< שמות 34 >
וַיֹּאמֶר יְהֹוָה אֶל־מֹשֶׁה פְּסׇל־לְךָ שְׁנֵֽי־לֻחֹת אֲבָנִים כָּרִאשֹׁנִים וְכָתַבְתִּי עַל־הַלֻּחֹת אֶת־הַדְּבָרִים אֲשֶׁר הָיוּ עַל־הַלֻּחֹת הָרִאשֹׁנִים אֲשֶׁר שִׁבַּֽרְתָּ׃ | 1 |
೧ಯೆಹೋವನು ಮೋಶೆಗೆ, “ನೀನು ಮೊದಲಿನ ಕಲ್ಲಿನ ಹಲಗೆಗಳಂತೆ ಇನ್ನೂ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿಕೋ. ನೀನು ಒಡೆದು ಬಿಟ್ಟ ಆ ಮೊದಲನೆಯ ಹಲಗೆಗಳ ಮೇಲಿದ್ದ ವಾಕ್ಯಗಳನ್ನು ಈ ಹಲಗೆಗಳ ಮೇಲೆ ನಾನು ಬರೆಯುವೆನು.
וֶהְיֵה נָכוֹן לַבֹּקֶר וְעָלִיתָ בַבֹּקֶר אֶל־הַר סִינַי וְנִצַּבְתָּ לִי שָׁם עַל־רֹאשׁ הָהָֽר׃ | 2 |
೨ಬೆಳಿಗ್ಗೆ ನೀನು ಸಿದ್ಧನಾಗಿ, ಸೀನಾಯಿ ಬೆಟ್ಟವನ್ನು ಹತ್ತಿ ಅಲ್ಲಿ ಬೆಟ್ಟದ ತುದಿಯ ಮೇಲೆ ನನ್ನ ಸನ್ನಿಧಿಯಲ್ಲಿ ನಿಂತಿರಬೇಕು.
וְאִישׁ לֹֽא־יַעֲלֶה עִמָּךְ וְגַם־אִישׁ אַל־יֵרָא בְּכׇל־הָהָר גַּם־הַצֹּאן וְהַבָּקָר אַל־יִרְעוּ אֶל־מוּל הָהָר הַהֽוּא׃ | 3 |
೩ಯಾರೂ ನಿನ್ನ ಜೊತೆಯಲ್ಲಿ ಬೆಟ್ಟದ ಮೇಲಕ್ಕೆ ಬರಬಾರದು. ಈ ಬೆಟ್ಟದ ಮೇಲೆ ಯಾರೂ ಎಲ್ಲಿಯೂ ಕಾಣಿಸಕೂಡದು; ಕುರಿದನಗಳೂ ಬೆಟ್ಟದ ಬಳಿಯಲ್ಲಿ ಮೇಯಬಾರದು” ಎಂದು ಹೇಳಿದನು.
וַיִּפְסֹל שְׁנֵֽי־לֻחֹת אֲבָנִים כָּרִאשֹׁנִים וַיַּשְׁכֵּם מֹשֶׁה בַבֹּקֶר וַיַּעַל אֶל־הַר סִינַי כַּאֲשֶׁר צִוָּה יְהֹוָה אֹתוֹ וַיִּקַּח בְּיָדוֹ שְׁנֵי לֻחֹת אֲבָנִֽים׃ | 4 |
೪ಆದಕಾರಣ ಮೋಶೆಯು ಮೊದಲಿದ್ದ ಹಲಗೆಗಳಂತೆ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿಕೊಂಡು, ಯೆಹೋವನ ಅಪ್ಪಣೆಯ ಮೇರೆಗೆ ಬೆಳಗ್ಗೆ ಎದ್ದು ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ತೆಗೆದುಕೊಂಡು ಸೀನಾಯಿಬೆಟ್ಟವನ್ನು ಹತ್ತಿದನು.
וַיֵּרֶד יְהֹוָה בֶּֽעָנָן וַיִּתְיַצֵּב עִמּוֹ שָׁם וַיִּקְרָא בְשֵׁם יְהֹוָֽה׃ | 5 |
೫ಆಗ ಯೆಹೋವನು ಮೇಘದಲ್ಲಿ ಇಳಿದು ಬಂದು ಅಲ್ಲಿ ಅವನ ಹತ್ತಿರ ನಿಂತು ಯೆಹೋವನೆಂಬ ತನ್ನ ನಾಮವನ್ನು ಪ್ರಕಟಿಸಿದನು.
וַיַּעֲבֹר יְהֹוָה ׀ עַל־פָּנָיו וַיִּקְרָא יְהֹוָה ׀ יְהֹוָה אֵל רַחוּם וְחַנּוּן אֶרֶךְ אַפַּיִם וְרַב־חֶסֶד וֶאֱמֶֽת׃ | 6 |
೬ಯೆಹೋವನು ಮೋಶೆಗೆ ಎದುರಾಗಿ ಹೋಗುತ್ತಾ ಪ್ರಕಟಿಸಿ ಹೇಳಿದ್ದೇನೆಂದರೆ; “ಯೆಹೋವನೆಂಬ ದೇವರು ಕರುಣಾಳುವು, ಕೃಪಾಳುವು, ದೀರ್ಘಶಾಂತವುಳ್ಳವನು, ಪ್ರೀತಿಯುಳ್ಳವನು ಹಾಗು ನಂಬಿಗಸ್ತನಾದ ದೇವರು ಆಗಿದ್ದೇನೆ;
נֹ צֵר חֶסֶד לָאֲלָפִים נֹשֵׂא עָוֺן וָפֶשַׁע וְחַטָּאָה וְנַקֵּה לֹא יְנַקֶּה פֹּקֵד ׀ עֲוֺן אָבוֹת עַל־בָּנִים וְעַל־בְּנֵי בָנִים עַל־שִׁלֵּשִׁים וְעַל־רִבֵּעִֽים׃ | 7 |
೭ಸಾವಿರಾರು ತಲೆಮಾರುಗಳವರೆಗೂ ದಯೆತೋರಿಸುವವನು; ದೋಷಾಪರಾಧ ಪಾಪಗಳನ್ನು ಕ್ಷಮಿಸುವವನು; ಆದರೂ ಅಪರಾಧಿಗಳನ್ನು ಶಿಕ್ಷಿಸದೆ ಬಿಡುವುದಿಲ್ಲ; ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಮಾರುಗಳವರೆಗೆ ಬರಮಾಡುವವನು ಆಗಿದ್ದಾನೆ” ಎಂಬುದೇ.
וַיְמַהֵר מֹשֶׁה וַיִּקֹּד אַרְצָה וַיִּשְׁתָּֽחוּ׃ | 8 |
೮ಮೋಶೆ ತ್ವರೆಪಟ್ಟು ನೆಲಕ್ಕೆ ಬಾಗಿ ನಮಸ್ಕರಿಸಿ,
וַיֹּאמֶר אִם־נָא מָצָאתִי חֵן בְּעֵינֶיךָ אֲדֹנָי יֵֽלֶךְ־נָא אֲדֹנָי בְּקִרְבֵּנוּ כִּי עַם־קְשֵׁה־עֹרֶף הוּא וְסָלַחְתָּ לַעֲוֺנֵנוּ וּלְחַטָּאתֵנוּ וּנְחַלְתָּֽנוּ׃ | 9 |
೯“ಕರ್ತನೇ, ನಿನ್ನ ದೃಷ್ಟಿಯಲ್ಲಿ ದಯೆಯು ನನಗೆ ದೊರಕಿರುವುದಾದರೆ ನೀನೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಮೊಂಡುಬುದ್ಧಿಯವರೇ; ಆದಾಗ್ಯೂ ನೀನು ನಮ್ಮ ಪಾಪಗಳನ್ನೂ, ಅಧರ್ಮಗಳನ್ನು ಕ್ಷಮಿಸಿ ನಿನ್ನ ಸ್ವತ್ತಾಗಿ ನಮ್ಮನ್ನು ಸ್ವೀಕರಿಸಬೇಕು” ಎಂದನು.
וַיֹּאמֶר הִנֵּה אָנֹכִי כֹּרֵת בְּרִית נֶגֶד כׇּֽל־עַמְּךָ אֶעֱשֶׂה נִפְלָאֹת אֲשֶׁר לֹֽא־נִבְרְאוּ בְכׇל־הָאָרֶץ וּבְכׇל־הַגּוֹיִם וְרָאָה כׇל־הָעָם אֲשֶׁר־אַתָּה בְקִרְבּוֹ אֶת־מַעֲשֵׂה יְהֹוָה כִּֽי־נוֹרָא הוּא אֲשֶׁר אֲנִי עֹשֶׂה עִמָּֽךְ׃ | 10 |
೧೦ಯೆಹೋವನು ಹೇಳಿದ್ದೇನೆಂದರೆ, “ಕೇಳು, ನಾನು ಒಂದು ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ, ಲೋಕದಲ್ಲಿ ಎಲ್ಲಿಯೂ ಯಾವ ಜನಾಂಗದಲ್ಲಿಯಾದರೂ ನಡೆಯದಂಥ ಮಹತ್ಕಾರ್ಯಗಳನ್ನು ನಿನ್ನ ಜನರೆಲ್ಲರು ನೋಡುವಂತೆ ನಡೆಸುವೆನು. ನಿಮ್ಮ ಸುತ್ತಮುತ್ತಲಿರುವ ಎಲ್ಲಾ ಜನರೂ ಯೆಹೋವನು ಮಾಡುವ ಮಹತ್ಕಾರ್ಯವನ್ನು ನೋಡುವರು. ನಾನು ನಿಮ್ಮ ವಿಷಯದಲ್ಲಿ ಮಾಡಬೇಕೆಂದಿರುವುದು ಭಯಂಕರವಾದದ್ದಾಗಿದೆ.
שְׁמׇר־לְךָ אֵת אֲשֶׁר אָנֹכִי מְצַוְּךָ הַיּוֹם הִנְנִי גֹרֵשׁ מִפָּנֶיךָ אֶת־הָאֱמֹרִי וְהַֽכְּנַעֲנִי וְהַחִתִּי וְהַפְּרִזִּי וְהַחִוִּי וְהַיְבוּסִֽי׃ | 11 |
೧೧ನಾನು ಈ ದಿನ ನಿಮಗೆ ಆಜ್ಞಾಪಿಸುವುದನ್ನು ನೀವು ಅನುಸರಿಸಿ ನಡೆಯಬೇಕು. ಇಗೋ, ನಾನು ಅಮೋರಿಯರನ್ನು, ಕಾನಾನ್ಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಹಾಗು ಯೆಬೂಸಿಯರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುವೆನು.
הִשָּׁמֶר לְךָ פֶּן־תִּכְרֹת בְּרִית לְיוֹשֵׁב הָאָרֶץ אֲשֶׁר אַתָּה בָּא עָלֶיהָ פֶּן־יִהְיֶה לְמוֹקֵשׁ בְּקִרְבֶּֽךָ׃ | 12 |
೧೨ನೀವು ಹೋಗಿ ಸೇರುವ ದೇಶದ ನಿವಾಸಿಗಳ ಸಂಗಡ ಯಾವ ಒಡಂಬಡಿಕೆಯನ್ನೂ ಮಾಡಿಕೊಳ್ಳದಂತೆ ಎಚ್ಚರಿಕೆಯಿಂದಿರಿ; ಹಾಗೆ ಮಾಡಿಕೊಂಡರೆ ಅದು ನಿಮ್ಮ ಮಧ್ಯದಲ್ಲಿ ಉರುಲಿನಂತಿರುವುದು.
כִּי אֶת־מִזְבְּחֹתָם תִּתֹּצוּן וְאֶת־מַצֵּבֹתָם תְּשַׁבֵּרוּן וְאֶת־אֲשֵׁרָיו תִּכְרֹתֽוּן׃ | 13 |
೧೩ಆದರೆ ನೀವು ಅವರ ಯಜ್ಞವೇದಿಗಳನ್ನು ಕೆಡವಿ ಅವರ ಕಲ್ಲುಕಂಬಗಳನ್ನು ಒಡೆದು ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು.
כִּי לֹא תִֽשְׁתַּחֲוֶה לְאֵל אַחֵ ר כִּי יְהֹוָה קַנָּא שְׁמוֹ אֵל קַנָּא הֽוּא׃ | 14 |
೧೪ಏಕೆಂದರೆ ತೀಕ್ಷ್ಣತೆಯುಳ್ಳವನು ಎಂಬ ಹೆಸರುಳ್ಳ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದ್ದರಿಂದ ನೀವು ಬೇರೆ ಯಾವ ದೇವರ ಮುಂದೆಯೂ ಅಡ್ಡಬೀಳಬಾರದು.
פֶּן־תִּכְרֹת בְּרִית לְיוֹשֵׁב הָאָרֶץ וְזָנוּ ׀ אַחֲרֵי אֱלֹֽהֵיהֶם וְזָבְחוּ לֵאלֹהֵיהֶם וְקָרָא לְךָ וְאָכַלְתָּ מִזִּבְחֽוֹ׃ | 15 |
೧೫ನೀವು ಆ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಮಾಡಿಕೊಳ್ಳದಂತೆ ಜಾಗರೂಕರಾಗಿರಿ, ಮಾಡಿಕೊಂಡರೆ ಅವರು ತಮ್ಮ ದೇವತೆಗಳನ್ನು ಪೂಜಿಸಿ ಯಜ್ಞಗಳನ್ನು ಮಾಡುವಾಗ ಅವರಲ್ಲಿ ಒಬ್ಬನು ಯಜ್ಞಭೋಜನಕ್ಕೆ ನಿಮ್ಮನ್ನೂ ಕರೆದಾನು, ನೀವು ಹೋಗಿ ಭೋಜನ ಮಾಡಬೇಕಾದೀತು,
וְלָקַחְתָּ מִבְּנֹתָיו לְבָנֶיךָ וְזָנוּ בְנֹתָיו אַחֲרֵי אֱלֹהֵיהֶן וְהִזְנוּ אֶת־בָּנֶיךָ אַחֲרֵי אֱלֹהֵיהֶֽן׃ | 16 |
೧೬ಅದಲ್ಲದೆ ನೀವು ನಿಮ್ಮ ಪುತ್ರರಿಗಾಗಿ ಅವರಲ್ಲಿ ಪುತ್ರಿಯರನ್ನು ತೆಗೆದುಕೊಳ್ಳುವುದಕ್ಕೆ ಅದು ಮಾರ್ಗವಾಗುವುದು; ತರುವಾಯ ಆ ಸೊಸೆಯರು ತವರುಮನೆಯ ದೇವತೆಗಳನ್ನು ಪೂಜಿಸುವವರಾಗಿ ನಿಮ್ಮ ಮಕ್ಕಳನ್ನೂ ಅನ್ಯದೇವರುಗಳ ಪೂಜೆ ಎಂಬ ವ್ಯಭಿಚಾರಕ್ಕೆ ಎಳೆದಾರು, ಎಚ್ಚರ.
אֱלֹהֵי מַסֵּכָה לֹא תַעֲשֶׂה־לָּֽךְ׃ | 17 |
೧೭ಎರಕದ ವಿಗ್ರಹಗಳನ್ನು ಮಾಡಿಸಿಕೊಳ್ಳಬಾರದು.
אֶת־חַג הַמַּצּוֹת תִּשְׁמֹר שִׁבְעַת יָמִים תֹּאכַל מַצּוֹת אֲשֶׁר צִוִּיתִךָ לְמוֹעֵד חֹדֶשׁ הָאָבִיב כִּי בְּחֹדֶשׁ הָֽאָבִיב יָצָאתָ מִמִּצְרָֽיִם׃ | 18 |
೧೮“ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದಲ್ಲಿ ನೇಮಕವಾದ ಕಾಲದಲ್ಲಿ ಏಳು ದಿನಗಳ ಕಾಲ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ನೀವು ಚೈತ್ರಮಾಸದಲ್ಲಿಯೇ ಐಗುಪ್ತದೇಶದಿಂದ ಬಿಡುಗಡೆಯಾಗಿ ಬಂದಿರಲ್ಲವೇ?
כׇּל־פֶּטֶר רֶחֶם לִי וְכׇֽל־מִקְנְךָ תִּזָּכָר פֶּטֶר שׁוֹר וָשֶֽׂה׃ | 19 |
೧೯“ಪ್ರಥಮ ಗರ್ಭಫಲವೆಲ್ಲಾ ಅಂದರೆ ನಿಮ್ಮ ದನ ಕುರಿಗಳಲ್ಲಿ ಹುಟ್ಟುವ ಚೊಚ್ಚಲು ಮರಿಗಳೆಲ್ಲಾ ಗಂಡಾದ ಪಕ್ಷಕ್ಕೆ ನನ್ನದೇ.
וּפֶטֶר חֲמוֹר תִּפְדֶּה בְשֶׂה וְאִם־לֹא תִפְדֶּה וַעֲרַפְתּוֹ כֹּל בְּכוֹר בָּנֶיךָ תִּפְדֶּה וְלֹֽא־יֵרָאוּ פָנַי רֵיקָֽם׃ | 20 |
೨೦ಕತ್ತೆಯ ಮರಿಗೆ ಬದಲಾಗಿ ಕುರಿಮರಿಯನ್ನು ಕೊಟ್ಟು ಆ ಕತ್ತೆಮರಿಯನ್ನು ಬಿಡಿಸಬಹುದು; ಹಾಗೆ ಬಿಡಿಸಲೊಲ್ಲದೆ ಹೋದರೆ ಅದರ ಕುತ್ತಿಗೆ ಮುರಿದು ಕೊಂದುಬಿಡಬೇಕು. ಆದರೆ ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ಬದಲು ಕೊಟ್ಟು ಬಿಡಿಸಿಕೊಳ್ಳಲೇ ಬೇಕು. ಒಬ್ಬರೂ ಬರಿಗೈಯಲ್ಲಿ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು.
שֵׁשֶׁת יָמִים תַּעֲבֹד וּבַיּוֹם הַשְּׁבִיעִי תִּשְׁבֹּת בֶּחָרִישׁ וּבַקָּצִיר תִּשְׁבֹּֽת׃ | 21 |
೨೧“ಆರು ದಿನಗಳು ನಿಮ್ಮ ಕೆಲಸವನ್ನು ಮಾಡಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನೂ ಮಾಡದೆ ಸ್ವಸ್ಥರಾಗಿರಬೇಕು. ಉಳುವ ಕಾಲದಲ್ಲಿಯೂ, ಕೊಯ್ಯುವ ಕಾಲದಲ್ಲಿಯೂ ಹಾಗೆಯೇ ಏಳನೆಯ ದಿನದಲ್ಲಿ ಕೆಲಸಮಾಡದೆ ಇರಬೇಕು.
וְחַג שָׁבֻעֹת תַּעֲשֶׂה לְךָ בִּכּוּרֵי קְצִיר חִטִּים וְחַג הָֽאָסִיף תְּקוּפַת הַשָּׁנָֽה׃ | 22 |
೨೨“ಗೋದಿ ಬೆಳೆಯ ಪ್ರಥಮ ಫಲದ ಸಮರ್ಪಣೆಯನ್ನು ಪಸ್ಕಹಬ್ಬವಾಗಿ ಏಳು ವಾರಗಳ ನಂತರ ಸುಗ್ಗಿ ಹಬ್ಬವನ್ನು ಆಚರಿಸುವಾಗ ಸಮರ್ಪಿಸಬೇಕು. ವರ್ಷದ ಅಂತ್ಯದಲ್ಲಿ ಫಲಸಂಗ್ರಹದ ಹಬ್ಬವನ್ನೂ ಆಚರಿಸಬೇಕು.
שָׁלֹשׁ פְּעָמִים בַּשָּׁנָה יֵרָאֶה כׇּל־זְכוּרְךָ אֶת־פְּנֵי הָֽאָדֹן ׀ יְהֹוָה אֱלֹהֵי יִשְׂרָאֵֽל׃ | 23 |
೨೩ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ಇಸ್ರಾಯೇಲರ ದೇವರಾಗಿರುವ ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ಬರಬೇಕು.
כִּֽי־אוֹרִישׁ גּוֹיִם מִפָּנֶיךָ וְהִרְחַבְתִּי אֶת־גְּבֻלֶךָ וְלֹא־יַחְמֹד אִישׁ אֶֽת־אַרְצְךָ בַּעֲלֹֽתְךָ לֵרָאוֹת אֶת־פְּנֵי יְהֹוָה אֱלֹהֶיךָ שָׁלֹשׁ פְּעָמִים בַּשָּׁנָֽה׃ | 24 |
೨೪ನಾನು ನಿಮ್ಮ ಎದುರಿನಿಂದ ಅನ್ಯಜನಾಂಗಗಳನ್ನು ಹೊರಡಿಸಿ ನಿಮ್ಮ ದೇಶವನ್ನು ವಿಸ್ತರಿಸುವೆನು. ನೀವು ವರ್ಷಕ್ಕೆ ಮೂರಾವರ್ತಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಗೆ ಹೋಗುವಾಗ ಯಾರೂ ನಿಮ್ಮ ಭೂಮಿಯನ್ನು ಆಶೆಪಟ್ಟು ಅಪಹರಿಸುವುದಿಲ್ಲ.
לֹֽא־תִשְׁחַט עַל־חָמֵץ דַּם־זִבְחִי וְלֹא־יָלִין לַבֹּקֶר זֶבַח חַג הַפָּֽסַח׃ | 25 |
೨೫“ನನಗೆ ಯಜ್ಞವನ್ನು ಮಾಡುವಾಗ ಆ ಯಜ್ಞಪಶುವಿನ ರಕ್ತದೊಡನೆ ಹುಳಿಹಿಟ್ಟನ್ನು ಸಮರ್ಪಿಸಕೂಡದು. ಪಸ್ಕದಲ್ಲಿ ನೀವು ಸಮರ್ಪಿಸಿದ ಯಜ್ಞಮಾಂಸವನ್ನು ಮರುದಿನದ ಸೂರ್ಯೋದಯದವರೆಗೂ ಉಳಿಸಿಕೊಳ್ಳಬಾರದು.
רֵאשִׁית בִּכּוּרֵי אַדְמָתְךָ תָּבִיא בֵּית יְהֹוָה אֱלֹהֶיךָ לֹא־תְבַשֵּׁל גְּדִי בַּחֲלֵב אִמּֽוֹ׃ | 26 |
೨೬ಭೂಮಿಯ ಪ್ರಥಮ ಫಲಗಳಲ್ಲಿ ಶ್ರೇಷ್ಠವಾದುದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.”
וַיֹּאמֶר יְהֹוָה אֶל־מֹשֶׁה כְּתׇב־לְךָ אֶת־הַדְּבָרִים הָאֵלֶּה כִּי עַל־פִּי ׀ הַדְּבָרִים הָאֵלֶּה כָּרַתִּי אִתְּךָ בְּרִית וְאֶת־יִשְׂרָאֵֽל׃ | 27 |
೨೭ಯೆಹೋವನು ಮೋಶೆಗೆ, “ನೀನು ಈ ವಾಕ್ಯಗಳನ್ನು ಬರೆ, ಏಕೆಂದರೆ ಈ ವಾಕ್ಯಗಳ ಮೇರೆಗೆ ನಿನ್ನ ಸಂಗಡಲೂ ಇಸ್ರಾಯೇಲರ ಸಂಗಡಲೂ ಒಡಂಬಡಿಕೆ ಮಾಡಿಕೊಂಡಿದ್ದೇನೆ” ಎಂದು ಅಜ್ಞಾಪಿಸಿದನು.
וַֽיְהִי־שָׁם עִם־יְהֹוָה אַרְבָּעִים יוֹם וְאַרְבָּעִים לַיְלָה לֶחֶם לֹא אָכַל וּמַיִם לֹא שָׁתָה וַיִּכְתֹּב עַל־הַלֻּחֹת אֵת דִּבְרֵי הַבְּרִית עֲשֶׂרֶת הַדְּבָרִֽים׃ | 28 |
೨೮ಮೋಶೆಯು ಆ ಬೆಟ್ಟದಲ್ಲಿ ಯೆಹೋವನ ಸನ್ನಿಧಿಯಲ್ಲಿ ಹಗಲಿರುಳು ನಲ್ವತ್ತು ದಿನ ಇದ್ದನು. ಆ ದಿನಗಳಲ್ಲಿ ಅವನು ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ. ಆತನು ಒಡಂಬಡಿಕೆಯ ವಾಕ್ಯಗಳನ್ನು ಅಂದರೆ ಹತ್ತು ಆಜ್ಞೆಗಳನ್ನು ಆ ಕಲ್ಲಿನ ಹಲಗೆಗಳ ಮೇಲೆ ಬರೆದನು.
וַיְהִי בְּרֶדֶת מֹשֶׁה מֵהַר סִינַי וּשְׁנֵי לֻחֹת הָֽעֵדֻת בְּיַד־מֹשֶׁה בְּרִדְתּוֹ מִן־הָהָר וּמֹשֶׁה לֹֽא־יָדַע כִּי קָרַן עוֹר פָּנָיו בְּדַבְּרוֹ אִתּֽוֹ׃ | 29 |
೨೯ಮೋಶೆಯು ಆಜ್ಞಾಶಾಸನಗಳಾದ ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಸೀನಾಯಿ ಬೆಟ್ಟದಿಂದ ಇಳಿದುಬಂದಾಗ ಅವನು ಯೆಹೋವನ ಸನ್ನಿಧಿಯಲ್ಲಿ ಇದ್ದು ಆತನ ಸಂಗಡ ಸಂಭಾಷಿಸಿದ್ದರಿಂದ ಅವನ ಮುಖವು ಪ್ರಕಾಶಮಾನವಾಗಿತ್ತು; ಆದರೆ ಅ ಪ್ರಭಾವವು ಅವನಿಗೆ ತಿಳಿದಿರಲಿಲ್ಲ.
וַיַּרְא אַהֲרֹן וְכׇל־בְּנֵי יִשְׂרָאֵל אֶת־מֹשֶׁה וְהִנֵּה קָרַן עוֹר פָּנָיו וַיִּֽירְאוּ מִגֶּשֶׁת אֵלָֽיו׃ | 30 |
೩೦ಮೋಶೆಯ ಮುಖವು ಪ್ರಕಾಶಮಾನವಾಗಿರುವುದನ್ನು ಆರೋನನೂ ಇಸ್ರಾಯೇಲರೆಲ್ಲರೂ ನೋಡಿ ಅವನ ಹತ್ತಿರಕ್ಕೆ ಬರುವುದಕ್ಕೆ ಭಯಪಟ್ಟರು.
וַיִּקְרָא אֲלֵהֶם מֹשֶׁה וַיָּשֻׁבוּ אֵלָיו אַהֲרֹן וְכׇל־הַנְּשִׂאִים בָּעֵדָה וַיְדַבֵּר מֹשֶׁה אֲלֵהֶֽם׃ | 31 |
೩೧ಆದರೆ ಮೋಶೆಯು ಅವರನ್ನು ಕರೆಯಲು ಆರೋನನೂ ಸಮೂಹದ ನಾಯಕರೆಲ್ಲರೂ ಅವನ ಬಳಿಗೆ ಬಂದರು; ಮೋಶೆ ಅವರ ಸಂಗಡ ಮಾತನಾಡಿದನು.
וְאַחֲרֵי־כֵן נִגְּשׁוּ כׇּל־בְּנֵי יִשְׂרָאֵל וַיְצַוֵּם אֵת כׇּל־אֲשֶׁר דִּבֶּר יְהֹוָה אִתּוֹ בְּהַר סִינָֽי׃ | 32 |
೩೨ತರುವಾಯ ಇಸ್ರಾಯೇಲರೆಲ್ಲರೂ ಹತ್ತಿರಕ್ಕೆ ಬಂದರು. ಮೋಶೆಯು ತಾನು ಸೀನಾಯಿಬೆಟ್ಟದಲ್ಲಿ ಯೆಹೋವನಿಂದ ಹೊಂದಿದ ಆಜ್ಞೆಗಳನ್ನೆಲ್ಲಾ ಅವರಿಗೆ ತಿಳಿಸಿದನು.
וַיְכַל מֹשֶׁה מִדַּבֵּר אִתָּם וַיִּתֵּן עַל־פָּנָיו מַסְוֶֽה׃ | 33 |
೩೩ಮೋಶೆಯು ಅವರ ಸಂಗಡ ಮಾತನಾಡಿ ಮುಗಿಸಿದ ನಂತರ ತನ್ನ ಮುಖದ ಮೇಲೆ ಮುಸುಕುಹಾಕಿಕೊಂಡನು.
וּבְבֹא מֹשֶׁה לִפְנֵי יְהֹוָה לְדַבֵּר אִתּוֹ יָסִיר אֶת־הַמַּסְוֶה עַד־צֵאתוֹ וְיָצָא וְדִבֶּר אֶל־בְּנֵי יִשְׂרָאֵל אֵת אֲשֶׁר יְצֻוֶּֽה׃ | 34 |
೩೪ಮೋಶೆಯು ಯೆಹೋವನ ಸಂಗಡ ಮಾತನಾಡಬೇಕೆಂದು ಆತನ ಸನ್ನಿಧಿಗೆ ಹೋಗುವಾಗಲೆಲ್ಲಾ ಈ ಮುಸುಕನ್ನು ಹಾಕಿಕೊಳ್ಳುತ್ತಿದ್ದನು. ಹೊರಗೆ ಬಂದಾಗ ಆ ಮುಸುಕನ್ನು ತೆಗೆದಿಡುತ್ತಿದ್ದನು. ಅವನು ಹೊರಗೆ ಬಂದಾಗ ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಇಸ್ರಾಯೇಲರಿಗೆ ತಿಳಿಸುತ್ತಿದ್ದನು.
וְרָאוּ בְנֵֽי־יִשְׂרָאֵל אֶת־פְּנֵי מֹשֶׁה כִּי קָרַן עוֹר פְּנֵי מֹשֶׁה וְהֵשִׁיב מֹשֶׁה אֶת־הַמַּסְוֶה עַל־פָּנָיו עַד־בֹּאוֹ לְדַבֵּר אִתּֽוֹ׃ | 35 |
೩೫ಮೋಶೆಯ ಮುಖವು ಪ್ರಕಾಶಮಾನವಾಗಿರುವುದನ್ನು ಇಸ್ರಾಯೇಲರು ನೋಡುತ್ತಿದ್ದರು. ಆದಕಾರಣ ಅವನು ಯೆಹೋವನ ಸಂಗಡ ಮಾತನಾಡುವುದಕ್ಕೆ ಹೋಗುವವರೆಗೆ ತನ್ನ ಮುಖದ ಮೇಲೆ ಆ ಮುಸುಕನ್ನು ಪುನಃ ಹಾಕಿಕೊಂಡಿರುತ್ತಿದ್ದನು.