< דניאל 4 >
נְבוּכַדְנֶצַּר מַלְכָּא לְֽכׇל־עַֽמְמַיָּא אֻמַּיָּא וְלִשָּׁנַיָּא דִּֽי־[דָיְרִין] (דארין) בְּכׇל־אַרְעָא שְׁלָמְכוֹן יִשְׂגֵּֽא׃ | 1 |
೧ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ, ಕುಲ ಭಾಷೆಗಳವರಿಗೆ ರಾಜನಾದ ನೆಬೂಕದ್ನೆಚ್ಚರನ ಪ್ರಕಟನೆ, “ನಿಮಗೆ ಸುಖವು ಹೆಚ್ಚೆಚ್ಚಾಗಲಿ!
אָֽתַיָּא וְתִמְהַיָּא דִּי עֲבַד עִמִּי אֱלָהָא (עליא) [עִלָּאָה] שְׁפַר קׇֽדָמַי לְהַחֲוָיָֽה׃ | 2 |
೨ಪರಾತ್ಪರನಾದ ದೇವರು ನನ್ನ ವಿಷಯದಲ್ಲಿ ನಡೆಸಿರುವ ಮಹತ್ತುಗಳನ್ನೂ, ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬುವುದು ನನಗೆ ಸ್ಪಷ್ಟವಾಗಿ ತೋರಿಬಂದಿದೆ.
אָתוֹהִי כְּמָה רַבְרְבִין וְתִמְהוֹהִי כְּמָה תַקִּיפִין מַלְכוּתֵהּ מַלְכוּת עָלַם וְשׇׁלְטָנֵהּ עִם־דָּר וְדָֽר׃ | 3 |
೩ಆತನ ಮಹತ್ತುಗಳು ಎಷ್ಟೋ ಅತಿಶಯ! ಆತನ ಅದ್ಭುತಗಳು ಎಷ್ಟೋ ವಿಶೇಷ! ಆತನ ರಾಜ್ಯವು ಶಾಶ್ವತರಾಜ್ಯ, ಆತನ ಆಳ್ವಿಕೆಯು ತಲತಲಾಂತರಕ್ಕೂ ಸ್ಥಿರವಾಗಿ ನಿಲ್ಲುವುದು.”
אֲנָה נְבוּכַדְנֶצַּר שְׁלֵה הֲוֵית בְּבֵיתִי וְרַעְנַן בְּהֵיכְלִֽי׃ | 4 |
೪“ನೆಬೂಕದ್ನೆಚ್ಚರನಾದ ನಾನು ನನ್ನ ಆಲಯದಲ್ಲಿ ಹಾಯಾಗಿದ್ದೆನು, ಹೌದು ನನ್ನ ಅರಮನೆಯಲ್ಲಿ ಸುಖವಾಗಿದ್ದೆನು.
חֵלֶם חֲזֵית וִֽידַחֲלִנַּנִי וְהַרְהֹרִין עַֽל־מִשְׁכְּבִי וְחֶזְוֵי רֵאשִׁי יְבַהֲלֻנַּֽנִי׃ | 5 |
೫ಹೀಗಿರಲು ನನ್ನನ್ನು ಹೆದರಿಸುವ ಒಂದು ಕನಸನ್ನು ಕಂಡೆನು; ಹಾಸಿಗೆಯಲ್ಲಿ ನನಗುಂಟಾದ ಯೋಚನೆಗಳೂ, ನನ್ನ ಮನಸ್ಸಿಗೆ ಬಿದ್ದ ಸ್ವಪ್ನಗಳೂ ನನ್ನನ್ನು ಕಳವಳಗೊಳಿಸಿದವು.
וּמִנִּי שִׂים טְעֵם לְהַנְעָלָה קׇֽדָמַי לְכֹל חַכִּימֵי בָבֶל דִּֽי־פְשַׁר חֶלְמָא יְהֽוֹדְעֻנַּֽנִי׃ | 6 |
೬ಆದುದರಿಂದ ಕನಸಿನ ಅರ್ಥವನ್ನು ನನಗೆ ತಿಳಿಸಲಿಕ್ಕೆ ಬಾಬೆಲಿನ ವಿದ್ವಾಂಸರೆಲ್ಲರನ್ನೂ ಕರೆದುತರುವ ಹಾಗೆ ಆಜ್ಞಾಪಿಸಿದೆನು.
בֵּאדַיִן (עללין) [עׇלִּין] חַרְטֻמַּיָּא אָֽשְׁפַיָּא (כשדיא) [כַּשְׂדָּאֵי] וְגָזְרַיָּא וְחֶלְמָא אָמַר אֲנָה קֳדָמֵיהוֹן וּפִשְׁרֵהּ לָא־מְהוֹדְעִין לִֽי׃ | 7 |
೭“ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು, ನನ್ನ ಸಮ್ಮುಖಕ್ಕೆ ಬಂದಾಗ ನಾನು ಆ ಕನಸನ್ನು ತಿಳಿಸಲು ಅವರು ಅದರ ಅಭಿಪ್ರಾಯವನ್ನು ವಿವರಿಸಲಾರದೆ ಹೋದರು.
וְעַד אׇחֳרֵין עַל קׇֽדָמַי דָּנִיֵּאל דִּֽי־שְׁמֵהּ בֵּלְטְשַׁאצַּר כְּשֻׁם אֱלָהִי וְדִי רֽוּחַ־אֱלָהִין קַדִּישִׁין בֵּהּ וְחֶלְמָא קׇֽדָמוֹהִי אַמְרֵֽת׃ | 8 |
೮ನನ್ನ ದೇವರ ಹೆಸರು ಸೇರಿರುವ ಬೇಲ್ತೆಶಚ್ಚರನೆಂಬ ಅಡ್ಡಹೆಸರನ್ನು ಹೊಂದಿದವನೂ, ಪರಿಶುದ್ಧದೇವರುಗಳ ಆತ್ಮವುಳ್ಳವನೂ ಆದ ದಾನಿಯೇಲನು ಕಟ್ಟಕಡೆಯಲ್ಲಿ ನನ್ನ ಬಳಿಗೆ ಬರಲು ನಾನು ಆ ಕನಸನ್ನು ಅವನಿಗೆ ಹೀಗೆ ತಿಳಿಸಿದೆನು,
בֵּלְטְשַׁאצַּר רַב חַרְטֻמַּיָּא דִּי ׀ אֲנָה יִדְעֵת דִּי רוּחַ אֱלָהִין קַדִּישִׁין בָּךְ וְכׇל־רָז לָא־אָנֵס לָךְ חֶזְוֵי חֶלְמִי דִֽי־חֲזֵית וּפִשְׁרֵהּ אֱמַֽר׃ | 9 |
೯‘ಬೇಲ್ತೆಶಚ್ಚರನೇ, ಜೋಯಿಸರಲ್ಲಿ ಪ್ರಧಾನನೇ, ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಯಾಗಿದೆ ಎಂದು ತಿಳಿದಿದ್ದೇನೆ, ಯಾವ ರಹಸ್ಯವೂ ನಿನಗೆ ಅಶೋಧ್ಯವಲ್ಲವೆಂಬುದು ನನಗೆ ಗೊತ್ತು; ಆದುದರಿಂದ ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸು.
וְחֶזְוֵי רֵאשִׁי עַֽל־מִשְׁכְּבִי חָזֵה הֲוֵית וַאֲלוּ אִילָן בְּגוֹא אַרְעָא וְרוּמֵהּ שַׂגִּֽיא׃ | 10 |
೧೦ನಾನು ಹಾಸಿಗೆಯ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸುಗಳು ಇವೇ. ಇಗೋ, ಲೋಕದ ನಡುವೆ ಬಹು ಎತ್ತರವಾದ ಒಂದು ವೃಕ್ಷವನ್ನು ಕಂಡೆನು.
רְבָה אִֽילָנָא וּתְקִף וְרוּמֵהּ יִמְטֵא לִשְׁמַיָּא וַחֲזוֹתֵהּ לְסוֹף כׇּל־אַרְעָֽא׃ | 11 |
೧೧ಆ ವೃಕ್ಷವು ಬೆಳೆದು ಬಲಗೊಂಡಿತ್ತು, ಅದರ ತುದಿಯು ಆಕಾಶವನ್ನು ಮುಟ್ಟಿತ್ತು, ಅದು ಭೂಲೋಕದ ಕಟ್ಟಕಡೆಗೂ ಕಾಣಿಸುತ್ತಿತ್ತು.
עׇפְיֵהּ שַׁפִּיר וְאִנְבֵּהּ שַׂגִּיא וּמָזוֹן לְכֹלָּא־בֵהּ תְּחֹתוֹהִי תַּטְלֵל ׀ חֵיוַת בָּרָא וּבְעַנְפוֹהִי (ידרון) [יְדוּרָן] צִפְּרֵי שְׁמַיָּא וּמִנֵּהּ יִתְּזִין כׇּל־בִּשְׂרָֽא׃ | 12 |
೧೨ಅದರ ಎಲೆಗಳು ಅಂದ, ಹಣ್ಣುಗಳು ಬಹಳ, ಆದ್ದರಿಂದ ಎಲ್ಲಕ್ಕೂ ಆಹಾರ, ನೆರಳೂ, ಭೂಜಂತುಗಳಿಗೆ ಆಶ್ರಯ, ಕೊಂಬೆಗಳು ಆಕಾಶ ಪಕ್ಷಿಗಳಿಗೆ ನೆಲೆ, ಅದು ಸಕಲ ಜೀವಿಗಳಿಗೂ ಜೀವನ.
חָזֵה הֲוֵית בְּחֶזְוֵי רֵאשִׁי עַֽל־מִשְׁכְּבִי וַאֲלוּ עִיר וְקַדִּישׁ מִן־שְׁמַיָּא נָחִֽת׃ | 13 |
೧೩ನಾನು ಹಾಸಿಗೆಯ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸಿನಲ್ಲಿ ನೋಡಲಾಗಿ ದೇವದೂತನು ಆಕಾಶದಿಂದಿಳಿದು ಗಟ್ಟಿಯಾಗಿ ಕೂಗಿ,
קָרֵא בְחַיִל וְכֵן אָמַר גֹּדּוּ אִֽילָנָא וְקַצִּצוּ עַנְפוֹהִי אַתַּרוּ עׇפְיֵהּ וּבַדַּרוּ אִנְבֵּהּ תְּנֻד חֵֽיוְתָא מִן־תַּחְתּוֹהִי וְצִפְּרַיָּא מִן־עַנְפֽוֹהִי׃ | 14 |
೧೪ವೃಕ್ಷವನ್ನು ಕಡಿಯಿರಿ, ಕೊಂಬೆಗಳನ್ನು ಕತ್ತರಿಸಿರಿ, ಎಲೆಗಳನ್ನು ಉದುರಿಸಿರಿ, ಹಣ್ಣುಗಳನ್ನು ಚೆಲ್ಲಿರಿ; ಮೃಗಗಳು ನೆರಳನ್ನು ಬಿಟ್ಟುಬಿಡಲಿ, ಪಕ್ಷಿಗಳು ರೆಂಬೆಗಳನ್ನು ತೊರೆದು ಹೋಗಲಿ!
בְּרַם עִקַּר שׇׁרְשׁוֹהִי בְּאַרְעָא שְׁבֻקוּ וּבֶֽאֱסוּר דִּֽי־פַרְזֶל וּנְחָשׁ בְּדִתְאָא דִּי בָרָא וּבְטַל שְׁמַיָּא יִצְטַבַּע וְעִם־חֵיוְתָא חֲלָקֵהּ בַּעֲשַׂב אַרְעָֽא׃ | 15 |
೧೫ಆದರೆ ಬುಡದ ಮೋಟನ್ನು ನೆಲದಲ್ಲಿ ಉಳಿಸಿ ಕಬ್ಬಿಣ, ತಾಮ್ರಗಳ ಪಟ್ಟಿಯನ್ನು ಅದಕ್ಕೆ ಬಿಗಿಯಿರಿ; ಅಡವಿಯ ಹುಲ್ಲು ಅದರ ಸುತ್ತ ಬೆಳೆದಿರಲಿ, ಆಕಾಶದ ಇಬ್ಬನಿಯು ಅದನ್ನು ತೋಯಿಸಲಿ, ಭೂಮಿಯ ಹುಲ್ಲು ಮೃಗಗಳಿಗೆ ಗತಿಯಾದಂತೆ ಅದಕ್ಕೆ ಗತಿಯಾಗಲಿ.
לִבְבֵהּ מִן־[אֲנָשָׁא] (אנושא) יְשַׁנּוֹן וּלְבַב חֵיוָה יִתְיְהִב לֵהּ וְשִׁבְעָה עִדָּנִין יַחְלְפוּן עֲלֽוֹהִי׃ | 16 |
೧೬ಅದಕ್ಕೆ ಮನುಷ್ಯನ ಹೃದಯವು ಹೋಗಿ ಮೃಗದ ಹೃದಯವು ಬರಲಿ; ಹೀಗೆ ಅದಕ್ಕೆ ಏಳು ವರ್ಷ ಕಳೆಯಲಿ.
בִּגְזֵרַת עִירִין פִּתְגָמָא וּמֵאמַר קַדִּישִׁין שְׁאֵֽלְתָא עַד־דִּבְרַת דִּי יִנְדְּעוּן חַיַּיָּא דִּֽי־שַׁלִּיט (עליא) [עִלָּאָה] בְּמַלְכוּת (אנושא) [אֲנָשָׁא] וּלְמַן־דִּי יִצְבֵּא יִתְּנִנַּהּ וּשְׁפַל אֲנָשִׁים יְקִים (עליה) [עֲלַֽהּ]׃ | 17 |
೧೭ಇದು ಸಾಕ್ಷಿಗಳ ತೀರ್ಮಾನ, ದೇವರ ತೀರ್ಪು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಆಳ್ವಿಕೆಯನ್ನು ತನಗೆ ಬೇಕಾದವರಿಗೆ ಒಪ್ಪಿಸಿ ಕನಿಷ್ಠರನ್ನೂ ಅದರ ಮೇಲೆ ನೇಮಿಸುತ್ತಾನೆಂಬುದು ಜೀವಂತರಿಗೆ ತಿಳಿದುಬರಬೇಕೆಂದೇ ಈ ತೀರ್ಮಾನವಾಯಿತು’ ಎಂದು ಸಾರಿದನು.
דְּנָה חֶלְמָא חֲזֵית אֲנָה מַלְכָּא נְבוּכַדְנֶצַּר (ואנתה) [וְאַנְתְּ] בֵּלְטְשַׁאצַּר פִּשְׁרֵא ׀ אֱמַר כׇּל־קֳבֵל דִּי ׀ כׇּל־חַכִּימֵי מַלְכוּתִי לָֽא־יָכְלִין פִּשְׁרָא לְהוֹדָעוּתַנִי (ואנתה) [וְאַנְתְּ] כָּהֵל דִּי רֽוּחַ־אֱלָהִין קַדִּישִׁין בָּֽךְ׃ | 18 |
೧೮ರಾಜನಾದ ನೆಬೂಕದ್ನೆಚ್ಚರನೆಂಬ ನಾನು ಈ ಕನಸನ್ನು ಕಂಡೆನು; ಬೇಲ್ತೆಶಚ್ಚರನೇ, ನನ್ನ ರಾಜ್ಯದ ಸಕಲ ವಿದ್ವಾಂಸರಲ್ಲಿ ಯಾರೂ ಅದರ ಅರ್ಥವನ್ನು ತಿಳಿಸಲಾರರು; ನೀನು ಅದನ್ನು ತಿಳಿಸು; ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಸಿರುವುದರಿಂದ ನೀನೇ ಅದಕ್ಕೆ ಶಕ್ತನು.”
אֱדַיִן דָּֽנִיֵּאל דִּֽי־שְׁמֵהּ בֵּלְטְשַׁאצַּר אֶשְׁתּוֹמַם כְּשָׁעָה חֲדָה וְרַעְיֹנֹהִי יְבַהֲלֻנֵּהּ עָנֵה מַלְכָּא וְאָמַר בֵּלְטְשַׁאצַּר חֶלְמָא וּפִשְׁרֵא אַֽל־יְבַהֲלָךְ עָנֵה בֵלְטְשַׁאצַּר וְאָמַר מָרִאי חֶלְמָא (לשנאיך) [לְשָֽׂנְאָךְ] וּפִשְׁרֵהּ (לעריך) [לְעָרָֽךְ]׃ | 19 |
೧೯ಆಗ ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನು ತನ್ನ ಬುದ್ಧಿಗೆ ತೋರಿದ್ದನ್ನು ಕಂಡು ಭಯಪಟ್ಟು ಸ್ವಲ್ಪ ಸಮಯ ಸ್ತಬ್ಧನಾದನು. ರಾಜನು ಇದನ್ನು ನೋಡಿ, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ” ಎಂದು ಹೇಳಲು ಬೇಲ್ತೆಶಚ್ಚರನು, “ನನ್ನ ಒಡೆಯನೇ, ಆ ಕನಸು ನಿನ್ನ ಶತ್ರುಗಳಿಗೆ ಫಲಿಸಲಿ, ಅದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ!
אִֽילָנָא דִּי חֲזַיְתָ דִּי רְבָה וּתְקִף וְרוּמֵהּ יִמְטֵא לִשְׁמַיָּא וַחֲזוֹתֵהּ לְכׇל־אַרְעָֽא׃ | 20 |
೨೦“ಯಾವ ವೃಕ್ಷವು ಬೆಳೆದು ಬಲಗೊಂಡು ಆಕಾಶದ ತುದಿಯನ್ನು ಮುಟ್ಟುತ್ತಾ,
וְעׇפְיֵהּ שַׁפִּיר וְאִנְבֵּהּ שַׂגִּיא וּמָזוֹן לְכֹלָּא־בֵהּ תְּחֹתוֹהִי תְּדוּר חֵיוַת בָּרָא וּבְעַנְפוֹהִי יִשְׁכְּנָן צִפְּרֵי שְׁמַיָּֽא׃ | 21 |
೨೧ಲೋಕದವರೆಲ್ಲರಿಗೂ ಕಾಣಿಸುತ್ತಾ, ಅಂದವಾದ ಎಲೆಗಳನ್ನೂ ಬಹಳ ಹಣ್ಣುಗಳನ್ನೂ ಬಿಡುತ್ತಾ, ಎಲ್ಲಕ್ಕೂ ಆಹಾರವನ್ನು ಒದಗಿಸುತ್ತಾ ತನ್ನ ನೆರಳನ್ನು ಭೂಜಂತುಗಳಿಗೆ ಆಶ್ರಯವಾಗಿಯೂ ತನ್ನ ಕೊಂಬೆಗಳನ್ನು ಆಕಾಶ ಪಕ್ಷಿಗಳಿಗೆ ನೆಲೆಯಾಗಿಯೂ ಮಾಡುತ್ತಾ ಕನಸಿನಲ್ಲಿ ನಿನಗೆ ತೋರಿತೋ,
(אנתה) [אַנְתְּ־]הוּא מַלְכָּא דִּי (רבית) [רְבַת] וּתְקֵפְתְּ וּרְבוּתָךְ רְבָת וּמְטָת לִשְׁמַיָּא וְשׇׁלְטָנָךְ לְסוֹף אַרְעָֽא׃ | 22 |
೨೨ಆ ವೃಕ್ಷವು ನೀನೇ; ರಾಜಾ, ನೀನು ಬೆಳೆದು ಬಲಗೊಂಡಿದ್ದೀ, ನಿನ್ನ ಮಹಿಮೆಯು ವೃದ್ಧಿಯಾಗಿ ಆಕಾಶಕ್ಕೆ ಮುಟ್ಟಿದೆ, ನಿನ್ನ ಆಳ್ವಿಕೆಯು ಲೋಕದ ಕಟ್ಟಕಡೆಗೂ ವ್ಯಾಪಿಸಿದೆ.
וְדִי חֲזָה מַלְכָּא עִיר וְקַדִּישׁ נָחִת ׀ מִן־שְׁמַיָּא וְאָמַר גֹּדּוּ אִֽילָנָא וְחַבְּלוּהִי בְּרַם עִקַּר שׇׁרְשׁוֹהִי בְּאַרְעָא שְׁבֻקוּ וּבֶאֱסוּר דִּֽי־פַרְזֶל וּנְחָשׁ בְּדִתְאָא דִּי בָרָא וּבְטַל שְׁמַיָּא יִצְטַבַּע וְעִם־חֵיוַת בָּרָא חֲלָקֵהּ עַד דִּֽי־שִׁבְעָה עִדָּנִין יַחְלְפוּן עֲלֽוֹהִי׃ | 23 |
೨೩“ಕಾವಲುಗಾರನಾದ ದೇವದೂತನು ಆಕಾಶದಿಂದಿಳಿದು, ‘ವೃಕ್ಷವನ್ನು ಕಡಿದು ಹಾಳುಮಾಡಿರಿ; ಆದರೆ ಬುಡದ ಮೋಟನ್ನು ನೆಲದಲ್ಲಿ ಉಳಿಸಿ ಕಬ್ಬಿಣ, ತಾಮ್ರಗಳ ಪಟ್ಟೆಯನ್ನು ಅದಕ್ಕೆ ಬಿಗಿಯಿರಿ, ಅಡವಿಯ ಹುಲ್ಲು ಅದರ ಸುತ್ತ ಬೆಳೆದಿರಲಿ, ಆಕಾಶದ ಇಬ್ಬನಿಯು ಅದನ್ನು ತೋಯಿಸಲಿ, ಅದಕ್ಕೆ ಏಳು ವರ್ಷ ಕಳೆಯುವ ತನಕ ಕಾಡು ಮೃಗಗಳ ಸಹವಾಸದ ಗತಿಯು ಬರಲಿ’ ಎಂದು ಸಾರುವುದನ್ನು ರಾಜನಾದ ನೀನು ನೋಡಿದಿಯಲ್ಲಾ.
דְּנָה פִשְׁרָא מַלְכָּא וּגְזֵרַת (עליא) [עִלָּאָה] הִיא דִּי מְטָת עַל־מָרִאי מַלְכָּֽא׃ | 24 |
೨೪“ರಾಜನೇ ಇದರ ತಾತ್ಪರ್ಯವೇನೆಂದರೆ, ಎನ್ನೊಡೆಯನಾದ ಅರಸನಿಗೆ ಉಂಟಾಗಿರುವ ಪರಾತ್ಪರನಾದ ದೇವರ ತೀರ್ಪು ಹೀಗಿದೆ.
וְלָךְ טָֽרְדִין מִן־אֲנָשָׁא וְעִם־חֵיוַת בָּרָא לֶהֱוֵה מְדֹרָךְ וְעִשְׂבָּא כְתוֹרִין ׀ לָךְ יְטַֽעֲמוּן וּמִטַּל שְׁמַיָּא לָךְ מְצַבְּעִין וְשִׁבְעָה עִדָּנִין יַחְלְפוּן (עליך) [עֲלָךְ] עַד דִּֽי־תִנְדַּע דִּֽי־שַׁלִּיט (עליא) [עִלָּאָה] בְּמַלְכוּת אֲנָשָׁא וּלְמַן־דִּי יִצְבֵּא יִתְּנִנַּֽהּ׃ | 25 |
೨೫ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು, ಆಕಾಶದ ಇಬ್ಬನಿಯು ನಿನ್ನನ್ನು ತೋಯಿಸುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನಗೆ ತಿಳಿದು ಬರುವುದರೊಳಗೆ ಏಳು ವರ್ಷ ಹೀಗೆ ಕಳೆಯುವುದು.
וְדִי אֲמַרוּ לְמִשְׁבַּק עִקַּר שׇׁרְשׁוֹהִי דִּי אִֽילָנָא מַלְכוּתָךְ לָךְ קַיָּמָא מִן־דִּי תִנְדַּע דִּי שַׁלִּטִן שְׁמַיָּֽא׃ | 26 |
೨೬ವೃಕ್ಷದ ಬುಡದ ಮೋಟನ್ನು ಉಳಿಸಿರಿ ಎಂದು ಅಪ್ಪಣೆಯಾಯಿತಲ್ಲಾ; ಇದರ ತಾತ್ಪರ್ಯವೇನೆಂದರೆ ಪರಲೋಕಕ್ಕೆ ಸರ್ವಾಧಿಕಾರ ಉಂಟೆಂಬುವುದನ್ನು ನೀನು ತಿಳಿದುಕೊಂಡ ನಂತರ ನಿನ್ನ ರಾಜ್ಯವು ನಿನಗೆ ಸ್ಥಿರವಾಗುವುದು ಎಂಬುವುದೇ.
לָהֵן מַלְכָּא מִלְכִּי יִשְׁפַּר (עליך) [עֲלָךְ] (וחטיך) [וַחֲטָאָךְ] בְּצִדְקָה פְרֻק וַעֲוָיָתָךְ בְּמִחַן עֲנָיִן הֵן תֶּהֱוֵה אַרְכָה לִשְׁלֵוְתָֽךְ׃ | 27 |
೨೭ಆದಕಾರಣ, ಅರಸನೇ, ಈ ನನ್ನ ಬುದ್ಧಿವಾದವು ನಿನಗೆ ಒಪ್ಪಿಗೆಯಾಗಲಿ, ನೀನು ಧರ್ಮವನ್ನು ಆಚರಿಸಿ ನಿನ್ನ ಪಾಪಗಳನ್ನು ನಾಶಗೊಳಿಸು, ಬಡವರಿಗೆ ಕರುಣೆಯನ್ನು ತೋರಿಸಿ ನಿನ್ನ ಅಪರಾಧಗಳನ್ನು ಧ್ವಂಸಮಾಡು; ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾದೀತು” ಎಂದು ಅರಿಕೆ ಮಾಡಿದನು.
כֹּלָּא מְּטָא עַל־נְבוּכַדְנֶצַּר מַלְכָּֽא׃ | 28 |
೨೮ಇದೆಲ್ಲಾ ರಾಜನಾದ ನೆಬೂಕದ್ನೆಚ್ಚರನ ಅನುಭವಕ್ಕೆ ಬಂತು.
לִקְצָת יַרְחִין תְּרֵֽי־עֲשַׂר עַל־הֵיכַל מַלְכוּתָא דִּי בָבֶל מְהַלֵּךְ הֲוָֽה׃ | 29 |
೨೯ಹನ್ನೆರಡು ತಿಂಗಳು ಕಳೆದನಂತರ ಅವನು ಬಾಬೆಲಿನ ಅರಮನೆಯ ಮಹಡಿಯ ಮೇಲೆ ತಿರುಗಾಡುತ್ತಾ,
עָנֵה מַלְכָּא וְאָמַר הֲלָא דָא־הִיא בָּבֶל רַבְּתָא דִּֽי־אֲנָה בֱנַיְתַהּ לְבֵית מַלְכוּ בִּתְקָף חִסְנִי וְלִיקָר הַדְרִֽי׃ | 30 |
೩೦“ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯ ಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವುದು ಇಗೋ, ಮಹಾ ಪಟ್ಟಣವಾದ ಈ ಬಾಬೆಲ್” ಎಂದು ಕೊಚ್ಚಿಕೊಂಡನು.
עוֹד מִלְּתָא בְּפֻם מַלְכָּא קָל מִן־שְׁמַיָּא נְפַל לָךְ אָֽמְרִין נְבוּכַדְנֶצַּר מַלְכָּא מַלְכוּתָא עֲדָת מִנָּֽךְ׃ | 31 |
೩೧ಈ ಮಾತು ರಾಜನ ಬಾಯಿಂದ ಹೊರಡುತ್ತಿರುವಾಗ, “ಅರಸನಾದ ನೆಬೂಕದ್ನೆಚ್ಚರನೇ, ನಿನಗಾದ ದೈವೋಕ್ತಿಯನ್ನು ಕೇಳು;
וּמִן־אֲנָשָׁא לָךְ טָֽרְדִין וְֽעִם־חֵיוַת בָּרָא מְדֹרָךְ עִשְׂבָּא כְתוֹרִין לָךְ יְטַעֲמוּן וְשִׁבְעָה עִדָּנִין יַחְלְפוּן (עליך) [עֲלָךְ] עַד דִּֽי־תִנְדַּע דִּֽי־שַׁלִּיט (עליא) [עִלָּאָה] בְּמַלְכוּת אֲנָשָׁא וּלְמַן־דִּי יִצְבֵּא יִתְּנִנַּֽהּ׃ | 32 |
೩೨ರಾಜ್ಯವು ನಿನ್ನಿಂದ ತೊಲಗಿದೆ, ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನ್ನ ತಿಳಿವಳಿಕೆಗೆ ಬರುವುದರೊಳಗೆ ಏಳು ವರ್ಷ ನಿನಗೆ ಹೀಗೆ ಕಳೆಯುವುದು” ಎಂದು ಆಕಾಶವಾಣಿಯಾಯಿತು.
בַּהּ־שַׁעֲתָא מִלְּתָא סָפַת עַל־נְבוּכַדְנֶצַּר וּמִן־אֲנָשָׁא טְרִיד וְעִשְׂבָּא כְתוֹרִין יֵאכֻל וּמִטַּל שְׁמַיָּא גִּשְׁמֵהּ יִצְטַבַּע עַד דִּי שַׂעְרֵהּ כְּנִשְׁרִין רְבָה וְטִפְרוֹהִי כְצִפְּרִֽין׃ | 33 |
೩೩ಈ ನುಡಿಯು ನೆಬೂಕದ್ನೆಚ್ಚರನಲ್ಲಿ ತಕ್ಷಣವೇ ನೆರವೇರಿತು; ಅವನು ಮನುಷ್ಯರೊಳಗಿಂದ ತಳ್ಳಲ್ಪಟ್ಟು, ಎತ್ತುಗಳಂತೆ ಹುಲ್ಲು ಮೇಯುತ್ತಾ, ಆಕಾಶದ ಇಬ್ಬನಿಯಿಂದ ನೆನೆಯುತ್ತಾ ಇದ್ದನು; ಅವನ ಕೂದಲು ಹದ್ದುಗಳ ಗರಿಯಂತೆಯೂ, ಅವನ ಉಗುರು ಹಕ್ಕಿಗಳ ಉಗುರಿನ ಹಾಗೂ ಬೆಳೆದವು.
וְלִקְצָת יֽוֹמַיָּא אֲנָה נְבוּכַדְנֶצַּר עַיְנַי ׀ לִשְׁמַיָּא נִטְלֵת וּמַנְדְּעִי עֲלַי יְתוּב (ולעליא) [וּלְעִלָּאָה] בָּרְכֵת וּלְחַי עָלְמָא שַׁבְּחֵת וְהַדְּרֵת דִּי שׇׁלְטָנֵהּ שׇׁלְטָן עָלַם וּמַלְכוּתֵהּ עִם־דָּר וְדָֽר׃ | 34 |
೩೪ನೇಮಿಸಿದ ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಪರಲೋಕದ ಕಡೆಗೆ ಕಣ್ಣೆತ್ತಲು ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು. “ಆಗ ನಾನು ಪರಾತ್ಪರನಾದ ದೇವರನ್ನು ಕೊಂಡಾಡಿ, ಸದಾ ಜೀವಸ್ವರೂಪನಾದವನಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆನು; ಆತನ ಆಳ್ವಿಕೆಯು ಶಾಶ್ವತ, ಆತನ ರಾಜ್ಯವು ತಲತಲಾಂತರಕ್ಕೂ ಸ್ಥಿರವಾಗಿರುವುದು.
וְכׇל־[דָּיְרֵי] (דארי) אַרְעָא כְּלָה חֲשִׁיבִין וּֽכְמִצְבְּיֵהּ עָבֵד בְּחֵיל שְׁמַיָּא (ודארי) [וְדָיְרֵי] אַרְעָא וְלָא אִיתַי דִּֽי־יְמַחֵא בִידֵהּ וְיֵאמַר לֵהּ מָה עֲבַֽדְתְּ׃ | 35 |
೩೫ಭೂನಿವಾಸಿಗಳೆಲ್ಲರೂ ಆತನ ದೃಷ್ಟಿಯಲ್ಲಿ ಶೂನ್ಯರಾಗಿ ಪರಲೋಕ ಸೈನ್ಯದವರಲ್ಲಿಯೂ, ಭೂಲೋಕದವರಲ್ಲಿಯೂ ತನ್ನ ಚಿತ್ತದ ಪ್ರಕಾರ ಮಾಡುತ್ತಾನೆ; ಆತನ ಶಕ್ತಿಯುತ ಕೈಯನ್ನು ತಡೆಹಿಡಿಯಲು ಸಾಧ್ಯವಿಲ್ಲ ‘ನೀನು ಏನು ಮಾಡುತ್ತೀ?’” ಎಂದು ಯಾರೂ ಕೇಳಲಾರರು.
בֵּהּ־זִמְנָא מַנְדְּעִי ׀ יְתוּב עֲלַי וְלִיקַר מַלְכוּתִי הַדְרִי וְזִיוִי יְתוּב עֲלַי וְלִי הַדָּֽבְרַי וְרַבְרְבָנַי יְבַעוֹן וְעַל־מַלְכוּתִי הׇתְקְנַת וּרְבוּ יַתִּירָה הוּסְפַת לִֽי׃ | 36 |
೩೬ಅದೇ ಸಮಯದಲ್ಲಿ ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು; ನನ್ನ ಪ್ರಭಾವ ವೈಭವಗಳು ನನಗೆ ಮತ್ತೆ ಲಭಿಸಿ ನನ್ನ ರಾಜ್ಯದ ಕೀರ್ತಿಯು ಪ್ರಕಾಶಿಸಿತು; ನನ್ನ ಮಂತ್ರಿಗಳೂ ಅಧಿಪತಿಗಳೂ ನನ್ನನ್ನು ಸಮಾಧಾನಪಡಿಸಿದರು; ನನ್ನ ರಾಜ್ಯದಲ್ಲಿ ರಾಜನಾಗಿ ನೆಲೆಗೊಂಡೆನು; ನನ್ನ ಮಹಿಮೆಯು ಅತ್ಯಧಿಕವಾಯಿತು.
כְּעַן אֲנָה נְבֻכַדְנֶצַּר מְשַׁבַּח וּמְרוֹמֵם וּמְהַדַּר לְמֶלֶךְ שְׁמַיָּא דִּי כׇל־מַעֲבָדוֹהִי קְשֹׁט וְאֹרְחָתֵהּ דִּין וְדִי מַהְלְכִין בְּגֵוָה יָכִל לְהַשְׁפָּלָֽה׃ | 37 |
೩೭ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ ಕೀರ್ತಿಸುತ್ತೇನೆ. ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.