< בראשית 34 >

וַתֵּצֵא דִינָה בַּת־לֵאָה אֲשֶׁר יָלְדָה לְיַעֲקֹב לִרְאוֹת בִּבְנוֹת הָאָֽרֶץ׃ 1
ಯಾಕೋಬನಿಗೆ ಲೇಯಳಲ್ಲಿ ಹುಟ್ಟಿದ ಮಗಳಾದ ದೀನಳು ಒಂದು ದಿನ ಆ ದೇಶದ ಸ್ತ್ರೀಯರನ್ನು ನೋಡುವುದಕ್ಕೆ ಹೊರಗೆ ಬಂದಳು.
וַיַּרְא אֹתָהּ שְׁכֶם בֶּן־חֲמוֹר הַֽחִוִּי נְשִׂיא הָאָרֶץ וַיִּקַּח אֹתָהּ וַיִּשְׁכַּב אֹתָהּ וַיְעַנֶּֽהָ׃ 2
ದೇಶಾಧಿಪತಿಯಾಗಿರುವ ಹಿವ್ವಿಯನಾದ ಹಮೋರನ ಮಗ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಮಾನಭಂಗಪಡಿಸಿದನು.
וַתִּדְבַּק נַפְשׁוֹ בְּדִינָה בַּֽת־יַעֲקֹב וַיֶּֽאֱהַב אֶת־הַֽנַּעֲרָ וַיְדַבֵּר עַל־לֵב הַֽנַּעֲרָֽ׃ 3
ಅವನ ಮನಸ್ಸು ಯಾಕೋಬನ ಮಗಳಾದ ದೀನಳ ಮೇಲೆಯೇ ಇತ್ತು. ಆ ಹುಡುಗಿಯನ್ನು ಪ್ರೀತಿಸಿ ಆಕೆಯ ಸಂಗಡ ಮನವೊಲಿಸುವ ಮಾತುಗಳನ್ನಾಡಿದನು.
וַיֹּאמֶר שְׁכֶם אֶל־חֲמוֹר אָבִיו לֵאמֹר קַֽח־לִי אֶת־הַיַּלְדָּה הַזֹּאת לְאִשָּֽׁה׃ 4
ಶೆಕೆಮನು ತನ್ನ ತಂದೆಯಾದ ಹಮೋರನಿಗೆ, “ನೀನು ಈ ಹುಡುಗಿಯನ್ನು ನನಗೆ ಮದುವೆಮಾಡಿಸಬೇಕು” ಎಂದು ಕೇಳಿಕೊಂಡನು.
וְיַעֲקֹב שָׁמַע כִּי טִמֵּא אֶת־דִּינָה בִתּוֹ וּבָנָיו הָיוּ אֶת־מִקְנֵהוּ בַּשָּׂדֶה וְהֶחֱרִשׁ יַעֲקֹב עַד־בֹּאָֽם׃ 5
ಯಾಕೋಬನು ತನ್ನ ಮಗಳಾದ ದೀನಳಿಗೆ ಶೆಕೆಮನಿಂದ ಮಾನಭಂಗವಾದ ವರ್ತಮಾನವನ್ನು ಕೇಳಿದಾಗ ಅವನ ಗಂಡುಮಕ್ಕಳು ಅಡವಿಯಲ್ಲಿ ದನಗಳನ್ನು ಕಾಯುತ್ತಿದ್ದರು. ಅವರು ಬರುವ ತನಕ ಅವನು ಸುಮ್ಮನೇ ಇದ್ದನು.
וַיֵּצֵא חֲמוֹר אֲבִֽי־שְׁכֶם אֶֽל־יַעֲקֹב לְדַבֵּר אִתּֽוֹ׃ 6
ಅಷ್ಟರಲ್ಲಿ ಶೆಕೆಮನ ತಂದೆಯಾದ ಹಮೋರನು ಯಾಕೋಬನ ಸಂಗಡ ಮಾತನಾಡುವುದಕ್ಕೆ ಬಂದನು.
וּבְנֵי יַעֲקֹב בָּאוּ מִן־הַשָּׂדֶה כְּשׇׁמְעָם וַיִּֽתְעַצְּבוּ הָֽאֲנָשִׁים וַיִּחַר לָהֶם מְאֹד כִּֽי־נְבָלָה עָשָׂה בְיִשְׂרָאֵל לִשְׁכַּב אֶת־בַּֽת־יַעֲקֹב וְכֵן לֹא יֵעָשֶֽׂה׃ 7
ಯಾಕೋಬನ ಗಂಡುಮಕ್ಕಳು ತಂಗಿಯ ಸಂಗತಿಯನ್ನು ಕೇಳಿ ಅಡವಿಯಿಂದ ಬಂದಾಗ ವ್ಯಸನಪಟ್ಟು ಬಹಳ ಕೋಪಗೊಂಡರು. ಶೆಕೆಮನು ಯಾಕೋಬನ ಮಗಳ ಮಾನಭಂಗ ಮಾಡಿ ಇಸ್ರಾಯೇಲರೊಳಗೆ ಬಹಳ ಅವಮಾನಕರವಾದ ಕೆಲಸವನ್ನು ಮಾಡಿದನು.
וַיְדַבֵּר חֲמוֹר אִתָּם לֵאמֹר שְׁכֶם בְּנִי חָֽשְׁקָה נַפְשׁוֹ בְּבִתְּכֶם תְּנוּ נָא אֹתָהּ לוֹ לְאִשָּֽׁה׃ 8
ಹಮೋರನು ಅವರಿಗೆ, “ನನ್ನ ಮಗನಾದ ಶೆಕೆಮನು ನಿಮ್ಮ ಹುಡುಗಿಯನ್ನು ಬಹಳ ಆಶೆಯಿಂದ ಮೋಹಿಸಿದ್ದಾನೆ, ಆಕೆಯನ್ನು ಅವನಿಗೆ ಮದುವೆ ಮಾಡಿಕೊಡಬೇಕು ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.
וְהִֽתְחַתְּנוּ אֹתָנוּ בְּנֹֽתֵיכֶם תִּתְּנוּ־לָנוּ וְאֶת־בְּנֹתֵינוּ תִּקְחוּ לָכֶֽם׃ 9
ಇದಲ್ಲದೆ ನೀವು ನಮ್ಮಲ್ಲೇ ವಾಸವಾಗಿದ್ದು ನಿಮ್ಮ ಹೆಣ್ಣು ಮಕ್ಕಳನ್ನು ನಮಗೆ ಕೊಡುತ್ತಾ ನಮ್ಮ ಹೆಣ್ಣುಮಕ್ಕಳನ್ನು ನೀವು ತೆಗೆದುಕೊಳ್ಳುತ್ತಾ ನಮ್ಮೊಂದಿಗೆ ಬೀಗರಾಗಿರಿ.
וְאִתָּנוּ תֵּשֵׁבוּ וְהָאָרֶץ תִּהְיֶה לִפְנֵיכֶם שְׁבוּ וּסְחָרוּהָ וְהֵֽאָחֲזוּ בָּֽהּ׃ 10
೧೦ದೇಶವೆಲ್ಲಾ ನಿಮ್ಮ ಮುಂದೆ ಇದೆ ಅಲ್ಲಿ ವಾಸಮಾಡಿಕೊಂಡು ವ್ಯಾಪಾರ ಮಾಡಿ, ಆಸ್ತಿಯನ್ನು ಸಂಪಾದಿಸಿಕೊಳ್ಳಬಹುದು” ಎಂದು ಹೇಳಿದನು.
וַיֹּאמֶר שְׁכֶם אֶל־אָבִיהָ וְאֶל־אַחֶיהָ אֶמְצָא־חֵן בְּעֵינֵיכֶם וַאֲשֶׁר תֹּאמְרוּ אֵלַי אֶתֵּֽן׃ 11
೧೧ಬಳಿಕ ಶೆಕೆಮನು ಆ ಹುಡುಗಿಯ ತಂದೆಗೂ ಅಣ್ಣಂದಿರಿಗೂ, “ನಿಮ್ಮ ದಯೆ ನನ್ನ ಮೇಲೆ ಇರಲಿ, ನೀವು ಹೇಳುವಷ್ಟು ಕೊಡುತ್ತೇನೆ.
הַרְבּוּ עָלַי מְאֹד מֹהַר וּמַתָּן וְאֶתְּנָה כַּאֲשֶׁר תֹּאמְרוּ אֵלָי וּתְנוּ־לִי אֶת־הַֽנַּעֲרָ לְאִשָּֽׁה׃ 12
೧೨ನೀವು ಹೇಳುವ ಮೇರೆಗೆ ಎಷ್ಟಾದರೂ ತೆರವನ್ನೂ ಕಾಣಿಕೆಯನ್ನೂ ಹೆಣ್ಣಿಗಾಗಿ ಕೊಡುತ್ತೇನೆ. ಆದರೆ ಆ ಹುಡುಗಿಯನ್ನು ನನಗೆ ಹೆಂಡತಿಯಾಗಿ ಕೊಡಿರಿ” ಎಂದನು.
וַיַּעֲנוּ בְנֵֽי־יַעֲקֹב אֶת־שְׁכֶם וְאֶת־חֲמוֹר אָבִיו בְּמִרְמָה וַיְדַבֵּרוּ אֲשֶׁר טִמֵּא אֵת דִּינָה אֲחֹתָֽם׃ 13
೧೩ಶೆಕೆಮನು ತಮ್ಮ ತಂಗಿಯಾದ ದೀನಳನ್ನು ಮಾನಭಂಗ ಮಾಡಿದ್ದರಿಂದ ಯಾಕೋಬನ ಮಕ್ಕಳು ಅವನಿಗೂ ಅವನ ತಂದೆಯಾದ ಹಮೋರನಿಗೂ ವಂಚನೆಯ ಉತ್ತರಕೊಟ್ಟರು.
וַיֹּאמְרוּ אֲלֵיהֶם לֹא נוּכַל לַעֲשׂוֹת הַדָּבָר הַזֶּה לָתֵת אֶת־אֲחֹתֵנוּ לְאִישׁ אֲשֶׁר־לוֹ עׇרְלָה כִּֽי־חֶרְפָּה הִוא לָֽנוּ׃ 14
೧೪ಯಾಕೋಬನ ಮಕ್ಕಳು ಅವರಿಗೆ, “ನಾವು ಈ ಕಾರ್ಯವನ್ನು ಮಾಡಲಾರೆವು. ಸುನ್ನತಿಯಿಲ್ಲದವನಿಗೆ ನಮ್ಮ ತಂಗಿಯನ್ನು ಕೊಡುವುದಕ್ಕಾಗುವುದಿಲ್ಲ, ಹಾಗೆ ಕೊಡುವುದು ನಮಗೆ ಅವಮಾನ.
אַךְ־בְּזֹאת נֵאוֹת לָכֶם אִם תִּהְיוּ כָמֹנוּ לְהִמֹּל לָכֶם כׇּל־זָכָֽר׃ 15
೧೫ನಿಮ್ಮಲ್ಲಿನ ಪುರುಷರೆಲ್ಲರೂ ಸುನ್ನತಿಮಾಡಿಸಿಕೊಂಡು ನಮ್ಮ ಹಾಗೆ ಆಗಬೇಕು. ಹೀಗಾಗುವ ಪಕ್ಷದಲ್ಲಿ ಮಾತ್ರ ನಾವು ನಿಮ್ಮ ಮಾತಿಗೆ ಒಪ್ಪುವೆವು.
וְנָתַנּוּ אֶת־בְּנֹתֵינוּ לָכֶם וְאֶת־בְּנֹתֵיכֶם נִֽקַּֽח־לָנוּ וְיָשַׁבְנוּ אִתְּכֶם וְהָיִינוּ לְעַם אֶחָֽד׃ 16
೧೬ನಮ್ಮ ಹೆಣ್ಣುಮಕ್ಕಳನ್ನು ನಿಮಗೆ ಕೊಡುತ್ತಾ ನಿಮ್ಮ ಹೆಣ್ಣುಮಕ್ಕಳನ್ನು ನಾವು ತೆಗೆದುಕೊಳ್ಳುತ್ತಾ ನಿಮ್ಮಲ್ಲಿ ವಾಸಮಾಡಿ ನಿಮ್ಮೊಂದಿಗೆ ಒಂದೇ ಕುಲವಾಗಿರುವೆವು.
וְאִם־לֹא תִשְׁמְעוּ אֵלֵינוּ לְהִמּוֹל וְלָקַחְנוּ אֶת־בִּתֵּנוּ וְהָלָֽכְנוּ׃ 17
೧೭ಆದರೆ ನೀವು ನಮ್ಮ ಮಾತಿಗೆ ಒಪ್ಪದೆ ಸುನ್ನತಿ ಮಾಡಿಸಿಕೊಳ್ಳದೆ ಹೋದರೆ ನಾವು ನಮ್ಮ ಹುಡುಗಿಯನ್ನು ಕರೆದುಕೊಂಡು ಹೊರಟು ಹೋಗುತ್ತೇವೆ” ಎಂದನು.
וַיִּֽיטְבוּ דִבְרֵיהֶם בְּעֵינֵי חֲמוֹר וּבְעֵינֵי שְׁכֶם בֶּן־חֲמֽוֹר׃ 18
೧೮ಅವರ ಮಾತುಗಳು ಹಮೋರನಿಗೂ, ಅವನ ಮಗನಾದ ಶೆಕೆಮನಿಗೂ ಒಳ್ಳೆಯದೆಂದು ತೋಚಿತು.
וְלֹֽא־אֵחַר הַנַּעַר לַעֲשׂוֹת הַדָּבָר כִּי חָפֵץ בְּבַֽת־יַעֲקֹב וְהוּא נִכְבָּד מִכֹּל בֵּית אָבִֽיו׃ 19
೧೯ಆ ಯೌವನಸ್ಥನು ಯಾಕೋಬನ ಮಗಳನ್ನು ಮೆಚ್ಚಿಕೊಂಡಿದ್ದರಿಂದ ಅವರು ಹೇಳಿದಂತೆ ಮಾಡುವುದಕ್ಕೆ ತಡಮಾಡಲಿಲ್ಲ. ಅವನು ತನ್ನ ತಂದೆಯ ಮನೆಯವರೆಲ್ಲರಿಗಿಂತ ಗೌರವವುಳ್ಳವನಾಗಿದ್ದನು.
וַיָּבֹא חֲמוֹר וּשְׁכֶם בְּנוֹ אֶל־שַׁעַר עִירָם וַֽיְדַבְּרוּ אֶל־אַנְשֵׁי עִירָם לֵאמֹֽר׃ 20
೨೦ಆಗ ಹಮೋರನೂ ಅವನ ಮಗನಾದ ಶೆಕೆಮನೂ ಊರ ಬಾಗಿಲಿಗೆ ಬಂದು ಊರಿನವರೆಲ್ಲರ ಸಂಗಡ ಮಾತನಾಡಿ ಅವರಿಗೆ,
הָאֲנָשִׁים הָאֵלֶּה שְֽׁלֵמִים הֵם אִתָּנוּ וְיֵשְׁבוּ בָאָרֶץ וְיִסְחֲרוּ אֹתָהּ וְהָאָרֶץ הִנֵּה רַֽחֲבַת־יָדַיִם לִפְנֵיהֶם אֶת־בְּנֹתָם נִקַּֽח־לָנוּ לְנָשִׁים וְאֶת־בְּנֹתֵינוּ נִתֵּן לָהֶֽם׃ 21
೨೧“ಈ ಜನರು ನಮ್ಮ ಸಂಗಡ ಸಮಾಧಾನವಾಗಿದ್ದಾರೆ, ಆದ್ದರಿಂದ ಅವರು ನಮ್ಮ ದೇಶದಲ್ಲೇ ವಾಸ ಮಾಡಿಕೊಂಡು ವ್ಯಾಪಾರ ಮಾಡಲಿ. ಈ ದೇಶವು ಅವರಿಗೂ ನಮಗೂ ಸಾಕಾಗುವಷ್ಟು ವಿಸ್ತಾರವಾಗಿದೆ. ನಾವು ಅವರ ಹೆಣ್ಣುಮಕ್ಕಳನ್ನು ಮದುವೆಮಾಡಿಕೊಳ್ಳೋಣ ನಮ್ಮ ಹೆಣ್ಣುಮಕ್ಕಳನ್ನು ಅವರಿಗೆ ಕೊಡೋಣ.
אַךְ־בְּזֹאת יֵאֹתוּ לָנוּ הָאֲנָשִׁים לָשֶׁבֶת אִתָּנוּ לִהְיוֹת לְעַם אֶחָד בְּהִמּוֹל לָנוּ כׇּל־זָכָר כַּאֲשֶׁר הֵם נִמֹּלִֽים׃ 22
೨೨“ಆದರೆ ಅವರು ಸುನ್ನತಿ ಮಾಡಿಸಿಕೊಂಡವರಾದ್ದರಿಂದ ನಮ್ಮಲ್ಲಿಯೂ ಪುರುಷರೆಲ್ಲರು ಸುನ್ನತಿ ಮಾಡಿಸಿಕೊಳ್ಳಬೇಕನ್ನುತ್ತಾರೆ. ಹೀಗಾದರೆ ಮಾತ್ರ ಅವರು ನಮ್ಮಲ್ಲಿ ವಾಸ ಮಾಡುವುದಕ್ಕೂ ನಮ್ಮ ಸಂಗಡ ಒಂದೇ ಕುಲವಾಗುವುದಕ್ಕೂ ಒಪ್ಪುವರು.
מִקְנֵהֶם וְקִנְיָנָם וְכׇל־בְּהֶמְתָּם הֲלוֹא לָנוּ הֵם אַךְ נֵאוֹתָה לָהֶם וְיֵשְׁבוּ אִתָּֽנוּ׃ 23
೨೩ಅವರ ಕುರಿದನಗಳೂ, ಅವರ ಆಸ್ತಿಯೂ ಅವರ ಎಲ್ಲಾ ಪಶುಪ್ರಾಣಿಗಳೂ ನಮ್ಮದಾಗುವುದಲ್ಲವೇ? ಆದುದರಿಂದ ಅವರು ನಮ್ಮಲ್ಲಿ ವಾಸಮಾಡುವ ಹಾಗೆ ನಾವು ಅವರ ಮಾತಿಗೆ ಒಪ್ಪಿಕೊಳ್ಳೋಣ” ಎಂದು ಹೇಳಿದನು.
וַיִּשְׁמְעוּ אֶל־חֲמוֹר וְאֶל־שְׁכֶם בְּנוֹ כׇּל־יֹצְאֵי שַׁעַר עִירוֹ וַיִּמֹּלוּ כׇּל־זָכָר כׇּל־יֹצְאֵי שַׁעַר עִירֽוֹ׃ 24
೨೪ಆಗ ಪಟ್ಟಣದ ದ್ವಾರದಲ್ಲಿ ಹೋಗುವವರೆಲ್ಲಾ, ಹಮೋರನ ಮಗನಾದ ಶೆಕೆಮನೂ ಹೇಳಿದ ಮಾತಿಗೆ ಊರಿನವರೆಲ್ಲರೂ ಸಮ್ಮತಿಸಿದ್ದರಿಂದ ಅವರಲ್ಲಿದ್ದ ಪುರುಷರೆಲ್ಲರೂ ಸುನ್ನತಿಮಾಡಿಸಿಕೊಂಡರು.
וַיְהִי בַיּוֹם הַשְּׁלִישִׁי בִּֽהְיוֹתָם כֹּֽאֲבִים וַיִּקְחוּ שְׁנֵֽי־בְנֵי־יַעֲקֹב שִׁמְעוֹן וְלֵוִי אֲחֵי דִינָה אִישׁ חַרְבּוֹ וַיָּבֹאוּ עַל־הָעִיר בֶּטַח וַיַּֽהַרְגוּ כׇּל־זָכָֽר׃ 25
೨೫ಮೂರನೆಯ ದಿನದಲ್ಲಿ ಅವರು ಗಾಯದಿಂದ ಬಹು ಬಾಧೆಪಡುತ್ತಿರುವಾಗ ಯಾಕೋಬನ ಮಕ್ಕಳೂ, ದೀನಳ ಅಣ್ಣಂದಿರಾದ ಸಿಮೆಯೋನ್, ಲೇವಿ ಎಂಬ ಇಬ್ಬರು ಕೈಯಲ್ಲಿ ಕತ್ತಿಯನ್ನು ತೆಗೆದುಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು ಗಂಡಸರನ್ನೆಲ್ಲಾ ಕೊಂದು ಹಾಕಿದನು.
וְאֶת־חֲמוֹר וְאֶת־שְׁכֶם בְּנוֹ הָרְגוּ לְפִי־חָרֶב וַיִּקְחוּ אֶת־דִּינָה מִבֵּית שְׁכֶם וַיֵּצֵֽאוּ׃ 26
೨೬ಊರಿನವರ ಮೇಲೆ ಬಿದ್ದು ಹಮೋರ ಮತ್ತು ಅವನ ಮಗನಾದ ಶೆಕೆಮ್ ಸಹಿತವಾಗಿ ಪುರುಷರೆಲ್ಲರನ್ನೂ ದಾಕ್ಷಿಣ್ಯವಿಲ್ಲದೆ ಕತ್ತಿಯಿಂದ ಕೊಂದು ಶೆಕೆಮನ ಮನೆಯಿಂದ ದೀನಳನ್ನು ಕರೆದುಕೊಂಡು ಹೊರಟುಹೋದರು.
בְּנֵי יַעֲקֹב בָּאוּ עַל־הַחֲלָלִים וַיָּבֹזּוּ הָעִיר אֲשֶׁר טִמְּאוּ אֲחוֹתָֽם׃ 27
೨೭ಅವರು ಹತವಾದ ನಂತರ ಯಾಕೋಬನ ಮಕ್ಕಳು ಬಂದು, ಇವರು ನಮ್ಮ ತಂಗಿಯನ್ನು ಮಾನಭಂಗಪಡಿಸಿದ್ದಾರೆ ಎಂದು ಹೇಳಿ ಊರನ್ನು ಸೂರೆಮಾಡಿಬಿಟ್ಟರು.
אֶת־צֹאנָם וְאֶת־בְּקָרָם וְאֶת־חֲמֹרֵיהֶם וְאֵת אֲשֶׁר־בָּעִיר וְאֶת־אֲשֶׁר בַּשָּׂדֶה לָקָֽחוּ׃ 28
೨೮ಅವರ ಕುರಿಗಳನ್ನು, ದನಗಳನ್ನು ಹಾಗೂ ಕತ್ತೆಗಳನ್ನು ಊರಿನಲ್ಲಿಯೂ ಅಡವಿಯಲ್ಲಿಯೂ ಇದ್ದ ಅವರ ಆಸ್ತಿಯೆಲ್ಲವನ್ನೂ ತೆಗೆದುಕೊಂಡರು.
וְאֶת־כׇּל־חֵילָם וְאֶת־כׇּל־טַפָּם וְאֶת־נְשֵׁיהֶם שָׁבוּ וַיָּבֹזּוּ וְאֵת כׇּל־אֲשֶׁר בַּבָּֽיִת׃ 29
೨೯ಅವರ ಮಕ್ಕಳನ್ನೂ ಹೆಂಡತಿಯರನ್ನೂ ಸೆರೆಹಿಡಿದು ಮನೆಯಲ್ಲಿದ್ದುದ್ದೆಲ್ಲವನ್ನು ಕೊಳ್ಳೆ ಹೊಡೆದರು.
וַיֹּאמֶר יַעֲקֹב אֶל־שִׁמְעוֹן וְאֶל־לֵוִי עֲכַרְתֶּם אֹתִי לְהַבְאִישֵׁנִי בְּיֹשֵׁב הָאָרֶץ בַּֽכְּנַעֲנִי וּבַפְּרִזִּי וַאֲנִי מְתֵי מִסְפָּר וְנֶאֶסְפוּ עָלַי וְהִכּוּנִי וְנִשְׁמַדְתִּי אֲנִי וּבֵיתִֽי׃ 30
೩೦ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ, “ನೀವು ಈ ದೇಶದ ನಿವಾಸಿಗಳಾದ ಕಾನಾನ್ಯರಲ್ಲಿಯೂ ಪೆರಿಜೀಯರಲ್ಲಿಯೂ ನನ್ನ ಹೆಸರನ್ನು ಕೆಡಿಸಿದ್ದರಿಂದ ನನ್ನನ್ನು ಅಪಾಯಕ್ಕೆ ಗುರಿಮಾಡಿದ್ದೀರಿ. ನನಗಿರುವ ಜನರು ಸ್ವಲ್ಪವೇ. ಈ ದೇಶದವರು ಒಟ್ಟಾಗಿ ನನ್ನ ವಿರುದ್ಧ ಯುದ್ಧಕ್ಕೆ ಬಂದು ನನ್ನನ್ನು ಹೊಡೆದರೆ ನಾನೂ ನನ್ನ ಮನೆಯವರೆಲ್ಲರೂ ನಾಶವಾಗುವೆವು” ಎಂದನು.
וַיֹּאמְרוּ הַכְזוֹנָה יַעֲשֶׂה אֶת־אֲחוֹתֵֽנוּ׃ 31
೩೧ಅದಕ್ಕೆ ಅವರು, “ನಮ್ಮ ತಂಗಿಯನ್ನು ವೇಶ್ಯೆಯಂತೆ ಉಪಯೋಗಿಸಿಕೊಂಡಿದ್ದು ಸರಿಯೇ” ಎಂದು ಕೇಳಿದರು.

< בראשית 34 >