< עמוס 2 >
כֹּה אָמַר יְהֹוָה עַל־שְׁלֹשָׁה פִּשְׁעֵי מוֹאָב וְעַל־אַרְבָּעָה לֹא אֲשִׁיבֶנּוּ עַל־שׇׂרְפוֹ עַצְמוֹת מֶלֶךְ־אֱדוֹם לַשִּֽׂיד׃ | 1 |
೧ಯೆಹೋವನು ಇಂತೆನ್ನುತ್ತಾನೆ, “ಮೋವಾಬಿನವರು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಅದು ಎದೋಮಿನ ಅರಸನ ಎಲುಬುಗಳನ್ನು ಸುಟ್ಟು ಬೂದಿಮಾಡಿತು.
וְשִׁלַּחְתִּי־אֵשׁ בְּמוֹאָב וְאָכְלָה אַרְמְנוֹת הַקְּרִיּוֹת וּמֵת בְּשָׁאוֹן מוֹאָב בִּתְרוּעָה בְּקוֹל שׁוֹפָֽר׃ | 2 |
೨ನಾನು ಮೋವಾಬಿನ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಕೆರೀಯೋತಿನ ಅರಮನೆಗಳನ್ನು ನುಂಗಿಬಿಡುವುದು. ಭಟರು ಘೋಷಿಸಿ ಕೊಂಬೂದುವ ಯುದ್ಧದ ಕೋಲಾಹಲದಲ್ಲಿ, ಮೋವಾಬು ಸಾಯುವುದು;
וְהִכְרַתִּי שׁוֹפֵט מִקִּרְבָּהּ וְכׇל־שָׂרֶיהָ אֶהֱרוֹג עִמּוֹ אָמַר יְהֹוָֽה׃ | 3 |
೩ನಾನು ಅದರೊಳಗಿಂದ ಅಧಿಪತಿಯನ್ನು ಕಡಿದುಹಾಕಿ, ಸಕಲ ರಾಜ್ಯಾಧಿಕಾರಿಗಳನ್ನೂ ಸಂಹರಿಸುವೆನು.” ಇದು ಯೆಹೋವನ ನುಡಿ.
כֹּה אָמַר יְהֹוָה עַל־שְׁלֹשָׁה פִּשְׁעֵי יְהוּדָה וְעַל־אַרְבָּעָה לֹא אֲשִׁיבֶנּוּ עַֽל־מׇאֳסָם אֶת־תּוֹרַת יְהֹוָה וְחֻקָּיו לֹא שָׁמָרוּ וַיַּתְעוּם כִּזְבֵיהֶם אֲשֶׁר־הָלְכוּ אֲבוֹתָם אַחֲרֵיהֶֽם׃ | 4 |
೪ಯೆಹೋವನು ಇಂತೆನ್ನುತ್ತಾನೆ, “ಯೆಹೂದವು ಮೂರು ದ್ರೋಹಗಳನ್ನು, ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಯೆಹೂದ್ಯರು ಯೆಹೋವನ ಧರ್ಮೋಪದೇಶವನ್ನು ನಿರಾಕರಿಸಿದರು. ಆತನ ವಿಧಿಗಳನ್ನು ಕೈಕೊಳ್ಳಲಿಲ್ಲ. ಅವರ ಪೂರ್ವಿಕರು ಹಿಂಬಾಲಿಸಿದ ಸುಳ್ಳುದೇವತೆಗಳು, ಇವರನ್ನು ದಾರಿ ತಪ್ಪುವಂತೆ ಮಾಡಿದವು.
וְשִׁלַּחְתִּי אֵשׁ בִּֽיהוּדָה וְאָכְלָה אַרְמְנוֹת יְרוּשָׁלָֽ͏ִם׃ | 5 |
೫ಆದಕಾರಣ ನಾನು ಯೆಹೂದದ ಮೇಲೆ ಬೆಂಕಿಯನ್ನು ಉರಿಸುವೆನು. ಅದು ಯೆರೂಸಲೇಮಿನ ಅರಮನೆಗಳನ್ನು ನುಂಗಿಬಿಡುವುದು.”
כֹּה אָמַר יְהֹוָה עַל־שְׁלֹשָׁה פִּשְׁעֵי יִשְׂרָאֵל וְעַל־אַרְבָּעָה לֹא אֲשִׁיבֶנּוּ עַל־מִכְרָם בַּכֶּסֶף צַדִּיק וְאֶבְיוֹן בַּֽעֲבוּר נַעֲלָֽיִם׃ | 6 |
೬ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರು ಮೂರು ದ್ರೋಹಗಳನ್ನು, ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಇಸ್ರಾಯೇಲರು ನ್ಯಾಯವಂತನನ್ನು ಬೆಳ್ಳಿಗೆ, ಒಂದು ಜೊತೆ ಕೆರದ ಸಾಲಕ್ಕಾಗಿ ದಿಕ್ಕಿಲ್ಲದವನನ್ನು ಮಾರಿದರು.
הַשֹּׁאֲפִים עַל־עֲפַר־אֶרֶץ בְּרֹאשׁ דַּלִּים וְדֶרֶךְ עֲנָוִים יַטּוּ וְאִישׁ וְאָבִיו יֵֽלְכוּ אֶל־הַֽנַּעֲרָה לְמַעַן חַלֵּל אֶת־שֵׁם קׇדְשִֽׁי׃ | 7 |
೭ಬಡವರ ತಲೆಗಳನ್ನು ನೆಲದ ಧೂಳಿನಂತೆ ತುಳಿದು ಬಿಡುತ್ತಾರೆ, ದೀನರ ದಾರಿಗೆ ಅಡ್ಡ ಹಾಕುತ್ತಾರೆ. ಮಗನೂ ಮತ್ತು ತಂದೆಯೂ ಒಬ್ಬಳಲ್ಲಿ ಹೋಗಿ ನನ್ನ ಪವಿತ್ರ ನಾಮವನ್ನು ಅಪಕೀರ್ತಿಗೆ ಗುರಿಮಾಡುತ್ತಾರೆ.
וְעַל־בְּגָדִים חֲבֻלִים יַטּוּ אֵצֶל כׇּל־מִזְבֵּחַ וְיֵין עֲנוּשִׁים יִשְׁתּוּ בֵּית אֱלֹהֵיהֶֽם׃ | 8 |
೮ಒಂದೊಂದು ಯಜ್ಞವೇದಿಯ ಹತ್ತಿರದಲ್ಲಿಯೂ ಅಡವು ಇಟ್ಟ ಬಟ್ಟೆಗಳ ಮೇಲೆ ಮಲಗಿಕೊಳ್ಳುತ್ತಾರೆ; ದಂಡಹಾಕಿಸಿಕೊಂಡವರು ದ್ರಾಕ್ಷಾರಸವನ್ನು ತಮ್ಮ ದೇವರ ಮಂದಿರದಲ್ಲಿಯೂ ಕುಡಿಯುತ್ತಾರೆ.
וְאָנֹכִי הִשְׁמַדְתִּי אֶת־הָאֱמֹרִי מִפְּנֵיהֶם אֲשֶׁר כְּגֹבַהּ אֲרָזִים גׇּבְהוֹ וְחָסֹן הוּא כָּאַלּוֹנִים וָאַשְׁמִיד פִּרְיוֹ מִמַּעַל וְשׇׁרָשָׁיו מִתָּֽחַת׃ | 9 |
೯ಆಹಾ, ಅವರಿಗೆ ಎದುರಾಗಿ ನಿಂತ ಅಮೋರಿಯರನ್ನು ನಾನೇ ಧ್ವಂಸಮಾಡಿದೆನು, ಆ ಶತ್ರುವು ದೇವದಾರು ಮರದಷ್ಟು ಎತ್ತರವಾಗಿ, ಅಲ್ಲೋನ್ ಮರದ ಹಾಗೆ ಬಲಿಷ್ಠವಾಗಿಯೂ ಇದ್ದರು. ಆದರೂ ಮರದ ಮೇಲಿನ ಅದರ ಫಲವನ್ನು, ಕೆಳಗೆ ಅದರ ಬುಡವನ್ನು ನಾಶಪಡಿಸಿದೆನು.
וְאָנֹכִי הֶעֱלֵיתִי אֶתְכֶם מֵאֶרֶץ מִצְרָיִם וָאוֹלֵךְ אֶתְכֶם בַּמִּדְבָּר אַרְבָּעִים שָׁנָה לָרֶשֶׁת אֶת־אֶרֶץ הָאֱמֹרִֽי׃ | 10 |
೧೦ಇಸ್ರಾಯೇಲ್ಯರೇ, ನೀವು ಅಮ್ಮೋನಿಯರ ದೇಶವನ್ನು ಸ್ವಾಧೀನಪಡಿಸಿಕೊಳ್ಳಲು, ನಾನು ನಿಮ್ಮನ್ನು ಐಗುಪ್ತ ದೇಶದೊಳಗಿಂದ ಪಾರುಮಾಡಿ, ನಲ್ವತ್ತು ವರ್ಷ ಅರಣ್ಯದಲ್ಲಿ ನಿಮ್ಮನ್ನು ನಡೆಸಿದೆನು.
וָאָקִים מִבְּנֵיכֶם לִנְבִיאִים וּמִבַּחוּרֵיכֶם לִנְזִרִים הַאַף אֵֽין־זֹאת בְּנֵי יִשְׂרָאֵל נְאֻם־יְהֹוָֽה׃ | 11 |
೧೧ನಿಮ್ಮ ಪುತ್ರರಲ್ಲಿ ಪ್ರವಾದಿಗಳನ್ನೂ ಮತ್ತು ನಿಮ್ಮ ಯುವಕರಲ್ಲಿ ಪ್ರತಿಷ್ಠಿತರನ್ನೂ ಎಬ್ಬಿಸಿದೆನು. ಇಸ್ರಾಯೇಲಿನ ಜನರೇ, ಇದು ಸತ್ಯವಲ್ಲವೋ?” ಎಂದು ಯೆಹೋವನು ಅನ್ನುತ್ತಾನೆ.
וַתַּשְׁקוּ אֶת־הַנְּזִרִים יָיִן וְעַל־הַנְּבִיאִים צִוִּיתֶם לֵאמֹר לֹא תִּנָּבְאֽוּ׃ | 12 |
೧೨“ಆದರೆ ನೀವೋ ಪ್ರತಿಷ್ಠಿತರಿಗೆ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟಿರಿ ಮತ್ತು ಪ್ರವಾದಿಗಳಿಗೆ ಪ್ರವಾದಿಸಬೇಡಿರೆಂದು ಆಜ್ಞಾಪಿಸಿದ್ದಿರಿ.
הִנֵּה אָנֹכִי מֵעִיק תַּחְתֵּיכֶם כַּאֲשֶׁר תָּעִיק הָֽעֲגָלָה הַֽמְלֵאָה לָהּ עָמִֽיר׃ | 13 |
೧೩ಇಗೋ, ನೀವು ನಿಂತಿರುವಲ್ಲಿಯೇ ನಿಮ್ಮನ್ನು ಸಿವುಡು ತುಂಬಿದ ಬಂಡಿ ಒತ್ತುವ ಪ್ರಕಾರ ನಾನು ನಿಮ್ಮನ್ನು ಕೆಳಗೆ ಹಾಕಿ ಒತ್ತುವೆನು.
וְאָבַד מָנוֹס מִקָּל וְחָזָק לֹא־יְאַמֵּץ כֹּחוֹ וְגִבּוֹר לֹא־יְמַלֵּט נַפְשֽׁוֹ׃ | 14 |
೧೪ತ್ವರೆಯಾಗಿ ಓಡುವವನು ತಪ್ಪಿಸಿಕೊಳ್ಳಲಾರನು. ಬಲಿಷ್ಠನು ತನ್ನ ಬಲವನ್ನು, ತನ್ನ ಪ್ರಾಣವನ್ನು ಬಲಪಡಿಸಿಕೊಳ್ಳಲಾರನು. ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳಲಾರನು.
וְתֹפֵשׂ הַקֶּשֶׁת לֹא יַעֲמֹד וְקַל בְּרַגְלָיו לֹא יְמַלֵּט וְרֹכֵב הַסּוּס לֹא יְמַלֵּט נַפְשֽׁוֹ׃ | 15 |
೧೫ಬಿಲ್ಲು ಹಿಡಿಯುವವನು ಭೂಮಿಯ ಮೇಲೆ ನಿಲ್ಲಲಾರನು, ಪಾದತ್ವರಿತನು ತಪ್ಪಿಸಿಕೊಳ್ಳಲಾರನು, ಅಶ್ವಾರೂಢನು ತನ್ನ ಪ್ರಾಣವನ್ನು ಉಳಿಸಿಕೊಳ್ಳಲಾರನು.
וְאַמִּיץ לִבּוֹ בַּגִּבּוֹרִים עָרוֹם יָנוּס בַּיּוֹם־הַהוּא נְאֻם־יְהֹוָֽה׃ | 16 |
೧೬ಆ ದಿನದಲ್ಲಿ ಶೂರರಲ್ಲಿ ಧೀರನಾದವನು ಬೆತ್ತಲೆಯಾಗಿ ಓಡಿಹೋಗುವನು” ಇದು ಯೆಹೋವನ ನುಡಿ.