< שמות 6 >
וַיֹּאמֶר יְהֹוָה אֶל־מֹשֶׁה עַתָּה תִרְאֶה אֲשֶׁר אֶֽעֱשֶׂה לְפַרְעֹה כִּי בְיָד חֲזָקָה יְשַׁלְּחֵם וּבְיָד חֲזָקָה יְגָרְשֵׁם מֵאַרְצֽוֹ׃ | 1 |
ಆಗ ಯೆಹೋವ ದೇವರು ಮೋಶೆಗೆ, “ನಾನು ಫರೋಹನಿಗೆ ಮಾಡುವುದನ್ನು ಈಗ ನೀನು ನೋಡುವೆ. ನನ್ನ ಬಲವಾದ ಹಸ್ತವನ್ನು ಕಂಡು ಅವನು ಅವರನ್ನು ಹೋಗಗೊಡಿಸುವನು. ನನ್ನ ಬಲವಾದ ಹಸ್ತದ ಕಾರಣದಿಂದ ಅವನು ಅವರನ್ನು ತನ್ನ ದೇಶದೊಳಗಿಂದ ಹೊರಡಿಸುವನು,” ಎಂದರು.
וַיְדַבֵּר אֱלֹהִים אֶל־מֹשֶׁה וַיֹּאמֶר אֵלָיו אֲנִי יְהֹוָֽה׃ | 2 |
ಇದಲ್ಲದೆ ದೇವರು ಮೋಶೆಯ ಸಂಗಡ ಮಾತನಾಡಿ, “ನಾನೇ ಯೆಹೋವ ದೇವರು.
וָאֵרָא אֶל־אַבְרָהָם אֶל־יִצְחָק וְאֶֽל־יַעֲקֹב בְּאֵל שַׁדָּי וּשְׁמִי יְהֹוָה לֹא נוֹדַעְתִּי לָהֶֽם׃ | 3 |
ನಾನೇ ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಸರ್ವಶಕ್ತ ದೇವರೆಂದು ಪ್ರಕಟಿಸಿಗೊಂಡೆನು. ಆದರೆ ಯೆಹೋವ ದೇವರೆಂಬ ನನ್ನ ಹೆಸರಿನಿಂದ ನಾನು ಅವರಿಗೆ ಪೂರ್ಣವಾಗಿ ತಿಳಿಸಲಿಲ್ಲ.
וְגַם הֲקִמֹתִי אֶת־בְּרִיתִי אִתָּם לָתֵת לָהֶם אֶת־אֶרֶץ כְּנָעַן אֵת אֶרֶץ מְגֻרֵיהֶם אֲשֶׁר־גָּרוּ בָֽהּ׃ | 4 |
ಕಾನಾನ್ ದೇಶವನ್ನು ಅಂದರೆ, ಅವರು ವಾಸವಾಗಿದ್ದ ಅವರ ಪ್ರವಾಸದ ದೇಶವನ್ನು ನಾನು ಅವರಿಗೆ ಕೊಡುವೆನೆಂದು ಅವರ ಸಂಗಡ ನನ್ನ ಒಡಂಬಡಿಕೆಯನ್ನು ದೃಢಪಡಿಸಿದೆನು.
וְגַם ׀ אֲנִי שָׁמַעְתִּי אֶֽת־נַאֲקַת בְּנֵי יִשְׂרָאֵל אֲשֶׁר מִצְרַיִם מַעֲבִדִים אֹתָם וָאֶזְכֹּר אֶת־בְּרִיתִֽי׃ | 5 |
ಈಜಿಪ್ಟಿನವರು ದಾಸರನ್ನಾಗಿ ಇಟ್ಟುಕೊಂಡಿರುವ ಇಸ್ರಾಯೇಲರ ನರಳುವಿಕೆಯನ್ನು ಕೇಳಿ, ನನ್ನ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡೆನು.
לָכֵן אֱמֹר לִבְנֵֽי־יִשְׂרָאֵל אֲנִי יְהֹוָה וְהוֹצֵאתִי אֶתְכֶם מִתַּחַת סִבְלֹת מִצְרַיִם וְהִצַּלְתִּי אֶתְכֶם מֵעֲבֹדָתָם וְגָאַלְתִּי אֶתְכֶם בִּזְרוֹעַ נְטוּיָה וּבִשְׁפָטִים גְּדֹלִֽים׃ | 6 |
“ಆದ್ದರಿಂದ ಇಸ್ರಾಯೇಲರಿಗೆ, ‘ನಾನೇ ಯೆಹೋವ ದೇವರು. ನಾನು ನಿಮ್ಮನ್ನು ಈಜಿಪ್ಟಿನ ಬಿಟ್ಟಿಕೆಲಸದಿಂದ ಅವರಿಗೆ ದಾಸತ್ವದಲ್ಲಿರುವುದರಿಂದ, ನಾನು ಚಾಚಿದ ಬಾಹುವಿನಿಂದಲೂ ಬಲವಾದ ನ್ಯಾಯತೀರ್ಪುಗಳಿಂದಲೂ ನಿಮ್ಮನ್ನು ಬಿಡಿಸುವೆನು.
וְלָקַחְתִּי אֶתְכֶם לִי לְעָם וְהָיִיתִי לָכֶם לֵֽאלֹהִים וִֽידַעְתֶּם כִּי אֲנִי יְהֹוָה אֱלֹהֵיכֶם הַמּוֹצִיא אֶתְכֶם מִתַּחַת סִבְלוֹת מִצְרָֽיִם׃ | 7 |
ನಿಮ್ಮನ್ನು ನನ್ನ ಜನರನ್ನಾಗಿ ತೆಗೆದುಕೊಂಡು ನಿಮಗೆ ದೇವರಾಗಿರುವೆನು. ಈಜಿಪ್ಟಿನ ಬಿಟ್ಟಿಕೆಲಸಗಳೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ, ಯೆಹೋವ ದೇವರಾಗಿರುವ ನಾನೇ ನಿಮ್ಮ ದೇವರಾಗಿದ್ದೇನೆಂದು ನಿಮಗೆ ತಿಳಿಯುವುದು.
וְהֵבֵאתִי אֶתְכֶם אֶל־הָאָרֶץ אֲשֶׁר נָשָׂאתִי אֶת־יָדִי לָתֵת אֹתָהּ לְאַבְרָהָם לְיִצְחָק וּֽלְיַעֲקֹב וְנָתַתִּי אֹתָהּ לָכֶם מוֹרָשָׁה אֲנִי יְהֹוָֽה׃ | 8 |
ನಾನು ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಕೊಡುವೆನೆಂದು ಕೈಯನ್ನೆತ್ತಿ ಪ್ರಮಾಣ ಮಾಡಿದ ದೇಶದಲ್ಲಿ ನಿಮ್ಮನ್ನು ಬರಮಾಡಿ, ಅದನ್ನು ನಿಮಗೆ ಸೊತ್ತಾಗಿ ಕೊಡುವೆನೆಂದು ಹೇಳಿದ ಯೆಹೋವ ದೇವರು ನಾನೇ,’ ಎಂದು ಹೇಳು,” ಎಂದರು.
וַיְדַבֵּר מֹשֶׁה כֵּן אֶל־בְּנֵי יִשְׂרָאֵל וְלֹא שָֽׁמְעוּ אֶל־מֹשֶׁה מִקֹּצֶר רוּחַ וּמֵעֲבֹדָה קָשָֽׁה׃ | 9 |
ಮೋಶೆಯು ಇಸ್ರಾಯೇಲರಿಗೆ ಹಾಗೆ ಹೇಳಿದಾಗ, ಅವರು ಮನೋವೇದನೆಯ ದೆಸೆಯಿಂದಲೂ ಕ್ರೂರವಾದ ದಾಸತ್ವದ ದೆಸೆಯಿಂದಲೂ ಮೋಶೆಯ ಮಾತನ್ನು ಕೇಳಲಿಲ್ಲ.
וַיְדַבֵּר יְהֹוָה אֶל־מֹשֶׁה לֵּאמֹֽר׃ | 10 |
ಆಗ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,
בֹּא דַבֵּר אֶל־פַּרְעֹה מֶלֶךְ מִצְרָיִם וִֽישַׁלַּח אֶת־בְּנֵֽי־יִשְׂרָאֵל מֵאַרְצֽוֹ׃ | 11 |
“ನೀನು ಈಜಿಪ್ಟಿನ ಅರಸನಾದ ಫರೋಹನ ಬಳಿಗೆ ಹೋಗಿ, ಅವನು ಇಸ್ರಾಯೇಲರನ್ನು ತನ್ನ ದೇಶದಿಂದ ಹೊರಗೆ ಕಳುಹಿಸುವಂತೆ ಅವನ ಸಂಗಡ ಮಾತನಾಡು,” ಎಂದರು.
וַיְדַבֵּר מֹשֶׁה לִפְנֵי יְהֹוָה לֵאמֹר הֵן בְּנֵֽי־יִשְׂרָאֵל לֹֽא־שָׁמְעוּ אֵלַי וְאֵיךְ יִשְׁמָעֵנִי פַרְעֹה וַאֲנִי עֲרַל שְׂפָתָֽיִם׃ | 12 |
ಆದರೆ ಮೋಶೆಯು ಯೆಹೋವ ದೇವರ ಸನ್ನಿಧಿಯಲ್ಲಿ, “ಇಗೋ, ಇಸ್ರಾಯೇಲರೇ ನನ್ನ ಮಾತನ್ನು ಕೇಳದಿರುವಲ್ಲಿ, ತೊದಲು ಮಾತನಾಡುವ ನನ್ನ ಮಾತನ್ನು ಫರೋಹನು ಕೇಳುವುದು ಹೇಗೆ?” ಎಂದನು.
וַיְדַבֵּר יְהֹוָה אֶל־מֹשֶׁה וְאֶֽל־אַהֲרֹן וַיְצַוֵּם אֶל־בְּנֵי יִשְׂרָאֵל וְאֶל־פַּרְעֹה מֶלֶךְ מִצְרָיִם לְהוֹצִיא אֶת־בְּנֵֽי־יִשְׂרָאֵל מֵאֶרֶץ מִצְרָֽיִם׃ | 13 |
ಯೆಹೋವ ದೇವರು ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ, ಇಸ್ರಾಯೇಲರನ್ನು ಈಜಿಪ್ಟಿನ ದೇಶದೊಳಗಿಂದ ಹೊರಗೆ ಬರಮಾಡುವಂತೆ ಇಸ್ರಾಯೇಲರ ಬಳಿಗೂ ಅರಸನಾದ ಫರೋಹನ ಬಳಿಗೂ ಹೋಗಬೇಕೆಂದು ಅವರಿಗೆ ಆಜ್ಞಾಪಿಸಿದರು.
אֵלֶּה רָאשֵׁי בֵית־אֲבֹתָם בְּנֵי רְאוּבֵן בְּכֹר יִשְׂרָאֵל חֲנוֹךְ וּפַלּוּא חֶצְרֹן וְכַרְמִי אֵלֶּה מִשְׁפְּחֹת רְאוּבֵֽן׃ | 14 |
ಇಸ್ರಾಯೇಲ್ ಗೋತ್ರಗಳ ಮನೆಯ ಮುಖ್ಯಸ್ಥರು ಇವರೇ: ಇಸ್ರಾಯೇಲನ ಜೇಷ್ಠ ಪುತ್ರನಾದ ರೂಬೇನನ ಪುತ್ರರು: ಹನೋಕ್, ಪಲ್ಲೂ, ಹೆಚ್ರೋನ್, ಕರ್ಮೀ. ಇವರು ರೂಬೇನನ ಗೋತ್ರಗಳ ಮೂಲ ಪುರುಷರು.
וּבְנֵי שִׁמְעוֹן יְמוּאֵל וְיָמִין וְאֹהַד וְיָכִין וְצֹחַר וְשָׁאוּל בֶּן־הַֽכְּנַעֲנִית אֵלֶּה מִשְׁפְּחֹת שִׁמְעֽוֹן׃ | 15 |
ಸಿಮೆಯೋನನ ಪುತ್ರರು: ಯೆಮೂಯೇಲ್, ಯಾಮೀನ್, ಓಹದ್, ಯಾಕೀನ್, ಚೋಹರ್ ಮತ್ತು ಕಾನಾನ್ಯಳ ಮಗನಾದ ಸೌಲ. ಇವು ಸಿಮೆಯೋನನ ಗೋತ್ರಗಳು.
וְאֵלֶּה שְׁמוֹת בְּנֵֽי־לֵוִי לְתֹלְדֹתָם גֵּרְשׁוֹן וּקְהָת וּמְרָרִי וּשְׁנֵי חַיֵּי לֵוִי שֶׁבַע וּשְׁלֹשִׁים וּמְאַת שָׁנָֽה׃ | 16 |
ತಮ್ಮ ತಮ್ಮ ವಂಶಾವಳಿಗಳ ಪ್ರಕಾರವಾಗಿರುವ ಲೇವಿಯ ಪುತ್ರರ ಹೆಸರುಗಳು: ಗೇರ್ಷೋನ್, ಕೊಹಾತ್, ಮೆರಾರೀ. ಲೇವಿಯು ನೂರಮೂವತ್ತೇಳು ವರ್ಷಗಳವರೆಗೆ ಬದುಕಿದ್ದನು.
בְּנֵי גֵרְשׁוֹן לִבְנִי וְשִׁמְעִי לְמִשְׁפְּחֹתָֽם׃ | 17 |
ಗೇರ್ಷೋನನ ಪುತ್ರರು ಅವರ ಗೋತ್ರಗಳಿಗನುಸಾರವಾಗಿ: ಲಿಬ್ನೀ ಮತ್ತು ಶಿಮ್ಮೀಯರು.
וּבְנֵי קְהָת עַמְרָם וְיִצְהָר וְחֶבְרוֹן וְעֻזִּיאֵל וּשְׁנֵי חַיֵּי קְהָת שָׁלֹשׁ וּשְׁלֹשִׁים וּמְאַת שָׁנָֽה׃ | 18 |
ಕೊಹಾತನ ಪುತ್ರರು: ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್. ಕೊಹಾತನು ಜೀವಿಸಿದ ವರ್ಷಗಳು ನೂರಮೂವತ್ತಮೂರು.
וּבְנֵי מְרָרִי מַחְלִי וּמוּשִׁי אֵלֶּה מִשְׁפְּחֹת הַלֵּוִי לְתֹלְדֹתָֽם׃ | 19 |
ಮೆರಾರೀಯ ಪುತ್ರರು: ಮಹ್ಲೀ, ಮೂಷೀ. ವಂಶಾವಳಿಗಳ ಪ್ರಕಾರ ಇವೇ ಲೇವಿಯ ಗೋತ್ರಗಳು.
וַיִּקַּח עַמְרָם אֶת־יוֹכֶבֶד דֹּֽדָתוֹ לוֹ לְאִשָּׁה וַתֵּלֶד לוֹ אֶֽת־אַהֲרֹן וְאֶת־מֹשֶׁה וּשְׁנֵי חַיֵּי עַמְרָם שֶׁבַע וּשְׁלֹשִׁים וּמְאַת שָׁנָֽה׃ | 20 |
ಅಮ್ರಾಮನು ತನ್ನ ಸೋದರತ್ತೆಯಾದ ಯೋಕೆಬೆದಳನ್ನು ಮದುವೆಯಾದನು. ಆಕೆಯು ಅವನಿಗೆ ಆರೋನನನ್ನೂ, ಮೋಶೆಯನ್ನೂ ಹೆತ್ತಳು. ಅಮ್ರಾಮನು ಜೀವಿಸಿದ ಕಾಲ ನೂರಮೂವತ್ತೇಳು ವರ್ಷಗಳು.
וּבְנֵי יִצְהָר קֹרַח וָנֶפֶג וְזִכְרִֽי׃ | 21 |
ಇಚ್ಹಾರನ ಪುತ್ರರು: ಕೋರಹ, ನೆಫೆಗ್ ಮತ್ತು ಜಿಕ್ರಿ.
וּבְנֵי עֻזִּיאֵל מִֽישָׁאֵל וְאֶלְצָפָן וְסִתְרִֽי׃ | 22 |
ಉಜ್ಜೀಯೇಲನ ಪುತ್ರರು: ಮೀಶಾಯೇಲ್, ಎಲ್ಜಾಫಾನ್ ಮತ್ತು ಸಿತ್ರಿ.
וַיִּקַּח אַהֲרֹן אֶת־אֱלִישֶׁבַע בַּת־עַמִּינָדָב אֲחוֹת נַחְשׁוֹן לוֹ לְאִשָּׁה וַתֵּלֶד לוֹ אֶת־נָדָב וְאֶת־אֲבִיהוּא אֶת־אֶלְעָזָר וְאֶת־אִֽיתָמָֽר׃ | 23 |
ಆರೋನನು ಅಮ್ಮೀನಾದಾಬನ ಮಗಳೂ ನಹಶೋನನ ಸಹೋದರಿಯೂ ಆದ ಎಲೀಶೇಬಳನ್ನು ಮದುವೆಯಾದನು. ಆಕೆಯು ಅವನಿಗೆ ನಾದಾಬ್, ಅಬೀಹೂ, ಎಲಿಯಾಜರ್, ಈತಾಮಾರ್ ಇವರನ್ನು ಹೆತ್ತಳು.
וּבְנֵי קֹרַח אַסִּיר וְאֶלְקָנָה וַאֲבִיאָסָף אֵלֶּה מִשְׁפְּחֹת הַקׇּרְחִֽי׃ | 24 |
ಕೋರಹನ ಪುತ್ರರು: ಅಸ್ಸೀರ್ ಎಲ್ಕಾನಾ, ಅಬೀಯಾಸಾಫ್ ಎಂಬುವರು. ಇವು ಕೋರಹೀಯರ ಗೋತ್ರಗಳು.
וְאֶלְעָזָר בֶּֽן־אַהֲרֹן לָקַֽח־לוֹ מִבְּנוֹת פּֽוּטִיאֵל לוֹ לְאִשָּׁה וַתֵּלֶד לוֹ אֶת־פִּֽינְחָס אֵלֶּה רָאשֵׁי אֲבוֹת הַלְוִיִּם לְמִשְׁפְּחֹתָֽם׃ | 25 |
ಆರೋನನ ಮಗ ಎಲಿಯಾಜರನು ಪೂಟಿಯೇಲನ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆಯಾದನು. ಆಕೆಯು ಅವನಿಗೆ ಫೀನೆಹಾಸನನ್ನು ಹೆತ್ತಳು. ಗೋತ್ರಗಳ ಪ್ರಕಾರ ಇವರು ಲೇವಿಯರ ಗೋತ್ರಗಳ ಮುಖ್ಯಸ್ಥರು.
הוּא אַהֲרֹן וּמֹשֶׁה אֲשֶׁר אָמַר יְהֹוָה לָהֶם הוֹצִיאוּ אֶת־בְּנֵי יִשְׂרָאֵל מֵאֶרֶץ מִצְרַיִם עַל־צִבְאֹתָֽם׃ | 26 |
ಆರೋನ್, ಮೋಶೆ ಇವರಿಗೆ, “ಇಸ್ರಾಯೇಲರನ್ನು ಅವರವರ ಗೋತ್ರಗಳಿಗನುಸಾರವಾಗಿ ಈಜಿಪ್ಟಿನ ಒಳಗಿಂದ ಹೊರಗೆ ಬರಮಾಡಬೇಕು,” ಎಂದು ಯೆಹೋವ ದೇವರು ಹೇಳಿದ್ದರು.
הֵם הַֽמְדַבְּרִים אֶל־פַּרְעֹה מֶֽלֶךְ־מִצְרַיִם לְהוֹצִיא אֶת־בְּנֵֽי־יִשְׂרָאֵל מִמִּצְרָיִם הוּא מֹשֶׁה וְאַהֲרֹֽן׃ | 27 |
ಆದುದರಿಂದ ಮೋಶೆ, ಆರೋನರೂ ಇಸ್ರಾಯೇಲರನ್ನು ಹೊರಗೆ ತರುವುದಕ್ಕಾಗಿ ಈಜಿಪ್ಟಿನ ಅರಸನಾದ ಫರೋಹನ ಸಂಗಡ ಮಾತನಾಡಿದರು.
וַיְהִי בְּיוֹם דִּבֶּר יְהֹוָה אֶל־מֹשֶׁה בְּאֶרֶץ מִצְרָֽיִם׃ | 28 |
ಯೆಹೋವ ದೇವರು ಈಜಿಪ್ಟ್ ದೇಶದಲ್ಲಿ ಮೋಶೆಯ ಸಂಗಡ ಮಾತನಾಡಿದರು.
וַיְדַבֵּר יְהֹוָה אֶל־מֹשֶׁה לֵּאמֹר אֲנִי יְהֹוָה דַּבֵּר אֶל־פַּרְעֹה מֶלֶךְ מִצְרַיִם אֵת כׇּל־אֲשֶׁר אֲנִי דֹּבֵר אֵלֶֽיךָ׃ | 29 |
ಅವರು ಮೋಶೆಗೆ, “ನಾನೇ ಯೆಹೋವ ದೇವರು. ನಾನು ನಿನಗೆ ಹೇಳುವುದನ್ನೆಲ್ಲಾ ಈಜಿಪ್ಟಿನ ಅರಸನಾದ ಫರೋಹನಿಗೆ ತಿಳಿಸು,” ಎಂದರು.
וַיֹּאמֶר מֹשֶׁה לִפְנֵי יְהֹוָה הֵן אֲנִי עֲרַל שְׂפָתַיִם וְאֵיךְ יִשְׁמַע אֵלַי פַּרְעֹֽה׃ | 30 |
ಅದಕ್ಕೆ ಮೋಶೆಯು ಯೆಹೋವ ದೇವರ ಮುಂದೆ, “ಇಗೋ, ನಾನು ತೊದಲು ಮಾತನಾಡುವವನು. ಫರೋಹನು ನನ್ನ ಮಾತನ್ನು ಹೇಗೆ ಕೇಳುತ್ತಾನೆ?” ಎಂದನು.