< יחזקאל 31 >
וַיְהִי בְּאַחַת עֶשְׂרֵה שָׁנָה בַּשְּׁלִישִׁי בְּאֶחָד לַחֹדֶשׁ הָיָה דְבַר־יְהֹוָה אֵלַי לֵאמֹֽר׃ | 1 |
ಹನ್ನೊಂದನೆಯ ವರ್ಷದ, ಮೂರನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು:
בֶּן־אָדָם אֱמֹר אֶל־פַּרְעֹה מֶלֶךְ־מִצְרַיִם וְאֶל־הֲמוֹנוֹ אֶל־מִי דָּמִיתָ בְגׇדְלֶֽךָ׃ | 2 |
“ಮನುಷ್ಯಪುತ್ರನೇ, ಈಜಿಪ್ಟಿನ ಅರಸನಾದ ಫರೋಹನೊಂದಿಗೂ ಮತ್ತು ಅವನ ಸಮೂಹದೊಂದಿಗೂ ಮಾತನಾಡಿ, “‘ನೀನು ನಿನ್ನ ದೊಡ್ಡಸ್ತಿಕೆಯಲ್ಲಿ ಯಾರಿಗೆ ಸಮಾನವಾಗಿರುವೆ?
הִנֵּה אַשּׁוּר אֶרֶז בַּלְּבָנוֹן יְפֵה עָנָף וְחֹרֶשׁ מֵצַל וּגְבַהּ קוֹמָה וּבֵין עֲבֹתִים הָיְתָה צַמַּרְתּֽוֹ׃ | 3 |
ಅಸ್ಸೀರಿಯವು ಲೆಬನೋನಿನ ಸುಂದರವಾದ ಕೊಂಬೆಗಳುಳ್ಳ ದೇವದಾರು ಆಗಿದೆ. ಅದರ ನೆರಳು ದಟ್ಟವಾಗಿದೆ, ಬಹಳ ಎತ್ತರವಾಗಿದೆ, ಅದರ ತುದಿಯು ದಟ್ಟವಾದ ಕೊಂಬೆಗಳ ನಡುವೆಯಿತ್ತು.
מַיִם גִּדְּלוּהוּ תְּהוֹם רֹמְמָתְהוּ אֶת־נַהֲרֹתֶיהָ הֹלֵךְ סְבִיבוֹת מַטָּעָהּ וְאֶת־תְּעָלֹתֶיהָ שִׁלְחָה אֶל כׇּל־עֲצֵי הַשָּׂדֶֽה׃ | 4 |
ಅದನ್ನು ಜಲಪ್ರವಾಹಗಳು ಬೆಳೆಸಿದವು, ಆಳವಾದ ಬುಗ್ಗೆಗಳು ಅದನ್ನು ಎತ್ತರಕ್ಕೆ ಬೆಳೆಸಿದವು. ಅವುಗಳ ತೊರೆಗಳು ಅದರ ಬುಡದ ಸುತ್ತಲೂ ಹರಿದು ತಮ್ಮ ಕಾಲುವೆಗಳನ್ನು ಹೊಲದ ಎಲ್ಲಾ ಮರಗಳಿಗೆ ಕಳುಹಿಸಿದವು.
עַל־כֵּן גָּבְהָא קֹמָתוֹ מִכֹּל עֲצֵי הַשָּׂדֶה וַתִּרְבֶּינָה סַֽרְעַפֹּתָיו וַתֶּאֱרַכְנָה פֹארֹתָו מִמַּיִם רַבִּים בְּשַׁלְּחֽוֹ׃ | 5 |
ಆದ್ದರಿಂದ ಅದರ ಎತ್ತರವು ಬಯಲಿನ ಎಲ್ಲಾ ಮರಗಳಿಗಿಂತ ಎತ್ತರವಾಗಿತ್ತು. ಅದು ಹಬ್ಬಿದ್ದುದರಿಂದ ಮತ್ತು ಹೆಚ್ಚು ನೀರಿನ ದೆಸೆಯಿಂದ ಅದರ ಕೊಂಬೆಗಳು ಅಧಿಕವಾದವು; ಅದರ ರೆಂಬೆಗಳು ಉದ್ದವಾದವು.
בִּסְעַפֹּתָיו קִֽנְנוּ כׇּל־עוֹף הַשָּׁמַיִם וְתַחַת פֹּֽארֹתָיו יָֽלְדוּ כֹּל חַיַּת הַשָּׂדֶה וּבְצִלּוֹ יֵֽשְׁבוּ כֹּל גּוֹיִם רַבִּֽים׃ | 6 |
ಅದರ ಕೊಂಬೆಗಳಲ್ಲಿ ಆಕಾಶದ ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು. ಅದರ ರೆಂಬೆಗಳ ಕೆಳಗೆ ಬಯಲಿನ ಎಲ್ಲಾ ಮೃಗಗಳು ಮರಿಗಳಿಗೆ ಜನ್ಮ ಕೊಟ್ಟವು. ಅದರ ಕೆಳಗೆ ನೆರಳಿನಲ್ಲಿ ಎಲ್ಲಾ ಮಹಾಜನಾಂಗಗಳು ವಾಸಮಾಡಿದವು.
וַיְּיִף בְּגׇדְלוֹ בְּאֹרֶךְ דָּלִיּוֹתָיו כִּֽי־הָיָה שׇׁרְשׁוֹ אֶל־מַיִם רַבִּֽים׃ | 7 |
ಹೀಗೆ ಅದರ ತನ್ನ ದೊಡ್ಡಸ್ತಿಕೆಯಲ್ಲಿ ತನ್ನ ನೀಳವಾದ ಕೊಂಬೆಗಳಿಂದ ಸುಂದರವಾಗಿತ್ತು. ಏಕೆಂದರೆ ಅದರ ಬೇರು ಸಾಕಷ್ಟು ನೀರಿನ ಆಸರೆ ಪಡೆದಿತ್ತು.
אֲרָזִים לֹֽא־עֲמָמֻהוּ בְּגַן־אֱלֹהִים בְּרוֹשִׁים לֹא דָמוּ אֶל־סְעַפֹּתָיו וְעַרְמֹנִים לֹא־הָיוּ כְּפֹרֹאתָיו כׇּל־עֵץ בְּגַן־אֱלֹהִים לֹא־דָמָה אֵלָיו בְּיׇפְיֽוֹ׃ | 8 |
ದೇವರ ತೋಟದ ದೇವದಾರುಗಳು ಅದನ್ನು ಮರೆಮಾಡಲಿಲ್ಲ. ತುರಾಯಿ ಮರಗಳು ಅದರ ಕೊಂಬೆಗಳಿಗೆ ಸಮವಾಗಲಿಲ್ಲ. ಆಲದ ಮರಗಳು ಅದರ ರೆಂಬೆಗಳಷ್ಟೂ ಇಲ್ಲ. ಆ ದೇವರ ತೋಟದ ಯಾವುದೇ ಮರವು ಇದರ ಸೌಂದರ್ಯಕ್ಕೆ ಸಮವಾಗಿಲ್ಲ.
יָפֶה עֲשִׂיתִיו בְּרֹב דָּלִיּוֹתָיו וַיְקַנְאֻהוּ כׇּל־עֲצֵי־עֵדֶן אֲשֶׁר בְּגַן הָאֱלֹהִֽים׃ | 9 |
ನಾನು ಅದನ್ನು ಅದರ ಕೊಂಬೆಗಳ ಸಮೂಹದಿಂದ ಸುಂದರಗೊಳಿಸಿದೆನು. ಅದರಿಂದ ದೇವರ ತೋಟದಲ್ಲಿನ ಏದೆನಿನ ಮರಗಳೆಲ್ಲಾ ಅದರ ಮೇಲೆ ಹೊಟ್ಟೆಕಿಚ್ಚು ಪಟ್ಟವು.
לָכֵן כֹּה אָמַר אֲדֹנָי יֱהֹוִה יַעַן אֲשֶׁר גָּבַהְתָּ בְּקוֹמָה וַיִּתֵּן צַמַּרְתּוֹ אֶל־בֵּין עֲבוֹתִים וְרָם לְבָבוֹ בְּגׇבְהֽוֹ׃ | 10 |
“‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ. ಅವನು ಎತ್ತರವಾಗಿ ಬೆಳೆದು ತನ್ನ ತುದಿ ಮೋಡಗಳನ್ನು ಮುಟ್ಟುವಷ್ಟು ನೀಳವಾಗಿದ್ದುದರ ಬಗ್ಗೆ ಗರ್ವಪಟ್ಟನು.
וְאֶתְּנֵהוּ בְּיַד אֵיל גּוֹיִם עָשׂוֹ יַֽעֲשֶׂה לוֹ כְּרִשְׁעוֹ גֵּרַשְׁתִּֽהוּ׃ | 11 |
ಆದ್ದರಿಂದ ನಾನು ಅವನನ್ನು ಜನಾಂಗಗಳಲ್ಲಿ ಶೂರನಾದ ಒಬ್ಬನ ಕೈಗೆ ಕೊಟ್ಟಿದ್ದೇನೆ. ಇವನು ನಿಶ್ಚಯವಾಗಿ ಅದನ್ನು ದಂಡಿಸುತ್ತಾನೆ ಅದರ ದುಷ್ಟತ್ವದ ನಿಮಿತ್ತ ನಾನು ಅದನ್ನು ತಳ್ಳಿಹಾಕಿದ್ದೇನೆ.
וַיִּכְרְתֻהוּ זָרִים עָרִיצֵי גוֹיִם וַֽיִּטְּשֻׁהוּ אֶל־הֶהָרִים וּבְכׇל־גֵּאָיוֹת נָפְלוּ דָלִיּוֹתָיו וַתִּשָּׁבַרְנָה פֹֽרֹאתָיו בְּכֹל אֲפִיקֵי הָאָרֶץ וַיֵּרְדוּ מִצִּלּוֹ כׇּל־עַמֵּי הָאָרֶץ וַֽיִּטְּשֻֽׁהוּ׃ | 12 |
ಜನಾಂಗಗಳಲ್ಲಿ ಭಯಂಕರವಾದ ವಿದೇಶಿಯರು ಅದನ್ನು ಕಡಿದುಹಾಕುವರು. ಎಲ್ಲಾ ಬೆಟ್ಟಗಳ ಮೇಲೆಯೂ ತಗ್ಗುಗಳಲ್ಲಿಯೂ ಅದರ ಕೊಂಬೆಗಳು ಬೀಳುವುವು. ದೇಶದ ಹಳ್ಳಗಳಲ್ಲೆಲ್ಲಾ ಅದರ ರೆಂಬೆಗಳು ಮುರಿದು ಹೋಗುವುವು. ಭೂಮಿಯ ಜನಗಳೆಲ್ಲಾ ಅದರ ನೆರಳಿನಿಂದ ದೂರ ಸರಿದು ಅದನ್ನು ಬಿಟ್ಟುಬಿಡುವರು.
עַל־מַפַּלְתּוֹ יִשְׁכְּנוּ כׇּל־עוֹף הַשָּׁמָיִם וְאֶל־פֹּרֹאתָיו הָיוּ כֹּל חַיַּת הַשָּׂדֶֽה׃ | 13 |
ಕೆಳಗೆ ಬಿದ್ದ ಮರದ ಮೇಲೆ ಆಕಾಶದ ಪಕ್ಷಿಗಳೆಲ್ಲಾ ಕೂತುಕೊಳ್ಳುವುವು. ಎಲ್ಲಾ ಕಾಡುಮೃಗಗಳು ಅದರ ರೆಂಬೆಗಳ ಬಳಿಯಲ್ಲಿರುವುವು.
לְמַעַן אֲשֶׁר לֹא־יִגְבְּהוּ בְקוֹמָתָם כׇּל־עֲצֵי־מַיִם וְלֹֽא־יִתְּנוּ אֶת־צַמַּרְתָּם אֶל־בֵּין עֲבֹתִים וְלֹֽא־יַעַמְדוּ אֵלֵיהֶם בְּגׇבְהָם כׇּל־שֹׁתֵי מָיִם כִּֽי־כֻלָּם נִתְּנוּ לַמָּוֶת אֶל־אֶרֶץ תַּחְתִּית בְּתוֹךְ בְּנֵי אָדָם אֶל־יוֹרְדֵי בֽוֹר׃ | 14 |
ನೀರಾವರಿಯ ಯಾವ ಮರಗಳು ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು ತಮ್ಮ ತುದಿಯನ್ನು ಮೋಡಗಳಿಗೆ ತಗುಲಿಸದೆ ಇರುವುದರಿಂದ ನೀರನ್ನು ಹೀರುತ್ತಲಿರುವ ದೊಡ್ಡ ದೊಡ್ಡ ಮರಗಳು ಎತ್ತರವಾಗಿ ಚಾಚಿಕೊಳ್ಳದೆ ಇರಲೆಂದು ಹೀಗಾಯಿತು, ಅವೆಲ್ಲಾ ಮರಣದ ಪಾಲಾಗುವುವು. ಅವುಗಳಿಗೆ ಅಧೋಲೋಕವೇ ಗತಿಯಾಗುವುದು, ಪಾತಾಳಕ್ಕೆ ಇಳಿದು ಹೋದ ಮನುಷ್ಯ ಜನ್ಮದವರ ಬಳಿಗೆ ಒಂದೇ ಗುಂಪಾಗಿ ಸೇರುವುವು.
כֹּֽה־אָמַר אֲדֹנָי יֱהֹוִה בְּיוֹם רִדְתּוֹ שְׁאוֹלָה הֶאֱבַלְתִּי כִּסֵּתִי עָלָיו אֶת־תְּהוֹם וָֽאֶמְנַע נַהֲרוֹתֶיהָ וַיִּכָּלְאוּ מַיִם רַבִּים וָאַקְדִּר עָלָיו לְבָנוֹן וְכׇל־עֲצֵי הַשָּׂדֶה עָלָיו עֻלְפֶּֽה׃ (Sheol ) | 15 |
“‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಅದು ಸಮಾಧಿಗೆ ಇಳಿದ ದಿನದಲ್ಲಿ ನಾನು ಆಳವಾದ ಬುಗ್ಗೆಗಳನ್ನು ದುಃಖದಿಂದ ಮುಚ್ಚಿದೆನು; ನಾನು ಅದರ ಪ್ರವಾಹವನ್ನು ತಡೆಹಿಡಿದೆನು. ಮಹಾಜಲವನ್ನು ನಿಲ್ಲಿಸಿದೆನು. ನಾನು ಲೆಬನೋನನ್ನು ಸಹ ಅವನಿಗೋಸ್ಕರ ಗೋಳಿಡುವಂತೆ ಮಾಡಿದೆನು. ಬಯಲಿನ ಮರಗಳೆಲ್ಲಾ ಕುಗ್ಗಿಹೋದವು. (Sheol )
מִקּוֹל מַפַּלְתּוֹ הִרְעַשְׁתִּי גוֹיִם בְּהוֹרִדִי אֹתוֹ שְׁאוֹלָה אֶת־יוֹרְדֵי בוֹר וַיִּנָּחֲמוּ בְּאֶרֶץ תַּחְתִּית כׇּל־עֲצֵי־עֵדֶן מִבְחַר וְטוֹב־לְבָנוֹן כׇּל־שֹׁתֵי מָֽיִם׃ (Sheol ) | 16 |
ನಾನು ಅದನ್ನು ಕುಳಿಗೆ ಇಳಿಯುವವರ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು. ಅಧೋಲೋಕದ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮವಾದ ವೃಕ್ಷಗಳು, ನೀರು ಕುಡಿಯುವುವುಗಳೆಲ್ಲಾ ಕೆಳಗಿನ ಸೀಮೆಯಲ್ಲಿ ಸಂತೈಸಿಕೊಂಡವು. (Sheol )
גַּם־הֵם אִתּוֹ יָרְדוּ שְׁאוֹלָה אֶל־חַלְלֵי־חָרֶב וּזְרֹעוֹ יָשְׁבוּ בְצִלּוֹ בְּתוֹךְ גּוֹיִֽם׃ (Sheol ) | 17 |
ಇದಲ್ಲದೆ, ಅದಕ್ಕೆ ತೋಳಬಲವಾಗಿ ಜನಾಂಗಗಳ ಮಧ್ಯೆ ಅದರ ನೆರಳನ್ನು ಆಶ್ರಯಿಸಿದವರು, ಅದರೊಂದಿಗೆ ಪಾತಾಳಕ್ಕಿಳಿದು, ಖಡ್ಗಹತರ ಜೊತೆಗೆ ಸೇರಿದರು. (Sheol )
אֶל־מִי דָמִיתָ כָּכָה בְּכָבוֹד וּבְגֹדֶל בַּעֲצֵי־עֵדֶן וְהוּרַדְתָּ אֶת־עֲצֵי־עֵדֶן אֶל־אֶרֶץ תַּחְתִּית בְּתוֹךְ עֲרֵלִים תִּשְׁכַּב אֶת־חַלְלֵי־חֶרֶב הוּא פַרְעֹה וְכׇל־הֲמוֹנֹה נְאֻם אֲדֹנָי יֱהֹוִֽה׃ | 18 |
“‘ನೀನು ಹೀಗೆ ಘನತೆಯಿಂದಲೂ ದೊಡ್ಡಸ್ತಿಕೆಯಿಂದಲೂ ಏದೆನಿನ ಯಾವ ಮರಗಳಿಗೆ ಸಮನಾಗಿರುವೆ? ಆದರೂ ನೀನು ಏದೆನಿನ ಮರಗಳ ಸಂಗಡ ಭೂಮಿಯ ಕೆಳಭಾಗಗಳಿಗೆ ದೂಡಿದವನಾಗುವೆ. ಸುನ್ನತಿಯಿಲ್ಲದವರ ಮಧ್ಯದಲ್ಲಿ ಖಡ್ಗದಿಂದ ಹತರಾದವರ ಸಂಗಡ ಮಲಗುವೆ. “‘ಇದೇ ಫರೋಹನನೂ ಅವನ ಎಲ್ಲಾ ಜನಸಮೂಹವೂ ಆಗಿವೆ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’”