< יחזקאל 30 >

וַיְהִי דְבַר־יְהֹוָה אֵלַי לֵאמֹֽר׃ 1
ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,
בֶּן־אָדָם הִנָּבֵא וְאָמַרְתָּ כֹּה אָמַר אֲדֹנָי יֱהֹוִה הֵילִילוּ הָהּ לַיּֽוֹם׃ 2
“ನರಪುತ್ರನೇ, ನೀನು ಈ ಪ್ರವಾದನೆಯನ್ನು ಹೇಳು, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಅರಚಿಕೊಳ್ಳಿರಿ! ಅಯ್ಯೋ ದುರ್ದಿನವೇ!
כִּֽי־קָרוֹב יוֹם וְקָרוֹב יוֹם לַֽיהֹוָה יוֹם עָנָן עֵת גּוֹיִם יִהְיֶֽה׃ 3
ದಿನವು ಹತ್ತಿರವಾಯಿತು! ಹೌದು, ಯೆಹೋವನ ದಿನವು, ಕಾರ್ಮುಗಿಲಿನ ದಿನವು ಸಮೀಪಿಸಿತು; ಅದು ಜನಾಂಗಗಳಿಗೆ ನ್ಯಾಯತೀರಿಸುವ ಕಾಲವಾಗಿರುವುದು.
וּבָאָה חֶרֶב בְּמִצְרַיִם וְהָיְתָה חַלְחָלָה בְּכוּשׁ בִּנְפֹל חָלָל בְּמִצְרָיִם וְלָקְחוּ הֲמוֹנָהּ וְנֶהֶרְסוּ יְסֹדוֹתֶֽיהָ׃ 4
ಖಡ್ಗವು ಐಗುಪ್ತದ ಮೇಲೆ ಬೀಳುವುದು; ಅಲ್ಲಿನ ಪ್ರಜೆಗಳು ಹತರಾಗಲು ಕೂಷಿನಲ್ಲಿಯೂ ಸಂಕಟವಾಗುವುದು; ಐಗುಪ್ತದ ಜನಸಮೂಹವು ಒಯ್ಯಲ್ಪಡುವುದು, ಅದರ ಅಸ್ತಿವಾರವು ಮುರಿದು ಹಾಳಾಗುವುದು.
כּוּשׁ וּפוּט וְלוּד וְכׇל־הָעֶרֶב וְכוּב וּבְנֵי אֶרֶץ הַבְּרִית אִתָּם בַּחֶרֶב יִפֹּֽלוּ׃ 5
“‘ಕೂಷ್ಯರು, ಪೂಟ್ಯರು, ಲೂದ್ಯರು, ಬಗೆಬಗೆಯ ಸಕಲ ವಿದೇಶೀಯರು, ಕೂಬ್ಯರು, ಒಡಂಬಡಿಕೆ ಮಾಡಿಕೊಂಡ ಮಿತ್ರ ರಾಜ್ಯದವರೂ ಐಗುಪ್ತ್ಯರೊಂದಿಗೆ ಖಡ್ಗದಿಂದ ಹತರಾಗುವರು.’”
כֹּה אָמַר יְהֹוָה וְנָֽפְלוּ סֹמְכֵי מִצְרַיִם וְיָרַד גְּאוֹן עֻזָּהּ מִמִּגְדֹּל סְוֵנֵה בַּחֶרֶב יִפְּלוּ־בָהּ נְאֻם אֲדֹנָי יֱהֹוִֽה׃ 6
ಯೆಹೋವನು ಇಂತೆನ್ನುತ್ತಾನೆ, “ಐಗುಪ್ತಕ್ಕೆ ಆಧಾರವಾದವರು ಬೀಳುವರು, ಅದರ ಶಕ್ತಿಯ ಅಹಂಕಾರವು ಇಳಿದು ಹೋಗುವುದು; ಅಲ್ಲಿನ ಜನರು ಮಿಗ್ದೋಲಿನಿಂದ ಸೆವೇನೆಯವರೆಗೆ ಖಡ್ಗದಿಂದ ಹತರಾಗುವರು” ಇದು ಕರ್ತನಾದ ಯೆಹೋವನ ನುಡಿ.
וְנָשַׁמּוּ בְּתוֹךְ אֲרָצוֹת נְשַׁמּוֹת וְעָרָיו בְּתוֹךְ־עָרִים נַחֲרָבוֹת תִּֽהְיֶֽינָה׃ 7
ಹಾಳಾಗಿರುವ ದೇಶಗಳೊಳಗೆ ಆ ದೇಶವೂ ಹಾಳಾಗಿರುವುದು, ಪಾಳುಬಿದ್ದಿರುವ ಪಟ್ಟಣಗಳೊಳಗೆ ಅದರ ಪಟ್ಟಣಗಳೂ ಪಾಳು ಬಿದ್ದಿರುವವು.
וְיָדְעוּ כִּֽי־אֲנִי יְהֹוָה בְּתִתִּי־אֵשׁ בְּמִצְרַיִם וְנִשְׁבְּרוּ כׇּל־עֹֽזְרֶֽיהָ׃ 8
“‘ನಾನು ಐಗುಪ್ತಕ್ಕೆ ಬೆಂಕಿ ಹಚ್ಚಿ ಅದರ ಸಹಾಯಕರನ್ನೆಲ್ಲಾ ನಾಶಮಾಡಿದ ಮೇಲೆ ನಾನೇ ಯೆಹೋವನು’ ಎಂದು ಅವರಿಗೆ ಗೊತ್ತಾಗುವುದು.
בַּיּוֹם הַהוּא יֵצְאוּ מַלְאָכִים מִלְּפָנַי בַּצִּים לְהַחֲרִיד אֶת־כּוּשׁ בֶּטַח וְהָיְתָה חַלְחָלָה בָהֶם בְּיוֹם מִצְרַיִם כִּי הִנֵּה בָּאָֽה׃ 9
‘ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣಮಾಡಿ, ನಿಶ್ಚಿಂತರಾದ ಕೂಷ್ಯರನ್ನು ಹೆದರಿಸುವರು; ಐಗುಪ್ತದ ನಾಶದ ದಿನದಲ್ಲಿ ಆದ ಹಾಗೆ ಕೂಷ್ಯರಿಗೂ ಸಂಕಟವು ಉಂಟಾಗುವುದು; ಇಗೋ, ಆ ದಿನ ಬಂತು!’”
כֹּה אָמַר אֲדֹנָי יֱהֹוִה וְהִשְׁבַּתִּי אֶת־הֲמוֹן מִצְרַיִם בְּיַד נְבוּכַדְרֶאצַּר מֶלֶךְ־בָּבֶֽל׃ 10
೧೦ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಿಂದ ಐಗುಪ್ತದ ಅಸಂಖ್ಯಾತ ಪ್ರಜೆಯನ್ನು ಕೊನೆಗಾಣಿಸುವೆನು.
הוּא וְעַמּוֹ אִתּוֹ עָרִיצֵי גוֹיִם מוּבָאִים לְשַׁחֵת הָאָרֶץ וְהֵרִיקוּ חַרְבוֹתָם עַל־מִצְרַיִם וּמָלְאוּ אֶת־הָאָרֶץ חָלָֽל׃ 11
೧೧ಆ ದೇಶವನ್ನು ನಾಶಪಡಿಸಲಿಕ್ಕೆ ಅವನನ್ನು ಅತಿಭಯಂಕರ ಜನಾಂಗದವರಾದ ಅವನ ಸೈನಿಕರೊಡನೆ ಬರಮಾಡುವೆನು; ಅವರು ಐಗುಪ್ತದ ಮೇಲೆ ಕತ್ತಿ ಹಿರಿದು ದೇಶವನ್ನು ಹತರಾದವರಿಂದ ತುಂಬಿಸುವರು.
וְנָתַתִּי יְאֹרִים חׇֽרָבָה וּמָכַרְתִּי אֶת־הָאָרֶץ בְּיַד־רָעִים וַהֲשִׁמֹּתִי אֶרֶץ וּמְלֹאָהּ בְּיַד־זָרִים אֲנִי יְהֹוָה דִּבַּֽרְתִּי׃ 12
೧೨ನಾನು ನದಿಗಳನ್ನು ಒಣಗಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು. ಹೌದು, ದೇಶವನ್ನೂ, ಅದರಲ್ಲಿನ ಸಮಸ್ತವನ್ನೂ ಅನ್ಯರ ಕೈಯಿಂದ ಹಾಳುಮಾಡಿಸುವೆನು. ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.”
כֹּֽה־אָמַר אֲדֹנָי יֱהֹוִה וְהַאֲבַדְתִּי גִלּוּלִים וְהִשְׁבַּתִּי אֱלִילִים מִנֹּף וְנָשִׂיא מֵאֶֽרֶץ־מִצְרַיִם לֹא יִֽהְיֶה־עוֹד וְנָתַתִּי יִרְאָה בְּאֶרֶץ מִצְרָֽיִם׃ 13
೧೩ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ನೋಫಿನ ವಿಗ್ರಹಗಳನ್ನೆಲ್ಲ ಒಡೆದು ಕೊನೆಗಾಣಿಸುವೆನು; ಐಗುಪ್ತ ದೇಶದಲ್ಲಿ ಇನ್ನು ಯಾವ ಅರಸನೂ ಇರಲಾರನು; ನಾನು ಆ ದೇಶಕ್ಕೆ ಭಯವನ್ನು ಉಂಟುಮಾಡುವೆನು.
וַֽהֲשִׁמֹּתִי אֶת־פַּתְרוֹס וְנָתַתִּי אֵשׁ בְּצֹעַן וְעָשִׂיתִי שְׁפָטִים בְּנֹֽא׃ 14
೧೪ನಾನು ಪತ್ರೋಸನ್ನು ಹಾಳುಮಾಡಿ, ಚೋವನಿಗೆ ಬೆಂಕಿಯಿಡುವೆನು. ನೋಪುರವನ್ನು ದಂಡಿಸಿ,
וְשָׁפַכְתִּי חֲמָתִי עַל־סִין מָעוֹז מִצְרָיִם וְהִכְרַתִּי אֶת־הֲמוֹן נֹֽא׃ 15
೧೫“ಐಗುಪ್ತಕ್ಕೆ ರಕ್ಷಣೆಯ ಕೋಟೆಯಾದ ಸೀನಿನ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನೋಪುರದ ನಿವಾಸಿಗಳನ್ನೆಲ್ಲಾ ಕತ್ತರಿಸಿ ಬಿಡುವೆನು.
וְנָתַתִּי אֵשׁ בְּמִצְרַיִם חוּל (תחיל) [תָּחוּל] סִין וְנֹא תִּֽהְיֶה לְהִבָּקֵעַ וְנֹף צָרֵי יוֹמָֽם׃ 16
೧೬ನಾನು ಐಗುಪ್ತಕ್ಕೆ ಕಿಚ್ಚನ್ನು ಹತ್ತಿಸಲು ಸೀನು ಪ್ರಾಣ ಸಂಕಟಪಡುವುದು; ನೋಪುರವು ಭಂಗಕ್ಕೆ ಈಡಾಗುವುದು; ನೋಫಿನ ಮೇಲೆ ವೈರಿಗಳು ಮಧ್ಯಾಹ್ನದಲ್ಲೇ ಬೀಳುವರು.
בַּחוּרֵי אָוֶן וּפִי־בֶסֶת בַּחֶרֶב יִפֹּלוּ וְהֵנָּה בַּשְּׁבִי תֵלַֽכְנָה׃ 17
೧೭“ಓನಿನ ಮತ್ತು ಪೀಬೆಸೆತಿನ ಯುವಕರು ಖಡ್ಗದಿಂದ ಹತರಾಗುವರು; ಅಲ್ಲಿನ ನಿವಾಸಿಗಳು ಸೆರೆಯಾಗಿ ಹೋಗುವರು.
וּבִֽתְחַפְנְחֵס חָשַׂךְ הַיּוֹם בְּשִׁבְרִי־שָׁם אֶת־מֹטוֹת מִצְרַיִם וְנִשְׁבַּת־בָּהּ גְּאוֹן עֻזָּהּ הִיא עָנָן יְכַסֶּנָּה וּבְנוֹתֶיהָ בַּשְּׁבִי תֵלַֽכְנָה׃ 18
೧೮ಐಗುಪ್ತವು ಹೊರಿಸಿದ ನೊಗಗಳನ್ನು ನಾನು ತಹಪನೇಸಿನಲ್ಲಿ ಮುರಿಯುವಾಗ, ಅಲ್ಲಿ ಹೊತ್ತು ಮೂಡದು. ಅದರ ಶಕ್ತಿಯ ಅಹಂಕಾರವು ಅಡಗಿ ಹೋಗುವುದು, ಕಾರ್ಮುಗಿಲು ಅದನ್ನು ಆವರಿಸುವುದು, ಅದರ ಯುವತಿಯರು ಸೆರೆಗೆ ಒಯ್ಯಲ್ಪಡುವರು.
וְעָשִׂיתִי שְׁפָטִים בְּמִצְרָיִם וְיָדְעוּ כִּֽי־אֲנִי יְהֹוָֽה׃ 19
೧೯ಹೀಗೆ ನಾನು ಐಗುಪ್ತ್ಯರಿಗೆ ದಂಡನೆಗಳನ್ನು ವಿಧಿಸಿ ತೀರಿಸುವಾಗ ನಾನೇ ಯೆಹೋವನು” ಎಂದು ಅವರಿಗೆ ಗೊತ್ತಾಗುವುದು.
וַיְהִי בְּאַחַת עֶשְׂרֵה שָׁנָה בָּרִאשׁוֹן בְּשִׁבְעָה לַחֹדֶשׁ הָיָה דְבַר־יְהֹוָה אֵלַי לֵאמֹֽר׃ 20
೨೦ಹನ್ನೊಂದನೆಯ ವರ್ಷದ, ಮೊದಲನೆಯ ತಿಂಗಳಿನ ಏಳನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
בֶּן־אָדָם אֶת־זְרוֹעַ פַּרְעֹה מֶלֶךְ־מִצְרַיִם שָׁבָרְתִּי וְהִנֵּה לֹֽא־חֻבְּשָׁה לָתֵת רְפֻאוֹת לָשׂוּם חִתּוּל לְחׇבְשָׁהּ לְחׇזְקָהּ לִתְפֹּשׂ בֶּחָֽרֶב׃ 21
೨೧“ನರಪುತ್ರನೇ, ನಾನು ಐಗುಪ್ತದ ಅರಸನಾದ ಫರೋಹನ ಕೈಯನ್ನು ಮುರಿದುಬಿಟ್ಟಿದ್ದೇನೆ; ಇಗೋ, ಅದನ್ನು ಯಾರೂ ಕಟ್ಟಲಿಲ್ಲ, ಔಷಧ ಹಚ್ಚಲಿಲ್ಲ, ಅದು ಖಡ್ಗ ಹಿಡಿಯುವಷ್ಟು ಬಲಗೊಳ್ಳುವಂತೆ ಯಾರೂ ಬಟ್ಟೆ ಸುತ್ತಿ, ಅದನ್ನು ಬಿಗಿಸಲಿಲ್ಲ.”
לָכֵן כֹּה־אָמַר ׀ אֲדֹנָי יֱהֹוִה הִנְנִי אֶל־פַּרְעֹה מֶלֶךְ־מִצְרַיִם וְשָֽׁבַרְתִּי אֶת־זְרֹעֹתָיו אֶת־הַחֲזָקָה וְאֶת־הַנִּשְׁבָּרֶת וְהִפַּלְתִּי אֶת־הַחֶרֶב מִיָּדֽוֹ׃ 22
೨೨ಆದುದರಿಂದ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಐಗುಪ್ತದ ಅರಸನಾದ ಫರೋಹನಿಗೆ ವಿರುದ್ಧವಾಗಿ ಅವನ ಕೈಗಳನ್ನು, ಅಂದರೆ ಸರಿಯಾಗಿರುವುದನ್ನೂ, ಮುರಿದದ್ದನ್ನೂ ತೀರಾ ಮುರಿದು ಬಿಟ್ಟು, ಖಡ್ಗವು ಅವನ ಕೈಯೊಳಗಿಂದ ಬೀಳುವಂತೆ ಮಾಡುವೆನು.
וַהֲפִצוֹתִי אֶת־מִצְרַיִם בַּגּוֹיִם וְזֵרִיתִם בָּאֲרָצֽוֹת׃ 23
೨೩“ಐಗುಪ್ತ್ಯರನ್ನು ಜನಾಂಗಗಳಲ್ಲಿ ಚದುರಿಸಿ ದೇಶದೇಶಗಳಿಗೆ ಚದುರಿಸಿ ಬಿಡುವೆನು.
וְחִזַּקְתִּי אֶת־זְרֹעוֹת מֶלֶךְ בָּבֶל וְנָתַתִּי אֶת־חַרְבִּי בְּיָדוֹ וְשָֽׁבַרְתִּי אֶת־זְרֹעוֹת פַּרְעֹה וְנָאַק נַאֲקוֹת חָלָל לְפָנָֽיו׃ 24
೨೪ನಾನು ಬಾಬೆಲಿನ ಅರಸನ ಕೈಗಳನ್ನು ಬಲಪಡಿಸಿ ನನ್ನ ಖಡ್ಗವನ್ನು ಅವನ ಕೈಗೆ ಕೊಟ್ಟು ಫರೋಹನ ಕೈಗಳನ್ನು ಮುರಿಸಲು, ಗಾಯದಿಂದ ಪ್ರಾಣ ಸಂಕಟಪಡುವವನಂತೆ ಫರೋಹನು ಆ ಅರಸನ ಮುಂದೆ ನರಳಾಡುವನು.
וְהַחֲזַקְתִּי אֶת־זְרֹעוֹת מֶלֶךְ בָּבֶל וּזְרֹעוֹת פַּרְעֹה תִּפֹּלְנָה וְֽיָדְעוּ כִּי־אֲנִי יְהֹוָה בְּתִתִּי חַרְבִּי בְּיַד מֶֽלֶךְ־בָּבֶל וְנָטָה אוֹתָהּ אֶל־אֶרֶץ מִצְרָֽיִם׃ 25
೨೫ನಾನು ಬಾಬೆಲಿನ ಅರಸನ ಕೈಗಳನ್ನು ಬಲಪಡಿಸುವೆನು; ಫರೋಹನ ಕೈಗಳಾದರೋ ಜೋಲುಬೀಳುವವು; ನಾನು ನನ್ನ ಖಡ್ಗವನ್ನು ಬಾಬೆಲಿನ ಅರಸನಿಗೆ ಕೊಡಲು ಅವನು ಅದನ್ನು ಐಗುಪ್ತ ದೇಶದ ಮೇಲೆ ಎತ್ತುವನು. ಆಗ ನಾನೇ ಯೆಹೋವನು” ಎಂದು ಎಲ್ಲರಿಗೂ ಗೊತ್ತಾಗುವುದು.
וַהֲפִצוֹתִי אֶת־מִצְרַיִם בַּגּוֹיִם וְזֵרִיתִי אוֹתָם בָּאֲרָצוֹת וְיָדְעוּ כִּֽי־אֲנִי יְהֹוָֽה׃ 26
೨೬“ನಾನು ಐಗುಪ್ತ್ಯರನ್ನು ಜನಾಂಗಗಳಲ್ಲಿ ಚದುರಿಸಿ ದೇಶದೇಶಗಳಿಗೆ ಚದುರಿಸಿ ಬಿಡುವಾಗ ನಾನೇ ಯೆಹೋವನು ಎಂದು ಅವರಿಗೆ ತಿಳಿದು ಬರುವುದು.”

< יחזקאל 30 >