֽי בְאִישׁ לִהְיוֹת נָגִיד עַל־עַמִּי יִשְׂרָאֵֽל׃ 5
ಆತನು ಹೇಳಿದ್ದೇನೆಂದರೆ, ‘ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಬರಮಾಡಿದ ದಿನ ಮೊದಲುಗೊಂಡು ನನ್ನ ಹೆಸರು ಅದರಲ್ಲಿ ಇರುವ ಹಾಗೆ ಆಲಯವನ್ನು ಕಟ್ಟುವುದಕ್ಕಾಗಿ ಇಸ್ರಾಯೇಲರ ಕುಲಗಳಲ್ಲಿ ಯಾವ ಪಟ್ಟಣವನ್ನೂ, ನನ್ನ ಆಲಯ ಸ್ಥಾನವನ್ನಾಗಿ ಆರಿಸಿಕೊಳ್ಳಲಿಲ್ಲ; ನನ್ನ ಪ್ರಜೆಗಳಾದ ಇಸ್ರಾಯೇಲರ ಪ್ರಭುವಾಗಿರುವುದಕ್ಕಾಗಿ ಯಾವ ವ್ಯಕ್ತಿಯನ್ನು ಆರಿಸಿಕೊಂಡದ್ದೂ ಇಲ್ಲ.
וָֽאֶבְחַר בִּירוּשָׁלַ͏ִם לִהְיוֹת שְׁמִי שָׁם וָאֶבְחַר בְּדָוִיד לִהְיוֹת עַל־עַמִּי יִשְׂרָאֵֽל׃ 6
ಆದರೆ ಈಗ ನನ್ನ ಹೆಸರಿಗೋಸ್ಕರ ಯೆರೂಸಲೇಮನ್ನೂ ನನ್ನ ಪ್ರಜೆಗಳಾದ ಇಸ್ರಾಯೇಲರನ್ನು ಆಳುವುದಕ್ಕೋಸ್ಕರ ದಾವೀದನನ್ನೂ ಆರಿಸಿಕೊಂಡಿದ್ದೇನೆ’ ಎಂದು ಹೇಳಿದನು.
וַיְהִי עִם־לְבַב דָּוִיד אָבִי לִבְנוֹת בַּיִת לְשֵׁם יְהֹוָה אֱלֹהֵי יִשְׂרָאֵֽל׃ 7
ಆದಕಾರಣ ಇಸ್ರಾಯೇಲಿನ ದೇವರಾದ ಯೆಹೋವನ ಹೆಸರಿಗೆ ಆಲಯವನ್ನು ಕಟ್ಟಿಸಲು ನನ್ನ ತಂದೆಯಾದ ದಾವೀದನಿಗೆ ಮನಸ್ಸಿತ್ತು.
וַיֹּאמֶר יְהֹוָה אֶל־דָּוִיד אָבִי יַעַן אֲשֶׁר הָיָה עִם־לְבָבְךָ לִבְנוֹת בַּיִת לִשְׁמִי הֱֽטִיבוֹתָ כִּי הָיָה עִם־לְבָבֶֽךָ׃ 8
ಆಗ ಯೆಹೋವನು ನನ್ನ ತಂದೆಯಾದ ದಾವೀದನಿಗೆ, ‘ನೀನು ನನ್ನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟುವುದಕ್ಕೆ ಮನಸ್ಸು ಮಾಡಿದ್ದು ಒಳ್ಳೆಯದೇ ಸರಿ.
רַק אַתָּה לֹא תִבְנֶה הַבָּיִת כִּי בִנְךָ הַיּוֹצֵא מֵחֲלָצֶיךָ הוּא־יִבְנֶה הַבַּיִת לִשְׁמִֽי׃ 9
ಆದರೆ ನೀನು ಆಲಯವನ್ನು ಕಟ್ಟಬಾರದು; ನಿನ್ನಿಂದ ಹುಟ್ಟುವ ಮಗನೇ ನನ್ನ ಹೆಸರಿಗೋಸ್ಕರ ಆಲಯವನ್ನು ಕಟ್ಟಿಸುವನು’ ಎಂದು ಹೇಳಿದನು.
וַיָּקֶם יְהֹוָה אֶת־דְּבָרוֹ אֲשֶׁר דִּבֵּר וָאָקוּם תַּחַת דָּוִיד אָבִי וָאֵשֵׁב ׀ עַל־כִּסֵּא יִשְׂרָאֵל כַּֽאֲשֶׁר דִּבֶּר יְהֹוָה וָאֶבְנֶה הַבַּיִת לְשֵׁם יְהֹוָה אֱלֹהֵי יִשְׂרָאֵֽל׃ 10
೧೦ಯೆಹೋವನು ತಾನು ಕೊಟ್ಟ ಮಾತನ್ನು ನೆರವೇರಿಸಿದ್ದಾನೆ. ಆತನು ವಾಗ್ದಾನ ಮಾಡಿದಂತೆ ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಇಸ್ರಾಯೇಲಿನ ಸಿಂಹಾಸನದ ಮೇಲೆ ಅರಸನಾಗಿ ಕುಳಿತುಕೊಂಡು ಇಸ್ರಾಯೇಲಿನ ದೇವರಾದ ಯೆಹೋವನ ಹೆಸರಿಗೆ ಆಲಯವನ್ನು ಕಟ್ಟಿಸಿದ್ದೇನೆ.
וָאָשִׂים שָׁם אֶת־הָאָרוֹן אֲשֶׁר־שָׁם בְּרִית יְהֹוָה אֲשֶׁר כָּרַת עִם־בְּנֵי יִשְׂרָאֵֽל׃ 11
೧೧ಯೆಹೋವನಿಂದ ಇಸ್ರಾಯೇಲರಿಗೆ ದೊರಕಿದ ಒಡಂಬಡಿಕೆಯ ನಿಬಂಧನಾಶಾಸನಗಳಿರುವ ಮಂಜೂಷವನ್ನು ಅದರಲ್ಲಿ ಇಟ್ಟಿದ್ದೇನೆ” ಎಂದು ಹೇಳಿದನು.
וַֽיַּעֲמֹד לִפְנֵי מִזְבַּח יְהֹוָה נֶגֶד כׇּל־קְהַל יִשְׂרָאֵל וַיִּפְרֹשׂ כַּפָּֽיו׃ 12
೧೨ಸೊಲೊಮೋನನು ಎಲ್ಲಾ ಇಸ್ರಾಯೇಲರ ಸಮ್ಮುಖದಲ್ಲಿ ಯೆಹೋವನ ಯಜ್ಞವೇದಿಯ ಎದುರು ತನ್ನ ಕೈಗಳನ್ನೆತ್ತಿ ಪ್ರಾರ್ಥನಾ ಭಂಗಿಯಲ್ಲಿ ನಿಂತನು.
כִּֽי־עָשָׂה שְׁלֹמֹה כִּיּוֹר נְחֹשֶׁת וַֽיִּתְּנֵהוּ בְּתוֹךְ הָעֲזָרָה חָמֵשׁ אַמּוֹת אׇרְכּוֹ וְחָמֵשׁ אַמּוֹת רׇחְבּוֹ וְאַמּוֹת שָׁלוֹשׁ קוֹמָתוֹ וַיַּעֲמֹד עָלָיו וַיִּבְרַךְ עַל־בִּרְכָּיו נֶגֶד כׇּל־קְהַל יִשְׂרָאֵל וַיִּפְרֹשׂ כַּפָּיו הַשָּׁמָֽיְמָה׃ 13
೧೩ಸೊಲೊಮೋನನು ಐದು ಮೊಳ ಉದ್ದವೂ, ಐದು ಮೊಳ ಅಗಲವೂ, ಮೂರು ಮೊಳ ಎತ್ತರವೂ ಆಗಿರುವ ಒಂದು ತಾಮ್ರದ ಯಜ್ಞವೇದಿಯನ್ನು ಮಾಡಿಸಿ ಅದನ್ನು ಅಂಗಳದ ಮಧ್ಯದಲ್ಲಿ ಇರಿಸಿದನು, ಆತನು ಅದರ ಮೇಲೆ ಮೊಣಕಾಲೂರಿ ನಿಂತನು. ಅವನು ಇಸ್ರಾಯೇಲರ ಸಮ್ಮುಖದಲ್ಲಿ ಆಕಾಶದ ಕಡೆಗೆ ತನ್ನ ಕೈಗಳನ್ನೆತ್ತಿ,
וַיֹּאמַר יְהֹוָה אֱלֹהֵי יִשְׂרָאֵל אֵין־כָּמוֹךָ אֱלֹהִים בַּשָּׁמַיִם וּבָאָרֶץ שֹׁמֵר הַבְּרִית וְֽהַחֶסֶד לַעֲבָדֶיךָ הַהֹלְכִים לְפָנֶיךָ בְּכׇל־לִבָּֽם׃ 14
೧೪ಹೀಗೆ ಪ್ರಾರ್ಥಿಸಿದನು, “ಇಸ್ರಾಯೇಲರ ದೇವರಾದ ಯೆಹೋವನೇ, ಭೂಲೋಕದಲ್ಲಿಯೂ ಪರಲೋಕದಲ್ಲಿಯೂ ನಿನಗೆ ಸಮಾನನಾದ ದೇವರು ಯಾರೂ ಇಲ್ಲ; ಪೂರ್ಣಮನಸ್ಸಿನಿಂದ ನಿನಗೆ ಪ್ರಾಮಾಣಿಕರಾಗಿ ನಡೆದುಕೊಳ್ಳುವಂಥ ಸೇವಕರ ವಿಷಯದಲ್ಲಿ ನೀನು ನಿನ್ನ ಒಡಂಬಡಿಕೆಯನ್ನು ನೆರವೇರಿಸಿ ದಯೆಯನ್ನೂ, ಕೃಪೆಯನ್ನೂ ತೋರಿಸಬಲ್ಲ ದೇವರು ಒಬ್ಬರೂ ಇಲ್ಲ.
אֲשֶׁר שָׁמַרְתָּ לְעַבְדְּךָ דָּוִיד אָבִי אֵת אֲשֶׁר־דִּבַּרְתָּ לוֹ וַתְּדַבֵּר בְּפִיךָ וּבְיָדְךָ מִלֵּאתָ כַּיּוֹם הַזֶּֽה׃ 15
೧೫ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ ಕೊಟ್ಟ ಮಾತನ್ನು ನೆರವೇರಿಸಿದ್ದೀ; ನಿನ್ನ ಬಾಯಿ ನುಡಿದದ್ದನ್ನು ನಿನ್ನ ಕೈ ಈಹೊತ್ತು ನೆರವೇರಿಸಿದೆ.
וְעַתָּה יְהֹוָה ׀ אֱלֹהֵי יִשְׂרָאֵל שְׁמֹר לְעַבְדְּךָ דָוִיד אָבִי אֵת אֲשֶׁר דִּבַּרְתָּ לּוֹ לֵאמֹר לֹא־יִכָּרֵת לְךָ אִישׁ מִלְּפָנַי יוֹשֵׁב עַל־כִּסֵּא יִשְׂרָאֵל רַק אִם־יִשְׁמְרוּ בָנֶיךָ אֶת־דַּרְכָּם לָלֶכֶת בְּתוֹרָתִי כַּאֲשֶׁר הָלַכְתָּ לְפָנָֽי׃ 16
೧೬ಇಸ್ರಾಯೇಲರ ದೇವರಾದ ಯೆಹೋವನೇ, ನೀನು ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ, ‘ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಕಟ್ಟಳೆಯನ್ನು ಅನುಸರಿಸಿ ನಡೆದುಕೊಳ್ಳುವುದಾದರೆ ಅವರು ತಪ್ಪದೆ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು ಎಂಬುದಾಗಿ ವಾಗ್ದಾನ ಮಾಡಿರುವೆಯಲ್ಲಾ, ಅದನ್ನು ನೆರವೇರಿಸು.’
וְעַתָּה יְהֹוָה אֱלֹהֵי יִשְׂרָאֵל יֵֽאָמֵן דְּבָרְךָ אֲשֶׁר דִּבַּרְתָּ לְעַבְדְּךָ לְדָוִֽיד׃ 17
೧೭ಈಗ ಇಸ್ರಾಯೇಲರ ದೇವರಾದ ಯೆಹೋವನೇ, ನೀನು ನಿನ್ನ ಸೇವಕನಾದ ದಾವೀದನಿಗೆ ನುಡಿದಿದ್ದೆಲ್ಲವೂ ಸ್ಥಿರವಾಗಿರಲಿ.
כִּי הַֽאֻמְנָם יֵשֵׁב אֱלֹהִים אֶת־הָאָדָם עַל־הָאָרֶץ הִנֵּה שָׁמַיִם וּשְׁמֵי הַשָּׁמַיִם לֹא יְכַלְכְּלוּךָ אַף כִּֽי־הַבַּיִת הַזֶּה אֲשֶׁר בָּנִֽיתִי׃ 18
೧೮ಆದರೆ ದೇವರು ನಿಜವಾಗಿ ಮನಷ್ಯರೊಡನೆ ಭೂಲೋಕದಲ್ಲಿ ವಾಸವಾಗಿರುವನೋ? ಸ್ವರ್ಗವೂ, ಸ್ವರ್ಗಾಧಿ ಸ್ವರ್ಗವೂ ನಿನ್ನ ವಾಸಕ್ಕೆ ಸಾಲವು, ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಆಲಯವು ನಿನಗೆ ಹೇಗೆ ಸಾಕಾದೀತು?
וּפָנִיתָ אֶל־תְּפִלַּת עַבְדְּךָ וְאֶל־תְּחִנָּתוֹ יְהֹוָה אֱלֹהָי לִשְׁמֹעַ אֶל־הָֽרִנָּה וְאֶל־הַתְּפִלָּה אֲשֶׁר עַבְדְּךָ מִתְפַּלֵּל לְפָנֶֽיךָ׃ 19
೧೯ಆದರೂ ನನ್ನ ದೇವರಾದ ಯೆಹೋವನೇ, ನಿನ್ನ ಈ ಸೇವಕನ ಪ್ರಾರ್ಥನೆಗೂ, ವಿಜ್ಞಾಪನೆಗೂ ಕಿವಿಗೊಡು; ನಿನ್ನನ್ನು ಪ್ರಾರ್ಥಿಸುತ್ತಿರುವ ನಿನ್ನ ಈ ಸೇವಕನ ಮೊರೆಯನ್ನು ಲಾಲಿಸು.
לִהְיוֹת עֵינֶיךָ פְתֻחוֹת אֶל־הַבַּיִת הַזֶּה יוֹמָם וָלַיְלָה אֶל־הַמָּקוֹם אֲשֶׁר אָמַרְתָּ לָשׂוּם שִׁמְךָ שָׁם לִשְׁמוֹעַ אֶל־הַתְּפִלָּה אֲשֶׁר יִתְפַּלֵּל עַבְדְּךָ אֶל־הַמָּקוֹם הַזֶּֽה׃ 20
೨೦ಈ ಸ್ಥಳವನ್ನು ಕುರಿತು, ‘ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವುದು’” ಎಂದು ಹೇಳಿದವನೇ, ನಿನ್ನ ಕೃಪಾ ಕಟಾಕ್ಷವು ಹಗಲಿರುಳು ಈ ಮಂದಿರದ ಮೇಲಿರಲಿ; ಇಲ್ಲಿ ನಿನ್ನ ಸೇವಕನು ಪ್ರಾರ್ಥಿಸುವಾಗಲೆಲ್ಲಾ ಸದುತ್ತರವನ್ನು ದಯಪಾಲಿಸು.
וְשָׁמַעְתָּ אֶל־תַּחֲנוּנֵי עַבְדְּךָ וְעַמְּךָ יִשְׂרָאֵל אֲשֶׁר יִֽתְפַּלְלוּ אֶל־הַמָּקוֹם הַזֶּה וְאַתָּה תִּשְׁמַע מִמְּקוֹם שִׁבְתְּךָ מִן־הַשָּׁמַיִם וְשָׁמַעְתָּ וְסָלָֽחְתָּ׃ 21
೨೧ಇದಲ್ಲದೆ, ನೀನು ನಿನ್ನ ಸೇವಕನ ಹಾಗೂ ನಿನ್ನ ಪ್ರಜೆಗಳಾದ ಇಸ್ರಾಯೇಲರ ವಿಜ್ಞಾಪನೆಯನ್ನು ಲಾಲಿಸು. ಅವರು ಈ ಸ್ಥಳದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವಾಗ ನಿನ್ನ ನಿವಾಸವಾಗಿರುವ ಪರಲೋಕದಿಂದ ನಮ್ಮ ವಿಜ್ಞಾಪನೆಯನ್ನು ಕೇಳಿ, ಕ್ಷಮೆಯನ್ನು ಅನುಗ್ರಹಿಸು.
אִם־יֶחֱטָא אִישׁ לְרֵעֵהוּ וְנָשָׁא־בוֹ אָלָה לְהַאֲלֹתוֹ וּבָא אָלָה לִפְנֵי מִֽזְבַּחֲךָ בַּבַּיִת הַזֶּֽה׃ 22
೨೨ನೆರೆಯವನಿಗೆ ವಿರೋಧವಾಗಿ ಪಾಪ ಮಾಡಿ, ಶಾಪಕ್ಕೆ ಗುರಿಯಾದ ಮನುಷ್ಯನು ತಾನು ನಿರ್ದೋಷಿಯೆಂದು ಪ್ರಮಾಣ ಮಾಡುವಾಗ, ಅವನು ಈ ಆಲಯಕ್ಕೆ ಬಂದು ನಿನ್ನ ಯಜ್ಞವೇದಿಯ ಮುಂದೆ ನಿಂತು ಪ್ರಮಾಣ ಮಾಡಿದರೆ,
וְאַתָּה ׀ תִּשְׁמַע מִן־הַשָּׁמַיִם וְעָשִׂיתָ וְשָׁפַטְתָּ אֶת־עֲבָדֶיךָ לְהָשִׁיב לְרָשָׁע לָתֵת דַּרְכּוֹ בְּרֹאשׁוֹ וּלְהַצְדִּיק צַדִּיק לָתֶת לוֹ כְּצִדְקָתֽוֹ׃ 23
೨೩ಆಗ ನೀನು ಪರಲೋಕದಿಂದ ಅದನ್ನು ಕೇಳಿ ನಿನ್ನ ಸೇವಕರ ವ್ಯಾಜ್ಯವನ್ನು ತೀರಿಸು; ದುಷ್ಟನಿಗೆ ಅವನ ದುಷ್ಟತ್ವವನ್ನು ಅವನ ತಲೆಯ ಮೇಲೆಯೇ ಬರಮಾಡಿ ಮುಯ್ಯಿತೀರಿಸು; ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದು ತೋರಿಸಿಕೊಡು.
וְֽאִם־יִנָּגֵף עַמְּךָ יִשְׂרָאֵל לִפְנֵי אוֹיֵב כִּי יֶחֶטְאוּ־לָךְ וְשָׁבוּ וְהוֹדוּ אֶת־שְׁמֶךָ וְהִתְפַּֽלְלוּ וְהִֽתְחַנְּנוּ לְפָנֶיךָ בַּבַּיִת הַזֶּֽה׃ 24
೨೪“ನಿನ್ನ ಪ್ರಜೆಗಳಾದ ಇಸ್ರಾಯೇಲರು ನಿನಗೆ ವಿರುದ್ಧವಾಗಿ ಪಾಪ ಮಾಡಿದ್ದರಿಂದ ತಮ್ಮ ಶತ್ರುವಿನ ಮುಂದೆ ಸೋತು ಹೋದಾಗ ಅವರು ಹಿಂದಿರುಗಿ ನಿನ್ನ ಆಲಯಕ್ಕೆ ಬಂದು ನಿನ್ನ ಹೆಸರನ್ನು ಸ್ತುತಿಸಿ, ನಿನ್ನ ಸನ್ನಿಧಿಯಲ್ಲಿ ವಿಜ್ಞಾಪನೆಯನ್ನೂ, ಪ್ರಾರ್ಥನೆಯನ್ನು ಮಾಡಿದರೆ,
וְאַתָּה תִּשְׁמַע מִן־הַשָּׁמַיִם וְסָלַחְתָּ לְחַטַּאת עַמְּךָ יִשְׂרָאֵל וַהֲשֵֽׁיבוֹתָם אֶל־הָאֲדָמָה אֲשֶׁר־נָתַתָּה לָהֶם וְלַאֲבֹתֵיהֶֽם׃ 25
೨೫ನೀನು ಪರಲೋಕದಿಂದ ಲಾಲಿಸಿ ಅವರ ಪಾಪಗಳನ್ನು ಕ್ಷಮಿಸಿ, ಅವರಿಗೂ ಅವರ ಪೂರ್ವಿಕರಿಗೂ ನೀನು ಕೊಟ್ಟಿರುವ ಸ್ವದೇಶಕ್ಕೆ ಅವರನ್ನು ತಿರುಗಿ ಬರಮಾಡು.
בְּהֵעָצֵר הַשָּׁמַיִם וְלֹא־יִהְיֶה מָטָר כִּי יֶחֶטְאוּ־לָךְ וְהִֽתְפַּֽלְלוּ אֶל־הַמָּקוֹם הַזֶּה וְהוֹדוּ אֶת־שְׁמֶךָ מֵחַטָּאתָם יְשׁוּבוּן כִּי תַעֲנֵֽם׃ 26
೨೬“ಅವರ ಪಾಪಗಳ ನಿಮಿತ್ತವಾಗಿ, ನೀನು ಆಕಾಶವನ್ನು ಮಳೆಗರೆಯದಂತೆ ಮುಚ್ಚಿ ಅವರನ್ನು ತಗ್ಗಿಸಿದಾಗ, ಅವರು ತಮ್ಮ ಪಾಪಗಳನ್ನು ಬಿಟ್ಟು ತಮ್ಮನ್ನು ತಗ್ಗಿಸಿದವನು ನೀನೇ ಎಂದು ತಿಳಿದುಕೊಂಡು ನಿನ್ನ ಹೆಸರನ್ನು ಸ್ತುತಿಸಿ ಈ ಆಲಯದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವುದಾದರೆ,
וְאַתָּה ׀ תִּשְׁמַע הַשָּׁמַיִם וְסָלַחְתָּ לְחַטַּאת עֲבָדֶיךָ וְעַמְּךָ יִשְׂרָאֵל כִּי תוֹרֵם אֶל־הַדֶּרֶךְ הַטּוֹבָה אֲשֶׁר יֵֽלְכוּ־בָהּ וְנָֽתַתָּה מָטָר עַֽל־אַרְצְךָ אֲשֶׁר־נָתַתָּה לְעַמְּךָ לְנַחֲלָֽה׃ 27
೨೭ಪರಲೋಕದಿಂದ ನೀನು ಲಾಲಿಸಿ ನಿನ್ನ ಸೇವಕರು ಪ್ರಜೆಗಳೂ ಆದ ಇಸ್ರಾಯೇಲರ ಪಾಪಗಳನ್ನು ಕ್ಷಮಿಸಿ, ಅವರು ನಡೆಯಬೇಕಾದ ಸನ್ಮಾರ್ಗವನ್ನು ತೋರಿಸಿ, ನಿನ್ನ ಪ್ರಜೆಗಳಿಗೆ ಸ್ವತ್ತಾಗಿ ಕೊಟ್ಟ ದೇಶಕ್ಕೆ ಮಳೆಯನ್ನು ಅನುಗ್ರಹಿಸು.
רָעָב כִּֽי־יִהְיֶה בָאָרֶץ דֶּבֶר כִּֽי־יִהְיֶה שִׁדָּפוֹן וְיֵֽרָקוֹן אַרְבֶּה וְחָסִיל כִּי יִֽהְיֶה כִּי יָצַר־לוֹ אֹיְבָיו בְּאֶרֶץ שְׁעָרָיו כׇּל־נֶגַע וְכׇֽל־מַחֲלָֽה׃ 28
೨೮“ದೇಶದಲ್ಲಿ ಬರಗಾಲ, ಘೋರವ್ಯಾಧಿ, ಬಿಸಿಗಾಳಿ, ಮಿಡತೆ, ಚಿಟ್ಟೇಹುಳು, ಹಸಿರುಹುಳು ಇಲ್ಲವೆ ಶತ್ರುಗಳು ಪಟ್ಟಣಕ್ಕೆ ಮುತ್ತಿಗೆ ಹಾಕುವುದು, ಇಂಥ ಯಾವ ಉಪದ್ರವದಿಂದಾಗಲಿ, ವ್ಯಾಧಿಯಿಂದಾಗಲಿ ಬಾಧೆಯುಂಟಾದರೆ,
כׇּל־תְּפִלָּה כׇל־תְּחִנָּה אֲשֶׁר יִֽהְיֶה לְכׇל־הָאָדָם וּלְכֹל עַמְּךָ יִשְׂרָאֵל אֲשֶׁר יֵדְעוּ אִישׁ נִגְעוֹ וּמַכְאֹבוֹ וּפָרַשׂ כַּפָּיו אֶל־הַבַּיִת הַזֶּֽה׃ 29
೨೯ಎಲ್ಲಾ ಇಸ್ರಾಯೇಲ್ಯರಾಗಲಿ, ಅವರಲ್ಲೊಬ್ಬನಾಗಲಿ, ತಾವು ಅನುಭವಿಸುತ್ತಿರುವ ಉಪದ್ರವ ದುಃಖಗಳ ನಿಮಿತ್ತವಾಗಿ ಈ ಆಲಯದ ಕಡೆಗೆ ಕೈಯೆತ್ತಿ ನಿನಗೆ ಪ್ರಾರ್ಥನೆಯನ್ನೂ, ವಿಜ್ಞಾಪನೆಯನ್ನೂ ಮಾಡಿದರೆ,
וְאַתָּה תִּשְׁמַע מִן־הַשָּׁמַיִם מְכוֹן שִׁבְתֶּךָ וְסָלַחְתָּ וְנָתַתָּה לָאִישׁ כְּכׇל־דְּרָכָיו אֲשֶׁר תֵּדַע אֶת־לְבָבוֹ כִּי אַתָּה לְבַדְּךָ יָדַעְתָּ אֶת־לְבַב בְּנֵי הָאָדָֽם׃ 30
೩೦ಮನುಷ್ಯರ ಹೃದಯಗಳನ್ನು ಬಲ್ಲಂಥ ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಅಲಿಸಿ ಅವರಿಗೆ ಪಾಪ ಕ್ಷಮೆಯನ್ನು ಅನುಗ್ರಹಿಸು. ನೀನೊಬ್ಬನೇ ಮನುಷ್ಯರ ಹೃದಯಗಳನ್ನು ಬಲ್ಲವನಾಗಿರುವುದರಿಂದ ಪ್ರತಿಯೊಬ್ಬನಿಗೂ ಅವನವನ ನಡತೆಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡು.
לְמַעַן יִירָאוּךָ לָלֶכֶת בִּדְרָכֶיךָ כׇּל־הַיָּמִים אֲשֶׁר־הֵם חַיִּים עַל־פְּנֵי הָאֲדָמָה אֲשֶׁר נָתַתָּה לַאֲבֹתֵֽינוּ׃ 31
೩೧ಆಗ ನಮ್ಮ ಪೂರ್ವಿಕರಿಗೆ ನೀನು ಕೊಟ್ಟ ದೇಶದಲ್ಲಿ ಅವರು ವಾಸಿಸುವ ಕಾಲವೆಲ್ಲಾ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ ನಿನ್ನ ಮಾರ್ಗಗಳಲ್ಲಿ ನಡೆಯುವರು.
וְגַם אֶל־הַנׇּכְרִי אֲשֶׁר לֹא מֵעַמְּךָ יִשְׂרָאֵל הוּא וּבָא ׀ מֵאֶרֶץ רְחוֹקָה לְמַעַן שִׁמְךָ הַגָּדוֹל וְיָדְךָ הַחֲזָקָה וּֽזְרוֹעֲךָ הַנְּטוּיָה וּבָאוּ וְהִֽתְפַּֽלְלוּ אֶל־הַבַּיִת הַזֶּֽה׃ 32
೩೨“ನಿನ್ನ ಪ್ರಜೆಗಳಾದ ಇಸ್ರಾಯೇಲನಲ್ಲದೆ ಸೇರದಂಥ ಒಬ್ಬ ಅನ್ಯನೂ, ಪರದೇಶಿಯು ನಿನ್ನ ಮಹತ್ತಾದ ನಾಮ, ಭುಜಬಲ, ಶಿಕ್ಷಾಹಸ್ತ ಇವುಗಳ ವರ್ತಮಾನವನ್ನು ಕೇಳಿ ದೂರದೇಶದಿಂದ ಬಂದು, ಈ ಆಲಯದ ಮುಂದೆ ನಿಂತು, ನಿನ್ನನ್ನು ಪ್ರಾರ್ಥಿಸಿದರೆ ನಿನ್ನ ನಿವಾಸವಾಗಿರುವ,
וְאַתָּה תִּשְׁמַע מִן־הַשָּׁמַיִם מִמְּכוֹן שִׁבְתֶּךָ וְעָשִׂיתָ כְּכֹל אֲשֶׁר־יִקְרָא אֵלֶיךָ הַנׇּכְרִי לְמַעַן יֵדְעוּ כׇל־עַמֵּי הָאָרֶץ אֶת־שְׁמֶךָ וּלְיִרְאָה אֹֽתְךָ כְּעַמְּךָ יִשְׂרָאֵל וְלָדַעַת כִּֽי־שִׁמְךָ נִקְרָא עַל־הַבַּיִת הַזֶּה אֲשֶׁר בָּנִֽיתִי׃ 33
೩೩ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ ಅವನು ಬೇಡಿಕೊಂಡದ್ದನ್ನು ಅನುಗ್ರಹಿಸು. ಆಗ ಲೋಕದ ಎಲ್ಲಾ ಜನರೂ ನಿನ್ನ ನಾಮದ ಮಹತ್ವವನ್ನು ತಿಳಿದು, ನಿನ್ನ ಜನರಾದ ಇಸ್ರಾಯೇಲರಂತೆ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ ನಿನ್ನ ಹೆಸರಿನಲ್ಲಿ ಈ ಆಲಯವು ಕಟ್ಟಲ್ಪಟಿದ್ದೆಯೆಂದು ತಿಳಿದುಕೊಳ್ಳುವರು.
כִּֽי־יֵצֵא עַמְּךָ לַמִּלְחָמָה עַל־אֹיְבָיו בַּדֶּרֶךְ אֲשֶׁר תִּשְׁלָחֵם וְהִתְפַּֽלְלוּ אֵלֶיךָ דֶּרֶךְ הָעִיר הַזֹּאת אֲשֶׁר בָּחַרְתָּ בָּהּ וְהַבַּיִת אֲשֶׁר־בָּנִיתִי לִשְׁמֶֽךָ׃ 34
೩೪“ನೀನು ನಿನ್ನ ಜನರನ್ನು ಶತ್ರುಗಳೊಡನೆ ಯುದ್ಧ ಮಾಡುವುದಕ್ಕಾಗಿ ಎಲ್ಲಿಗಾದರೂ ಕಳುಹಿಸಿದಾಗ, ಅವರು ಅಲ್ಲಿಂದ ನೀನು ಆರಿಸಿಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿನಲ್ಲಿ ಕಟ್ಟಿಸಿರುವ ಈ ಆಲಯದ ಕಡೆಗೂ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸಿದರೆ,
וְשָֽׁמַעְתָּ מִן־הַשָּׁמַיִם אֶת־תְּפִלָּתָם וְאֶת־תְּחִנָּתָם וְעָשִׂיתָ מִשְׁפָּטָֽם׃ 35
೩೫ನೀನು ಪರಲೋಕದಿಂದ ಅವರ ಪ್ರಾರ್ಥನೆಯನ್ನೂ, ವಿಜ್ಞಾಪನೆಯನ್ನೂ, ಕೇಳಿ ಅವರಿಗೆ ಸಹಾಯವನ್ನು ಮಾಡು.
כִּי יֶחֶטְאוּ־לָךְ כִּי אֵין אָדָם אֲשֶׁר לֹא־יֶחֱטָא וְאָנַפְתָּ בָם וּנְתַתָּם לִפְנֵי אוֹיֵב וְשָׁבוּם שׁוֹבֵיהֶם אֶל־אֶרֶץ רְחוֹקָה אוֹ קְרוֹבָֽה׃ 36
೩೬“ಅವರು ನಿನಗೆ ವಿರುದ್ಧವಾಗಿ ಪಾಪ ಮಾಡಬಹುದು, ಪಾಪ ಮಾಡದ ಮನುಷ್ಯನು ಒಬ್ಬನೂ ಇಲ್ಲ. ನೀನು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ, ಸಮೀಪದಲ್ಲಾಗಲಿ, ಇರುವ ದೇಶಕ್ಕೆ ಒಯ್ದಾಗ,
וְהֵשִׁיבוּ אֶל־לְבָבָם בָּאָרֶץ אֲשֶׁר נִשְׁבּוּ־שָׁם וְשָׁבוּ ׀ וְהִֽתְחַנְּנוּ אֵלֶיךָ בְּאֶרֶץ שִׁבְיָם לֵאמֹר חָטָאנוּ הֶעֱוִינוּ וְרָשָֽׁעְנוּ׃ 37
೩೭ತಾವು ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಅವರು ಪಶ್ಚಾತ್ತಾಪಪಟ್ಟು, ನಿನ್ನ ಅನುಗ್ರಹದಿಂದ ತಮ್ಮ ಪೂರ್ವಿಕರಿಗೆ ದೊರಕಿದ ದೇಶದ ಕಡೆಗೂ, ನೀನು ಆರಿಸಿಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿನಲ್ಲಿ ಕಟ್ಟಿಸಿರುವ ಈ ಆಲಯದ ಕಡೆಗೂ ತಿರುಗಿಕೊಂಡು, ‘ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿ ದ್ರೋಹಿಗಳಾದೆವು’ ಎಂದು ವಿಜ್ಞಾಪನೆ ಮಾಡಿ,
וְשָׁבוּ אֵלֶיךָ בְּכׇל־לִבָּם וּבְכׇל־נַפְשָׁם בְּאֶרֶץ שִׁבְיָם אֲשֶׁר־שָׁבוּ אֹתָם וְהִֽתְפַּֽלְלוּ דֶּרֶךְ אַרְצָם אֲשֶׁר נָתַתָּה לַאֲבוֹתָם וְהָעִיר אֲשֶׁר בָּחַרְתָּ וְלַבַּיִת אֲשֶׁר־בָּנִיתִי לִשְׁמֶֽךָ׃ 38
೩೮ನಿನ್ನ ಕಡೆಗೆ ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ತಿರುಗಿ, ನೀನು ಅವರ ಪೂರ್ವಿಕರಿಗೆ ಕೊಟ್ಟ ತಮ್ಮ ದೇಶದ ಕಡೆಗೂ, ನೀನು ಆರಿಸಿಕೊಂಡ ಪಟ್ಟಣದ ಕಡೆಗೂ ನಿನ್ನ ಹೆಸರಿಗೋಸ್ಕರ ನಾನು ಕಟ್ಟಿಸಿರುವ ಈ ಆಲಯದ ಕಡೆಗೂ ಅವರು ತಿರುಗಿಕೊಂಡು ನಿನಗೆ ಪ್ರಾರ್ಥನೆಯನ್ನು ಮಾಡಿದರೆ,
וְשָׁמַעְתָּ מִן־הַשָּׁמַיִם מִמְּכוֹן שִׁבְתְּךָ אֶת־תְּפִלָּתָם וְאֶת־תְּחִנֹּתֵיהֶם וְעָשִׂיתָ מִשְׁפָּטָם וְסָלַחְתָּ לְעַמְּךָ אֲשֶׁר חָטְאוּ־לָֽךְ׃ 39
೩೯ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಅವರ ಪ್ರಾರ್ಥನೆಯನ್ನು, ವಿಜ್ಞಾಪನೆಯನ್ನು ಆಲಿಸಿ, ಅವರಿಗೆ ನ್ಯಾಯವನ್ನು ಪಾಲಿಸಿ ನಿನಗೆ ವಿರುದ್ಧವಾಗಿ ಪಾಪಮಾಡಿದ ನಿನ್ನ ಪ್ರಜೆಗಳಿಗೆ ಕ್ಷಮೆಯನ್ನು ಅನುಗ್ರಹಿಸು.
עַתָּה אֱלֹהַי יִֽהְיוּ־נָא עֵינֶיךָ פְּתֻחוֹת וְאׇזְנֶיךָ קַשֻּׁבוֹת לִתְפִלַּת הַמָּקוֹם הַזֶּֽה׃ 40
೪೦ನನ್ನ ದೇವರೇ, ಕಟಾಕ್ಷವಿಟ್ಟು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಗೆ ಕಿವಿಗೊಡು.
וְעַתָּה קוּמָה יְהֹוָה אֱלֹהִים לְֽנוּחֶךָ אַתָּה וַאֲרוֹן עֻזֶּךָ כֹּהֲנֶיךָ יְהֹוָה אֱלֹהִים יִלְבְּשׁוּ תְשׁוּעָה וַחֲסִידֶיךָ יִשְׂמְחוּ בַטּֽוֹב׃ 41
೪೧ದೇವರಾದ ಯೆಹೋವನೇ, ನೀನು ನಿನ್ನ ಪ್ರತಾಪವಾದ ಮಂಜೂಷದ ಸಂಗಡ, ನಿನ್ನ ವಾಸಸ್ಥಾನದೊಳಗೆ ಬರೋಣವಾಗಲಿ. ದೇವರಾದ ಯೆಹೋವನೇ, ನಿನ್ನ ಯಾಜಕರು ರಕ್ಷಣೆಯೆಂಬ ವಸ್ತ್ರವನ್ನು ಹೊದ್ದುಕೊಳ್ಳಲಿ; ನಿನ್ನ ಭಕ್ತರು ನಿನ್ನ ಒಳ್ಳೆಯತನದಲ್ಲಿ ಸಂತೋಷಪಡಲಿ.
יְהֹוָה אֱלֹהִים אַל־תָּשֵׁב פְּנֵי מְשִׁיחֶךָ זׇכְרָה לְחַֽסְדֵי דָּוִיד עַבְדֶּֽךָ׃ 42
೪೨ದೇವರಾದ ಯೆಹೋವನೇ, ನಿನ್ನಿಂದ ಅಭಿಷಿಕ್ತನಾದವನನ್ನು ತಳ್ಳಿಬಿಡಬೇಡ; ನಿನ್ನ ಸೇವಕನಾದ ದಾವೀದನಿಗೆ ಅನುಗ್ರಹಿಸಿದ ಕೃಪೆಯನ್ನು ನೆನಪುಮಾಡಿಕೋ.” ಎಂದು ವಿಜ್ಞಾಪನೆ ಮಾಡಿಕೊಂಡನು.

< דברי הימים ב 6 >