< מלכים ב 2 >
וַיְהִי בְּהַעֲלוֹת יְהֹוָה אֶת־אֵלִיָּהוּ בַּֽסְעָרָה הַשָּׁמָיִם וַיֵּלֶךְ אֵלִיָּהוּ וֶאֱלִישָׁע מִן־הַגִּלְגָּֽל׃ | 1 |
೧ಯೆಹೋವನು ಎಲೀಯನನ್ನು ಸುಂಟರಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಸೇರಿಸಿಕೊಳ್ಳುವ ಸಮಯ ಬಂದಾಗ ಎಲೀಯನು ಎಲೀಷನೊಡನೆ ಗಿಲ್ಗಾಲನ್ನು ಬಿಟ್ಟು ಹೊರಟನು.
וַיֹּאמֶר אֵלִיָּהוּ אֶל־אֱלִישָׁע שֵֽׁב־נָא פֹה כִּי יְהֹוָה שְׁלָחַנִי עַד־בֵּֽית־אֵל וַיֹּאמֶר אֱלִישָׁע חַי־יְהֹוָה וְחֵֽי־נַפְשְׁךָ אִם־אֶעֶזְבֶךָּ וַיֵּרְדוּ בֵּֽית־אֵֽל׃ | 2 |
೨ಆಗ ಎಲೀಯನು ಎಲೀಷನಿಗೆ, “ನೀನು ಇಲ್ಲೇ ಇರು, ಯೆಹೋವನು ನನಗೆ ಬೇತೇಲಿಗೆ ಹೋಗಬೇಕೆಂದು” ಆಜ್ಞಾಪಿಸಿದ್ದಾನೆ ಎನ್ನಲು, ಎಲೀಷನು, “ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ” ಎಂದು ಉತ್ತರಕೊಟ್ಟನು. ತರುವಾಯ ಅವರಿಬ್ಬರೂ ಬೇತೇಲಿಗೆ ಹೋದರು.
וַיֵּצְאוּ בְנֵי־הַנְּבִיאִים אֲשֶׁר־בֵּֽית־אֵל אֶל־אֱלִישָׁע וַיֹּאמְרוּ אֵלָיו הֲיָדַעְתָּ כִּי הַיּוֹם יְהֹוָה לֹקֵחַ אֶת־אֲדֹנֶיךָ מֵעַל רֹאשֶׁךָ וַיֹּאמֶר גַּם־אֲנִי יָדַעְתִּי הֶחֱשֽׁוּ׃ | 3 |
೩ಬೇತೇಲಿನ ಪ್ರವಾದಿ ಮಂಡಳಿಯವರು ಎಲೀಷನನ್ನು ಎದುರುಗೊಂಡು ಅವನನ್ನು, “ಯೆಹೋವನು ಈ ಹೊತ್ತು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತೆಗೆದುಕೊಳ್ಳುವನೆಂಬುದು ನಿನಗೆ ಗೊತ್ತುಂಟೋ?” ಎಂದು ಕೇಳಿದರು. ಅದಕ್ಕೆ ಅವನು, “ಗೊತ್ತಿದೆ ನೀವು ಸುಮ್ಮನಿರಿ” ಎಂದನು.
וַיֹּאמֶר לוֹ אֵלִיָּהוּ אֱלִישָׁע ׀ שֵֽׁב־נָא פֹה כִּי יְהֹוָה שְׁלָחַנִי יְרִיחוֹ וַיֹּאמֶר חַי־יְהֹוָה וְחֵֽי־נַפְשְׁךָ אִם־אֶעֶזְבֶךָּ וַיָּבֹאוּ יְרִיחֽוֹ׃ | 4 |
೪ಆಗ ಎಲೀಯನು ಎಲೀಷನಿಗೆ, “ನೀನು ಇಲ್ಲೇ ಇರು, ಯೆಹೋವನು ನನಗೆ ಯೆರಿಕೋವಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಆದರೆ ಎಲೀಷನು, “ಯೆಹೋವನಾಣೆ, ನಿನ್ನ ಜೀವದಾಣೆ ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ” ಎಂದು ಉತ್ತರ ಕೊಟ್ಟನು. ಎಲೀಷನು ಅವನ ಜೊತೆಯಲ್ಲಿ ಯೆರಿಕೋವಿಗೆ ಹೋದನು.
וַיִּגְּשׁוּ בְנֵי־הַנְּבִיאִים אֲשֶׁר־בִּֽירִיחוֹ אֶל־אֱלִישָׁע וַיֹּאמְרוּ אֵלָיו הֲיָדַעְתָּ כִּי הַיּוֹם יְהֹוָה לֹקֵחַ אֶת־אֲדֹנֶיךָ מֵעַל רֹאשֶׁךָ וַיֹּאמֶר גַּם־אֲנִי יָדַעְתִּי הֶחֱשֽׁוּ׃ | 5 |
೫ಯೆರಿಕೋವಿನಲ್ಲಿದ್ದ ಪ್ರವಾದಿ ಮಂಡಳಿಯವರು ಎಲೀಷನನ್ನು ಎದುರುಗೊಂಡು ಅವನಿಗೆ, “ಯೆಹೋವನು ಈ ಹೊತ್ತು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ಮೇಲಕ್ಕೆ ತೆಗೆದುಕೊಳ್ಳುವನೆಂಬುದು ನಿನಗೆ ಗೊತ್ತುಂಟೋ?” ಎಂದು ಕೇಳಿದರು. ಅದಕ್ಕೆ ಅವನು, ನನಗೆ “ಗೊತ್ತುಂಟು ನೀವು ಸುಮ್ಮನಿರಿ” ಎಂದು ಉತ್ತರ ಕೊಟ್ಟನು.
וַיֹּאמֶר לוֹ אֵלִיָּהוּ שֵֽׁב־נָא פֹה כִּי יְהֹוָה שְׁלָחַנִי הַיַּרְדֵּנָה וַיֹּאמֶר חַי־יְהֹוָה וְחֵֽי־נַפְשְׁךָ אִם־אֶעֶזְבֶךָּ וַיֵּלְכוּ שְׁנֵיהֶֽם׃ | 6 |
೬ಎಲೀಯನು ತಿರುಗಿ ಅವನಿಗೆ, “ನೀನು ಇಲ್ಲೇ ಇರು. ಯೆಹೋವನು ನನಗೆ ಯೊರ್ದನಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಅದಕ್ಕೆ ಎಲೀಷನು, “ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ” ಎಂದು ಉತ್ತರ ಕೊಟ್ಟನು. ಅನಂತರ ಅವರಿಬ್ಬರೂ ಹೊರಟು ಯೊರ್ದನ್ ಹೊಳೆಯ ದಡಕ್ಕೆ ಬಂದರು.
וַחֲמִשִּׁים אִישׁ מִבְּנֵי הַנְּבִיאִים הָֽלְכוּ וַיַּֽעַמְדוּ מִנֶּגֶד מֵרָחוֹק וּשְׁנֵיהֶם עָמְדוּ עַל־הַיַּרְדֵּֽן׃ | 7 |
೭ಪ್ರವಾದಿ ಮಂಡಳಿಯವರಲ್ಲಿ ಐವತ್ತು ಜನರು ಇವರ ಹಿಂದಿನಿಂದಲೇ ಬಂದು ಯೊರ್ದನಿಗೆ ಸ್ವಲ್ಪ ದೂರದಲ್ಲಿಯೇ ನಿಂತುಕೊಂಡರು.
וַיִּקַּח אֵלִיָּהוּ אֶת־אַדַּרְתּוֹ וַיִּגְלֹם וַיַּכֶּה אֶת־הַמַּיִם וַיֵּחָצוּ הֵנָּה וָהֵנָּה וַיַּעַבְרוּ שְׁנֵיהֶם בֶּחָרָבָֽה׃ | 8 |
೮ಅನಂತರ ಎಲೀಯನು ತನ್ನ ಕಂಬಳಿಯನ್ನು ಮಡಚಿ ಅದರಿಂದ ನೀರನ್ನು ಹೊಡೆಯಲು ನೀರು ಎರಡು ಭಾಗವಾಯಿತು. ಇಬ್ಬರೂ ಒಣನೆಲದ ಮೇಲೆ ನಡೆದುಕೊಂಡು ಯೊರ್ದನನ್ನು ದಾಟಿದರು.
וַיְהִי כְעׇבְרָם וְאֵלִיָּהוּ אָמַר אֶל־אֱלִישָׁע שְׁאַל מָה אֶעֱשֶׂה־לָּךְ בְּטֶרֶם אֶלָּקַח מֵעִמָּךְ וַיֹּאמֶר אֱלִישָׁע וִיהִי נָא פִּֽי־שְׁנַיִם בְּרוּחֲךָ אֵלָֽי׃ | 9 |
೯ಅವರು ಆಚೆ ದಡಕ್ಕೆ ಸೇರಿದ ಮೇಲೆ ಎಲೀಯನು ಎಲೀಷನನ್ನು, “ನಿನ್ನನ್ನು ಬಿಟ್ಟು ಹೋಗುವ ಮೊದಲು, ನಾನು ನಿನಗೋಸ್ಕರ ಏನು ಮಾಡಬೇಕೆನ್ನುತ್ತೀ ಹೇಳು” ಎಂದು ಕೇಳಿದನು. ಅದಕ್ಕೆ ಎಲೀಷನು, “ನಿನಗಿರುವ ಆತ್ಮದಲ್ಲಿ ನನಗೆ ಎರಡರಷ್ಟು ಪಾಲನ್ನು ಅನುಗ್ರಹಿಸು” ಎಂದು ಬೇಡಿಕೊಂಡನು.
וַיֹּאמֶר הִקְשִׁיתָ לִשְׁאוֹל אִם־תִּרְאֶה אֹתִי לֻקָּח מֵֽאִתָּךְ יְהִי־לְךָ כֵן וְאִם־אַיִן לֹא יִהְיֶֽה׃ | 10 |
೧೦ಆಗ ಎಲೀಯನು ಅವನಿಗೆ, “ನೀನು ಕಷ್ಟಕರವಾದುದ್ದನ್ನು ಕೇಳಿಕೊಂಡಿರುವೆ. ಆದರೂ ನಾನು ನಿನ್ನ ಬಳಿಯಿಂದ ತೆಗೆಯಲ್ಪಡುವಾಗ ನೀನು ನನ್ನನ್ನು ನೋಡುವುದಾದರೆ ಅದು ನಿನಗೆ ದೊರಕುವುದು. ಇಲ್ಲವಾದರೆ ದೊರಕುವುದಿಲ್ಲ” ಎಂದನು.
וַיְהִי הֵמָּה הֹלְכִים הָלוֹךְ וְדַבֵּר וְהִנֵּה רֶֽכֶב־אֵשׁ וְסוּסֵי אֵשׁ וַיַּפְרִדוּ בֵּין שְׁנֵיהֶם וַיַּעַל אֵלִיָּהוּ בַּֽסְעָרָה הַשָּׁמָֽיִם׃ | 11 |
೧೧ಅವರು ಮಾತನಾಡುತ್ತಾ ಮುಂದೆ ಹೋಗುತ್ತಿರುವಾಗ, ಪಕ್ಕನೆ ಅಗ್ನಿಮಯವಾದ ರಥಗಳು ನಡುವೆ ಬಂದು ಅವರಿಬ್ಬರನ್ನು ಬೇರ್ಪಡಿಸಿದವು. ಎಲೀಯನು ಸುಂಟರಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಏರಿ ಹೋದನು.
וֶאֱלִישָׁע רֹאֶה וְהוּא מְצַעֵק אָבִי ׀ אָבִי רֶכֶב יִשְׂרָאֵל וּפָרָשָׁיו וְלֹא רָאָהוּ עוֹד וַֽיַּחֲזֵק בִּבְגָדָיו וַיִּקְרָעֵם לִשְׁנַיִם קְרָעִֽים׃ | 12 |
೧೨ಎಲೀಷನು ಅದನ್ನು ನೋಡುತ್ತಾ, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲರಿಗೆ ರಥಾರಥಾಶ್ವಗಳಾಗಿದ್ದವನೇ” ಎಂದು ಕೂಗಿಕೊಂಡನು. ಎಲೀಯನು ತನಗೆ ಕಾಣಿಸದೆ ಹೋದ ಮೇಲೆ ತನ್ನ ಬಟ್ಟೆಗಳನ್ನು ಹರಿದು ಎರಡು ತುಂಡುಮಾಡಿದನು.
וַיָּרֶם אֶת־אַדֶּרֶת אֵלִיָּהוּ אֲשֶׁר נָפְלָה מֵעָלָיו וַיָּשׇׁב וַֽיַּעֲמֹד עַל־שְׂפַת הַיַּרְדֵּֽן׃ | 13 |
೧೩ಅನಂತರ ಅವನು ಮೇಲಿನಿಂದ ಬಿದ್ದ ಎಲೀಯನ ಕಂಬಳಿಯನ್ನು ತೆಗೆದುಕೊಂಡು ಯೊರ್ದನ್ ನದಿ ತೀರಕ್ಕೆ ಬಂದು,
וַיִּקַּח אֶת־אַדֶּרֶת אֵלִיָּהוּ אֲשֶׁר־נָפְלָה מֵֽעָלָיו וַיַּכֶּה אֶת־הַמַּיִם וַיֹּאמַר אַיֵּה יְהֹוָה אֱלֹהֵי אֵלִיָּהוּ אַף־הוּא ׀ וַיַּכֶּה אֶת־הַמַּיִם וַיֵּֽחָצוּ הֵנָּה וָהֵנָּה וַֽיַּעֲבֹר אֱלִישָֽׁע׃ | 14 |
೧೪“ಎಲೀಯನ ದೇವರಾದ ಯೆಹೋವನೆಲ್ಲಿ?” ಎಂದು ಅಂದುಕೊಂಡು, ಆ ಕಂಬಳಿಯಿಂದ ನೀರನ್ನು ಹೊಡೆಯಲು ಅದು ಎರಡು ಭಾಗವಾಯಿತು. ಎಲೀಷನು ಹೊಳೆಯನ್ನು ದಾಟಿಹೋದನು.
וַיִּרְאֻהוּ בְנֵי־הַנְּבִיאִים אֲשֶׁר־בִּֽירִיחוֹ מִנֶּגֶד וַיֹּאמְרוּ נָחָה רוּחַ אֵלִיָּהוּ עַל־אֱלִישָׁע וַיָּבֹאוּ לִקְרָאתוֹ וַיִּשְׁתַּחֲווּ־לוֹ אָֽרְצָה׃ | 15 |
೧೫ದೂರದಲ್ಲಿ ನಿಂತಿದ್ದ ಯೆರಿಕೋವಿನ ಪ್ರವಾದಿ ಮಂಡಳಿಯವರು ಇದನ್ನು ಕಂಡು, “ಎಲೀಯನಿಗಿದ್ದ ಆತ್ಮವು ಎಲೀಷನ ಮೇಲೆ ಬಂದಿದೆ” ಎಂದು ತಿಳಿದುಕೊಂಡು ಅವನನ್ನು ಎದುರುಗೊಂಡು, ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು.
וַיֹּאמְרוּ אֵלָיו הִנֵּה־נָא יֵֽשׁ־אֶת־עֲבָדֶיךָ חֲמִשִּׁים אֲנָשִׁים בְּנֵי־חַיִל יֵלְכוּ נָא וִיבַקְשׁוּ אֶת־אֲדֹנֶיךָ פֶּן־נְשָׂאוֹ רוּחַ יְהֹוָה וַיַּשְׁלִכֵהוּ בְּאַחַד הֶהָרִים אוֹ בְּאַחַת (הגיאות) [הַגֵּיאָיוֹת] וַיֹּאמֶר לֹא תִשְׁלָֽחוּ׃ | 16 |
೧೬ಅನಂತರ ಅವರು ಅವನಿಗೆ, “ನಿನ್ನ ಸೇವಕರಾದ ನಮ್ಮಲ್ಲಿ ಐವತ್ತು ಮಂದಿ ಬಲಿಷ್ಠಜನರಿದ್ದಾರೆ. ನಿನ್ನ ಯಜಮಾನನ್ನು ಹುಡುಕುವುದಕ್ಕೆ ಅವರಿಗೆ ಅಪ್ಪಣೆಯಾಗಲಿ ಯೆಹೋವನ ಆತ್ಮವು ಅವನನ್ನು ಎತ್ತಿಕೊಂಡು ಹೋಗಿ ಒಂದು ಬೆಟ್ಟದ ಮೇಲಾಗಲಿ ತಗ್ಗಿನಲ್ಲಾಗಲಿ ಇಟ್ಟಿರಬಹುದು” ಎಂದು ಹೇಳಿದರು. ಅವನು ಅವರಿಗೆ, “ನೀವು ಅವರನ್ನು ಕಳುಹಿಸಬೇಡಿರಿ” ಎಂದನು.
וַיִּפְצְרוּ־בוֹ עַד־בֹּשׁ וַיֹּאמֶר שְׁלָחוּ וַֽיִּשְׁלְחוּ חֲמִשִּׁים אִישׁ וַיְבַקְשׁוּ שְׁלֹשָֽׁה־יָמִים וְלֹא מְצָאֻֽהוּ׃ | 17 |
೧೭ಆದರೆ ಅವರು ಅವನನ್ನು ಒತ್ತಾಯಪಡಿಸಿದ್ದರಿಂದ ಅವನು ಬೇಸರಗೊಂಡು, “ಅವರನ್ನು ಕಳುಹಿಸಿರಿ” ಎಂದು ಅಪ್ಪಣೆ ಕೊಟ್ಟನು. ಅವರು ಐವತ್ತು ಮಂದಿಯನ್ನು ಕಳುಹಿಸಿದರು. ಇವರು ಮೂರು ದಿನ ಹುಡುಕಿದರೂ ಎಲೀಯನನ್ನು ಕಾಣಲಿಲ್ಲ.
וַיָּשֻׁבוּ אֵלָיו וְהוּא יֹשֵׁב בִּירִיחוֹ וַיֹּאמֶר אֲלֵהֶם הֲלֹֽא־אָמַרְתִּי אֲלֵיכֶם אַל־תֵּלֵֽכוּ׃ | 18 |
೧೮ಇನ್ನೂ ಯೆರಿಕೋವಿನಲ್ಲೇ ಇದ್ದ ಎಲೀಷನ ಬಳಿಗೆ ಬಂದರು. ಎಲೀಷನು ಅವರಿಗೆ, ಹೋಗಬೇಡಿರಿ ಎಂದು ನಾನು ಹೇಳಲಿಲ್ಲವೋ? ಎಂದನು.
וַיֹּאמְרוּ אַנְשֵׁי הָעִיר אֶל־אֱלִישָׁע הִנֵּה־נָא מוֹשַׁב הָעִיר טוֹב כַּאֲשֶׁר אֲדֹנִי רֹאֶה וְהַמַּיִם רָעִים וְהָאָרֶץ מְשַׁכָּֽלֶת׃ | 19 |
೧೯ಯೆರಿಕೋವಿನ ಜನರು ಎಲೀಷನಿಗೆ, “ನಮ್ಮ ಒಡೆಯನಾದ ನಿನಗೆ ಗೊತ್ತಿರುವಂತೆ, ಈ ಊರು ಕಟ್ಟಲ್ಪಟ್ಟಿರುವ ಸ್ಥಳವು ಒಳ್ಳೆಯದಾಗಿದೆ. ಆದರೆ ನೀರು ಕೆಟ್ಟದ್ದಾಗಿರುವುದರಿಂದ ಬಂಜೆತನ ಉಂಟಾಗಿದೆ” ಎಂದು ಹೇಳಿದರು.
וַיֹּאמֶר קְחוּ־לִי צְלֹחִית חֲדָשָׁה וְשִׂימוּ שָׁם מֶלַח וַיִּקְחוּ אֵלָֽיו׃ | 20 |
೨೦ಆಗ ಎಲೀಷನು ಅವರಿಗೆ, “ಒಂದು ಹೊಸ ಮಡಿಕೆಯಲ್ಲಿ ಉಪ್ಪು ಹಾಕಿ ಅದನ್ನು ತಂದು ಕೊಡಿರಿ” ಎಂದು ಹೇಳಿದಾಗ, ಅವರು ತಂದುಕೊಟ್ಟರು.
וַיֵּצֵא אֶל־מוֹצָא הַמַּיִם וַיַּשְׁלֶךְ־שָׁם מֶלַח וַיֹּאמֶר כֹּה־אָמַר יְהֹוָה רִפִּאתִי לַמַּיִם הָאֵלֶּה לֹא־יִהְיֶה מִשָּׁם עוֹד מָוֶת וּמְשַׁכָּֽלֶת׃ | 21 |
೨೧ಅವನು ಬುಗ್ಗೆಗೆ ಹೋಗಿ ಆ ನೀರಿನಲ್ಲಿ ಉಪ್ಪು ಹಾಕಿ, “ಇನ್ನು ಮುಂದೆ ಈ ನೀರಿನಿಂದ ಮರಣವೂ ಬಂಜೆತನವೂ ಉಂಟಾಗದಂತೆ ಇದರಲ್ಲಿದ್ದ ದೋಷವನ್ನೆಲ್ಲಾ ಪರಿಹರಿಸಿದ್ದೇನೆ ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳಿದನು.
וַיֵּרָפוּ הַמַּיִם עַד הַיּוֹם הַזֶּה כִּדְבַר אֱלִישָׁע אֲשֶׁר דִּבֵּֽר׃ | 22 |
೨೨ಕೂಡಲೆ ನೀರಿನಲ್ಲಿದ್ದ ದೋಷವೆಲ್ಲಾ ಪರಿಹಾರವಾಯಿತು, ಎಲೀಷನ ವಾಕ್ಯಬಲದಿಂದ ಅದು ಇಂದಿನವರೆಗೂ ಹಾಗೆಯೇ ಇರುತ್ತದೆ.
וַיַּעַל מִשָּׁם בֵּֽית־אֵל וְהוּא ׀ עֹלֶה בַדֶּרֶךְ וּנְעָרִים קְטַנִּים יָצְאוּ מִן־הָעִיר וַיִּתְקַלְּסוּ־בוֹ וַיֹּאמְרוּ לוֹ עֲלֵה קֵרֵחַ עֲלֵה קֵרֵֽחַ׃ | 23 |
೨೩ಎಲೀಷನು ಅಲ್ಲಿಂದ ಬೇತೇಲಿಗೆ ಹೊರಟು ಅಲ್ಲಿನ ಗುಡ್ಡವನ್ನು ಹತ್ತುತ್ತಿರುವಾಗ, ಆ ಊರಿನ ಹುಡುಗರು ಹೊರಗೆ ಬಂದು, “ಬೋಳು ಮಂಡೆಯವನೇ ಏರಿ ಬಾ, ಬೋಳು ಮಂಡೆಯವನೇ ಏರಿ ಬಾ” ಎಂದು ಕೂಗಿ ಅವನನ್ನು ಪರಿಹಾಸ್ಯ ಮಾಡಿದರು.
וַיִּפֶן אַֽחֲרָיו וַיִּרְאֵם וַֽיְקַלְלֵם בְּשֵׁם יְהֹוָה וַתֵּצֶאנָה שְׁתַּיִם דֻּבִּים מִן־הַיַּעַר וַתְּבַקַּעְנָה מֵהֶם אַרְבָּעִים וּשְׁנֵי יְלָדִֽים׃ | 24 |
೨೪ಅವನು ಅವರ ಕಡೆಗೆ ತಿರುಗಿಕೊಂಡು ಯೆಹೋವನ ಹೆಸರಿನಲ್ಲಿ ಅವರನ್ನು ಶಪಿಸಿದನು. ಕೂಡಲೆ ಕಾಡಿನಿಂದ ಎರಡು ಹೆಣ್ಣು ಕರಡಿಗಳು ಬಂದು ಆ ಹುಡುಗರಲ್ಲಿ ನಲ್ವತ್ತೆರಡು ಮಂದಿಯನ್ನು ಹರಿದುಬಿಟ್ಟವು.
וַיֵּלֶךְ מִשָּׁם אֶל־הַר הַכַּרְמֶל וּמִשָּׁם שָׁב שֹׁמְרֽוֹן׃ | 25 |
೨೫ಎಲೀಷನು ಅಲ್ಲಿಂದ ಕರ್ಮೆಲ್ ಬೆಟ್ಟಕ್ಕೆ ಹೋಗಿ ಅನಂತರ ಸಮಾರ್ಯಕ್ಕೆ ಹಿಂದಿರುಗಿದನು.