< אסתר 1 >
וַיְהִי בִּימֵי אֲחַשְׁוֵרוֹשׁ הוּא אֲחַשְׁוֵרוֹשׁ הַמֹּלֵךְ מֵהֹדּוּ וְעַד־כּוּשׁ שֶׁבַע וְעֶשְׂרִים וּמֵאָה מְדִינָֽה׃ | 1 |
೧ಭಾರತ ಮೊದಲುಗೊಂಡು ಕೂಷಿನ ವರೆಗೂ ಇರುವ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಆಳುತ್ತಿದ್ದ ಅಹಷ್ವೇರೋಷನ ಕಾಲದಲ್ಲಿ ನಡೆದ ಚರಿತ್ರೆ.
בַּיָּמִים הָהֵם כְּשֶׁבֶת ׀ הַמֶּלֶךְ אֲחַשְׁוֵרוֹשׁ עַל כִּסֵּא מַלְכוּתוֹ אֲשֶׁר בְּשׁוּשַׁן הַבִּירָֽה׃ | 2 |
೨ಅಹಷ್ವೇರೋಷ ರಾಜನು ಶೂಷನ್ ಕೋಟೆಯಲ್ಲಿ ತನ್ನ ರಾಜಸಿಂಹಾಸದಲ್ಲಿ ಆಸೀನನಾಗಿ ಆಡಳಿತ ನಡೆಸುತ್ತಿದ್ದನು.
בִּשְׁנַת שָׁלוֹשׁ לְמׇלְכוֹ עָשָׂה מִשְׁתֶּה לְכׇל־שָׂרָיו וַעֲבָדָיו חֵיל ׀ פָּרַס וּמָדַי הַֽפַּרְתְּמִים וְשָׂרֵי הַמְּדִינוֹת לְפָנָֽיו׃ | 3 |
೩ಅವನು ತನ್ನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ತನ್ನ ಎಲ್ಲಾ ಸರದಾರರಿಗೋಸ್ಕರವೂ ಮತ್ತು ಪರಿವಾರದವರಿಗಾಗಿ ಒಂದು ಔತಣ ಏರ್ಪಡಿಸಿದ್ದನು. ಪಾರಸಿಯ ಮತ್ತು ಮೇದ್ಯ ಸೇನಾಧಿಪತಿಗಳೂ, ಪ್ರಧಾನರೂ ಮತ್ತು ಸಂಸ್ಥಾನದ ಅಧಿಕಾರಿಗಳೂ, ರಾಜನ ಸನ್ನಿಧಿಗೆ ಸೇರಿ ಬಂದಿದ್ದರು.
בְּהַרְאֹתוֹ אֶת־עֹשֶׁר כְּבוֹד מַלְכוּתוֹ וְאֶת־יְקָר תִּפְאֶרֶת גְּדוּלָּתוֹ יָמִים רַבִּים שְׁמוֹנִים וּמְאַת יֽוֹם׃ | 4 |
೪ಅವನು ಅನೇಕ ದಿನ ಅಂದರೆ, ನೂರ ಎಂಭತ್ತು ದಿನಗಳವರೆಗೂ ಅವರಿಗೆ ತನ್ನ ಘನವಾದ ರಾಜ್ಯದ ಐಶ್ವರ್ಯವನ್ನೂ ಮತ್ತು ಮಹಾಮಹಿಮೆಯ ವೈಭವದ ಪ್ರತಾಪಗಳನ್ನೂ ಪ್ರದರ್ಶಿಸಿದನು.
וּבִמְלוֹאת ׀ הַיָּמִים הָאֵלֶּה עָשָׂה הַמֶּלֶךְ לְכׇל־הָעָם הַנִּמְצְאִים בְּשׁוּשַׁן הַבִּירָה לְמִגָּדוֹל וְעַד־קָטָן מִשְׁתֶּה שִׁבְעַת יָמִים בַּחֲצַר גִּנַּת בִּיתַן הַמֶּֽלֶךְ׃ | 5 |
೫ಆ ನಂತರ ಅರಸನು ಶೂಷನ್ ಕೋಟೆಯಲ್ಲಿದ್ದ ಎಲ್ಲಾ ಶ್ರೇಷ್ಠರಿಗೂ ಮತ್ತು ಕನಿಷ್ಠರಿಗೂ ಅರಮನೆಯ ತೋಟದ ಆವರಣದಲ್ಲಿ ಏಳು ದಿನಗಳವರೆಗೂ ಔತಣಮಾಡಿಸಿದನು.
ח וּר ׀ כַּרְפַּס וּתְכֵלֶת אָחוּז בְּחַבְלֵי־בוּץ וְאַרְגָּמָן עַל־גְּלִילֵי כֶסֶף וְעַמּוּדֵי שֵׁשׁ מִטּוֹת ׀ זָהָב וָכֶסֶף עַל רִֽצְפַת בַּהַט־וָשֵׁשׁ וְדַר וְסֹחָֽרֶת׃ | 6 |
೬ಆ ತೋಟದ ಆವರಣವು ಬಿಳೀ ನೂಲಿನ ಬಟ್ಟೆಗಳೂ, ನೀಲಿಬಟ್ಟೆಗಳೂ, ಧೂಮ್ರವರ್ಣವುಳ್ಳ ನಾರಿನ ದಾರಗಳು ಮತ್ತು ಅಮೃತಶಿಲೆಯ ಕಲ್ಲುಕಂಬಗಳಿಗೆ ಕಟ್ಟಲಾದ ಬೆಳ್ಳಿಯ ಉಂಗುರ ಇವುಗಳಿಂದ ಅಲಂಕೃತವಾಗಿತ್ತು. ಜರತಾರಿ ಕಸೂತಿ ಹಾಕಿರುವ ಬೆಳ್ಳಿ ಬಂಗಾರದ ಸುಖಾಸನಗಳು, ಅವುಗಳನ್ನು ಕೆಂಪು, ಬಿಳಿ, ಹಳದಿ ಮತ್ತು ಕಪ್ಪು ಬಣ್ಣಗಳುಳ್ಳ ಅಮೃತಶಿಲೆಗಳ ಕಲ್ಲುಗಳಿಂದ ರಚಿತವಾದ ನೆಲಗಟ್ಟಿನ ಮೇಲೆ ಇಡಲಾಗಿತ್ತು.
וְהַשְׁקוֹת בִּכְלֵי זָהָב וְכֵלִים מִכֵּלִים שׁוֹנִים וְיֵין מַלְכוּת רָב כְּיַד הַמֶּֽלֶךְ׃ | 7 |
೭ಬಂಗಾರದ ಪಾನ ಪಾತ್ರೆಗಳು ನಾನಾ ಆಕಾರದಲ್ಲಿದ್ದವು. ರಾಜದ್ರಾಕ್ಷಾರಸದ ಔತಣ ಕೂಟವು ಅರಸರ ಔದಾರ್ಯಕ್ಕೆ ತಕ್ಕಂತೆ ಧಾರಾಳವಾಗಿತ್ತು.
וְהַשְּׁתִיָּה כַדָּת אֵין אֹנֵס כִּי־כֵן ׀ יִסַּד הַמֶּלֶךְ עַל כׇּל־רַב בֵּיתוֹ לַעֲשׂוֹת כִּרְצוֹן אִישׁ־וָאִֽישׁ׃ | 8 |
೮“ಪಾನಮಾಡುವುದರಲ್ಲಿ ಯಾರಿಗೂ ಒತ್ತಾಯಮಾಡಬಾರದು” ಎಂದು ರಾಜಾಜ್ಞೆಯಿತ್ತು. ಪ್ರತಿಯೊಬ್ಬರಿಗೂ ಅವರವರ ಇಷ್ಟದಂತೆ ಕೊಡಬೇಕೆಂದು ರಾಜನು ತನ್ನ ಎಲ್ಲಾ ಮನೆವಾರ್ತೆಯವರಿಗೆ ಆಜ್ಞಾಪಿಸಿದ್ದನು.
גַּם וַשְׁתִּי הַמַּלְכָּה עָשְׂתָה מִשְׁתֵּה נָשִׁים בֵּית הַמַּלְכוּת אֲשֶׁר לַמֶּלֶךְ אֲחַשְׁוֵרֽוֹשׁ׃ | 9 |
೯ವಷ್ಟಿ ರಾಣಿಯೂ ಅಹಷ್ವೇರೋಷ ರಾಜನ ಅರಮನೆಯಲ್ಲಿ ಸ್ತ್ರೀಯರಿಗೋಸ್ಕರ ಔತಣಮಾಡಿಸಿದಳು.
בַּיּוֹם הַשְּׁבִיעִי כְּטוֹב לֵב־הַמֶּלֶךְ בַּיָּיִן אָמַר לִמְהוּמָן בִּזְּתָא חַרְבוֹנָא בִּגְתָא וַאֲבַגְתָא זֵתַר וְכַרְכַּס שִׁבְעַת הַסָּרִיסִים הַמְשָׁרְתִים אֶת־פְּנֵי הַמֶּלֶךְ אֲחַשְׁוֵרֽוֹשׁ׃ | 10 |
೧೦ಏಳನೆಯ ದಿನದಲ್ಲಿ ಅಹಷ್ವೇರೋಷ ರಾಜನು ದ್ರಾಕ್ಷಾರಸ ಪಾನಮಾಡಿ ಆನಂದಲಹರಿಯಲ್ಲಿದ್ದಾಗ ಬಹು ಸುಂದರಿಯಾದ ತನ್ನ ರಾಣಿಯ ಸೌಂದರ್ಯವನ್ನು ಜನರಿಗೂ, ಸರದಾರರಿಗೂ ತೋರಿಸಬೇಕೆಂದು ಬಯಸಿದನು. ಅವನು ತನ್ನ ಸಾನ್ನಿಧ್ಯಸೇವಕರಾದ ಮೆಹೂಮಾನ್, ಬಿಜೆತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೇತರ್, ಕರ್ಕಸ್ ಎಂಬ ಏಳು ಕಂಚುಕಿಗಳಿಗೆ,
לְהָבִיא אֶת־וַשְׁתִּי הַמַּלְכָּה לִפְנֵי הַמֶּלֶךְ בְּכֶתֶר מַלְכוּת לְהַרְאוֹת הָֽעַמִּים וְהַשָּׂרִים אֶת־יׇפְיָהּ כִּֽי־טוֹבַת מַרְאֶה הִֽיא׃ | 11 |
೧೧“ವಷ್ಟಿ ರಾಣಿಯು ರಾಜಮುಕುಟವನ್ನು ಧರಿಸಿಕೊಂಡು ರಾಜಸನ್ನಿಧಿಗೆ ಬರಬೇಕೆಂಬದಾಗಿ ಹೇಳಿರಿ” ಎಂದು ಆಜ್ಞಾಪಿಸಿದನು. ಅವಳು ಅತಿ ಸೌಂದರ್ಯವತಿಯಾಗಿದ್ದಳು.
וַתְּמָאֵן הַמַּלְכָּה וַשְׁתִּי לָבוֹא בִּדְבַר הַמֶּלֶךְ אֲשֶׁר בְּיַד הַסָּרִיסִים וַיִּקְצֹף הַמֶּלֶךְ מְאֹד וַחֲמָתוֹ בָּעֲרָה בֽוֹ׃ | 12 |
೧೨ಕಂಚುಕಿಗಳು ತಿಳಿಸಿದ ರಾಜಾಜ್ಞೆಗೆ ವಷ್ಟಿ ರಾಣಿಯು, “ಬರುವುದಿಲ್ಲ” ಎಂದು ಉತ್ತರಕೊಟ್ಟಳು. ಇದರಿಂದ ಅರಸನು ಬಹುಕೋಪಗೊಂಡು ರೌದ್ರಾವೇಶವುಳ್ಳವನಾದನು.
וַיֹּאמֶר הַמֶּלֶךְ לַחֲכָמִים יֹדְעֵי הָֽעִתִּים כִּי־כֵן דְּבַר הַמֶּלֶךְ לִפְנֵי כׇּל־יֹדְעֵי דָּת וָדִֽין׃ | 13 |
೧೩ವಿಧಿನಾಯ್ಯಗಳನ್ನು ಬಲ್ಲವರೆಲ್ಲರ ಮುಂದೆ ಅರಮನೆಯ ಸಂಗತಿಗಳನ್ನು ಇಡುವ ಪದ್ಧತಿಯಿತ್ತು.
וְהַקָּרֹב אֵלָיו כַּרְשְׁנָא שֵׁתָר אַדְמָתָא תַרְשִׁישׁ מֶרֶס מַרְסְנָא מְמוּכָן שִׁבְעַת שָׂרֵי ׀ פָּרַס וּמָדַי רֹאֵי פְּנֵי הַמֶּלֶךְ הַיֹּשְׁבִים רִאשֹׁנָה בַּמַּלְכֽוּת׃ | 14 |
೧೪ಅರಸನಾದ ಅಹಷ್ವೇರೋಷನ ಆಸ್ಥಾನದಲ್ಲಿ ರಾಜಸಾನ್ನಿಧ್ಯ ಸೇವಕರೂ ಮತ್ತು ರಾಜಸಭಾಪ್ರಧಾನರೂ ಆಗಿದ್ದ ಕರ್ಷೆನಾ, ಶೇತಾರ್, ಅದ್ಮಾತಾ, ತರ್ಷೀಷ್, ಮೆರೆಸ್, ಮರ್ಸೆನಾ, ಮೆಮೂಕಾನ್ ಎಂಬ ಏಳು ಪಾರಸಿಯ ಮತ್ತು ಮೇದ್ಯ ದೇಶಗಳ ರಾಜ ಪ್ರಮುಖರಾಗಿದ್ದರು.
כְּדָת מַֽה־לַּעֲשׂוֹת בַּמַּלְכָּה וַשְׁתִּי עַל ׀ אֲשֶׁר לֹֽא־עָשְׂתָה אֶֽת־מַאֲמַר הַמֶּלֶךְ אֲחַשְׁוֵרוֹשׁ בְּיַד הַסָּרִיסִֽים׃ | 15 |
೧೫ಅವನು ಸಮುಯೋಚಿತ ಜ್ಞಾನವುಳ್ಳವರಾದ ಇವರನ್ನು, “ಕಂಚುಕಿಗಳ ಮುಖಾಂತರ ತನಗುಂಟಾದ ರಾಜಾಜ್ಞೆಯನ್ನು ಕೈಗೊಳ್ಳದೆ ಹೋದ ವಷ್ಟಿ ರಾಣಿಗೆ ನಿಯಮದ ಪ್ರಕಾರ ಮಾಡತಕ್ಕದ್ದೇನು?” ಎಂದು ಕೇಳಿದನು.
וַיֹּאמֶר (מומכן) [מְמוּכָן] לִפְנֵי הַמֶּלֶךְ וְהַשָּׂרִים לֹא עַל־הַמֶּלֶךְ לְבַדּוֹ עָוְתָה וַשְׁתִּי הַמַּלְכָּה כִּי עַל־כׇּל־הַשָּׂרִים וְעַל־כׇּל־הָעַמִּים אֲשֶׁר בְּכׇל־מְדִינוֹת הַמֶּלֶךְ אֲחַשְׁוֵרֽוֹשׁ׃ | 16 |
೧೬ಆಗ ಮೆಮೂಕಾನನು ಅರಸನ ಮತ್ತು ಸರದಾರರ ಮುಂದೆ, “ವಷ್ಟಿ ರಾಣಿಯ ಅಪರಾಧವು ಅರಸನೊಬ್ಬನಿಗೇ ವಿರುದ್ಧವಾದುದಲ್ಲ.
כִּֽי־יֵצֵא דְבַר־הַמַּלְכָּה עַל־כׇּל־הַנָּשִׁים לְהַבְזוֹת בַּעְלֵיהֶן בְּעֵינֵיהֶן בְּאׇמְרָם הַמֶּלֶךְ אֲחַשְׁוֵרוֹשׁ אָמַר לְהָבִיא אֶת־וַשְׁתִּי הַמַּלְכָּה לְפָנָיו וְלֹא־בָֽאָה׃ | 17 |
೧೭ರಾಣಿಯ ನಡತೆಯು ಎಲ್ಲಾ ಸ್ತ್ರೀಯರಿಗೂ ಗೊತ್ತಾಗಿ ಅವರೂ ತಮ್ಮ ಗಂಡಂದಿರ ಮಾತನ್ನು ನಿರಾಕರಿಸುವುದಕ್ಕೆ ಮತ್ತು ತಿರಸ್ಕರಿಸುವುದಕ್ಕೆ ಇದು ಕಾರಣವಾಗಬಹುದು. ಅವರು ‘ಅರಸನಾದ ಅಹಷ್ವೇರೋಷನು ವಷ್ಟಿ ರಾಣಿಯನ್ನು ರಾಜಸನ್ನಿಧಿಗೆ ಬರಬೇಕೆಂದು ಹೇಳಿಕಳುಹಿಸಿದಾಗ ಆಕೆಯು ಹೋಗಲಿಲ್ಲವಲ್ಲಾ’ ಅನ್ನುವರು.
וְֽהַיּוֹם הַזֶּה תֹּאמַרְנָה ׀ שָׂרוֹת פָּֽרַס־וּמָדַי אֲשֶׁר שָֽׁמְעוּ אֶת־דְּבַר הַמַּלְכָּה לְכֹל שָׂרֵי הַמֶּלֶךְ וּכְדַי בִּזָּיוֹן וָקָֽצֶף׃ | 18 |
೧೮ರಾಣಿಯ ಮಾತನ್ನು ಕೇಳಿದ ಪಾರಸಿಯ ಮತ್ತು ಮೇದ್ಯ ಕುಲೀನ ಸ್ತ್ರೀಯರು ಈ ಹೊತ್ತೇ ಅದನ್ನು ಅರಸನ ಎಲ್ಲಾ ಸರದಾರರಿಗೂ ಹೇಳುವರು. ಹೀಗೆ ಎಷ್ಟೋ ತಿರಸ್ಕಾರವೂ ಮತ್ತು ಕೋಪವೂ ಉಂಟಾಗುವುದು.
אִם־עַל־הַמֶּלֶךְ טוֹב יֵצֵא דְבַר־מַלְכוּת מִלְּפָנָיו וְיִכָּתֵב בְּדָתֵי פָֽרַס־וּמָדַי וְלֹא יַעֲבוֹר אֲשֶׁר לֹֽא־תָבוֹא וַשְׁתִּי לִפְנֵי הַמֶּלֶךְ אֲחַשְׁוֵרוֹשׁ וּמַלְכוּתָהּ יִתֵּן הַמֶּלֶךְ לִרְעוּתָהּ הַטּוֹבָה מִמֶּֽנָּה׃ | 19 |
೧೯ಅರಸನು ಒಪ್ಪುವುದಾದರೆ ವಷ್ಟಿಯು ಪುನಃ ಅಹಷ್ವೇರೋಷ ರಾಜನು ಸನ್ನಿಧಿಗೆ ಬರಲೇ ಬಾರದೆಂಬ ರಾಜಾಜ್ಞೆಯು ಪ್ರಕಟವಾಗಿ ಅದು ಎಂದಿಗೂ ರದ್ದಾಗದ ಹಾಗೆ ಪಾರಸಿಯ ಮತ್ತು ಮೇದ್ಯ ಶಾಸನಗಳಲ್ಲಿ ಲಿಖಿತವಾಗಲಿ; ಅರಸನು ಆಕೆಯ ಪಟ್ಟವನ್ನು ಆಕೆಗಿಂತ ಉತ್ತಮಳಾದ ಇನ್ನೊಬ್ಬಳಿಗೆ ಕೊಡಲಿ.
וְנִשְׁמַע פִּתְגָם הַמֶּלֶךְ אֲשֶֽׁר־יַעֲשֶׂה בְּכׇל־מַלְכוּתוֹ כִּי רַבָּה הִיא וְכׇל־הַנָּשִׁים יִתְּנוּ יְקָר לְבַעְלֵיהֶן לְמִגָּדוֹל וְעַד־קָטָֽן׃ | 20 |
೨೦ಈ ರಾಜನಿರ್ಣಯವು ಬಹು ವಿಸ್ತಾರವಾದ ಅವನ ರಾಜ್ಯದಲ್ಲೆಲ್ಲಾ ಗೊತ್ತಾದಾಗ ಶ್ರೇಷ್ಠರೂ, ಕನಿಷ್ಠರೂ ಆದ ಎಲ್ಲಾ ಸ್ತ್ರೀಯರು ತಮ್ಮ ಗಂಡಂದಿರಿಗೆ ಗೌರವ ಸಲ್ಲಿಸುವರು” ಎಂದು ಹೇಳಿದನು.
וַיִּיטַב הַדָּבָר בְּעֵינֵי הַמֶּלֶךְ וְהַשָּׂרִים וַיַּעַשׂ הַמֶּלֶךְ כִּדְבַר מְמוּכָֽן׃ | 21 |
೨೧ಈ ಮಾತು ಅರಸನಿಗೂ, ಅವನ ಸರದಾರರಿಗೂ ಒಳ್ಳೆಯದೆಂದು ತೋರಿದಾಗ ಅರಸನು ಮೆಮೂಕಾನನ ಮಾತಿನಂತೆಯೇ ಮಾಡಿದನು.
וַיִּשְׁלַח סְפָרִים אֶל־כׇּל־מְדִינוֹת הַמֶּלֶךְ אֶל־מְדִינָה וּמְדִינָה כִּכְתָבָהּ וְאֶל־עַם וָעָם כִּלְשׁוֹנוֹ לִהְיוֹת כׇּל־אִישׁ שֹׂרֵר בְּבֵיתוֹ וּמְדַבֵּר כִּלְשׁוֹן עַמּֽוֹ׃ | 22 |
೨೨ಅವನು, “ಪ್ರತಿಯೊಂದು ಕುಟುಂಬದಲ್ಲಿ ಪುರುಷನೇ ಒಡೆಯನಾಗಿರುವನು ಮತ್ತು ಅವನ ಸ್ವಜನರ ಭಾಷೆಯೇ ಉಪಯೋಗವಾಗಬೇಕು” ಎಂಬುದಾಗಿ ಎಲ್ಲಾ ರಾಜ ಸಂಸ್ಥಾನಗಳಲ್ಲಿ ಪತ್ರಗಳ ಮೂಲಕ ಪ್ರಕಟಿಸಿದನು. ಈ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ, ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಬರೆಯಲ್ಪಟ್ಟವು.