< קֹהֶלֶת 5 >
שְׁמֹר (רגליך) [רַגְלְךָ] כַּאֲשֶׁר תֵּלֵךְ אֶל־בֵּית הָאֱלֹהִים וְקָרוֹב לִשְׁמֹעַ מִתֵּת הַכְּסִילִים זָבַח כִּֽי־אֵינָם יוֹדְעִים לַעֲשׂוֹת רָֽע׃ | 1 |
೧ದೇವಸ್ಥಾನಕ್ಕೆ ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು. ಮೂಢರ ಯಜ್ಞಕ್ಕಿಂತ ಸಾನ್ನಿಧ್ಯಕ್ಕೆ ಬಂದು ಕಿವಿಗೊಡುವುದು ಲೇಸು. ತಾವು ತಪ್ಪು ಮಾಡುತ್ತಿದ್ದೇವೆಂಬುದು ಮೂಢರಿಗೆ ಗೊತ್ತೇ ಇಲ್ಲ.
אַל־תְּבַהֵל עַל־פִּיךָ וְלִבְּךָ אַל־יְמַהֵר לְהוֹצִיא דָבָר לִפְנֵי הָאֱלֹהִים כִּי הָאֱלֹהִים בַּשָּׁמַיִם וְאַתָּה עַל־הָאָרֶץ עַל־כֵּן יִהְיוּ דְבָרֶיךָ מְעַטִּֽים׃ | 2 |
೨ನಿನ್ನ ಬಾಯಿಂದ ದುಡುಕಬೇಡ ಮತ್ತು ದೇವರ ಮುಂದೆ ಮಾತನಾಡಲು ನಿನ್ನ ಹೃದಯದಲ್ಲಿ ಆತುರಪಡಬೇಡ. ದೇವರು ಪರಲೋಕದಲ್ಲಿದ್ದಾನೆ. ನೀನು ಭೂಮಿಯಲ್ಲಿದ್ದಿ, ಆದಕಾರಣ ನಿನ್ನ ಮಾತುಗಳು ಕಡಿಮೆಯಾಗಿರಲಿ.
כִּי בָּא הַחֲלוֹם בְּרֹב עִנְיָן וְקוֹל כְּסִיל בְּרֹב דְּבָרִֽים׃ | 3 |
೩ಬಹಳ ಚಿಂತೆಯ ಮೂಲಕ ಕನಸು ಉಂಟಾಗುತ್ತದೆ ಮತ್ತು ಮೂಢನ ಧ್ವನಿಯು ಬಹಳ ಮಾತುಗಳಿಂದ ಕೂಡಿದ್ದಾಗಿದೆ.
כַּאֲשֶׁר תִּדֹּר נֶדֶר לֵֽאלֹהִים אַל־תְּאַחֵר לְשַׁלְּמוֹ כִּי אֵין חֵפֶץ בַּכְּסִילִים אֵת אֲשֶׁר־תִּדֹּר שַׁלֵּֽם׃ | 4 |
೪ನೀನು ದೇವರಿಗೆ ಹರಕೆಯನ್ನು ಮಾಡಿದರೆ ಅದನ್ನು ತೀರಿಸಲು ತಡಮಾಡಬೇಡ. ಮೂಢರಲ್ಲಿ ದೇವರಿಗೆ ಸಂತೋಷವಿಲ್ಲ. ನೀನು ಪ್ರಮಾಣಮಾಡಿದ್ದನ್ನು ತೀರಿಸು.
טוֹב אֲשֶׁר לֹֽא־תִדֹּר מִשֶּׁתִּדּוֹר וְלֹא תְשַׁלֵּֽם׃ | 5 |
೫ನೀನು ಹರಕೆಮಾಡಿದ್ದನ್ನು ನೆರವೇರಿಸದೆ ಇರುವುದಕ್ಕಿಂತ ಹರಕೆಮಾಡದೆ ಇರುವುದು ಒಳ್ಳೆಯದು.
אַל־תִּתֵּן אֶת־פִּיךָ לַחֲטִיא אֶת־בְּשָׂרֶךָ וְאַל־תֹּאמַר לִפְנֵי הַמַּלְאָךְ כִּי שְׁגָגָה הִיא לָמָּה יִקְצֹף הָֽאֱלֹהִים עַל־קוֹלֶךָ וְחִבֵּל אֶת־מַעֲשֵׂה יָדֶֽיךָ׃ | 6 |
೬ನಿನ್ನ ಬಾಯಿ ನಿನ್ನನ್ನು ಪಾಪಕ್ಕೆ ಗುರಿಮಾಡದಂತೆ ನೋಡಿಕೋ. “ಇದು ಅಜಾಗ್ರತೆಯಿಂದ ಆಯಿತು” ಎಂದು ದೂತನ ಮುಂದೆ ಹೇಳಬೇಡ. ದೇವರು ನಿನ್ನ ಮಾತಿಗೆ ರೋಷಗೊಂಡು ನಿನ್ನ ಕೈಕೆಲಸವನ್ನು ಏಕೆ ಹಾಳುಮಾಡಬೇಕು?
כִּי בְרֹב חֲלֹמוֹת וַהֲבָלִים וּדְבָרִים הַרְבֵּה כִּי אֶת־הָאֱלֹהִים יְרָֽא׃ | 7 |
೭ಬಹಳ ಕನಸುಗಳಿಂದಲೂ, ವ್ಯರ್ಥ ವಿಷಯಗಳಿಂದಲೂ, ಹೆಚ್ಚು ಮಾತುಗಳಿಂದಲೂ ವ್ಯರ್ಥವೇ. ನೀನಂತೂ ದೇವರಲ್ಲಿ ಭಯಭಕ್ತಿಯುಳ್ಳವನಾಗಿರು.
אִם־עֹשֶׁק רָשׁ וְגֵזֶל מִשְׁפָּט וָצֶדֶק תִּרְאֶה בַמְּדִינָה אַל־תִּתְמַהּ עַל־הַחֵפֶץ כִּי גָבֹהַּ מֵעַל גָּבֹהַּ שֹׁמֵר וּגְבֹהִים עֲלֵיהֶֽם׃ | 8 |
೮ಸಂಸ್ಥಾನದಲ್ಲಿ ಬಡವರ ಹಿಂಸೆಯನ್ನೂ, ನೀತಿನ್ಯಾಯಗಳ ನಾಶನವನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಹೆಚ್ಚಿನ ಅಧಿಕಾರವುಳ್ಳವನಿದ್ದಾನೆ.
וְיִתְרוֹן אֶרֶץ בַּכֹּל (היא) [הוּא] מֶלֶךְ לְשָׂדֶה נֶעֱבָֽד׃ | 9 |
೯ಭೂಮಿಯಿಂದ ಎಲ್ಲರಿಗೂ ಲಾಭವಿದೆ ಮತ್ತು ಹೊಲಗದ್ದೆಗಳಿಂದ ರಾಜನಿಗೆ ಲಾಭವಾಗುತ್ತದೆ.
אֹהֵב כֶּסֶף לֹא־יִשְׂבַּע כֶּסֶף וּמִֽי־אֹהֵב בֶּהָמוֹן לֹא תְבוּאָה גַּם־זֶה הָֽבֶל׃ | 10 |
೧೦ಬೆಳ್ಳಿಯನ್ನು ಆಶಿಸುವವನಿಗೆ ಎಷ್ಟು ಬೆಳ್ಳಿಯಿಂದಲೂ ತೃಪ್ತಿಯಾಗುವುದಿಲ್ಲ ಮತ್ತು ಸಮೃದ್ಧಿಯನ್ನು ಬಯಸುವವನಿಗೆ ಆದಾಯವೆಷ್ಟಾದರೂ ಸಾಲುವುದಿಲ್ಲ. ಇದೂ ಸಹ ವ್ಯರ್ಥವೇ.
בִּרְבוֹת הַטּוֹבָה רַבּוּ אוֹכְלֶיהָ וּמַה־כִּשְׁרוֹן לִבְעָלֶיהָ כִּי אִם־[רְאוּת] (ראית) עֵינָֽיו׃ | 11 |
೧೧ಆಸ್ತಿ ಹೆಚ್ಚಾದರೆ ಅನುಭವಿಸುವವರ ಸಂಖ್ಯೆಯೂ ಹೆಚ್ಚಾಗುವುದು. ಅದನ್ನು ಕಣ್ಣಿನಿಂದ ನೋಡುವುದೇ ಹೊರತು ಯಜಮಾನನಿಗೆ ಇನ್ಯಾವ ಲಾಭವೂ ಇಲ್ಲ.
מְתוּקָה שְׁנַת הָעֹבֵד אִם־מְעַט וְאִם־הַרְבֵּה יֹאכֵל וְהַשָּׂבָע לֶֽעָשִׁיר אֵינֶנּוּ מַנִּיחַֽ לוֹ לִישֽׁוֹן׃ | 12 |
೧೨ದುಡಿಯುವವನು ಸ್ವಲ್ಪವೇ ತಿನ್ನಲಿ ಹೆಚ್ಚೇ ತಿನ್ನಲಿ, ಹಾಯಾಗಿ ನಿದ್ರಿಸುತ್ತಾನೆ. ಆದರೆ ಐಶ್ವರ್ಯವಂತನ ಸಮೃದ್ಧಿಯು ಅವನಿಗೆ ನಿದ್ರೆ ಮಾಡಗೊಡಿಸದು.
יֵשׁ רָעָה חוֹלָה רָאִיתִי תַּחַת הַשָּׁמֶשׁ עֹשֶׁר שָׁמוּר לִבְעָלָיו לְרָעָתֽוֹ׃ | 13 |
೧೩ಸೂರ್ಯನ ಕೆಳಗೆ ನಾನು ಮತ್ತೊಂದು ಕೇಡನ್ನು ಕಂಡೆನು. ಯಜಮಾನನು ತನ್ನ ಆಸ್ತಿಯನ್ನು ಕಾಪಾಡುವುದರಲ್ಲಿಯೇ ಕೊರಗುತ್ತಿರುವನು.
וְאָבַד הָעֹשֶׁר הַהוּא בְּעִנְיַן רָע וְהוֹלִיד בֵּן וְאֵין בְּיָדוֹ מְאֽוּמָה׃ | 14 |
೧೪ಆ ಆಸ್ತಿಯು ವ್ಯರ್ಥ ಪ್ರಯತ್ನದಿಂದ ಹಾಳಾಗುವುದು. ಅವನಿಗೆ ಮಗನಿದ್ದರೆ ಆ ಮಗನಿಗಾಗಿ ಅವನ ಕೈಯಲ್ಲಿ ಏನೂ ಇರದು.
כַּאֲשֶׁר יָצָא מִבֶּטֶן אִמּוֹ עָרוֹם יָשׁוּב לָלֶכֶת כְּשֶׁבָּא וּמְאוּמָה לֹא־יִשָּׂא בַעֲמָלוֹ שֶׁיֹּלֵךְ בְּיָדֽוֹ׃ | 15 |
೧೫ತಾಯಿಯ ಗರ್ಭದಿಂದ ಹೇಗೆ ಬಂದನೋ ಹಾಗೆಯೇ ಏನೂ ಇಲ್ಲದವನಾಗಿ ಗತಿಸಿ ಹೋಗುವನು. ಅವನು ಪ್ರಯಾಸಪಟ್ಟರೂ, ತನ್ನ ಕೈಯಲ್ಲಿ ಏನೂ ತೆಗೆದುಕೊಂಡು ಹೋಗುವುದಿಲ್ಲ.
וְגַם־זֹה רָעָה חוֹלָה כׇּל־עֻמַּת שֶׁבָּא כֵּן יֵלֵךְ וּמַה־יִּתְרוֹן לוֹ שֶֽׁיַּעֲמֹל לָרֽוּחַ׃ | 16 |
೧೬ಇದು ಸಹ ದುರದೃಷ್ಟಕರವೇ. ಮನುಷ್ಯನು ಹೇಗೆ ಬಂದನೋ ಹಾಗೆಯೇ ಹೋಗುವನು. ಗಾಳಿಗಾಗಿ ಪಟ್ಟ ಪ್ರಯಾಸದಿಂದ ಅವನಿಗೆ ಲಾಭವೇನು?
גַּם כׇּל־יָמָיו בַּחֹשֶׁךְ יֹאכֵל וְכָעַס הַרְבֵּה וְחׇלְיוֹ וָקָֽצֶף׃ | 17 |
೧೭ಅವನು ತನ್ನ ಜೀವಮಾನವೆಲ್ಲಾ ಕತ್ತಲೆಯಲ್ಲಿ ಜೀವಿಸುವನು. ಅವನ ರೋಗದೊಂದಿಗೆ ಅವನಿಗೆ ಬಹಳ ರೋಷವೂ ವ್ಯಥೆಯೂ ಇರುವುದು.
הִנֵּה אֲשֶׁר־רָאִיתִי אָנִי טוֹב אֲשֶׁר־יָפֶה לֶֽאֱכוֹל־וְלִשְׁתּוֹת וְלִרְאוֹת טוֹבָה בְּכׇל־עֲמָלוֹ ׀ שֶׁיַּעֲמֹל תַּֽחַת־הַשֶּׁמֶשׁ מִסְפַּר יְמֵי־חַיָּו אֲשֶׁר־נָֽתַן־לוֹ הָאֱלֹהִים כִּי־הוּא חֶלְקֽוֹ׃ | 18 |
೧೮ಇಗೋ, ನಾನು ಕಂಡದ್ದು ಇದೇ. ದೇವರು ಒಬ್ಬನಿಗೆ ದಯಪಾಲಿಸಿರುವ ಜೀವಮಾನದ ದಿನಗಳಲ್ಲೆಲ್ಲಾ ಅವನು ಅನ್ನಪಾನಗಳನ್ನು ತೆಗೆದುಕೊಂಡು ತಾನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಸುಖವನ್ನು ಅನುಭವಿಸುವನು. ಇದು ಅವನಿಗೆ ಉಚಿತವಾದದ್ದೂ, ಉತ್ತಮವಾದದ್ದೂ ಆಗಿದೆ. ಇದೇ ಅವನ ಪಾಲು.
גַּם כׇּֽל־הָאָדָם אֲשֶׁר נָֽתַן־לוֹ הָאֱלֹהִים עֹשֶׁר וּנְכָסִים וְהִשְׁלִיטוֹ לֶאֱכֹל מִמֶּנּוּ וְלָשֵׂאת אֶת־חֶלְקוֹ וְלִשְׂמֹחַ בַּעֲמָלוֹ זֹה מַתַּת אֱלֹהִים הִֽיא׃ | 19 |
೧೯ಪ್ರತಿಯೊಬ್ಬ ಮನುಷ್ಯನಿಗೆ ದೇವರು ಆಸ್ತಿಪಾಸ್ತಿಗಳನ್ನು ದಯಪಾಲಿಸಿ, ಅದನ್ನು ಅನುಭವಿಸಿ, ಪಾಲಿಗೆ ಬಂದದ್ದನ್ನು ಪಡೆದು ತನ್ನ ಪ್ರಯಾಸದಲ್ಲಿ ಸಂತೋಷಪಡಲು ಶಕ್ತಿಕೊಟ್ಟಿದ್ದರೆ ಅದು ಅವನಿಗೆ ದೊರೆತ ದೇವರ ಅನುಗ್ರಹವೇ.
כִּי לֹא הַרְבֵּה יִזְכֹּר אֶת־יְמֵי חַיָּיו כִּי הָאֱלֹהִים מַעֲנֶה בְּשִׂמְחַת לִבּֽוֹ׃ | 20 |
೨೦ಇಂಥವನು ತನ್ನ ಜೀವಮಾನದ ದಿನಗಳನ್ನು ಹೆಚ್ಚಾಗಿ ಗಣನೆಗೆ ತಂದುಕೊಳ್ಳುವುದಿಲ್ಲ. ಅವನು ತನ್ನ ಹೃದಯಾನಂದದಲ್ಲೇ ಮಗ್ನನಾಗಿರುವಂತೆ ದೇವರು ಮಾಡಿದ್ದಾನೆ.