< שמות 23 >
לֹא תִשָּׂא שֵׁמַע שָׁוְא אַל־תָּשֶׁת יָֽדְךָ עִם־רָשָׁע לִהְיֹת עֵד חָמָֽס׃ | 1 |
೧ಸುಳ್ಳು ಸುದ್ದಿಯನ್ನು ಹಬ್ಬಿಸಬಾರದು. ದುಷ್ಟರೊಂದಿಗೆ ಸೇರಿ ಸುಳ್ಳು ಸಾಕ್ಷಿಯನ್ನು ಹೇಳಬಾರದು.
לֹֽא־תִהְיֶה אַחֲרֵֽי־רַבִּים לְרָעֹת וְלֹא־תַעֲנֶה עַל־רִב לִנְטֹת אַחֲרֵי רַבִּים לְהַטֹּֽת׃ | 2 |
೨ದುಷ್ಟ ಕಾರ್ಯವನ್ನು ಮಾಡುವವರು ಬಹಳಮಂದಿ ಇದ್ದಾರೆ, ಆದಾಗ್ಯೂ ನೀವು ಅವರ ಜೊತೆಯಲ್ಲಿ ಸೇರಬಾರದು. ಬಹು ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳಬಾರದು.
וְדָל לֹא תֶהְדַּר בְּרִיבֽוֹ׃ | 3 |
೩ಇದಲ್ಲದೆ ಬಡವನ ಮೇಲಿನ ಕರುಣೆಯಿಂದ ಪಕ್ಷಪಾತದ ತೀರ್ಮಾನವನ್ನು ಮಾಡಬಾರದು.
כִּי תִפְגַּע שׁוֹר אֹֽיִבְךָ אוֹ חֲמֹרוֹ תֹּעֶה הָשֵׁב תְּשִׁיבֶנּוּ לֽוֹ׃ | 4 |
೪ನಿನ್ನ ವೈರಿಯ ಎತ್ತಾಗಲಿ, ಕತ್ತೆಯಾಗಲಿ ತಪ್ಪಿಸಿಕೊಂಡು ಹೋಗಿರಲಾಗಿ ಅದು ನಿನಗೆ ಸಿಕ್ಕಿದರೆ ಅದನ್ನು ಅವನ ಬಳಿಗೆ ಹೋಗಿ ಒಪ್ಪಿಸಬೇಕು.
כִּֽי־תִרְאֶה חֲמוֹר שֹׂנַאֲךָ רֹבֵץ תַּחַת מַשָּׂאוֹ וְחָדַלְתָּ מֵעֲזֹב לוֹ עָזֹב תַּעֲזֹב עִמּֽוֹ׃ | 5 |
೫ನಿನ್ನನ್ನು ಹಗೆಮಾಡುವವನ ಕತ್ತೆಯ ಹೊರೆಯ ಕೆಳಗೆ ಬಿದ್ದಿರುವುದನ್ನು ಕಂಡರೆ, ಅದನ್ನು ಎಬ್ಬಿಸುವುದಕ್ಕೆ ಮನಸ್ಸಿಲ್ಲದಿದ್ದರೂ ಅವನಿಗೆ ಸಹಾಯ ಮಾಡಿ ಎಬ್ಬಿಸಲೇಬೇಕು.
לֹא תַטֶּה מִשְׁפַּט אֶבְיֹנְךָ בְּרִיבֽוֹ׃ | 6 |
೬ನಿಮ್ಮಲ್ಲಿರುವ ಬಡವರ ನ್ಯಾಯಕೋರಿ ನಿಮ್ಮ ಬಳಿಗೆ ಬಂದಾಗ ನೀವು ಅನ್ಯಾಯವಾಗಿ ತೀರ್ಮಾನಮಾಡಬಾರದು.
מִדְּבַר־שֶׁקֶר תִּרְחָק וְנָקִי וְצַדִּיק אַֽל־תַּהֲרֹג כִּי לֹא־אַצְדִּיק רָשָֽׁע׃ | 7 |
೭ಮೋಸದ ಕಾರ್ಯಕ್ಕೆ ದೂರವಾಗಿರಬೇಕು. ನಿರಪರಾಧಿಯೂ, ನೀತಿವಂತನಾಗಿಯೂ ಇರುವ ಮನುಷ್ಯನಿಗೆ ಮರಣದಂಡನೆಯನ್ನು ವಿಧಿಸಲೇಬಾರದು. ಅಂಥ ದುಷ್ಟನಿಗೆ ನಾನು ಶಿಕ್ಷೆಯನ್ನು ವಿಧಿಸದೇ ಬಿಡುವುದಿಲ್ಲ.
וְשֹׁחַד לֹא תִקָּח כִּי הַשֹּׁחַד יְעַוֵּר פִּקְחִים וִֽיסַלֵּף דִּבְרֵי צַדִּיקִֽים׃ | 8 |
೮ಲಂಚವನ್ನು ತೆಗೆದುಕೊಳ್ಳಬಾರದು, ಲಂಚವು ಕಣ್ಣುಳ್ಳವರನ್ನು ಕುರುಡರಂತೆ ಮಾಡುತ್ತದೆ, ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ತಪ್ಪಿಸುತ್ತದೆ.
וְגֵר לֹא תִלְחָץ וְאַתֶּם יְדַעְתֶּם אֶת־נֶפֶשׁ הַגֵּר כִּֽי־גֵרִים הֱיִיתֶם בְּאֶרֶץ מִצְרָֽיִם׃ | 9 |
೯ಪರದೇಶದವನಿಗೆ ಉಪದ್ರವವನ್ನು ಕೊಡಬಾರದು. ನೀವೂ ಐಗುಪ್ತದೇಶದಲ್ಲಿ ಪರದೇಶದವರಾಗಿದ್ದೀರಷ್ಟೇ. ಅಂಥವರ ಮನೋವ್ಯಥೆಯನ್ನು ತಿಳಿದವರಾಗಿದ್ದೀರಿ.
וְשֵׁשׁ שָׁנִים תִּזְרַע אֶת־אַרְצֶךָ וְאָסַפְתָּ אֶת־תְּבוּאָתָֽהּ׃ | 10 |
೧೦ಆರು ವರ್ಷ ನಿಮ್ಮ ಹೊಲವನ್ನು ಬಿತ್ತನೆಮಾಡಿ ಅದರ ಬೆಳೆಯನ್ನು ತೆಗೆದುಕೊಳ್ಳಿರಿ.
וְהַשְּׁבִיעִת תִּשְׁמְטֶנָּה וּנְטַשְׁתָּהּ וְאָֽכְלוּ אֶבְיֹנֵי עַמֶּךָ וְיִתְרָם תֹּאכַל חַיַּת הַשָּׂדֶה כֵּֽן־תַּעֲשֶׂה לְכַרְמְךָ לְזֵיתֶֽךָ׃ | 11 |
೧೧ಆದರೆ ಏಳನೆಯ ವರ್ಷದಲ್ಲಿ ಆ ಭೂಮಿಯನ್ನು ಉಳದೆ ಬೀಳುಬಿಡಬೇಕು. ನಿಮ್ಮ ದೇಶದ ಬಡವರು ಅದರಲ್ಲಿ ಬೆಳೆಯುವುದನ್ನು ತಿನ್ನಲಿ. ಮಿಕ್ಕದ್ದನ್ನು ಕಾಡುಮೃಗಗಳು ಮೇಯಲಿ. ನಿಮ್ಮ ದ್ರಾಕ್ಷಿತೋಟಗಳ ಮತ್ತು ಎಣ್ಣೇ ಮರಗಳ ತೋಪುಗಳ ವಿಷಯದಲ್ಲಿಯೂ ಇದೇ ರೀತಿಯಲ್ಲಿ ಮಾಡಬೇಕು.
שֵׁשֶׁת יָמִים תַּעֲשֶׂה מַעֲשֶׂיךָ וּבַיּוֹם הַשְּׁבִיעִי תִּשְׁבֹּת לְמַעַן יָנוּחַ שֽׁוֹרְךָ וַחֲמֹרֶךָ וְיִנָּפֵשׁ בֶּן־אֲמָתְךָ וְהַגֵּֽר׃ | 12 |
೧೨ಆರು ದಿನಗಳು ನಿಮ್ಮ ಕೆಲಸವನ್ನು ನಡಿಸಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನು ಮಾಡದೇ ಇರಬೇಕು. ಆ ಹೊತ್ತು ನಿಮ್ಮ ಎತ್ತುಗಳು, ಕತ್ತೆಗಳು, ದಾಸ, ದಾಸಿಯರು, ಪರದೇಶಸ್ಥರು ವಿಶ್ರಮಿಸಿಕೊಳ್ಳಲಿ.
וּבְכֹל אֲשֶׁר־אָמַרְתִּי אֲלֵיכֶם תִּשָּׁמֵרוּ וְשֵׁם אֱלֹהִים אֲחֵרִים לֹא תַזְכִּירוּ לֹא יִשָּׁמַע עַל־פִּֽיךָ׃ | 13 |
೧೩ನಾನು ನಿಮಗೆ ಹೇಳಿದ್ದನ್ನೆಲ್ಲಾ ಜಾಗರೂಕತೆಯಿಂದ ಕೈಕೊಳ್ಳಬೇಕು. ಅನ್ಯ ದೇವರುಗಳ ಹೆಸರುಗಳನ್ನು ಸ್ಮರಿಸಬಾರದು, ಅವುಗಳನ್ನು ಉಚ್ಚರಿಸಬಾರದು.
שָׁלֹשׁ רְגָלִים תָּחֹג לִי בַּשָּׁנָֽה׃ | 14 |
೧೪ನೀವು ವರ್ಷಕ್ಕೆ ಮೂರಾವರ್ತಿ ನನಗೆ ಹಬ್ಬಮಾಡಬೇಕು.
אֶת־חַג הַמַּצּוֹת תִּשְׁמֹר שִׁבְעַת יָמִים תֹּאכַל מַצּוֹת כַּֽאֲשֶׁר צִוִּיתִךָ לְמוֹעֵד חֹדֶשׁ הָֽאָבִיב כִּי־בוֹ יָצָאתָ מִמִּצְרָיִם וְלֹא־יֵרָאוּ פָנַי רֵיקָֽם׃ | 15 |
೧೫ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಹಬ್ಬ. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದಲ್ಲಿ ನೇಮಕವಾದ ಕಾಲದಲ್ಲಿ ಏಳು ದಿನವೂ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಆ ತಿಂಗಳಲ್ಲಿಯೇ ಐಗುಪ್ತ ದೇಶದಿಂದ ಹೊರಟು ಬಂದ ನೆನಪಿಗಾಗಿ ಇದನ್ನು ಆಚರಿಸಬೇಕು. ಕೈಯಲ್ಲಿ ಕಾಣಿಕೆಯಿಲ್ಲದೆ ಬರಿಗೈಯಲ್ಲಿ ನನ್ನ ಸನ್ನಿಧಿಗೆ ಯಾರು ಬರಬಾರದು.
וְחַג הַקָּצִיר בִּכּוּרֵי מַעֲשֶׂיךָ אֲשֶׁר תִּזְרַע בַּשָּׂדֶה וְחַג הָֽאָסִף בְּצֵאת הַשָּׁנָה בְּאׇסְפְּךָ אֶֽת־מַעֲשֶׂיךָ מִן־הַשָּׂדֶֽה׃ | 16 |
೧೬ಅದಲ್ಲದೆ ನೀವು ಬಿತ್ತಿದ ಹೊಲದಲ್ಲಿ ಪ್ರಥಮಫಲವು ದೊರೆತಾಗ ಸುಗ್ಗಿಯ ಹಬ್ಬವನ್ನು ಆಚರಿಸಬೇಕು. ಹೊಲ ತೋಟಗಳ ಬೆಳೆಯನ್ನೂ ಕೂಡಿಸುವಾಗ ಅಂದರೆ ವರ್ಷದ ಕೊನೆಯಲ್ಲಿ ಸುಗ್ಗಿ ಹಬ್ಬವನ್ನು ಆಚರಿಸಬೇಕು.
שָׁלֹשׁ פְּעָמִים בַּשָּׁנָה יֵרָאֶה כׇּל־זְכוּרְךָ אֶל־פְּנֵי הָאָדֹן ׀ יְהֹוָֽה׃ | 17 |
೧೭ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ಕರ್ತನಾದ ಯೆಹೋವನ ಸನ್ನಿಧಿಗೆ ಒಟ್ಟಾಗಿ ಸೇರಿ ಬರಬೇಕು.
לֹֽא־תִזְבַּח עַל־חָמֵץ דַּם־זִבְחִי וְלֹֽא־יָלִין חֵֽלֶב־חַגִּי עַד־בֹּֽקֶר׃ | 18 |
೧೮ನನಗೆ ಯಜ್ಞವನ್ನು ಮಾಡುವಾಗ ಆ ಯಜ್ಞಪಶುವಿನ ರಕ್ತದೊಡನೆ ಹುಳಿಯಾದ ಹಿಟ್ಟನ್ನು ಸಮರ್ಪಿಸಬಾರದು. ನನ್ನ ಹಬ್ಬದಲ್ಲಿ ನೀವು ನನಗೆ ಸಮರ್ಪಿಸಬೇಕಾದ ಪಶುವಿನ ಕೊಬ್ಬನ್ನು ಮರುದಿನದವರೆಗೆ ಇಡಲೇಬಾರದು.
רֵאשִׁית בִּכּוּרֵי אַדְמָתְךָ תָּבִיא בֵּית יְהֹוָה אֱלֹהֶיךָ לֹֽא־תְבַשֵּׁל גְּדִי בַּחֲלֵב אִמּֽוֹ׃ | 19 |
೧೯ನಿಮ್ಮ ಬೆಳೆಯ ಪ್ರಥಮಫಲದಲ್ಲಿ ಅತಿ ಶ್ರೇಷ್ಠವಾದದ್ದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಹೋತ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.
הִנֵּה אָנֹכִי שֹׁלֵחַ מַלְאָךְ לְפָנֶיךָ לִשְׁמׇרְךָ בַּדָּרֶךְ וְלַהֲבִיאֲךָ אֶל־הַמָּקוֹם אֲשֶׁר הֲכִנֹֽתִי׃ | 20 |
೨೦ಇಗೋ ದಾರಿಯಲ್ಲಿ ನಿಮ್ಮನ್ನು ಕಾಪಾಡುವುದಕ್ಕೂ, ನಾನು ಗೊತ್ತುಮಾಡಿರುವ ಸ್ಥಳಕ್ಕೆ ನಿಮ್ಮನ್ನು ಕರೆತರುವುದಕ್ಕೂ ದೂತನನ್ನು ನಿಮ್ಮ ಮುಂದಾಗಿ ಕಳುಹಿಸಿದ್ದೇನೆ.
הִשָּׁמֶר מִפָּנָיו וּשְׁמַע בְּקֹלוֹ אַל־תַּמֵּר בּוֹ כִּי לֹא יִשָּׂא לְפִשְׁעֲכֶם כִּי שְׁמִי בְּקִרְבּֽוֹ׃ | 21 |
೨೧ನೀವು ಆತನಲ್ಲಿ ಲಕ್ಷ್ಯವಿಟ್ಟು ಆತನ ಮಾತಿಗೆ ವಿಧೇಯರಾಗಿರಬೇಕು. ಆತನನ್ನು ಧಿಕ್ಕರಿಸಿದರೆ ನಿಮ್ಮ ಅಪರಾಧವನ್ನು ಕ್ಷಮಿಸಲಾರನು. ನನ್ನ ನಾಮಮಹಿಮೆ ಆತನಲ್ಲಿ ಇರುವುದು.
כִּי אִם־שָׁמוֹעַ תִּשְׁמַע בְּקֹלוֹ וְעָשִׂיתָ כֹּל אֲשֶׁר אֲדַבֵּר וְאָֽיַבְתִּי אֶת־אֹיְבֶיךָ וְצַרְתִּי אֶת־צֹרְרֶֽיךָ׃ | 22 |
೨೨ನೀವು ಆತನ ಮಾತುಗಳನ್ನು ಶ್ರದ್ಧೆಯಿಂದ ಆಲಿಸಿ ನನ್ನ ಆಜ್ಞೆಗಳ ಪ್ರಕಾರ ನಡೆದುಕೊಂಡರೆ ನಾನು ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ, ನಿಮ್ಮನ್ನು ಪೀಡಿಸುವವರನ್ನು ಪೀಡಿಸುವವನಾಗಿಯೂ ಇರುವೆನು.
כִּֽי־יֵלֵךְ מַלְאָכִי לְפָנֶיךָ וֶהֱבִֽיאֲךָ אֶל־הָֽאֱמֹרִי וְהַחִתִּי וְהַפְּרִזִּי וְהַֽכְּנַעֲנִי הַחִוִּי וְהַיְבוּסִי וְהִכְחַדְתִּֽיו׃ | 23 |
೨೩ನನ್ನ ದೂತನು ನಿಮ್ಮ ಮುಂದಾಗಿ ಹೊರಟು ಅಮೋರಿಯರು, ಹಿತ್ತಿಯರು, ಪೆರಿಜೀಯರು, ಕಾನಾನ್ಯರು, ಹಿವ್ವಿಯರು, ಯೆಬೂಸಿಯರೂ ಇರುವ ದೇಶಕ್ಕೆ ನಿಮ್ಮನ್ನು ಸೇರಿಸುವನು. ಅವರನ್ನಾದರೋ ನಾನು ನಿರ್ಮೂಲಮಾಡುವೆನು.
לֹֽא־תִשְׁתַּחֲוֶה לֵאלֹֽהֵיהֶם וְלֹא תׇֽעׇבְדֵם וְלֹא תַעֲשֶׂה כְּמַֽעֲשֵׂיהֶם כִּי הָרֵס תְּהָרְסֵם וְשַׁבֵּר תְּשַׁבֵּר מַצֵּבֹתֵיהֶֽם׃ | 24 |
೨೪ಅವರ ದೇವತೆಗಳಿಗೆ ನೀವು ಅಡ್ಡಬಿದ್ದು ನಮಸ್ಕರಿಸಲೂ ಬಾರದು, ಅವರ ಆಚರಣೆಗಳನ್ನು ಅನುಸರಿಸಲೇ ಬಾರದು. ಆ ಜನಗಳನ್ನು ನಿರ್ಮೂಲಮಾಡಿ ವಿಗ್ರಹಸ್ತಂಭಗಳನ್ನು ನಾಶಮಾಡಬೇಕು.
וַעֲבַדְתֶּם אֵת יְהֹוָה אֱלֹֽהֵיכֶם וּבֵרַךְ אֶֽת־לַחְמְךָ וְאֶת־מֵימֶיךָ וַהֲסִרֹתִי מַחֲלָה מִקִּרְבֶּֽךָ׃ | 25 |
೨೫ನಿಮ್ಮ ದೇವರಾದ ಯೆಹೋವನೊಬ್ಬನನ್ನೇ ಆರಾಧಿಸಬೇಕು. ಆಗ ಆತನು ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವನು. ನಿಮ್ಮಲ್ಲಿರುವ ವ್ಯಾಧಿಯನ್ನು ತೆಗೆದುಹಾಕುವನು.
לֹא תִהְיֶה מְשַׁכֵּלָה וַעֲקָרָה בְּאַרְצֶךָ אֶת־מִסְפַּר יָמֶיךָ אֲמַלֵּֽא׃ | 26 |
೨೬ನಿಮ್ಮ ದೇಶದಲ್ಲಿ ಗರ್ಭಪಾತವಾಗಲಿ, ಬಂಜೆತನವಾಗಲಿ ಇರುವುದೇ ಇಲ್ಲ. ನಿಮಗೆ ಸಂಪೂರ್ಣವಾದ ಆಯುಷ್ಯವನ್ನು ದಯಪಾಲಿಸುವೆನು.
אֶת־אֵֽימָתִי אֲשַׁלַּח לְפָנֶיךָ וְהַמֹּתִי אֶת־כׇּל־הָעָם אֲשֶׁר תָּבֹא בָּהֶם וְנָתַתִּי אֶת־כׇּל־אֹיְבֶיךָ אֵלֶיךָ עֹֽרֶף׃ | 27 |
೨೭ನೀವು ಹೋಗುವ ಎಲ್ಲಾ ಕಡೆಗಳಲ್ಲಿಯೂ ನಾನು ಜನಗಳ ಮನಸ್ಸಿನಲ್ಲಿ ಹೆದರಿಕೆಯನ್ನುಂಟು ಮಾಡಿ ಅವರನ್ನು ಕಳವಳಗೊಳಿಸಿ, ನಿಮ್ಮ ವಿರೋಧಿಗಳೆಲ್ಲರೂ ಓಡಿಹೋಗುವಂತೆ ಮಾಡುವೆನು.
וְשָׁלַחְתִּי אֶת־הַצִּרְעָה לְפָנֶיךָ וְגֵרְשָׁה אֶת־הַחִוִּי אֶת־הַֽכְּנַעֲנִי וְאֶת־הַחִתִּי מִלְּפָנֶֽיךָ׃ | 28 |
೨೮ಅದಲ್ಲದೆ ಕಡಜದ ಹುಳಗಳನ್ನು ನಿಮಗೆ ಮುಂಚಿತವಾಗಿ ಕಳುಹಿಸಿ ಹಿವ್ವಿಯರು, ಕಾನಾನ್ಯರು, ಹಿತ್ತಿಯರು ನಿಮ್ಮ ಮುಂದೆ ನಿಲ್ಲದಂತೆ ಅವು ಅವರನ್ನು ಓಡಿಸಿಬಿಡುವಂತೆ ಮಾಡುವೆನು.
לֹא אֲגָרְשֶׁנּוּ מִפָּנֶיךָ בְּשָׁנָה אֶחָת פֶּן־תִּהְיֶה הָאָרֶץ שְׁמָמָה וְרַבָּה עָלֶיךָ חַיַּת הַשָּׂדֶֽה׃ | 29 |
೨೯ಆದರೆ ನಾನು ಒಂದೇ ವರ್ಷದೊಳಗೆ ಅವರೆಲ್ಲರನ್ನು ಅಲ್ಲಿಂದ ಹೊರಡಿಸುವುದಿಲ್ಲ. ಏಕೆಂದರೆ ದೇಶದಲ್ಲಿ ಜನರು ಕಡಿಮೆಯಾಗುವುದರಿಂದ ಕಾಡುಮೃಗಗಳು ಹೆಚ್ಚಿ ನಿಮಗೆ ತೊಂದರೆಯಾದೀತು.
מְעַט מְעַט אֲגָרְשֶׁנּוּ מִפָּנֶיךָ עַד אֲשֶׁר תִּפְרֶה וְנָחַלְתָּ אֶת־הָאָֽרֶץ׃ | 30 |
೩೦ನೀವು ಅಭಿವೃದ್ಧಿಯಾಗಿ ದೇಶದಲ್ಲೆಲ್ಲಾ ತುಂಬಿಕೊಳ್ಳುವ ತನಕ ಅವರನ್ನು ಸ್ವಲ್ಪ ಸ್ವಲ್ಪವಾಗಿ ಹೊರಡಿಸುವೆನು.
וְשַׁתִּי אֶת־גְּבֻלְךָ מִיַּם־סוּף וְעַד־יָם פְּלִשְׁתִּים וּמִמִּדְבָּר עַד־הַנָּהָר כִּי ׀ אֶתֵּן בְּיֶדְכֶם אֵת יֹשְׁבֵי הָאָרֶץ וְגֵרַשְׁתָּמוֹ מִפָּנֶֽיךָ׃ | 31 |
೩೧ಕೆಂಪುಸಮುದ್ರದಿಂದ ಫಿಲಿಷ್ಟಿಯರ ದೇಶದ ಬಳಿಯಲ್ಲಿರುವ ಸಮುದ್ರದವರೆಗೂ ಮತ್ತು ಈ ಅರಣ್ಯದಿಂದ ಯೂಫ್ರೆಟಿಸ್ ಮಹಾನದಿಯವರೆಗೂ ಇರುವ ದೇಶವನ್ನೆಲ್ಲಾ ನಿಮಗಾಗಿ ನೇಮಿಸಿ ಅದರಲ್ಲಿರುವ ನಿವಾಸಿಗಳನ್ನು ನಿಮಗೆ ಅಧೀನಪಡಿಸುವೆನು. ನೀವು ಅವರನ್ನು ಹೊರಡಿಸುವಿರಿ.
לֹֽא־תִכְרֹת לָהֶם וְלֵאלֹֽהֵיהֶם בְּרִֽית׃ | 32 |
೩೨ನೀವು ಅವರೊಡನೆ ಅವರ ದೇವತೆಗಳೊಡನೆ ಆಗಲಿ ಯಾವುದೇ ವಿಧವಾದ ಒಡಂಬಡಿಕೆಯನ್ನೂ ಮಾಡಿಕೊಳ್ಳಬಾರದು.
לֹא יֵשְׁבוּ בְּאַרְצְךָ פֶּן־יַחֲטִיאוּ אֹתְךָ לִי כִּי תַעֲבֹד אֶת־אֱלֹהֵיהֶם כִּֽי־יִהְיֶה לְךָ לְמוֹקֵֽשׁ׃ | 33 |
೩೩ಅವರು ನಿಮ್ಮ ದೇಶದಲ್ಲೇ ವಾಸವಾಗಿರಬಾರದು. ವಾಸವಾಗಿದ್ದರೆ ನನಗೆ ವಿರುದ್ಧವಾಗಿ ನೀವು ಪಾಪ ಮಾಡುವಂತೆ ಅವರು ಪ್ರೇರೇಪಿಸುವರು. ನೀವು ಅವರ ದೇವತೆಗಳನ್ನು ಪೂಜಿಸಿದರೆ ಆ ಪೂಜೆಯು ನಿಮಗೆ ಉರುಲಾಗುವುದು.