< דניאל 2 >
וּבִשְׁנַת שְׁתַּיִם לְמַלְכוּת נְבֻֽכַדְנֶצַּר חָלַם נְבֻֽכַדְנֶצַּר חֲלֹמוֹת וַתִּתְפָּעֶם רוּחוֹ וּשְׁנָתוֹ נִהְיְתָה עָלָֽיו׃ | 1 |
೧ನೆಬೂಕದ್ನೆಚ್ಚರನು ತನ್ನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಕನಸು ಕಂಡು ತತ್ತರಗೊಂಡನು, ಅವನಿಗೆ ನಿದ್ರೆ ತಪ್ಪಿತು.
וַיֹּאמֶר הַמֶּלֶךְ לִקְרֹא לַֽחַרְטֻמִּים וְלָֽאַשָּׁפִים וְלַֽמְכַשְּׁפִים וְלַכַּשְׂדִּים לְהַגִּיד לַמֶּלֶךְ חֲלֹמֹתָיו וַיָּבֹאוּ וַיַּֽעַמְדוּ לִפְנֵי הַמֶּֽלֶךְ׃ | 2 |
೨ಆಗ ರಾಜನು ತನ್ನ ಕನಸುಗಳ ಅಭಿಪ್ರಾಯವನ್ನು ತಿಳಿದುಕೊಳ್ಳಲು ಜೋಯಿಸರನ್ನೂ, ಮಂತ್ರವಾದಿಗಳನ್ನೂ, ಮಾಟಗಾರರನ್ನೂ, ಪಂಡಿತರನ್ನೂ ಕರೆಯಿಸಲು ಅವರು ಸನ್ನಿಧಿಗೆ ಬಂದು ರಾಜನ ಮುಂದೆ ನಿಂತುಕೊಂಡರು.
וַיֹּאמֶר לָהֶם הַמֶּלֶךְ חֲלוֹם חָלָמְתִּי וַתִּפָּעֶם רוּחִי לָדַעַת אֶֽת־הַחֲלֽוֹם׃ | 3 |
೩ರಾಜನು ಅವರಿಗೆ, “ನಾನು ಕನಸುಕಂಡೆನು, ಅದರ ಅರ್ಥವೇನೋ ಎಂದು ನನ್ನ ಮನಸ್ಸು ತತ್ತರಿಸುತ್ತದೆ” ಎಂಬುದಾಗಿ ಹೇಳಿದನು.
וַֽיְדַבְּרוּ הַכַּשְׂדִּים לַמֶּלֶךְ אֲרָמִית מַלְכָּא לְעָלְמִין חֱיִי אֱמַר חֶלְמָא (לעבדיך) [לְעַבְדָךְ] וּפִשְׁרָא נְחַוֵּֽא׃ | 4 |
೪ಆಗ ಆ ಪಂಡಿತರು ಅರಮಾಯ ಭಾಷೆಯಲ್ಲಿ ರಾಜನಿಗೆ, “ಅರಸನೇ, ಚಿರಂಜೀವಿಯಾಗಿರು; ಆ ಕನಸನ್ನು ನಿನ್ನ ದಾಸರಿಗೆ ಹೇಳು; ಅದರ ತಾತ್ಪರ್ಯವನ್ನು ತಿಳಿಸುವೆವು” ಎಂದು ಅರಿಕೆಮಾಡಿದರು.
עָנֵה מַלְכָּא וְאָמַר (לכשדיא) [לְכַשְׂדָּאֵי] מִלְּתָה מִנִּי אַזְדָּא הֵן לָא תְהֽוֹדְעוּנַּנִי חֶלְמָא וּפִשְׁרֵהּ הַדָּמִין תִּתְעַבְדוּן וּבָתֵּיכוֹן נְוָלִי יִתְּשָׂמֽוּן׃ | 5 |
೫ಆಗ ರಾಜನು ಪಂಡಿತರಿಗೆ ಪ್ರತ್ಯುತ್ತರವಾಗಿ, “ನನ್ನ ಮಾತು ಖಂಡಿತ; ನೀವೇ ಆ ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸದಿದ್ದರೆ ನಿಮ್ಮನ್ನು ತುಂಡುತುಂಡಾಗಿ ಕತ್ತರಿಸುವೆನು, ನಿಮ್ಮ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಿಬಿಡುವೆನು.
וְהֵן חֶלְמָא וּפִשְׁרֵהּ תְּֽהַחֲוֺן מַתְּנָן וּנְבִזְבָּה וִיקָר שַׂגִּיא תְּקַבְּלוּן מִן־קֳדָמָי לָהֵן חֶלְמָא וּפִשְׁרֵהּ הַחֲוֺֽנִי׃ | 6 |
೬ನೀವು ಆ ಕನಸನ್ನೂ, ಅದರ ಅರ್ಥವನ್ನೂ ತಿಳಿಸಿದರೆ ನನ್ನಿಂದ ನಿಮಗೆ ದಾನ ಮತ್ತು ಬಹುಮಾನಗಳೂ, ವಿಶೇಷ ಸನ್ಮಾನಗಳೂ ಲಭಿಸುವವು. ಆದಕಾರಣ ಆ ಕನಸನ್ನೂ, ಅದರ ಅಭಿಪ್ರಾಯವನ್ನೂ ನನಗೆ ತಿಳಿಸಿರಿ” ಎಂದು ಹೇಳಿದನು.
עֲנוֹ תִנְיָנוּת וְאָמְרִין מַלְכָּא חֶלְמָא יֵאמַר לְעַבְדוֹהִי וּפִשְׁרָה נְהַחֲוֵֽה׃ | 7 |
೭ಪಂಡಿತರು ಉತ್ತರವಾಗಿ, “ರಾಜನು ತನ್ನ ದಾಸರಿಗೆ ಕನಸನ್ನು ತಿಳಿಸಲಿ, ನಾವು ಅದರ ತಾತ್ಪರ್ಯವನ್ನು ವಿವರಿಸುವೆವು” ಎಂಬ ಉತ್ತರವನ್ನೇ ಪುನಃ ಕೊಟ್ಟರು.
עָנֵה מַלְכָּא וְאָמַר מִן־יַצִּיב יָדַע אֲנָה דִּי עִדָּנָא אַנְתּוּן זָבְנִין כׇּל־קֳבֵל דִּי חֲזֵיתוֹן דִּי אַזְדָּא מִנִּי מִלְּתָֽא׃ | 8 |
೮ಅದಕ್ಕೆ ರಾಜನು, “ನೀವು ಆ ಕನಸನ್ನು ನನಗೆ ತಿಳಿಸದಿದ್ದರೆ ಮರಣದಂಡನೆಯ ನಿಯಮವೇ ನಿಮಗೆ ಗತಿಯಾಗುವುದು ಎಂಬ ನನ್ನ ಮಾತು ಖಂಡಿತವೆಂದು ನೀವು ತಿಳಿದುಕೊಂಡು ಕಾಲಹರಣ ಮಾಡುತ್ತಿದ್ದೀರಿ, ಇದು ನನಗೆ ಚೆನ್ನಾಗಿ ಗೊತ್ತು.
דִּי הֵן־חֶלְמָא לָא תְהֽוֹדְעֻנַּנִי חֲדָה־הִיא דָֽתְכוֹן וּמִלָּה כִדְבָה וּשְׁחִיתָה (הזמנתון) [הִזְדְּמִנְתּוּן] לְמֵאמַר קׇֽדָמַי עַד דִּי עִדָּנָא יִשְׁתַּנֵּא לָהֵן חֶלְמָא אֱמַרוּ לִי וְֽאִנְדַּע דִּי פִשְׁרֵהּ תְּהַחֲוֻנַּֽנִי׃ | 9 |
೯ಕಾಲಾಂತರವನ್ನು ನಿರೀಕ್ಷಿಸಿಕೊಂಡೇ ನನ್ನ ಮುಂದೆ ಕೆಟ್ಟ ಸುಳ್ಳುಗಳನ್ನು ಆಡುತ್ತಿರಬೇಕೆಂದು ಒಪ್ಪಂದ ಮಾಡಿಕೊಂಡಿದ್ದೀರಿ; ಅಂತು ಆ ಕನಸನ್ನು ತಿಳಿಸಬೇಕು; ಆದುದರಿಂದ ನೀವು ಅದರ ಅರ್ಥವನ್ನೂ ವಿವರಿಸಬಲ್ಲಿರೆಂದು ತಿಳಿದುಕೊಳ್ಳುವೆನು” ಎಂದು ಹೇಳಿದನು.
עֲנוֹ (כשדיא) [כַשְׂדָּאֵי] קֳדָם־מַלְכָּא וְאָמְרִין לָֽא־אִיתַי אֱנָשׁ עַל־יַבֶּשְׁתָּא דִּי מִלַּת מַלְכָּא יוּכַל לְהַחֲוָיָה כׇּל־קֳבֵל דִּי כׇּל־מֶלֶךְ רַב וְשַׁלִּיט מִלָּה כִדְנָה לָא שְׁאֵל לְכׇל־חַרְטֹם וְאָשַׁף וְכַשְׂדָּֽי׃ | 10 |
೧೦ಆಗ ಆ ಪಂಡಿತರು ರಾಜನ ಸನ್ನಿಧಿಯ ಮುಂದೆ, “ರಾಜನು ಕೇಳಿದ ಸಂಗತಿಯನ್ನು ತಿಳಿಸಬಲ್ಲವನು ಲೋಕದಲ್ಲಿ ಯಾರೂ ಇಲ್ಲ; ಎಷ್ಟೇ ಬಲಿಷ್ಠನು, ಎಷ್ಟೇ ಪ್ರಬಲನು ಆದ ಯಾವ ಅರಸನೂ ಜೋಯಿಸರನ್ನಾಗಲಿ, ಮಾಟಗಾರನನ್ನಾಗಲಿ, ಪಂಡಿತನನ್ನಾಗಲಿ, ಇಂಥ ಸಂಗತಿಯನ್ನು ಎಂದೂ ಕೇಳಿದ್ದಿಲ್ಲ.
וּמִלְּתָא דִֽי־מַלְכָּה שָׁאֵל יַקִּירָה וְאׇחֳרָן לָא אִיתַי דִּי יְחַוִּנַּהּ קֳדָם מַלְכָּא לָהֵן אֱלָהִין דִּי מְדָרְהוֹן עִם־בִּשְׂרָא לָא אִיתֽוֹהִי׃ | 11 |
೧೧ರಾಜನು ಕೇಳುವ ಸಂಗತಿಯು ಅತಿ ಕಷ್ಟವಾದದ್ದು. ನರಜನ್ಮದವರ ಮಧ್ಯೆ ವಾಸಿಸುವ ದೇವರುಗಳೇ ಹೊರತು ಇನ್ಯಾರೂ ರಾಜನ ಸಮ್ಮುಖದಲ್ಲಿ ಅದನ್ನು ತಿಳಿಸಲಾರರು” ಎಂದು ಉತ್ತರಕೊಟ್ಟರು.
כׇּל־קֳבֵל דְּנָה מַלְכָּא בְּנַס וּקְצַף שַׂגִּיא וַאֲמַר לְהוֹבָדָה לְכֹל חַכִּימֵי בָבֶֽל׃ | 12 |
೧೨ಇದನ್ನು ಕೇಳಿ, ರಾಜನು ಉಗ್ರರೋಷವುಳ್ಳವನಾಗಿ ಬಾಬೆಲಿನ ಸಕಲ ವಿದ್ವಾಂಸರನ್ನು ಕೊಲ್ಲಬೇಕೆಂದು ಆಜ್ಞಾಪಿಸಿದನು.
וְדָתָא נֶפְקַת וְחַכִּֽימַיָּא מִֽתְקַטְּלִין וּבְעוֹ דָּנִיֵּאל וְחַבְרוֹהִי לְהִתְקְטָלָֽה׃ | 13 |
೧೩ಕೂಡಲೆ ಆ ಆಜ್ಞೆಯು ಪ್ರಕಟವಾಯಿತು. ವಿದ್ವಾಂಸರು ಪ್ರಾಣಾಪಾಯಕ್ಕೆ ಗುರಿಯಾದರು; ದಾನಿಯೇಲನನ್ನೂ, ಅವನ ಸ್ನೇಹಿತರನ್ನೂ ಕೊಲ್ಲುವುದಕ್ಕೆ ಹುಡುಕಿದರು.
בֵּאדַיִן דָּנִיֵּאל הֲתִיב עֵטָא וּטְעֵם לְאַרְיוֹךְ רַב־טַבָּחַיָּא דִּי מַלְכָּא דִּי נְפַק לְקַטָּלָה לְחַכִּימֵי בָּבֶֽל׃ | 14 |
೧೪ರಾಜನ ಮೈಗಾವಲಿನವರ ದಳವಾಯಿಯಾದ ಅರ್ಯೋಕನು ಬಾಬೆಲಿನ ವಿದ್ವಾಂಸರ ಸಂಹಾರಕ್ಕೆ ಹೊರಟಾಗ, ದಾನಿಯೇಲನು ಬುದ್ಧಿವಿವೇಕಗಳಿಂದ ಅವನ ಸಂಗಡ ಮಾತನಾಡಿ,
עָנֵה וְאָמַר לְאַרְיוֹךְ שַׁלִּיטָא דִֽי־מַלְכָּא עַל־מָה דָתָא מְהַחְצְפָה מִן־קֳדָם מַלְכָּא אֱדַיִן מִלְּתָא הוֹדַע אַרְיוֹךְ לְדָנִיֵּֽאל׃ | 15 |
೧೫“ಈ ರಾಜಾಜ್ಞೆಯು ಏಕೆ ಇಷ್ಟು ಉಗ್ರವಾಗಿದೆ?” ಎಂದು ಕೇಳಲು ಅರ್ಯೋಕನು ನಡೆದ ಸಂಗತಿಯನ್ನು ದಾನಿಯೇಲನಿಗೆ ತಿಳಿಸಿದನು.
וְדָנִיֵּאל עַל וּבְעָה מִן־מַלְכָּא דִּי זְמָן יִנְתִּן־לֵהּ וּפִשְׁרָא לְהַֽחֲוָיָה לְמַלְכָּֽא׃ | 16 |
೧೬ಆ ಮೇಲೆ ದಾನಿಯೇಲನು ಅರಮನೆಗೆ ಬಂದು, “ನನಗೆ ಸಮಯವನ್ನು ಕೊಟ್ಟರೆ ನಾನು ಆ ಕನಸಿನ ಅರ್ಥವನ್ನು ರಾಜನಿಗೆ ವಿವರಿಸುವೆನು” ಎಂದು ಅರಿಕೆ ಮಾಡಿದನು.
אֱדַיִן דָּֽנִיֵּאל לְבַיְתֵהּ אֲזַל וְלַחֲנַנְיָה מִֽישָׁאֵל וַעֲזַרְיָה חַבְרוֹהִי מִלְּתָא הוֹדַֽע׃ | 17 |
೧೭ಬಳಿಕ ದಾನಿಯೇಲನು ತನ್ನ ಮನೆಗೆ ಹೋಗಿ ಹನನ್ಯ, ಮೀಶಾಯೇಲ, ಅಜರ್ಯ ಎಂಬ ತನ್ನ ಸ್ನೇಹಿತರಿಗೆ,
וְרַחֲמִין לְמִבְעֵא מִן־קֳדָם אֱלָהּ שְׁמַיָּא עַל־רָזָא דְּנָה דִּי לָא יְהֽוֹבְדוּן דָּנִיֵּאל וְחַבְרוֹהִי עִם־שְׁאָר חַכִּימֵי בָבֶֽל׃ | 18 |
೧೮“ದಾನಿಯೇಲನು ಆ ಸಮಾಚಾರವನ್ನು ತಿಳಿಸಿ, ನಾವು ಬಾಬೆಲಿನ ಇತರ ವಿದ್ವಾಂಸರೊಂದಿಗೆ ನಾಶವಾಗದಂತೆ ಪರಲೋಕ ದೇವರು ಈ ರಹಸ್ಯದ ವಿಷಯವಾಗಿ ಕೃಪೆತೋರಿಸಲು ಆತನನ್ನು ಬೇಡಿಕೊಳ್ಳೋಣ” ಎಂದನು.
אֱדַיִן לְדָנִיֵּאל בְּחֶזְוָא דִֽי־לֵילְיָא רָזָא גְלִי אֱדַיִן דָּֽנִיֵּאל בָּרִךְ לֶאֱלָהּ שְׁמַיָּֽא׃ | 19 |
೧೯ಆಗ ಆ ರಹಸ್ಯವು ರಾತ್ರಿಯ ಸ್ವಪ್ನದಲ್ಲಿ ದಾನಿಯೇಲನಿಗೆ ಪ್ರಕಟವಾಯಿತು. ಕೂಡಲೆ ದಾನಿಯೇಲನು ಪರಲೋಕ ದೇವರನ್ನು ಹೀಗೆ ಸ್ತುತಿಸಿದನು,
עָנֵה דָֽנִיֵּאל וְאָמַר לֶהֱוֵא שְׁמֵהּ דִּֽי־אֱלָהָא מְבָרַךְ מִן־עָלְמָא וְעַד עָלְמָא דִּי חׇכְמְתָא וּגְבוּרְתָא דִּי לֵֽהּ־הִֽיא׃ | 20 |
೨೦“ದೇವರ ನಾಮಕ್ಕೆ ಯುಗಯುಗಾಂತರಗಳಲ್ಲಿಯೂ ಸ್ತುತಿಸ್ತೋತ್ರ ಉಂಟಾಗಲಿ! ಜ್ಞಾನ ತ್ರಾಣಗಳು ಆತನವುಗಳೇ.
וְהוּא מְהַשְׁנֵא עִדָּנַיָּא וְזִמְנַיָּא מְהַעְדֵּה מַלְכִין וּמְהָקֵים מַלְכִין יָהֵב חׇכְמְתָא לְחַכִּימִין וּמַנְדְּעָא לְיָדְעֵי בִינָֽה׃ | 21 |
೨೧ಕಾಲ ಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ಕಡೆಗಣಿಸುತ್ತಾನೆ, ನೆಲೆಸುವಂತೆ ಮಾಡುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ.
הוּא גָּלֵא עַמִּיקָתָא וּמְסַתְּרָתָא יָדַע מָה בַחֲשׁוֹכָא (ונהירא) [וּנְהוֹרָא] עִמֵּהּ שְׁרֵֽא׃ | 22 |
೨೨ಆತನು ಅಗಾಧ ವಿಷಯಗಳನ್ನೂ ಗೂಢಾರ್ಥಗಳನ್ನೂ ಬಯಲಿಗೆ ತರುತ್ತಾನೆ; ಕಗ್ಗತ್ತಲೆಯಲ್ಲಿ ಅಡಗಿರುವುದೂ ಆತನಿಗೆ ಗೋಚರವಾಗುವುದು; ತೇಜಸ್ಸು ಆತನಲ್ಲೇ ನೆಲೆಗೊಂಡಿದೆ.
לָךְ ׀ אֱלָהּ אֲבָהָתִי מְהוֹדֵא וּמְשַׁבַּח אֲנָה דִּי חׇכְמְתָא וּגְבוּרְתָא יְהַבְתְּ לִי וּכְעַן הֽוֹדַעְתַּנִי דִּֽי־בְעֵינָא מִנָּךְ דִּֽי־מִלַּת מַלְכָּא הוֹדַעְתֶּֽנָא׃ | 23 |
೨೩ನನ್ನ ಪೂರ್ವಿಕರ ದೇವರೇ, ನಿನ್ನನ್ನು ಸ್ತುತಿಸುತ್ತೇನೆ, ಕೊಂಡಾಡುತ್ತೇನೆ, ನೀನು ನನಗೆ ಜ್ಞಾನತ್ರಾಣಗಳನ್ನು ದಯಪಾಲಿಸಿ ನಾವು ಬೇಡಿದ್ದನ್ನು ನನಗೆ ತೋರ್ಪಡಿಸಿದ್ದಿಯಲ್ಲಾ; ಹೌದು, ರಾಜನ ರಹಸ್ಯವನ್ನು ನಮಗೆ ಪ್ರಕಟಪಡಿಸಿರುವೆ” ಎಂದನು.
כׇּל־קֳבֵל דְּנָה דָּֽנִיֵּאל עַל עַל־אַרְיוֹךְ דִּי מַנִּי מַלְכָּא לְהוֹבָדָה לְחַכִּימֵי בָבֶל אֲזַל ׀ וְכֵן אֲמַר־לֵהּ לְחַכִּימֵי בָבֶל אַל־תְּהוֹבֵד הַעֵלְנִי קֳדָם מַלְכָּא וּפִשְׁרָא לְמַלְכָּא אֲחַוֵּֽא׃ | 24 |
೨೪ನಂತರ ದಾನಿಯೇಲನು ಬಾಬೆಲಿನ ವಿದ್ವಾಂಸರನ್ನು ಕೊಲ್ಲುವುದಕ್ಕೆ ರಾಜನು ನೇಮಿಸಿದ ಅರ್ಯೋಕನ ಬಳಿಗೆ ಹೋಗಿ ಅವನಿಗೆ, “ಬಾಬೆಲಿನ ವಿದ್ವಾಂಸರನ್ನು ಕೊಲ್ಲಬೇಡ; ನನ್ನನ್ನು ರಾಜನ ಸನ್ನಿಧಿಗೆ ಬಿಡು; ನಾನು ಕನಸಿನ ಅಭಿಪ್ರಾಯವನ್ನು ರಾಜನಿಗೆ ತಿಳಿಸುವೆನು” ಎಂದು ಹೇಳಿದನು.
אֱדַיִן אַרְיוֹךְ בְּהִתְבְּהָלָה הַנְעֵל לְדָנִיֵּאל קֳדָם מַלְכָּא וְכֵן אֲמַר־לֵהּ דִּֽי־הַשְׁכַּחַת גְּבַר מִן־בְּנֵי גָֽלוּתָא דִּי יְהוּד דִּי פִשְׁרָא לְמַלְכָּא יְהוֹדַֽע׃ | 25 |
೨೫ಕೂಡಲೆ ಅರ್ಯೋಕನು ದಾನಿಯೇಲನನ್ನು ರಾಜನ ಬಳಿಗೆ ಶೀಘ್ರವಾಗಿ ಕರೆದುಕೊಂಡು ಹೋಗಿ, “ರಾಜನೇ, ಕನಸಿನ ಅಭಿಪ್ರಾಯವನ್ನು ನಿನಗೆ ತಿಳಿಸಬಲ್ಲವನೊಬ್ಬನು ಯೆಹೂದದಿಂದ ಸೆರೆಯಾಗಿ ತಂದವರಲ್ಲಿ ನನಗೆ ಸಿಕ್ಕಿದ್ದಾನೆ” ಎಂದು ಅರಿಕೆಮಾಡಿದನು.
עָנֵה מַלְכָּא וְאָמַר לְדָנִיֵּאל דִּי שְׁמֵהּ בֵּלְטְשַׁאצַּר (האיתיך) [הַֽאִיתָךְ] כָּהֵל לְהוֹדָעֻתַנִי חֶלְמָא דִֽי־חֲזֵית וּפִשְׁרֵֽהּ׃ | 26 |
೨೬ರಾಜನು ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನನ್ನು, “ನಾನು ಕಂಡ ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸಬಲ್ಲೆಯಾ?” ಎಂದು ಕೇಳಿದನು.
עָנֵה דָנִיֵּאל קֳדָם מַלְכָּא וְאָמַר רָזָא דִּֽי־מַלְכָּא שָׁאֵל לָא חַכִּימִין אָֽשְׁפִין חַרְטֻמִּין גָּזְרִין יָכְלִין לְהַֽחֲוָיָה לְמַלְכָּֽא׃ | 27 |
೨೭ಅದಕ್ಕೆ ದಾನಿಯೇಲನು ರಾಜನನ್ನು ಕುರಿತು, “ರಾಜನು ಕೇಳುವ ರಹಸ್ಯವನ್ನು ವಿದ್ವಾಂಸರಾಗಲಿ, ಮಾಟಗಾರರಾಗಲಿ, ಜೋಯಿಸರಾಗಲಿ, ಶಕುನದವರಾಗಲಿ ಯಾರೂ ರಾಜನಿಗೆ ತಿಳಿಸಲಾರರು.
בְּרַם אִיתַי אֱלָהּ בִּשְׁמַיָּא גָּלֵא רָזִין וְהוֹדַע לְמַלְכָּא נְבֽוּכַדְנֶצַּר מָה דִּי לֶהֱוֵא בְּאַחֲרִית יוֹמַיָּא חֶלְמָךְ וְחֶזְוֵי רֵאשָׁךְ עַֽל־מִשְׁכְּבָךְ דְּנָה הֽוּא׃ | 28 |
೨೮ಆದರೆ ರಹಸ್ಯಗಳನ್ನು ಪ್ರಕಟಗೊಳಿಸುವ ಒಬ್ಬನಿದ್ದಾನೆ, ಆತನು ದೇವರು, ಆತನು ಪರಲೋಕದಲ್ಲಿದ್ದಾನೆ. ಮುಂದೆ ನಡೆಯತಕ್ಕದ್ದನ್ನು ಆತನೇ ರಾಜನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸಿದ್ದಾನೆ. ನಿನ್ನ ಕನಸು, ಹಾಸಿಗೆಯ ಮೇಲೆ ನಿನ್ನ ಮನಸ್ಸಿನಲ್ಲಿ ಬಿದ್ದ ಸ್ವಪ್ನಗಳು ಇವೇ.
(אנתה) [אַנְתְּ] מַלְכָּא רַעְיוֹנָךְ עַל־מִשְׁכְּבָךְ סְלִקוּ מָה דִּי לֶהֱוֵא אַחֲרֵי דְנָה וְגָלֵא רָזַיָּא הוֹדְעָךְ מָה־דִי לֶהֱוֵֽא׃ | 29 |
೨೯“ರಾಜನೇ, ನೀನು ಹಾಸಿಗೆಯ ಮೇಲೆ ಮಲಗಿರುವಾಗ ಮುಂದೆ ಏನಾಗುವುದೋ? ಎಂಬ ಯೋಚನೆಯು ನಿನ್ನಲ್ಲಿ ಹುಟ್ಟಿತಲ್ಲಾ; ರಹಸ್ಯಗಳನ್ನು ವ್ಯಕ್ತಗೊಳಿಸುವಾತನು ಮುಂದೆ ಸಂಭವಿಸುವುದನ್ನು ನಿನಗೆ ಗೋಚರಮಾಡಿದ್ದಾನೆ.
וַאֲנָה לָא בְחׇכְמָה דִּֽי־אִיתַי בִּי מִן־כׇּל־חַיַּיָּא רָזָא דְנָה גֱּלִי לִי לָהֵן עַל־דִּבְרַת דִּי פִשְׁרָא לְמַלְכָּא יְהוֹדְעוּן וְרַעְיוֹנֵי לִבְבָךְ תִּנְדַּֽע׃ | 30 |
೩೦ನಾನೇ ಎಲ್ಲಾ ಮನುಷ್ಯರಿಗಿಂತ ಹೆಚ್ಚು ಬುದ್ಧಿವಂತನಲ್ಲ, ಕನಸಿನ ಅಭಿಪ್ರಾಯವು ರಾಜನಿಗೆ ಗೋಚರವಾಗಿ ನಿನ್ನ ಮನಸ್ಸಿನ ಯೋಚನೆಯ ವಿಷಯವು ನಿನಗೆ ತಿಳಿದು ಬರಲಿ ಎಂದು ಈ ರಹಸ್ಯವು ನನಗೂ ಪ್ರಕಟವಾಗಿದೆ.
(אנתה) [אַנְתְּ] מַלְכָּא חָזֵה הֲוַיְתָ וַאֲלוּ צְלֵם חַד שַׂגִּיא צַלְמָא דִכֵּן רַב וְזִיוֵהּ יַתִּיר קָאֵם לְקׇבְלָךְ וְרֵוֵהּ דְּחִֽיל׃ | 31 |
೩೧“ರಾಜನೇ, ನೀನು ಕಂಡದ್ದು ಆಹಾ, ಅದ್ಭುತಪ್ರತಿಮೆ; ಥಳಥಳನೆ ಹೊಳೆಯುವ ಆ ದೊಡ್ಡ ಪ್ರತಿಮೆಯು ನಿನ್ನೆದುರಿಗೆ ನಿಂತಿತ್ತು; ಭಯಂಕರವಾಗಿ ಕಾಣಿಸಿತು.
הוּא צַלְמָא רֵאשֵׁהּ דִּֽי־דְהַב טָב חֲדוֹהִי וּדְרָעוֹהִי דִּי כְסַף מְעוֹהִי וְיַרְכָתֵהּ דִּי נְחָֽשׁ׃ | 32 |
೩೨ಆ ಪ್ರತಿಮೆಯ ತಲೆಯು ಅಪರಂಜಿ, ಎದೆತೋಳುಗಳು ಬೆಳ್ಳಿ, ಹೊಟ್ಟೆಸೊಂಟಗಳು ತಾಮ್ರ,
שָׁקוֹהִי דִּי פַרְזֶל רַגְלוֹהִי (מנהון) [מִנְּהֵין] דִּי פַרְזֶל (ומנהון) [וּמִנְּהֵין] דִּי חֲסַֽף׃ | 33 |
೩೩ಕಾಲುಗಳು ಕಬ್ಬಿಣ, ಪಾದಗಳು ಕಬ್ಬಿಣ ಮತ್ತು ಮಣ್ಣು.
חָזֵה הֲוַיְתָ עַד דִּי הִתְגְּזֶרֶת אֶבֶן דִּי־לָא בִידַיִן וּמְחָת לְצַלְמָא עַל־רַגְלוֹהִי דִּי פַרְזְלָא וְחַסְפָּא וְהַדֵּקֶת הִמּֽוֹן׃ | 34 |
೩೪“ನೀನು ನೋಡುತ್ತಿರಲಾಗಿ ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು, ಸಿಡಿದು ಬಂದು ಆ ಪ್ರತಿಮೆಯ ಕಬ್ಬಿಣ ಮಣ್ಣಿನ ಪಾದಗಳಿಗೆ ಬಡಿದು, ಚೂರುಚೂರು ಮಾಡಿತು.
בֵּאדַיִן דָּקוּ כַחֲדָה פַּרְזְלָא חַסְפָּא נְחָשָׁא כַּסְפָּא וְדַהֲבָא וַהֲווֹ כְּעוּר מִן־אִדְּרֵי־קַיִט וּנְשָׂא הִמּוֹן רוּחָא וְכׇל־אֲתַר לָא־הִשְׁתְּכַח לְהוֹן וְאַבְנָא ׀ דִּֽי־מְחָת לְצַלְמָא הֲוָת לְטוּר רַב וּמְלָאת כׇּל־אַרְעָֽא׃ | 35 |
೩೫ಆಗ ಕಬ್ಬಿಣ, ಮಣ್ಣು, ತಾಮ್ರ, ಬೆಳ್ಳಿ ಬಂಗಾರಗಳೆಲ್ಲವೂ ಪುಡಿಪುಡಿಯಾಗಿ ಸುಗ್ಗಿಯ ಕಣಗಳ ಹೊಟ್ಟಿನಂತಾದವು; ಗಾಳಿಯು ತೂರಿಕೊಂಡು ಹೋಗಲು ಅವುಗಳಿಗೆ ನೆಲೆಯೇ ಇಲ್ಲವಾಯಿತು; ಪ್ರತಿಮೆಗೆ ಬಡಿದ ಆ ಬಂಡೆಯು ಮಹಾ ಪರ್ವತವಾಗಿ ಲೋಕದಲ್ಲೆಲ್ಲಾ ತುಂಬಿಕೊಂಡಿತು.
דְּנָה חֶלְמָא וּפִשְׁרֵהּ נֵאמַר קֳדָם־מַלְכָּֽא׃ | 36 |
೩೬“ಕನಸು ಇದೇ; ಇದರ ಅರ್ಥವನ್ನೂ ನಿನ್ನಲ್ಲಿ ಅರಿಕೆಮಾಡುತ್ತೇನೆ.
(אנתה) [אַנְתְּ] מַלְכָּא מֶלֶךְ מַלְכַיָּא דִּי אֱלָהּ שְׁמַיָּא מַלְכוּתָא חִסְנָא וְתׇקְפָּא וִֽיקָרָא יְהַב־לָֽךְ׃ | 37 |
೩೭ಅರಸನೇ, ನೀನು ರಾಜಾಧಿರಾಜ, ಪರಲೋಕ ದೇವರು ನಿನಗೆ ರಾಜ್ಯಬಲ, ಪರಾಕ್ರಮ, ವೈಭವಗಳನ್ನು ದಯಪಾಲಿಸಿದ್ದಾನೆ.
וּבְכׇל־דִּי (דארין) [דָֽיְרִין] בְּֽנֵי־אֲנָשָׁא חֵיוַת בָּרָא וְעוֹף־שְׁמַיָּא יְהַב בִּידָךְ וְהַשְׁלְטָךְ בְּכׇלְּהוֹן (אנתה) [אַנְתְּ־]הוּא רֵאשָׁה דִּי דַהֲבָֽא׃ | 38 |
೩೮ನರಜಾತಿಯವರು ವಾಸಿಸುವ ಸಕಲ ಪ್ರಾಂತ್ಯಗಳಲ್ಲಿ ಆಕಾಶಪಕ್ಷಿಗಳನ್ನೂ, ಭೂಜಂತುಗಳನ್ನೂ ನಿನ್ನ ಕೈಗೆ ಒಪ್ಪಿಸಿ ನೀನು ಅವುಗಳನ್ನೆಲ್ಲಾ ಆಳುವಂತೆ ಮಾಡಿದ್ದಾನೆ; ನೀನೇ ಆ ಬಂಗಾರದ ತಲೆ.
וּבָתְרָךְ תְּקוּם מַלְכוּ אׇחֳרִי (ארעא) [אֲרַע] מִנָּךְ וּמַלְכוּ (תליתיא) [תְלִיתָאָה] אׇחֳרִי דִּי נְחָשָׁא דִּי תִשְׁלַט בְּכׇל־אַרְעָֽא׃ | 39 |
೩೯“ನಿನ್ನ ಕಾಲವಾದ ಮೇಲೆ ನಿನಗಿಂತ ಬಿಳುಪಾದ (ಬೆಳ್ಳಿ) ಮತ್ತೊಂದು ರಾಜ್ಯವು ಉಂಟಾಗುವುದು. ಅನಂತರ ಬೇರೊಂದು ಮೂರನೆಯ ರಾಜ್ಯವು ತಾಮ್ರದ್ದಾಗಿ ತಲೆದೋರಿ ಭೂಮಂಡಲವನ್ನೆಲ್ಲಾ ಆಳುವುದು.
וּמַלְכוּ (רביעיה) [רְבִיעָאָה] תֶּהֱוֵא תַקִּיפָה כְּפַרְזְלָא כׇּל־קֳבֵל דִּי פַרְזְלָא מְהַדֵּק וְחָשֵׁל כֹּלָּא וּֽכְפַרְזְלָא דִּֽי־מְרָעַע כׇּל־אִלֵּן תַּדִּק וְתֵרֹֽעַ׃ | 40 |
೪೦“ನಾಲ್ಕನೆಯ ರಾಜ್ಯವು ಕಬ್ಬಿಣದಷ್ಟು ಗಟ್ಟಿ; ಕಬ್ಬಿಣವು ಎಲ್ಲಾ ವಸ್ತುಗಳನ್ನು ಚೂರುಚೂರಾಗಿ ಒಡೆದು ಹಾಕುತ್ತದಷ್ಟೆ; ಸಕಲವನ್ನೂ ಧ್ವಂಸಮಾಡುವ ಕಬ್ಬಿಣದಂತೆಯೇ ಅದು ಚೂರುಚೂರಾಗಿ ಧ್ವಂಸಮಾಡುವುದು.
וְדִֽי־חֲזַיְתָה רַגְלַיָּא וְאֶצְבְּעָתָא (מנהון) [מִנְּהֵן] חֲסַף דִּֽי־פֶחָר (ומנהון) [וּמִנְּהֵין] פַּרְזֶל מַלְכוּ פְלִיגָה תֶּהֱוֵה וּמִן־נִצְבְּתָא דִֽי־פַרְזְלָא לֶֽהֱוֵא־בַהּ כׇּל־קֳבֵל דִּי חֲזַיְתָה פַּרְזְלָא מְעָרַב בַּחֲסַף טִינָֽא׃ | 41 |
೪೧“ಪಾದಗಳಲ್ಲಿ ಮತ್ತು ಬೆರಳುಗಳಲ್ಲಿ ಒಂದಂಶವು ಕುಂಬಾರನ ಮಣ್ಣೂ, ಒಂದಂಶವು ಕಬ್ಬಿಣವೂ ಆಗಿದ್ದುದನ್ನು ನೀನು ನೋಡಿದ ಪ್ರಕಾರ ಆ ರಾಜ್ಯವು ಭಿನ್ನ ಭಿನ್ನವಾಗಿರುವುದು; ಜೇಡಿಮಣ್ಣಿನೊಂದಿಗೆ ಕಬ್ಬಿಣವು ಮಿಶ್ರವಾಗಿದ್ದದ್ದನ್ನು ನೀನು ನೋಡಿದಂತೆ ಆ ರಾಜ್ಯದಲ್ಲಿ ಕಬ್ಬಿಣದ ಬಲವು ಸೇರಿರುವುದು.
וְאֶצְבְּעָת רַגְלַיָּא (מנהון) [מִנְּהֵין] פַּרְזֶל (ומנהון) [וּמִנְּהֵין] חֲסַף מִן־קְצָת מַלְכוּתָא תֶּהֱוֵה תַקִּיפָה וּמִנַּהּ תֶּהֱוֵא תְבִירָֽה׃ | 42 |
೪೨ಕಾಲ್ಬೆರಳುಗಳ ಒಂದಂಶವು ಕಬ್ಬಿಣ, ಒಂದಂಶವು ಮಣ್ಣು ಆಗಿದ್ದ ಹಾಗೆ ಆ ರಾಜ್ಯದ ಒಂದಂಶವು ಗಟ್ಟಿ, ಒಂದಂಶವು ಜೊಂಡಾಗಿರುವುದು.
(די) [וְדִי] חֲזַיְתָ פַּרְזְלָא מְעָרַב בַּחֲסַף טִינָא מִתְעָרְבִין לֶהֱוֺן בִּזְרַע אֲנָשָׁא וְלָֽא־לֶהֱוֺן דָּבְקִין דְּנָה עִם־דְּנָה הֵֽא־כְדִי פַרְזְלָא לָא מִתְעָרַב עִם־חַסְפָּֽא׃ | 43 |
೪೩ಕಬ್ಬಿಣವು ಜೇಡಿಮಣ್ಣಿನೊಂದಿಗೆ ಬೆರೆತಿರುವುದನ್ನು ನೀನು ನೋಡಿದ ಮೇರೆಗೆ, ಆ ರಾಜ್ಯಾಗಳ ಸಂತತಿ ಸಂಬಂಧದಿಂದ ಬೆರೆತುಕೊಳ್ಳುವವು. ಆದರೆ ಕಬ್ಬಿಣವು ಮಣ್ಣಿನೊಂದಿಗೆ ಹೇಗೆ ಕೂಡಿಕೊಳ್ಳುವುದಿಲ್ಲವೋ ಹಾಗೆ ಅವು ಒಂದಕ್ಕೊಂದು ಹೊಂದಿಕೊಳ್ಳುವುದಿಲ್ಲ.
וּֽבְיוֹמֵיהוֹן דִּי מַלְכַיָּא אִנּוּן יְקִים אֱלָהּ שְׁמַיָּא מַלְכוּ דִּי לְעָלְמִין לָא תִתְחַבַּל וּמַלְכוּתָה לְעַם אׇחֳרָן לָא תִשְׁתְּבִק תַּדִּק וְתָסֵיף כׇּל־אִלֵּין מַלְכְוָתָא וְהִיא תְּקוּם לְעָלְמַיָּֽא׃ | 44 |
೪೪“ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.
כׇּל־קֳבֵל דִּֽי־חֲזַיְתָ דִּי מִטּוּרָא אִתְגְּזֶרֶת אֶבֶן דִּי־לָא בִידַיִן וְהַדֵּקֶת פַּרְזְלָא נְחָשָׁא חַסְפָּא כַּסְפָּא וְדַהֲבָא אֱלָהּ רַב הוֹדַע לְמַלְכָּא מָה דִּי לֶהֱוֵא אַחֲרֵי דְנָה וְיַצִּיב חֶלְמָא וּמְהֵימַן פִּשְׁרֵֽהּ׃ | 45 |
೪೫ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು ಕಬ್ಬಿಣ, ತಾಮ್ರ, ಮಣ್ಣು, ಬೆಳ್ಳಿಬಂಗಾರಗಳನ್ನು ಚೂರುಚೂರು ಮಾಡಿದ್ದು ನಿನ್ನ ಕಣ್ಣಿಗೆ ಬಿತ್ತಲ್ಲಾ. ಇದರಿಂದ ಪರಲೋಕದೇವರು ಮುಂದೆ ನಡೆಯುವ ವಿಷಯಗಳನ್ನು ರಾಜನಿಗೆ ತಿಳಿಯಪಡಿಸಿದ್ದಾನೆ. ಕನಸು ನಿಜ, ಅದರ ಅರ್ಥವು ನಂಬತಕ್ಕದು” ಎಂದು ಹೇಳಿದನು.
בֵּאדַיִן מַלְכָּא נְבֽוּכַדְנֶצַּר נְפַל עַל־אַנְפּוֹהִי וּלְדָנִיֵּאל סְגִד וּמִנְחָה וְנִיחֹחִין אֲמַר לְנַסָּכָה לֵֽהּ׃ | 46 |
೪೬ಆಗ ರಾಜನಾದ ನೆಬೂಕದ್ನೆಚ್ಚರನು ಅಡ್ಡಬಿದ್ದು, “ದಾನಿಯೇಲನನ್ನು ಪೂಜಿಸಿ, ಅವನಿಗೆ ನೈವೇದ್ಯಮಾಡಿ ಧೂಪ ಹಾಕಬೇಕು” ಎಂದು ಆಜ್ಞಾಪಿಸಿದನು.
עָנֵה מַלְכָּא לְדָנִיֵּאל וְאָמַר מִן־קְשֹׁט דִּי אֱלָהֲכוֹן הוּא אֱלָהּ אֱלָהִין וּמָרֵא מַלְכִין וְגָלֵה רָזִין דִּי יְכֵלְתָּ לְמִגְלֵא רָזָא דְנָֽה׃ | 47 |
೪೭ಅರಸನು ದಾನಿಯೇಲನಿಗೆ ಪ್ರತ್ಯುತ್ತರವಾಗಿ, “ನೀನು ಈ ರಹಸ್ಯವನ್ನು ಬಯಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವನೂ, ರಾಜರ ಒಡೆಯನೂ, ರಹಸ್ಯಗಳನ್ನು ವ್ಯಕ್ತಗೊಳಿಸುವವನೂ ಆಗಿದ್ದಾನೆ ಎಂಬುದು ನಿಶ್ಚಯ” ಎಂದು ಹೇಳಿದನು.
אֱדַיִן מַלְכָּא לְדָנִיֵּאל רַבִּי וּמַתְּנָן רַבְרְבָן שַׂגִּיאָן יְהַב־לֵהּ וְהַשְׁלְטֵהּ עַל כׇּל־מְדִינַת בָּבֶל וְרַב־סִגְנִין עַל כׇּל־חַכִּימֵי בָבֶֽל׃ | 48 |
೪೮ಬಳಿಕ ರಾಜನು ದಾನಿಯೇಲನನ್ನು ಸನ್ಮಾನಿಸಿ, ಅವನಿಗೆ ಅಮೂಲ್ಯವಾದ ಅನೇಕ ಬಹುಮಾನಗಳನ್ನೂ ದಾನಗಳನ್ನು ಕೊಟ್ಟು, ಬಾಬೆಲ್ ಸಂಸ್ಥಾನವನ್ನೆಲ್ಲಾ ಅಧೀನಪಡಿಸಿ, ಬಾಬೆಲಿನ ವಿದ್ವಾಂಸರ ಸಕಲ ಮುಖ್ಯಸ್ಥರಿಗೂ ಅವನನ್ನು ಮುಖ್ಯಸ್ಥನನ್ನಾಗಿ ನೇಮಿಸಿದನು.
וְדָנִיֵּאל בְּעָא מִן־מַלְכָּא וּמַנִּי עַל עֲבִֽידְתָּא דִּי מְדִינַת בָּבֶל לְשַׁדְרַךְ מֵישַׁךְ וַעֲבֵד נְגוֹ וְדָנִיֵּאל בִּתְרַע מַלְכָּֽא׃ | 49 |
೪೯ದಾನಿಯೇಲನು ಬಿನ್ನಹ ಮಾಡಲು ರಾಜನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರಿಗೆ ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನು ಅರಮನೆಯಲ್ಲಿ ಉಳಿದನು.