< שמואל ב 10 >
וַֽיְהִי אַחֲרֵי־כֵן וַיָּמׇת מֶלֶךְ בְּנֵי עַמּוֹן וַיִּמְלֹךְ חָנוּן בְּנוֹ תַּחְתָּֽיו׃ | 1 |
೧ಇದಾದ ನಂತರ ಅಮ್ಮೋನಿಯರ ಅರಸನು ಸತ್ತನು. ಅವನ ನಂತರ ಅವನ ಮಗನಾದ ಹಾನೂನನು ಅರಸನಾದನು.
וַיֹּאמֶר דָּוִד אֶעֱשֶׂה־חֶסֶד ׀ עִם־חָנוּן בֶּן־נָחָשׁ כַּאֲשֶׁר עָשָׂה אָבִיו עִמָּדִי חֶסֶד וַיִּשְׁלַח דָּוִד לְנַחֲמוֹ בְּיַד־עֲבָדָיו אֶל־אָבִיו וַיָּבֹאוּ עַבְדֵי דָוִד אֶרֶץ בְּנֵי עַמּֽוֹן׃ | 2 |
೨ದಾವೀದನು, “ನಾಹಾಷನು ನನಗೆ ದಯೆತೋರಿಸಿದ್ದರಿಂದ, ನಾನು ಅವನ ಮಗ ಹಾನೂನನಿಗೂ ದಯೆತೋರಿಸುವೆನು” ಎಂದುಕೊಂಡು, ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವುದಕ್ಕೋಸ್ಕರ ತನ್ನ ಪ್ರತಿನಿಧಿಗಳನ್ನು ಕಳುಹಿಸಿದನು. ದಾವೀದನ ಪ್ರತಿನಿಧಿಗಳು ಅಮ್ಮೋನಿಯರ ದೇಶಕ್ಕೆ ಬಂದರು.
וַיֹּאמְרוּ שָׂרֵי בְנֵי־עַמּוֹן אֶל־חָנוּן אֲדֹנֵיהֶם הַֽמְכַבֵּד דָּוִד אֶת־אָבִיךָ בְּעֵינֶיךָ כִּֽי־שָׁלַח לְךָ מְנַחֲמִים הֲלוֹא בַּעֲבוּר חֲקֹר אֶת־הָעִיר וּלְרַגְּלָהּ וּלְהׇפְכָהּ שָׁלַח דָּוִד אֶת־עֲבָדָיו אֵלֶֽיךָ׃ | 3 |
೩ಅಮ್ಮೋನಿಯರ ರಾಜ ಪ್ರತಿನಿಧಿಗಳು ತಮ್ಮ ಒಡೆಯನಾದ ಹಾನೂನನಿಗೆ, “ದಾವೀದನು ನಿನ್ನ ಬಳಿಗೆ ಸಂತೈಸುವವರನ್ನು ಕಳುಹಿಸಿದ್ದರಿಂದ ಅವನು ನಿನ್ನ ತಂದೆಯನ್ನು ಸನ್ಮಾನಿಸುವವನು ಎಂದು ನೀನು ತಿಳಿದುಕೊಂಡಿರಬಹುದೋ? ಅವರು ಪಟ್ಟಣವನ್ನು ಸಂಚರಿಸಿ ನೋಡಿ, ಸ್ವಾಧಿನಮಾಡಿಕೊಳ್ಳಬೇಕೆಂದು ತನ್ನ ಪ್ರತಿನಿಧಿಗಳನ್ನು ಕಳುಹಿಸಿದ್ದಾನೆ” ಎಂದು ಹೇಳಿದರು.
וַיִּקַּח חָנוּן אֶת־עַבְדֵי דָוִד וַיְגַלַּח אֶת־חֲצִי זְקָנָם וַיִּכְרֹת אֶת־מַדְוֵיהֶם בַּחֵצִי עַד שְׁתוֹתֵיהֶם וַֽיְשַׁלְּחֵֽם׃ | 4 |
೪ಇದರಿಂದ ಹಾನೂನನು ದಾವೀದನ ಪ್ರತಿನಿಧಿಗಳನ್ನು ಹಿಡಿಸಿ, ಗಡ್ಡದ ಅರ್ಧ ಭಾಗವನ್ನು ಬೋಳಿಸಿ, ಸೊಂಟದಿಂದ ಕೆಳಗೆ ಅವರ ನಗ್ನತೆಯು ಕಾಣುವಂತೆ ನಿಲುವಂಗಿಗಳನ್ನು ಕತ್ತರಿಸಿ ಕಳುಹಿಸಿಬಿಟ್ಟನು.
וַיַּגִּדוּ לְדָוִד וַיִּשְׁלַח לִקְרָאתָם כִּי־הָיוּ הָאֲנָשִׁים נִכְלָמִים מְאֹד וַיֹּאמֶר הַמֶּלֶךְ שְׁבוּ בִירֵחוֹ עַד־יְצַמַּח זְקַנְכֶם וְשַׁבְתֶּֽם׃ | 5 |
೫ಅವರು ಈ ವರ್ತಮಾನವನ್ನು ದಾವೀದನಿಗೆ ಹೇಳಿ ಕಳುಹಿಸಿದಾಗ ಅವನು ಬಹಳವಾಗಿ ಅಪಮಾನ ಹೊಂದಿದ ಅವರಿಗೆ “ನಿಮ್ಮ ಗಡ್ಡ ಬೆಳೆಯುವವರೆಗೆ ನೀವು ಯೆರಿಕೋ ಪಟ್ಟಣದಲ್ಲಿದ್ದು ಅನಂತರ ಹಿಂತಿರುಗಿ ಬನ್ನಿರಿ” ಎಂದು ತನ್ನ ಸೇವಕರ ಮೂಲಕ ಹೇಳಿಕಳುಹಿಸಿದ.
וַיִּרְאוּ בְּנֵי עַמּוֹן כִּי נִבְאֲשׁוּ בְּדָוִד וַיִּשְׁלְחוּ בְנֵי־עַמּוֹן וַיִּשְׂכְּרוּ אֶת־אֲרַם בֵּית־רְחוֹב וְאֶת־אֲרַם צוֹבָא עֶשְׂרִים אֶלֶף רַגְלִי וְאֶת־מֶלֶךְ מַֽעֲכָה אֶלֶף אִישׁ וְאִישׁ טוֹב שְׁנֵים־עָשָׂר אֶלֶף אִֽישׁ׃ | 6 |
೬ತಾವು ದಾವೀದನ ಕೋಪಕ್ಕೂ, ಅಸಮಾಧಾನಕ್ಕೂ ಗುರಿಯಾಗಿದ್ದೇವೆ ಎಂದು ತಿಳಿದು ಅಮ್ಮೋನಿಯರು ಬೇತ್ ರೆಹೋಬ್ ಮತ್ತು ಚೋಬಾ ಎಂಬ ಪಟ್ಟಣಗಳಿಂದ ಅರಾಮ್ಯರ ಇಪ್ಪತ್ತು ಸಾವಿರ ಕಾಲಾಳುಗಳನ್ನೂ, ಮಾಕದ ರಾಜನಿಂದ ಸಾವಿರ ಮಂದಿ ಸೈನಿಕರನ್ನೂ ಮತ್ತು ಟೋಬ್ ದೇಶದಿಂದ ಹನ್ನೆರಡು ಸಾವಿರ ದಂಡಾಳುಗಳನ್ನೂ ಹಣಕೊಟ್ಟು ತರಿಸಿದನು
וַיִּשְׁמַע דָּוִד וַיִּשְׁלַח אֶת־יוֹאָב וְאֵת כׇּל־הַצָּבָא הַגִּבֹּרִֽים׃ | 7 |
೭ಈ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಯೋವಾಬನನ್ನೂ, ಎಲ್ಲಾ ಶೂರ ಸೈನಿಕರನ್ನೂ ಕಳುಹಿಸಿದನು.
וַיֵּֽצְאוּ בְּנֵי עַמּוֹן וַיַּעַרְכוּ מִלְחָמָה פֶּתַח הַשָּׁעַר וַאֲרַם צוֹבָא וּרְחוֹב וְאִֽישׁ־טוֹב וּמַעֲכָה לְבַדָּם בַּשָּׂדֶֽה׃ | 8 |
೮ಕೂಡಲೆ ಅಮ್ಮೋನಿಯರು ಹೊರಗೆ ಬಂದು ಊರ ಬಾಗಿಲಿನ ಬಳಿಯಲ್ಲಿ ವ್ಯೂಹರಚಿಸಿದರು. ಚೋಬ, ರೆಹೋಬ್ ಎಂಬ ಸ್ಥಳಗಳ ಅರಾಮ್ಯರೂ ಟೋಬ್ ಮತ್ತು ಮಾಕಾ ದೇಶಗಳವರೂ ಪ್ರತ್ಯೇಕವಾಗಿ ಮೈದಾನದಲ್ಲಿ ಇಳಿದುಕೊಂಡಿದ್ದರು.
וַיַּרְא יוֹאָב כִּֽי־הָיְתָה אֵלָיו פְּנֵי הַמִּלְחָמָה מִפָּנִים וּמֵאָחוֹר וַיִּבְחַר מִכֹּל בְּחוּרֵי (בישראל) [יִשְׂרָאֵל] וַֽיַּעֲרֹךְ לִקְרַאת אֲרָֽם׃ | 9 |
೯ಯೋವಾಬನು ತನ್ನ ಮುಂದೆಯೂ, ಹಿಂದೆಯೂ ಯುದ್ಧ ಪ್ರಾರಂಭವಾದದ್ದನ್ನು ಕಂಡು ಇಸ್ರಾಯೇಲ್ಯರಲ್ಲಿ ಶ್ರೇಷ್ಠರಾದ ಸೈನಿಕರನ್ನು ಆರಿಸಿಕೊಂಡು, ಅವರನ್ನು ಅರಾಮ್ಯರಿಗೆ ವಿರೋಧವಾಗಿ ನಿಲ್ಲಿಸಿದನು.
וְאֵת יֶתֶר הָעָם נָתַן בְּיַד אַבְשַׁי אָחִיו וַיַּעֲרֹךְ לִקְרַאת בְּנֵי עַמּֽוֹן׃ | 10 |
೧೦ಉಳಿದ ಜನರನ್ನು ತನ್ನ ತಮ್ಮನಾದ ಅಬೀಷೈಯ ವಶಕ್ಕೆ ಕೊಟ್ಟನು.
וַיֹּאמֶר אִם־תֶּחֱזַק אֲרָם מִמֶּנִּי וְהָיִתָה לִּי לִישׁוּעָה וְאִם־בְּנֵי עַמּוֹן יֶחֶזְקוּ מִמְּךָ וְהָלַכְתִּי לְהוֹשִׁיעַֽ לָֽךְ׃ | 11 |
೧೧ಯೋವಾಬನು ಅವನಿಗೆ, “ಅರಾಮ್ಯರು ನನ್ನನ್ನು ಸೋಲಿಸುವಂತೆ ಕಂಡರೆ ನೀನು ನನ್ನ ಸಹಾಯಕ್ಕೆ ಬಾ. ಅಮ್ಮೋನಿಯರು ನಿನ್ನನ್ನು ಸೋಲಿಸುವಂತೆ ಕಂಡರೆ ನಾನು ನಿನ್ನ ಸಹಾಯಕ್ಕೆ ಬರುವೆನು.
חֲזַק וְנִתְחַזַּק בְּעַד־עַמֵּנוּ וּבְעַד עָרֵי אֱלֹהֵינוּ וַֽיהֹוָה יַעֲשֶׂה הַטּוֹב בְּעֵינָֽיו׃ | 12 |
೧೨ಧೈರ್ಯದಿಂದಿರು, ನಮ್ಮ ಜನರಿಗೋಸ್ಕರವೂ ಮತ್ತು ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ನಮ್ಮ ಶೌರ್ಯವನ್ನು, ಪೌರುಷವನ್ನು ತೋರಿಸೋಣ. ಯೆಹೋವನು ತನ್ನ ಚಿತ್ತದಂತೆ ಮಾಡಲಿ” ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರೋಧವಾಗಿ ಕಳುಹಿಸಿದನು.
וַיִּגַּשׁ יוֹאָב וְהָעָם אֲשֶׁר עִמּוֹ לַמִּלְחָמָה בַּאֲרָם וַיָּנֻסוּ מִפָּנָֽיו׃ | 13 |
೧೩ಯೋವಾಬನು ಅವನ ಜನರು ಅರಾಮ್ಯರಿಗೆ ವಿರೋಧವಾಗಿ ಯುದ್ಧ ಪ್ರಾರಂಭಿಸಿದಾಗ ಅರಾಮ್ಯರು ಓಡಿಹೋದರು.
וּבְנֵי עַמּוֹן רָאוּ כִּֽי־נָס אֲרָם וַיָּנֻסוּ מִפְּנֵי אֲבִישַׁי וַיָּבֹאוּ הָעִיר וַיָּשׇׁב יוֹאָב מֵעַל בְּנֵי עַמּוֹן וַיָּבֹא יְרוּשָׁלָֽ͏ִם׃ | 14 |
೧೪ಇವರು ಓಡಿಹೋಗುವುದನ್ನು ಅಮ್ಮೋನಿಯರು ಕಂಡು ಅವರೂ ಅಬೀಷೈಯ ಎದುರಿನಿಂದ ಓಡಿಹೋಗಿ, ಪಟ್ಟಣವನ್ನು ಪ್ರವೇಶಿಸಿದರು. ಯೋವಾಬನು ಅಮ್ಮೋನಿಯರೊಡನೆ ಯುದ್ಧ ಮಾಡುವುದನ್ನು ಬಿಟ್ಟು ಯೆರೂಸಲೇಮಿಗೆ ಹೋದನು.
וַיַּרְא אֲרָם כִּי נִגַּף לִפְנֵי יִשְׂרָאֵל וַיֵּאָסְפוּ יָֽחַד׃ | 15 |
೧೫ಅರಾಮ್ಯರಿಗೆ ತಮ್ಮ ಸೈನ್ಯವು ಇಸ್ರಾಯೇಲ್ಯರಿಂದ ಅಪಜಯಹೊಂದಿತೆಂದು ಗೊತ್ತಾದಾಗ ಅವರೆಲ್ಲರೂ ಒಟ್ಟಾಗಿ ಕೂಡಿಬಂದರು.
וַיִּשְׁלַח הֲדַדְעֶזֶר וַיֹּצֵא אֶת־אֲרָם אֲשֶׁר מֵעֵבֶר הַנָּהָר וַיָּבֹאוּ חֵילָם וְשׁוֹבַךְ שַׂר־צְבָא הֲדַדְעֶזֶר לִפְנֵיהֶֽם׃ | 16 |
೧೬ಹದದೆಜೆರನು ಯೂಫ್ರೆಟಿಸ್ ನದಿಯ ಆಚೆಯಲ್ಲಿದ್ದ ಅರಾಮ್ಯರನ್ನು ಬರಲು ಹೇಳಿ ಕಳುಹಿಸಿದನು. ಅವರು ಹೇಲಾಮಿಗೆ ಬಂದರು. ಹದದೆಜೆರನ ಸೇನಾಧಿಪತಿಯಾದ ಶೋಬಕನು ಅವರ ನಾಯಕನಾದನು.
וַיֻּגַּד לְדָוִד וַיֶּאֱסֹף אֶת־כׇּל־יִשְׂרָאֵל וַיַּעֲבֹר אֶת־הַיַּרְדֵּן וַיָּבֹא חֵלָאמָה וַיַּעַרְכוּ אֲרָם לִקְרַאת דָּוִד וַיִּֽלָּחֲמוּ עִמּֽוֹ׃ | 17 |
೧೭ಈ ಸುದ್ದಿಯು ದಾವೀದನಿಗೆ ತಲುಪಿದಾಗ ಅವನು ಇಸ್ರಾಯೇಲರೆಲ್ಲರನ್ನು ಕೂಡಿಸಿಕೊಂಡು ಯೊರ್ದನ್ ಹೊಳೆಯನ್ನು ದಾಟಿ ಹೇಲಾಮಿಗೆ ಬಂದನು. ಅರಾಮ್ಯರು ವ್ಯೂಹರಚಿಸಿ ದಾವೀದನೊಡನೆ ಯುದ್ಧಕ್ಕೆ ನಿಂತಾಗ,
וַיָּנׇס אֲרָם מִפְּנֵי יִשְׂרָאֵל וַיַּהֲרֹג דָּוִד מֵאֲרָם שְׁבַע מֵאוֹת רֶכֶב וְאַרְבָּעִים אֶלֶף פָּרָשִׁים וְאֵת שׁוֹבַךְ שַׂר־צְבָאוֹ הִכָּה וַיָּמׇת שָֽׁם׃ | 18 |
೧೮ಅರಾಮ್ಯರು ಇಸ್ರಾಯೇಲ್ಯರ ಮುಂದೆ ಸೋತು ಓಡಿಹೋದರು. ದಾವೀದನು ಅರಾಮ್ಯರ ಏಳುನೂರು ರಥ ಸಾರಥಿಗಳನ್ನು ನಾಶ ಮಾಡಿ, ನಲ್ವತ್ತು ಸಾವಿರ ಮಂದಿ ರಾಹುತರನ್ನು ಹತ್ಯೆಮಾಡಿದನು. ಸೇನಾಧಿಪತಿಯಾದ ಶೋಬಕನು ಗಾಯಗೊಂಡು ಅಲ್ಲೇ ಸತ್ತನು.
וַיִּרְאוּ כׇֽל־הַמְּלָכִים עַבְדֵי הֲדַדְעֶזֶר כִּי נִגְּפוּ לִפְנֵי יִשְׂרָאֵל וַיַּשְׁלִמוּ אֶת־יִשְׂרָאֵל וַיַּעַבְדוּם וַיִּֽרְאוּ אֲרָם לְהוֹשִׁיעַ עוֹד אֶת־בְּנֵי עַמּֽוֹן׃ | 19 |
೧೯ಹದದೆಜೆರನಿಗೆ ದಾಸರಾಗಿದ್ದ ಅರಸರೆಲ್ಲರೂ ಇಸ್ರಾಯೇಲ್ಯರಿಂದ ತಾವು ಸೋತುಹೋದೆವೆಂದು ತಿಳಿದು, ಅವರೊಡನೆ ಒಪ್ಪಂದ ಮಾಡಿಕೊಂಡು, ಅವರಿಗೆ ದಾಸರಾದರು. ಅಂದಿನಿಂದ ಅರಾಮ್ಯರು ಅಮ್ಮೋನಿಯರಿಗೆ ಸಹಾಯಮಾಡುವುದಕ್ಕೆ ಧೈರ್ಯದಿಂದ ಮುಂದೆ ಬರಲಿಲ್ಲ.