< בראשית 29 >
וַיִּשָּׂא יַעֲקֹב רַגְלָיו וַיֵּלֶךְ אַרְצָה בְנֵי־קֶֽדֶם׃ | 1 |
೧ಆಗ ಯಾಕೋಬನು ಪ್ರಯಾಣ ಮಾಡಿ ಪೂರ್ವ ದಿಕ್ಕಿನ ಜನರ ಸೀಮೆಗೆ ಬಂದನು.
וַיַּרְא וְהִנֵּה בְאֵר בַּשָּׂדֶה וְהִנֵּה־שָׁם שְׁלֹשָׁה עֶדְרֵי־צֹאן רֹבְצִים עָלֶיהָ כִּי מִן־הַבְּאֵר הַהִוא יַשְׁקוּ הָעֲדָרִים וְהָאֶבֶן גְּדֹלָה עַל־פִּי הַבְּאֵֽר׃ | 2 |
೨ಅವನು ಕಣ್ಣೆತ್ತಿ ನೋಡಲಾಗಿ ಹೊಲದಲ್ಲಿ ಬಾವಿಯನ್ನು ಕಂಡನು. ಬಾವಿಯ ಹತ್ತಿರ ಮೂರು ಕುರಿಹಿಂಡುಗಳು ಮಲಗಿದ್ದವು. ಆ ಬಾವಿಯ ನೀರನ್ನು ಮಂದೆಗಳಿಗೆ ಕುಡಿಸುತ್ತಿದ್ದರು. ಆ ಬಾವಿಯ ಮೇಲೆ ಒಂದು ದೊಡ್ಡ ಕಲ್ಲನ್ನು ಇಡಲಾಗಿತ್ತು.
וְנֶאֶסְפוּ־שָׁמָּה כׇל־הָעֲדָרִים וְגָלְלוּ אֶת־הָאֶבֶן מֵעַל פִּי הַבְּאֵר וְהִשְׁקוּ אֶת־הַצֹּאן וְהֵשִׁיבוּ אֶת־הָאֶבֶן עַל־פִּי הַבְּאֵר לִמְקֹמָֽהּ׃ | 3 |
೩ಹಿಂಡುಗಳೆಲ್ಲಾ ಅಲ್ಲಿ ಕೂಡಿದಾಗ ಕುರಿಕಾಯುವವರು ಬಾವಿಯ ಮೇಲೆ ಮುಚ್ಚಿದ್ದ ಕಲ್ಲನ್ನು ಉರುಳಿಸಿ ಕುರಿಗಳಿಗೆ ನೀರು ಕುಡಿಸಿ ತಿರುಗಿ ಕಲ್ಲನ್ನು ಬಾವಿಯ ಮೇಲೆ ಮುಚ್ಚುತ್ತಿದ್ದರು.
וַיֹּאמֶר לָהֶם יַעֲקֹב אַחַי מֵאַיִן אַתֶּם וַיֹּאמְרוּ מֵחָרָן אֲנָֽחְנוּ׃ | 4 |
೪ಯಾಕೋಬನು ಅವರಿಗೆ, “ಅಣ್ಣಂದಿರೇ, ನೀವು ಎಲ್ಲಿಯವರು?” ಎಂದು ಕೇಳಲು ಅವರು, “ನಾವು ಖಾರಾನ್ ಊರಿನವರು” ಎಂದರು.
וַיֹּאמֶר לָהֶם הַיְדַעְתֶּם אֶת־לָבָן בֶּן־נָחוֹר וַיֹּאמְרוּ יָדָֽעְנוּ׃ | 5 |
೫ಅದಕ್ಕೆ ಅವನು ಅವರಿಗೆ, “ನಾಹೋರನ ಮಗನಾದ ಲಾಬಾನನನ್ನು ನೀವು ಬಲ್ಲಿರೋ?” ಎಂದು ಕೇಳಿದ್ದಕ್ಕೆ, “ನಾವು ಅವನನ್ನು ಬಲ್ಲೆವು” ಎಂದರು.
וַיֹּאמֶר לָהֶם הֲשָׁלוֹם לוֹ וַיֹּאמְרוּ שָׁלוֹם וְהִנֵּה רָחֵל בִּתּוֹ בָּאָה עִם־הַצֹּֽאן׃ | 6 |
೬ಅವನು ಅವರಿಗೆ, “ಅವನು ಕ್ಷೇಮವಾಗಿದ್ದಾನೋ?” ಎಂದು ಕೇಳಲು ಅವರು, “ಕ್ಷೇಮವಾಗಿದ್ದಾನೆ. ಅಗೋ, ಅವನ ಮಗಳಾದ ರಾಹೇಲಳು ಕುರಿಗಳ ಸಂಗಡ ಬರುತ್ತಿದ್ದಾಳೆ” ಎಂದರು.
וַיֹּאמֶר הֵן עוֹד הַיּוֹם גָּדוֹל לֹא־עֵת הֵאָסֵף הַמִּקְנֶה הַשְׁקוּ הַצֹּאן וּלְכוּ רְעֽוּ׃ | 7 |
೭ಯಾಕೋಬನು ಅವರಿಗೆ, “ಇನ್ನೂ ಹೊತ್ತು ಬಹಳ ಇದೆ, ಮಂದೆಗಳಿಗೆ ನೀರನ್ನು ಕುಡಿಸಿ ಪುನಃ ಮೇಯಿಸಿಕೊಂಡು ಬನ್ನಿರಿ ಅನ್ನಲು ಅವರು,
וַיֹּאמְרוּ לֹא נוּכַל עַד אֲשֶׁר יֵאָֽסְפוּ כׇּל־הָעֲדָרִים וְגָֽלְלוּ אֶת־הָאֶבֶן מֵעַל פִּי הַבְּאֵר וְהִשְׁקִינוּ הַצֹּֽאן׃ | 8 |
೮ಮಂದೆಗಳೆಲ್ಲವು ಬಂದ ನಂತರ ಅವರು ಬಾವಿಯ ಮೇಲೆ ಮುಚ್ಚಿರುವ ಕಲ್ಲನ್ನು ತೆಗೆದು; ಅನಂತರ ಕುರಿಗಳಿಗೆ ನೀರು ಕುಡಿಸುತ್ತೇವೆ” ಎಂದರು.
עוֹדֶנּוּ מְדַבֵּר עִמָּם וְרָחֵל ׀ בָּאָה עִם־הַצֹּאן אֲשֶׁר לְאָבִיהָ כִּי רֹעָה הִֽוא׃ | 9 |
೯ಅವನು ಅವರೊಂದಿಗೆ ಮಾತನಾಡುತ್ತಿರುವಾಗಲೇ ರಾಹೇಲಳು ತನ್ನ ತಂದೆಯ ಕುರಿಗಳ ಸಂಗಡ ಬಂದಳು; ಆಕೆಯೇ ಅವುಗಳನ್ನು ಮೇಯಿಸುತ್ತಿದ್ದಳು.
וַיְהִי כַּאֲשֶׁר רָאָה יַעֲקֹב אֶת־רָחֵל בַּת־לָבָן אֲחִי אִמּוֹ וְאֶת־צֹאן לָבָן אֲחִי אִמּוֹ וַיִּגַּשׁ יַעֲקֹב וַיָּגֶל אֶת־הָאֶבֶן מֵעַל פִּי הַבְּאֵר וַיַּשְׁקְ אֶת־צֹאן לָבָן אֲחִי אִמּֽוֹ׃ | 10 |
೧೦ಯಾಕೋಬನು ತನ್ನ ತಾಯಿಯ ಅಣ್ಣನಾದ ಲಾಬಾನನ ಮಗಳಾದ ರಾಹೇಲಳನ್ನೂ ಲಾಬಾನನ ಕುರಿಗಳನ್ನೂ ಕಂಡಾಗ ಬಾವಿಯ ಹತ್ತಿರಕ್ಕೆ ಹೋಗಿ ಅದರ ಮೇಲೆ ಮುಚ್ಚಿದ್ದ ಕಲ್ಲನ್ನು ಸರಿಸಿ ಲಾಬನನ ಕುರಿಗಳಿಗೆ ನೀರು ಕುಡಿಸಿದನು.
וַיִּשַּׁק יַעֲקֹב לְרָחֵל וַיִּשָּׂא אֶת־קֹלוֹ וַיֵּֽבְךְּ׃ | 11 |
೧೧ಯಾಕೋಬನು ರಾಹೇಲಳಿಗೆ ಮುದ್ದಿಟ್ಟು ಜೋರಾಗಿ ಅತ್ತು ಆಕೆಗೆ,
וַיַּגֵּד יַעֲקֹב לְרָחֵל כִּי אֲחִי אָבִיהָ הוּא וְכִי בֶן־רִבְקָה הוּא וַתָּרׇץ וַתַּגֵּד לְאָבִֽיהָ׃ | 12 |
೧೨“ನಾನು ನಿನ್ನ ತಂದೆಯ ಸೋದರಳಿಯನೂ ರೆಬೆಕ್ಕಳ ಮಗನಾದ ಯಾಕೋಬನೆಂದು ತಿಳಿಸಿದನು” ಆಗ ರಾಹೇಲಳು ಓಡಿಹೋಗಿ ಆ ಮಾತನ್ನು ತನ್ನ ತಂದೆಗೆ ತಿಳಿಸಿದಳು.
וַיְהִי כִשְׁמֹעַ לָבָן אֶת־שֵׁמַע ׀ יַעֲקֹב בֶּן־אֲחֹתוֹ וַיָּרׇץ לִקְרָאתוֹ וַיְחַבֶּק־לוֹ וַיְנַשֶּׁק־לוֹ וַיְבִיאֵהוּ אֶל־בֵּיתוֹ וַיְסַפֵּר לְלָבָן אֵת כׇּל־הַדְּבָרִים הָאֵֽלֶּה׃ | 13 |
೧೩ಲಾಬಾನನು ತನ್ನ ಸಹೋದರಿಯ ಮಗನಾದ ಯಾಕೋಬನು ಬಂದಿರುವ ವರ್ತಮಾನವನ್ನು ಕೇಳಿದಾಗ ಅವನನ್ನು ಎದುರುಗೊಳ್ಳುವುದಕ್ಕೆ ಓಡಿಬಂದು ಅಪ್ಪಿಕೊಂಡು ಮುದ್ದಿಟ್ಟು ತನ್ನ ಮನೆಗೆ ಕರೆದುಕೊಂಡು ಬಂದನು.
וַיֹּאמֶר לוֹ לָבָן אַךְ עַצְמִי וּבְשָׂרִי אָתָּה וַיֵּשֶׁב עִמּוֹ חֹדֶשׁ יָמִֽים׃ | 14 |
೧೪ಯಾಕೋಬನು ಲಾಬಾನನಿಗೆ ಎಲ್ಲಾ ಸಂಗತಿಗಳನ್ನು ತಿಳಿಸಲು ಲಾಬಾನನು ಅವನಿಗೆ, “ನಿಜವಾಗಿ ನೀನು ನನ್ನ ರಕ್ತ ಸಂಬಂಧಿಯಾಗಿದ್ದಿ” ಎಂದು ಹೇಳಿದನು.
וַיֹּאמֶר לָבָן לְיַעֲקֹב הֲכִי־אָחִי אַתָּה וַעֲבַדְתַּנִי חִנָּם הַגִּידָה לִּי מַה־מַּשְׂכֻּרְתֶּֽךָ׃ | 15 |
೧೫ಅವನು ಒಂದು ತಿಂಗಳಿನವರೆಗೂ ಲಾಬಾನನ ಬಳಿಯಲ್ಲಿ ವಾಸಮಾಡಿದನು. ಆ ಮೇಲೆ ಲಾಬಾನನು ಯಾಕೋಬನಿಗೆ, “ನೀನು ನನ್ನ ಸಂಬಂಧಿಯೆಂದು ಸುಮ್ಮನೆ ಸೇವೆ ಮಾಡುವುದು ನ್ಯಾಯವೋ? ನಿನ್ನ ಕೆಲಸಕ್ಕಾಗಿ ನಾನು ನಿನಗೆ ಏನು ಕೊಡಲಿ?” ಎಂದು ಕೇಳಿದನು.
וּלְלָבָן שְׁתֵּי בָנוֹת שֵׁם הַגְּדֹלָה לֵאָה וְשֵׁם הַקְּטַנָּה רָחֵֽל׃ | 16 |
೧೬ಲಾಬಾನನಿಗೆ ಇಬ್ಬರು ಹೆಣ್ಣುಮಕ್ಕಳಿದ್ದರು; ದೊಡ್ಡವಳ ಹೆಸರು ಲೇಯಾ, ಚಿಕ್ಕವಳ ಹೆಸರು ರಾಹೇಲ್.
וְעֵינֵי לֵאָה רַכּוֹת וְרָחֵל הָֽיְתָה יְפַת־תֹּאַר וִיפַת מַרְאֶֽה׃ | 17 |
೧೭ಲೇಯಾ ಎಂಬಾಕೆಯ ಕಣ್ಣುಗಳು ಕಾಂತಿ ಹೀನವಾಗಿದ್ದವು. ಆದರೆ ರಾಹೇಲಳು ಬಹು ಸುಂದರಿಯು ಲಾವಣ್ಯವತಿಯೂ ಆಗಿದ್ದಳು.
וַיֶּאֱהַב יַעֲקֹב אֶת־רָחֵל וַיֹּאמֶר אֶֽעֱבׇדְךָ שֶׁבַע שָׁנִים בְּרָחֵל בִּתְּךָ הַקְּטַנָּֽה׃ | 18 |
೧೮ಯಾಕೋಬನು ರಾಹೇಲಳನ್ನು ಪ್ರೀತಿಸಿ, “ನಿನ್ನ ಕಿರಿಯ ಮಗಳಾದ ರಾಹೇಲಳಿಗೋಸ್ಕರ ಏಳು ವರ್ಷ ಸೇವೆ ಮಾಡುವೆನು” ಎಂದು ಹೇಳಲು,
וַיֹּאמֶר לָבָן טוֹב תִּתִּי אֹתָהּ לָךְ מִתִּתִּי אֹתָהּ לְאִישׁ אַחֵר שְׁבָה עִמָּדִֽי׃ | 19 |
೧೯ಲಾಬಾನನು, “ಆಕೆಯನ್ನು ಬೇರೊಬ್ಬನಿಗೆ ಕೊಡುವುದಕ್ಕಿಂತ ನಿನಗೆ ಕೊಡುವುದೇ ಒಳ್ಳೆಯದು. ಆದುದರಿಂದ ನೀನು ನನ್ನ ಸಂಗಡ ವಾಸವಾಗಿರು” ಎಂದನು.
וַיַּעֲבֹד יַעֲקֹב בְּרָחֵל שֶׁבַע שָׁנִים וַיִּהְיוּ בְעֵינָיו כְּיָמִים אֲחָדִים בְּאַהֲבָתוֹ אֹתָֽהּ׃ | 20 |
೨೦ಈ ಪ್ರಕಾರ ಯಾಕೋಬನು ರಾಹೇಲಳಿಗೋಸ್ಕರ ಏಳು ವರ್ಷ ಸೇವೆ ಮಾಡಿದನು. ಅವನು ಆಕೆಯನ್ನು ಬಹಳವಾಗಿ ಪ್ರೀತಿಸಿದ್ದರಿಂದ ಅದು ಅವನಿಗೆ ಸ್ವಲ್ಪ ಕಾಲದಂತೆ ಕಾಣಿಸಿತು.
וַיֹּאמֶר יַעֲקֹב אֶל־לָבָן הָבָה אֶת־אִשְׁתִּי כִּי מָלְאוּ יָמָי וְאָבוֹאָה אֵלֶֽיהָ׃ | 21 |
೨೧ತರುವಾಯ ಯಾಕೋಬನು ಲಾಬಾನನಿಗೆ, “ನನಗೆ ಗೊತ್ತು ಮಾಡಿದ ಕಾಲವು ಪೂರ್ತಿಯಾದವು. ರಾಹೇಲಳನ್ನು ನನಗೆ ಮದುವೆಮಾಡಿ ನನ್ನ ಸ್ವಾಧೀನಕ್ಕೆ ಕೊಡು” ಎಂದು ಕೇಳಿದನು.
וַיֶּאֱסֹף לָבָן אֶת־כׇּל־אַנְשֵׁי הַמָּקוֹם וַיַּעַשׂ מִשְׁתֶּֽה׃ | 22 |
೨೨ಆಗ ಲಾಬಾನನು ಆ ಸ್ಥಳದವರೆಲ್ಲರನ್ನು ಕರೆಸಿ ಔತಣವನ್ನು ಮಾಡಿಸಿದನು.
וַיְהִי בָעֶרֶב וַיִּקַּח אֶת־לֵאָה בִתּוֹ וַיָּבֵא אֹתָהּ אֵלָיו וַיָּבֹא אֵלֶֽיהָ׃ | 23 |
೨೩ಸಾಯಂಕಾಲದಲ್ಲಿ ತನ್ನ ಹಿರೀಮಗಳಾದ ಲೇಯಳನ್ನೇ ಯಾಕೋಬನಿಗೆ ಒಪ್ಪಿಸಿಕೊಟ್ಟನು. ಅವನು ಆಕೆಯನ್ನು ಸಂಗಮಿಸಿದನು.
וַיִּתֵּן לָבָן לָהּ אֶת־זִלְפָּה שִׁפְחָתוֹ לְלֵאָה בִתּוֹ שִׁפְחָֽה׃ | 24 |
೨೪ಲಾಬಾನನು ತನ್ನ ಮಗಳಾದ ಲೇಯಳಿಗೆ ಜಿಲ್ಪಾ ಎಂಬ ಒಬ್ಬ ದಾಸಿಯನ್ನು ಕೊಟ್ಟನು.
וַיְהִי בַבֹּקֶר וְהִנֵּה־הִוא לֵאָה וַיֹּאמֶר אֶל־לָבָן מַה־זֹּאת עָשִׂיתָ לִּי הֲלֹא בְרָחֵל עָבַדְתִּי עִמָּךְ וְלָמָּה רִמִּיתָֽנִי׃ | 25 |
೨೫ಬೆಳಗ್ಗೆ ಆಕೆ ಲೇಯಳೆಂದು ಯಾಕೋಬನಿಗೆ ತಿಳಿದು ಬರಲು ಅವನು ಲಾಬಾನನಿಗೆ, “ಇದೇನು ನೀನು ನನಗೆ ಮಾಡಿದ್ದು? ರಾಹೇಲಳಿಗೋಸ್ಕರ ನಿನಗೆ ಸೇವೆಮಾಡಿದೆನಲ್ಲಾ; ಯಾಕೆ ನನಗೆ ಮೋಸ ಮಾಡಿದೆ” ಎಂದು ಕೇಳಿದ್ದಕ್ಕೆ,
וַיֹּאמֶר לָבָן לֹא־יֵעָשֶׂה כֵן בִּמְקוֹמֵנוּ לָתֵת הַצְּעִירָה לִפְנֵי הַבְּכִירָֽה׃ | 26 |
೨೬ಲಾಬಾನನು, “ಹಿರಿ ಮಗಳಿಗಿಂತ ಮೊದಲು ಕಿರಿಯ ಮಗಳನ್ನು ಮದುವೆ ಮಾಡಿಸಿಕೊಡುವುದು ನಮ್ಮ ದೇಶದ ಪದ್ಧತಿಯಲ್ಲ.
מַלֵּא שְׁבֻעַ זֹאת וְנִתְּנָה לְךָ גַּם־אֶת־זֹאת בַּעֲבֹדָה אֲשֶׁר תַּעֲבֹד עִמָּדִי עוֹד שֶֽׁבַע־שָׁנִים אֲחֵרֽוֹת׃ | 27 |
೨೭ಆಕೆಯ ಮದುವೆಯ ವಾರವನ್ನು ಪೂರೈಸು. ಅನಂತರ ಈ ನನ್ನ ಕಿರಿಯ ಮಗಳನ್ನೂ ನಿನಗೆ ಕೊಡುತ್ತೇನೆ; ಈಕೆಗೋಸ್ಕರ ನೀನು ಇನ್ನೂ ಏಳು ವರ್ಷ ಸೇವೆಮಾಡು” ಅಂದನು.
וַיַּעַשׂ יַעֲקֹב כֵּן וַיְמַלֵּא שְׁבֻעַ זֹאת וַיִּתֶּן־לוֹ אֶת־רָחֵל בִּתּוֹ לוֹ לְאִשָּֽׁה׃ | 28 |
೨೮ಯಾಕೋಬನು ಅದಕ್ಕೆ ಒಪ್ಪಿ ಹಿರಿಯವಳ ಮದುವೆಯ ವಾರವನ್ನು ತೀರಿಸಿದನು. ಆಗ ಲಾಬಾನನು ತನ್ನ ಮಗಳಾದ ರಾಹೇಲಳನ್ನು ಯಾಕೋಬನಿಗೆ ಮದುವೆ ಮಾಡಿ ಕೊಟ್ಟನು.
וַיִּתֵּן לָבָן לְרָחֵל בִּתּוֹ אֶת־בִּלְהָה שִׁפְחָתוֹ לָהּ לְשִׁפְחָֽה׃ | 29 |
೨೯ಲಾಬಾನನು ತನ್ನ ಮಗಳಾದ ರಾಹೇಲಳಿಗೆ ಬಿಲ್ಹಾ ಎಂಬ ದಾಸಿಯನ್ನು ಕೂಡ ಕೊಟ್ಟನು.
וַיָּבֹא גַּם אֶל־רָחֵל וַיֶּאֱהַב גַּֽם־אֶת־רָחֵל מִלֵּאָה וַיַּעֲבֹד עִמּוֹ עוֹד שֶֽׁבַע־שָׁנִים אֲחֵרֽוֹת׃ | 30 |
೩೦ಯಾಕೋಬನು ರಾಹೇಲಳನ್ನೂ ಸಂಗಮಿಸಿ ಆಕೆಯನ್ನು ಲೇಯಳಿಗಿಂತ ಹೆಚ್ಚಾಗಿ ಪ್ರೀತಿಸಿದನು. ಆಕೆಗೋಸ್ಕರ ಲಾಬಾನನ ಬಳಿಯಲ್ಲಿ ಇನ್ನೂ ಏಳು ವರ್ಷ ಸೇವೆಮಾಡಿದನು.
וַיַּרְא יְהֹוָה כִּֽי־שְׂנוּאָה לֵאָה וַיִּפְתַּח אֶת־רַחְמָהּ וְרָחֵל עֲקָרָֽה׃ | 31 |
೩೧ಲೇಯಳು ಯಾಕೋಬನಿಗೆ ಅಲಕ್ಷ್ಯವಾಗಿದ್ದಾಳೆಂಬುದನ್ನು ಯೆಹೋವನು ನೋಡಿ, ಆಕೆಯು ಗರ್ಭಧರಿಸುವಂತೆ ಅನುಗ್ರಹಿಸಿದನು; ಆದರೆ ರಾಹೇಲಳು ಬಂಜೆಯಾಗಿದ್ದಳು.
וַתַּהַר לֵאָה וַתֵּלֶד בֵּן וַתִּקְרָא שְׁמוֹ רְאוּבֵן כִּי אָֽמְרָה כִּֽי־רָאָה יְהֹוָה בְּעׇנְיִי כִּי עַתָּה יֶאֱהָבַנִי אִישִֽׁי׃ | 32 |
೩೨ಲೇಯಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ಯೆಹೋವನು ನನ್ನ ವ್ಯಥೆಯನ್ನು ನೋಡಿದ್ದಾನೆ, ಇನ್ನು ಮುಂದೆ ನನ್ನ ಗಂಡನು ನನ್ನನ್ನು ಪ್ರೀತಿಸುವನು ಎಂದು ಹೇಳಿ ಅದಕ್ಕೆ ‘ರೂಬೇನ್ ಎಂದು’ ಹೆಸರಿಟ್ಟಳು.”
וַתַּהַר עוֹד וַתֵּלֶד בֵּן וַתֹּאמֶר כִּֽי־שָׁמַע יְהֹוָה כִּֽי־שְׂנוּאָה אָנֹכִי וַיִּתֶּן־לִי גַּם־אֶת־זֶה וַתִּקְרָא שְׁמוֹ שִׁמְעֽוֹן׃ | 33 |
೩೩ಆಕೆ ತಿರುಗಿ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ನಾನು ಗಂಡನ ಅಲಕ್ಷ್ಯಕ್ಕೆ ಗುರಿಯಾದೆನೆಂದು ಯೆಹೋವನು ತಿಳಿದಿದ್ದರಿಂದ ಈ ಮಗುವನ್ನೂ ದಯಪಾಲಿಸಿದನೆಂದು ಹೇಳಿ ಅದಕ್ಕೆ ‘ಸಿಮೆಯೋನ್’ ಎಂದು ಹೆಸರಿಟ್ಟಳು.”
וַתַּהַר עוֹד וַתֵּלֶד בֵּן וַתֹּאמֶר עַתָּה הַפַּעַם יִלָּוֶה אִישִׁי אֵלַי כִּֽי־יָלַדְתִּי לוֹ שְׁלֹשָׁה בָנִים עַל־כֵּן קָרָֽא־שְׁמוֹ לֵוִֽי׃ | 34 |
೩೪ಆಕೆಯು ತಿರುಗಿ ಗರ್ಭಧರಿಸಿ ಗಂಡು ಮಗುವನ್ನು ಹೆತ್ತು, “ಈಗಲಾದರೂ ನನ್ನ ಗಂಡನೂ ನಾನೂ ಒಂದಾಗುವೆವು, ಅವನಿಗೆ ಮೂರು ಮಂದಿ ಗಂಡು ಮಕ್ಕಳನ್ನು ಹೆತ್ತಿದ್ದೇನಲ್ಲಾ” ಎಂದು ಹೇಳಿ ಅದಕ್ಕೆ “ಲೇವಿಯೆಂದು” ಹೆಸರಿಟ್ಟಳು.
וַתַּהַר עוֹד וַתֵּלֶד בֵּן וַתֹּאמֶר הַפַּעַם אוֹדֶה אֶת־יְהֹוָה עַל־כֵּן קָרְאָה שְׁמוֹ יְהוּדָה וַֽתַּעֲמֹד מִלֶּֽדֶת׃ | 35 |
೩೫ಆಕೆಯು ತಿರುಗಿ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ಈಗ ಯೆಹೋವನಿಗೆ ಉಪಕಾರ ಸ್ತುತಿಮಾಡುವೆನು” ಎಂದು ಹೇಳಿ ಅದಕ್ಕೆ “ಯೆಹೂದಾ” ಎಂದು ಹೆಸರಿಟ್ಟಳು. ಆ ಮೇಲೆ ಆಕೆಗೆ ಗರ್ಭಧಾರಣೆಯಾಗುವುದು ನಿಂತಿತು.