< דברים 28 >

וְהָיָה אִם־שָׁמוֹעַ תִּשְׁמַע בְּקוֹל יְהֹוָה אֱלֹהֶיךָ לִשְׁמֹר לַעֲשׂוֹת אֶת־כׇּל־מִצְוֺתָיו אֲשֶׁר אָנֹכִי מְצַוְּךָ הַיּוֹם וּנְתָנְךָ יְהֹוָה אֱלֹהֶיךָ עֶלְיוֹן עַל כׇּל־גּוֹיֵי הָאָֽרֶץ׃ 1
ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದರೆ, ಆತನು ಭೂಮಿಯ ಮೇಲಿರುವ ಎಲ್ಲಾ ಜನಾಂಗಗಳಿಗಿಂತಲೂ ನಿಮ್ಮನ್ನು ಉನ್ನತಸ್ಥಿತಿಗೆ ತರುವನು.
וּבָאוּ עָלֶיךָ כׇּל־הַבְּרָכוֹת הָאֵלֶּה וְהִשִּׂיגֻךָ כִּי תִשְׁמַע בְּקוֹל יְהֹוָה אֱלֹהֶֽיךָ׃ 2
ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು ನಡೆದರೆ ಈ ಶುಭಗಳೆಲ್ಲಾ ನಿಮಗೆ ಪ್ರಾಪ್ತವಾಗುವವು. ಅವು ಯಾವುವೆಂದರೆ:
בָּרוּךְ אַתָּה בָּעִיר וּבָרוּךְ אַתָּה בַּשָּׂדֶֽה׃ 3
ನಿಮಗೆ ಊರಿನಲ್ಲಿಯೂ ಮತ್ತು ಹೊಲದಲ್ಲಿಯೂ ಶುಭವುಂಟಾಗುವುದು.
בָּרוּךְ פְּרִֽי־בִטְנְךָ וּפְרִי אַדְמָתְךָ וּפְרִי בְהֶמְתֶּךָ שְׁגַר אֲלָפֶיךָ וְעַשְׁתְּרוֹת צֹאנֶֽךָ׃ 4
ನಿಮ್ಮ ಸಂತಾನದವರಿಗೂ, ವ್ಯವಸಾಯಗಳಿಗೂ, ದನ, ಕುರಿ ಮುಂತಾದ ಪಶುಗಳಿಗೂ ಶುಭವುಂಟಾಗುವುದು.
בָּרוּךְ טַנְאֲךָ וּמִשְׁאַרְתֶּֽךָ׃ 5
ನಿಮ್ಮ ಪುಟ್ಟಿಗಳಿಗೂ ಮತ್ತು ಕೊಣವಿಗೆಗಳಿಗೂ ಶುಭವುಂಟಾಗುವುದು.
בָּרוּךְ אַתָּה בְּבֹאֶךָ וּבָרוּךְ אַתָּה בְּצֵאתֶֽךָ׃ 6
ನೀವು ಹೊರಗೆ ಹೋಗುವಾಗಲೂ ಒಳಗೆ ಬರುವಾಗಲೂ ಶುಭವುಂಟಾಗುವುದು.
יִתֵּן יְהֹוָה אֶת־אֹיְבֶיךָ הַקָּמִים עָלֶיךָ נִגָּפִים לְפָנֶיךָ בְּדֶרֶךְ אֶחָד יֵצְאוּ אֵלֶיךָ וּבְשִׁבְעָה דְרָכִים יָנוּסוּ לְפָנֶֽיךָ׃ 7
ನಿಮ್ಮ ವಿರುದ್ಧವಾಗಿ ಬರುವ ಶತ್ರುಗಳು ನಿಮ್ಮಿಂದ ಸೋತುಹೋಗುವಂತೆ ಯೆಹೋವನು ಮಾಡುವನು; ಅವರು ಒಂದೇ ದಾರಿಯಿಂದ ನಿಮ್ಮ ವಿರುದ್ಧವಾಗಿ ಬಂದರೂ ಏಳು ದಾರಿಗಳಿಂದ ಓಡಿಹೋಗುವರು.
יְצַו יְהֹוָה אִתְּךָ אֶת־הַבְּרָכָה בַּאֲסָמֶיךָ וּבְכֹל מִשְׁלַח יָדֶךָ וּבֵרַכְךָ בָּאָרֶץ אֲשֶׁר־יְהֹוָה אֱלֹהֶיךָ נֹתֵן לָֽךְ׃ 8
ನಿಮ್ಮ ಕಣಜಗಳು ಯಾವಾಗಲೂ ತುಂಬಿರುವಂತೆಯೂ ಮತ್ತು ನಿಮ್ಮ ಪ್ರಯತ್ನಗಳೆಲ್ಲಾ ಸಫಲವಾಗುವಂತೆಯೂ ನಿಮ್ಮ ದೇವರಾದ ಯೆಹೋವನು ನಿಮಗೆ ಶುಭವನ್ನು ಅನುಗ್ರಹಿಸುವನು. ಆತನು ನಿಮಗೆ ಕೊಡುವ ದೇಶದಲ್ಲಿ ನಿಮಗೆ ಶುಭವನ್ನೇ ಉಂಟುಮಾಡುವನು.
יְקִֽימְךָ יְהֹוָה לוֹ לְעַם קָדוֹשׁ כַּאֲשֶׁר נִֽשְׁבַּֽע־לָךְ כִּי תִשְׁמֹר אֶת־מִצְוֺת יְהֹוָה אֱלֹהֶיךָ וְהָלַכְתָּ בִּדְרָכָֽיו׃ 9
ನೀವು ನಿಮ್ಮ ದೇವರಾದ ಯೆಹೋವನ ಆಜ್ಞೆಗಳನ್ನು ಅನುಸರಿಸಿ ಆತನು ಹೇಳಿದ ಮಾರ್ಗದಲ್ಲೇ ನಡೆದರೆ, ಆತನು ವಾಗ್ದಾನಮಾಡಿದಂತೆ ನಿಮ್ಮನ್ನು ತನಗೋಸ್ಕರ ಮೀಸಲಾದ ಜನರನ್ನಾಗಿ ಸ್ಥಾಪಿಸುವನು.
וְרָאוּ כׇּל־עַמֵּי הָאָרֶץ כִּי שֵׁם יְהֹוָה נִקְרָא עָלֶיךָ וְיָֽרְאוּ מִמֶּֽךָּ׃ 10
೧೦ಭೂಮಿಯಲ್ಲಿರುವ ಎಲ್ಲಾ ಜನಗಳೂ ನಿಮ್ಮನ್ನು ಯೆಹೋವನ ಜನರೆಂದು ತಿಳಿದುಕೊಂಡು ನಿಮಗೆ ಭಯಪಡುವರು.
וְהוֹתִרְךָ יְהֹוָה לְטוֹבָה בִּפְרִי בִטְנְךָ וּבִפְרִי בְהֶמְתְּךָ וּבִפְרִי אַדְמָתֶךָ עַל הָאֲדָמָה אֲשֶׁר נִשְׁבַּע יְהֹוָה לַאֲבֹתֶיךָ לָתֶת לָֽךְ׃ 11
೧೧ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣ ಮಾಡಿದ ಮೇರೆಗೆ ನಿಮಗೆ ಕೊಡುವ ದೇಶದಲ್ಲಿ ಆತನು ನಿಮ್ಮ ಸಂತಾನ, ಪಶು ಮತ್ತು ವ್ಯವಸಾಯಗಳಲ್ಲಿ ಸಮೃದ್ಧಿಯನ್ನು ಉಂಟುಮಾಡುವನು.
יִפְתַּח יְהֹוָה ׀ לְךָ אֶת־אוֹצָרוֹ הַטּוֹב אֶת־הַשָּׁמַיִם לָתֵת מְטַֽר־אַרְצְךָ בְּעִתּוֹ וּלְבָרֵךְ אֵת כׇּל־מַעֲשֵׂה יָדֶךָ וְהִלְוִיתָ גּוֹיִם רַבִּים וְאַתָּה לֹא תִלְוֶֽה׃ 12
೧೨ಯೆಹೋವನು ಆಕಾಶದಲ್ಲಿರುವ ತನ್ನ ಜಲನಿಧಿಯನ್ನು ತೆರೆದು ನಿಮ್ಮ ದೇಶದ ಮೇಲೆ ಬೆಳೆಗೆ ಬೇಕಾದ ಹಾಗೆ ಮಳೆಯನ್ನು ಸುರಿಸಿ, ನಿಮ್ಮ ಎಲ್ಲಾ ವ್ಯವಸಾಯವು ಫಲಭರಿತವಾಗುವಂತೆ ಸಾಫಲ್ಯತೆ ಉಂಟುಮಾಡುವನು. ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಸಾಲತೆಗೆದುಕೊಳ್ಳುವುದಿಲ್ಲ.
וּנְתָֽנְךָ יְהֹוָה לְרֹאשׁ וְלֹא לְזָנָב וְהָיִיתָ רַק לְמַעְלָה וְלֹא תִהְיֶה לְמָטָּה כִּֽי־תִשְׁמַע אֶל־מִצְוֺת ׀ יְהֹוָה אֱלֹהֶיךָ אֲשֶׁר אָנֹכִי מְצַוְּךָ הַיּוֹם לִשְׁמֹר וְלַעֲשֽׂוֹת׃ 13
೧೩ನಿಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೇ ಲಕ್ಷ್ಯವಿಟ್ಟು ಕೇಳಿದರೆ, ನೀವು ಎಲ್ಲರಿಗಿಂತಲೂ ಮೇಲಿನವರಾಗಿರುವಿರೇ ಹೊರತು ಇತರರಿಗೆ ಅಧೀನರಾಗುವುದಿಲ್ಲ.
וְלֹא תָסוּר מִכׇּל־הַדְּבָרִים אֲשֶׁר אָנֹכִי מְצַוֶּה אֶתְכֶם הַיּוֹם יָמִין וּשְׂמֹאול לָלֶכֶת אַחֲרֵי אֱלֹהִים אֲחֵרִים לְעׇבְדָֽם׃ 14
೧೪ನಾನು ಈಗ ನಿಮಗೆ ಬೋಧಿಸುವ ಮಾತುಗಳನ್ನು ಬಿಟ್ಟು ಎಡಕ್ಕಾಗಲಿ ಅಥವಾ ಬಲಕ್ಕಾಗಲಿ ತಿರುಗದೆ, ಬೇರೆ ದೇವರುಗಳನ್ನು ಅವಲಂಬಿಸದೆ, ಅವುಗಳನ್ನೇ ಅನುಸರಿಸಿ ನಡೆದರೆ ಆತನು ಇತರರಿಗೆ ನಿಮ್ಮನ್ನು ಅಧೀನಮಾಡದೆ ಎಲ್ಲರಿಗೂ ಶಿರಸ್ಸನ್ನಾಗಿಯೇ ಮಾಡುವನು.
וְהָיָה אִם־לֹא תִשְׁמַע בְּקוֹל יְהֹוָה אֱלֹהֶיךָ לִשְׁמֹר לַעֲשׂוֹת אֶת־כׇּל־מִצְוֺתָיו וְחֻקֹּתָיו אֲשֶׁר אָנֹכִי מְצַוְּךָ הַיּוֹם וּבָאוּ עָלֶיךָ כׇּל־הַקְּלָלוֹת הָאֵלֶּה וְהִשִּׂיגֽוּךָ׃ 15
೧೫ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ ಈ ಶಾಪಗಳು ನಿಮಗೆ ಪ್ರಾಪ್ತವಾಗುವವು:
אָרוּר אַתָּה בָּעִיר וְאָרוּר אַתָּה בַּשָּׂדֶֽה׃ 16
೧೬ನಿಮಗೆ ಊರಿನಲ್ಲಿಯೂ ಮತ್ತು ಅಡವಿಯಲ್ಲಿಯೂ ಶಾಪ ಉಂಟಾಗುವುದು.
אָרוּר טַנְאֲךָ וּמִשְׁאַרְתֶּֽךָ׃ 17
೧೭ನಿಮ್ಮ ಪುಟ್ಟಿಗಳಿಗೂ ಮತ್ತು ಕೊಣವಿಗೆಗಳಿಗೂ ಶಾಪ ಉಂಟಾಗುವುದು.
אָרוּר פְּרִֽי־בִטְנְךָ וּפְרִי אַדְמָתֶךָ שְׁגַר אֲלָפֶיךָ וְעַשְׁתְּרֹת צֹאנֶֽךָ׃ 18
೧೮ನಿಮ್ಮ ಸಂತಾನ, ವ್ಯವಸಾಯ, ದನ ಮತ್ತು ಕುರಿಗಳಿಗೂ ಶಾಪ ಉಂಟಾಗುವುದು.
אָרוּר אַתָּה בְּבֹאֶךָ וְאָרוּר אַתָּה בְּצֵאתֶֽךָ׃ 19
೧೯ನೀವು ಹೊರಗೆ ಹೋಗುವಾಗಲೂ, ಒಳಗೆ ಬರುವಾಗಲೂ ಶಾಪ ಉಂಟಾಗುವುದು.
יְשַׁלַּח יְהֹוָה ׀ בְּךָ אֶת־הַמְּאֵרָה אֶת־הַמְּהוּמָה וְאֶת־הַמִּגְעֶרֶת בְּכׇל־מִשְׁלַח יָדְךָ אֲשֶׁר תַּעֲשֶׂה עַד הִשָּׁמֶדְךָ וְעַד־אֲבׇדְךָ מַהֵר מִפְּנֵי רֹעַ מַֽעֲלָלֶיךָ אֲשֶׁר עֲזַבְתָּֽנִי׃ 20
೨೦ನೀವು ದುರ್ನಡತೆಯುಳ್ಳವರಾಗಿ ಯೆಹೋವನನ್ನು ಬಿಟ್ಟಿದ್ದರಿಂದ ಆತನು ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿಯೂ ವಿಪತ್ತು, ಕಳವಳ, ಶಾಪ ಇವುಗಳನ್ನು ಉಂಟುಮಾಡುತ್ತಾ ನಿಮ್ಮನ್ನು ಬೇಗನೆ ನಾಶಮಾಡುವನು.
יַדְבֵּק יְהֹוָה בְּךָ אֶת־הַדָּבֶר עַד כַּלֹּתוֹ אֹֽתְךָ מֵעַל הָאֲדָמָה אֲשֶׁר־אַתָּה בָא־שָׁמָּה לְרִשְׁתָּֽהּ׃ 21
೨೧ವ್ಯಾಧಿಯು ನಿಮಗೆ ಹತ್ತಿಕೊಂಡೇ ಇರುವಂತೆ ಯೆಹೋವನು ಮಾಡಿ, ನೀವು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮಲ್ಲಿ ಒಬ್ಬರೂ ಉಳಿಯದಂತೆ ಮಾಡುವನು.
יַכְּכָה יְהֹוָה בַּשַּׁחֶפֶת וּבַקַּדַּחַת וּבַדַּלֶּקֶת וּבַֽחַרְחֻר וּבַחֶרֶב וּבַשִּׁדָּפוֹן וּבַיֵּרָקוֹן וּרְדָפוּךָ עַד אׇבְדֶֽךָ׃ 22
೨೨ಆತನು ನಿಮ್ಮನ್ನು ಕ್ಷಯರೋಗ, ಚಳಿಜ್ವರ, ಉರಿತ, ಉಷ್ಣಜ್ವರಗಳಿಂದಲೂ, ದೇಶವನ್ನು ಕ್ಷಾಮದಿಂದಲೂ ಮತ್ತು ಬೆಳೆಯನ್ನು ಕಾಡಿನ ಬಿಸಿಗಾಳಿಗಳಿಂದಲೂ ನರಳುವಂತೆ ಮಾಡುವನು. ನೀವು ಸಾಯುವ ತನಕ ಇವು ನಿಮ್ಮನ್ನು ಬೆನ್ನತ್ತುವವು.
וְהָיוּ שָׁמֶיךָ אֲשֶׁר עַל־רֹאשְׁךָ נְחֹשֶׁת וְהָאָרֶץ אֲשֶׁר־תַּחְתֶּיךָ בַּרְזֶֽל׃ 23
೨೩ಮೇಲೆ ಆಕಾಶವು ಮಳೆಸುರಿಸದೆ ತಾಮ್ರದಂತೆಯೂ ಮತ್ತು ಕೆಳಗೆ ಭೂಮಿಯು ಬೆಳೆಕೊಡದೆ ಕಬ್ಬಿಣದಂತೆಯೂ ಇರುವವು.
יִתֵּן יְהֹוָה אֶת־מְטַר אַרְצְךָ אָבָק וְעָפָר מִן־הַשָּׁמַיִם יֵרֵד עָלֶיךָ עַד הִשָּׁמְדָֽךְ׃ 24
೨೪ನಿಮ್ಮ ದೇಶದಲ್ಲಿ ಯೆಹೋವನು ಆಕಾಶದಿಂದ ಮಳೆಗೆ ಬದಲಾಗಿ ಧೂಳನ್ನೂ ಮತ್ತು ಉಸುಬನ್ನೂ ನಿಮ್ಮ ಮೇಲೆ ಸುರಿಸುವನು; ಅದುದರಿಂದ ನೀವು ನಾಶವಾಗಿ ಹೋಗುವಿರಿ.
יִתֶּנְךָ יְהֹוָה ׀ נִגָּף לִפְנֵי אֹיְבֶיךָ בְּדֶרֶךְ אֶחָד תֵּצֵא אֵלָיו וּבְשִׁבְעָה דְרָכִים תָּנוּס לְפָנָיו וְהָיִיתָ לְזַֽעֲוָה לְכֹל מַמְלְכוֹת הָאָֽרֶץ׃ 25
೨೫ನೀವು ಶತ್ರುಗಳಿಂದ ಸೋಲನ್ನು ಅನುಭವಿಸುವಂತೆ ಯೆಹೋವನು ಮಾಡುವನು; ನೀವು ಒಂದೇ ದಾರಿಯಿಂದ ಅವರೆದುರಿಗೆ ಹೋಗಿ ಏಳು ದಾರಿಗಳಿಂದ ಓಡಿಹೋಗುವಿರಿ. ಲೋಕದ ಎಲ್ಲಾ ರಾಜ್ಯಗಳವರೂ ಇದನ್ನು ಕಂಡು ಬೆರಗಾಗುವರು.
וְהָיְתָה נִבְלָֽתְךָ לְמַֽאֲכָל לְכׇל־עוֹף הַשָּׁמַיִם וּלְבֶהֱמַת הָאָרֶץ וְאֵין מַחֲרִֽיד׃ 26
೨೬ನಿಮ್ಮ ಹೆಣಗಳು ಪಕ್ಷಿಗಳಿಗೂ ಮತ್ತು ಕಾಡು ಮೃಗಗಳಿಗೂ ಆಹಾರವಾಗುವವು; ಅವುಗಳನ್ನು ಬೆದರಿಸುವವರು ಯಾರೂ ಇರುವುದಿಲ್ಲ.
יַכְּכָה יְהֹוָה בִּשְׁחִין מִצְרַיִם (ובעפלים) [וּבַטְּחֹרִים] וּבַגָּרָב וּבֶחָרֶס אֲשֶׁר לֹא־תוּכַל לְהֵרָפֵֽא׃ 27
೨೭ಐಗುಪ್ತ್ಯರ ಹುಣ್ಣು, ಬಾವು, ತುರಿಕಜ್ಜಿ ಮುಂತಾದ ವಾಸಿಯಾಗದ ರೋಗಗಳಿಂದ ಯೆಹೋವನು ನಿಮ್ಮನ್ನು ಬಾಧಿಸುವನು.
יַכְּכָה יְהֹוָה בְּשִׁגָּעוֹן וּבְעִוָּרוֹן וּבְתִמְהוֹן לֵבָֽב׃ 28
೨೮ಚಿತ್ತಭ್ರಮಣೆ, ಕುರುಡುತನ, ಮನೋವಿಸ್ಮಯ ಇವುಗಳಿಂದ ಯೆಹೋವನು ನಿಮ್ಮನ್ನು ಬಾಧಿಸುವನು.
וְהָיִיתָ מְמַשֵּׁשׁ בַּֽצׇּהֳרַיִם כַּאֲשֶׁר יְמַשֵּׁשׁ הַֽעִוֵּר בָּאֲפֵלָה וְלֹא תַצְלִיחַ אֶת־דְּרָכֶיךָ וְהָיִיתָ אַךְ עָשׁוּק וְגָזוּל כׇּל־הַיָּמִים וְאֵין מוֹשִֽׁיעַ׃ 29
೨೯ನೀವು ಕುರುಡರಂತೆ ಮಧ್ಯಾಹ್ನದಲ್ಲಿಯೂ ಕತ್ತಲಾಯಿತೆಂದು ತಡವರಿಸುತ್ತಾ ಇರುವಿರಿ; ನೀವು ಮಾಡುವ ಯಾವ ಕೆಲಸವೂ ಕೈಗೂಡುವುದಿಲ್ಲ. ಅನ್ಯರು ಯಾವಾಗಲೂ ನಿಮ್ಮನ್ನು ಪೀಡಿಸುತ್ತಾ ನಿಮ್ಮ ಸೊತ್ತನ್ನು ಸೂರೆಮಾಡುತ್ತಾ ಇರುವರು; ತಪ್ಪಿಸುವವರು ಯಾರೂ ಇರುವುದಿಲ್ಲ.
אִשָּׁה תְאָרֵשׂ וְאִישׁ אַחֵר (ישגלנה) [יִשְׁכָּבֶנָּה] בַּיִת תִּבְנֶה וְלֹא־תֵשֵׁב בּוֹ כֶּרֶם תִּטַּע וְלֹא תְחַלְּלֶֽנּוּ׃ 30
೩೦ನೀವು ಮದುವೆಮಾಡಿಕೊಂಡ ಸ್ತ್ರೀಯನ್ನು ಮತ್ತೊಬ್ಬನು ಮಾನಭಂಗಪಡಿಸುವನು; ನೀವು ಕಟ್ಟಿಕೊಂಡ ಮನೆಯಲ್ಲಿ ಮತ್ತೊಬ್ಬನು ವಾಸಮಾಡುವನು; ನೀವು ಮಾಡಿಕೊಂಡ ದ್ರಾಕ್ಷಿತೋಟದ ಬೆಳೆಯು ನಿಮಗೆ ದೊರೆಯುವುದಿಲ್ಲ.
שׁוֹרְךָ טָבוּחַ לְעֵינֶיךָ וְלֹא תֹאכַל מִמֶּנּוּ חֲמֹֽרְךָ גָּזוּל מִלְּפָנֶיךָ וְלֹא יָשׁוּב לָךְ צֹֽאנְךָ נְתֻנוֹת לְאֹיְבֶיךָ וְאֵין לְךָ מוֹשִֽׁיעַ׃ 31
೩೧ನಿಮ್ಮ ದನಗಳನ್ನು ನಿಮ್ಮ ಕಣ್ಣು ಮುಂದೆ ಕೊಯ್ಯುವರು; ಅವುಗಳ ಮಾಂಸವು ನಿಮಗೆ ಸಿಕ್ಕುವುದಿಲ್ಲ. ನಿಮ್ಮ ಕತ್ತೆಯನ್ನು ನಿಮ್ಮ ಮುಂದೆಯೇ ಬಲಾತ್ಕಾರದಿಂದ ಹಿಡಿದುಕೊಂಡುಹೋಗುವರು. ಕೇಳಿದರೆ ನಿಮಗೆ ಹಿಂದಕ್ಕೆ ಕೊಡುವುದಿಲ್ಲ. ನಿಮ್ಮ ಆಡು ಮತ್ತು ಕುರಿಗಳು ಶತ್ರುಗಳ ಪಾಲಾಗುವವು. ನಿಮಗೆ ರಕ್ಷಕರು ಯಾರೂ ಇರುವುದಿಲ್ಲ.
בָּנֶיךָ וּבְנֹתֶיךָ נְתֻנִים לְעַם אַחֵר וְעֵינֶיךָ רֹאוֹת וְכָלוֹת אֲלֵיהֶם כׇּל־הַיּוֹם וְאֵין לְאֵל יָדֶֽךָ׃ 32
೩೨ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳನ್ನು ನಿಮ್ಮ ಮುಂದೆಯೇ ಹಿಡಿದು ಅನ್ಯರಿಗೆ ವಶಪಡಿಸುವರು; ನೀವು ಹಗಲೆಲ್ಲಾ ಅವರನ್ನು ಕಾಣಬೇಕೆಂದು ಹಂಬಲಿಸುತ್ತಾ ಕಂಗೆಡುವಿರಿ; ಆದರೆ ನಿಮ್ಮ ಪ್ರಯತ್ನವೇನೂ ಸಾಗುವುದಿಲ್ಲ.
פְּרִי אַדְמָֽתְךָ וְכׇל־יְגִיעֲךָ יֹאכַל עַם אֲשֶׁר לֹא־יָדָעְתָּ וְהָיִיתָ רַק עָשׁוּק וְרָצוּץ כׇּל־הַיָּמִֽים׃ 33
೩೩ನಿಮಗೆ ಗುರುತೇ ಇಲ್ಲದ ಜನಾಂಗದವರು ಬಂದು ನಿಮ್ಮ ದೇಶದ ಬೆಳೆಯನ್ನೂ ಮತ್ತು ನಿಮ್ಮ ಕಷ್ಟಾರ್ಜಿತವನ್ನೂ ತಿಂದುಬಿಡುವರು. ನೀವಾದರೋ ಯಾವಾಗಲೂ ಹಿಂಸೆಗೂ ಬಲಾತ್ಕಾರಕ್ಕೂ ಗುರಿಯಾಗಿ,
וְהָיִיתָ מְשֻׁגָּע מִמַּרְאֵה עֵינֶיךָ אֲשֶׁר תִּרְאֶֽה׃ 34
೩೪ನಿಮ್ಮ ಮುಂದೆ ನಡೆಯುವ ಸಂಗತಿಗಳ ದೆಸೆಯಿಂದ ಹುಚ್ಚರಾಗಿ ಹೋಗುವಿರಿ.
יַכְּכָה יְהֹוָה בִּשְׁחִין רָע עַל־הַבִּרְכַּיִם וְעַל־הַשֹּׁקַיִם אֲשֶׁר לֹא־תוּכַל לְהֵרָפֵא מִכַּף רַגְלְךָ וְעַד קׇדְקֳדֶֽךָ׃ 35
೩೫ಯೆಹೋವನು ನಿಮ್ಮ ಮೊಣಕಾಲುಗಳಲ್ಲಿಯೂ, ತೊಡೆಗಳಲ್ಲಿಯೂ ಮತ್ತು ಅಂಗಾಲು ಮೊದಲುಗೊಂಡು ನಡುನೆತ್ತಿಯ ವರೆಗೂ ವಾಸಿಯಾಗದ ಕೆಟ್ಟ ಹುಣ್ಣುಗಳನ್ನು ಹುಟ್ಟಿಸಿ ಬಾಧಿಸುವನು.
יוֹלֵךְ יְהֹוָה אֹתְךָ וְאֶֽת־מַלְכְּךָ אֲשֶׁר תָּקִים עָלֶיךָ אֶל־גּוֹי אֲשֶׁר לֹא־יָדַעְתָּ אַתָּה וַאֲבֹתֶיךָ וְעָבַדְתָּ שָּׁם אֱלֹהִים אֲחֵרִים עֵץ וָאָֽבֶן׃ 36
೩೬ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಜನಾಂಗದವರ ದೇಶಕ್ಕೆ ಯೆಹೋವನು ನಿಮ್ಮನ್ನೂ ಮತ್ತು ನೀವು ನೇಮಿಸಿಕೊಳ್ಳುವ ಅರಸರನ್ನೂ ಒಯ್ಯುವನು; ಅಲ್ಲಿ ನೀವು ಮರದ ದೇವರುಗಳನ್ನೂ ಮತ್ತು ಕಲ್ಲಿನ ದೇವರುಗಳನ್ನೂ ಸೇವಿಸುವಿರಿ.
וְהָיִיתָ לְשַׁמָּה לְמָשָׁל וְלִשְׁנִינָה בְּכֹל הָֽעַמִּים אֲשֶׁר־יְנַהֶגְךָ יְהֹוָה שָֽׁמָּה׃ 37
೩೭ಯೆಹೋವನು ನಿಮ್ಮನ್ನು ನಡೆಸುವ ಜನಾಂಗಗಳಲ್ಲಿ ನೀವು ಭೀಕರತೆಗೂ, ಗಾದೆಗೂ ಮತ್ತು ಪರಿಹಾಸ್ಯಕ್ಕೂ ಗುರಿಯಾಗುವಿರಿ.
זֶרַע רַב תּוֹצִיא הַשָּׂדֶה וּמְעַט תֶּאֱסֹף כִּי יַחְסְלֶנּוּ הָאַרְבֶּֽה׃ 38
೩೮ನೀವು ಹೊಲದಲ್ಲಿ ಎಷ್ಟು ಬೀಜವನ್ನು ಬಿತ್ತಿದ್ದರೂ ಮಿಡತೆಯ ದಂಡು ಬಂದು ಅದನ್ನು ತಿಂದು ಬಿಡುವುದರಿಂದ ನಿಮಗೆ ದೊರೆಯುವ ಬೆಳೆ ಅತ್ಯಲ್ಪವಾಗುವುದು.
כְּרָמִים תִּטַּע וְעָבָדְתָּ וְיַיִן לֹֽא־תִשְׁתֶּה וְלֹא תֶאֱגֹר כִּי תֹאכְלֶנּוּ הַתֹּלָֽעַת׃ 39
೩೯ನೀವು ದ್ರಾಕ್ಷಿ ವ್ಯವಸಾಯವನ್ನು ಎಷ್ಟು ಮಾಡಿದರೂ ಅದರ ಹಣ್ಣುಗಳನ್ನು ಹುಳಗಳೇ ತಿಂದುಹಾಕುವುದರಿಂದ ನೀವು ಅದರ ಸಾರವನ್ನು ರುಚಿನೋಡಲು ಆಗುವುದಿಲ್ಲ.
זֵיתִים יִהְיוּ לְךָ בְּכׇל־גְּבוּלֶךָ וְשֶׁמֶן לֹא תָסוּךְ כִּי יִשַּׁל זֵיתֶֽךָ׃ 40
೪೦ನಿಮ್ಮ ಎಲ್ಲಾ ಪ್ರದೇಶಗಳಲ್ಲಿ ಎಣ್ಣೇಮರಗಳು ಎಷ್ಟಿದ್ದರೂ ಅವುಗಳ ಕಾಯಿಗಳು ಉದುರಿಹೋಗುವುದರಿಂದ ನೀವು ಎಣ್ಣೆಯನ್ನು ಮೈಗೆ ಹಚ್ಚಿಕೊಳ್ಳುವುದಿಲ್ಲ.
בָּנִים וּבָנוֹת תּוֹלִיד וְלֹא־יִהְיוּ לָךְ כִּי יֵלְכוּ בַּשֶּֽׁבִי׃ 41
೪೧ನಿಮಗೆ ಗಂಡು ಮತ್ತು ಹೆಣ್ಣು ಮಕ್ಕಳು ಎಷ್ಟು ಹುಟ್ಟಿದರೂ ಅವರು ಸೆರೆಯವರಾಗಿ ಒಯ್ಯಲ್ಪಡುವುದರಿಂದ ನಿಮ್ಮ ಬಳಿಯಲ್ಲಿ ಇರುವುದಿಲ್ಲ.
כׇּל־עֵצְךָ וּפְרִי אַדְמָתֶךָ יְיָרֵשׁ הַצְּלָצַֽל׃ 42
೪೨ನಿಮ್ಮ ಎಲ್ಲಾ ಮರಗಳೂ ಮತ್ತು ಪೈರುಗಳೂ ಮಿಡತೆಯ ಪಾಲಾಗುವವು.
הַגֵּר אֲשֶׁר בְּקִרְבְּךָ יַעֲלֶה עָלֶיךָ מַעְלָה מָּעְלָה וְאַתָּה תֵרֵד מַטָּה מָּֽטָּה׃ 43
೪೩ನಿಮ್ಮ ಮಧ್ಯದಲ್ಲಿರುವ ಅನ್ಯರು ನಿಮಗಿಂತಲೂ ಹೆಚ್ಚೆಚ್ಚಾಗಿ ಅಭಿವೃದ್ಧಿಗೆ ಬರುವರು; ನೀವೋ ಕಡಿಮೆಯಾಗುತ್ತಾ ಹೀನಸ್ಥಿತಿಗೆ ಬರುವಿರಿ.
הוּא יַלְוְךָ וְאַתָּה לֹא תַלְוֶנּוּ הוּא יִהְיֶה לְרֹאשׁ וְאַתָּה תִּֽהְיֶה לְזָנָֽב׃ 44
೪೪ಅವರು ನಿಮಗೆ ಸಾಲಕೊಡುವರೇ ಹೊರತು ನೀವು ಅವರಿಗೆ ಸಾಲ ಕೊಡುವುದಿಲ್ಲ. ನೀವು ಅವರಿಗೆ ಅಧೀನರಾಗುವಿರಿ; ಅವರು ನಿಮಗೆ ಶಿರಸ್ಸಾಗುವರು.
וּבָאוּ עָלֶיךָ כׇּל־הַקְּלָלוֹת הָאֵלֶּה וּרְדָפוּךָ וְהִשִּׂיגוּךָ עַד הִשָּׁמְדָךְ כִּי־לֹא שָׁמַעְתָּ בְּקוֹל יְהֹוָה אֱלֹהֶיךָ לִשְׁמֹר מִצְוֺתָיו וְחֻקֹּתָיו אֲשֶׁר צִוָּֽךְ׃ 45
೪೫ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆಯೂ, ಆತನು ನೇಮಿಸಿದ ಆಜ್ಞಾವಿಧಿಗಳನ್ನು ಅನುಸರಿಸದೆಯೂ ಹೋದುದರಿಂದ ಈ ಎಲ್ಲಾ ಅಶುಭಗಳು ನಿಮಗೆ ಪ್ರಾಪ್ತವಾಗಿ ನಿಮ್ಮನ್ನು ಹಿಂದಟ್ಟಿ ಹಿಡಿದು ಕಡೆಗೆ ನಾಶಮಾಡುವವು.
וְהָיוּ בְךָ לְאוֹת וּלְמוֹפֵת וּֽבְזַרְעֲךָ עַד־עוֹלָֽם׃ 46
೪೬ಇವು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಯಾವಾಗಲೂ ಪ್ರಾಪ್ತವಾಗುತ್ತಾ ಎಲ್ಲರಿಗೂ ಎಚ್ಚರಿಕೆಯನ್ನೂ ಮತ್ತು ಬೆರಗನ್ನೂ ಉಂಟುಮಾಡುವವು.
תַּחַת אֲשֶׁר לֹא־עָבַדְתָּ אֶת־יְהֹוָה אֱלֹהֶיךָ בְּשִׂמְחָה וּבְטוּב לֵבָב מֵרֹב כֹּֽל׃ 47
೪೭ನಿಮಗೆ ಸರ್ವಸಮೃದ್ಧಿಯುಂಟಾದ ಕಾಲದಲ್ಲಿಯೂ ನೀವು ನಿಮ್ಮ ದೇವರಾದ ಯೆಹೋವನನ್ನು ಹರ್ಷಾನಂದಗಳುಳ್ಳವರಾಗಿ ಸೇವಿಸದೆ ಹೋದುದರಿಂದ,
וְעָבַדְתָּ אֶת־אֹיְבֶיךָ אֲשֶׁר יְשַׁלְּחֶנּוּ יְהֹוָה בָּךְ בְּרָעָב וּבְצָמָא וּבְעֵירֹם וּבְחֹסֶר כֹּל וְנָתַן עֹל בַּרְזֶל עַל־צַוָּארֶךָ עַד הִשְׁמִידוֹ אֹתָֽךְ׃ 48
೪೮ಯೆಹೋವನು ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವನು; ಆಗ ನೀವು ಹಸಿವೆ, ಬಾಯಾರಿಕೆಗಳುಳ್ಳವರಾಗಿ, ಬಟ್ಟೆಯೂ ಮತ್ತು ಏನೂ ಇಲ್ಲದವರಾಗಿ ಆ ಶತ್ರುಗಳಿಗೇ ಸೇವಕರಾಗಬೇಕಾಗುವುದು. ಯೆಹೋವನು ಕಬ್ಬಿಣದ ನೊಗವನ್ನು ಹೇರಿಸಿ ನಿಮ್ಮನ್ನು ನಾಶಮಾಡುವನು.
יִשָּׂא יְהֹוָה עָלֶיךָ גּוֹי מֵרָחֹק מִקְצֵה הָאָרֶץ כַּאֲשֶׁר יִדְאֶה הַנָּשֶׁר גּוֹי אֲשֶׁר לֹא־תִשְׁמַע לְשֹׁנֽוֹ׃ 49
೪೯ರಣಹದ್ದು ಹೇಗೆ ದೂರದಿಂದ ಹಾರಿಬರುವುದೋ ಹಾಗೆಯೇ ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗವು ನಿಮ್ಮ ಮೇಲೆ ಬರುವಂತೆ ಯೆಹೋವನು ಮಾಡುವನು.
גּוֹי עַז פָּנִים אֲשֶׁר לֹא־יִשָּׂא פָנִים לְזָקֵן וְנַעַר לֹא יָחֹֽן׃ 50
೫೦ಆ ಜನಾಂಗದವರು ಕ್ರೂರಮುಖವುಳ್ಳವರಾಗಿ ನಿಮ್ಮನ್ನು ವೃದ್ಧರೆಂದು ಮರ್ಯಾದೆ ತೋರಿಸುವುದಿಲ್ಲ ಮತ್ತು ಚಿಕ್ಕವರೆಂದು ಕನಿಕರಿಸುವುದಿಲ್ಲ.
וְאָכַל פְּרִי בְהֶמְתְּךָ וּפְרִֽי־אַדְמָתְךָ עַד הִשָּׁמְדָךְ אֲשֶׁר לֹא־יַשְׁאִיר לְךָ דָּגָן תִּירוֹשׁ וְיִצְהָר שְׁגַר אֲלָפֶיךָ וְעַשְׁתְּרֹת צֹאנֶךָ עַד הַאֲבִידוֹ אֹתָֽךְ׃ 51
೫೧ಅವರು ನಿಮ್ಮ ದನಗಳನ್ನೂ ಮತ್ತು ಬೆಳೆಗಳನ್ನೂ ತಿಂದುಬಿಟ್ಟು ನಿಮಗೆ ಧಾನ್ಯವನ್ನಾಗಲಿ, ದ್ರಾಕ್ಷಾರಸವನ್ನಾಗಲಿ, ಎಣ್ಣೆಯನ್ನಾಗಲಿ, ದನ ಮತ್ತು ಕುರಿಗಳ ಸಂತಾನವನ್ನಾಗಲಿ ಉಳಿಸದೆ ನಿಮ್ಮನ್ನು ಸಂಪೂರ್ಣವಾಗಿ ನಾಶಮಾಡುವರು.
וְהֵצַר לְךָ בְּכׇל־שְׁעָרֶיךָ עַד רֶדֶת חֹמֹתֶיךָ הַגְּבֹהֹת וְהַבְּצֻרוֹת אֲשֶׁר אַתָּה בֹּטֵחַ בָּהֵן בְּכׇל־אַרְצֶךָ וְהֵצַר לְךָ בְּכׇל־שְׁעָרֶיךָ בְּכׇל־אַרְצְךָ אֲשֶׁר נָתַן יְהֹוָה אֱלֹהֶיךָ לָֽךְ׃ 52
೫೨ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ದೇಶದ ಎಲ್ಲಾ ಪಟ್ಟಣಗಳಿಗೂ ಅವರು ಮುತ್ತಿಗೆಹಾಕಿ, ನೀವು ನಂಬಿಕೊಂಡಿದ್ದ ಎತ್ತರವಾದ ಕೊತ್ತಲುಗಳುಳ್ಳ ಗೋಡೆಗಳನ್ನು ಕೆಡವಿಬಿಡುವರು.
וְאָכַלְתָּ פְרִֽי־בִטְנְךָ בְּשַׂר בָּנֶיךָ וּבְנֹתֶיךָ אֲשֶׁר נָתַן־לְךָ יְהֹוָה אֱלֹהֶיךָ בְּמָצוֹר וּבְמָצוֹק אֲשֶׁר־יָצִיק לְךָ אֹיְבֶֽךָ׃ 53
೫೩ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಇಕ್ಕಟ್ಟಿಗೆ ಸಿಕ್ಕಿಸುವುದರಿಂದ ನೀವು ನಿಮ್ಮ ಸಂತಾನವನ್ನೇ ಅಂದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ಗಂಡು ಮತ್ತು ಹೆಣ್ಣು ಮಕ್ಕಳ ಮಾಂಸವನ್ನೇ ತಿನ್ನುವಿರಿ.
הָאִישׁ הָרַךְ בְּךָ וְהֶעָנֹג מְאֹד תֵּרַע עֵינוֹ בְאָחִיו וּבְאֵשֶׁת חֵיקוֹ וּבְיֶתֶר בָּנָיו אֲשֶׁר יוֹתִֽיר׃ 54
೫೪ನಿಮ್ಮಲ್ಲಿ ಮೃದುಸ್ವಭಾವಿಯೂ ಮತ್ತು ಸೂಕ್ಷ್ಮಗುಣವುಳ್ಳವನು ಆಗಿರುವ ಸಹೋದರನು ಆಹಾರಕ್ಕಾಗಿ ತನ್ನ ಸಹೋದರ, ಪ್ರೀತಿಯ ಹೆಂಡತಿ ಮತ್ತು ತನ್ನ ಮಕ್ಕಳನ್ನು ದ್ವೇಷಿಸುವನು.
מִתֵּת ׀ לְאַחַד מֵהֶם מִבְּשַׂר בָּנָיו אֲשֶׁר יֹאכֵל מִבְּלִי הִשְׁאִֽיר־לוֹ כֹּל בְּמָצוֹר וּבְמָצוֹק אֲשֶׁר יָצִיק לְךָ אֹיִבְךָ בְּכׇל־שְׁעָרֶֽיךָ׃ 55
೫೫ಶತ್ರುಗಳು ನಿಮ್ಮ ಎಲ್ಲಾ ಪಟ್ಟಣಗಳಿಗೆ ಮುತ್ತಿಗೆಹಾಕಿ, ನಿಮ್ಮನ್ನು ಇಕ್ಕಟ್ಟಿಗೆ ಸಿಕ್ಕಿಸುವ ಕಾಲದಲ್ಲಿ ತನಗೆ ತಿನ್ನಲಿಕ್ಕೆ ಏನೂ ಉಳಿಯದೆ ಹೋಗುವುದರಿಂದ ಅವನು ತನ್ನ ಮಕ್ಕಳ ಮಾಂಸವನ್ನು ತಾನೇ ತಿನ್ನಬೇಕೆಂದು ಅಣ್ಣತಮ್ಮಂದಿರಿಗೂ, ಪ್ರಾಣಪ್ರಿಯಳಾದ ಹೆಂಡತಿಗೂ ಮತ್ತು ಉಳಿದ ಮಕ್ಕಳಿಗೂ ಕೋಪಗೊಂಡವನಂತೆ ನಟಿಸುತ್ತಾ ಆ ಮಾಂಸದಲ್ಲಿ ಅವರಿಗೆ ಸ್ವಲ್ಪವನ್ನಾದರೂ ಕೊಡದೆ ಹೋಗುವನು.
הָרַכָּה בְךָ וְהָעֲנֻגָּה אֲשֶׁר לֹֽא־נִסְּתָה כַף־רַגְלָהּ הַצֵּג עַל־הָאָרֶץ מֵהִתְעַנֵּג וּמֵרֹךְ תֵּרַע עֵינָהּ בְּאִישׁ חֵיקָהּ וּבִבְנָהּ וּבְבִתָּֽהּ׃ 56
೫೬ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ, ನಿಮ್ಮನ್ನು ಬಹಳವಾಗಿ ಹಿಂಸಿಸುವ ಕಾಲದಲ್ಲಿ ಕೋಮಲತೆಯ ಮತ್ತು ಅತಿಸೂಕ್ಷ್ಮತೆಯ ದೆಸೆಯಿಂದ ಅಂಗಾಲನ್ನೂ ನೆಲಕ್ಕೆ ಇಡದವಳಾದ ಸ್ತ್ರೀಯು ತಿನ್ನಲಿಕ್ಕೆ ಏನೂ ಇಲ್ಲದವಳಾಗಿ, ನರಳುವಾಗ
וּֽבְשִׁלְיָתָהּ הַיּוֹצֵת ׀ מִבֵּין רַגְלֶיהָ וּבְבָנֶיהָ אֲשֶׁר תֵּלֵד כִּֽי־תֹאכְלֵם בְּחֹסֶר־כֹּל בַּסָּתֶר בְּמָצוֹר וּבְמָצוֹק אֲשֶׁר יָצִיק לְךָ אֹיִבְךָ בִּשְׁעָרֶֽיךָ׃ 57
೫೭ತಾನು ಆಗಲೇ ಹೆತ್ತ ಮಗುವಿನ ಮಾಂಸವನ್ನೂ ರಹಸ್ಯವಾಗಿ ತಿನ್ನಬೇಕೆಂದು ಯೋಚಿಸಿ, ಪ್ರಾಣಪ್ರಿಯನಾದ ಗಂಡನಿಗೂ, ಮಕ್ಕಳಿಗೂ ತಿಳಿಯದಂತೆ ಆ ಕಾರ್ಯವನ್ನು ಮಾಡುವಳು.
אִם־לֹא תִשְׁמֹר לַעֲשׂוֹת אֶת־כׇּל־דִּבְרֵי הַתּוֹרָה הַזֹּאת הַכְּתֻבִים בַּסֵּפֶר הַזֶּה לְיִרְאָה אֶת־הַשֵּׁם הַנִּכְבָּד וְהַנּוֹרָא הַזֶּה אֵת יְהֹוָה אֱלֹהֶֽיךָ׃ 58
೫೮ಈ ಗ್ರಂಥದಲ್ಲಿ ಬರೆದಿರುವ ಧರ್ಮಶಾಸ್ತ್ರವಾಕ್ಯಗಳನ್ನೆಲ್ಲಾ ನೀವು ಅನುಸರಿಸದೆ ನಿಮ್ಮ ದೇವರಾದ ಯೆಹೋವನೆಂಬ ಮಹಾಮಹಿಮೆಯುಳ್ಳ ಅದ್ಭುತ ನಾಮದಲ್ಲಿ ನೀವು ಭಯಭಕ್ತಿಯುಳ್ಳವರಾಗಿ ನಡೆಯದೆ ಹೋದರೆ,
וְהִפְלָא יְהֹוָה אֶת־מַכֹּתְךָ וְאֵת מַכּוֹת זַרְעֶךָ מַכּוֹת גְּדֹלֹת וְנֶאֱמָנוֹת וׇחֳלָיִם רָעִים וְנֶאֱמָנִֽים׃ 59
೫೯ಆತನು ನಿಮಗೂ, ನಿಮ್ಮ ಸಂತತಿಯವರಿಗೂ ದೀರ್ಘಕಾಲವಿರುವ ಬಹುಭಯಂಕರವಾದ ಉಪದ್ರವಗಳನ್ನು ಬರಮಾಡುವನು. ಬಹುಕಾಲದವರೆಗೂ ವಾಸಿಯಾಗದ ಘೋರ ವ್ಯಾಧಿಗಳಿಂದ ನಿಮ್ಮನ್ನು ಬಾಧಿಸುವನು.
וְהֵשִׁיב בְּךָ אֵת כׇּל־מַדְוֵה מִצְרַיִם אֲשֶׁר יָגֹרְתָּ מִפְּנֵיהֶם וְדָבְקוּ בָּֽךְ׃ 60
೬೦ನೀವು ಹೆದರಿಕೊಳ್ಳುತ್ತಿದ್ದ ಐಗುಪ್ತದೇಶದ ರೋಗಗಳನ್ನೆಲ್ಲಾ ತಿರುಗಿ ನಿಮ್ಮ ಮೇಲೆ ಬರಮಾಡುವನು; ಅವು ನಿಮ್ಮನ್ನು ಅಂಟಿಕೊಂಡೇ ಇರುವವು.
גַּם כׇּל־חֳלִי וְכׇל־מַכָּה אֲשֶׁר לֹא כָתוּב בְּסֵפֶר הַתּוֹרָה הַזֹּאת יַעְלֵם יְהֹוָה עָלֶיךָ עַד הִשָּׁמְדָֽךְ׃ 61
೬೧ಇಷ್ಟು ಮಾತ್ರವಲ್ಲದೆ ಈ ಧರ್ಮಶಾಸ್ತ್ರಗ್ರಂಥದಲ್ಲಿ ಬರೆಯದೆ ಇರುವ ವಿಧವಿಧವಾದ ರೋಗಗಳನ್ನೂ ಮತ್ತು ವ್ಯಾಧಿಗಳನ್ನೂ ನಿಮ್ಮ ಮೇಲೆ ಬರಮಾಡಿ ನಿಮ್ಮನ್ನು ನಾಶಮಾಡುವನು.
וְנִשְׁאַרְתֶּם בִּמְתֵי מְעָט תַּחַת אֲשֶׁר הֱיִיתֶם כְּכוֹכְבֵי הַשָּׁמַיִם לָרֹב כִּֽי־לֹא שָׁמַעְתָּ בְּקוֹל יְהֹוָה אֱלֹהֶֽיךָ׃ 62
೬೨ನಕ್ಷತ್ರಗಳಷ್ಟು ಅಸಂಖ್ಯರಾಗಿರುವ ನೀವು ನಿಮ್ಮ ದೇವರಾದ ಯೆಹೋವನ ಮಾತಿನಲ್ಲಿ ಲಕ್ಷ್ಯವಿಡದೆ ಹೋಗುವುದರಿಂದ ಸ್ವಲ್ಪ ಜನರಾಗಿಯೇ ಉಳಿಯುವಿರಿ.
וְהָיָה כַּאֲשֶׁר־שָׂשׂ יְהֹוָה עֲלֵיכֶם לְהֵיטִיב אֶתְכֶם וּלְהַרְבּוֹת אֶתְכֶם כֵּן יָשִׂישׂ יְהֹוָה עֲלֵיכֶם לְהַאֲבִיד אֶתְכֶם וּלְהַשְׁמִיד אֶתְכֶם וְנִסַּחְתֶּם מֵעַל הָאֲדָמָה אֲשֶׁר־אַתָּה בָא־שָׁמָּה לְרִשְׁתָּֽהּ׃ 63
೬೩ಹೇಗೆ ಯೆಹೋವನು ಈಗ ನಿಮ್ಮನ್ನು ಅಭಿವೃದ್ಧಿಪಡಿಸುವುದರಲ್ಲಿಯೂ, ಹೆಚ್ಚಿಸುವುದರಲ್ಲಿಯೂ ಸಂತೋಷಪಡುತ್ತಾನೋ ಹಾಗೆಯೇ ಆಗ ನಿಮ್ಮನ್ನು ಕೆಡಿಸಿ ನಾಶಮಾಡುವುದರಲ್ಲಿ ಸಂತೋಷಪಟ್ಟು, ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದೊಳಗಿಂದ ನಿಮ್ಮನ್ನು ಕಿತ್ತುಹಾಕುವನು.
וֶהֱפִֽיצְךָ יְהֹוָה בְּכׇל־הָעַמִּים מִקְצֵה הָאָרֶץ וְעַד־קְצֵה הָאָרֶץ וְעָבַדְתָּ שָּׁם אֱלֹהִים אֲחֵרִים אֲשֶׁר לֹא־יָדַעְתָּ אַתָּה וַאֲבֹתֶיךָ עֵץ וָאָֽבֶן׃ 64
೬೪ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲಾ ಜನಾಂಗಗಳಲ್ಲಿಯೂ ಯೆಹೋವನು ನಿಮ್ಮನ್ನು ಚದರಿಸುವನು. ಅಲ್ಲಿ ನಿಮಗಾಗಲಿ ಅಥವಾ ನಿಮ್ಮ ಪೂರ್ವಿಕರಿಗಾಗಲಿ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.
וּבַגּוֹיִם הָהֵם לֹא תַרְגִּיעַ וְלֹא־יִהְיֶה מָנוֹחַ לְכַף־רַגְלֶךָ וְנָתַן יְהֹוָה לְךָ שָׁם לֵב רַגָּז וְכִלְיוֹן עֵינַיִם וְדַאֲבוֹן נָֽפֶשׁ׃ 65
೬೫ಆ ದೇಶಗಳಲ್ಲಿ ನಿಮಗೆ ಯಾವ ವಿಶ್ರಾಂತಿಯೂ ದೊರೆಯುವುದಿಲ್ಲ; ಸ್ವಲ್ಪ ಹೊತ್ತು ಅಂಗಾಲಿಡುವುದಕ್ಕೂ ನಿಮಗೆ ಸ್ಥಳಸಿಕ್ಕುವುದಿಲ್ಲ. ನೀವು ನಡುಗುವ ಹೃದಯವುಳ್ಳವರಾಗಿಯೂ, ದಿಕ್ಕುತೋರದೆ ಕಂಗೆಟ್ಟವರಾಗಿಯೂ, ಮನಗುಂದಿದವರಾಗಿಯೂ ಇರುವಂತೆ ಯೆಹೋವನು ಮಾಡುವನು.
וְהָיוּ חַיֶּיךָ תְּלֻאִים לְךָ מִנֶּגֶד וּפָֽחַדְתָּ לַיְלָה וְיוֹמָם וְלֹא תַאֲמִין בְּחַיֶּֽיךָ׃ 66
೬೬ಬದುಕುವೆವೋ ಇಲ್ಲವೋ ಎಂಬುದಾಗಿ ಅನುಮಾನಪಟ್ಟು ನೀವು ಹಗಲಿರುಳು ಪ್ರಾಣಭಯದಲ್ಲಿರುವಿರಿ; ಪ್ರಾಣದ ಮೇಲಣ ನಂಬಿಕೆಯನ್ನು ಬಿಟ್ಟೇಬಿಡುವಿರಿ.
בַּבֹּקֶר תֹּאמַר מִֽי־יִתֵּן עֶרֶב וּבָעֶרֶב תֹּאמַר מִֽי־יִתֵּן בֹּקֶר מִפַּחַד לְבָֽבְךָ אֲשֶׁר תִּפְחָד וּמִמַּרְאֵה עֵינֶיךָ אֲשֶׁר תִּרְאֶֽה׃ 67
೬೭ಮನಸ್ಸಿನಲ್ಲಿ ಯಾವಾಗಲೂ ಪ್ರಾಣಭಯವಿರುವುದರಿಂದಲೂ ಕಣ್ಣಿನಿಂದ ಭಯಂಕರವಾದ ಸಂಗತಿಗಳನ್ನು ನೋಡುವುದರಿಂದಲೂ ನೀವು ಹೊತ್ತಾರೆಯಲ್ಲಿ, “ಅಯ್ಯೋ, ಅಯ್ಯೋ ಸಾಯಂಕಾಲ ಯಾವಾಗ ಬರುವುದೋ” ಎಂದೂ, ಸಾಯಂಕಾಲದಲ್ಲಿ, “ಅಯ್ಯೋ, ಅಯ್ಯೋ! ಬೆಳಿಗ್ಗೆ ಯಾವಾಗ ಬರುವುದೋ” ಎಂದು ಕೊರಗುವಿರಿ.
וֶהֱשִֽׁיבְךָ יְהֹוָה ׀ מִצְרַיִם בׇּאֳנִיּוֹת בַּדֶּרֶךְ אֲשֶׁר אָמַרְתִּֽי לְךָ לֹא־תֹסִיף עוֹד לִרְאֹתָהּ וְהִתְמַכַּרְתֶּם שָׁם לְאֹיְבֶיךָ לַעֲבָדִים וְלִשְׁפָחוֹת וְאֵין קֹנֶֽה׃ 68
೬೮ನೀವು ಐಗುಪ್ತದೇಶವನ್ನು ತಿರುಗಿ ಎಂದಿಗೂ ನೋಡುವುದಿಲ್ಲವೆಂದು ಯೆಹೋವನು ಹೇಳಿದ್ದರೂ ಆತನು ನಿಮ್ಮನ್ನು ಹಡಗುಗಳನ್ನೇರಿಸಿ ಅಲ್ಲಿಗೆ ತಿರುಗಿ ಹೋಗ ಮಾಡುವನು. ಅಲ್ಲಿ ನೀವು ಶತ್ರುಗಳಿಗೆ ನಿಮ್ಮನ್ನು ದಾಸದಾಸಿಯರನ್ನಾಗಿ ಮಾರಿಕೊಳ್ಳಬೇಕೆಂದು ಅಪೇಕ್ಷಿಸಿದರೂ ಯಾರೂ ನಿಮ್ಮನ್ನು ಕೊಂಡುಕೊಳ್ಳುವುದಿಲ್ಲ.

< דברים 28 >