< יחזקאל 24 >
וַיְהִי דְבַר־יְהֹוָה אֵלַי בַּשָּׁנָה הַתְּשִׁיעִית בַּחֹדֶשׁ הָעֲשִׂירִי בֶּעָשׂוֹר לַחֹדֶשׁ לֵאמֹֽר׃ | 1 |
೧ಒಂಭತ್ತನೆಯ ವರ್ಷದ, ಹತ್ತನೆಯ ತಿಂಗಳಿನ, ಹತ್ತನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
בֶּן־אָדָם (כתוב) [כְּתׇב־]לְךָ אֶת־שֵׁם הַיּוֹם אֶת־עֶצֶם הַיּוֹם הַזֶּה סָמַךְ מֶֽלֶךְ־בָּבֶל אֶל־יְרוּשָׁלַ͏ִם בְּעֶצֶם הַיּוֹם הַזֶּֽה׃ | 2 |
೨“ನರಪುತ್ರನೇ, ಈ ದಿನದ, ಇದೇ ದಿನದ ಹೆಸರನ್ನು ಬರೆದುಕೋ; ಇದೇ ದಿನದಲ್ಲಿ ಬಾಬೆಲಿನ ಅರಸನು ಯೆರೂಸಲೇಮಿಗೆ ಮುತ್ತಿಗೆ ಹಾಕಿದ್ದಾನೆ.
וּמְשֹׁל אֶל־בֵּית־הַמֶּרִי מָשָׁל וְאָמַרְתָּ אֲלֵיהֶם כֹּה אָמַר אֲדֹנָי יֱהֹוִה שְׁפֹת הַסִּיר שְׁפֹת וְגַם־יְצֹק בּוֹ מָֽיִם׃ | 3 |
೩“ಈ ದಂಗೆಕೋರ ಮನೆತನದವರಿಗೆ ದೃಷ್ಟಾಂತವನ್ನು ತಿಳಿಸಿ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಹಂಡೆಯನ್ನು ಒಲೆಯ ಮೇಲಿಡು, ಮೇಲಿಡು, ಅದರಲ್ಲಿ ನೀರನ್ನು ಹೊಯ್ಯಿ;
אֱסֹף נְתָחֶיהָ אֵלֶיהָ כׇּל־נֵתַח טוֹב יָרֵךְ וְכָתֵף מִבְחַר עֲצָמִים מַלֵּֽא׃ | 4 |
೪ಮಾಂಸದ ತುಂಡುಗಳನ್ನು ಅಂದರೆ ತೊಡೆ, ಹೆಗಲು ಮೊದಲಾದ ಒಳ್ಳೆಯ ತುಂಡುಗಳನ್ನೆಲ್ಲಾ ಅದರಲ್ಲಿ ಒಟ್ಟಿಗೆ ಹಾಕು, ಉತ್ತಮವಾದ ಎಲುಬುಗಳನ್ನು ಅದರಲ್ಲಿ ತುಂಬಿಸು.
מִבְחַר הַצֹּאן לָקוֹחַ וְגַם דּוּר הָעֲצָמִים תַּחְתֶּיהָ רַתַּח רְתָחֶיהָ גַּם־בָּשְׁלוּ עֲצָמֶיהָ בְּתוֹכָֽהּ׃ | 5 |
೫ಹಿಂಡಿನಲ್ಲಿ ಶ್ರೇಷ್ಠವಾದದನ್ನು ತೆಗೆದುಕೋ; ಹಂಡೆಯ ತಳದಲ್ಲಿ ಎಲುಬುಗಳನ್ನು ರಾಶಿಯಾಗಿ ಒಟ್ಟು; ಚೆನ್ನಾಗಿ ಕುದಿಸು; ಹೌದು, ಎಲುಬುಗಳು ಅದರಲ್ಲಿ ಬೇಯಿಸು.’”
לָכֵן כֹּה־אָמַר ׀ אֲדֹנָי יֱהֹוִה אוֹי עִיר הַדָּמִים סִיר אֲשֶׁר חֶלְאָתָהֿ בָהּ וְחֶלְאָתָהּ לֹא יָצְאָה מִמֶּנָּה לִנְתָחֶיהָ לִנְתָחֶיהָ הֽוֹצִיאָהּ לֹא־נָפַל עָלֶיהָ גּוֹרָֽל׃ | 6 |
೬ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ರಕ್ತಮಯವಾದ ಪಟ್ಟಣವೇ ನಿನಗೆ ಧಿಕ್ಕಾರ, ಒಳಗೆ ಕಿಲುಬು ಹಿಡಿದಿರುವ, ಕಿಲುಬು ಬಿಟ್ಟುಹೋಗದಿರುವ ಹಂಡೆ! ಅದರಿಂದ ಮಾಂಸದ ತುಂಡುಗಳನ್ನು ಸಿಕ್ಕಿ ಸಿಕ್ಕಿದ ಹಾಗೆ ತೆಗೆದುಬಿಡು, ಅದಕ್ಕಾಗಿ ಚೀಟುಗಳನ್ನು ಹಾಕಬೇಡ.
כִּי דָמָהּ בְּתוֹכָהּ הָיָה עַל־צְחִיחַ סֶלַע שָׂמָתְהוּ לֹא שְׁפָכַתְהוּ עַל־הָאָרֶץ לְכַסּוֹת עָלָיו עָפָֽר׃ | 7 |
೭“ಯೆರುಸಲೇಮ್ ನಗರ ಸುರಿಸಿದ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದ್ದಾರೆ. ಧೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ.
לְהַעֲלוֹת חֵמָה לִנְקֹם נָקָם נָתַתִּי אֶת־דָּמָהּ עַל־צְחִיחַ סָלַע לְבִלְתִּי הִכָּסֽוֹת׃ | 8 |
೮ಮುಯ್ಯಿಗೆ ಮುಯ್ಯಿ ತೀರಿಸುವುದಕ್ಕೆ, ರೋಷವನ್ನೆಬ್ಬಿಸುವ ಹಾಗೆ, ನಾನು ಅದರ ರಕ್ತಾಪರಾಧವನ್ನು ಮುಚ್ಚಿ ಬಿಡದಂತೆ ಅದನ್ನು ಬಂಡೆಯ ತುದಿಯ ಮೇಲೆ ಇಟ್ಟಿದ್ದೇನೆ.”
לָכֵן כֹּה אָמַר אֲדֹנָי יֱהֹוִה אוֹי עִיר הַדָּמִים גַּם־אֲנִי אַגְדִּיל הַמְּדוּרָֽה׃ | 9 |
೯ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ರಕ್ತಾಪರಾಧವುಳ್ಳ ಆ ಪಟ್ಟಣಕ್ಕೆ ಕಷ್ಟ! ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು.
הַרְבֵּה הָעֵצִים הַדְלֵק הָאֵשׁ הָתֵם הַבָּשָׂר וְהַרְקַח הַמֶּרְקָחָה וְהָעֲצָמוֹת יֵחָֽרוּ׃ | 10 |
೧೦ಬಹಳ ಸೌದೆ ಹಾಕಿ, ಬೆಂಕಿಯನ್ನು ಹೆಚ್ಚಿಸಿ, ಮಾಂಸವನ್ನು ಬೇಯಿಸು, ಸಾರು ಮಂದವಾಗಿರಲಿ, ಎಲುಬುಗಳು ಬೆಂದು ಹೋಗಲಿ.
וְהַעֲמִידֶהָ עַל־גֶּחָלֶיהָ רֵקָה לְמַעַן תֵּחַם וְחָרָה נְחֻשְׁתָּהּ וְנִתְּכָה בְתוֹכָהּ טֻמְאָתָהּ תִּתֻּם חֶלְאָתָֽהּ׃ | 11 |
೧೧“ಆ ಮೇಲೆ ಹಂಡೆಯು ಕಾದು ತಾಮ್ರವು ಕೆಂಪಾಗಿ, ಒಳಗಿನ ಕಲ್ಮಷವು ಕರಗಿ, ಕಿಲುಬು ಇಲ್ಲವಾಗುವಂತೆ ಅದನ್ನು ಬರಿದುಮಾಡಿ ಕೆಂಡಗಳ ಮೇಲೆ ಇಡು.
תְּאֻנִים הֶלְאָת וְלֹֽא־תֵצֵא מִמֶּנָּה רַבַּת חֶלְאָתָהּ בְּאֵשׁ חֶלְאָתָֽהּ׃ | 12 |
೧೨ಅದರ ಕಲ್ಮಷವು ನನ್ನಲ್ಲಿ ಕೇವಲ ಪ್ರಯಾಸವನ್ನೂ, ಆಯಾಸವನ್ನೂ ಉಂಟುಮಾಡಿದೆ; ಆದರೂ ಅದಕ್ಕೆ ಹತ್ತಿದ ಕಿಲುಬು ಹೋಗಲಿಲ್ಲ, ಬೆಂಕಿಯಿಂದಲೂ ನೀಗಲಿಲ್ಲ.
בְּטֻמְאָתֵךְ זִמָּה יַעַן טִֽהַרְתִּיךְ וְלֹא טָהַרְתְּ מִטֻּמְאָתֵךְ לֹא תִטְהֲרִי־עוֹד עַד־הֲנִיחִי אֶת־חֲמָתִי בָּֽךְ׃ | 13 |
೧೩“ಅಂತೆಯೇ ನಿನ್ನ ದುಷ್ಕರ್ಮವು ಅಸಹ್ಯವಾಗಿರುವುದರಿಂದಲೂ, ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದ್ದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ತೀರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನು ಕಳೆದುಕೊಳ್ಳದೆ, ಶುದ್ಧಿಯಾಗದೆ ಇರುವಿ.”
אֲנִי יְהֹוָה דִּבַּרְתִּי בָּאָה וְעָשִׂיתִי לֹא־אֶפְרַע וְלֹא־אָחוּס וְלֹא אֶנָּחֵם כִּדְרָכַיִךְ וְכַעֲלִילוֹתַיִךְ שְׁפָטוּךְ נְאֻם אֲדֹנָי יֱהֹוִֽה׃ | 14 |
೧೪ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ, “ಇದು ನಡೆಯುವುದು ನಿಶ್ಚಯ, ನಾನು ನೆರವೇರಿಸುವೆನು; ಹಿಂದೆಗೆಯೆನು, ಕ್ಷಮಿಸೆನು, ಕರುಣಿಸೆನು; ನಿನ್ನ ದುರ್ಮಾರ್ಗ, ದುಷ್ಕೃತ್ಯಗಳಿಗೆ ಸರಿಯಾಗಿ ನಿನಗೆ ನ್ಯಾಯತೀರ್ಪು ಆಗುವುದು” ಇದು ಕರ್ತನಾದ ಯೆಹೋವನ ನುಡಿ.
וַיְהִי דְבַר־יְהֹוָה אֵלַי לֵאמֹֽר׃ | 15 |
೧೫ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,
בֶּן־אָדָם הִנְנִי לֹקֵחַ מִמְּךָ אֶת־מַחְמַד עֵינֶיךָ בְּמַגֵּפָה וְלֹא תִסְפֹּד וְלֹא תִבְכֶּה וְלוֹא תָבוֹא דִּמְעָתֶֽךָ׃ | 16 |
೧೬“ನರಪುತ್ರನೇ, ಇಗೋ, ಒಂದೇ ಏಟಿನಿಂದ ನಾನು ನಿನಗೆ ನೇತ್ರಾನಂದವಾಗಿರುವವಳನ್ನು ನಿನ್ನಿಂದ ತೆಗೆದುಬಿಡುವೆನು, ಆದರೂ ನೀನು ಗೋಳಾಡಬೇಡ, ಅಳಬೇಡ, ನಿನ್ನ ಕಣ್ಣೀರು ಸುರಿಯದಿರಲಿ.
הֵאָנֵק ׀ דֹּם מֵתִים אֵבֶל לֹא־תַֽעֲשֶׂה פְּאֵֽרְךָ חֲבוֹשׁ עָלֶיךָ וּנְעָלֶיךָ תָּשִׂים בְּרַגְלֶיךָ וְלֹא תַעְטֶה עַל־שָׂפָם וְלֶחֶם אֲנָשִׁים לֹא תֹאכֵֽל׃ | 17 |
೧೭ಸದ್ದಿಲ್ಲದೆ ಮೊರೆಯಿಡು, ವಿಯೋಗ ದುಃಖವನ್ನು ತೋರಿಸಬೇಡ, ರುಮಾಲನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ಬಾಯನ್ನು ಬಟ್ಟೆಯಿಂದ ಮುಚ್ಚಿಕೊಳ್ಳಬೇಡ, ಗಾರಿಗೆಯನ್ನು ತಿನ್ನಬೇಡ.”
וָאֲדַבֵּר אֶל־הָעָם בַּבֹּקֶר וַתָּמׇת אִשְׁתִּי בָּעָרֶב וָאַעַשׂ בַּבֹּקֶר כַּאֲשֶׁר צֻוֵּֽיתִי׃ | 18 |
೧೮ಹೀಗೆ ಆಜ್ಞೆಯಾಗಲು ನಾನು ಪ್ರಾತಃಕಾಲದಲ್ಲಿ ಜನರೊಂದಿಗೆ ಮಾತನಾಡಿದನು, ಸಾಯಂಕಾಲಕ್ಕೆ ನನ್ನ ಪತ್ನಿಯು ತೀರಿಹೋದಳು; ಮಾರನೆಯ ಬೆಳಿಗ್ಗೆ ನನಗೆ ಅಪ್ಪಣೆಯಾದಂತೆ ಮಾಡಿದೆನು.
וַיֹּאמְרוּ אֵלַי הָעָם הֲלֹֽא־תַגִּיד לָנוּ מָה־אֵלֶּה לָּנוּ כִּי אַתָּה עֹשֶֽׂה׃ | 19 |
೧೯ಆಗ ಜನರು, “ನೀನು ಹೀಗೆ ಮಾಡುವುದರಿಂದ ಪ್ರಯೋಜನವೇನೆಂದು ತಿಳಿಸುವುದಿಲ್ಲವೇ?” ಎಂದು ನನ್ನನ್ನು ಕೇಳಲು,
וָאֹמַר אֲלֵיהֶם דְּבַר־יְהֹוָה הָיָה אֵלַי לֵאמֹֽר׃ | 20 |
೨೦ನಾನು ಅವರಿಗೆ ಹೀಗೆ ಹೇಳಿದೆನು, “ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದ್ದಾನೆ.
אֱמֹר ׀ לְבֵית יִשְׂרָאֵל כֹּה־אָמַר אֲדֹנָי יֱהֹוִה הִנְנִי מְחַלֵּל אֶת־מִקְדָּשִׁי גְּאוֹן עֻזְּכֶם מַחְמַד עֵינֵיכֶם וּמַחְמַל נַפְשְׁכֶם וּבְנֵיכֶם וּבְנוֹתֵיכֶם אֲשֶׁר עֲזַבְתֶּם בַּחֶרֶב יִפֹּֽלוּ׃ | 21 |
೨೧ಇಸ್ರಾಯೇಲ್ ವಂಶದವರಿಗೆ ಹೀಗೆ ಸಾರು, ‘ಇಗೋ, ನಿಮಗೆ ಮುಖ್ಯಬಲವೂ ನೇತ್ರಾನಂದವೂ ಪ್ರಾಣಪ್ರಿಯವೂ ಆದ ನನ್ನ ಪವಿತ್ರಾಲಯವನ್ನು ನಾನು ಅಪವಿತ್ರಪಡಿಸುವೆನು, ನೀವು ಬಿಟ್ಟು ಬಂದಿರುವ ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳು ಖಡ್ಗಕ್ಕೆ ತುತ್ತಾಗುವರು, ಎಂಬುದಾಗಿ ಸೇನಾದೀಶ್ವರನಾದ ಯೆಹೋವನು ನುಡಿದಿದ್ದಾರೆ
וַעֲשִׂיתֶם כַּאֲשֶׁר עָשִׂיתִי עַל־שָׂפָם לֹא תַעְטוּ וְלֶחֶם אֲנָשִׁים לֹא תֹאכֵֽלוּ׃ | 22 |
೨೨ನಾನು ಮಾಡಿದಂತೆ ಆಗ ನೀವೂ ಮಾಡುವಿರಿ, ಅಂದರೆ ಬಟ್ಟೆಯಿಂದ ಬಾಯನ್ನು ಮುಚ್ಚಿಕೊಳ್ಳದೆ, ಮನುಷ್ಯರ ರೊಟ್ಟಿಯನ್ನು ತಿನ್ನದೆ ಇರುವಿರಿ,
וּפְאֵרֵכֶם עַל־רָאשֵׁיכֶם וְנַֽעֲלֵיכֶם בְּרַגְלֵיכֶם לֹא תִסְפְּדוּ וְלֹא תִבְכּוּ וּנְמַקֹּתֶם בַּעֲוֺנֹתֵיכֶם וּנְהַמְתֶּם אִישׁ אֶל־אָחִֽיו׃ | 23 |
೨೩ರುಮಾಲುಗಳು ನಿಮ್ಮ ತಲೆಯ ಮೇಲೆಯೂ, ಕೆರಗಳು ನಿಮ್ಮ ಪಾದಗಳ ಅಡಿಯಲ್ಲಿಯೂ ಇರುವವು; ನೀವು ಗೋಳಾಡುವುದಿಲ್ಲ, ಅಳುವುದಿಲ್ಲ; ನಿಮ್ಮ ಅಧರ್ಮದಿಂದ ಕ್ಷೀಣವಾಗಿ ಹೋಗುವಿರಿ, ಒಬ್ಬರ ಸಂಗಡಲೊಬ್ಬರು ನರಳುವಿರಿ.
וְהָיָה יְחֶזְקֵאל לָכֶם לְמוֹפֵת כְּכֹל אֲשֶׁר־עָשָׂה תַּעֲשׂוּ בְּבוֹאָהּ וִידַעְתֶּם כִּי אֲנִי אֲדֹנָי יֱהֹוִֽה׃ | 24 |
೨೪ಹೀಗೆ ಯೆಹೆಜ್ಕೇಲನು ನಿಮಗೆ ಮುಂಗುರುತಾಗಿರುವನು; ಅವನು ಮಾಡಿದಂತೆಯೇ ಎಲ್ಲವನ್ನು ನೀವು ಮಾಡುವಿರಿ; ಇದು ಸಂಭವಿಸುವಾಗ ನಾನೇ ಕರ್ತನಾದ ಯೆಹೋವನು ಎಂದು ನಿಮಗೆ ಗೊತ್ತಾಗುವುದು.’”
וְאַתָּה בֶן־אָדָם הֲלוֹא בְּיוֹם קַחְתִּי מֵהֶם אֶת־מָעוּזָּם מְשׂוֹשׂ תִּפְאַרְתָּם אֶת־מַחְמַד עֵינֵיהֶם וְאֶת־מַשָּׂא נַפְשָׁם בְּנֵיהֶם וּבְנוֹתֵיהֶֽם׃ | 25 |
೨೫“ನರಪುತ್ರನೇ, ಅವರ ಬಲಾಧಾರವೂ, ಅವರ ನೇತ್ರಾನಂದಕರವಾದ ಆಲಯವನ್ನು, ಅವರು ಆಶಿಸುವುದನ್ನೂ, ಅವರ ಗಂಡು ಮತ್ತು ಹೆಣ್ಣು ಮಕ್ಕಳನ್ನೂ ಅವರ ಬಲದಿಂದ ತೆಗೆದು ಹಾಕುವ ದಿನದಲ್ಲಿ,
בַּיּוֹם הַהוּא יָבוֹא הַפָּלִיט אֵלֶיךָ לְהַשְׁמָעוּת אׇזְנָֽיִם׃ | 26 |
೨೬ಆ ದಿನದಲ್ಲಿ ತಪ್ಪಿಸಿಕೊಂಡವನು ನಿನ್ನ ಬಳಿಗೆ ಬಂದು ನಡೆದ ಸಂಗತಿಯನ್ನು ನಿನಗೆ ತಿಳಿಸುವನು.
בַּיּוֹם הַהוּא יִפָּתַח פִּיךָ אֶת־הַפָּלִיט וּתְדַבֵּר וְלֹא תֵאָלֵם עוֹד וְהָיִיתָ לָהֶם לְמוֹפֵת וְיָדְעוּ כִּי־אֲנִי יְהֹוָֽה׃ | 27 |
೨೭ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿ ತೆರೆದಿರುವುದು. ನೀನು ಇನ್ನು ಮೂಕನಾಗಿರದೆ ಮಾತನಾಡುವೆ ಮತ್ತು ಅವರಿಗೆ ಗುರುತಾಗಿರುವೆ. ನಾನೇ ಯೆಹೋವನು” ಎಂದು ಅವರಿಗೆ ಗೊತ್ತಾಗುವುದು.