< בראשית 35 >
וַיֹּאמֶר אֱלֹהִים אֶֽל־יַעֲקֹב קוּם עֲלֵה בֵֽית־אֵל וְשֶׁב־שָׁם וַעֲשֵׂה־שָׁם מִזְבֵּחַ לָאֵל הַנִּרְאֶה אֵלֶיךָ בְּבׇרְחֲךָ מִפְּנֵי עֵשָׂו אָחִֽיךָ׃ | 1 |
೧ದೇವರು ಯಾಕೋಬನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಗಟ್ಟಾ ಹತ್ತಿ ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು. ನೀನು ನಿನ್ನ ಅಣ್ಣನಾದ ಏಸಾವನ ಬಳಿಯಿಂದ ಓಡಿ ಹೋದ ಕಾಲದಲ್ಲಿ ದೇವರು ಅಲ್ಲಿ ನಿನಗೆ ದರ್ಶನಕೊಟ್ಟನಲ್ಲಾ, ಆತನಿಗಾಗಿ ಯಜ್ಞವೇದಿಯನ್ನು ಕಟ್ಟಿಸು” ಎಂದು ಹೇಳಿದನು.
וַיֹּאמֶר יַעֲקֹב אֶל־בֵּיתוֹ וְאֶל כׇּל־אֲשֶׁר עִמּוֹ הָסִרוּ אֶת־אֱלֹהֵי הַנֵּכָר אֲשֶׁר בְּתֹכְכֶם וְהִֽטַּהֲרוּ וְהַחֲלִיפוּ שִׂמְלֹתֵיכֶֽם׃ | 2 |
೨ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ “ನಿಮ್ಮ ಮಧ್ಯಲ್ಲಿರುವ ಅನ್ಯ ದೇವರುಗಳನ್ನು ತೆಗೆದುಹಾಕಿ ನಿಮ್ಮನ್ನು ಶುದ್ಧಪಡಿಸಿಕೊಂಡು, ವಸ್ತ್ರಗಳನ್ನು ಬದಲಾಯಿಸಿರಿ,
וְנָקוּמָה וְנַעֲלֶה בֵּֽית־אֵל וְאֶֽעֱשֶׂה־שָּׁם מִזְבֵּחַ לָאֵל הָעֹנֶה אֹתִי בְּיוֹם צָֽרָתִי וַיְהִי עִמָּדִי בַּדֶּרֶךְ אֲשֶׁר הָלָֽכְתִּי׃ | 3 |
೩ನಾವು ಇಲ್ಲಿಂದ ಬೇತೇಲಿಗೆ ಹೋಗೋಣ. ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಲಾಲಿಸಿ ನಾನು ಹೋದ ಮಾರ್ಗದಲ್ಲೆಲ್ಲಾ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ಯಜ್ಞವೇದಿಯನ್ನು ಕಟ್ಟಿಸುತ್ತೇನೆ” ಎಂದು ಹೇಳಿದನು.
וַיִּתְּנוּ אֶֽל־יַעֲקֹב אֵת כׇּל־אֱלֹהֵי הַנֵּכָר אֲשֶׁר בְּיָדָם וְאֶת־הַנְּזָמִים אֲשֶׁר בְּאׇזְנֵיהֶם וַיִּטְמֹן אֹתָם יַעֲקֹב תַּחַת הָאֵלָה אֲשֶׁר עִם־שְׁכֶֽם׃ | 4 |
೪ಆಗ ಅವರು ತಮ್ಮಲ್ಲಿದ್ದ ಎಲ್ಲಾ ಅನ್ಯ ದೇವರುಗಳನ್ನು, ತಮ್ಮ ಕಿವಿಯಲ್ಲಿದ್ದ ಓಲೆಗಳನ್ನು ಯಾಕೋಬನಿಗೆ ಕೊಟ್ಟರು. ಅವನು ಅವುಗಳನ್ನು ಶೆಕೆಮ್ ಪಟ್ಟಣದ ಹತ್ತಿರವಿರುವ ಏಲಾ ಮರದ ಕೆಳಗೆ ಹೂಣಿಟ್ಟನು.
וַיִּסָּעוּ וַיְהִי ׀ חִתַּת אֱלֹהִים עַל־הֶֽעָרִים אֲשֶׁר סְבִיבוֹתֵיהֶם וְלֹא רָֽדְפוּ אַחֲרֵי בְּנֵי יַעֲקֹֽב׃ | 5 |
೫ಆಮೇಲೆ ಅವರು ಪ್ರಯಾಣ ಮಾಡುತ್ತಿರುವಾಗ, ಸುತ್ತಲಿರುವ ಊರುಗಳಲ್ಲಿ ದೇವರ ಭಯವು ಇದ್ದುದರಿಂದ ಅವರು ಯಾಕೋಬನ ಮಕ್ಕಳನ್ನು ಬೆನ್ನಟ್ಟಿ ಬರಲಿಲ್ಲ.
וַיָּבֹא יַעֲקֹב לוּזָה אֲשֶׁר בְּאֶרֶץ כְּנַעַן הִוא בֵּֽית־אֵל הוּא וְכׇל־הָעָם אֲשֶׁר־עִמּֽוֹ׃ | 6 |
೬ಹೀಗೆ ಯಾಕೋಬನೂ ಅವನ ಸಂಗಡ ಇದ್ದ ಜನರೆಲ್ಲರೂ ಕಾನಾನ್ ದೇಶದಲ್ಲಿರುವ ಬೇತೇಲ್ ಎಂಬ ಲೂಜಿಗೆ ಬಂದರು.
וַיִּבֶן שָׁם מִזְבֵּחַ וַיִּקְרָא לַמָּקוֹם אֵל בֵּֽית־אֵל כִּי שָׁם נִגְלוּ אֵלָיו הָֽאֱלֹהִים בְּבׇרְחוֹ מִפְּנֵי אָחִֽיו׃ | 7 |
೭ಅವನು ತನ್ನ ಅಣ್ಣನ ಬಳಿಯಿಂದ ಓಡಿಹೋದಾಗ ದೇವರು ಅವನಿಗೆ ಪ್ರತ್ಯಕ್ಷನಾದನು. ಅದುದರಿಂದ ಅವನು ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು.
וַתָּמׇת דְּבֹרָה מֵינֶקֶת רִבְקָה וַתִּקָּבֵר מִתַּחַת לְבֵֽית־אֵל תַּחַת הָֽאַלּוֹן וַיִּקְרָא שְׁמוֹ אַלּוֹן בָּכֽוּת׃ | 8 |
೮ಅಲ್ಲಿ ರೆಬೆಕ್ಕಳ ದಾಸಿಯಾದ ದೆಬೋರಳು ಸತ್ತು ಹೋದಾಗ, ಅವರು ಆಕೆಯನ್ನು ಬೇತೇಲಿನ ತಗ್ಗಿನಲ್ಲಿರುವ ಅಲ್ಲೋನ್ ಮರದ ಬುಡದಲ್ಲಿ ಸಮಾಧಿಮಾಡಿದರು. ಆ ಸ್ಥಳಕ್ಕೆ ಅಲ್ಲೋನ್ ಬಾಕೂತ್ ಎಂದು ಹೆಸರಿಟ್ಟರು.
וַיֵּרָא אֱלֹהִים אֶֽל־יַעֲקֹב עוֹד בְּבֹאוֹ מִפַּדַּן אֲרָם וַיְבָרֶךְ אֹתֽוֹ׃ | 9 |
೯ಯಾಕೋಬನು ಪದ್ದನ್ ಅರಾಮಿನಿಂದ ಬಂದಾಗ ದೇವರು ಪುನಃ ಅವನಿಗೆ ದರ್ಶನ ಕೊಟ್ಟು ಅವನನ್ನು ಆಶೀರ್ವದಿಸಿದನು.
וַיֹּֽאמֶר־לוֹ אֱלֹהִים שִׁמְךָ יַעֲקֹב לֹֽא־יִקָּרֵא שִׁמְךָ עוֹד יַעֲקֹב כִּי אִם־יִשְׂרָאֵל יִהְיֶה שְׁמֶךָ וַיִּקְרָא אֶת־שְׁמוֹ יִשְׂרָאֵֽל׃ | 10 |
೧೦ದೇವರು ಅವನಿಗೆ, “ಈಗ ನಿನಗೆ ಯಾಕೋಬನೆಂದು ಹೆಸರಿರುವುದು. ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಿಸಿಕೊಳ್ಳದೆ ‘ಇಸ್ರಾಯೇಲ್’ ಎಂದು ಕರೆಯಿಸಿಕೊಳ್ಳುವೆ” ಎಂದು ಹೇಳಿ ಅವನಿಗೆ ಇಸ್ರಾಯೇಲ್ ಎಂದು ಹೆಸರಿಟ್ಟನು.
וַיֹּאמֶר לוֹ אֱלֹהִים אֲנִי אֵל שַׁדַּי פְּרֵה וּרְבֵה גּוֹי וּקְהַל גּוֹיִם יִהְיֶה מִמֶּךָּ וּמְלָכִים מֵחֲלָצֶיךָ יֵצֵֽאוּ׃ | 11 |
೧೧ದೇವರು ಅವನಿಗೆ, “ನಾನೇ ಸರ್ವಶಕ್ತನಾದ ದೇವರು, ನೀನು ಬಹು ಸಂತಾನವುಳ್ಳವನಾಗಿ ಹೆಚ್ಚುವೆ, ನಿನ್ನಿಂದ ಜನಾಂಗವೂ, ಜನಾಂಗಗಳ ಗುಂಪು ಉಂಟಾಗುವುದು. ಅನೇಕ ಜನಾಂಗಗಳ ಅರಸರು ನಿನ್ನಿಂದ ಹುಟ್ಟುವರು.
וְאֶת־הָאָרֶץ אֲשֶׁר נָתַתִּי לְאַבְרָהָם וּלְיִצְחָק לְךָ אֶתְּנֶנָּה וּֽלְזַרְעֲךָ אַחֲרֶיךָ אֶתֵּן אֶת־הָאָֽרֶץ׃ | 12 |
೧೨ನಾನು ಅಬ್ರಹಾಮ ಮತ್ತು ಇಸಾಕರಿಗೆ ವಾಗ್ದಾನ ಮಾಡಿದ ದೇಶವನ್ನು ನಿನಗೂ ನಿನ್ನ ತರುವಾಯ ಬರುವ ನಿನ್ನ ಸಂತತಿಯವರಿಗೂ ಕೊಡುವೆನು” ಎಂದು ಹೇಳಿದನು.
וַיַּעַל מֵעָלָיו אֱלֹהִים בַּמָּקוֹם אֲשֶׁר־דִּבֶּר אִתּֽוֹ׃ | 13 |
೧೩ಅನಂತರ ದೇವರು ಅವನ ಸಂಗಡ ಮಾತನಾಡಿದ ಸ್ಥಳದಿಂದ ಮೇಲಕ್ಕೇರಿ ಹೋದನು.
וַיַּצֵּב יַעֲקֹב מַצֵּבָה בַּמָּקוֹם אֲשֶׁר־דִּבֶּר אִתּוֹ מַצֶּבֶת אָבֶן וַיַּסֵּךְ עָלֶיהָ נֶסֶךְ וַיִּצֹק עָלֶיהָ שָֽׁמֶן׃ | 14 |
೧೪ಯಾಕೋಬನು ತನ್ನ ಸಂಗಡ ದೇವರು ಮಾತನಾಡಿದ ಸ್ಥಳದಲ್ಲಿ ಕಲ್ಲಿನ ಸ್ತಂಭವನ್ನು ನಿಲ್ಲಿಸಿ ಅದರ ಮೇಲೆ ಪಾನಕಾಭಿಷೇಕಮಾಡಿ ಎಣ್ಣೆಯನ್ನು ಹೊಯ್ದನು.
וַיִּקְרָא יַעֲקֹב אֶת־שֵׁם הַמָּקוֹם אֲשֶׁר דִּבֶּר אִתּוֹ שָׁם אֱלֹהִים בֵּֽית־אֵֽל׃ | 15 |
೧೫ಯಾಕೋಬನು ತನ್ನ ಸಂಗಡ ದೇವರು ಮಾತನಾಡಿದ ಸ್ಥಳಕ್ಕೆ “ಬೇತೇಲ್” ಎಂದು ಹೆಸರಿಟ್ಟನು.
וַיִּסְעוּ מִבֵּית אֵל וַֽיְהִי־עוֹד כִּבְרַת־הָאָרֶץ לָבוֹא אֶפְרָתָה וַתֵּלֶד רָחֵל וַתְּקַשׁ בְּלִדְתָּֽהּ׃ | 16 |
೧೬ಅವರು ಬೇತೇಲಿನಿಂದ ಪ್ರಯಾಣಮಾಡುತ್ತಿರಲು ಎಫ್ರಾತಿಗೆ ಸೇರುವುದಕ್ಕೆ ಇನ್ನೂ ಸ್ವಲ್ಪ ದೂರವಿದ್ದಾಗ ರಾಹೇಲಳು ಪ್ರಸವ ವೇದನೆಯಿಂದ ನರಳಿದಳು.
וַיְהִי בְהַקְשֹׁתָהּ בְּלִדְתָּהּ וַתֹּאמֶר לָהּ הַמְיַלֶּדֶת אַל־תִּירְאִי כִּֽי־גַם־זֶה לָךְ בֵּֽן׃ | 17 |
೧೭ಆಕೆಯು ಹೆರಿಗೆಯ ನೋವಿನಿಂದ ಬಹು ಕಷ್ಟಪಡುತ್ತಿರುವಾಗ ಸೂಲಗಿತ್ತಿಯು ಆಕೆಗೆ, “ಅಂಜಬೇಡ ಇನ್ನೊಂದು ಗಂಡು ಮಗುವು ಹುಟ್ಟುವುದು” ಎಂದು ಹೇಳಿದಳು.
וַיְהִי בְּצֵאת נַפְשָׁהּ כִּי מֵתָה וַתִּקְרָא שְׁמוֹ בֶּן־אוֹנִי וְאָבִיו קָֽרָא־לוֹ בִנְיָמִֽין׃ | 18 |
೧೮ಆದರೆ ರಾಹೇಲಳು ಸತ್ತುಹೋದಳು. ಪ್ರಾಣಬಿಡುವಾಗ ಆಕೆಯು ಆ ಮಗುವಿಗೆ, “ಬೆನೋನಿ” ಎಂದು ಹೆಸರಿಟ್ಟಳು. ಆದರೆ ಅದರ ತಂದೆಯು ಅದಕ್ಕೆ, “ಬೆನ್ಯಾಮೀನ” ಎಂದು ಹೆಸರಿಟ್ಟನು.
וַתָּמׇת רָחֵל וַתִּקָּבֵר בְּדֶרֶךְ אֶפְרָתָה הִוא בֵּית לָֽחֶם׃ | 19 |
೧೯ರಾಹೇಲಳು ಸತ್ತ ಮೇಲೆ, ಬೇತ್ಲೆಹೇಮ್ ಎಂಬ ಎಫ್ರಾತಿಗೆ ಹೋಗುವ ದಾರಿಯಲ್ಲಿ ಆಕೆಯನ್ನು ಸಮಾಧಿಮಾಡಿದರು.
וַיַּצֵּב יַעֲקֹב מַצֵּבָה עַל־קְבֻרָתָהּ הִוא מַצֶּבֶת קְבֻֽרַת־רָחֵל עַד־הַיּֽוֹם׃ | 20 |
೨೦ಯಾಕೋಬನು ಆಕೆಯ ಸಮಾಧಿಯ ಮೇಲೆ ಸ್ತಂಭವನ್ನು ನಿಲ್ಲಿಸಿದನು. ಅದು ಇಂದಿನವರೆಗೂ “ರಾಹೇಲಳ ಸಮಾಧಿಯ ಸ್ತಂಭ” ಎಂದೇ ಎನಿಸಿಕೊಂಡಿದೆ.
וַיִּסַּע יִשְׂרָאֵל וַיֵּט אׇֽהֳלֹה מֵהָלְאָה לְמִגְדַּל־עֵֽדֶר׃ | 21 |
೨೧ಅಲ್ಲಿಂದ ಇಸ್ರಾಯೇಲನು ಪ್ರಯಾಣ ಮಾಡಿ ಮಿಗ್ದಲ್ ಏದರಿನ ಆಚೆಯಲ್ಲಿ ತನ್ನ ಗುಡಾರವನ್ನು ಹಾಕಿಸಿದನು.
וַיְהִי בִּשְׁכֹּן יִשְׂרָאֵל בָּאָרֶץ הַהִוא וַיֵּלֶךְ רְאוּבֵן וַיִּשְׁכַּב אֶת־בִּלְהָה פִּילֶגֶשׁ אָבִיו וַיִּשְׁמַע יִשְׂרָאֵ͏ֽל וַיִּֽהְיוּ בְנֵֽי־יַעֲקֹב שְׁנֵים עָשָֽׂר׃ | 22 |
೨೨ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳನ್ನು ಸಂಗಮಿಸಿದನು. ಈ ಸಂಗತಿಯು ಇಸ್ರಾಯೇಲನಿಗೆ ತಿಳಿಯಿತು. ಯಾಕೋಬನಿಗೆ ಹನ್ನೆರಡು ಮಂದಿ ಗಂಡು ಮಕ್ಕಳಿದ್ದರು.
בְּנֵי לֵאָה בְּכוֹר יַעֲקֹב רְאוּבֵן וְשִׁמְעוֹן וְלֵוִי וִֽיהוּדָה וְיִשָּׂשכָר וּזְבֻלֽוּן׃ | 23 |
೨೩ಯಾಕೋಬನಿಗೆ ಲೇಯಳಲ್ಲಿ ಹುಟ್ಟಿದವರು ಯಾರೆಂದರೆ: ಯಾಕೋಬನ ಚೊಚ್ಚಲ ಮಗನಾದ ರೂಬೇನ್ ಮತ್ತು ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್.
בְּנֵי רָחֵל יוֹסֵף וּבִנְיָמִֽן׃ | 24 |
೨೪ರಾಹೇಲಳಲ್ಲಿ ಹುಟ್ಟಿದವರು: ಯೋಸೇಫನು ಮತ್ತು ಬೆನ್ಯಾಮೀನನು.
וּבְנֵי בִלְהָה שִׁפְחַת רָחֵל דָּן וְנַפְתָּלִֽי׃ | 25 |
೨೫ರಾಹೇಲಳ ದಾಸಿಯಾದ ಬಿಲ್ಹಳಲ್ಲಿ ಹುಟ್ಟಿದವರು: ದಾನ್, ನಫ್ತಾಲಿ.
וּבְנֵי זִלְפָּה שִׁפְחַת לֵאָה גָּד וְאָשֵׁר אֵלֶּה בְּנֵי יַעֲקֹב אֲשֶׁר יֻלַּד־לוֹ בְּפַדַּן אֲרָֽם׃ | 26 |
೨೬ಲೇಯಳ ದಾಸಿಯಾದ ಜಿಲ್ಪಳಲ್ಲಿ ಹುಟ್ಟಿದವರು: ಗಾದ್, ಆಶೇರ್. ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹುಟ್ಟಿದ ಮಕ್ಕಳು ಇವರೇ.
וַיָּבֹא יַעֲקֹב אֶל־יִצְחָק אָבִיו מַמְרֵא קִרְיַת הָֽאַרְבַּע הִוא חֶבְרוֹן אֲשֶׁר־גָּֽר־שָׁם אַבְרָהָם וְיִצְחָֽק׃ | 27 |
೨೭ಯಾಕೋಬನು ತನ್ನ ತಂದೆಯಾದ ಇಸಾಕನ ಬಳಿಗೆ ಮಮ್ರೆಗೆ ಬಂದನು. ಮಮ್ರೆಯು ಹೆಬ್ರೋನೆಂಬ ಕಿರ್ಯತರ್ಬಕ್ಕೆ ಸೇರಿರುವುದು. ಅದು ಅಬ್ರಹಾಮ ಇಸಾಕರು ಪರದೇಶಸ್ಥರಾಗಿ ವಾಸವಾಗಿದ್ದ ಸ್ಥಳ.
וַיִּֽהְיוּ יְמֵי יִצְחָק מְאַת שָׁנָה וּשְׁמֹנִים שָׁנָֽה׃ | 28 |
೨೮ಇಸಾಕನು ದಿನತುಂಬಿದ ಮುದುಕನಾಗಿದ್ದು ನೂರ ಎಂಭತ್ತನೆಯ ವರ್ಷದಲ್ಲಿ ಪ್ರಾಣಬಿಟ್ಟು ತನ್ನ ಪೂರ್ವಿಕರ ಬಳಿಗೆ ಸೇರಿದನು.
וַיִּגְוַע יִצְחָק וַיָּמׇת וַיֵּאָסֶף אֶל־עַמָּיו זָקֵן וּשְׂבַע יָמִים וַיִּקְבְּרוּ אֹתוֹ עֵשָׂו וְיַעֲקֹב בָּנָֽיו׃ | 29 |
೨೯ಇಸಾಕನ ಮಕ್ಕಳಾದ ಏಸಾವ, ಯಾಕೋಬರು ಅವನನ್ನು ಸಮಾಧಿಮಾಡಿದರು.